ಶ್ರೀ ಮಲೆ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ ದಿನಾಂಕ 18-03-2018ರಂದು ಯುಗಾದಿ ಜಾತ್ರೆಯ ಪ್ರಯುಕ್ತ ಬೆಳಿಗ್ಗೆ 10.30ರ ಸಮಯದಲ್ಲಿ ಶ್ರೀ ಸ್ವಾಮಿಯವರ ಮಹಾರಥೋತ್ಸವವು ಬಹಳ ವಿಜೃಂಭಣೆಯಿಂದ ಜರುಗಿತು.
ಇದೇ ವೇಳೆ ಬೇಡಗಂಪಣ 101 ಹೆಣ್ಣು ಮಕ್ಕಳು ಶ್ರೀ ಸ್ವಾಮಿಗೆ ಬೆಲ್ಲದ ಆರತಿ ಬೆಳಗುವ ಮೂಲಕ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು.
ಇದೇ ವೇಳೆ ಶ್ರೀ ಸಾಲೂರು ಬೃಹನ್ಮಠದ ಗುರುಸ್ವಾಮಿಗಳು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ(ಹಿ.ಶೇ) ಕ.ಆ.ಸೇ, ಉಪಕಾರ್ಯದರ್ಶಿಗಳಾದ ಎಂ.ಬಸವರಾಜು, ಮಾಧುರಾಜ್ ಅಧೀಕ್ಷಕರು ಹಾಗು ರವೀಂದ್ರ ಎಸ್ ಮನ್ವಾಚಾರ್ ಸಹಾಯಕ ಅಭಿಯಂತರರು ಹಾಗು ಲಕ್ಷಾಂತರ ಭಕ್ತರು ಪಾಲ್ಗೊಂಡು ಶ್ರೀ ಸ್ವಾಮಿಯವರ ಕೃಪೆಗೆ ಪಾತ್ರರಾದರು.
______________________________________________________________________
ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಾಕ್ಸ್ ಮತ್ತು ಶೂ ಖರೀದಿಸಲಾದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕವಾಗಿ ಚರ್ಚೆಯಾಗಿದೆ. ಈ ಕುರಿತು ಸ್ಪಷ್ಟವಾದ ಮಾಹಿತಿ ಸಾರ್ವಜನಿಕರಿಗೆ ದೊರಕದೇ ಇದ್ದಲ್ಲಿ ಶಿಕ್ಷಣ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡುವ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸಾಕ್ಸ್ ಹಾಗೂ ಶೂ ಖರೀದಿಯ ಪ್ರಕ್ರಿಯೆಯಲ್ಲಿ ಭಾಗಿಗಳಾದ ಹಿಂದಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಮತ್ತು ಹಾಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೋಮಶೇಖರಯ್ಯ ಇವರ ಅವಧಿಯಲ್ಲಿ ನಡೆಸಲಾದ ಎಲ್ಲಾ ಪ್ರಕ್ರಿಯೆಗಳ ಕುರಿತು ಕೂಲಂಕಶÀವಾಗಿ ತನಿಖೆ ನಡೆಸಿ ಮೂರು ದಿನಗಳ ಒಳಗೆ ವಸ್ತುನಿಷ್ಠ ವರದಿ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಖಾದಿ ಮತ್ತು ಗ್ರಾಮೋದ್ಯಮ ವಿಭಾಗದ ಉಪ ನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಸಾಕ್ಸ್ ಶೂ ಖರೀದಿ ಪ್ರಕರಣ: ತನಿಖೆಗೆ ಜಿ.ಪಂ ಸಿಇಒ ಸೂಚನೆ
ಚಾಮರಾಜನಗರ, ಮಾ. 19- ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಾಕ್ಸ್ ಮತ್ತು ಶೂ ಖರೀದಿಸಲಾದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೂಲಂಕಶÀವಾಗಿ ತನಿಖೆ ನಡೆಸಿ ಮೂರು ದಿನಗಳ ಒಳಗೆ ವಸ್ತುನಿಷ್ಠ ವರದಿ ನೀಡಲು ಖಾದಿ ಮತ್ತು ಗ್ರಾಮೋದ್ಯಮ ವಿಭಾಗದ ಉಪ ನಿರ್ದೇಶಕರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.ಗುಂಡ್ಲುಪೇಟೆ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಾಕ್ಸ್ ಮತ್ತು ಶೂ ಖರೀದಿಸಲಾದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕವಾಗಿ ಚರ್ಚೆಯಾಗಿದೆ. ಈ ಕುರಿತು ಸ್ಪಷ್ಟವಾದ ಮಾಹಿತಿ ಸಾರ್ವಜನಿಕರಿಗೆ ದೊರಕದೇ ಇದ್ದಲ್ಲಿ ಶಿಕ್ಷಣ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ಮೂಡುವ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಸಾಕ್ಸ್ ಹಾಗೂ ಶೂ ಖರೀದಿಯ ಪ್ರಕ್ರಿಯೆಯಲ್ಲಿ ಭಾಗಿಗಳಾದ ಹಿಂದಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಮತ್ತು ಹಾಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೋಮಶೇಖರಯ್ಯ ಇವರ ಅವಧಿಯಲ್ಲಿ ನಡೆಸಲಾದ ಎಲ್ಲಾ ಪ್ರಕ್ರಿಯೆಗಳ ಕುರಿತು ಕೂಲಂಕಶÀವಾಗಿ ತನಿಖೆ ನಡೆಸಿ ಮೂರು ದಿನಗಳ ಒಳಗೆ ವಸ್ತುನಿಷ್ಠ ವರದಿ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಖಾದಿ ಮತ್ತು ಗ್ರಾಮೋದ್ಯಮ ವಿಭಾಗದ ಉಪ ನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಮಾ. 20ರಂದು ದೇವರ ದಾಸಿಮಯ್ಯ, ಭಗವಾನ್ ಮಹಾವೀರ, ಅಕ್ಕಮಹಾದೇವಿ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಚಾಮರಾಜನಗರ, ಮಾ. 19 - ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರದಲ್ಲಿ ದೇವರ ದಾಸಿಮಯ್ಯ, ಭಗವಾನ್ ಮಹಾವೀರ ಹಾಗೂ ಅಕ್ಕಮಹಾದೇವಿ ಜಯಂತಿ ಆಚರಣೆ ಸಂಬಂಧ ಚರ್ಚಿಸಲು ಮಾರ್ಚ್ 20ರಂದು ಬೆಳಿಗ್ಗೆ 11 ಗಂಟೆಗೆ ಹೆಚ್ಚುವರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.ವಿವಿಧ ಸಮಾಜದ ಮುಖಂಡರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರುಗಳು, ನಾಗರಿಕರು ಸಭೆಗೆ ಹಾಜರಾಗಿ ಸಲಹೆ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಕೋರಿದೆ.
ಮಾ. 21ರಂದು ಸೆಸ್ಕ್ ಜನಸಂಪರ್ಕ ಸಭೆ
ಚಾಮರಾಜನಗರ, ಮಾ. 19 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಮಾರ್ಚ್ 21ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂತೆಮರಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಿದೆ.ಸಾರ್ವಜನಿಕರು ಸಭೆಗೆ ಹಾಜರಾಗಿ ವಿದ್ಯುತ್ ಸಮಸ್ಯೆಗಳಿದ್ದಲ್ಲಿ, ಕುಂದುಕೊರತೆಗಳಿದ್ದಲ್ಲಿ ತಿಳಿಸುವಂತೆ ಸಂತೆಮರಹಳ್ಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಕೆಓಎಸ್ ಪರೀಕ್ಷೆ : ಕೇಂದ್ರದ ಸುತ್ತ ನಿಷೇದಾಜ್ಞೆ
ಚಾಮರಾಜನಗರ, ಮಾ 19 :- ನಗರದಲ್ಲಿ ಮಾರ್ಚ್ 23 ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಕರ್ನಾಟಕ ಮುಕ್ತ ಶಾಲೆ (ಕೆಓಎಸ್) ಪರೀಕ್ಷೆಯ ಪರೀಕ್ಷಾ ಕೇಂದ್ರದ ಸುತ್ತ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಆದೇಶ ಹೊರಡಿಸಿದ್ದಾರೆ.ಚಾಮರಾಜನಗರದ ಬಾಲಕಿಯರ ಪದವಿಪೂರ್ವ (ಪ್ರೌಢಶಾಲಾ ವಿಭಾಗ) ಕಾಲೇಜು ಪರೀಕ್ಷಾ ಕೇಂದ್ರವಾಗಿದೆ. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಹಾಗೂ ನ್ಯಾಯೋಚಿತವಾಗಿ ಪರೀಕ್ಷೆ ನಡೆಯಲು ಅನುವಾಗುವಂತೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮಧ್ಯಾಹ್ನ 1 ರಿಂದ ಸಂಜೆ 5.30ರವರೆಗೆ ಮುಚ್ಚಲೂ ಸಹ ಆದೇಶಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ನಿಷೇಧ ಆದೇಶ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ತಿಳಿಸಿದ್ದಾರೆ.
ಕೊಳ್ಳೇಗಾಲ : ಮಾ. 24ರಂದು ಪ. ಜಾತಿ, ಪ. ವರ್ಗಗಳ ಹಿತರಕ್ಷಣಾ, ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಸಫಾಯಿ ಕರ್ಮಚಾರಿಗಳ ಉಸ್ತುವಾರಿ ಸಮಿತಿ ಸಭೆ - ಮನವಿ, ಸಮಸ್ಯೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಮಾ. 19 ಕೊಳ್ಳೇಗಾಲದ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 10.30 ಗಂಟೆಗೆ, ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಬೆಳಿಗ್ಗೆ 11.30 ಗಂಟೆಗೆ ಹಾಗೂ ಉಪವಿಭಾಗಮಟ್ಟದ ಸಫಾಯಿ ಕರ್ಮಚಾರಿಗಳ ಉಸ್ತುವಾರಿ ಸಮಿತಿ ಸಭೆಯು ಮಧ್ಯಾಹ್ನ 12.30 ಗಂಟೆಗೆ ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದೆ.ಸಭೆಗೆ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ, ವರ್ಗದವರು, ಸಫಾಯಿ ಕರ್ಮಚಾರಿಗಳು, ಸಂಘಸಂಸ್ಥೆಗಳವರು ಸಮಸ್ಯೆ, ಕುಂದುಕೊರತೆ ತೊಂದರೆಗಳ ಬಗ್ಗೆ ಚರ್ಚಿಸಲು ಇಚ್ಚಿಸಿದ್ದಲ್ಲಿ ಲಿಖಿತವಾಗಿ ಮಾರ್ಚ್ 21ರೊಳಗೆ ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಮನವಿ ಸಲ್ಲಿಸುವಂತೆ ಕೊಳ್ಳೇಗಾಲ ಉಪವಿಭಾಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ. 21ರಂದು ಹನೂರು ತಾಲೂಕು ಮಟ್ಟದ ಕ್ರೀಡಾಕೂಟ
ಚಾಮರಾಜನಗರ, ಮಾ. 19 - ನೆಹರು ಯುವ ಕೇಂದ್ರವು ಹನೂರು ತಾಲೂಕು ರಾಮಾಪುರ ಹೋಬಳಿಯ ಪೂಜಾರಿಭೋವಿದೊಡ್ಡಿಯ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಬೋವಿ ಯುವಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 21ರಂದು ಬೆಳಿಗ್ಗೆ 10 ಗಂಟೆಗೆ ಪೂಜಾರಿಭೋವಿದೊಡ್ಡಿ ಗ್ರಾಮದ ಮೈದಾನದಲ್ಲಿ ಹನೂರು ತಾಲೂಕು ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.ಯುವಕರಿಗೆ ವಾಲಿಬಾಲ್, ಕಬಡ್ಡಿ, ಗುಂಡು ಎಸೆತ, 100 ಮೀ. ಓಟ ಹಾಗೂ ಯುವತಿಯರಿಗೆ ಗುಂಡು ಎಸೆತ, 100 ಮೀ. ಓಟ, ಗೋಣಿ ಚೀಲದ ಓಟ ಸ್ಪರ್ಧೆಗಳಿವೆ.
ಪ್ರವೇಶ ಉಚಿತವಾಗಿದ್ದು ಅಂದು ಬೆಳಿಗ್ಗೆ ಸ್ಥಳದಲ್ಲಿಯೇ ಹೆಸರು ನೊಂದಾಯಿಸಿಕೊಳ್ಳಬೇಕು. ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಬಿ. ವೆಂಕಟೇಶ್ (8197001077), ಕೆ. ಮಂಜುನಾಥ (7338035525), ಉಮಾ ಮಹೇಶ್ವರಿ (9739251509), ಶಂಕರ (8317492474) ಅವರನ್ನು ಸಂಪರ್ಕಿಸುವಂತೆ ನೆಹರು ಯುವಕೇಂದ್ರದ ಸಮನ್ವಯಾಧಿಕಾರಿ ಎಸ್. ಸಿದ್ಧರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ. 27ರಂದು ಮಹದೇಶ್ವರ ದೇವಾಲಯದ ಗೋಲಕ ಹಣ ಎಣಿಕೆ
ಚಾಮರಾಜನಗರ, ಮಾ. 19 :- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ಮಾರ್ಚ್ 27ರಂದು ಬೆಳಿಗ್ಗೆ ನಡೆಯಲಿದೆ.ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಮಾ. 19 - ಜಿಲ್ಲೆಯ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಾರ್ಚ್ 24 ರಿಂದ 31ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿಗೆ ಭೇಟಿ ನೀಡಿ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.ಮಾರ್ಚ್ 24ರಂದು ಚಾಮರಾಜನಗರ, 26ರಂದು ಕೊಳ್ಳೇಗಾಲ, 27ರಂದು ಯಳಂದೂರು, 28ರಂದು ಹನೂರು ಹಾಗೂ 31ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ರಾಷ್ಟ್ರೀಯ ವೈದ್ಯಕೀಯ ಮಸೂದೆ ವಿರೋಧಿಸಿ ಜಾಥಾ
ಚಾಮರಾಜನಗರ ಮಾರ್ಚ್ 19- ಕೇಂದ್ರ ಸರ್ಕಾರ ಹೊರ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆಯುಂದ ಮಂಗಳೂರಿನಿಂದ ಆರಂಭಿಸಿರುವ ಸೈಕಲ್ ಜಾಥಾವು ಚಾಮರಾಜನಗರಕ್ಕೆ ಅಗಮಿಸಿತು.ಐ.ಎಂ.ಎ ಜ್ಯೋತಿ ಹೊತ್ತು ಬಂದ ಜಾಥಾವನ್ನು ಚಾಮರಾಜನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ದೇವಕಿ ಸ್ವೀಕರಿಸಿ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಮಸೂದೆಯು ದೇಶದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಬುಡಮೇಲು ಮಾಡುವಂತ್ತಿದ್ದು ದೇಶದ ಆರೋಗ್ಯ ವ್ಯವಸ್ಥೆಗೆ ಮಾರಕವಾಗಿರುವ ಈ ಮಾಸೂದೆ ಜಾರಿಯನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು. ಜಾಥಾದಲ್ಲಿ ಚಾಮರಾಜನಗರ ಐ.ಎಂ.ಎ ಅಧ್ಯಕ್ಷರಾದ ಡಾ. ಬಸವರಾಜೇಂದ್ರ, ಕಾರ್ಯದರ್ಶಿ ಡಾ. ಶ್ವೇತಾ, ಉಪಾಧ್ಯಕ್ಷ ಡಾ.ಮಹೇಶ್, ಡಾ. ಗಿರೀಶ್‍ವಿಟಲ್, ಮೈಸೂರಿನ ಡಾ.ಸುಜಾತಾರಾವ್, ಡಾ.ಸಂಜಯ್, ರಾಜಶೇಖರ್, ವೈದ್ಯಕೀಯ ಕಾಲೇಜಿನ ವೈದ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
No comments:
Post a Comment