Monday, 30 April 2018

27-04-2018 ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮ:1,29,30,616, ಚಿನ್ನದ ಪದಾರ್ಥಗಳು 50 ಗ್ರಾಂ (ಐವತ್ತು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 1.120

27-04-2018ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ  ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ,ಕೆ.ಎ.ಎಸ್.(ಹಿರಿಯಶ್ರೇಣಿ)ರವರ ಅಧ್ಯಕ್ಷತೆಯಲ್ಲಿ ಹಾಗೂ  ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು,



















 ಸದರಿ ಹುಂಡಿಗಳ  ಪರ್ಕಾವಣೆಯಲ್ಲಿ  ಪ್ರಾಧಿಕಾರದ  ಉಪ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ್ ಮೂರ್ತಿ ರವರು,  ಎಂ. ಬಸವರಾಜು ಅಧೀಕ್ಷಕರು,   ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,   ಶ್ರೀಬಿ.ಮದರಾಜು ಅಧೀಕ್ಷಕರು ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ  ಜಿಲ್ಲಾಧಿಕಾರಿಯವರ ಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮಂಜುನಾಥ್  ಮತ್ತು ಮಹದೇಶ್ವರಬೆಟ್ಟ  ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯಯವಸ್ಥಾಪಕರಾದ ಸೆಂದಿಲ್ ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು.ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಡಿ ಪರ್ಕಾವಣೆಯಿಂದ ಒಟ್ಟು ರೂ.  1,29,30,616( ಒಂದು ಕೋಟಿ ಇಪ್ಪತ್ತೊಂಬತ್ತು ಲಕ್ಷದ ಮೂವತ್ತು ಸಾವಿರದ ಆರು ನೂರ ಹದಿನಾರು ರೂಗಳು) ಬಂದಿರುತ್ತದೆ. ಇದಲ್ಲದೇ  ಚಿನ್ನದ  ಪದಾರ್ಥಗಳು  50 ಗ್ರಾಂ (ಐವತ್ತು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 1.120   (ಒಂದು ಕೆ.ಜಿ. ನೂರ ಇಪ್ಪತ್ತು ಗ್ರಾಂ ) ದೊರೆತಿರುತ್ತದೆ.
x





























ಕರ್ನಾಟಕ ಸರ್ಕಾರ
ಮೇ. 1ರಂದು ಸಂತೆಮರಹಳ್ಳಿಯಲ್ಲಿ ಮಾನವ ರಹಿತ ವಾಯುವಾಹನ ನಿಷೇಧ

ಚಾಮರಾಜನಗರ, ಏ. 30 - ಪ್ರಧಾನಮಂತ್ರಿ ನರೇಂದ್ರಮೋದಿಯವರು ಚಾಮರಾಜನಗರ  ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮೇ. 1ರಂದು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಾಮುತ್ತಾ 15 ಕಿ.ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮಾನವ ರಹಿತ ವಾಯುವಾಹನ ಅಥವಾ ಮಾನವ ರಹಿತ ಏರ್‍ಕ್ರಾಫ್ಟ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.  

(30-04-2018)ವಿಧಾನಸಭಾ ಚುನಾವಣೆ- 2018 ಏ.30ರಂದು ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ಕಾರ್ಯಕ್ರಮ

ವಿಧಾನಸಭಾ ಚುನಾವಣೆ- 2018
ಏ.30ರಂದು ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ಕಾರ್ಯಕ್ರಮ

ಚಾಮರಾಜನಗರ, ಏ. 29 - ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚಾಮರಾಜನಗರ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳಿಗೆ ಏಪ್ರಿಲ್ 30ರಂದು ಬೆಳಿಗ್ಗೆ 9 ಗಂಟೆಗೆ ಚುನಾವಣಾ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕಾಗಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಿ ಈಗಾಗಲೇ ಅದೇಶ ಹೊರಡಿಸಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದಲ್ಲಿ ತರಬೇತಿ ಏರ್ಪಡಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳು ಕಡ್ಡಾಯವಾಗಿ ಹಾಜರಿರÀಬೇಕು. ತಪ್ಪಿದಲ್ಲಿ ಗೈರು ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸಿ ಶಿಸ್ತುಕ್ರಮ ಜರುಗಿಸಲಾಗುವುದು. ತರಬೇತಿಗೆ ಇತರೆ ಪೊಲಿಂಗ್ ಅಧಿಕಾರಿಗಳು ಹಾಜರಾಗುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ. 1ರಂದು ಸಂತೆಮರಹಳ್ಳಿಯಲ್ಲಿ ಸಂತೆ ಮತ್ತು ಜಾತ್ರೆ ನಿಷೇಧ

ಚಾಮರಾಜನಗರ, ಏ. 29  ಪ್ರಧಾನಮಂತ್ರಿ ನರೇಂದ್ರಮೋದಿಯವರು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಮೇ. 1ರಂದು ಬಿ.ಜೆ.ಪಿ ಪಕ್ಷದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಅಂದು ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಸಂತೇಮರಹಳ್ಳಿಯಲ್ಲಿ ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

Saturday, 28 April 2018

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 6 ಅಭ್ಯರ್ಥಿಗಳಿಂದ ಉಮೇದುವಾರಿಕೆ ವಾಪಸ್: ಅಂತಿಮವಾಗಿ ಚುನಾವಣಾ ಕಣದಲ್ಲಿ 43 ಅಭ್ಯರ್ಥಿಗಳು,ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ಚುನಾವಣಾ ಸಭೆ: ಸಾಮಾನ್ಯ ವೀಕ್ಷಕರು, ಪೊಲೀಸ್ ವೀಕ್ಷಕರಿಂದ ಸಿದ್ಧತೆ ಪರಿಶೀಲನೆ (27-04-2018)

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
6 ಅಭ್ಯರ್ಥಿಗಳಿಂದ ಉಮೇದುವಾರಿಕೆ ವಾಪಸ್: ಅಂತಿಮವಾಗಿ ಚುನಾವಣಾ ಕಣದಲ್ಲಿ  43 ಅಭ್ಯರ್ಥಿಗಳು

ಚಾಮರಾಜನಗರ, ಏ. 27:-  ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 49 ಅಭ್ಯರ್ಥಿಗಳ ಪೈಕಿ 6 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.  ಅಂತಿಮವಾಗಿ ಚುನಾವಣಾ ಕಣದಲ್ಲಿ ಒಟ್ಟು 43 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.  ಇವರ ಪೈಕಿ  ಶಿವಸೇನ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶ್ರೀಕಂಠಸ್ವಾಮಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ. ಅಂತಿಮವಾಗಿ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದು, ಅಭ್ಯರ್ಥಿಗಳ ವಿವರ ಇಂತಿದೆ ಸಿ.ಪುಟ್ಟರಂಗಶೆಟ್ಟಿ-ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಕೆ.ಆರ್.ಮಲ್ಲಿಕಾರ್ಜುನಪ್ಪ-ಭಾರತೀಯ ಜನತಾ ಪಾರ್ಟಿ, ಎ.ಎಂ.ಮಲ್ಲಿಕಾರ್ಜುನ ಸ್ವಾಮಿ-ಬಹುಜನ ಸಮಾಜ ಪಾರ್ಟಿ, ಎಸ್.ಗಣೇಶ್- ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಾರ್ಟಿ, ಡಿ.ನಾಗಸುಂದರ-ಭಾರತೀಯ ರಿಪಬ್ಲಿಕನ್ ಪಕ್ಷ, ನಾರಾಯಣ ಸ್ವಾಮಿ.ಜೆ-ಸಾಮಾನ್ಯ ಜನತಾ ಪಾರ್ಟಿ(ಲೋಕ ತಾಂತ್ರಿಕ್), ವಾಟಾಳ್ ನಾಗರಾಜ್-ಕನ್ನಡ ಚಳವಳಿ ವಾಟಾಳ್ ಪಕ್ಷ, ಎಂ.ಆರ್ ಸರಸ್ವತಿ-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ಎಂ.ಚಿನ್ನಸ್ವಾಮಿ-ಪಕ್ಷೇತರ, ಪ್ರಸನ್ನ ಕುಮಾರ್.ಬಿ- ಪಕ್ಷೇತರ, ಎಂ.ಎಸ್.ಮಲ್ಲಿಕಾರ್ಜುನ್-ಪಕ್ಷೇತರ, ರಂಗಸ್ವಾಮಿ-ಪಕ್ಷೇತರ, ಸುರೇಶ.ಬಿ.ಎನ್-ಪಕ್ಷೇತರ, ಎಂ.ಹೊನ್ನೂರಯ್ಯ-ಪಕ್ಷೇತರ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.  ಇವರ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಂ.ರಾಜೇಶ್ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ.  ಅಂತಿಮವಾಗಿ 7 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದು ಅವರ ವಿವರ ಇಂತಿದೆ ಎ.ಆರ್.ಕೃಷ್ಣಮೂರ್ತಿ-ಭಾರತೀಂiÀi ರಾಷ್ಟ್ರೀಂiÀi ಕಾಂಗ್ರೆಸ್, ಜಿ.ಎನ್ ನಂಜುಂಡಸ್ವಾಮಿ-ಭಾರತೀಯ ಜನತಾ ಪಕ್ಷ, ಎನ್.ಮಹೇಶ್-ಬಹುಜನ ಸಮಾಜ ಪಕ್ಷ, ಚಿಕ್ಕಸಾವಕ-ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅ.), ನಿಂಗರಾಜ್.ಜಿ-ರಿಪಬ್ಲಿಕನ್ ಸೇನೆ, ಲಕ್ಷ್ಮಿಜಯಶಂಕರ-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ನಾಗರತ್ನ ಎಂ-ಪಕ್ಷೇತರ, .
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ನಾಮಪತ್ ಸಲ್ಲಿಸಿದ್ದರು. ಇವರ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಮಹೇಶ್.ಜಿ ಹಾಗೂ ದುಂಡಯ್ಯ ಅವರು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.  ಅಂತಿಮವಾಗಿ 7 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದು ಅವರ ವಿವರ ಇಂತಿದೆ. ಎಸ್.ಗುರುಪ್ರಸಾದ್-ಬಹುಜನ ಸಮಾಜ ಪಾರ್ಟಿ, ಸಿ.ಎಸ್.ನಿರಂಜನ್ ಕುಮಾರ್-ಭಾರತೀಯ ಜನತಾ ಪಾರ್ಟಿ, ಎಂ.ಸಿ.ಮೋಹನ್ ಕುಮಾರಿ ಉರುಫ್ ಗೀತಾ-ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಸಿ.ಜೆ ಕಾಂತರಾಜ-ಪ್ರಜಾ ಪರಿವರ್ತನ ಪಾರ್ಟಿ, ಎ.ಜಿ.ರಾಮಚಂದ್ರರಾವ್-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ,  ಬಿ.ಸಿ.ಶೇಖರರಾಜು-ಪಕ್ಷೇತರ, ಬಿ.ಸಿದ್ದಯ್ಯ-ಪಕ್ಷೇತರ.
ಹನೂರು ವಿಧಾನಸಭಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.  ಇವರ ಪೈಕಿ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಪರಿಮಳ ನಾಗಪ್ಪ ಹಾಗೂ ಕೆ.ಸಿದ್ದರಾಜು ಅವರು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.  ಹೀಗಾಗಿ ಚುನಾವಣಾ ಕಣದಲ್ಲಿ ಅಂತಿಮವಾಗಿ 15 ಅಭ್ಯರ್ಥಿಗಳು ಉಳಿದುಕೊಂಡಿದ್ದು ಅವರ ವಿವರ ಇಂತಿದೆ. ಆರ್.ನರೇಂದ್ರ-ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಪ್ರೀತನ್ ಕೆ.ಎನ್.-ಭಾರತೀಯ ಜನತಾ ಪಕ್ಷ, ಎಂ.ಆರ್.ಮಂಜುನಾಥ್-ಜನತಾ ದಳ(ಜಾತ್ಯಾತೀತ), ಎಸ್.ಗಂಗಾಧರ-ಲೋಕ್ ಆವಾಜ್ ದಳ್, ಪ್ರದೀಪ್ ಕುಮಾರ್ ಎಂ.-ಆಲ್ ಇಂಡಿಯ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ಬಿ.ಭಾನುಪ್ರಕಾಶ್-ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ, ಆರ್.ಪಿ.ವಿಷ್ಣುಕುಮಾರ್-ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಜಗಮ್, ಡಿ.ಶ್ರೀಕಂಠಸ್ವಾಮಿ-ಸ್ವರಾಜ್ ಇಂಡಿಯಾ, ಜೆ.ಜಯಪ್ರಕಾಶ್- ಪಕ್ಷೇತರ, ಜಾನ್ ಡಾನ್ ಬೋಸ್ಕೋ.ಕೆ-ಪಕ್ಷೇತರ, ಮಹೇಶ-ಪಕ್ಷೇತರ, ಆರ್.ಮಹೇಶ-ಪಕ್ಷೇತರ, ಸಿದ್ದಪ್ಪ.ಆರ್-ಪಕ್ಷೇತರ,  ಸೆಲ್ವರಾಜ್.ಎಸ್-ಪಕ್ಷೇತರ, ಜ್ಞಾನಪ್ರಕಾಶ್.ಜೆ-ಪಕ್ಷೇತರ,

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಮತಗಟ್ಟೆ ಅಧಿಕಾರಿಗಳು ಸಿಬ್ಬಂದಿಗೆ ತರಬೇತಿ: ಕಡ್ಡಾಯ ಹಾಜರಾತಿಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಏ. 28 -  ಸಾರ್ವತ್ರಿಕ ವಿಧಾಸಭಾ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರದ 976 ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಮಟ್ಟದ ಅಧ್ಯಕ್ಷಾಧಿಕಾರಿ (ಪಿಆರ್‍ಒ), ಮತದಾನ ಅಧಿಕಾರಿ ಸಿಬ್ಬಂದಿಗೆ(ಎಪಿಆರ್‍ಒ ಮತ್ತು ಪಿಒ) ವಿವಿಧ ದಿನಗಳಂದು ತರಬೇತಿ ಏರ್ಪಡಿಸಲಾಗಿದೆ. 
ಏಪ್ರಿಲ್ 30 ರಂದು ಬೆಳಗ್ಗೆ 9 ಗಂಟೆಗೆ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ವಾಸವಿ ವಿದ್ಯಾ ಕೇಂದ್ರದಲ್ಲಿ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ನಂಜನಗೂಡು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತರಬೇತಿ ನೀಡಲಾಗುತ್ತದೆ.  ಮೇ 1 ರಂದು ಬೆಳಗ್ಗೆ 9 ಗಂಟೆಗೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ವಾಸವಿ ವಿದ್ಯಾಕೇಂದ್ರದಲ್ಲಿ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿರುವ ಕೆ.ವಿ.ಎನ್ ಶಾಲೆ, ಶ್ರೀ ಜವಹರ್ ಎಜುಕೇಷನ್ ಟ್ರಸ್ಟ್ ನಲ್ಲಿ ತರಬೇತಿ ನೀಡಲಾಗುತ್ತದೆ.
ನೇಮಕವಾಗಿರುವ ಅಧಿಕಾರಿ ಸಿಬ್ಬಂದಿ ನಿಗದಿಪಡಿಸಿರುವ ದಿನಾಂಕದಂದು ತರಬೇತಿಗೆ ತಪ್ಪದೇ ಹಾಜರಾಗಬೇಕು, ಗೈರು ಹಾಜರಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಅನುಸಾರ ಶಿಸ್ತು ಕ್ರಮ ಜರುಗಿಸಲಾಗುವುದುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಪಿಆರ್‍ಒ, ಎಪಿಆರ್‍ಒ ತರಬೇತಿ: ಚುನಾವಣಾ ಆದೇಶ, ಎಪಿಕ್ ಕಾರ್ಡ್ ಪ್ರತಿ ತರಲು ಸೂಚನೆ

ಚಾಮರಾಜನಗರ, ಏ. 28 -  ವಿಧಾನಸಭಾ ಸಾರ್ವತಿಕ ಚುನಾವಣೆ ಸಂಬಂಧ ಏಪ್ರಿಲ್ 30ರಂದು ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿರುವ ಮೊದಲ ಹಂತದ ತರಬೇತಿಗೆ ಪಿ.ಆರ್.ಒ ಮತ್ತು ಎ.ಪಿ.ಆರ್.ಒ ಗಳು ಚುನಾವಣೆ ಆದೇಶದ ಪ್ರತಿ ಹಾಗೂ ತಮ್ಮ ಎಪಿಕ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರುವಂತೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ಚುನಾವಣಾ ಸಭೆ: ಸಾಮಾನ್ಯ ವೀಕ್ಷಕರು, ಪೊಲೀಸ್ ವೀಕ್ಷಕರಿಂದ ಸಿದ್ಧತೆ ಪರಿಶೀಲನೆ 

ಚಾಮರಾಜನಗರ, ಏ. 27 -  ಜಿಲ್ಲೆಯಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ಕೈಗೊಳ್ಳಲಾಗಿರುವ ಸಿದ್ಧತೆಯನ್ನು ನಾಲ್ಕು ವಿಧಾನಸಭಾ ಕ್ಷೇತ್ರಗಳ ಸಾಮಾನ್ಯ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರು ಪರಿಶೀಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಚುನಾವಣಾ ಸಂಬಂಧ ಸಭೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ವಜೀರ್ ಸಿಂಗ್ ಗೋಯಟ್, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಲಕ್ಷ್ಮಿ ನಾರಾಯಣ ಸೋನಿ, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ  ಮನೋಜ್ ಕುಮಾರ್, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಅನಿಲ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವೀಕ್ಷಕರಾದ ಡಾ.ರವೀಂದ್ರ ಶಿಶ್ವೆ         ಅವರು ಜಿಲ್ಲೆಯಲ್ಲಿ ಕೈಗೊಂಡಿರುವ ಚುನಾವಣಾ ಸಿದ್ಧತಾ ಸಂಬಂಧ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಯಲು ಎಲ್ಲಾ ಅಧಿಕಾರಿಗಳು ಅತ್ಯಂತ ಜಾಗರೂಕರಾಗಿ ಕರ್ತವ್ಯ ನಿರ್ವಹಿಸಬೇಕು. ನಿಷ್ಪಕ್ಷಪಾತವಾಗಿ ಚುನಾವಣಾ ಕಾರ್ಯ ನಿರ್ವಹಿಸಬೇಕು.  ಚುನಾವಣಾ ಕೆಲಸದಲ್ಲಿ ಯಾವುದೇ ಲೋಪ ಕಂಡುಬಂದರೆ ನಿರ್ಧಾಕ್ಷಿಣ್ಯವಾಗಿ ಚುನಾವಣಾ ಆಯೋಗಕ್ಕೆ ವರದಿ ಮಾಡಲಾಗುವುದು ಎಂದು ವೀಕ್ಷಕರು ತಿಳಿಸಿದರು.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮಾತನಾಡಿ ಚುನಾವಣಾ ಸಂಬಂಧ ಜಿಲ್ಲೆಯಲಿ ಅಗತ್ಯ ಸಿದ್ಧತೆ  ಕೈಗೊಳ್ಳಲಾಗಿದೆ.  ಜಿಲ್ಲೆಯಲ್ಲಿ ಚುನಾವಣಾ ಗುರುತಿನ ಚೀಟಿ(ಎಪಿಕ್)ಗಳ ವಿತರಣಾ ಕಾರ್ಯ ನಿರ್ವಹಿಸಲಾಗಿದೆ.  ನೀತಿಸಂಹಿತೆ ಪಾಲನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಲು ಸೆಕ್ಟರ್ ಅಧಿಕಾರಿಗಳು, ಪ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್, ವಿಡಿಯೋ ಸರ್ವೆಲೆನ್ಸ್ ಸೇರಿದಂತೆ ಇತರೆ ಅವಶ್ಯಕ ತಂಡಗಳನ್ನು ರಚಿಸಲಾಗಿದೆ ಎಂದರು.
 ಚುನಾವಣಾ ಸಂಬಂಧ ಮಸ್ಟರಿಂಗ್, ಡಿಮಸ್ಟರಿಂಗ್, ಮತಗಟ್ಟೆ ಅಧಿಕಾರಿ, ಸಿಬ್ಬಂದಿ ಹಾಗೂ ಚುನಾವಣಾ ಎಣಿಕೆ ಕಾರ್ಯಕ್ಕಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಕಕ್ಕೆ ಎಲ್ಲಾ ಕ್ರಮ ತೆಗೆದುಕೊಳ್ಳಲಾಗಿದೆ.  ಮತಗಟ್ಟೆಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಕಾರ್ಯವನ್ನು ನಿರ್ವಹಿಸಲಾಗಿದೆ.  ಚುನಾವಣೆಗೆ ಅವಶ್ಯವಿರುವ ಎಲ್ಲಾ ಅವಶ್ಯಕ ವ್ಯವಸ್ಥೆಗೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರು ಆದ ಡಾ.ಕೆ.ಹರೀಶ್ ಕುಮಾರ್ ಅವರು ಮಾತನಾಡಿ ಮತದಾನ ಜಾಗೃತಿಗಾಗಿ ಜಿಲ್ಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ.  ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ ಪ್ಯಾಟ್ ಬಳಕೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.  ಮತದಾನ ಪ್ರಮಾಣ ಹೆಚ್ಚಳ ಹಾಗೂ ನೈತಿಕ ಮತದಾನ ಮಾಡಲು ಉತ್ತೇಜಿಸುವ ದಿಸೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.  ಮುಂದೆ ಮನೆ ಮನೆಗೂ ತೆರಳಿ ಇನ್ನಷ್ಟೂ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು. .
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಪೊಲೀಸ್ ಬಂಧೂಬಸ್ತ್ ಸೇರಿದಂತೆ ಪೊಲೀಸ್ ಇಲಾಖೆ ವತಿಯಿಂದ ಕೈಗೊಂಡಿರುವ ಇತರೆ ಸಿದ್ಧತೆಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಚುನಾವಣೆ ಸಂಬಂಧ ಕೈಗೊಂಡಿರುವ ಇಲಾಖೆಯ ಸಿದ್ಧತೆಗಳ ಕುರಿತು ವಿವರಿಸಿದರು.  ಅಬಕಾರಿ, ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಚುನಾವಣೆ ಹಿನ್ನಲೆಯಲ್ಲಿ ನಿರ್ವಹಿಸಲಾಗುತ್ತಿರುವ ಕಾರ್ಯಗಳ ಕುರಿತು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಉಪ ವಿಭಾಗಾಧಿಕಾರಿ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ  ಚುನಾವಣಾ ಅಧಿಕಾರಿಗಳಾದ ಫೌಜಿಯಾ ತರನುಮ್, ಇತರೆ ಕ್ಷೇತ್ರಗಳ ಚುನಾವಣಾ ಅಧಿಕಾರಿಗಳು, ವಿವಿಧ ಸಮಿತಿಯ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಮತಗಟ್ಟೆ ಅಧಿಕಾರಿಗಳು ಸಿಬ್ಬಂದಿಗೆ ತರಬೇತಿ: ಕಡ್ಡಾಯ ಹಾಜರಾತಿಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಏ. 27 :-  ಸಾರ್ವತ್ರಿಕ ವಿಧಾಸಭಾ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರದ 976 ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಮಟ್ಟದ ಅಧ್ಯಕ್ಷಾಧಿಕಾರಿ (ಪಿಆರ್‍ಒ), ಮತದಾನ ಅಧಿಕಾರಿ ಸಿಬ್ಬಂದಿಗೆ(ಎಪಿಆರ್‍ಒ ಮತ್ತು ಪಿಒ) ವಿವಿಧ ದಿನಗಳಂದು ತರಬೇತಿ ಏರ್ಪಡಿಸಲಾಗಿದೆ. 
ಏಪ್ರಿಲ್ 30 ರಂದು ಬೆಳಗ್ಗೆ 9 ಗಂಟೆಗೆ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ವಾಸವಿ ವಿದ್ಯಾ ಕೇಂದ್ರದಲ್ಲಿ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ನಂಜನಗೂಡು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತರಬೇತಿ ನೀಡಲಾಗುತ್ತದೆ.  ಮೇ 1 ರಂದು ಬೆಳಗ್ಗೆ 9 ಗಂಟೆಗೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ವಾಸವಿ ವಿದ್ಯಾಕೇಂದ್ರದಲ್ಲಿ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿರುವ ಕೆ.ವಿ.ಎನ್ ಶಾಲೆ, ಶ್ರೀ ಜವಹರ್ ಎಜುಕೇಷನ್ ಟ್ರಸ್ಟ್ ನಲ್ಲಿ ತರಬೇತಿ ನೀಡಲಾಗುತ್ತದೆ.
ನೇಮಕವಾಗಿರುವ ಅಧಿಕಾರಿ ಸಿಬ್ಬಂದಿ ನಿಗದಿಪಡಿಸಿರುವ ದಿನಾಂಕದಂದು ತರಬೇತಿಗೆ ತಪ್ಪದೇ ಹಾಜರಾಗಬೇಕು, ಗೈರು ಹಾಜರಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಅನುಸಾರ ಶಿಸ್ತು ಕ್ರಮ ಜರುಗಿಸಲಾಗುವುದುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಾ ಪ್ರದರ್ಶನ ಮೂಲಕ ಮತದಾನ ಜಾಗೃತಿ ಮೂಡಿಸಿದ ಕಲಾವಿದರು 

ಚಾಮರಾಜನಗರ, ಏ. 27 :- ಮತದಾನದ ಮಹತ್ವ ಸಾರುವ ಮಹತ್ತರ ಉದ್ದೇಶದೊಂದಿಗೆ ಜಿಲ್ಲೆಯ ಕಲಾವಿದರು ಇಂದು ನಗರದಲ್ಲಿ ಕಲಾ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಿದರು.
ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನದ ಜಾಗೃತಿಗಾಗಿ ವಿಭಿನ್ನ ಕಲಾ ಪ್ರಕಾರಗಳ ಕಲಾವಿದರಿಂದ ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ವೀರಗಾಸೆ, ಬ್ಯಾಂಡ್ ವಾದನ, ಜಾನಪದ ಕಲೆ ಪ್ರಕಾರಗಳ ಮೂಲಕ ಕಲಾವಿದರು ಮತದಾನದ ಪ್ರಾಮುಖ್ಯತೆಯನ್ನು ವಿವರಿಸಲು ಉತ್ಸಾಹದಿಂದ ಕಲಾ ಪ್ರದರ್ಶನ ಜಾಥಾದಲ್ಲಿ ಪಾಲ್ಗೊಂಡರು.  ಕಲಾವಿದರ ಜಾಥಾ ಹಿನ್ನಲೆಯಲ್ಲಿ ಕುತೂಹಲದಿಂದ ಜನರು ವೀಕ್ಷಿಸಿದರು.
ನಗರದ ಚಾಮರಾಜೇಶ್ವರ ದೇವಾಲಯ ಬಳಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರಾದ ಡಾ.ಕೆ.ಹರೀಶ್ ಕುಮಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಸಾಂಸ್ಕøತಿಕ ಕಲಾ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಇದೇ ವೇಳೆ ನೈತಿಕವಾಗಿ ಮತದಾನ ಮಾಡುವ ಕುರಿತು ಪ್ರತಿಜ್ಞಾವಿಧಿಯನ್ನು ಭೋದಿಸಲಾಯಿತು.
ಜಾಗೃತಿ ಜಾಥಾ ಚಾಲನೆ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಮುಕ್ತ ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಮತದಾನದಂತಹ ಮಹತ್ವ ಸಂದರ್ಭದಲ್ಲಿ ದೂರ ಉಳಿಯಬಾರದು.  ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಯಾವುದೇ ಆಮಿಷಕ್ಕೆ ಒಳಗಾಗದೆ ಹಾಗೂ ಪ್ರಜಾಪ್ರಭುತ್ವದ ಯಶಸ್ವಿಗಾಗಿ ಮುಕ್ತವಾಗಿ ಮತದಾನದಲ್ಲಿ ಜನರು ಪಾಲ್ಗೊಳ್ಳಬೇಕು ಎಂಬ ಸಂದೇಶ ಅರಿವು ಮೂಡಿಸುವ ದಿಸೆಯಲ್ಲಿ ಸ್ಥಳೀಯಾ ಕಲಾವಿದರ ಕಲಾ ಪ್ರದರ್ಶನ ಹಾಗೂ ಜಾಥಾ ಮೂಲಕ ಪ್ರಯತ್ನಕ್ಕೆ ಮುಂದಾಗಿದ್ದೇವೆ.  ಜಾನಪದ ಕಲೆಗಳ ತವರೂರಾಗಿರುವ ಜಿಲ್ಲೆಯಲ್ಲಿ ಕಲಾವಿದರಿಂದಲೆ ಮತದಾನ ಜಾಗೃತಿ ಮೂಡಿಸುತ್ತಿರುವುದು ವಿಶೇಷವಾಗಿದೆ ಎಂದು ಹರೀಶ್ ಕುಮಾರ್ ಅವರು ಅಭಿಪ್ರಾಯ ಪಟ್ಟರು.
ಚಾಮರಾಜನಗರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಇತರರು ಹಾಜರಿದ್ದರು.






Thursday, 26 April 2018

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018- ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು ಸಾರ್ವಜನಿಕರಿಗೆ ಅವಕಾಶ (26-04-2018)

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018-
ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು ಸಾರ್ವಜನಿಕರಿಗೆ ಅವಕಾಶ

ಚಾಮರಾಜನಗರ, ಏ. 26 -  ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನೇಮಕವಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರನ್ನು ಸಾರ್ವಜನಿಕರು ಭೇಟಿ ಮಾಡಲು ಅವಕಾಶವಿದ್ದು ಭೇಟಿಯ ಸ್ಥಳ ಹಾಗೂ ಸಮಯವನ್ನು ನಿಗದಿ ಮಾಡಲಾಗಿದೆ.  
ಹನೂರು ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ವಜೀರ್ ಸಿಂಗ್ ಗೋಯಟ್ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದು. ಇವರ ಮೊಬೈಲ್ ಸಂಖ್ಯೆ 9480580400 ಆಗಿರುತ್ತದೆ.
  ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಲಕ್ಷ್ಮಿನಾರಾಯಣ ಸೋನಿ ಅವರನ್ನು ಕೊಳ್ಳೇಗಾಲ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದಾಗಿದೆ. ಇವರ ಮೊಬೈಲ್ ಸಂಖ್ಯೆ 9483287292 ಆಗಿದೆ.
 ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಮನೋಜ್ ಕುಮಾರ್ ಅವರನ್ನು ಚಾಮರಾಜನಗರÀ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಂಜೆ 4 ರಿಂದ 5 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದಾಗಿದೆ. ಇವರ ಮೊಬೈಲ್ ಸಂಖ್ಯೆ 9483647292 ಆಗಿದೆ.
  ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಅನಿಲ್ ಕುಮಾರ್ ಅವರನ್ನು ಗುಂಡ್ಲುಪೇಟೆ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಬಹುದಾಗಿದೆ ಇವರ ಮೊಬೈಲ್ ಸಂಖ್ಯೆ 9483747292, 09451597287 ಆಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕರಟಣೆಯಲ್ಲಿ ತಿಳಿಸಿದ್ದಾರೆ. 

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಅಂಚೆ ಮತಪತ್ರ ವಿತರಣೆಗೆ ನೋಡಲ್ ಅಧಿಕಾರಿಗಳ ನೇಮಕ

ಚಾಮರಾಜನಗರ, ಏ. 26 - ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕರ್ತವ್ಯ ನಿರ್ವಹಿಸಲು ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ. 
ಅಂಚೆ ಮತಪತ್ರಕ್ಕೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳಾಗಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಮಹೇಶ್ ಕುಮಾರ್ ಎಸ್.ಎಲ್. ಅವರನ್ನು ನೇಮಕ ಮಾಡಲಾಗಿದ್ದು ಅವರ ಮೊಬೈಲ್ ಸಂಖ್ಯೆ 9945629106 ಆಗಿದೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಯಾಗಿ ಶ್ರೀಕಾಂತ್ ಮಂಜುನಾಥ ಹೆಗಡೆ ಅವರನ್ನು ನೇಮಕ ಮಾಡಿದ್ದು ಅವರ ಮೊಬೈಲ್ ಸಂಖ್ಯೆ 9901220861 ಆಗಿದೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಯಾಗಿ ಸುಂದರ್ ಅವರು ನೇಮಕಗೊಂಡಿದ್ದು ಅವರ ಮೊಬೈಲ್ ಸಂಖ್ಯೆ 9972720386 ಆಗಿದೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನೋಡಲ್ ಅಧಿಕಾರಿಯಾಗಿ ಅಜೇತರವಿ ಅವರನ್ನು ನೇಮಕ ಮಾಡಲಾಗಿದ್ದು ಅವರ ಮೊಬೈಲ್ ಸಂಖ್ಯೆ 9448401941 ಆಗಿದೆ.
ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂಚೆ ಮತಪತ್ರ ಸೌಲಭ್ಯ ಕೇಂದ್ರ ತೆರೆಯಲಾಗಿದ್ದು ನಮೂನೆ 12ರನ್ನು ಚುನಾವಣಾ ಕರ್ತವ್ಯನಿರತ ಅಧಿಕಾರಿ ಸಿಬ್ಬಂದಿಗಳು ಪಡೆದುಕೊಳ್ಳಬೇಕು. ತಮ್ಮ ವಿಧಾನಸಭಾ ಕ್ಷೇತ್ರದ ಭಾಗದ ಸಂಖ್ಯೆ, ಕ್ರಮ ಸಂಖ್ಯೆಯನ್ನು ಪಡೆಯಬಹುದು. ಅಲ್ಲದೆ 9731979899 ನಂಬರಿಗೆ ಏಂಇPIಅ(sಠಿಚಿಛಿe) ಮತದಾರರ ಗುರುತಿನ ಚೀಟಿಯ ಸಂಖ್ಯೆ (ಎಪಿಕ್) ನಮೂದಿಸಿ ಎಸ್ ಎಂ ಎಸ್ ಮಾಡಿಯೂ ಮಾಹಿತಿ ಪಡೆಯಬಹುದು.
ಇಂಟರ್‍ನೆಟ್ ಮೂಲಕ hಣಣಠಿ://eಟeಛಿಣoಡಿoಟseಚಿಡಿಛಿh.iಟಿ ಟೈಪ್ ಮಾಡಿ seಚಿಡಿಛಿh bಥಿ ಇPIಅ ಓumbeಡಿ ಔಠಿಣioಟಿ ಅಟiಛಿಞ ಮಾಡಿಯೂ ಮಾಹಿತಿ ಪಡೆಯಬಹುದು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲ ಚುನಾವಣಾ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಅಂಚೆ ಮತಪತ್ರದ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಸಾಮಾನ್ಯ ವೀಕ್ಷಕರು, ಜಿಲ್ಲಾ ಪೊಲೀಸ್ ವೀಕ್ಷಕರ ನೇಮಕ

ಚಾಮರಾಜನಗರ, ಏ. 26 -  ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಸಾಮಾನ್ಯ ವೀಕ್ಷಕರು ಹಾಗೂ ಜಿಲ್ಲೆಗೆ ಓರ್ವ ಪೊಲೀಸ್ ವೀಕ್ಷಕರನ್ನು ಭಾರತ ಚುನಾವಣಾ ಆಯೋಗವು ನೇಮಕ ಮಾಡಿದೆ. 
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ವಜೀರ್ ಸಿಂಗ್ ಗೋಯಟ್ ಅವರು ನೇಮಕವಾಗಿದ್ದು, ಇವರು ಮೊಬೈಲ್ ಸಂಖ್ಯೆ 9480580400 ಆಗಿದೆ.  ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಲಕ್ಷ್ಮಿನಾರಾಯಣ ಸೋನಿಯವರು ನೇಮಕವಾಗಿದ್ದು ಇವರ ಮೊಬೈಲ್ ಸಂಖ್ಯೆ 9483287292 ಆಗಿದೆ.  ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಮನೋಜ್ ಕುಮಾರ್ ಅವರು ನೇಮಕವಾಗಿದ್ದು, ಇವರ ಮೊಬೈಲ್ ಸಂಖ್ಯೆ 9483647292 ಆಗಿದೆ.  ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಅನಿಲ್ ಕುಮಾರ್ ಅವರು ನೇಮಕವಾಗಿದ್ದು ಇವರ ಮೊಬೈಲ್ ಸಂಖ್ಯೆ 9483747292, 09451597287 ಆಗಿದೆ.  ಜಿಲ್ಲಾ ಪೊಲೀಸ್ ವೀಕ್ಷಕರಾಗಿ ಡಾ. ರವೀಂದ್ರ ಶಿಶ್ವೆ ಅವರು ನೇಮಕವಾಗಿದ್ದು ಇವರ ಮೊಬೈಲ್ ಸಂಖ್ಯೆ 08082115566 ಆಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

.








Wednesday, 25 April 2018

ಮತ ಖಾತ್ರಿಗೆ ವಿವಿಪ್ಯಾಟ್ (24-04-2018)

              ಮತ ಖಾತ್ರಿಗೆ ವಿವಿಪ್ಯಾಟ್ 

ಈ ಬಾರಿ ವೋಟ್ ಮಾಡಲು ಕಾತರದಿಂದ ಕಾಯುತ್ತಿದ್ದೇನೆ, ಏಕೆಂದರೆ ಇದು ನಾನು ಚಲಾಯಿಸುತ್ತಿರುವ ಮೊಟ್ಟಮೊದಲ ವೋಟ್. ಮತದಾನ ಮಾಡುವುದು ನನ್ನ ಹಕ್ಕು. ಅದರಲ್ಲೂ ನಾನು ಮತದಾನ ಮಾಡಿರುವ ಬಗ್ಗೆ ಗ್ಯಾರಂಟಿ ನೀಡಲು ಹೊಸದಾಗಿ ವಿವಿಪ್ಯಾಟ್ ಯಂತ್ರ ಬಂದಿದೆಯಲ್ಲಾ. . . .ಮೋಸ ಮಾಡೋದಂತೂ ಸಾಧ್ಯವೇ ಇಲ್ಲ.   ಅದಕ್ಕೆ ನಾನು ವೋಟ್ ಮಾಡುವುದನ್ನು ತಪ್ಪಿಸುವುದಿಲ್ಲ.”

“ಕಳೆದ ಚುನಾವಣೆಯ ಸಂದರ್ಭದಲ್ಲಿಯೇ ಎಪಿಕ್ ಕಾರ್ಡ್ ಮಾಡಿಸಿದ್ದರೂ, ವೋಟ್ ಮಾಡಿ ಪ್ರಯೋಜನವೇನು ಎಂಬ ಉದಾಸೀನತೆಯಿಂದ ಮತದಾನ ಮಾಡುವ ಗೋಜಿಗೇ ಹೋಗಿರಲಿಲ್ಲ. ತುಂಬಾ ಜನ ಅದೇನೋ ಇವಿಎಂ ಮಶೀನ್‍ನಲ್ಲಿ ಯಾರಿಗೆ ಮತಹಾಕಿದೆ ಗೊತ್ತಾಗೋಲ್ಲ ಅಂತಿದ್ರು. .“ಆದರೆ ವಿವಿಪ್ಯಾಟ್ ಅಂತ ಹೊಸ ಮಶೀನ್ ಒಂದು ಬಂದಿದ್ಯಂತೆ, ನಾನು  ಯಾರಿಗೆ ಮತ ಹಾಕಿದೆ ಅಂತ ಸ್ಕ್ರೀನ್‍ನಲ್ಲಿ ಕಾಣ್ಸುತ್ತೇ, ಎಟಿಎಂ ಸ್ಲಿಪ್ ಬರುತ್ತಲ್ಲ, ಆ ಥರ ಚೀಟಿ ಮೆಷಿನ್‍ನ ಡಬ್ಬದೊಳಗೆ ಬೀಳುತ್ತೆ.  ಅದಕ್ಕೆ ನಾನು ಈ ಸರ್ತಿ ವೋಟ್ ಖಂಡಿತ ಮಾಡ್ತೀನಿ. ಇವಿಎಂ ಮೆಷಿನ್‍ನಲ್ಲಿ ನಾವು ಯಾರಿಗ್ ಮತ ಹಾಕಿದ್ರೂ ಕೂಡ, ಒಂದೇ ಪಕ್ಷಕ್ಕೆ ಮತ ಬೀಳುವ ರೀತಿ ಮಾಡಿಕೊಳ್ಳಬಹುದು ಅಂತ ಎಲ್ರೂ ಮಾತಾಡ್ತಿದ್ದರು. ಇವಿಎಂ ಜೊತೆ ವಿವಿಪ್ಯಾಟ್ ಮೆಷಿನ್‍ನಿಂದ ನನಗೆ ಇದ್ದ ಅನುಮಾನ ದೂರ ಆಗಿದೆ”.

ಗೋಪಾಲ ಗ್ರಾಮದಲ್ಲಿ ಇತ್ತೀಚೆಗೆ ಜಿಲ್ಲಾ ಮಟ್ಟದ ಸ್ವೀಪ್ (ಸಮಗ್ರ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ ಆಂದೋಲನ( SಗಿಇಇP ) ಸಮಿತಿ ವತಿಯಿಂದ ವಿವಿಪ್ಯಾಟ್( ಗಿoಣeಡಿ ಗಿeಡಿiಜಿiಚಿbಟe Pಚಿಠಿeಡಿ ಂuಜiಣ ಖಿಡಿಚಿiಟ ) ಕುರಿತು ಹಮ್ಮಿಕೊಂಡಿದ್ದ ಪ್ರಾತ್ಯಕ್ಷಿಕೆಯಲ್ಲಿ ಪ್ರಮೋದ್ ಭಾಗವಹಿಸಿದ್ದ. ಮತದಾನದ ಮಹತ್ವ ಬಗ್ಗೆ ಈ ಕಾರ್ಯಕ್ರಮದಲ್ಲಿ ಅರಿತುಕೊಂಡಿರುವ ಪ್ರಮೋದ್ ತನ್ನೆಲ್ಲಾ ಗೆಳೆಯರು ಹಾಗೂ ಊರಿನವರನ್ನೆಲ್ಲಾ ಮತದಾನ ಮಾಡುವಂತೆ ಪ್ರೇರೇಪಿಸುತ್ತಿದ್ದಾನೆ. 
 ಸಮೀಕ್ಷೆಯ ಪ್ರಕಾರ ರಾಜ್ಯದ ಶೇ. 72.4 ರಷ್ಟು ಮಂದಿಗೆ 
ಮತದಾರ ಮತದಾನ ಮಾಡುವ ಸಂದರ್ಭದಲ್ಲಿ ತಾನು ಮತ ಚಲಾಯಿಸಬೇಕೆಂದಿರುವ ಚಿಹ್ನೆ ಮತ್ತು ಹೆಸರಿನ ಪಕ್ಕದಲ್ಲಿರುವ ನೀಲಿ ಬಣ್ಣ ಬಟನ್ ಒತ್ತಿದ ಕೂಡಲೇ ಕೆಂಪು ದೀಪ ಬೆಳಗುತ್ತದೆ. ಇವಿಎಂಗೆ ಅಳವಡಿಸಿರುವ ವಿವಿಪ್ಯಾಟ್ ಯಂತ್ರದ  ಪರದೆಯಲ್ಲಿ ಮತದಾರನು ತಾನು ಮತ ಚಲಾಯಿಸಿರುವ ಚಿಹ್ನೆ ಮತ್ತು  ಹೆಸರಿನ ವಿವರವುಳ್ಳ ಚೀಟಿಯನ್ನು 7 ಕ್ಷಣಗಳ ಕಾಲ ಡಿಸ್‍ಪ್ಲೇ ಸೆಕ್ಷನ್‍ನಲ್ಲಿ ವೀಕ್ಷಿಸಬಹುದು. 
ಚುನಾವಣಾ ಪ್ರಕ್ರಿಯೆ ಕುರಿತಂತೆ ಮತದಾರರಲ್ಲಿ ಜಾಗೃತಿ ಮತ್ತು ಅರಿವಿನ ಕೊರತೆ ಇನ್ನೂ ಇದೆ ಎಂಬ ಅಂಶ ಚುನಾವಣಾ ಆಯೋಗ ಇತ್ತೀಚೆಗೆ ರಾಜ್ಯದ 4 ಕಂದಾಯ ವಿಭಾಗಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಿದ  ಮತದಾರರ ಅರಿವು, ಮನೋಭಾವ ಮತ್ತು ಅಭ್ಯಾಸಗಳ (ಏಂP) ಕುರಿತು ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿತು. ಸಮೀಕ್ಷೆಯಲ್ಲಿ  ಕಂಡು ಬಂದ ಅಂಶಗಳ ಆಧಾರದ ಮೇಲೆ ಅಗತ್ಯ ಸಂವಹನ ವಿಧಾನ ಮತ್ತು ಮಧ್ಯಸ್ಥಿಕೆಗಳನ್ನು  ಸ್ವೀಪ್ ಮುಖಾಂತರ ಚುನಾವಣಾ ಆಯೋಗ ಕೈಗೊಂಡಿದೆ.  
ವಿವಿಪ್ಯಾಟ್ ಬಗ್ಗೆ ತಿಳುವಳಿಕೆ ಇಲ್ಲದಿರುವ ಅಂಶ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸ್ವೀಪ್ ವತಿಯಿಂದ ಇವಿಎಂ, ವಿವಿಪ್ಯಾಟ್  ಬಳಕೆ ಕುರಿತು  ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. 

ತದನಂತರ ಆ ಚೀಟಿಯು ಡ್ರಾಪ್  ಬಾಕ್ಸ್  ಒಳಗೆ  ತುಂಡಾಗಿ ಬೀಳುತ್ತದೆ (ಈ ಚೀಟಿಯನ್ನು ಮತದಾರ ಪಡೆಯುವಂತಿಲ್ಲ). ಈ ಮೂಲಕ ಮತದಾರ, ತಾನು ಆರಿಸಬೇಕೆಂದಿರುವ ವ್ಯಕ್ತಿ / ಪಕ್ಷಕ್ಕೆ ಮತ ಚಲಾವಣೆಯಾಗಿರುವುದನ್ನು  ಖಾತ್ರಿಪಡಿಸಿಕೊಳ್ಳಬಹುದಾಗಿದೆ. ಬ್ಯಾಲೆಟ್ ಚೀಟಿ ಕಾಣಿಸದಿದ್ದರೆ ಹಾಗೂ ಬೀಪ್ ಶಬ್ದ ಕೇಳಿಸದಿದ್ದರೆ ಮತದಾರನು ಮತಗಟ್ಟೆಯ ಅಧ್ಯಕ್ಷಾಧಿಕಾರಿಯನ್ನು ಸಂಪರ್ಕಿಸಬಹುದು.
ಇವಿಎಂ ಯಂತ್ರಗಳು ಅತ್ಯಂತ ಸುರಕ್ಷಿತವಾಗಿವೆ. ಈ ಯಂತ್ರದಲ್ಲಿ ಮೈಕ್ರೋ ಕಂಟ್ರೋಲರ್ ಚಿಪ್ ಅಳವಡಿಸಲಾಗಿದ್ದು, ಇವಿಎಂ ನ್ನು ಒಮ್ಮೆ ಮಾತ್ರ ಪ್ರೊಗ್ರಾಂ ಮಾಡಲು ಸಾಧ್ಯ. ಚಿಪ್‍ನಲ್ಲಿರುವ  ಸಾಫ್ಟ್‍ವೇರ್ ಕೋಡ್ ರೀಡ್ ಅಥವಾ ರೀರೈಟ್ ಮಾಡಲು ಸಾಧ್ಯವಿಲ್ಲ. ಈ ತಂತ್ರಾಂಶವನ್ನು ಸರ್ಕಾರದ ಅಂಗಸಂಸ್ಥೆಯಾದ ಬಿಇಎಲ್ ಮತ್ತು ಇಸಿಐಇಲ್ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ. ಇವಿಎಂ ಯಂತ್ರಗಳನ್ನು ಅಂತರ್ಜಾಲ ಅಥವಾ ಇನ್ಯಾವುದೇ ನೆಟ್‍ವರ್ಕ್ ಸಂಪರ್ಕದಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಯಂತ್ರದಲ್ಲಿ ಯಾವುದೇ ಆಪರೇಟಿಂಗ್ ಸಿಸ್ಟಮ್ ಬಳಕೆ ಮಾಡದಿರುವುದರಿಂದ ವೈರಸ್ ದಾಳಿ ಉಂಟಾಗುವ ಭಯವೂ ಇಲ್ಲ.
ಇವಿಎಂ, ವಿವಿಪ್ಯಾಟ್  ಬಳಕೆ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳಿಗೆ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಪ್ರಾತ್ಯಕ್ಷಿಕೆಗಾಗಿ ಒದಗಿಸಲಾಗಿದೆ. ಈ ತಂಡಗಳು ವಿಧಾನಸಭಾ ಕ್ಷೇತ್ರಗಳ ವಿವಿಧ ಭಾಗಗಳಲ್ಲಿ ಸಂಚರಿಸಿ ಈ ಯಂತ್ರದ ಕಾರ್ಯನಿರ್ವಹಣೆ ಬಗ್ಗೆ ವಿವರಿಸುತ್ತದೆ. ಮತದಾರರು ಸಹ ಈ ಯಂತ್ರವನ್ನು ಬಳಸಲು ಅವಕಾಶ ನೀಡಲಾಗುತ್ತಿದೆ.
ಇದಲ್ಲದೆ ಸ್ಥಳೀಯ ಟಿವಿ ಹಾಗೂ ಕೇಬಲ್ ವಾಹಿನಿಗಳು, ಸಮುದಾಯ ರೇಡಿಯೋ, ಎಫ್‍ಎಂ ರೇಡಿಯೋ, ಆಕಾಶವಾಣಿ, ದೂರದರ್ಶನದ ಮೂಲಕ ಮಹಿಳೆಯರು, ಹಿರಿಯ ನಾಗರಿಕರನ್ನೊಳಗೊಂಡಂತೆ ಅಕ್ಷರಸ್ಥ ಹಾಗೂ ಅನಕ್ಷರಸ್ಥರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಂತೆ, ಜಾತ್ರೆ ಹಾಗೂ ಜನನಿಬಿಡ ಸ್ಥಳಗಳಲ್ಲಿ ಬೀದಿ ನಾಟಕಗಳು ಹಾಗೂ ಜಾಥಾಗಳನ್ನು ಹಾಗೂ ಮೊಬೈಲ್ ಎಲ್‍ಇಡಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಲಾಗುತ್ತಿದ್ದು, ಅನಕ್ಷರಸ್ಥ ಹಾಗೂ ಗ್ರಾಮೀಣ ಮತದಾರರನ್ನು ತಲುಪಲಾಗುತ್ತಿದೆ.
ಮೊಬೈಲ್ ಬಳಕೆದಾರರು ಹಾಗೂ ಯುವಜನತೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ದಿನಪತ್ರಿಕೆಗಳು, ಕರಪತ್ರ ಬ್ಯಾನರ್ , ಕೈಪಿಡಿ, ಜಾಹಿರಾತು ಹಾಗೂ ಮೂಲಕ ಯುವಜನತೆ , ದಿನಪತ್ರಿಕೆ ಓದುಗರಲ್ಲಿ  ಜಾಗೃತಿ ಮೂಡಿಸುವುದರ ಜೊತೆಗೆ ಇವಿಎಂ ಹಾಗೂ ವಿವಿಪ್ಯಾಟ್ ಕುರಿತ ಕಿರುಚಿತ್ರ ಹಾಗೂ ಸ್ಲೈಡ್‍ಗಳನ್ನು  ಥಿಯೇಟರ್ಸ್ ಹಾಗೂ ಸಿನಿಮಾ ಮಂದಿರದಲ್ಲಿ ಪ್ರದರ್ಶಿಸುವ ಮೂಲಕ ಜನರಲ್ಲಿ  ಅರಿವು ಮೂಡಿಸಲಾಗುತ್ತಿದೆ.
ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕದ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೈಜೋಡಿಸಿದ್ದು, ವಿವಿಧ ಮಾಧ್ಯಮಗಳ ಮೂಲಕ ಚುನಾವಣಾ ಸಂದೇಶಗಳನ್ನು ಜನರಿಗೆ ತಲುಪಿಸಲಾಗುತ್ತಿದೆ. ಕಂದಾಯ ಇಲಾಖೆ, ಬಿಬಿಎಂಪಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಶಿಕ್ಷಣ, ಕೃಷಿ, ತೋಟಗಾರಿಕೆ ಹಾಗೂ ಇನ್ನಿತರ ಪ್ರಮುಖ ಇಲಾಖೆಗಳು  ಒಗ್ಗೂಡಿ ನಗರ, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿವೆ. ಈ ಪ್ರಚಾರ ಕಾರ್ಯವು ಈಗಾಗಲೇ 2 ಕೋಟಿ ಜನರನ್ನು ತಲುಪಿದೆ. ಇವಿಎಂ-ವಿವಿಪ್ಯಾಟ್ ಬಗ್ಗೆ ಸ್ಪಷ್ಠತೆಯೊಂದಿಗೆ ಕಡೇ ಕ್ಷಣದವರೆಗೂ ಮತದಾನಕ್ಕೆ ಉತ್ತೇಜನ ನೀಡಲು ಚುನಾವಣಾ ಆಯೋಗ ಪ್ರಯತ್ನಿಸುತ್ತಿದೆ.
ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮತದಾರರ ಜಾಗೃತಿಗೆ ಎಲ್ಲ ಕ್ರಮಗಳನ್ನು ಸ್ವೀಪ್ ಮೂಲಕ ಚುನಾವಣಾ ಆಯೋಗ ಕೈಗೊಂಡಿದೆ. ಚುನಾವಣಾ ಆಯೋಗವು ಸ್ವೀಪ್ ಮುಖಾಂತರ ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು, ಔಚಿತ್ಯಪೂರ್ಣ ಮತ್ತು ನ್ಯಾಯೋಚಿತ ಮತದಾನವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ  ಕಾರ್ಯೋನ್ಮುಖವಾಗಿದೆ.
******





ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ಇಪ್ಪತ್ತಮೂರು ನಾಮಪತ್ರ ಸಲ್ಲಿಕೆ , ಅಮಾನತು (23-04-2018)

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
 ಇಪ್ಪತ್ತಮೂರು ನಾಮಪತ್ರ ಸಲ್ಲಿಕೆ 

ಚಾಮರಾಜನಗರ, ಏ. 23 :- ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಐದನೇ ದಿನವಾದ ಇಂದು ಜಿಲ್ಲೆಯಲ್ಲಿ ಇಪ್ಪತ್ತಮೂರು ನಾಮಪತ್ರ ಸಲ್ಲಿಕೆಯಾಗಿದೆ.  
ಹನೂರು ವಿಧಾನಸಭಾ ಕ್ಷೇತ್ರದಿಂದ ಎಲ್.ಎ.ಡಿ (ಲೋಕ್ ಆವಾಜ್ ದಳ್) ಅಭ್ಯರ್ಥಿಯಾಗಿ ಎಸ್.ಗಂಗಾಧರ,  ಭಾರತೀಯ ಜನತಾ ಪಕ್ಷದಿಂದ  ಪ್ರೀತನ್ ಕೆ.ಎನ್, ಎಂ.ಇ.ಪಿ ಅಭ್ಯರ್ಥಿಯಾಗಿ ಪ್ರದೀಪ್ ಕುಮಾರ್ ಎಂ., ಜನತಾದಳ (ಜಾತ್ಯಾತೀತ) ಅಭ್ಯರ್ಥಿಯಾಗಿ ಎಂ.ಆರ್ ಮಂಜುನಾಥ್, ಪಕ್ಷೇತರ ಅಭ್ಯರ್ಥಿಗಳಾಗಿ ಸಿದ್ದಪ್ಪ.ಆರ್, ಆರ್.ಮಹೇಶ, ಜೆ.ಜಯಪ್ರಕಾಶ್ ಎಂಬುವರು ತಲಾ ಒಂದು ನಾಮಪತ್ರ  ನಾಮಪತ್ರ ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎನ್.ಮಹೇಶ್ ಅವರು ಒಂದು  ನಾಮಪತ್ರ ಸಲ್ಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಹೊನ್ನೂರಯ್ಯ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಆಲ್ ಇಂಡಿಯ ಮಹಿಳಾ ಎಂಪವರ್‍ಮೆಂಟ್ ಪಾರ್ಟಿಯಿಂದ ಎಂ.ಆರ್ ಸರಸ್ವತಿ, ಪಕ್ಷೇತರ ಅಭ್ಯರ್ಥಿಯಾಗಿ ಸುರೇಶ ಬಿ.ಎನ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಆಲ್ ಇಂಡಿಯಾ ಮಹಿಳಾ ಎಂಪವರ್ ಪಾರ್ಟಿ ಅಭ್ಯರ್ಥಿಯಾಗಿ ಏ.ಜಿ. ರಾಮಚಂದ್ರರಾವ್, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಸಿದ್ದಯ್ಯ, ಬಿ.ಸಿ.ಶೇಖರ ರಾಜು, ಪ್ರಜಾಪರಿವರ್ತನ ಪಾರ್ಟಿ ಅಭ್ಯರ್ಥಿಯಾಗಿ ಕಾಂತರಾಜ ಸಿ.ಜೆ, ಬಹುಜನ ಸಮಾಜ ಪಾರ್ಟಿಯಿಂದ ಎಸ್.ಗುರುಪ್ರಸಾದ್ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಸಿ.ಮೋಹನ ಕುಮಾರಿ ಉರುಫ್ ಗೀತಾ ಅವರು ನಾಲ್ಕು ನಾಮಪತ್ರ ಸಲ್ಲಿದ್ದಾರೆ.
ಒಟ್ಟಾರೆ ಇಂದು ಹದಿನೇಳು ಅಭ್ಯರ್ಥಿಗಳಿಂದ ಒಟ್ಟು ಇಪ್ಪತ್ತಮೂರು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು  ತಿಳಿಸಿದ್ದಾರೆ.

ಅಮಾನತು

             ಚಾಮರಾಜನಗರ, ಏ. 23 - ಚಾಮರಾಜನಗರ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಪ್ರಥಮ ದರ್ಜೆ ಲೆಕ್ಕ ಸಹಾಯಕರಾದ ಕೆ.ಕೃಷ್ಣನಾಯಕ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. 
           ಕಳೆದ ಏಪ್ರಿಲ್ 9ರಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ಕಚೇರಿಗೆ ದಾಳಿ ಮಾಡಿದ ವೇಳೆ ಕೆ.ಕೃಷ್ಣನಾಯಕ್ ಅವರ ಬಳಿ ಹೆಚ್ಚುವರಿ ಅಕ್ರಮ ಹಣ ಇದ್ದು ಇದನ್ನು ವಶಪಡಿಸಿಕೊಳ್ಳಲಾಗಿತ್ತು.  ನಂತರ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.  ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1998ರ ಅನ್ವಯ ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನದಲ್ಲಿಟ್ಟಿದ್ದ ಕಾರಣ ದಸ್ತಗಿರಿ ಮಾಡಿದ ಏಪ್ರಿಲ್ 9ರಿಂದಲೇ ಪೂರ್ವಾನ್ವಯವಾಗುವಂತೆ ಅಮಾನತುಗೊಳಿಸಿರುವುÅದಾಗಿ ಆದೇಶದಲ್ಲಿ ತಿಳಿಸಲಾಗಿದೆ. 



ಏಪ್ರಿಲ್ 24ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯು

             ಚಾಮರಾಜನಗರ, ಏ. 23 - ಚಾಮರಾಜನಗರ ಟೌನ್-1 ಶಾಖಾ ವ್ಯಾಪ್ತಿಗೆ ಬರುವ ಬಿ.ರಾಚಯ್ಯ ಜೋಡಿ ರಸ್ತೆ ಭಾಗಗಳಲ್ಲಿ ರಸ್ತೆ ಅಗಲೀಕರನ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿಯು ಏಪ್ರಿಲ್ 24ರಂದು ನಿರ್ವಹಿಸಲಾಗುತ್ತದೆ. ಈ ಹಿನ್ನಲೆಯಲ್ಲಿ  ಭ್ರಮರಾಂಭ ಬಡಾವಣೆ, ಪಚ್ಚಪ್ಪ ಸರ್ಕಲ್, ಬಿ.ರಾಚಯ್ಯ ಜೋಡಿ ರಸ್ತೆ, ಆರ್.ಕೆ ಆಸ್ಪತ್ರೆ ಮುಂಭಾಗ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್  ಕಾರ್ಯನಿರ್ವಾಹಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ಚುನಾವಣೆ: ಯಾವುದೇ ಲಂಚ, ಆಮಿಷ ಒಡ್ಡಿದ್ದಲ್ಲಿ ದೂರು ನೀಡಿ, ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಭಗೀರಥ ಜಯಂತಿ(22-04-2018)

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಚುನಾವಣೆ: ಯಾವುದೇ ಲಂಚ, ಆಮಿಷ ಒಡ್ಡಿದ್ದಲ್ಲಿ ದೂರು ನೀಡಿ

ಚಾಮರಾಜನಗರ, ಏ. 22 - ಮತದಾನದ ಹಿನ್ನಲೆಯಲ್ಲಿ ಯಾರೇ ವ್ಯಕ್ತಿ ಲಂಚ, ಆಮಿಷ ನೀಡುವುದು, ಮತದಾರರಿಗೆ ಬೆದರಿಕೆ, ಬೀತಿ ಹುಟ್ಟಿಸುವ ಪ್ರಸಂಗಗಳು ಕಂಡುಬಂದರೆ ಕೂಡಲೆ ಜಿಲ್ಲಾ ಹಾಗೂ ತಾಲ್ಲೂಕು ದೂರು ನಿರ್ವಹಣ ಕೋಷಕ್ಕೆ ಮಾಹಿತಿ ನೀಡುವಂತೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಮನವಿ ಮಾಡಿದ್ದಾರೆ.
          ಮತದಾರರ ಹಕ್ಕನ್ನು ಚಲಾಯಿಸಲು ಯಾರೇ ವ್ಯಕ್ತಿಯ ಮನವೊಲಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯ  ಅವಧಿಯಲ್ಲಿ ಹಣ ಅಥವಾ ವಸ್ತು ರೂಪದಲ್ಲಿ ಯಾವುದೇ ಲಂಚವನ್ನು ಕೊಡುವ ಅಥವಾ ತೆಗೆದುಕೊಳ್ಳುವ ಯಾರೇ ವ್ಯಕ್ತಿಯು ಭಾರತ ದಂಡ ಸಂಹಿತೆಯ 171ಬಿ ಪ್ರಕರಣದ ಮೇರೆಗೆ ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆಯಿಂದ ಅಥವಾ ಜುಲ್ಮಾನೆಯಿಂದ ಅಥವಾ ಅವೆರಡರಿಂದಲೂ ದಂಡಿತರಾಗಲಿದ್ದಾರೆ.  ಅಲ್ಲದೆ, ಯಾರೇ ಅಭ್ಯರ್ಥಿಗೆ ಅಥವಾ ಮತದಾರನಿಗೆ ಅಥವಾ ಯಾರೇ ಇತರ ವ್ಯಕ್ತಿಗೆ ಯಾವುದೇ ರೀತಿಯಲ್ಲಿ ಗಾಯಪಡಿಸಿ ಬೆದರಿಕೆಯೊಡ್ಡುವ ಯಾರೇ ವ್ಯಕ್ತಿಯು ಭಾರತ ದಂಡ ಸಂಹಿತೆಯ 171ಸಿ ಪ್ರಕರಣದ ಮೇರೆಗೆ ಒಂದು ವರ್ಷದವರೆಗೆ ವಿಸ್ತರಿಸಬಹುದಾದ ಅವಧಿಯ ಕಾರಾಗೃಹ ಶಿಕ್ಷೆಗೆ ಅಥವಾ ಜುಲ್ಮಾನೆಗೆ ಅಥವಾ ಅವೆರಡರಿಂದಲೂ ದಂಡನೆಗೆ ಗುರಿಯಾಗಲಿದ್ದಾರೆ.
ಲಂಚವನ್ನು ಕೊಡುವವರು ಅಥವಾ ತೆಗೆದುಕೊಳ್ಳುವವರು ವಿರುದ್ಧವೂ ಪ್ರಕರಣವನ್ನು ದಾಖಲು ಮಾಡುವುದಕ್ಕಾಗಿ ಮತ್ತು ಮತದಾರರಲ್ಲಿ ಹೆದರಿಕೆ ಭೀತಿಯನ್ನುಂಟುಮಾಡುವುದರಲ್ಲಿ ನಿರತರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಕ್ಷಿಪ್ರ ಸಂಚಾರಿ ದಳಗಳನ್ನು ರಚಿಸಲಾಗಿದೆ.  ಯಾವುದೇ ಲಂಚ ಸ್ವೀಕರಿಸುವ ಹಾಗೂ ಯಾರೇ ಲಂಚವನ್ನು ನೀಡಲು ಬಂದರೆ ಅಥವಾ ಲಂಚ ನೀಡುತ್ತಿರುವ ಬಗ್ಗೆ ತಿಳಿದು ಬಂದರೆ ಮತದಾರರಿಗೆ ಬೆದರಿಕೆಯೊಡ್ಡುತ್ತಿರುವುದು, ಭೀತಿ ಹುಟ್ಟಿಸುತ್ತಿರುವ ಪ್ರಸಂಗಗಳ ಬಗ್ಗೆ ತಿಳಿದು ಬಂದರೆ,  ದೂರುಗಳನ್ನು ಸ್ವೀಕರಿಸಲು ಸ್ಥಾಪಿಸಲಾಗಿರುವ 24*7 ಅವಧಿಯೂ ಕಾರ್ಯನಿರ್ವಹಿಸುವ  ಜಿಲ್ಲೆಯ ದೂರು ನಿರ್ವಹಣಾ ಕೋಶ ಮತ್ತು ತಾಲ್ಲೂಕು ದೂರು ನಿರ್ವಹಣಾ ಕೋಶಕ್ಕೆ, ಮಾಹಿತಿ ನೀಡಬೇಕು
ದೂರು ಸಲ್ಲಿಕೆಗಾಗಿ ಜಿಲ್ಲಾ ದೂರು ನಿರ್ವಹಣಾ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ಚಾಮರಾಜನಗರ, ಶುಲ್ಕ ರಹಿತ ದೂರವಾಣಿ ಸಂಖ್ಯೆ:1800 425 0133, ತಾಲ್ಲೂಕು ದೂರು ನಿರ್ವಹಣಾ ಕೋಶ, ತಾಲ್ಲೂಕು ಕಚೇರಿ ಚಾಮರಾಜನಗರ, ಶುಲ್ಕ ರಹಿತ ದೂರವಾಣಿ ಸಂಖ್ಯೆ:1800 4256 190, 5)ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ:08226-223220, ಸಂಪರ್ಕಿಸುವಂತೆ  ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ, ಕಲಘಟಗಿ ಅಶೋಕ ಭೀಮಣ್ಣ  ಹಾಗೂ ಸಹಾಯಕ ಚುನಾವಣಾ ಅಧಿಕಾರಿ, ಟಿ. ರಮೇಶ್ ಬಾಬು ಪ್ರಕಟಣೆಯಲ್ಲಿ ಕೋರಿದ್ದಾರೆ.

ಏಪ್ರಿಲ್ 24ರಂದು ನಗರದಲ್ಲಿ ಡಾ.ರಾಜ್‍ಕುಮಾರ್ ಜನ್ಮ ದಿನಾಚರಣೆ ಕಾರ್ಯಕ್ರಮ

ಚಾಮರಾಜನಗರ, ಏ. 22-  ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ  ಕರ್ನಾಟಕ ರತ್ನ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕøತರಾದ ಮೇರು ನಟ ಡಾ.ರಾಜ್‍ಕುಮಾರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್ 24ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದರ್ ಕುಮಾರ್ ಮೀನಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.  ಹೆಸರಾಂತ ಚ¯ನಚಿತ್ರ ಸಾಹಿತಿ ಬಿ.ಎ.ಮಧು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. 
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9 ಗಂಟೆಗೆ ಈಶ್ವರಿ ಸ್ಕೂಲ್ ಅಫ್ ಮ್ಯೂಸಿಕ್ ಅವರಿಂದ ಡಾ.ರಾಜ್ ಕುಮಾರ್ ಅಭಿನಯದ ಸದಭಿರುಚಿ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 


ನಗರದಲ್ಲಿ ಅರ್ಥಪೂರ್ಣವಾಗಿ ನಡೆದ  ಭಗೀರಥ ಜಯಂತಿ 

ಚಾಮರಾಜನಗರ, ಏ. 21 -  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಭಗೀರಥ ಜಯಂತಿಯನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. 
ನಗರದ  ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಡಾ.ಕೆ.ಹರೀಶ್ ಕುಮಾರ್ ಅವರು ಭಗೀರಥರ ನಿಷ್ಠೆ, ಛಲ, ಸಾಧನೆಯನ್ನ ಪ್ರತಿಯೊಬ್ಬರೂ ಆದರ್ಶವಾಗಿಟ್ಟುಕೊಂಡು ಅನುಸರಿಸಬೇಕು.  ಭಗೀರಥರ ಪ್ರಯತ್ನ ಸಾಧನೆಯನ್ನ ಇಂದಿಗೂ ಸ್ಮರಿಸಿಕೊಳ್ಳಲಾಗುತ್ತಿದೆ ಎಂದರು. 
ಭಗೀರಥರ ಕುರಿತ ವಿಚಾರಗಳನ್ನು ತಿಳಿದುಕೊಳ್ಳಬೇಕಿದೆ.  ಪೋಷಕರು ಗುರುಗಳ ಆಕಾಂಕ್ಷೆಯನ್ನು ಶ್ರದ್ಧೆಯಿಟ್ಟು ನೆರವೇರಿಸಲು ಮುಂದಾಗಬೇಕಿದೆ.  ಎಂದು ಹರೀಶ್ ಕುಮಾರ್ ಸಲಹೆ ಮಾಡಿದರು. 
ಮಹಾಪುರುಷರ ದಾರ್ಶನಿಕರ, ಮಹಾತ್ಮರ ಉನ್ನತ ಧ್ಯೇಯ ಮೌಲ್ಯಗಳನ್ನು ಎಲ್ಲರಿಗೂ ತಿಳಿಸುವ ಹಾಗೂ ಪಸರಿಸುವ ಆಶಯದೊಂದಿಗೆ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗುತ್ತಿದೆ ಎಂದು ಹರೀಶ್ ಕುಮಾರ್ ಅವರು ತಿಳಿಸಿದರು. 
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಹಾಜರಿದ್ದರು. 











ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಸಾಮಾನ್ಯ ವೀಕ್ಷಕರು, ಜಿಲ್ಲಾ ಪೊಲೀಸ್ ವೀಕ್ಷಕರ ನೇಮಕ (25-04-2018)


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018

49 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ: 4 ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ

ಚಾಮರಾಜನಗರ, ಏ. 25:-  ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದ್ದ 53 ಅಭ್ಯರ್ಥಿಗಳ ಪೈಕಿ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿದ್ದು ಉಳಿದ 49 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿವೆ. 

ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.  ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಹೆಚ್.ಎಂ.ಮಾದೇಶ್ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ. ಉಳಿದಂತೆ 15 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದು ಅವರ ವಿವರ ಇಂತಿದೆ ಸಿ.ಪುಟ್ಟರಂಗಶೆಟ್ಟಿ-ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಕೆ.ಆರ್.ಮಲ್ಲಿಕಾರ್ಜುನಪ್ಪ-ಭಾರತೀಯ ಜನತಾ ಪಾರ್ಟಿ, ಎ.ಎಂ.ಮಲ್ಲಿಕಾರ್ಜುನ ಸ್ವಾಮಿ-ಬಹುಜನ ಸಮಾಜ ಪಾರ್ಟಿ, ಎಸ್.ಗಣೇಶ್- ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾ ಪಾರ್ಟಿ, ಡಿ.ನಾಗಸುಂದರ-ಭಾರತೀಯ ರಿಪಬ್ಲಿಕನ್ ಪಕ್ಷ, ನಾರಾಯಣ ಸ್ವಾಮಿ.ಜೆ-ಸಾಮಾನ್ಯ ಜನತಾ ಪಾರ್ಟಿ(ಲೋಕ ತಾಂತ್ರಿಕ್), ವಾಟಾಳ್ ನಾಗರಾಜ್-ಕನ್ನಡ ಚಳವಳಿ ವಾಟಾಳ್ ಪಕ್ಷ, ಶ್ರೀಕಂಠಸ್ವಾಮಿ-ಶಿವಸೇನ, ಎಂ.ಆರ್ ಸರಸ್ವತಿ-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ಎಂ.ಚಿನ್ನಸ್ವಾಮಿ-ಪಕ್ಷೇತರ, ಪ್ರಸನ್ನ ಕುಮಾರ್.ಬಿ- ಪಕ್ಷೇತರ, ಎಂ.ಎಸ್.ಮಲ್ಲಿಕಾರ್ಜುನ್-ಪಕ್ಷೇತರ, ರಂಗಸ್ವಾಮಿ-ಪಕ್ಷೇತರ, ಸುರೇಶ.ಬಿ.ಎನ್-ಪಕ್ಷೇತರ, ಎಂ.ಹೊನ್ನೂರಯ್ಯ-ಪಕ್ಷೇತರ. 

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.  ಈ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿ ಬಿ.ನಿಂಗರಾಜು ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ.  ಉಳಿದಂತೆ 8 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದ್ದು ಅವರ ವಿವರ ಇಂತಿದೆ. ಎ.ಆರ್.ಕೃಷ್ಣಮೂರ್ತಿ-ಭಾರತೀಂiÀi ರಾಷ್ಟ್ರೀಂiÀi ಕಾಂಗ್ರೆಸ್, ಜಿ.ಎನ್ ನಂಜುಂಡಸ್ವಾಮಿ-ಭಾರತೀಯ ಜನತಾ ಪಕ್ಷ, ಎನ್.ಮಹೇಶ್-ಬಹುಜನ ಸಮಾಜ ಪಕ್ಷ, ಚಿಕ್ಕಸಾವಕ-ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಅ.), ನಿಂಗರಾಜ್.ಜಿ-ರಿಪಬ್ಲಿಕನ್ ಸೇನೆ, ಲಕ್ಷ್ಮಿಜಯಶಂಕರ-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ನಾಗರತ್ನ ಎಂ-ಪಕ್ಷೇತರ, ಎಂ.ರಾಜೇಶ್-ಪಕ್ಷೇತರ.

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.  ಈ ಪೈಕಿ ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಎನ್.ಡಿ.ಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಂ.ಮನಸ್ ಎಂಬುವರು ಸಲ್ಲಿಸಿದ್ದ ನಾಮಪತ್ರ ತಿರಸ್ಕøತಗೊಂಡಿದೆ.  ಉಳಿದಂತೆ 9 ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರ ಕ್ರಮಬದ್ಧವಾಗಿದ್ದು ಅವರ ವಿವರ ಇಂತಿದೆ.  ಎಸ್.ಗುರುಪ್ರಸಾದ್-ಬಹುಜನ ಸಮಾಜ ಪಾರ್ಟಿ, ಸಿ.ಎಸ್.ನಿರಂಜನ್ ಕುಮಾರ್-ಭಾರತೀಯ ಜನತಾ ಪಾರ್ಟಿ, ಎಂ.ಸಿ.ಮೋಹನ್ ಕುಮಾರಿ ಉರುಫ್ ಗೀತಾ-ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಸಿ.ಜೆ ಕಾಂತರಾಜ-ಪ್ರಜಾ ಪರಿವರ್ತನ ಪಾರ್ಟಿ, ಎ.ಜಿ.ರಾಮಚಂದ್ರರಾವ್-ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ದುಂಡಯ್ಯ-ಪಕ್ಷೇತರ, ಮಹೇಶ.ಜಿ-ಪಕ್ಷೇತರ, ಬಿ.ಸಿ.ಶೇಖರರಾಜು-ಪಕ್ಷೇತರ, ಬಿ.ಸಿದ್ದಯ್ಯ-ಪಕ್ಷೇತರ.

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟು 17 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಈ ಎಲ್ಲರ ನಾಮಪತ್ರಗಳು ಕ್ರಮಬದ್ಧವಾಗಿದ್ದು ವಿವರ ಇಂತಿದೆ.  ಆರ್.ನರೇಂದ್ರ-ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಪ್ರೀತನ್ ಕೆ.ಎನ್.-ಭಾರತೀಯ ಜನತಾ ಪಕ್ಷ, ಎಂ.ಆರ್.ಮಂಜುನಾಥ್-ಜನತಾ ದಳ(ಜಾತ್ಯಾತೀತ), ಎಸ್.ಗಂಗಾಧರ-ಲೋಕ್ ಆವಾಜ್ ದಳ್, ಪ್ರದೀಪ್ ಕುಮಾರ್ ಎಂ.-ಆಲ್ ಇಂಡಿಯ ಮಹಿಳಾ ಎಂಪವರ್‍ಮೆಂಟ್ ಪಾರ್ಟಿ, ಬಿ.ಭಾನುಪ್ರಕಾಶ್-ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ, ಆರ್.ಪಿ.ವಿಷ್ಣುಕುಮಾರ್-ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಜಗಮ್, ಡಿ.ಶ್ರೀಕಂಠಸ್ವಾಮಿ-ಸ್ವರಾಜ್ ಇಂಡಿಯಾ, ಜೆ.ಜಯಪ್ರಕಾಶ್- ಪಕ್ಷೇತರ, ಜಾನ್ ಡಾನ್ ಬೋಸ್ಕೋ.ಕೆ-ಪಕ್ಷೇತರ, ಕೆ.ಎಸ್.ಪರಿಮಳ ನಾಗಪ್ಪ-ಪಕ್ಷೇತರ, ಮಹೇಶ-ಪಕ್ಷೇತರ, ಆರ್.ಮಹೇಶ-ಪಕ್ಷೇತರ, ಸಿದ್ದಪ್ಪ.ಆರ್-ಪಕ್ಷೇತರ, ಕೆ.ಸಿದ್ಧರಾಜು-ಪಕ್ಷೇತರ, ಸೆಲ್ವರಾಜ್.ಎಸ್-ಪಕ್ಷೇತರ, ಜ್ಞಾನಪ್ರಕಾಶ್.ಜೆ-ಪಕ್ಷೇತರ, 

ಒಟ್ಟಾರೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರÀಗಳಿಂದ ಒಟ್ಟು 53 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು ಈ ಪೈಕಿ ನಾಲ್ವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕøತಗೊಂಡಿದ್ದು ಉಳಿದ 49 ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದ್ದಾರೆ. 


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಸಾಮಾನ್ಯ ವೀಕ್ಷಕರು, ಜಿಲ್ಲಾ ಪೊಲೀಸ್ ವೀಕ್ಷಕರ ನೇಮಕ

ಚಾಮರಾಜನಗರ, ಏ. 25-  ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಸಾಮಾಣ್ಯ ವೀಕ್ಷಕರು ಹಾಗೂ ಜಿಲ್ಲೆಗೆ ಓರ್ವ ಪೊಲೀಸ್ ವೀಕ್ಷಕರನ್ನು ಭಾರತ ಚುನಾವಣಾ ಆಯೋಗವು ನೇಮಕ ಮಾಡಿದೆ.  
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ವಜೀರ್ ಸಿಂಗ್ ಗೋಯಟ್ ಅವರು ನೇಮಕವಾಗಿದ್ದು, ಇವರು ಮೊಬೈಲ್ ಸಂಖ್ಯೆ:9480580400 ಆಗಿದೆ.  ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಲಕ್ಷ್ಮಿನಾರಾಯಣ ಸೋನಿಯವರು ನೇಮಕವಾಗಿದ್ದು, ಇವರ ಮೊಬೈಲ್ ಸಂಖ್ಯೆ:9483287292 ಆಗಿದೆ.  ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಮನೋಜ್ ಕುಮಾರ್ ಅವರು ನೇಮಕವಾಗಿದ್ದು, ಇವರ ಮೊಬೈಲ್ ಸಂಖ್ಯೆ:9483647292 ಆಗಿದೆ.  ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಡಾ.ಅನಿಲ್ ಕುಮಾರ್ ಸಿಂಗ್ ಅವರು ನೇಮಕವಾಗಿದ್ದು ಇವರ ಮೊಬೈಲ್ ಸಂಖ್ಯೆ: 9483747292 ಆಗಿದೆ.  ಜಿಲ್ಲಾ ಪೊಲೀಸ್ ವೀಕ್ಷಕರಾಗಿ ಡಾ.ರವೀಂದ್ರ ಶಿಶ್ವೆ ಅವರು ನೇಮಕವಾಗಿದ್ದು, ಇವರ ಮೊಬೈಲ್ ಸಂಖ್ಯೆ:08082115566 ಆಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆ: ಕೊಳ್ಳೇಗಾಲ ವೀಕ್ಷಕರು 

             ಚಾಮರಾಜನಗರ, ಏ. 25 -  ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ಲಕ್ಮಿನಾರಾಯಣ್ ಸೋನಿ ಅವರು ನೇಮಕವಾಗಿದ್ದು, ಕ್ಷೇತ್ರಕ್ಕೆ ಆಗಮಿಸಿದ್ದಾರೆ.
           ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೂರುಗಳು ಹಾಗೂ ಇತರೆ ಚುನಾವಣೆ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9483287292 ಸಂಪರ್ಕಿಸಬಹುದಾಗಿದೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಬಿ.ಫೌಜಿಯಾ ತರನುಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 26ರಂದು ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಜಾಥಾ

ಚಾಮರಾಜನಗರ, ಏ. 25 - ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ನಡೆಸಲಾಗುತ್ತಿದ್ದು, ಇದರ ಅಂಗನವಾಗಿ ಏಪ್ರಿಲ್ 26ರಂದು ನಗರದಲ್ಲಿ ಜಾಥಾ ಏರ್ಪಡಿಸಲಾಗಿದೆ.
ಏಪ್ರಿಲ್ 26ರಂದು ಬೆಳಗ್ಗೆ 10 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯ ಬಳಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ.ನಂದೀಶ್ ಅವರು ಜಾಥಾಗೆ ಚಾಲನೆ ನೀಡುವರು. ನಂತರ ಜಾಥಾವು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಾಗಲಿದೆ.
ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಸಂಚಾರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

. ಏ. 27ರಂದು ಮಲೆ ಮಹದೇಶ್ವರ ದೇವಾಲಯದ ಗೋಲಕ ಹಣ ಎಣಿಕೆ 

ಚಾಮರಾಜನಗರ, ಏ. 25 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲೂಕಿ£ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯ ಏಪ್ರಿಲ್ 27ರಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Saturday, 21 April 2018

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ಐದು ನಾಮಪತ್ರ ಸಲ್ಲಿಕೆ ಮಾನವ ಸರಪಳಿ ಮೂಲಕ ಮತದಾನದ ಮಹತ್ವ ಸಾರಿದ ಮಹಿಳಾ ಸಂಘದ ಸದಸ್ಯರು (21-04-2018)

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018, ಐದು ನಾಮಪತ್ರ ಸಲ್ಲಿಕೆ 

ಚಾಮರಾಜನಗರ, ಏ. 21 :- ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಲ್ಕನೇ ದಿನವಾದ ಇಂದು ಜಿಲ್ಲೆಯಲ್ಲಿ  ಐದು ನಾಮಪತ್ರ ಸಲ್ಲಿಕೆಯಾಗಿದೆ.  
ಹನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಗಳಾಗಿ ಜಾನ್ ಡಾನ್ ಬೋಸ್ಕೋ ಕೆ., ಬಿ.ಭಾನುಪ್ರಕಾಶ್ ಎಂಬುವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಎ.ಆರ್. ಕೃಷ್ಣಮೂರ್ತಿ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್.ಜಿ ಎಂಬುವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಒಟ್ಟಾರೆ ಇಂದು ನಾಲ್ವರು ಅಭ್ಯರ್ಥಿಗಳಿಂದ ಒಟ್ಟು ಐದು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು  ತಿಳಿಸಿದ್ದಾರೆ.

ಮಾನವ ಸರಪಳಿ ಮೂಲಕ ಮತದಾನದ ಮಹತ್ವ ಸಾರಿದ ಮಹಿಳಾ ಸಂಘದ ಸದಸ್ಯರು 

ಚಾಮರಾಜನಗರ ಏ. 21- ಮತದಾನದ ಪ್ರಾಮುಖ್ಯತೆ ಸಂದೇಶ ಸಾರುವ ಮಹತ್ತರ ಉದ್ದೇಶದಿಂದ ಮಹಿಳಾ ಸ್ತ್ರೀ ಶಕ್ತಿ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಬಲೂನು ಹಿಡಿದು ಮಾನವ ಸರಪಳಿ ರಚಿಸುವ ಮೂಲಕ ಇಂದು ನಗರದಲ್ಲಿ ಗಮನ ಸೆಳೆದರು.
  ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮತದಾನ ಜಾಗ್ರತಿ ಮೂಡಿಸುವ ಬಲೂನುಗಳೊಂದಿಗೆ ಮಹಿಳೆಯರು ಬೃಹತ್ ಮಾನವ ಸರಪಳಿ ರಚಿಸಿದರು. ಪ್ರತಿಯೊಬ್ಬರು ಮತ ಚಲಾವಣೆಯಲ್ಲಿ ಪಾಲ್ಗೊಳ್ಳಬೇಕೆಂಬ ಸಂದೇಶಗಳು ಪ್ರತಿದ್ವನಿಸಿದವು. ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ. ಹರೀಶ್‍ಕುಮಾರ್ ಅವರು ಮತದಾನದ ಪ್ರತಿಜ್ಞಾವಿದಿ ಬೋಧಿಸಿದರು.
ಬಳಿಕ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಮಹಿಳಾ ಸದಸ್ಯರು ಪ್ರಮುಖ ಬೀದಿಗಳಲ್ಲಿ ಮತದಾನ ಅರಿವು ಜಾಥಾ ನಡೆಸಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಮಾವೇಶಗೊಂಡರು.
 ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಕೆ. ಹರೀಶ್‍ಕುಮಾರ್ ಅವರು ಪ್ರಜಾಪ್ರಭುತ್ವ ಬಲವರ್ಧನೆಗಾಗಿ ಪ್ರತಿಯೊಬ್ಬರೂ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಮತ ಚಲಾವಣೆ ಸಂವಿಧಾನಬದ್ಧ ಹಕ್ಕು. 18 ವರ್ಷ ತುಂಬಿದ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕು. ಯಾವುದೇ ಹಣ, ಅಮಿಷಗಳಿಗೆ ಒಳಗಾಗದೆ ಸ್ವಯಂ ಪ್ರೇರಣೆಯಿಂದ ಮೇ. 12ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಕೈಜೋಡಿಸಬೇಕು ಎಂದರು.
ಮಹಿಳೆಯರು ಕೌಟುಂಬಿಕ ಜವಾಬ್ದಾರಿ ಜತೆಗೆ ಸಾಮಾಜಿಕ, ಅರ್ಥಿಕ ಹಾಗೂ ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ರಾಜಕೀಯದೆಡೆಗೆ ಅಸಕ್ತಿ ಹೊಂದಿ ಹೆಚ್ಚಿನ ತಿಳಿವಳಿಕೆ ಪಡೆಯುತ್ತಿದ್ದಾರೆ. ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ನೀಡಲಾಗಿದೆ. ಇದರ ಸದುಪಯೋಗವಾಗಬೇಕು ಎಂದರು.
ಮತದಾನದಿಂದ ಯಾರೂ ಸಹ ವಂಚಿತರಾಗದೆ ಎಲ್ಲರೂ ಸಕ್ರಿಯವಾಗಿ  ಪಾಲ್ಗೊಳ್ಳಬೇಕು.  ಚುನಾವಣೆಯಲ್ಲಿ ಮತದಾನದ ಪಾಮುಖ್ಯತೆಯನ್ನು ಅರಿಯಬೇಕು. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಮಹಿಳೆಯರು ಪ್ರಬುದ್ಧತೆ ತೋರಬೇಕು. ಮತ ಚಲಾಯಿಸುವಲ್ಲಿ ಯಾವುದೇ ಗೊಂದಲಗಳಿರಬಾರದು. ವಿಕಲಚೇತನರು, ಅಲ್ಪಸಂಖ್ಯಾತ ಮಹಿಳೆಯರಿಗೂ ಸಹ ಮತದಾನ ಪ್ರಕ್ರಿಯೆಯಲ್ಲಿ ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಹರೀಶ್ ಕುಮಾರ್ ಅವರು ತಿಳಿಸಿದರು.
ಇದೇ ವೇಳೆ ಮತದಾನದಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರ ಹಾಗೂ ಮತ ಖಾತರಿ ಪಡಿಸುವ ವಿ.ವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಸಹ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ರಮೇಶ್, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಚಲುವಯ್ಯ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಶರವಣ, ಮಹದೇವಯ್ಯ ಹಾಗೂ ಇತರರು ಇದೇ ಸಂದರ್ಭದಲ್ಲಿ ಹಾಜರಿದ್ದರು. 


