ನೂತನ ಜಿ.ಪಂ. ಅಧ್ಯಕ್ಷರಾಗಿ ಶಿವಮ್ಮ ಆಯ್ಕೆ
ಚಾಮರಾಜನಗರ, ಏ. 13 - ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರಸ್ ಪಕ್ಷದ ಆರ್. ಶಿವಮ್ಮ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ಶಿವಮ್ಮ ಅವರನ್ನು ಹೊರತುಪಡಿಸಿ ಬೇರೆ ಯಾವ ಸದಸ್ಯರೂ ಸಹ ನಾಮಪತ್ರ ಸಲ್ಲಿಸಿರಲಿಲ್ಲ. ಇಂದು ಚುನಾವಣೆ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ. ಕಳಸದ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.
ಪ್ರಾದೇಶಿಕ ಅಯುಕ್ತರು ಚುನಾವಣೆ ಪ್ರಕ್ರಿಯೆ ನಡೆಸಿದರು. ಶಿವಮ್ಮ ಅವರು ಸಲ್ಲಿಸಿರುವ ನಾಮಪತ್ರ ಅಂಗೀಕರಿಸಲಾಗಿದೆ. ನಾಮಪತ್ರ ಕ್ರಮಬದ್ಧವಾಗಿದೆ. ಅಂತಿಮವಾಗಿ ಶಿವಮ್ಮ ಅವರು ಅವಿರೋಧವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ. ಕಳಸದ ಅವರು ಘೋಷಿಸಿದರು.
ಅಧ್ಯಕ್ಷರ ಅವಧಿಯು 2021ರ ಏಪ್ರಿಲ್ 29ರವರೆಗೆ ಇರುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಿಸಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪಂಚಾಯತ್ ಸದಸ್ಯರು ಸಭೆಯಲ್ಲಿ ಹಾಜರಿದ್ದರು.
ಏ. 14ರಂದು ಜಿಲ್ಲಾಡಳಿತದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ಚಾಮರಾಜನಗರ, ಏ. 13 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಹಾಗೂ ರಾಷ್ಟ್ರ ನಾಯಕ ಬಾಬÁ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆ ಸಮಾರಂಭವನ್ನು ಏಪ್ರಿಲ್ 14ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 10.30 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾರಂಭ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಮೈಸೂರು ಮಹಾರಾಜ ಕಾಲೇಜು ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ವಿ. ಷಣ್ಮುಗಂ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ವಿಧಾನಸಭಾ ಚುನಾವಣೆ – 2018
ಭದ್ರತಾ ಕಾಯ್ಕೆಯಡಿ 15 ಪ್ರಕರಣಗಳು ದಾಖಲು: 2 ಅಬಕಾರಿ ಪ್ರಕರಣ ದಾಖಲು
ಚಾಮರಾಜನಗರ, ಏ. 13 ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಮುಂಜಾಗ್ರತ ಕ್ರಮ ಜರುಗಿಸಿದ್ದು, ಏಪ್ರಿಲ್ 12ರಂದು ಭದ್ರತಾ ಕಾಯ್ದೆಯಡಿ 15 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಅಬಕಾರಿ ಕಾಯ್ದೆಯಡಿ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ 2 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 1180 ರೂ. ಮೌಲ್ಯದ 3.78 ಲೀ. ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಒಟ್ಟು 23 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
No comments:
Post a Comment