Saturday, 24 March 2018

ವಿಧಾನಸಭಾ ಚುನಾವಣೆ- 2018, ವೀಡಿಯೋ ಸರ್ವೈಲೈನ್ಸ್ ಅಧಿಕಾರಿಗಳ ವಿವರಏ. 5 ರಂದು ಡಾ. ಬಾಬು ಜಗಜೀವನ್ ರಾಮ್ ಹಾಗೂ ಏ. 14ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ (22-03-2018)

ವಿಧಾನಸಭಾ ಚುನಾವಣೆ- 2018, ವೀಡಿಯೋ ಸರ್ವೈಲೈನ್ಸ್ ಅಧಿಕಾರಿಗಳ ವಿವರ

ಚಾಮರಾಜನಗರ, ಮಾ. 24- ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸದಾಚಾರ ಸಂಹಿತೆ ಪಾಲನೆ ಉಸ್ತುವಾರಿಗಾಗಿ ವೀಡಿಯೋ ಸರ್ವೈಲೈನ್ಸ್ ಅಧಿಕಾರಿಗಳ ತಂಡದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹÉೂರಡಿಸಿದ್ದು ಪರಿಷ್ಕøತ ತಂಡದ ವಿವರ ಇಂತಿದೆ-

ಹನೂರು ವಿಧಾನಸಭಾ ಕ್ಷೇತ್ರ:- ಕೊಳ್ಳೇಗಾಲ ತಾಲೂಕಿನ ಪಾಳ್ಯ ಹೋಬಳಿಯ ಮೇಲ್ವಿಚಾರಕರಾಗಿ ನೇಮಕಗೊಂಡಿದ್ದ ಶ್ವೇತ, ಸಹಾಯಕ ಆಡಳಿತ ಕೃಷಿ ಅಧಿಕಾರಿ, ಪಾಳ್ಯ ಇವರ ಬದಲಿಗೆ ಎಚ್. ಕ್ಯಾತ (ಬಿಆರ್‍ಸಿ), ತಾಲೂಕು ಯೋಜನೆ ಸಮನ್ವಯಾಧಿಕಾರಿ, ಹನೂರು ಶೈಕ್ಷಣಿಕ ವಲಯ, ಹನೂರು (ಮೊ. 9480695113, 9663182766), ರಾಮಾಪುರ ಹೋಬಳಿಗೆ ಗಿರೀಶ್, ಪ್ರದಸ, ಶಿಶು ಅಭಿವೃದ್ಧಿ ಅಧಿಕಾರಿ ಇಲಾಖೆ, ಕೊಳ್ಳೇಗಾಲ ಇವರ ಬದಲಾಗಿ ಬಿ. ಸರ್ವೇಶ್ ಮೂರ್ತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕೊಳ್ಳೇಗಾಲ (ಮೊ. 9538083695) ಇವರನ್ನು ನೇಮಕ ಮಾಡಲಾಗಿದೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ:- ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಹೋಬಳಿಯ ಮೇಲ್ವಿಚಾರಕರಾದ ಎಂ.ಸಿ. ಪ್ರಸಾದ್, ಸಹಾಯಕ ಕೃಷಿ ಅಧಿಕಾರಿ, ಕಸಬಾ ಹೋಬಳಿ ಇವರ ಬದಲಾಗಿ ಎಂ. ಜಯಶಂಕರ್, ಸಹಾಯಕ ಕೃಷಿ ಅಧಿಕಾರಿ, ಚಾಮರಾಜನಗರ ತಾಲೂಕು (ಮೊ. 8277930773) ಇವರು ನೇಮಕವಾಗಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರ:- ಚಾಮರಾಜನಗರ ಚಂದಕವಾಡಿ ಹೋಬಳಿಯ ಮೇಲ್ವಿಚಾರಕರಾದ ಕುಮಾರಸ್ವಾಮಿ, ರೇಷ್ಮೆ ಪ್ರವರ್ತಕರು, ಸಹಾಯಕ ನಿರ್ದೇಶಕರ ಕಚೇರಿ, ರೇಷ್ಮೆ ಇಲಾಖೆ, ಚಾಮರಾಜನಗರ ಇವರ ಬದಲಾಗಿ ಕೆ. ದೇವರಾಜು, ರೇಷ್ಮೆ ಪ್ರವರ್ತಕರು, ತಾಂತ್ರಿಕ ಸೇವಾ ಕೇಂದ್ರ, ಚಾಮರಾಜನಗರ (ಮೊ. 8123724165, 8904061165) ಇವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಚಾಮರಾಜನಗರ, ಮಾ. 24 - ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಫೋಕ್ಸೋ ಕಾಯಿದೆ ಪ್ರಕರಣಗಳನ್ನು ನಡೆಸಲು ಸರ್ಕಾರವು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನಗರದ ವಕೀಲರಾದ ಕೆ. ಯೋಗೇಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಅಧಿಕಾರ ವಹಿಸಿಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕರಾದ ಲೋಲಾಕ್ಷಿ ಟಿ.ಎಚ್, ಹಿರಿಯ ಸರ್ಕಾರಿ ಅಭಿಯೋಜಕರಾದ ಜಯಶ್ರೀ ಶೆಣೈ, ಕಾನೂನು ಅಧಿಕಾರಿಗಳಾದ ಶÀಕೀಲಾ ಅಬೂಬಕ್ಕರ್, ಸಹಾಯಕ ಸರ್ಕಾರಿ ಅಭಿಯೋಜಕರಾದ ಮಹೇಶ್ ಹಾಗೂ ನಿಗರ್Àಮಿತ ವಿಶೇಷ ಸರ್ಕಾರಿ ಅಭಿಯೋಜಕರಾದ ಹಿರಿಯ ವಕೀಲರಾದ ನಾಗರಾಜು, ಕಾಮಗೆರೆ ಇವರು ಹಾಜರಿದ್ದು ಶುಭ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಚುನಾವಣೆ ತರಬೇತಿ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಮಾ. 24 - ಚುನಾವಣೆ ಸಂಬಂಧ ಕಾರ್ಯಕ್ಕಾಗಿ ನಿಯೋಜಿತರಾಗಿರುವ ಅಧಿಕಾರಿಗಳು ಸಿಬ್ಬಂದಿ ಚುನಾವಣಾ ಪ್ರಕ್ರಿಯೆ ಯಶಸ್ವಿ ನಿರ್ವಹಣೆಗೆ ನೀಡಲಾಗುವ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಸಂಬಂಧ ನೇಮಕವಾಗಿರುವ ಮಾಸ್ಟರ್ ತರಬೇತಿದಾರರು ಹಾಗೂ ಸೆಕ್ಟರ್ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.ಚುನಾವಣೆ ಕೆಲಸಕ್ಕಾಗಿ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾಲಕಾಲಕ್ಕೆ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರಿಯಾಗಿ ಅರ್ಥೈಸಿಕೊಂಡು ಗೊಂದಲಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು. ಚುನÁವಣಾ ಸಂದರ್ಭದಲ್ಲಿ ಎಲ್ಲರ ಜವಾಬ್ದಾರಿ ಅತ್ಯಂತ ಮುಖ್ಯವಾಗಿರುತ್ತದೆ. ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಬೇಕಿದ್ದರೆ ಪ್ರತಿಯೊಂದು ಅಂಶವನ್ನು ಮನನ ಮಾಡಿಕೊಕೊಳ್ಳಬೇಕು. ತರಬೇತಿ ಅವಧಿಯಲ್ಲಿ ಎಲ್ಲವನ್ನೂ ತಿಳಿಸಲಾಗುತ್ತದೆ. ಹೀಗಾಗಿ ಇಂತಹ ತರಬೇತಿ ಕಾರ್ಯಕ್ರಮವನ್ನು ಸಮರ್ಪಕವಾಗಿ ಬಳಕೆಮಾಡಿಕೊಳ್ಳಬೇಕು ಎಂದರು. ಚುನಾವಣಾ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಪ್ರತಿಯೊಬ್ಬರೂ ಅವರಿಗೆ ನಿಗದಿಮಾಡಲಾದ ಕರ್ತವ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು. ಯಶಸ್ವಿಯಾಗಿ ಚುನಾವಣಾ ಕರ್ತವ್ಯವನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು. ಚುನಾವಣಾ ಸಂಬಂಧ ತರಬೇತಿ ನೀಡಿದ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಮಾತನಾಡಿ ಚುನಾವಣೆ ಕೆಲಸಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಚುನಾವಣಾ ಸಂಬಂಧ ಸಮರ್ಪಕ ಮಾಹಿತಿಯನ್ನು ಹೊಂದಿರಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿ ಸಿಬ್ಬಂದಿಗಳೊಂದಿಗೆ ಉತ್ತಮ ಸಮನ್ವಯದೊಂದಿಗೆ ನಿಯೋಜಿಸಲಾಗಿರುವ ಕೆಲಸವನ್ನು ಆಯಾ ಸಂದರ್ಭದಲ್ಲೇ ನಿರ್ವಹಿಸಬೇಕು ಎಂದರು.ಉಪವಿಭಾಗಾಧಿಕಾರಿ ಫೌಜಿಯಾ ತರನಂ, ತರಬೇತಿ ನೋಡಲ್ ಅಧಿಕಾರಿ ಹಾಗೂ ಕೃಷಿ ಉಪನಿರ್ದೇಶಕರಾದ ಯೋಗೇಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಯಳಂದೂರು : ಮಾ. 26ರಂದು ತಾಲೂಕುಮಟ್ಟದ ಕ್ರೀಡಾಕೂಟ

ಚಾಮರಾಜನಗರ, ಮಾ. 24  ನೆಹರು ಯುವ ಕೇಂದ್ರವು ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಶ್ರೀ ಅಂಬಾ ಸಾಂಸ್ಕøತಿಕ ಕಲಾ ಕ್ರೀಡಾ ಸಂಘ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಜನ  ಸಂಘದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 26ರಂದು ಬೆಳಿಗ್ಗೆ 10 ಗಂಟೆಗೆ ಯಳಂದೂರಿನ ಅಂಬಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಯಳಂದೂರು ತಾಲೂಕು ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಿದೆ.

ಶಾಸಕರಾದ ಎಸ್. ಜಯಣ್ಣ  ಕ್ರೀಡಾಕೂಟ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿದ್ದನಾಯಕ  ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಜೆ. ಯೋಗೇಶ್ ಕ್ರೀಡಾಕೂಟಕ್ಕೆ ಚಾಲನೆ ನೀಡುವರು.

ಮುಖ್ಯ ಅತಿಥಿಗಳಾಗಿ ಯಳಂದೂರು ತಾಲೂಕÀು ಪಂಚಾಯತ್ ಸದಸ್ಯರಾದ ನಾಗರಾಜು, ಅಂಬಳೆ ಗ್ರಾಮ ಪಂಚಾಯಿತಿ ಸದಸ್ಯÀರಾದ ಸಿ. ನಂಜುಂಡಸ್ವಾಮಿ, ಭಾರತಿ ರಂಗಸ್ವಾಮಿ, ಮೇಘ ರವಿಕುಮಾರ್, ಆರ್. ಚಾಮರಾಜು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಮಾ. 27ರಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಚಾಮರಾಜನಗರ, ಮಾ. 24  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿನ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 27ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. 

ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. 

ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಜೆ. ಯೋಗೇಶ್, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್,  ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಮಹೇಶ್ವರಿ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮಾ. 28ರಂದು ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ

ಚಾಮರಾಜನಗರ, ಮಾ. 2- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಮಾರ್ಚ್ 28ರಂದು ನಗರದಲ್ಲಿ ಏರ್ಪಡಿಸಲಾಗಿದೆ. 

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. 

ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಜೆ. ಯೋಗೇಶ್, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಆರ್. ಉಮೇಶ್,  ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 

ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪುಷ್ಪಲತಾ ವಿಶೇಷ ಉಪನ್ಯಾಸ ನೀಡುವರು. ಮೈಸೂರಿನ ವಿದುಷಿ ಇಂದ್ರಾಣಿ ಅನಂತರಾಮ್ ವಚನ ಗಾಯನ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಮಾ. 24 - ಜಿಲ್ಲೆಯ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಾರ್ಚ್ 24 ರಿಂದ 28ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿಗೆ ಭೇಟಿ ನೀಡಿ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.

ಮಾರ್ಚ್ 24ರಂದು ಚಾಮರಾಜನಗರ, 26ರಂದು ಕೊಳ್ಳೇಗಾಲ, 27ರಂದು ಯಳಂದೂರು, 28ರಂದು ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.

ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಮಾಹಿತಿ ನೀಡಲು ಸೂಚನೆ

ಚಾಮರಾಜನಗರ, ಮಾ. 24 - ಹಿಂದುಳಿದ ವರ್ಗಗಳಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳೆಂದು 46 ಜಾತಿಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಇವರ ಪ್ರಸ್ತುತ ಸ್ಥಿತಿಗತಿಗಳ ಕುರಿತು ಸಾರ್ವಜನಿಕರಿಗೆ ಪ್ರಮುಖ ಹಾಗೂ ನಿಖರವಾದ ಮಾಹಿತಿ ನೀಡಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹೊತ್ತಿಗೆಯನ್ನು ಹೊರತರುವ ಪ್ರಯತ್ನದಲ್ಲಿದೆ.

ಬೇರಾಗಿ (ಬಾವ), ಬಾಲಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬಹಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಡವೇರಿ, ದೊಂಬರಿ, ಘಿಸಾಡಿ, ಗಾರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲಕ್ರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊಂದಲಿ, ಪುಲ್ ಮಾಲಿ, ನಾಥಪಂಥಿ, ಡೌರಿಗೋಸಾವಿ, ನಿರ್ತಿಕಾರಿ, ಪಾಂಗ್ಯುಯಲ್, ಜೋಷಿ (ಸಾದಾಜೋಷಿ), ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡು, ವಾಸುದೇವ, ವಾಡಿ, ವಾಗ್ರಿ, ವೀರ್, ಬಜನಿಯ, ಶಿಕ್ಕಲಿಗರ್, ಗೊಲ್ಲ,ಕಿಲ್ಲಿಕ್ಯಾತ, ಸರೋಡಿ, ದುರ್ಗ-ಮುರ್ಗ(ಬುರ್‍ಬುರ್‍ಚ), ಹಾವ್‍ಗಾರ್ (ಹಾವಾಡಿಗಾರ್), ಪಿಚಿಗುಂಟಲ, ಮಸಣಿಯ ಯೋಗಿ, ಬೆಸ್ತರ್ (ಬುಂಡೆಬೆಸ್ತ), ಕಟಬು, ದರ್ವೆಶ್, ಕಾಶಿಕಪಾಡಿ, ದೊಂಬಿದಾಸ ಹಾಗೂ ಬೈಲಪತರ್ ಜಾತಿಗಳಾಗಿವೆ.

ಅಲೆಮಾರಿ, ಅರೆ ಅಲೆಮಾರಿ ಜಾತಿಗಳ, ಸಮುದಾಯದ ಪ್ರತಿನಿಧಿಗಳು, ಸಮುದಾಯದ ಸಂಘಗಳು ಇದ್ದಲ್ಲಿ ಅವುಗಳ ಮುಖ್ಯಸ್ಥರು ಆಯೋಗದ ಕಚೇರಿಗೆ ತಮ್ಮ ಜಾತಿಯ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಲು ಇಚ್ಚಿಸುವವರು (ಲಿಖಿತವಾಗಿ ಅಥವಾ ಮುದ್ದಾಂ ಮೂಲಕ) 15 ದಿನಗಳ ಒಳಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ. 16 ಡಿ,  2ನೇ ಮಹಡಿ, ಡಿ. ದೇವರಾಜ ಅರಸು ಭವನ, ಮಿಲ್ಲರ್ ಟ್ಯಾಂಕೆ ಬೆಡ್ ಏರಿಯಾ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನೀಡುವಂತೆ ರಾಜ್ಯ ಹಿಂದುಳಿದ ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 5 ರಂದು ಡಾ. ಬಾಬು ಜಗಜೀವನ್ ರಾಮ್ ಹಾಗೂ ಏ. 14ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ   

ಚಾಮರಾಜನಗರ, ಮಾ. 22 - ಜಿಲ್ಲಾಡಳಿತ ಹಾಗೂ ಎಲ್ಲರ ಸಹಕಾರದೊಂದಿಗೆ ಏಪ್ರಿಲ್ 5ರಂದು ಡಾ. ಬಾಬು ಜಗಜೀವನ್ ರಾಮ್ ಹಾಗೂ ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ತಿರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ನಗರದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮ ಸಂಬಂಧ ನೇಮಕವಾಗಿರುವ ಸಮಿತಿಗಳು ಕಾರ್ಯನಿರ್ವಹಿಸಿ ನೀಡಲಾಗಿರುವ ಜವಾಬ್ದಾರಿಯನ್ನು ಪೂರೈಸುವಂತೆ ತಿಳಿಸಿದರು.
ಮಹಾನ್ ನಾಯಕರ ಭಾವಚಿತ್ರ ಮೆರವಣಿಗೆಯು ಪ್ರವಾಸಿ ಮಂದಿರದಿಂದ ಆರಂಭವಾಗಲಿದೆ. ಇದಕ್ಕೆ ಕಲಾತಂಡಗಳನ್ನು ನಿಯೋಜಿಸಿ ಮೆರಗು ತರಬೇಕು. ಮೆರವಣಿಗೆಗೆ ಅಗತ್ಯವಿರುವ ಸಿದ್ದತೆ ವ್ಯವಸ್ಥೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ಏಪ್ರಿಲ್ 13ರಂದು ಈ ಹಿಂದಿನಂತೆ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿಚಾರ ಸಂಕಿರಣವನ್ನು ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗುವುದು.  ಉಪನ್ಯಾಸಕರನ್ನು ಸಮಿತಿಯ ನಿರ್ಧಾರದಂತೆ ಆಯ್ಕೆ ಮಾಡಿ ಅಗತ್ಯ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.
      ಕಾರ್ಯಕ್ರಮಗಳಿಗೆ ಅಗತ್ಯವಿರುವ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ, ವೇದಿಕೆ ಸಿದ್ಧಪಡಿಸುವುದು ಸೇರಿದಂತೆ ಇತರೆ ಕೆಲಸದತ್ತ ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
      ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ನಗರಸಭಾ ಸದಸ್ಯರಾದ ಆರ್.ಪಿ ನಂಜುಂಡಸ್ವಾಮಿ, ಆರ್. ಮಹಾದೇವಯ್ಯ, ಸಿ.ಕೆ. ಮಂಜುನಾಥ್,  ಮುಖಂಡರಗಳಾದ ಸಿ.ಎಂ. ಕೃಷ್ಣಮೂರ್ತಿ, ಕೆ.ಎಂ. ನಾಗರಾಜು, ಶ್ರೀನಿವಾಸಗೌಡ, ಚಾ.ಗು ನಾಗರಾಜು, ಬ್ಯಾಡಮೂಡ್ಲು ಬಸವಣ್ಣ, ಶಿವಣ್ಣ, ಪರ್ವತರಾಜು,  ಆಲೂರು ನಾಗೇಂದ್ರ, ವೇಣುಗೋಪಾಲ್, ಅಂಬರೀಷ್, ನಾಗರಾಜು ರಾಮಸಮುದ್ರ, ಡಾ.ಎಂ.ಸಿ. ರಾಜಣ್ಣ, ಕಂದಳ್ಳಿ ನಾರಾಯಣ, ಸಿ.ಎಂ. ನರಸಿಂಹಮೂರ್ತಿ, ರಾಮಸಮುದ್ರ ಸುರೇಶ್, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಕೆಎಸ್‍ಆರ್‍ಟಿಸಿ : ದಂಡ ವಸೂಲಿ
 ಚಾಮರಾಜನಗರ, ಮಾ. 22 - ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2018ರ ಫೆಬ್ರವರಿ ಮಾಹೆಯಲ್ಲಿ 2006 ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 189 ಪ್ರಕರಣಗಳನ್ನು ಪತ್ತೆಹಚ್ಚಿದೆ.
 ಅಧಿಕೃತ ಟಿಕೆಟ್ ಪಡೆಯದೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ 288 ಪ್ರಯಾಣಿಕರಿಗೆ ರೂ, 30280ಗಳ  ದಂಡ ವಿಧಿಸಲÁಗಿದೆ ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾ. 23ರಂದು ಕಾನೂನು ಅರಿವು ಕಾರ್ಯಕ್ರಮ
 ಚಾಮರಾಜನಗರ, ಮಾ. 22 :- ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐಕ್ಯೂಎಸಿ  ಮತ್ತು ಮಹಿಳಾ ದೌರ್ಜನ್ಯ ತಡೆ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 23ರಂದು ಬೆಳಿಗ್ಗೆ 10.30 ಗಂಟೆಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿನಿಯರಿಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಎಚ್.ಎಸ್. ಪ್ರೇಮಲತಾ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಕಾಣೆಯಾದವರ ಪತ್ತೆಗೆ ಸಹಕÀರಿಸಿ
ಚಾಮರಾಜನಗರ, ಮಾ. 22 - ನಗರದ ಅರಳೀಕಟ್ಟೆ ಗ್ರಾಮದ ಮಹದೇವಪ್ಪ ಎಂಬುವರು ಅವರ ಅಕ್ಕ ಗುರುಮಲ್ಲಮ್ಮ ಎಂಬುವರು ಕಾಣೆಯಾಗಿರುವ ಕುರಿತು ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.
ನವೆಂಬರ್ 4ರಂದು ನಂಜನಗೂಡಿನ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ಸು ಬಂದಿರುವುದಿಲ್ಲ. ಇದುವರೆವಿಗೂ ಪತ್ತೆಯಾಗದ ಕಾರಣ ದೂರು ನೀಡಿರುವುದಾಗಿ ತಿಳಿಸಿದ್ದಾರೆ.
ಗುರುಮಲ್ಲಮ್ಮ ಅವರು ಕೋಲು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು 5.2 ಅಡಿ ಎತ್ತರವಿದ್ದಾರೆ.
ಕಪ್ಪು ಬಣ್ಣದ ಹೂವಿನ ಚಿತ್ರಗಳಿರುವ ಬಿಳಿ ಸೀರÉ ಮತ್ತು ಬಿಳಿ ಬಣ್ಣದ ರವಿಕೆ ಧರಿಸಿದ್ದು ಕನ್ನಡ ಮಾತನಾಡುತ್ತಾರೆ.
ಇವರ ಮಾಹಿತಿ ದೊರೆತಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು 08226-222243, ಗ್ರಾಮಾಂತರ ಪೊಲೀಸ್ ಠಾಣೆ 08226-222092 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ 08226-222383ಗೆ ತಿಳಿಸುವಂತೆ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್ಸ್‍ಪೆಕ್ಟರ್ ಎಲ್.ಎನ್. ಕಿರಣ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ
ಚಾಮರಾಜನಗರ, ಮಾ. 22 - ಜಿಲ್ಲೆಯ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ವ್ಯಾಪ್ತಿಯ ಒಟ್ಟು 44 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಾರ್ಚ್ 23 ರಿಂದ ಏಪ್ರಿಲ್ 6ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯವು ಶಾಂತಿ ಮತ್ತು ಸುವ್ಯವಸ್ಥೆಯಿಂದ ಮತ್ತು ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗ ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.





No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು