Friday, 2 March 2018

ಕಾಲೇಜುಗಳಿಂದ ಹೊಸ ವಿಷಯ, ತರಗತಿ ಆರಂಭಕ್ಕೆ ಪ್ರÀಸ್ತಾವನೆ ಆಹ್ವಾನÀ (02-03-2018)


ಕಾಲೇಜುಗಳಿಂದ ಹೊಸ ವಿಷಯ, ತರಗತಿ ಆರಂಭಕ್ಕೆ  ಪ್ರÀಸ್ತಾವನೆ ಆಹ್ವಾನÀ

ಚಾಮರಾಜನಗರ, ಮಾ. 02 - ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ಶೈಕ್ಷಣಿಕ ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳ ಅಗತ್ಯಕ್ಕೆ ಅನುಗುಣವಾಗಿ ಭಾಷಾ, ವಿಷಯ, ಹೊಸ ಸಂಯೋಜನೆ, ಹೆಚ್ಚುವರಿ ವಿಭಾಗಗಳನ್ನು ಪ್ರಾರಂಭಿಸಲು ಪ್ರಸ್ತಾವನೆ ಆಹ್ವಾನಿಸಿದೆ.
ಕರ್ನಾಟಕ ಪದವಿಪೂರ್ವ ಶಿಕ್ಷಣ (ಶೈಕ್ಷಣಿಕ, ನೋಂದಣಿ, ಆಡಳಿತ ಮತ್ತು ಸಹಾಯಾನುದಾನ ಇತ್ಯಾದಿ) ನಿಯಮಗಳನ್ನು ಹೊಸ ವಿಷಯ, ಸಂಶೋಧನೆ ಹಾಗೂ ಹೆಚ್ಚುವರಿ ಸೆಕ್ಷನ್‍ಗಳ ಮಂಜೂರಾತಿಗೆ ಸಂಬಂಧಿಸಿದÀಂತೆ ನಿಗದಿತ ನಮೂನೆಯನ್ನು ಕಾಲೇಜಿನ ಆಡಳಿತ ಮಂಡಳಿಗಳು, ಪ್ರಾಂಶುಪಾಲರು ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಪಡೆದು ಏಪ್ರಿಲ್ 5ರೊಳಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವಿ.ಆರ್. ಶ್ಯಾಮಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಮಾ. 3ರಂದು ರಾಮಸಮುದ್ರದಲ್ಲಿ ಜನಪರ ಉತ್ಸವ

ಚಾಮರಾಜನಗರ, ಮಾ. 02 - ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾರ್ಚ್ 3ರಂದು ಸಂಜೆ 4 ಗಂಟೆಗೆ ರಾಮಸಮುದ್ರ (ದೊಡ್ಡ ಬೀದಿ)ದಲ್ಲಿ ಜನಪರ ಉತ್ಸವ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ.
ಸಣ್ಣ ಕೈಗಾರಿಕೆ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಮೋಹನಕುಮಾರಿ ಉತ್ಸವ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಾಧಕರಿಗೆ ಸನ್ಮಾನ ಮಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಜೆ. ಯೋಗೇಶ್, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ನಗರಸಭಾ ಸದಸ್ಯರಾದ ಆರ್.ಪಿ. ನಂಜುಡಸ್ವಾಮಿ, ಮಹದೇವಯ್ಯ, ರೂಪಾ, ಆರ್. ಕೃಷ್ಣಮೂರ್ತಿ, ನಾಮನಿರ್ದೇಶಿತ ಸದಸ್ಯರಾದ ಗೋವಿಂದರಾಜು, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪಾಲ್ಗೊಳ್ಳುವರು.
ಉತ್ಸವದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀಡಿ ಕಾರ್ಮಿಕರ ಸವಲತ್ತು ಬಿಡುಗಡೆ


ಚಾಮರಾಜನಗರ, ಮಾ. 02- ಕಾರ್ಮಿಕ ಕಲ್ಯಾಣ ಸಂಸ್ಥೆಯಿಂದ ರಾಜ್ಯದ ಬೀಡಿ ಕಾರ್ಮಿಕರ ಮಕ್ಕಳಿಗೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಯಾಗಿದೆ.
ಅರ್ಜಿ ಸಲ್ಲಿಸಿದ್ದ 14211 ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಅವರ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ವಿವಿಧ ಜಿಲ್ಲೆಗಳ ಬೀಡಿ ಕಾರ್ಮಿಕರ ಹೆರಿಗೆ ಭತ್ಯೆ ಅರ್ಜಿಗಳನ್ನು ಪರಿಶೀಲಿಸಿ 610 ಬೀಡಿ ಕಾರ್ಮಿಕರಿಗೆ ತಲಾ ರೂ. 1000ದಂತೆ ಖಾತೆಗೆ ಜಮೆ ಆಗಿದೆ. ಅರ್ಜಿ ಸಲ್ಲಿಸಿರುವವರು ಖಾತೆ ಪರಿಶೀಲಿಸಬೇಕು.
ಹೆಚ್ಚಿನ ಮಾಹಿತಿಗೆ ರಾಜ್ಯ ಕಾರ್ಮಿಕರ ಕಲ್ಯಾಣ ಸಂಸ್ಥೆ (ದೂ.ಸಂ. 080-23477491, 23471406)ಯನ್ನು ಸಂಪರ್ಕಿಸುವಂತೆ ಕಾರ್ಮಿಕ ಮತ್ತು ಉಪ ಕರ ಆಯುಕ್ತರಾದ ಕೆ. ಶೇಖರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮಾ. 3ರಂದು ನಗರದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರಧಾನ ಸಮಾರಂಭ


ಚಾಮರಾಜನಗರ, ಮಾ. 02 - ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮಾರ್ಚ್ 3ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಿದೆ.
ಜಿಲ್ಲಾಧಿಕಾರಿಗಳಾದ ಬಿ. ರಾಮು ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಕನಸು ನನಸು ಪುಸ್ತಕ ಬಿಡುಗಡೆ ಮಾಡುವರು. ಮೈಸೂರು ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಎ. ಉದಯಕುಮÁರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ. ಮಹದೇವಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಚಾ.ನಗರ ನಗರಸಭೆ : ಮಾ. 3ರಂದು ಆಯವ್ಯಯ ಸಭೆ


ಚಾಮರಾಜನಗರ, ಮಾ. 02- ಚಾಮರಾಜನಗರ ನಗರಸಭೆಯ 2017-18ನೇ ಸಾಲಿನ ಪರಿಷ್ಕøತ ಹಾಗೂ 2018-19ನೇ ಸಾಲಿನ ಅಂದಾಜು ಆಯವ್ಯಯ ಸಭೆಯು ನಗರಸಭೆ ಅಧ್ಯಕ್ಷರಾದ ಶೋಭ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 3ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು