ಮತದಾನ ಜಾಗೃತಿಗೆ ಮುಂಬತ್ತಿ ಜಾಥಾ : ಜಿ.ಪಂ. ಸಿ.ಇ.ಒ. ಚಾಲನೆ , RAMASAMUDRA VERABHADRA SWAMY
ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮುಂಬತ್ತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಪ್ರಜ್ಞಾವಂತ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ತಪ್ಪದೆ ಭಾಗವಹಿಸುವಂತೆ ಪ್ರೇರೆಪಿಸುವ ಅಂಗವಾಗಿ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಾಥಾ ಹೊರಟಿತು. ಇದಕ್ಕೂ ಮೊದಲು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ರಾಜೇಂದ್ರ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು. ಪಾರದರ್ಶಕ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಪ್ರತಿಯೊಬ್ಬರು ಯಾವುದೇ ಹಣ, ಅಮಿಷಗಳಿಗೆ ಒಳಗಾಗದೇ ತಪ್ಪದೆ ಮತ ಚಲಾಯಿಸೋಣ ಎಂದು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
ನಂತರ ದೇವಸ್ಥಾನದಿಂದ ಹೊರಟ ಮುಂಬತ್ತಿ ಮೆರವಣಿಗೆ ಜಿಲ್ಲಾಡಳಿತ ಭವನದವರೆಗೆ ಸಾಗಿತು. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸರ್ಕಾರಿ ಶುಶ್ರ್ರೂಷಕರ ಶಾಲೆ, ಜೆ.ಎಸ್.ಎಸ್. ನರ್ಸಿಂಗ್ ಶಾಲೆ, ಮನೋನಿಧಿ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಮಹದೇವಸ್ವಾಮಿ, ಶರವಣ ಅವರು ಸಹ ಜಾಥಾದಲ್ಲಿ ಭಾಗವಹಿಸಿದ್ದರು.
ವಿಧಾನಸಭಾ ಚುನಾವಣೆ – 2018
ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಜಾಗೃತಿಗೆ ಅಧಿಕಾರಿಗಳ ನಿಯೋಜನೆ
ಚಾಮರಾಜನಗರ, ಏ. 09- ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ವಿದ್ಯುನ್ಮಾನ ಮತಯಂತ್ರ (ಇವಿಎಮ್) ಮತ್ತು ವಿವಿಪ್ಯಾಟ್ ಯಂತ್ರಗಳ ಬಗ್ಗೆ ಅರಿವು ಮೂಡಿಸುವ ಸಂಬಂಧ ಈ ಕೆಳಕಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ವಿಧಾನ ಸಭಾ ಕ್ಷೇತ್ರವಾರು ನಿಯೋಜನೆಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಆದ ಡಾ.ಕೆ.ಹರೀಶ್ ಕುಮಾರ್ ಆದೇಶಿಸಿದ್ದಾರೆ.
ಚಾಮರಾಜನಗರ ವಿಧಾನಸಭಾ ಕ್ಷೇತ್ರ: ಪ್ರಕಾಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಉಡಿಗಾಲ ಗ್ರಾಮ ಪಂಚಾಯಿತಿ, ಎಂ.ಎಸ್.ಚಂದ್ರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಜ್ಯೋತೀಗೌಡನಪುರ ಗ್ರಾಮ ಪಂಚಾಯಿತಿ, ಜುನೇದ್ ಅಹಮದ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹೆಬ್ಬಸೂರು ಗ್ರಾಮ ಪಂಚಾಯಿತಿ,ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ: ರಮೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಂಬಳೆ ಗ್ರಾಮ ಪಂಚಾಯಿತಿ, ಗಂಗಾಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗುಂಬಳ್ಳಿ ಗ್ರಾಮ ಪಂಚಾಯಿತಿ, ರಾಮೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ : ಮೋಹನ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬರಗಿ ಗ್ರಾಮ ಪಂಚಾಯಿತಿ, ಮೋಹನ್.ಕೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹುಂಡೀಪುರ ಗ್ರಾಮ ಪಂಚಾಯಿತಿ, ಕುಮಾರಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಹಂಗಳ ಗ್ರಾಮ ಪಂಚಾಯಿತಿ.
ಹನೂರು ವಿಧಾನಸಭಾ ಕ್ಷೇತ್ರ : ನವೀತ ತೇಜೇಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬಂಡಳ್ಳಿ ಗ್ರಾಮ ಪಂಚಾಯಿತಿ. ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಜ್ಜೀಪುರ ಗ್ರಾಮ ಪಂಚಾಯಿತಿ, ಮರಿಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿ
ವಿಧಾನಸಭಾ ಚುನಾವಣೆ – 2018
ಭದ್ರತಾ ಕಾಯ್ಕೆಯಡಿ 10 ಪ್ರಕರಣಗಳು ದಾಖಲು: 10 ಅಬಕಾರಿ ಪ್ರಕರಣ ದಾಖಲು
ಚಾಮರಾಜನಗರ, ಏ. 10 - ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಏಪ್ರಿಲ್ 9ರಂದು ಮುಂಜಾಗ್ರತ ಕ್ರಮ ಜರುಗಿಸಿದ್ದು, ಭದ್ರತಾ ಕಾಯ್ದೆಯಡಿ 10 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಅಬಕಾರಿ ಕಾಯ್ದೆಯಡಿ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ 6, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ 3 ಹಾಗೂ ಹನೂರು ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಒಟ್ಟು 4441 ರೂ. ಮೌಲ್ಯದ 14.13ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಒಟ್ಟು 29 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
No comments:
Post a Comment