ಏಪ್ರಿಲ್ 22ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆ

ಚಾಮರಾಜನಗರ, ಏ. 21 -  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಭಗೀರಥ ಜಯಂತಿಯನ್ನು ಏಪ್ರಿಲ್ 22ರಂದು ಬೆಳಗ್ಗೆ 11ಗಂಟೆಗೆ ನಗರದ ಜಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.






ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ಹದಿನೆಂಟು ನಾಮಪತ್ರ ಸಲ್ಲಿಕೆ (20-04-2018)


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಹದಿನೆಂಟು ನಾಮಪತ್ರ ಸಲ್ಲಿಕೆ 

ಚಾಮರಾಜನಗರ, ಏ. 20 - ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ  ಹದಿನೆಂಟು ನಾಮಪತ್ರ ಸಲ್ಲಿಕೆಯಾಗಿದೆ.  
ಹನೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಪ್ರೀತನ್ ಕೆ.ಎನ್, ಒಂದು ನಾಮಪತ್ರ ಸಲ್ಲಿಸಿದ್ದಾರೆ.  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಆರ್. ನರೇಂದ್ರ ಅವರು ನಾಲ್ಕು ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದಿಂದ ಎಂ.ಆರ್. ಮಂಜುನಾಥ್ ಹಾಗೂ ಭಾರತೀಯ ಜನತಾ ಪಕ್ಷದಿಂದ ಕೆ.ಎಸ್. ಪರಿಮಳಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಕೆ.ಆರ್. ಮಲ್ಲಿಕಾರ್ಜುನಪ್ಪ ಅವರು ನಾಲ್ಕು ನಾಮಪತ್ರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸಿ. ಪುಟ್ಟರಂಗಶೆಟ್ಟಿ ಅವರು ಮೂರು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎಂ. ಚಿನ್ನಸ್ವಾಮಿ ಎಂಬುವವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಸಿ.ಎಸ್. ನಿರಂಜನಕುಮಾರ್ ಅವರು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಒಟ್ಟಾರೆ ಇಂದು ಎಂಟು ಅಭ್ಯರ್ಥಿಗಳಿಂದ ಹದಿನೆಂಟು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು  ತಿಳಿಸಿದ್ದಾರೆ.

ನವಜಾತ ಶಿಶುವಿನ ಪೋಷಕರ ಪತ್ತೆಗೆ ಸಹಕರಿಸಿ

ಚಾಮರಾಜನಗರ, ಏ. 20 - ಗುಂಡ್ಲುಪೇಟೆ ಪಟ್ಟಣದ ಕುರುಬರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದ ಚರಂಡಿಯ ಬಳಿ ಏಪ್ರಿಲ್ 14ರಂದು ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಶಿಶುವಿನ ಪೋಷಕರ ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಮಗುವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಮಕ್ಕಳ ವಾರ್ಡ್‍ಗೆ ದಾಖಲಿಸಿದ್ದು ಮಗು ಆರೋಗ್ಯವಾಗಿದೆ.
ಮಗು 6 ದಿನಗಳದ್ದಾಗಿದ್ದು ಕೆಂಪು ಮೈಬಣ್ಣ ಹೊಂದಿದೆ. ಕೋಲು ಮುಖ ಹೊಂದಿದ್ದು ಸುಮಾರು 2 ಕೆಜಿ ತೂಕವಿರುತ್ತದೆ.
ಮಗುವಿನ ಪೋಷಕರು ಇದ್ದಲ್ಲಿ ಅಥವಾ ಈ ಸಂಬಂಧ ಮಾಹಿತಿ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಠಡಿ ಸಂಖ್ಯೆ 127, ಮೊದಲನೇ ಮಹಡಿ, ಜಿಲ್ಲಾಡಳಿತ, ಚಾಮರಾಜನಗರ (ದೂ.ಸಂ. 08226-222354), ಮಕ್ಕಳ ಕಲ್ಯಾಣ ಸಮಿತಿ, ಬಾಲಕಿಯರ ಸರ್ಕಾರಿ ಬಾಲಮಂದಿರ, ಹೌಸಿಂಗ್ ಬೋರ್ಡ್ ಕಾಲೋನಿ, ಚಾಮರಾಜನಗರ ಅಥವಾ ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಏಪ್ರಿಲ್ 22ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆ

ಚಾಮರಾಜನಗರ, ಏ. 20 -  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಭಗೀರಥ ಜಯಂತಿಯನ್ನು ಏಪ್ರಿಲ್ 22ರಂದು ಬೆಳಗ್ಗೆ 11ಗಂಟೆಗೆ ನಗರದ ಜಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
.







Thursday, 19 April 2018

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ನಾಲ್ಕು ನಾಮಪತ್ರ ಸಲ್ಲಿಕೆ,ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ಮತದಾನ ಅವಧಿ ವಿಸ್ತರಣೆ (19-04-2018)

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ನಾಲ್ಕು ನಾಮಪತ್ರ ಸಲ್ಲಿಕೆ 

ಚಾಮರಾಜನಗರ, ಏ. 19 - ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡನೇ ದಿನವಾದ ಇಂದು ಜಿಲ್ಲೆಯಲ್ಲಿ ನಾಲ್ಕು ನಾಮಪತ್ರ ಸಲ್ಲಿಕೆಯಾಗಿದೆ.  
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರಂಗಸ್ವಾಮಿ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಜಿ.ಎನ್. ನಂಜುಂಡಸ್ವಾಮಿ ಅವರು ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಹನೂರು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಒಟ್ಟಾರೆ ನಾಲ್ಕು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು  ತಿಳಿಸಿದ್ದಾರೆ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಮತದಾನ ಅವಧಿ ವಿಸ್ತರಣೆ

ಚಾಮರಾಜನಗರ, ಏ. 19 :- ಚುನಾವಣಾ ಆಯೋಗವು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾನ ಅವಧಿಯನ್ನು ಬೆಳಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ನಿಗದಿ ಮಾಡಿದೆ.
ಭಾರತೀಯ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ 1951ರ ಸೆಕ್ಷನ್ 56ರ ಅಡಿಯಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಮತದಾನ ಅವಧಿಯನ್ನು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಿಗದಿ ಮಾಡಿತ್ತು.  ಆದರೆ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಸಮಯದಲ್ಲಿ ತೀವ್ರವಾದ ಬಿಸಿಲಿನ ತಾಪಮಾನ ಇರುವುದರಿಂದ ಹಾಗೂ ವಿವಿ ಪ್ಯಾಟ್ ಬಳಕೆ ಮಾಡುತ್ತಿರುವುದನ್ನು ಗಮನಕ್ಕೆ ತೆಗೆದುಕೊಂಡು ಎಲ್ಲಾ ಮತದಾರರೂ ತಮ್ಮ ಮತವನ್ನು ಚಲಾಯಿಸಲು ಅನುವಾಗುವಂತೆ ಮತದಾನದ ಅವಧಿ ವಿಸ್ತರಿಸಲು ಪರಿಗಣಿಸಿದೆ.  ಹೀಗಾಗಿ ಚುನಾವಣಾ ಆಯೋಗವು ಅಧಿಸೂಚನೆಗೆ ತಿದ್ದುಪಡಿ ಮಾಡಿ ಮತದಾನದ ಅವಧಿಯನ್ನು ಬೆಳಗ್ಗೆ 7ರಿಂದ ಸಂಜೆ 6ಗಂಟೆಯವರೆಗೆ ನಿಗದಿ ಪಡಿಸಿದೆ. ಈ ಕುರಿತು ಅಧಿಸೂಚನೆ ಪ್ರಕಟಗೊಂಡಿದೆ.


.

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಹೆಚ್ಚುವರಿ ಸ್ಟಾಟಿಕ್ ಸರ್ವೈಲೈನ್ಸ್ ತಂಡ ರಚನೆ

ಚಾಮರಾಜನಗರ, ಏ. 19 - ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನಗೊಳಿಸುವ ಉದ್ದೇಶದಿಂದ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಹೆಚ್ಚುವರಿಯಾಗಿ ಸ್ಟಾಟಿಕ್ ಸರ್ವೈಲೈನ್ಸ್ ಅಧಿಕಾರಿಗಳ ತಂಡ ರಚಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.  

 ಚಾಮರಾಜನಗರ ವಿಧಾನಸಭಾ ಕ್ಷೇತ್ರ: ಮೊದಲನೇ ಪಾಳಿಯಲ್ಲಿ ರಾಚಯ್ಯ, ಉಪ ಪ್ರಾಂಶುಪಾಲರು ಸರ್ಕಾರಿ ಪದವಿ   ಪೂರ್ವ ಬಾಲಕರ ಕಾಲೇಜು (ಮೊ:9739645237) ಎರಡನೇ ಪಾಳಿಯಲ್ಲಿ ಶಿವಕುಮಾರಸ್ವಾಮಿ, ಮುಖ್ಯೋಪಾಧ್ಯಾಯರು, ಸರ್ಕಾರಿ ಪ್ರೌಢ ಶಾಲೆ, ಮಂಗಲ(ಮೊ:9480166536) ಮೂರನೇ ಪಾಳಿಯಲ್ಲಿ ಡಾ. ಬಸವರಾಜು, ಮುಖ್ಯೋಪಾಧ್ಯಾಯರು ಸರ್ಕಾರಿ ಪ್ರೌಢ ಶಾಲೆ, ಜ್ಯೋತಿಗೌಡನ ಪುರ (ಮೊ:9916858506) ಇವರು ತಂಡದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು,  ಇವರೊಂದಿಗೆ ಸಿ.ಆರ್.ಪಿ.ಎಫ್ ತಂಡ ಸಹ ಇರಲಿದೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ: ಮೊದಲನೇ ಪಾಳಿಯಲ್ಲಿ ಮರಿಸ್ವಾಮಿ, ಸಹಾಯಕ ಪ್ರಾಧ್ಯಾಪಕರು, ಜೆ.ಎಸ್.ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜು, ಗುಂಡ್ಲುಪೇಟೆ (ಮೊ:9448750567) ಎರಡನೇ ಪಾಳಿಯಲ್ಲಿ ಮರಿಸ್ವಾಮಪ್ಪ, ಸಹಾಯಕ ಪ್ರಾಧ್ಯಾಪಕರು, ಜೆ.ಎಸ್.ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜು, ಗುಂಡ್ಲುಪೇಟೆ (ಮೊ:8632277129) ಮೂರನೇ ಪಾಳಿಯಲ್ಲಿ ಉಮೇಶ್, ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗುಂಡ್ಲುಪೇಟೆ (ಮೊ:9008804008) ಇವರು ತಂಡದ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಇವರೊಂದಿಗೆ ಎಸ್.ಎಸ್.ಬಿ ತಂಡ ಸಹ ಇರಲಿದೆ.
ಮೊದಲನೇ ಪಾಳಿಯ ಅವಧಿ ಬೆಳಗ್ಗೆ 6ರಿಂದ ಮಧ್ಯಾಹ್ನ 2, ಎರಡನೇ ಪಾಳಿಯ ಅವಧಿ ಮಧ್ಯಾಹ್ನ 2ರಿಂದ ರಾತ್ರಿ 10, ಹಾಗೂ ಮೂರನೇ ಪಾಳಿಯ ಅವಧಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಇರುತ್ತದೆ. 


ಜಿಲ್ಲಾ ವೆಚ್ಚ ಮೇಲ್ವಿಚಾರಣಾ ಸಮಿತಿ ರಚನೆ 

ಚಾಮರಾಜನಗರ, ಏ. 19 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿÀ ಜಿಲ್ಲಾ ವೆಚ್ಚ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ.
ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಎಂ. ರಾಮಮೋಹನ್ ರಾವ್, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಸುಧಾನ್ಶು ಶೇಖರ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ.ಬಿ. ಕಾವೇರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚುನಾವಣಾ ವೆಚ್ಚ ಮೇಲ್ವಿಚಾರಣಾ ಜಿಲ್ಲಾ ನೋಡಲ್ ಅಧಿಕಾರಿ ಸಿ. ಬಸವರಾಜು ಸಮಿತಿಯಲ್ಲಿ ಇರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಪ್ರತಿಷ್ಠಿತ ಶಾಲೆಗಳ 6, 8ನೇ ತರಗತಿಗೆ ಪ.ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಸೇರ್ಪಡೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಏ. 19 :- 2018-19ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6 ಮತ್ತು 8ನೇ ತರಗತಿಗೆ ಸೇರ್ಪಡೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಿ ದಾಖಲು ಮಾಡಲಾಗುತ್ತದೆ.
ವಿದ್ಯಾರ್ಥಿಯು ಪ್ರತಿಭಾವಂತನಾಗಿದ್ದು 5 ಮತ್ತು 7ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು. ಪೋಷಕರ ವಾರ್ಷಿಕ ವರಮಾನ 2 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 214 ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಮೇ 5ರೊಳಗೆ ಅರ್ಜಿ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಆಯ್ಕೆಗೆ ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜವಹರ್ ನವೋದಯ ವಿದ್ಯಾಲಯ : ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಪಡೆಯಲು ಸೂಚನೆ

ಚಾಮರಾಜನಗರ, ಏ. 19 :- ಜವಹರ್ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸಾಮಾನ್ಯ ಸೇವಾ ಕೇಂದ್ರದಲ್ಲಿ ಮಾತ್ರ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.
ನೋಂದಣಿ ಸಂಖ್ಯೆಯೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದÀ್ರ ಸಂಪರ್ಕಿಸುವಂತೆ ಜವಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಆರ್.ಡಿ.ಆರ್. ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


.







Wednesday, 18 April 2018

ಬಸವಣ್ಣ ಅವರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ : ಜಿಲ್ಲಾಧಿಕಾರಿ ಕಾವೇರಿ (18-04-2018)


ಬಸವಣ್ಣ ಅವರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ : ಜಿಲ್ಲಾಧಿಕಾರಿ ಕಾವೇರಿ  


ಬಸವಣ್ಣ ಅವರಿಂದ ಪರಿಪೂರ್ಣ ಸಮಾನತೆಯ ಸಮಾಜ ತತ್ವ ಪ್ರತಿಪಾದನೆ : ಜಿಲ್ಲಾಧಿಕಾರಿ ಕಾವೇರಿ
ಚಾಮರಾಜನಗರ ಏ. 18 - ಭಾರತೀಯ ಇತಿಹಾಸದಲ್ಲಿ ಪರಿಪೂರ್ಣ ಸಮಾನತೆಯ ಸಮಾಜ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಭಿಪ್ರಾಯ ಪಟ್ಟರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಹಾನ್ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
12ನೇ ಶತಮಾನದ ಅಂದಿನ ಸಮಾಜ ತಾರತಮ್ಯದಿಂದ ಕೂಡಿತ್ತು. ಶೋಷಿತರು, ದೀನದಲಿತರು ಹಾಗೂ ಮಹಿಳೆಯರು ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲದೆ ತಮ್ಮ ದನಿಯನ್ನೆ ಕಳೆದುಕೊಂಡಿದ್ದರು. ಅಂತಹ ಸಂದರ್ಭದಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾಜದ ಕಟ್ಟಕಡೆಯವರನ್ನು ಒಂದೆಡೆ ಕಲೆಹಾಕಿ ತಮ್ಮ ಸರಳ ವಚನ ಸಾಹಿತ್ಯದ ಮೂಲಕ ಎಲ್ಲರನ್ನು ಜಾಗೃತಗೊಳಿಸಿದರು. ಅ ಮೂಲಕ ಸಮಾನತೆಯ ತತ್ವ ವಿಚಾರಗಳಿಗೆ ಮುನ್ನುಡಿ ಬರೆದ ಬಸವಣ್ಣ ಅವರು ಶ್ರೇಷ್ಠ ಸಮಾಜ ಸುಧಾರಕರಾದರು ಎಂದರು.
ಕಾಯಕವೇ ಕೈಲಾಸ ತತ್ವದಡಿ ಎಲ್ಲರೂ ಸಮಾನರು. ಯಾವುದೇ ಕೆಲಸದಲ್ಲಿ ಮೇಲು-ಕೀಳಿಲ್ಲ ಎಂದು ಸಾರಿದ ಬಸವಣ್ಣ ಅವರು ಸಾಮಾಜಿಕ ಕ್ರಾಂತಿಯ ಹರಿಕಾರರು ಹೌದು. ದೇಶದಲ್ಲಿ ಅನುಭವ ಮಂಟಪದ ಮೂಲಕ ಸಾಮೂಹಿಕ ಶಿಕ್ಷಣಕ್ಕೆ ಚಾಲನೆ ನೀಡಿದವರಲ್ಲಿ ಬಸವಣ್ಣ ಮೊದಲಿಗರು. ವಿದ್ಯೆಯಿಂದ ವಂಚಿರಾದವರಿಗೆ, ಮಹಿಳೆಯರಿಗೆ ಅಲ್ಲಿ ಶಿಕ್ಷಣ ಹಾಗೂ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶ ಮಾಡಿಕೊಟ್ಟು ಸಾಮಾಜಿಕ ಬದಲಾವಣೆಗೆ ಕಾರಣರಾದರು ಎಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ಬಸವಣ್ಣನವರು ತಮ್ಮ ಶ್ರೇಷ್ಠ ಚಿಂತನೆಗಳ ಮೂಲಕ ಶೋಷಿತರು, ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಕಾರಣರಾದರು. ಅವರು ಅಂದು ಸ್ಥಾಪಿಸಿದ ಅನುಭವ ಮಂಟಪದ ಮಾದರಿಯೇ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ. ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಕೊಳ್ಳೇಗಾಲ ಎಂ.ಜಿ.ಎಸ್.ವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎಲ್.ದೊರೆಸ್ವಾಮಿ ಅವರು ಉಪನ್ಯಾಸ ನೀಡಿ ಬಸವಣ್ಣನವರ ಬಾಲ್ಯ ಜೀವನ ಹಾಗೂ ಸಮಾಜ ಸುಧಾರಣೆಯಲ್ಲಿ ಬಸವಣ್ಣನವರ ಪಾತ್ರ ಕುರಿತು ಸುದೀರ್ಘವಾಗಿ ವಿವರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಗುಂಡ್ಲುಪೇಟೆಯ ಸಿದ್ದನಗೌಡ ಮತ್ತು ತಂಡದವರಿಂದ ವಚನಗಾಯನ ಏರ್ಪಡಿಸಲಾಗಿತ್ತು.



Tuesday, 17 April 2018

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ,ಭದ್ರತಾ ಕಾಯ್ಕೆಯಡಿ 36 ಪ್ರಕರಣಗಳು ದಾಖಲು: 7 ಅಬಕಾರಿ ಪ್ರಕರಣ ದಾಖಲು 1790492018)


ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ

ಚಾಮರಾಜನಗರ, ಏ. 17 - ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೊದಲ ದಿನಾವಾದ ಇಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.  
ಚಾಮರಾಜನಗರ ಜಿಲ್ಲೆಯ ಹನೂರು, ಕೊಳ್ಳೇಗಾಲ(ಎಸ್‍ಸಿ), ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ವಿಧಾನಸಭಾ ಕ್ಷೇತ್ರಕ್ಕೆ ವೆಚ್ಚ ವೀಕ್ಷಕರು 

 ಚಾಮರಾಜನಗರ, ಏ. 17:- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ವೆಚ್ಚ ವೀಕ್ಷಕರನ್ನು ನೇಮಕ ಮಾಡಿದೆ. ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸುಧಾನ್ಶು ಶೇಖರ್ ಅವರು ವೆಚ್ಚ ವೀಕ್ಷಕರಾಗಿದ್ದಾರೆ. ಇವರ ಮೊಬೈಲ್ ಸಂಖ್ಯೆ 9480909300 ಆಗಿದೆ. ಚಾಮರಾಜನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ (ಐಬಿ) ದಲ್ಲಿ ವೆಚ್ಚ ವೀಕ್ಷಕರು ವಾಸ್ತವ್ಯ ಹೂಡಿದ್ದು ಸಾರ್ವಜನಿಕರು ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಭೇಟಿ ಮಾಡಿ ಸಂಪರ್ಕಿಸಬಹುದಾಗಿದೆ. ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಗೆ ಎಂ.ರಾಮಮೋಹನ್ ರಾವ್ ಅವರು ವೆಚ್ಚ ವೀಕ್ಷಕರಾಗಿದ್ದಾರೆ. ಇವರ ಮೊಬೈಲ್ ಸಂಖ್ಯೆ: 9480334600 ಆಗಿದೆ. ಚುನಾವಣಾ ವೆಚ್ಚಗಳಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಇವರ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಚಾಮರಾಜನಗರÀದಲ್ಲಿ ಇರುವ ಕಂಟ್ರೋಲ್ ರೂಂ ಶುಲ್ಕ ರಹಿತ ದೂರವಾಣಿ ಸಂಖ್ಯೆ 18004250133 ಹಾಗೂ 08226-226007, ವಾಟ್ಸಾಪ್ ಸಂಖ್ಯೆ 9483237191 ಸಂಪರ್ಕಿಸಿಯೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳನ್ನು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 ಏಪ್ರಿಲ್ 19ರಂದು ಭಗಿರಥ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ 

ಚಾಮರಾಜನಗರ, ಏ. 17- ಜಿಲ್ಲಾಡಳಿತದ ವತಿಯಿಂದ ಭಗಿರಥ ಜಯಂತಿಯನ್ನು ಆಚರಿಸಬೇಕಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡುವ ಬಗ್ಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 19ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಗೆ ಜಿಲ್ಲೆಯ ಎಲ್ಲಾ ಸಮುದಾಯ ಮುಖಂಡರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಆಗಮಿಸಿ ಭಗಿರಥ ಜಯಂತಿ ಆಚರಣೆ ಸಂಬಂಧ ಸಲಹೆ, ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
 

ಭದ್ರತಾ ಕಾಯ್ಕೆಯಡಿ 36 ಪ್ರಕರಣಗಳು ದಾಖಲು: 7 ಅಬಕಾರಿ ಪ್ರಕರಣ ದಾಖಲು

ಚಾಮರಾಜನಗರ, ಏ. 17-  ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಮುಂಜಾಗ್ರತ ಕ್ರಮ ಜರುಗಿಸಿದ್ದು, ಏಪ್ರಿಲ್ 16ರಂದು ಭದ್ರತಾ ಕಾಯ್ದೆಯಡಿ ಒಟ್ಟು 36 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಅಬಕಾರಿ ಕಾಯ್ದೆಯಡಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ 2, ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ 3, ಬೇಗೂರು ಹಾಗೂ ಸಂತೇಮರಹಳ್ಳೆ ಠಾಣೆಯಲ್ಲಿ ತಲಾ 1 ಪ್ರಕರಣ ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿವೆ.      ಒಟ್ಟು 3114 ರೂ. ಮೌಲ್ಯದ 10.98 ಲೀ. ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟು 75 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ಏ. 18ರಂದು ಜಿಲ್ಲಾಡಳಿತದ ವತಿಯಿಂದ ಬಸವ ಜಯಂತಿ ಆಚರಣೆ

ಚಾಮರಾಜನಗರ, ಏ. 17 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮಹಾನ್ ಮಾನವತಾವಾದಿ, ಯುಗಪುರುಷ, ಸಮಾಜ ಸುಧಾರಕರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಸಮಾರಂಭವನ್ನು ಏಪ್ರಿಲ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭ ಉದ್ಘಾಟಿಸುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್  ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.  ಕೊಳ್ಳೇಗಾಲದ ಸರ್ಕಾರಿ ಎಂಜಿಎಸ್‍ವಿ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ಎಲ್. ದೊರೆಸ್ವಾಮಿ ಅವರು ಮುಖ್ಯ ಭಾಷಣ ಮಾಡುವರು.
ಗುಂಡ್ಲುಪೇಟೆ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರಿಂದ ವಚನ ಗಾಯನ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
.

ಪ್ರತಿಷ್ಠಿತ ಶಾಲೆಗಳ 6, 8ನೇ ತರಗತಿಗೆ ಪ.ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳ ಸೇರ್ಪಡೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಏ. 17 - 2018-19ನೇ ಸಾಲಿಗೆ ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6 ಮತ್ತು 8ನೇ ತರಗತಿಗೆ ಸೇರ್ಪಡೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 121 ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದು. ತಡವಾಗಿ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಆಯ್ಕೆಗೆ ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗೆ ಇಲಾಖೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಏ. 17. - ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್ 23 ರಿಂದ 28ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಏಪ್ರಿಲ್ 23ರಂದು ಚಾಮರಾಜನಗರ, 24ರಂದು ಗುಂಡ್ಲುಪೇಟೆ, 25ರಂದು ಕೊಳ್ಳೇಗಾಲ, 26ರಂದು ಹನೂರು ಹಾಗೂ 28ರಂದು ಯಳಂದೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.






Monday, 16 April 2018

ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2018 (16-04-20108)

ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2018


ಚಾಮರಾಜನಗರ ವಿಧಾನಸಭಾ ಕ್ಷೇತ್ರ ಚುನಾವಣೆ : ಕಚೇರಿ ಭೇಟಿಗೆ ಸಾರ್ವಜನಿಕರಿಗೆ ಸಮಯ ನಿಗದಿ
ಚಾಮರಾಜನಗರ ಏ. 16 - ಚಾಮರಾಜನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ 17ರಿಂದ 24ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚಾಮರಾಜನಗರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ.
ಈ ಹಿನ್ನಲೆಯಲ್ಲಿ ಏ. 17ರಿಂದ 24ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತಾಲೂಕು ಕಚೇರಿಗೆ ಭೇಟಿ ನೀಡಲು ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಸಂಜೆ 4 ಗಂಟೆಯ ನಂತರ ಸಾರ್ವಜನಿಕರು ಕಚೇರಿಗೆ ಭೇಟಿ ನೀಡಬಹುದೆಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಟಿ. ರಮೇಶ್‍ಬಾಬು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಏ. 17ರಂದು ಮತದಾನ ಜಾಗೃತಿ ಜಾಥಾ

ಚಾಮರಾಜನಗರ, ಏ. 16 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮತದಾನ ಕುರಿತು ಜಾಗೃತಿ ಜಾಥಾವು ಏಪ್ರಿಲ್ 17ರಂದು ಬೆಳಿಗ್ಗೆ 10.30 ಗಂಟೆಗೆ  ಚಾಮರಾಜೇಶ್ವರ ದೇವಸ್ಥಾನದ ಬಳಿ ಹೊರಡಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು, ಪದವಿಪೂರ್ವ ಕಾಲೇಜು ಉಪನ್ಯಾಸಕರು ಜಾಥಾದಲ್ಲಿ ಭಾಗವಹಿಸುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಡಾ. ಕೆ. ಹರೀಶ್ ಕುಮಾರ್  ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ವಿಧಾನ ಸಭಾ ಚುನಾವಣೆ-2018 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಹಾಗೂ ದಾಳಿ ಮಾಡಿ ಪ್ರಕರಣಗಳನ್ನು ದಾಖಲಿಸಿರುವ ಬಗ್ಗೆ.


         ವಿಧಾನ ಸಭಾ ಚುನಾವಣೆ-2018 ರ ಸಂಬಂಧ ಜಿಲ್ಲೆಯಲ್ಲಿ ದಿನಾಂಕಃ 15.04.2018 ರಂದು ಕೆಳಕಂಡಂತೆ ಪೊಲೀಸ್ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮ ಜರುಗಿರುತ್ತದೆ.

ಒಟ್ಟು 20 ಭದ್ರತಾ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿರುತ್ತದೆ.
ಅಬ್ಕಾರಿ ಕಾಯ್ದೆಯಡಿ ಚಾಮರಾಜನಗರ ಪಟ್ಟಣ ಠಾಣೆ – 1 ಮತ್ತು ಚಾಮರಾಜನಗರ ಗ್ರಾಮಾಂತರ ಠಾಣೆ-1 ಒಟ್ಟು 2 ಪ್ರಕರಣಗಳನ್ನು ದಾಖಲಿಸಿ, 827/- ರೂ ಬೆಲೆಯ 2.61 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿರುತ್ತದೆ. ಹಾಗೂ ಆರೋಪಿತರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರ್ಪಡಿಸಿರುತ್ತದೆ.
ಒಟ್ಟು 05 ಜಾಮೀನು ರಹಿತ ವಾರೆಂಟ್‍ಗಳನ್ನು ಕಾರ್ಯಗತಗೊಳಿಸಿರುತ್ತದೆ.

«zsÁ£À¸À¨sÁ ¸ÁªÀðwæPÀ ZÀÄ£ÁªÀuÉ 2018
¨sÀzÀævÁ PÁAiÉÄÌAiÀÄr 20 ¥ÀæPÀgÀtUÀ¼ÀÄ zÁR®Ä: 2 C§PÁj ¥ÀæPÀgÀt zÁR®Ä
ZÁªÀÄgÁd£ÀUÀgÀ, K. 16 (-  «zsÁ£À ¸À¨sÁ ¸ÁªÀðwæPÀ ZÀÄ£ÁªÀuÉ ¸ÀA§AzsÀ ¥Éưøï E¯ÁSÉAiÀÄÄ ªÀÄÄAeÁUÀævÀ PÀæªÀÄ dgÀÄV¹zÀÄÝ, K¦æ¯ï 15gÀAzÀÄ ¨sÀzÀævÁ PÁAiÉÄÝAiÀÄr 20 ¥ÀæPÀgÀtUÀ¼À£ÀÄß zÁR°¹PÉÆArzÉ. 
C§PÁj PÁAiÉÄÝAiÀÄr ZÁªÀÄgÁd£ÀUÀgÀ ¥ÀlÖt oÁuÉAiÀÄ°è ªÀÄvÀÄÛ ZÁªÀÄgÁd£ÀUÀgÀ UÁæªÀiÁAvÀgÀ oÁuÉAiÀÄ°è  vÀ¯Á 1 ¥ÀæPÀgÀt ¸ÉjzÀAvÉ MlÄÖ 2 ¥ÀæPÀgÀtUÀ¼£ÀÄß zÁR°¹PÉÆ¼Àî¯ÁVzÉ. MlÄÖ 827 gÀÆ. ªÀiË®åzÀ 2.61 °Ã. ªÀÄzÀåªÀ£ÀÄß ªÀ±ÀPÉÌ vÉUÉzÀÄPÉÆ¼Àî¯ÁVzÉ.  ¥ÀæPÀgÀtPÉÌ ¸ÀA§A¢ü¹zÀAvÉ DgÉÆÃ¦UÀ¼À£ÀÄß §A¢ü¹ £ÁåAiÀiÁ®AiÀÄPÉÌ ºÁdgÀÄ¥Àr¸À¯ÁVzÉ.
MlÄÖ 5 eÁ«ÄãÀÄ gÀ»vÀ ªÁgÉAmï PÁAiÀÄðUÀvÀUÉÆ½¸À¯ÁVzÉ JAzÀÄ f¯Áè ¥ÉÆ°Ã¸ï C¢üÃPÀëPÀgÀ PÀZÉÃj ¥ÀæPÀluÉ w½¹zÉ. 















Saturday, 14 April 2018

ಅಂಬೇಡ್ಕರ್ ಅವರ ಸಮಾನತೆಯ ಚಿಂತನೆಗಳು, ಸಿದ್ದಾಂತಗಳು ಸಾರ್ವಕಾಲಿಕ: ಜಿಲ್ಲಾಧಿಕಾರಿ ಬಿ.ಬಿ ಕಾವೇರಿ (14-04-2018)




ಅಂಬೇಡ್ಕರ್ ಅವರ ಸಮಾನತೆಯ ಚಿಂತನೆಗಳು, ಸಿದ್ದಾಂತಗಳು ಸಾರ್ವಕಾಲಿಕ: ಜಿಲ್ಲಾಧಿಕಾರಿ ಬಿ.ಬಿ ಕಾವೇರಿ 

ಚಾಮರಾಜನಗರ ಏ. 14 - ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ, ಅದರ್ಶ, ಚಿಂತನೆಗಳು ಹಾಗೂ ಸಿದ್ದಾಂತಗಳು ಸಾರ್ವಕಾಲಿಕವಾಗಿವೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಭಿಪ್ರಾಯ ಪಟ್ಟರು.



ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ, ಭಾರತರತ್ನ, ರಾಷ್ಟ್ರನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರದ್ದು ಪ್ರಬುದ್ಧ ವ್ಯಕ್ತಿತ್ವ. ತಳ ಸಮುದಾಯಗಳ ಹಾಗೂ ದಮನಿತರ ಸ್ಫೂರ್ತಿಯ ಸೆಲೆಯಾಗಿದ್ದ ಅಂಬೇಡ್ಕರ್ ಅವರು ಅಸ್ಪøಶ್ಯತೆ ನಿವಾರಣೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟರು. ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿರದೆ ದೇಶದ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಉತ್ತಮ ಸಂವಿಧಾನ ರಚಿಸಿಕೊಟ್ಟರು. ಸ್ವಾತಂತ್ರ್ಯ ಹೋರಾಟಕ್ಕೂ ಸಹ ಸಕಾರಾತ್ಮಕ ಸಂದೇಶ ನೀಡಿದ್ದ ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಾರ್ವಕಾಲಿಕ ಮೌಲ್ಯ ಪಡೆದಿವೆ ಎಂದರು.
ಸಾಮಾಜಿಕ, ಅರ್ಥಿಕ, ರಾಜಕೀಯ ಹಾಗೂ ತಾತ್ವಿಕ ವಿಚಾರಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅಂಬೇಡ್ಕರ್ ಅವರು ಭಾರತೀಯ ಸಮಾಜವನ್ನು ಸಮಾನತೆಯ ತತ್ವದಲ್ಲಿ ಕಟ್ಟಲು ಪಣತೊಟ್ಟಿದ್ದರು. ಇದನ್ನು ವಿಶ್ವದ ಅನೇಕ ಉನ್ನತ ವಿದ್ಯಾಸಂಸ್ಥೆಗಳು ಗುರುತಿಸಿ ಇಂದಿಗೂ ಗೌರವಿಸುತ್ತಿವೆÉ. ಅಂಬೇಡ್ಕರರ ಜೀವನ, ಹೋರಾಟ, ಚಿಂತನೆ ಹಾಗೂ ಸಿದ್ದಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕಾವೇರಿ ಅವರು ತಿಳಿಸಿದರು.
ಪ್ರಧಾನ ಭಾಷಣ ಮಾಡಿದ ಮೈಸೂರು ಮಹಾರಾಜ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಸಹಕಾರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿ. ಷಣ್ಮುಗಂ ಅವರು ಮಾತನಾಡಿ ಅಂಬೇಡ್ಕರ್ ಅವರು ಸಾಮಾಜಿಕ, ರಾಜಕೀಯ ಹಾಗೂ ಅರ್ಥಿಕ ಕ್ಷೇತ್ರಗಳನ್ನು ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಹಾಗೂ ಭ್ರಾತೃತ್ವ ತತ್ವಗಳ ಆಧಾರದಲ್ಲಿ ಮರು ಸಂಘಟಿಸÀಬೇಕೆಂದು ಪ್ರತಿಪಾದಿಸಿದ್ದರು ಎಂದರು.
ದೇಶದಲ್ಲಿ ಶೇ. 50ರಷ್ಟಿದ್ದ ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದವರು ದೌರ್ಜನ್ಯ, ಶೋಷಣೆಗೊಳಗಗಿದ್ದರು. ಈ ಎಲ್ಲರೂ ಸೇರಿದಂತೆ ಎಲ್ಲ ಸಮುದಾಯಗಳು ಮುಖ್ಯವಾಹಿನಿಗೆ ಬಂದರೆ ಮಾತ್ರ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು. ದೇಶದ ಅಭಿವೃದ್ಧಿಗಾಗಿ ಕೃಷಿ, ಕೈಗಾರಿಕೆ, ಜಲನೀತಿ ಹಾಗೂ ಜನಸಂಖ್ಯಾ ನೀತಿಯನ್ನು ಪ್ರತಿಪಾದಿಸಿದ್ದರು. ವಿವಿಧೋದ್ಧೇಶ ನೀರಾವರಿ ಯೋಜನೆ, ಜಲವಿದ್ಯುತ್ ಯೋಜನೆಗಳಿಗೂ ಅಂಬೇಡ್ಕರ್ ಅವರು ಅಡಿಗಲ್ಲು ಹಾಕಿದ್ದರು ಎಂದರು.
ಅರ್ಥಿಕತೆಯ ಅಭಿವೃದ್ಧಿಗಾಗಿ ದೇಶಕ್ಕೆ ಕೇಂದ್ರ ಬ್ಯಾಂಕಿನ ಅವಶ್ಯವನ್ನು ಅರಿತಿದ್ದ ಅಂಬೇಡ್ಕರ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆಯಲ್ಲೂ ಪ್ರಮುಖ ಪಾತ್ರ ವಹಿಸಿದರು. ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿದ್ದ ಅವರು ಅಂದಿನ ಆಡಳಿತವನ್ನು ದಿಕ್ಕರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಬಯಸಿದ್ದರು. ಅಲ್ಲದೆ ಪ್ರಜಾಸತ್ಯಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸಿ ಪ್ರೌಢ ಮತದಾನ ವ್ಯವಸ್ಥೆಯನ್ನು ಜಾರಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಷಣ್ಮುಗಂ ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವ ಕಂಡ ಶ್ರೇಷ್ಠ ಜ್ಞಾನಿಯಾಗಿದ್ದಾರೆ. ಅಂಬೇಡ್ಕರ್  ಅವರ ವಿಚಾರಧಾರೆ, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಅವರು ಅಂಬೇಡ್ಕರ್ ಅವರು ಬಾಲ್ಯದಲ್ಲಿಯೇ ಸಾಕಷ್ಟು ನೋವು ಅನುಭವಿಸಿದರೂ ಮುಂದೆ ಛಲದಿಂದ ಉನ್ನತ ಅಧ್ಯಯನ ಮಾಡಿದರು.  ಇಂತಹ ಸಾಧನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅವರದ್ದೇ ಹಾದಿಯಲ್ಲಿ ನಡೆಯಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹರದನಹಳ್ಳಿ ನಟರಾಜ್ ಹಾಗೂ ಲತಾಪುಟ್ಟಸ್ವಾಮಿ ಅವರಿಂದ ನಾಡಗೀತೆ, ಹನೂರು ಮೊರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳಿಂದ ಬುದ್ಧ ಗೀತೆ ಹಾಗೂ ರಂಗಜಂಗಮ ಕಲಾತಂಡದ ರಾಮಸಮುದ್ರ ಮಹೇಶ್ ಅವರಿಂದ ಅಂಬೇಡ್ಕರ್ ಜಾಗೃತಿ ಗೀತೆಗಳು ಕಾರ್ಯಕ್ರಮದ ಆರಂಭದಲ್ಲಿ ಗಮನ ಸೆಳೆದವು.
ಅಲ್ಲದೆ, ಸಮಾರಂಭಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು, ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.   


ವಿಧಾನಸಭಾ ಚುನಾವಣೆ – 2018
ಬ್ಯಾಂಕ್, ಶಸ್ತ್ರ ಸಜ್ಜಿತ ಸಿಬ್ಬಂದಿ ಬಂದೂಕುಗಳಿಗೆ ಠೇವಣಿಯಿಂದ ವಿನಾಯಿತಿ

ಚಾಮರಾಜನಗರ, ಏ. 14 -  ಬ್ಯಾಂಕ್‍ನ ಭದ್ರತೆ ಮತ್ತು ಸುರಕ್ಷತೆಯ ದೃಷ್ಠಿಯಿಂದ ಬ್ಯಾಂಕುಗಳಲ್ಲಿರುವ ಶಸ್ತ್ರ, ಬಂದೂಕುಗಳನ್ನು ಹಾಗೂ ಶಸ್ತ್ರ ಸಜ್ಜಿತ ಭದ್ರತಾ ಸಿಬ್ಬಂದಿ (ಆರ್ಮಡ್ ಸೆಕ್ಯೂರಿಟಿ ಗಾರ್ಡ್) ಹೊಂದಿರುವ ಬಂದೂಕುಗಳಿಗೆ ಪೊಲೀಸ್ ಠಾಣೆಯ ಸುಪರ್ದಿನಲ್ಲಿ ಠೇವಣಿ(ಡಿಪಾಸಿಟ್) ಮಾಡುವುದಕ್ಕೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ಆದೇಶ ಹೊರಡಿಸಿದ್ದಾರೆ. 
ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಂದೂಕು ಪರವಾನಗಿ ಹೊಂದಿರುವ ಬಂದೂಕುದಾರರು ಬಂದೂಕು (ಆಯುಧ)ಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಸುಪರ್ದಿನಲ್ಲಿ ಠೇವಣಿ(ಡಿಪಾಸಿಟ್) ಮಾಡಲು ಆದೇಶಿಸಲಾಗಿತ್ತು.  ಸದರಿ ಆದೇಶವನ್ನು ಭಾಗಶಃ ಮಾರ್ಪಾಡು ಮಾಡಿ ಬ್ಯಾಂಕ್‍ನ ಭದ್ರತೆ ಹಾಗೂ ಸುರಕ್ಷತೆ ದೃಷ್ಠಿಯಿಂದ ಬ್ಯಾಂಕುಗಳಲ್ಲಿರುವ ಶಸ್ತ್ರ, ಬಂದೂಕುಗಳು ಹಾಗೂ ಶಸ್ತ್ರ ಸಜ್ಜಿತ ಭದ್ರತಾ ಸಿಬ್ಬಂದಿ (ಆರ್ಮಡ್ ಸೆಕ್ಯೂರಿಟಿ ಗಾರ್ಡ್) ಹೊಂದಿರುವ ಬಂದೂಕುಗಳಿಗೆ ಪೊಲೀಸ್ ಠಾಣೆಯ ಸುಪರ್ದಿನಲ್ಲಿ ಠೇವಣಿ (ಡಿಪಾಸಿಟ್) ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ.
ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಶಸ್ತ್ರ, ಬಂದೂಕು ಪರವಾನಗಿದಾರರು ತಮ್ಮ ಬಳಿ ಇರುವ ಎಲ್ಲಾ ರೀತಿಯಾ ಶಸ್ತ್ರ ಬಂದೂಕುಗಳನ್ನು (ಎಸ್.ಬಿ.ಎಂ.ಎಲ್, ಎಸ್.ಬಿ.ಬಿ.ಎಲ್, ಡಿ.ಬಿ.ಬಿ.ಎಲ್, ಡಿ.ಬಿ.ಎಂ.ಎಲ್, ರಿವಾಲ್ವಾರ್ ಹಾಗೂ ಪಿಸ್ತೂಲ್ ಇತ್ಯಾದಿ ಶಸ್ತ್ರಾಸ್ತ್ರಗಳನ್ನು) ಸಂಬಂಧಿಸಿದ ವ್ಯಾಪ್ತಿ ಪ್ರದೇಶದ ಪೊಲೀಸ್ ಠಾಣೆಯ ಅಧಿಕಾರಿಗಳ ವಶಕ್ಕೆ ಕೂಡಲೇ ಠೇವಣಿ/ಡಿಪಾಸಿಟ್ ಇಡಲು ಆದೇಶಿಸಿದೆ.  ಈ ಆದೇಶವು ಬ್ಯಾಂಕ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಡೆತನದ ಸಂಸ್ಥೆಗಳ ಶಸ್ತ್ರಾಸ್ತ್ರಗಳಿಗೆ ಅನ್ವಹಿಸುವುದಿಲ್ಲ.  ಸದರಿ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಆಮ್ರ್ಸ್ ಆಕ್ಟ್ 1959 ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ಆದೇಶದಲ್ಲಿ  ಎಚ್ಚರಿಸಿದ್ದಾರೆ. 
ವಿಧಾನಸಭಾ ಚುನಾವಣೆ – 2018

ಸ್ಟಾಟಿಕ್ ಸರ್ವೈಲೆನ್ಸ್ ತಂಡಕ್ಕೆ ಪೊಲೀಸ್ ಇಲಾಖೆ ಸಿಬ್ಬಂಧಿ ನಿಯೋಜನೆ

ಚಾಮರಾಜನಗರ, ಏ. 14   ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸ್ಟಾಟಿಕ್ ಸರ್ವೈಲೈನ್ಸ್ ಅಧಿಕಾರಿಗಳ ತಂಡಕ್ಕೆ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಬಿ ಕಾವೇರಿ ಅವರು ಅದೇಶ ಹೊರಡಿಸಿದ್ದಾರೆ. 
ಹನೂರು ವಿಧಾನ ಸಭಾ ಕ್ಷೇತ್ರ ತಂಡ 1:- ಮೊದಲನೇ ಪಾಳಿಗೆ ಶಿವಮೂರ್ತಿ, ಮಲೆ ಮಹದೇಶ್ವರ ಬೆಟ್ಟ ಠಾಣೆ(9964305145), ಲಿಂಗರಾಜು ಡಿ.ಎ.ಆರ್ ಚಾಮರಾಜನಗರ(948185251), ಪ್ರಶಾಂತ್ ಮಲೆ ಮಹದೇಶ್ವರ ಬೆಟ್ಟ ಠಾಣೆ(8152834383) ಎರಡನೇ ಪಾಳಿಗೆ ಶಂಕರ, ರಾಮಾಪುರ ಠಾಣೆ(9986456268), ಶಿವಕುಮಾರ್ ಡಿ.ಎ.ಆರ್ ಚಾಮರಾಜನಗರ(9886588050), ಆನಂದ್ ಕುಮಾರ್ ರಾಮಾಪುರ ಠಾಣೆ(9945839026), ಮೂರನೇ ಪಾಳಿಗೆ ರವಿ, ಹನೂರು ಠಾಣೆ(8151444277), ಕುಮಾರಸ್ವಾಮಿ ಡಿ.ಎ.ಆರ್ ಚಾಮರಾಜನಗರ(9743270801), ಮಂಜುನಾಥ ಹನೂರು ಠಾಣೆ(9980747646) ನೇಮಕವಾಗಿದ್ದಾರೆ. 
ತಂಡ 2:- ಮೊದಲನೇ ಪಾಳಿಗೆ ವೆಂಕಟಾಚಲ, ಕೊಳ್ಳೇಗಾಳ ಪಟ್ಟಣ ಠಾಣೆ(9741930599), ವಿವೇಕಾನಂದ, ಕೊಳ್ಳೇಗಾಲ ಪಟ್ಟಣ ಠಾಣೆ, ಎರಡನೇ ಪಾಳಿಗೆ ಕುಮಾರ, ಕೊಳ್ಳೇಗಾಳ ಪಟ್ಟಣ ಠಾಣೆ(8105423820), ಮಾದೇಶ, ಕೊಳ್ಳೇಗಾಳ ಪಟ್ಟಣ ಠಾಣೆ, ಮೂರನೇ ಪಾಳಿಗೆ ಕೃಷ್ಣಮೂರ್ತಿ ಮತ್ತು ಕುಮಾರ್ ಯಳಂದೂರು ಠಾಣೆ ನೇಮಕವಾಗಿದ್ದಾರೆ.
ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರ ತಂಡ 1:- ಮೊದಲನೇ ಪಾಳಿಗೆ ಶಂಕರಪ್ಪ, ಕೊಳ್ಳೇಗಾಲ ಪಟ್ಟಣ ಠಾಣೆ(9449217452), ವಿ.ಮಾದೇಶ್ ಡಿ.ಎ.ಆರ್ ಚಾಮರಾಜನಗರ(9986601203), ಶಿವಕುಮಾರ್, ಕೊಳ್ಳೇಗಾಳ ಪಟ್ಟಣ ಠಾಣೆ(9008081152), ಎರಡನೇ ಪಾಳಿಗೆ ಇಲಿಯಾಸ್ ಪಾಷಾ, ಯಳಂದೂರು ಠಾಣೆ(9449203272), ಶಿವಾಜಿ ಡಿ.ಎ.ಆರ್ ಚಾಮರಾಜನಗರ(9900719285), ರಾಜೇಶ್ ಯಳಂದೂರು ಠಾಣೆ(8861994932), ಮೂರನೇ ಪಾಳಿಗೆ ಈರಪ್ಪ, ಮಾಂಬಳ್ಳಿ ಠಾಣೆ(9902646826), ನಾಗರಾಜು, ಡಿ.ಎ.ಆರ್ ಚಾಮರಾಜನಗರ (9986757968), ಮಹದೇವಸ್ವಾಮಿ, ಮಾಂಬಳ್ಳಿ ಠಾಣೆ(9916472468) ನೇಮಕವಾಗಿದ್ದಾರೆ.
ತಂಡ 2:- ಮೊದಲನೇ ಪಾಳಿಯ ಚನ್ನಪ್ಪ, ಮಾಂಬಳ್ಳಿ ಠಾಣೆ(9972836795), ನಾಗರಾಜು, ಕೊಳ್ಳೇಗಾಲ ಪಟ್ಟಣ ಠಾಣೆ, ಎರಡನೇ ಪಾಳಿಗೆ ಕುಮಾರ, ಮಾಂಬಳ್ಳಿ ಠಾಣೆ(9902781761), ಕಿಶೋರ್ ಕುದೇರು ಠಾಣೆ (8296706343), ಮೂರನೇ ಪಾಳಿಗೆ ಸೋಮಣ್ಣ, ಸಂತೇಮರಹಳ್ಳಿ ಠಾಣೆ(8660244006), ಪುಟ್ಟಸ್ವಾಮಿ, ಕುದೇರು ಠಾಣೆ(8151848755) ನೇಮಕವಾಗಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರ ತಂಡ 1:- ಮೊದಲನೇ ಪಾಳಿಗೆ ವಿನಯಕುಮಾರ, ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ(8139918818), ಹರಿಪ್ರಸಾದ್, ಡಿ.ಎ.ಆರ್ ಚಾಮರಾಜನಗರ(9980230928), ಎರಡನೇ ಪಾಳಿಗೆ ಸುರೇಶ್ ಯಾದವ್, ಚಾಮರಾಜನಗರ ಗ್ರಾಮಾಂತರ ಠಾಣೆ(9448025351), ಶಿವಾನಂದಸ್ವಾಮಿ, ಡಿ.ಎ.ಆರ್ ಚಾಮರಾಜನಗರ(9880870986), ಮೂರನೇ ಪಾಳಿಗೆ ಮಹೇಶ, ಚಾಮರಾಜನಗರ ಪೂರ್ವ ಠಾಣೆ(8073254252), ನಾಗರಾಜು ಡಿ.ಎ.ಆರ್ ಚಾಮರಾಜನಗರ(8884902450) ನೇಮಕವಾಗಿದ್ದಾರೆ.
ತಂಡ 2:- ಮೊದಲನೇ ಪಾಳಿಗೆ ಲೋಕೇಶ್, ಚಾಮರಾಜನಗರ ಟೌನ್ ಠಾಣೆ(7019842289), ಎರಡನೇ ಪಾಳಿಗೆ ಎಂ.ಆರ್ ಮಹದೇವ ಸ್ವಾಮಿ, ಸಂತೇಮರಹಳ್ಳಿ ಠಾಣೆ(9945474581), ಮೂರನೇ ಪಾಳಿಗೆ ಶಿವಕುಮಾರಸ್ವಾಮಿ, ಕುದೇರು ಪೊಲೀಸ್ ಠಾಣೆ(9591595728) ನೇಮಕವಾಗಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ತಂಡ 1:- ಮೊದಲನೇ ಪಾಳಿಗೆ ಸುಕೇಶ, ಗುಂಡ್ಲುಪೇಟೆ ಠಾಣೆ(9886360747), ಎರಡನೇ ಪಾಳಿಗೆ ನಾಗೇಂದ್ರ, ಚಾಮರಾಜನಗರ(9964865069), ಮೂರನೇ ಪಾಳಿಗೆ ಸ್ವಾಮಿ ಬೇಗೂರು ಪೊಲೀಸ್ ಠಾಣೆ(9606569436ಮತ್ತು9743380508) ನೇಮಕವಾಗಿದ್ದಾರೆ.
ತಂಡ 2:- ಮೊದಲನೇ ಪಾಳಿಗೆ ಮಹದೇವಶೆಟ್ಟಿ, ಗುಂಡ್ಲುಪೇಟೆ ಪೊಲೀಸ್ ಠಾಣೆ(8550892149), ಮಹದೇವ, ಡಿ.ಎ.ಆರ್ ಚಾಮರಾಜನಗರ(9739092295), ಎರಡನೇ ಪಾಳಿಗೆ ಚಾಮರಾಜು, ತೆರಕಣಾಂಬಿ ಪೊಲೀಸ್ ಠಾಣೆ(8197712335), ನಾಗಣ್ಣ ಜಿ.ಪಿ, ತೆರಕಣಾಂಬಿ ಪೊಲೀಸ್ ಠಾಣೆ(8746929094), ಮೂರನೇ ಪಾಳಿಗೆ ಶಿವಪ್ರಸಾದ್, ಡಿ.ಎ.ಆರ್ ಚಾಮರಾಜನಗರ(9916754930), ಕೆ.ಜಿ ಕೃಷ್ಣಮೂರ್ತಿ, ಗುಂಡ್ಲುಪೇಟೆ ಪೊಲೀಸ್ ಠಾಣೆ(7022925536) ನೇಮಕವಾಗಿದ್ದಾರೆ.


ಎಸ್.ಎಸ್.ಎಲ್.ಸಿ ಪರೀಕ್ಷಾ ಮೌಲ್ಯಮಾಪನ ಕೇಂದ್ರ ಸುತ್ತಲೂ ನಿಷೇದಾಜ್ಞೆ

ಚಾಮರಾಜನಗರ, ಏ. 14  ಚಾಮರಾಜನಗರ ಪಟ್ಟಣದ 6 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮೌಲ್ಯಮಾಪನ ನಡೆಯಲಿರುವ ಹಿನ್ನಲೆಯಲ್ಲಿ ಮೌಲ್ಯಮಾಪನದ ಕೇಂದ್ರದ 200 ಮೀ. ಸುತ್ತಲ ಪ್ರದೇಶದಲ್ಲಿ  ಏಪ್ರಿಲ್ 16 ರಿಂದ 24ರವರೆಗೆ ಬೆಳಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಸಾರ್ವಜನಿಕ ನಿಷೇದಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಗರದ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆ, ಸೆಂಟ್ ಜೋಸೆಫ್ ಪ್ರೌಢಶಾಲೆ, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ಸೆಂಟ್ ಪೌಲ್ ಪ್ರೌಢಶಾಲೆ, ಸಿ.ಆರ್. ಬಾಲರ ಪಟ್ಟಣ ಪ್ರೌಢಶಾಲೆ, ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಮೌಲ್ಯಮಾಪನ ಕೇಂದ್ರಗಳಾಗಿವೆ.
ಪರೀಕ್ಷಾ ಮೌಲ್ಯಮಾಪನ ಕಾರ್ಯವು ನ್ಯಾಯೋಚಿತವಾಗಿ ನಡೆಯಲು, ಮೌಲ್ಯಮಾಪನ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳು ಸಾರ್ವಜನಿಕರು, ಪ್ರಚಾರಕ್ಕಾಗಿ ಬರುವ ಜನಪ್ರತಿನಿಧಿಗಳ ಪ್ರವೇಶವನ್ನು ನಿಷೇದಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ನಿಷೇದಾಜ್ಞೆ ವಿಧಿಸಲಾಗಿದೆ. 
ಈ ಆದೇಶವು ಪರೀಕ್ಷಾ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾದ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ.


Friday, 13 April 2018

ನೂತನ ಜಿ.ಪಂ. ಅಧ್ಯಕ್ಷರಾಗಿ ಶಿವಮ್ಮ ಆಯ್ಕೆ (13-04-2018)

ನೂತನ ಜಿ.ಪಂ. ಅಧ್ಯಕ್ಷರಾಗಿ ಶಿವಮ್ಮ ಆಯ್ಕೆ 

ಚಾಮರಾಜನಗರ, ಏ. 13 -  ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರಸ್ ಪಕ್ಷದ ಆರ್. ಶಿವಮ್ಮ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಶಿವಮ್ಮ ಅವರನ್ನು ಹೊರತುಪಡಿಸಿ ಬೇರೆ ಯಾವ ಸದಸ್ಯರೂ ಸಹ ನಾಮಪತ್ರ ಸಲ್ಲಿಸಿರಲಿಲ್ಲ. ಇಂದು ಚುನಾವಣೆ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ. ಕಳಸದ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.
ಪ್ರಾದೇಶಿಕ ಅಯುಕ್ತರು ಚುನಾವಣೆ ಪ್ರಕ್ರಿಯೆ ನಡೆಸಿದರು. ಶಿವಮ್ಮ ಅವರು ಸಲ್ಲಿಸಿರುವ ನಾಮಪತ್ರ  ಅಂಗೀಕರಿಸಲಾಗಿದೆ. ನಾಮಪತ್ರ ಕ್ರಮಬದ್ಧವಾಗಿದೆ. ಅಂತಿಮವಾಗಿ ಶಿವಮ್ಮ ಅವರು ಅವಿರೋಧವಾಗಿ  ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ. ಕಳಸದ ಅವರು ಘೋಷಿಸಿದರು.
ಅಧ್ಯಕ್ಷರ ಅವಧಿಯು 2021ರ ಏಪ್ರಿಲ್ 29ರವರೆಗೆ ಇರುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಿಸಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪಂಚಾಯತ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.


ಏ. 14ರಂದು ಜಿಲ್ಲಾಡಳಿತದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಚಾಮರಾಜನಗರ, ಏ. 13 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರ ನಾಯಕ ಬಾಬÁ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆ ಸಮಾರಂಭವನ್ನು ಏಪ್ರಿಲ್ 14ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 10.30 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾರಂಭ ಏರ್ಪಡಿಸಲಾಗಿದೆ. 
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭ ಉದ್ಘಾಟಿಸುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್  ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ  ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.  ಮೈಸೂರು ಮಹಾರಾಜ ಕಾಲೇಜು ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ವಿ. ಷಣ್ಮುಗಂ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ. 

ವಿಧಾನಸಭಾ ಚುನಾವಣೆ – 2018
ಭದ್ರತಾ ಕಾಯ್ಕೆಯಡಿ 15 ಪ್ರಕರಣಗಳು ದಾಖಲು: 2 ಅಬಕಾರಿ ಪ್ರಕರಣ ದಾಖಲು

ಚಾಮರಾಜನಗರ, ಏ. 13 ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಮುಂಜಾಗ್ರತ ಕ್ರಮ ಜರುಗಿಸಿದ್ದು, ಏಪ್ರಿಲ್ 12ರಂದು ಭದ್ರತಾ ಕಾಯ್ದೆಯಡಿ 15 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.  
ಅಬಕಾರಿ ಕಾಯ್ದೆಯಡಿ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ 2 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.       ಒಟ್ಟು 1180 ರೂ. ಮೌಲ್ಯದ 3.78 ಲೀ. ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟು 23 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ. 




Thursday, 12 April 2018

ಚಾಮರಾಜನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಕಲ ಸಿದ್ಧತೆ : ಅಶೋಕ್ ಭೀಮಣ್ಣ ಕಲಘಟಗಿ (12-04-2018)


ಚಾಮರಾಜನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಕಲ ಸಿದ್ಧತೆ : ಅಶೋಕ್ ಭೀಮಣ್ಣ ಕಲಘಟಗಿ

ಚಾಮರಾಜನಗರ ಏ. 12 - ಚಾಮರಾಜನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಶೋಕ್ ಭೀಮಣ್ಣ ಕಲಘಟಗಿ ಅವರು ತಿಳಿಸಿದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಸಿದ್ಧತೆ ಕುರಿತು ನಗರದ ತಾಲೂಕು ಕಚೇರಿಯಲ್ಲಿಂದು  ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮತನಾಡಿದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 236 ಮತಗಟ್ಟೆಗಳಿದ್ದು, ಅವುಗಳಲ್ಲಿ 41 ಸೂಕ್ಷ್ಮ, 22 ಅತೀ ಸೂಕ್ಷ್ಮ ಹಾಗೂ 170 ಸಾಮಾನ್ಯ ಮತಗಟ್ಟೆಗಳಿವೆ. ಕ್ಷೇತ್ರದಾದ್ಯಂತ ಪಾರದರ್ಶಕ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಮತ್ತು ಮಾದರಿ ನೀತಿ ಸಂಹಿತೆ ಪಾಲನೆಗಾಗಿ 2 ವಿಡಿಯೋ ಸರ್ವೇಲೆನ್ಸ್, 1 ವಿಡಿಯೋ ವೀವಿಂಗ್, 6 ಫ್ಲೈಯಿಂಗ್ ಸ್ಕ್ವಾಡ್ ಮತ್ತು 6 ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡಗಳನ್ನು ರಚಿಸಲಾಗಿದೆ ಎಂದರು.
ಚುನಾವಣಾ ಅಕ್ರಮಗಳನ್ನು ತಡೆಯಲು 6 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಪುಣಜನೂರು, ಚಿಕ್ಕಹೊಳೆ, ಬಿಸಿಲವಾಡಿ, ಬಂದಿಗೌಡನಹಳ್ಳಿ ಮತ್ತು ಮೂಡಲಹೊಸಹಳ್ಳಿಯಲ್ಲಿ ಅಂತರರಾಜ್ಯ ಹಾಗೂ ಪಣ್ಯದಹುಂಡಿ ಬಳಿ ಅಂತರ್‍ಜಿಲ್ಲಾ ಚೆಕ್ ಪೋಸ್ಟ್ ತೆರೆಯಲಾಗಿದೆ. ಈ ಚೆಕ್‍ಪೋಸ್ಟ್‍ಗಳು ದಿನದ 24 ಗಂಟೆಗಳ ಅವಧಿಯಲ್ಲಿಯೂ ಸಹ ಜಾಗೃತವಾಗಿರಲಿವೆ.  ಅಲ್ಲದೆ, ಚುನಾವಣಾ ಸಂಬಂಧ ದೂರು ಸಲ್ಲಿಸಲು ಸಮಾಧಾನ್ ಮತ್ತು ಅಭ್ಯರ್ಥಿಗಳು ವಾಹನ ಸೇರಿದಂತೆ ಅಗತ್ಯ ಪರವಾನಗಿ ಪಡೆಯಲು ಸುವಿಧ ತಂತ್ರಾಂಶದ ಮೂಲಕ ಅನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಕ್ಷೇತ್ರದಲ್ಲಿ 100834 ಪುರುಷ, 103267 ಮಹಿಳೆಯರು ಹಾಗೂ 16 ತೃತೀಯ ಲಿಂಗಿ ಮತದಾರರಿದ್ದು, ಯಾವೊಬ್ಬ ಮತದಾರರು ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಗೊಂದಲವಿಲ್ಲದೆ ಮತದಾನ ಮಾಡಲು ಅನುಕೂಲವಾಗುವಂತೆ ಭಾವಚಿತ್ರವಿರುವ ಚುನಾವಣಾ ಗುರುತಿನ ಚೀಟಿಯನ್ನು ನೀಡಲಾಗಿದೆ ಎಂದು ಕಲಘಟಗಿ ತಿಳಿಸಿದರು.
ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಟಿ. ರಮೇಶ್‍ಬಾಬು ಅವರು ಮಾತನಾಡಿ ಚುನಾವಣಾ ಸಂಬಂಧ ತೆರೆಯಲಾಗಿರುವ ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ 08226-223220, ವಾಟ್ಸಾಪ್ ಸಂಖ್ಯೆ 8277855831 ಆಗಿದ್ದು, ಯಾವುದೇ ವಿಧದ ಚುನಾವಣಾ ಅಕ್ರಮಗಳು ಕಂಡುಬಂದ ಸಂದರ್ಭದಲ್ಲಿ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದರು.
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಒಂದು ದಿನ ಮುಂಚಿತವಾಗಿ ಕಡ್ಡಾಯವಾಗಿ ಬ್ಯಾಂಕ್‍ನಲ್ಲಿ ಖಾತೆ ತೆರೆಯಬೇಕು. ಅಲ್ಲದೆ ತನ್ನ ಚುನಾವಣಾ ವಹಿವಾಟು, ಖರ್ಚು-ವೆಚ್ಚಗಳನ್ನು ಆ ಖಾತೆಯಿಂದಲೇ ನಿರ್ವಹಿಸಬೇಕು. ವಿದ್ಯುತ್, ನೀರು ಬಿಲ್ಲು ಹಾಗೂ ಇತರೆ ಸರ್ಕಾರಿ ಬಾಕಿಗಳನ್ನು ಉಳಿಸಿಕೊಂಡಿದ್ದಲ್ಲಿ ಎಲ್ಲವನ್ನು ಪಾವತಿಸಿ ನಾಮಪತ್ರದೊಂದಿಗೆ ಬೇಬಾಕಿ(ಎನ್.ಡಿ.ಸಿ) ಪತ್ರವನ್ನು ಸಹ ಸಲ್ಲಿಸಬೇಕಾಗಿದೆ ಎಂದರು.
ಚುನಾವಣಾ ಸ್ಪರ್ಧೆಗಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಠೇವಣಿ ಹಣ 10 ಸಾವಿರ ರೂ. ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ಸಾವಿರ ರೂ. ನಿಗಧಿಯಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು ಮೂಲಜಾತಿ ಪ್ರಮಾಣಪತ್ರವನ್ನು ನಾಮಪತ್ರದೊಂದಿಗೆ ಸಲ್ಲಿಸಬೇಕಾಗಿರುವುದು ಅವಶ್ಯ ಎಂದು ರಮೇಶ್‍ಬಾಬು ಅವರು ಮಾಹಿತಿ ನೀಡಿದರು.

ಪ್ರೋಬೇಷನರಿ ಅಧಿಕಾರಿ ಗೀತಾಹುಡೇದ್, ಚುನಾವಣಾ ವೆಚ್ಚ ಘಟಕದ ದೇವನಾಯ್ಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ವಿಧಾನಸಭಾ ಚುನಾವಣೆ – 2018

ಭದ್ರತಾ ಕಾಯ್ಕೆಯಡಿ 33 ಪ್ರಕರಣಗಳು ದಾಖಲು: 9 ಅಬಕಾರಿ ಪ್ರಕರಣ ದಾಖಲು
ಚಾಮರಾಜನಗರ, ಏ. 12 -  ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಮುಂಜಾಗ್ರತ ಕ್ರಮ ಜರುಗಿಸಿದ್ದು, ಏಪ್ರಿಲ್ 11ರಂದು ಭದ್ರತಾ ಕಾಯ್ದೆಯಡಿ 33 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. 
ಅಬಕಾರಿ ಕಾಯ್ದೆಯಡಿ ಒಟ್ಟು 9 ಪ್ರಕರಣಗಳು ದಾಖಲು ಮಾಡಿಕೊಳ್ಳಲಾಗಿದೆ. ಹನೂರು ಠಾಣೆಯಲ್ಲಿ 4, ಯಳಂದೂರು ಠಾಣೆಯಲ್ಲಿ 2 ಹಾಗೂ ಬೇಗೂರು, ಸಂತೇಮರಹಳ್ಳಿ, ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಿಸಿಕೊಳ್ಳಲಾಗಿದೆ, ಒಟ್ಟು 7360 ರೂ. ಮೌಲ್ಯದ 24.49 ಲೀ. ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟು 41 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ. 

ಏ. 13ರಂದು ಜಿ.ಪಂ. ಅಧ್ಯಕ್ಷರ ಚುನಾವಣೆ

ಚಾಮರಾಜನಗರ, ಏ. 12 (-  ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಏಪ್ರಿಲ್ 13ರಂದು ಮಧ್ಯಾಹ್ನ 12 ಗಂಟೆಗೆ ಚಾಮರಾಜನಗರದ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ಸಭೆ ಕರೆಯಲಾಗಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಹೆಚ್ಚುವರಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷಾ ವಿಷಯದ ಮೌಲ್ಯಮಾಪನ ಕೇಂದ್ರ ಬದಲು

ಚಾಮರಾಜನಗರ, ಏ. 12 - ಚಾಮರಾಜನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಿಗದಿಯಾಗಿದ್ದ ಎಸ್‍ಎಸ್‍ಎಲ್‍ಸಿ  ಪ್ರಥಮ ಭಾಷೆ ಕನ್ನಡ ವಿಷಯದ ಮೌಲ್ಯಮಾಪನ ಕೇಂದ್ರವನ್ನು ಚಾಮರಾಜನಗರದ ಸಿದ್ದಾರ್ಥನಗರ ಬಡಾವಣೆಯಲ್ಲಿರುವ ಸೇಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಗೆ ಬದಲಾಯಿಸಲಾಗಿದೆ.
ಏಪ್ರಿಲ್ 18 ಹಾಗೂ 19ರಂದು ನಡೆಯಲಿರುವ ಸಾಮಾನ್ಯ ಪ್ರವೇಶ  ಪರೀಕ್ಷೆ (ಸಿಇಟಿ)  ಹಾಗೂ ಏಪ್ರಿಲ್ 21ರಂದು ನವೋದಯ ಪ್ರವೇಶ ಪರೀಕ್ಷೆಯು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಹೀಗಾಗಿ ಕನ್ನಡ ಭಾಷಾ ವಿಷಯದ ಮೌಲ್ಯಮಾಪನ ಕೇಂದ್ರವನ್ನು ಬದಲಿಸಲಾಗಿದೆ.
ಮೌಲ್ಯಮಾಪನ ಆದೇಶ ಪಡೆದ ಎಲ್ಲ ವಿಷಯದ ಉಪ ಮೌಲ್ಯಮಾಪಕರು ಕಡ್ಡಾಯವಾಗಿ ಏಪ್ರಿಲ್ 16ರಿಂದ ಮೌಲ್ಯಮಾಪನ ಮಾಡಲು ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 18ರಂದು ಜಿಲ್ಲಾಡಳಿತದ ವತಿಯಿಂದ ಬಸವ ಜಯಂತಿ ಆಚರಣೆ

ಚಾಮರಾಜನಗರ, ಏ. 12 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮಹಾನ್ ಮಾನವತಾವಾದಿ, ಯುಗಪುರುಷ, ಸಮಾಜ ಸುಧಾರಕರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಸಮಾರಂಭವನ್ನು ಏಪ್ರಿಲ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭ ಉದ್ಘಾಟಿಸುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್  ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ  ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.  ಕೊಳ್ಳೇಗಾಲದ ಸರ್ಕಾರಿ ಎಂಜಿಎಸ್‍ವಿ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ಎಲ್. ದೊರೆಸ್ವಾಮಿ ಅವರು ಮುಖ್ಯ ಭಾಷಣ ಮಾಡುವರು.
ಗುಂಡ್ಲುಪೇಟೆ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರಿಂದ ವಚನ ಗಾಯನ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಏ. 15ರಂದು ಪ್ರವೇಶ ಪರೀಕ್ಷೆ

ಚಾಮರಾಜನಗರ, ಏ. 12 - ಕರ್ನಾಟಕ ವಸತಿ ಶಿಕ್ಷÀಣ ಸಂಸ್ಥೆಗಳ ಸಂಘಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಏಕಲವ್ಯ, ಡಾ. ಬಿ.ಆರ್. ಅಂಬೇಡ್ಕರ್ ಮಾದರಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ ಏಪ್ರಿಲ್ 15ರಂದು ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರ ಪಡೆದಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಕರ್ನಾಟಕ ವಸತಿ ಶಿಕ್ಷÀಣ ಸಂಸ್ಥೆಗಳ ಸಂಘದ ಜಿಲ್ಲಾ ಸಮನ್ವಯÁಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Wednesday, 11 April 2018

ವಿಧಾನಸಭಾ ಚುನಾವಣೆ – 2018 ವಿಧಾನಸಭಾ ಚುನಾವಣೆ : ನಾಮಪತ್ರ ಸ್ವೀಕರಿಸುವ ಸ್ಥಳಗಳ ವಿವರ (11-04-2018)

ವಿಧಾನಸಭಾ ಚುನಾವಣೆ – 2018

ವಿಧಾನಸಭಾ ಚುನಾವಣೆ : ನಾಮಪತ್ರ ಸ್ವೀಕರಿಸುವ ಸ್ಥಳಗಳ ವಿವರ

ಚಾಮರಾಜನಗರ, ಏ. 11 -  ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲಾ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 17 ರಿಂದ 24ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದು.
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರಗಳನ್ನು ಕೊಳ್ಳೇಗಾಲ ತಾಲೂಕು ಪಂಚಾಯಿತಿ ಕಚೇರಿಯ ನೆಲಮಹಡಿಯಲ್ಲಿರುವ ಸಭಾಂಗಣದಲ್ಲಿ ಸಲ್ಲಿಸುವುದು.
ಕೊಳ್ಳೇಗಾಲ (ಎಸ್ ಸಿ) ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರಗಳನ್ನು ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳ ಕಚೇರಿಯ 1ನೇ ಮಹಡಿಯಲ್ಲಿರುವ ನ್ಯಾಯಾಲಯ ಸಭಾಂಗಣದಲ್ಲಿ ಸಲ್ಲಿಸಬೇಕು.
ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರಗಳನ್ನು ನಗರದ ಮಿನಿ ವಿಧಾನಸೌಧದ ತಾಲೂಕು ಕಚೇರಿಯ ನೆಲ ಮಹಡಿಯಲ್ಲಿರುವ ಸಭಾಂಗಣದ ಕೊಠಡಿ ಸಂಖ್ಯೆ 1ರಲ್ಲಿ ಸಲ್ಲಿಸಬೇಕು.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಾಮಪತ್ರಗಳನ್ನು ಗುಂಡ್ಲುಪೇಟೆ ತಾಲೂಕು ಕಚೇರಿಯ ನೆಲಮಹಡಿಯಲ್ಲಿರುವ ಮಿನಿ ವಿಧಾನಸೌಧದ ಸಭಾಭವನದಲ್ಲಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ  ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ವಿಧಾನಸಭಾ ಚುನಾವಣೆ – 2018
ಏಪ್ರಿಲ್ 12ರಿಂದ ಚಾ-ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮತಯಂತ್ರ ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ 

ಚಾಮರಾಜನಗರ, ಏ. 11 - ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯ ವತಿಯಿಂದ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 26 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮೇ 12ರಿಂದ 24ರವರೆಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ (ಮತದಾನ ಖಾತರಿ ಯಂತ್ರ) ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರಾತ್ಯಕ್ಷಿಕೆ ಏರ್ಪಾಡು ಮಾಡಲಾಗಿದೆ.
ಏಪ್ರಿಲ್ 12ರಂದು ದೊಡ್ಡಮೋಳೆ, ಹರದನಹಳ್ಳಿ, ಅಮಚವಾಡಿ 13ರಂದು ಯರಗನಹಳ್ಳಿ, ಅರಕಲವಾಡಿ, 14ರಂದು ವೆಂಕಟಯ್ಯನಛತ್ರ, ಬಿಸಲವಾಡಿ, ಹೊನ್ನಹಳ್ಳಿ, 16ರಂದು ಶಿವಪುರ, ಉಡಿಗಾಲ, ಕೊತ್ತಲವಾಡಿ, 17ರಂದು ನಂಜದೇವನಪುರ, ಹೆಗ್ಗೋಠಾರ, ಬದನಗುಪ್ಪೆ, 19ರಂದು ಕೂಡ್ಲೂರು, ಆಲೂರು, ಕಾಗಲವಾಡಿ, 20ರಂದು ಚಂದಕವಾಡಿ, ನಾಗವಳ್ಳಿ, ಜ್ಯೋತಿಗೌಡನಪುರ, ಹೆಬ್ಬಸೂರು, 21ರಂದು ಮಾದಾಪುರ, ಮಂಗಲ, ಭೋಗಾಪುರ, 23ರಂದು ಪುಣಜನೂರು, ಅಟ್ಟುಗೂಳಿಪುರ, 24ರಂದು ಚಾಮರಾಜನಗರ ಪಟ್ಟಣದಲ್ಲಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
   

  ಭದ್ರತಾ ಕಾಯ್ಕೆಯಡಿ 42 ಪ್ರಕರಣಗಳು ದಾಖಲು: 4 ಅಬಕಾರಿ ಪ್ರಕರಣ ದಾಖಲು

ಚಾಮರಾಜನಗರ, ಏ. 11 -  ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು  ಮುಂಜಾಗ್ರತ ಕ್ರಮ ಜರುಗಿಸಿದ್ದು, ಭದ್ರತಾ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಅಬಕಾರಿ ಕಾಯ್ದೆಯಡಿ ಒಟ್ಟು 4 ಪ್ರಕರಣಗಳು ದಾಖಲಾಗಿವೆ.  ಕೊಳ್ಳೇಗಾಲ ಗ್ರಾಮಾಂತರ ಠಾಣೆ, ಗುಂಡ್ಲುಪೇಟೆ ಠಾಣೆ,  ಚಾಮರಾಜನಗರ ಪೂರ್ವ ಠಾಣೆ ಹಾಗೂ ತೆರಕಣಾಂಬಿ ಠಾಣೆಯಲ್ಲಿ ತಲಾ 1 ಪ್ರಕರಣ ದಾಖಲಾಗಿವೆ.  ಒಟ್ಟು 4501 ರೂ. ಮೌಲ್ಯದ 13.5 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟು 81 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ಸಿಇಟಿ ಪರೀಕ್ಷೆ: ಅಗತ್ಯ ಸಿದ್ಧತಾ ಪ್ರಕ್ರಿಯೆಗೆ ಸೂಚನೆ 

ಚಾಮರಾಜನಗರ, ಏ. 11- ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಇದೇ ಏಪ್ರಿಲ್ 18 ಹಾಗೂ 19ರಂದು ನಡೆಯಲಿರುವ ಹಿನ್ನಲೆಯಲ್ಲಿ ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಅಗತ್ಯ ಸಿದ್ದತೆ ಕೈಗೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಿಇಟಿ ಪರೀಕ್ಷಾ ಸಂಬಂಧ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಚಾಮರಾಜನಗರ ಪಟ್ಟಣ ಹಾಗೂ ಕೊಳ್ಳೇಗಾಲ ಪಟ್ಟಣದ ತಲಾ ಎರಡು ಕೇಂದ್ರಗಳಲ್ಲಿ ನಡೆಯಲಿದೆ.  ಪರೀಕ್ಷಾ ಕೆಲಸಕ್ಕೆ ಅಧಿಕಾರಿಗಳನ್ನು ಒಳಗೊಂಡ ತ್ರಿಸದಸ್ಯರ ತಂಡ ರಚಿಸಿ ಆದೇಶಿಸಲಾಗಿದೆ.  ನಿಯೋಜಿತವಾಗಿರುವ ಅಧಿಕಾರಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿ ಹಾಗೂ ನಿರ್ದೇಶನ ಅನ್ವಯ ಕಾರ್ಯನಿರ್ವಹಿಸಬೇಕು ಎಂದರು.
ಪರೀಕ್ಷೆ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳನ್ನು ಜವಾಬ್ದಾರಿಯಿಂದ ಭದ್ರತಾ ಕೊಠಡಿಗೆ ತಲುಪಿಸುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು.  ಸಕಾಲಕ್ಕೆ ಪರೀಕ್ಷಾ ಕೇಂದ್ರ ತಲುಪಬೇಕು.  ಈ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಎಲ್ಲಾ ಪ್ರಕ್ರಿಯೆ ಬಗ್ಗೆ ತಿಳಿವಳಿಕೆ ಹೊಂದಬೇಕು.  ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು ಕರ್ತವ್ಯಕ್ಕೆ ಮುಂದಾಗಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರ ಸೂಚಿಸಿರುವ ಮಾರ್ಗಸೂಚಿಗಳ ಬಗ್ಗೆ ಮನನ ಮಾಡಿಕೊಡಬೇಕು.  ಯಾವ ಸಾಮಗ್ರಿಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗಲು ಅನುಮತಿಸಲಾಗಿದೆ ಎಂಬ ಬಗ್ಗೆ ಸಾಕಷ್ಟು ಮೊದಲೆ ತಿಳಿವಳಿಕೆ ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗಾಯತ್ರಿ ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶಾಮಲ ಮಾತನಾಡಿ ಈ ಬಾರಿ ಪರೀಕ್ಷಾ ಕೊಠಡಿಗೆ ಕಡ್ಡಾಯವಾಗಿ ಗಡಿಯಾರ ಅಳವಡಿಸುವಂತೆ ಸೂಚಿಸಲಾಗಿದೆ.  ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ವಿಜ್ಞಾನ ವಿಷಯ ಹೊರತು ಪಡಿಸಿದ ಉಪನ್ಯಾಸಕರು ಇರಬೇಕಿದೆ. ಪರೀಕ್ಷೆ ಕಾರ್ಯಕ್ಕೆ ನೇಮಕವಾಗಿರುವವರು ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ಕಾರ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಪರೀಕ್ಷಾ ಕೆಲಸ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು. 






ಸಿಇಟಿ ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇದಾಜ್ಞೆ

ಚಾಮರಾಜನಗರ, ಏ. 11 - ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಏಪ್ರಿಲ್ 18 ಹಾಗೂ 19ರಂದು ನಡೆಯಲಿರುವ ಸಾಮಾನ್ಯ ಪ್ರವೇಶ  ಪರೀಕ್ಷೆಯ (ಸಿಇಟಿ)  ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರದ ಜೆಎಸ್‍ಎಸ್ ಮಹಿಳಾ ಪಿಯು ಕಾಲೇಜು, ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಹಾಗೂ ಕೊಳ್ಳೇಗಾಲದ ನಿಸರ್ಗ ಸ್ವತಂತ್ರ ಪದವಿಪೂರ್ವ ಕಾಲೇಜು, ಸರ್ಕಾರಿ ಎಸ್‍ವಿಕೆ ಪದವಿಪೂರ್ವ ಬಾಲಕಿಯರ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ.
ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಹಾಗೂ ನ್ಯಾಯೋಚಿತವಾಗಿ ಪರೀಕ್ಷೆ ನಡೆಯಲು ಅನುವಾಗುವಂತೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 4.30ರವರೆಗೆ ಮುಚ್ಚಲೂ ಸಹ ಆದೇಶಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ನಿಷೇಧ ಆದೇಶ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ತಿಳಿಸಿದ್ದಾರೆ.

ಏ. 16ರಿಂದ ಬೇಸಿಗೆ ತರಬೇತಿ ಶಿಬಿರ

ಚಾಮರಾಜನಗರ, ಏ. 11:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು ಹಾಗೂ ಗುಂಡ್ಲುಪೇಟೆ ತಾಲೂಕುಗಳಲ್ಲಿ ಏಪ್ರಿಲ್ 16 ರಿಂದ ಮೇ 30ರವರೆಗೆ ಸಂಜೆ 5 ಗಂಟೆಯಿಂದ ಬೇಸಿಗೆ ಶಿಬಿರ ನಡೆಸಲಾಗುವುದು.
ವಿವಿಧ ಕ್ರೀಡೆಗಳಲ್ಲಿ ತರಬೇತಿ ನೀಡಲಿದ್ದು ತರಬೇತುದಾರರನ್ನು ನಿಯೋಜಿಸಲಾಗಿದ್ದು ವಿವರ ಇಂತಿದೆ.
ಕೊಳ್ಳೇಗಾಲದ ಎಂಜೆಎಸ್‍ವಿ ಕಾಲೇಜು ಮೈದಾನದಲ್ಲಿ ವಾಲಿಬಾಲ್ ಕ್ರೀಡೆಗೆ ತರಬೇತನ್ನು ಜಯರಾಜು (ಮೊ. 9739826369) ಹಾಗೂ ರವಿಕುಮಾರ್ (ಮೊ. 9844600492) ನೀಡಲಿದ್ದಾರೆ.
ಯಳಂದೂರಿನ ಅಗರ ಗ್ರಾಮದ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಕುಮಾರ್ (ಮೊ. 9886526252) ಅವರು ವಾಲಿಬಾಲ್ ಕ್ರೀಡೆಗೆ ತರಬೇತಿ ನೀಡುವರು.
ಚಾಮರಾಜನಗರದ ಡಾ. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಿಬಾಲ್ ಮತ್ತು ಫುಟ್‍ಬಾಲ್ ಕ್ರೀಡೆಗೆ ಪಿ. ಮಹದೇವಯ್ಯ (ಮೊ. 7060841489) ತರಬೇತುದಾರರಾಗಿದ್ದಾರೆ.
ಗುಂಡ್ಲುಪೇಟೆಯ ಡಿ. ದೇವರಾಜ ಅರಸು ತಾಲೂಕು ಕ್ರೀಡಾಂಗಣದಲ್ಲಿ ಬಿ.ಕೆ. ಗೋಪಾಲ್ (ಮೊ. 994561695) ಹಾಗೂ ಸ್ವಾಮಿ (ಮೊ. 9841821583) ಅವರುಗಳು ಫುಟ್‍ಬಾಲ್ ಕ್ರೀಡೆಗೆ ತರಬೇತಿ ನೀಡುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ. 14ರಂದು ಜಿಲ್ಲಾಡಳಿತದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಚಾಮರಾಜನಗರ, ಏ. 11 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರ ನಾಯಕ ಬಾಬÁ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆ ಸಮಾರಂಭವನ್ನು ಏಪ್ರಿಲ್ 14ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 10.30 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾರಂಭ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭ ಉದ್ಘಾಟಿಸುವರು.  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್  ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ  ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.  ಮೈಸೂರು ಮಹಾರಾಜ ಕಾಲೇಜು ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ವಿ. ಷಣ್ಮುಗಂ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ನವೋದಯ ವಿದ್ಯಾಲಯ : ಪ್ರವೇಶ ಪತ್ರ ಪಡೆಯಲು ಸೂಚನೆ

ಚಾಮರಾಜನಗರ, ಏ. 11 - ಜವಹರ್ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಪಡೆಯುವಂತೆ ಸೂಚಿಸಲಾಗಿದೆ.
ಪರೀಕ್ಷೆಯು ಏಪ್ರಿಲ್ 21ರಂದು ನಡೆಯಲಿದ್ದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಯಾವುದೇ ಸಾಮಾನ್ಯ ಸೇವಾ ಕೇಂದ್ರದಲ್ಲಿ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ಪಡೆದುಕೊಳ್ಳುವುದು.
ಪ್ರವೇಶ ಪತ್ರ ಪಡೆಯುವ ಸಂಬಂಧ ಮಾಹಿತಿಗೆ ಜವಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಅಥವಾ  ಬಿ.ಎಚ್. ಸುರೇಶ್ ಇವರನ್ನು ಮೊಬೈಲ್ 9742476738 ಮೂಲಕ ಸಂಪರ್ಕಿಸುವುದು.
ಸಹಾಯವಾಣಿ ಸಂಖ್ಯೆ 9448552763 ಹಾಗೂ 9442527823 ಸಂಪರ್ಕಿಸಬಹುದು.
ಪ್ರವೇಶ ಪತ್ರ ಕುರಿತು ಮಾಹಿತಿ ಹಾಗೂ ಇತರೆ ಮಾಹಿತಿಗಳನ್ನು ನೀಡಲು ತಾಲೂಕುವಾರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ  ಜವಹರ್ ನವೋದಯ ವಿದ್ಯಾಲಯದ ಪ್ರತಿನಿಧಿಗಳು ಕಾರ್ಯ ನಿರ್ವಹಿಸುವರು. ಅವರನ್ನು ಏಪ್ರಿಲ್ 13 ಹಾಗೂ 16ರಂದು ಬೆಳಿಗ್ಗೆ 10.30 ಗಂಟೆಗೆ ಸಂಪರ್ಕಿಸುವಂತೆ ತಿಳಿಸಿದೆ.
ಚಾಮರಾಜನಗರಕ್ಕೆ ಸಂಬಂಧಿಸಿದಂತೆ ಮೊಬೈಲ್ 9449626243, ಗುಂಡ್ಲುಪೇಟೆಗೆ ಮೊಬೈಲ್ 7737756247, ಕೊಳ್ಳೇಗಾಲಕ್ಕೆ ಮೊಬೈಲ್ 9901009567, ಹನೂರಿಗೆ ಸಂಬಂಧಿಸಿದಂತೆ ಮೊಬೈಲ್ 9480769675 ಹಾಗೂ ಯಳಂದೂರಿನವರು ಮೊಬೈಲ್ 9480299565 ಸಂಪರ್ಕಿಸುವಂತೆ ಪ್ರಾಚಾರ್ಯರಾದ ಆರ್.ಡಿ.ಆರ್. ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







   
             










ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು