ವಿಧಾನಸಭಾ ಚುನಾವಣೆ- 2018
ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣ ಸಮಿತಿ ರಚನೆ
ಚಾಮರಾಜನಗರ, ಮಾ. 29 :- ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಶ್ರವಣ, ದೃಶ್ಯ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಮಾಡುವ ಚುನಾವಣಾ ಪ್ರಚಾರಗಳಿಗೆ ಸಂಬಂಧಿಸಿದ ಜಾಹೀರಾತುಗಳ ಪರಿಶೀಲನೆ ನಡೆಸಿ ನಿಯಂತ್ರಣ ಜಾರಿಯಲ್ಲಿ ತರಲು ಹಾಗೂ ಪಾವತಿ ಸುದ್ದಿಗೆ(ಪೇಯ್ಡ್ ನ್ಯೂಸ್) ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣ(ಎಂ.ಸಿ.ಎಂ.ಸಿ) ಸಮಿತಿ ರಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್ ಅವರು ಉಪಾಧ್ಯಕ್ಷರಾಗಿರುತ್ತಾರೆ. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಿ.ಕೆ. ಸುನಂದ, ದೀನಬಂಧು ಟ್ರಸ್ಟ್ ಕಾರ್ಯದರ್ಶಿ ಜಿ.ಎಸ್. ಜಯದೇವ್ ಅವರು ಸಮಿತಿಯ ಸದಸ್ಯರಾಗಿರುತ್ತಾರೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎ. ರಮೇಶ್ ಅವರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
No comments:
Post a Comment