Tuesday, 3 April 2018

ವಿಧಾನಸಭಾ ಚುನಾವಣೆ- 2018 ವಿದ್ಯುನ್ಮಾನ ಮತಯಂತ,್ರ ವಿವಿ ಪ್ಯಾಟ್ ಕುರಿತು ಜಾಗೃತಿ ಕಾರ್ಯಕ್ರಮ (03-04-2018)

ವಿಧಾನಸಭಾ ಚುನಾವಣೆ- 2018
ವಿದ್ಯುನ್ಮಾನ ಮತಯಂತ,್ರ ವಿವಿ ಪ್ಯಾಟ್ ಕುರಿತು ಜಾಗೃತಿ ಕಾರ್ಯಕ್ರಮ

ಚಾಮರಾಜನಗರ, ಏ. 03- ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ಮತದಾರರಿಗೆ ಮತ ಹಾಕಿದ ಬಗ್ಗೆ ಖಾತರಿಪಡಿಸುವ ವಿವಿ ಪ್ಯಾಟ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇಂದು ನಡೆಯಿತು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಕಾರ್ಯವಿಧಾನಗಳ ಕುರಿತು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್À ಅವರು ವಿವರಿಸಿದರು.
ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್‍ನ್ನು ಚುನಾವಣೆಯಲ್ಲಿ ಬಳಸಲಾಗುತ್ತದೆ. ಈಗಾಗಲೇ ಶೇ. 90ರಷ್ಟು ಮತಯಂತ್ರಗಳು ಬಂದಿದ್ದು ಪ್ರಥಮ ಸುತ್ತಿನ ಪರೀಕ್ಷಾ ಕಾರ್ಯವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಕಾರ್ಯನಿರ್ವಹಿಸುವ ವಿಧಾನಗಳ ಕುರಿತು ಮಾಹಿತಿ ನೀಡಲಾಗಿದೆ ಎಂದರು.
ಜನರಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ಮತದಾರರು ಅವರು ಚಲಾಯಿಸಿದ ಮತ ದಾಖಲಾಗಿದೆಯೇ ಎಂಬ ಬಗ್ಗೆ ಖಾತರಿಪಡಿಸುವ ವಿವಿ ಪ್ಯಾಟ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಹಂತಗಳ ಮೂಲಕ ತಿಳಿಸಲಾಗುತ್ತಿದೆ. ಇದಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮತದಾರರಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಬಳಕೆ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಡುವ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿಯೂ ವ್ಯಾಪಕವಾಗಿ ಸ್ವೀಪ್ ಸಮಿತಿಯಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮ ಆಯೋಜನೆಗೆ ಮೊದಲು ಜನರಿಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಚುನಾವಣಾ ಸಂಬಂಧ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹಿರಾತು ಇನ್ನಿತರ ಪ್ರಕಟಣೆಗೆ ಅನುಮತಿ ಪಡೆಯಬೇಕಿದೆ. ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯು (ಎಂಸಿಎಂಸಿ) ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗಿದೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಎಂಸಿಎಂಸಿಯಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕಿದೆ. ಪತ್ರಿಕೆಗಳ ಜಾಹಿರಾತನ್ನು ಸಹ ಅಭ್ಯರ್ಥಿಗಳ ವೆಚ್ಚಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದರು.
ಬಿಇಎಲ್ ತಂತ್ರಜ್ಞರಾದ ವೆಂಕಟರಾಜು ಹಾಗೂ ಶ್ರೀನಿವಾಸ್ ಅವರು ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ ನೀಡಿ ಮತದಾರ ಅಭ್ಯರ್ಥಿಗೆ ಮತ ಹಾಕಿದ ಬಳಿಕ ಅವರು ಹಾಕಿದ ಮತ ನಿರ್ಧಿಷ್ಟ ಅಭ್ಯರ್ಥಿಗೆ ದಾಖಲಾಗಿದೆಯೇ ಎಂಬುದು ಅವರೇ ವಿವಿ ಪ್ಯಾಟ್ ನಲ್ಲಿ ವೀಕ್ಷಣೆ ಮಾಡಲು ಅವಕಾಶವಿದೆ. ಏಳು ಸೆಕೆಂಡ್‍ಗಳ ಕಾಲ ಅಭ್ಯರ್ಥಿಯ ಕ್ರಮ ಸಂಖ್ಯೆ, ಚಿಹ್ನೆ, ಹೆಸರು ಮತದಾರನಿಗೆ ಗೋಚರವಾರಲಿದೆ. ಬಳಿಕ ವಿವರವುಳ್ಳ ಚೀಟಿಯು ಬಾಕ್ಸ್ ಒಳಗೆಯೇ ಸಂಗ್ರಹವಾಗುತ್ತದೆ ಎಂದು ವಿವರಿಸಿದರು.
ಮತದಾನಕ್ಕೂ ಮೊದಲು ಅಣಕು ಮತದಾನಕ್ಕೆ ಅವಕಾಶ ನೀಡಿ ಮತಯಂತ್ರಗಳನ್ನು ಪರೀಕ್ಷಿಸಲಾಗುತ್ತದೆ. ಬೆಳಿಗ್ಗೆ 6 ಗಂಟೆಗೆ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿಯೇ ಅಣುಕು ಮತದಾನ ನಡೆಸಿ ಮತಯಂತ್ರದ ಕ್ಷಮತೆ ಬಗ್ಗೆ ದೃಢೀಕರಿಸಿಕೊಳ್ಳಲಾಗುತ್ತದೆ. ಬಳಿಕ ಮತದಾನಕ್ಕೆ ಸಿದ್ಧಪಡಿಸಿ ಉಪಯೋಗ ಮಾಡಲಾಗುತ್ತದೆ ಎಂದರು.
ಜಿಲ್ಲಾ ಪಂಚÁಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ನೋಡಲ್ ಅಧಿಕಾರಿ ಸೋಮಸುಂದರ್, ಯೋಗೇಶ್, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಚಾಮರಾಜನಗರ ವಿಧಾನ ಸಭಾ ಕ್ಷೇತ್ರ: ದೂರು ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಏ. 03 - ಚಾಮರಾಜನಗರ ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಸಾರ್ವಜನಿಕರು ದೂರವಾಣಿ, ಎಸ್.ಎಂ.ಎಸ್, ವಾಟ್ಸ್‍ಪ್, ಇ-ಮೇಲ್, ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ದೂರವಾಣಿ ಸಂಖ್ಯೆಯು: 08226-223220, ವಾಟ್ಸ್‍ಪ್ ಸಂಖ್ಯೆ: 8277858831 ಆಗಿದೆ.  ಇ-ಮೇಲ್ ವಿಳಾಸವು: ಡಿo.ಛಿhಟಿಚಿgಚಿಡಿ223@gmಚಿiಟ.ಛಿom  ಮತ್ತು ಚಿಡಿo.ಛಿhಟಿಚಿgಚಿಡಿ223@gmಚಿiಟ.ಛಿom ಅಗಿರುತ್ತದೆ.
ಚುನಾವಣಾ ಅಧಿಕಾರಿಯಾಗಿ  ಕಲಘಟಕಿ ಅಶೋಕ ಭೀಮಣ್ಣ ಅವರು ಇರುತ್ತಾರೆ.  ಇವರ ಮೊಬೈಲ್ ಸಂ:9449027183 ಆಗಿದೆ.  ಸಹಾಯಕ ಚುನಾವಣಾ ಅಧಿಕಾರಿಯಾಗಿ ಟಿ.ರಮೇಶ್ ಬಾಬು ಇದ್ದು, ಇವರ ಮೊಬೈಲ್ ಸಂ:9480168864 ಆಗಿದೆ.  ಕಾಲ್ ಸೆಂಟರ್ ಸಂ: 1950 ಆಗಿರುತ್ತದೆ. 
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಏಪ್ರಿಲ್ 14ರವರೆಗೆ ಅರ್ಜಿ ಸ್ವೀಕರಿಸಲು ಕಾಲವಕಾಶ ಇದೆ.  ನಾಗರೀಕರು ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಚಾಮರಾಜನಗರ ವಿಧಾನ ಸಭಾ ಕ್ಷೇತ್ರ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 14ರವರೆಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ ಬಿ.ಬಿ ಕಾವೇರಿ
ಚಾಮರಾಜನಗರ, ಏ. 03 - ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 14ರವರೆಗೂ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಅವರು ಚುನಾವಣಾ ಆಯೋಗ ಏಪ್ರಿಲ್ 14ರವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಕಾಲವಕಾಶ ನೀಡಿದೆ. ಹೀಗಾಗಿ ಅರ್ಜಿಯನ್ನು ಸ್ವೀಕರಿಸಲಾಗುತ್ತದೆ.  ಜಿಲ್ಲೆಯಲ್ಲಿ ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು.  ಏಪ್ರಿಲ್ 14ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿದವರಿಗೆ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಸಿಗಲಿದೆ. 
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವ ಸಲುವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಏಪ್ರಿಲ್ 8ರಂದು ವಿಶೇಷ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ.  ಅಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಬೆಳಿಗ್ಗೆಯಿಂದ ಸಂಜೆಯವರೆಗೂ ಲಭ್ಯರಿದ್ದು ವಿಶೇಷ ಅಭಿಯಾನದಲ್ಲಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ನಡೆಸಲಿದ್ದಾರೆ ಎಂದರು. 
ಮತದಾರರಿಗೆ ಸಹಾಯ ಮಾಡುವ ಸಲುವಾಗಿಯೆ ತಾಲ್ಲೂಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಕೇಂದ್ರಗಳನ್ನು ತೆರೆಯಲಾಗಿದೆ.  ಮತದಾರರಿಗೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ.
ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಪಾಲನೆ ಅನುಷ್ಠಾನ ನೋಡಿಕೊಳ್ಳಲು ವಿವಿಧ ತಂಡಗಳನ್ನು ರಚಿಸಲಾಗಿದೆ.  ಯಾವುದೇ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ತಂಡಗಳು ದೂರು ದಾಖಲಿಸಿ ಕ್ರಮ ವಹಿಸಲಿವೆ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ತಿಳಿಸಿದರು.

ಸಕಲ ಜೀವಿಗಳ ಒಳಿತು ಬಯಸಿದ ಸಾಕಾರಮೂರ್ತಿ ಮಹಾವೀರರು: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ 

ಚಾಮರಾಜನಗರ, ಏ. 03- ಸಕಲ ಜೀವಿಗಳ ಒಳಿತಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಮಹಾವೀರರು ಅಹಿಂಸೆ, ತ್ಯಾಗ ಹಾಗೂ ವೈರಾಗ್ಯದ ಸಾಕಾರಮೂರ್ತಿಯಾಗಿದ್ದರು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಭಿಪ್ರಾಯಪಟ್ಟರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಸಂತರು, ಮಹಾಪುರುಷರು ಹಾಗೂ ಋಷಿಗಳ ಜೀವನ ಹಾಗೂ ಸಂದೇಶಗಳೇ ನಮಗಿಂದು ಮಾದರಿಯಾಗಿದೆ. ಸರಳತೆ, ಅಹಿಂಸೆಯ ಪ್ರತಿರೂಪವಾಗಿದ್ದ ಮಹಾವೀರರ ಮಾರ್ಗವನ್ನು ಗಾಂಧಿಜೀಯವರು ಸಹ ಅನುಸರಿಸಿದ್ದರು. ನಮ್ಮಲ್ಲಿನ ವಿಕಾರ ಮನೋಭಾವ ತೊರೆದು ಮಹಾವೀರರ ತತ್ವಾದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದರು.
ಸಮಾಜದಲ್ಲಿದ್ದ ಮೌಢ್ಯತೆಯನ್ನು ಹೋಗಲಾಡಿಸಿದ ಮಹಾವೀರರು ಎಲ್ಲರನ್ನು ಸಹೋದರತ್ವ, ಭ್ರಾತೃತ್ವದಿಂದ ಕಾಣುವ ಮೂಲಕ ಸರಳತೆ, ಅಹಿಂಸೆ, ತ್ಯಾಗದಿಂದ ಇರುವುದೇ ಮಾನವಧರ್ಮ ಎಂದು ಜಗತ್ತಿಗೆ ಸಾರಿದರು. ಇಂತಹ ಮಹಾಪುರುಷರ ಸಂದೇಶಗಳು ಇಂದಿಗೂ ಅನಿವಾರ್ಯವಾಗಿವೆ. ಮಹಾವೀರರ ಜೀವನಾದರ್ಶಗಳನ್ನು ಅನುಸರಿಸುವ ದಿಟ್ಟ ನಿರ್ಧಾರವನ್ನು ಪ್ರತಿಯೊಬ್ಬರು ಹೊಂದಬೇಕಿದೆ ಎಂದು ಜಿಲ್ಲಾಧಿಕಾರಿ ಕಾವೇರಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ಇಂದು ವಿಶ್ವದ ಹಲವೆಡೆ ಭಯೋತ್ಪಾದನೆ ತಾಂಡವವಾಡುತ್ತಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಒಂದು ದೇಶ ಮತ್ತೊಂದು ದೇಶವನ್ನು ಹಣಿಯಲು ಯತ್ನಿಸುತ್ತಿದೆ. ಯುದ್ಧ ಅನಿವಾರ್ಯವಾಗಿರುವ ಇಂತಹ ಸಂದರ್ಭದಲ್ಲಿ ಮಹಾವೀರರ ಅಹಿಂಸಾ ತತ್ವ, ಬದುಕಿನ ಸಂದೇಶಗಳು ಸರ್ವಕಾಲಕ್ಕೂ ಅನ್ವಯವಾಗುವ ಆದರ್ಶಗಳಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಮೈಸೂರು ವಿ.ವಿ. ಮಾನಸಗಂಗೋತ್ರಿಯ ಜೈನಶಾಸ್ತ್ರ ಹಾಗೂ ಪ್ರಾಕ್ರತ ವಿಜ್ಞಾನ ವಿಭಾಗದ ಅತಿಥಿ ಉಪನ್ಯಸಕರಾದ ಡಾ. ಶಾಂತಿಸಾಗರ ಶಿರಹಟ್ಟಿ ಶಾಸ್ತ್ರಿ ಅವರು ಭಗನಾನ್ ಮಹಾವೀರರ ಜೀವನ, ಸಂದೇಶ, ಅಹಿಂಸಾಮಾರ್ಗಗಳ ಕುರಿತು ಸುದೀರ್ಘ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆÉಯ ಸಹಾಯಕ ನಿರ್ದೇಶಕರಾದ ಮಹದೇವಯ್ಯ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಗರದ ಅಕ್ಷತಾ ಎಸ್, ಜೈನ್ ತಂಡದವರು ನಡೆಸಿಕೊಟ್ಟ ಮಹಾವೀರರ ಕುರಿತ ಸಂಗೀತ ನೃತ್ಯರೂಪಕ ಕಾರ್ಯಕ್ರಮದಲ್ಲಿ ಗಮನ ಸೆಳೆಯಿತು.

      ಯಳಂದೂರು : ರಾಷ್ಟ್ರ ನಾಯಕರ ಜಯಂತಿ ಸರಳ ಆಚರಣೆ

ಚಾಮರಾಜನಗರ, ಏ. 03 - ಇದೇ ಏಪ್ರಿಲ್ 5ರಂದು ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದೆಂದು ಯಳಂದೂರು ತಹಸೀಲ್ದಾರ್ ತಿಳಿಸಿದ್ದಾರೆ.
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಸದರಿ ದಿನದಂದು ಆಯಾ ಕಚೇರಿಯಲ್ಲಿ ಪುಷ್ಪಾರ್ಚನೆ ಮಾಡಿ ಸರಳವಾಗಿ ಆಚÀರಿಸಲಾಗುವುದು. ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಯಳಂದೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

 ಪ್ರಾಥಮಿಕ, ಪ್ರೌಢಶಾಲೆ ಆರಂಭಿಸಲು ನೊಂದಾಯಿತ ಸಂಸ್ಥೆಗಳಿಂದ
ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಚಾಮರಾಜನಗರ, ಏ. 03 - ಸಾರ್ವಜನಿಕ ಶಿಕ್ಷಣ ಇಲಾಖೆಯು 2018-19ನೇ ಶೈಕ್ಷಶಿಕ ಸಾಲಿನಿಂದ ಜಿಲ್ಲೆಯಲ್ಲಿ ನೂತನವಾಗಿ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆರಂಭಿಸಲು ಉದ್ದೇಶಿಸಿರುವ ಅರ್ಹ ನೊಂದಾಯಿತ ಸಂಸ್ಥೆಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಇಲಾಖೆ ವೆಬ್ ಸೈಟ್‍ನಲ್ಲಿ ಏಪ್ರಿಲ್ 10ರೊಳಗೆ ಸಲ್ಲಿಸಲು ಅವಕಾಶವಿದ್ದು, ಹೊಸ ಶಾಲೆಗೆ ನೋಂದಣಿ ಶುಲ್ಕ ಹಾಗೂ ಸಂಸ್ಕರಣಾ ಶುಲ್ಕದ ವಿವರ ಈ ರೀತಿ ಇದೆ.
1 ರಿಂದ 5ನೇ ತರಗತಿಯ ಎಲ್ಲ ಮಾಧ್ಯಮದ ಶಾಲೆಗಳಿಗೆ ನೋಂದಣಿ ಶುಲ್ಕ 25 ಸಾವಿರ ಹಾಗೂ ಸಂಸ್ಕರಣಾ ಶುಲ್ಕ 10 ಸಾವಿರ ರೂ.ಗಳಾಗಿದ್ದು ಡಿಡಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಾಮರಾಜನಗರ ಇವರ ಹೆಸರಿನಲ್ಲಿ ಪಡೆಯಬೇಕು.
6 ರಿಂದ 8ನೇ ತರಗತಿಯ ಕನ್ನಡ ಮಾಧ್ಯಮ ಮತ್ತು ಇತರೆ ಮಾತೃ ಭಾಷೆ ಶಾಲೆಗಳಿಗೆ ನೋಂದಣಿ ಶುಲ್ಕ 50 ಸಾವಿರ ಹಾಗೂ ಸಂಸ್ಕರಣಾ ಶುಲ್ಕ 20 ಸಾವಿರ ರೂ.ಗಳಾಗಿದ್ದು ಡಿಡಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಾಮರಾಜನಗರ ಇವರ ಹೆಸರಿನಲ್ಲಿ ಪಡೆಯಬೇಕು.
6 ರಿಂದ 8ನೇ ತರಗತಿಯ ಆಂಗ್ಲ ಮಾಧ್ಯಮ ಶಾಲೆಗಳಿಗೆ ನೋಂದಣಿ ಶುಲ್ಕ 1 ಲಕ್ಷ ಹಾಗೂ ಸಂಸ್ಕರಣಾ ಶುಲ್ಕ 20 ಸಾವಿರ ರೂ.ಗಳಾಗಿದ್ದು ಡಿಡಿಯನ್ನು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಾಮರಾಜನಗರ ಇವರ ಹೆಸರಿನಲ್ಲಿ ಪಡೆಯಬೇಕು.
9 ಮತ್ತು 10ನೇ ತರಗತಿಯ ಕನ್ನಡ ಮಾಧ್ಯಮ ಮತ್ತು ಇತರೆ ಮಾತೃ ಭಾಷೆ ಶಾಲೆಗಳಿಗೆ ನೋಂದಣಿ ಶುಲ್ಕ 50 ಸಾವಿರ ಹಾಗೂ ಸಂಸ್ಕರಣಾ ಶುಲ್ಕ 20 ಸಾವಿರ ರೂ.ಗಳಾಗಿದ್ದು ಡಿಡಿಯನ್ನು ಆಯುಕ್ತರು ಅಥವಾ ಅಪರ ಅಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಹೆಸರಿನಲ್ಲಿ ಪಡೆಯಬೇಕು.
9 ಮತ್ತು 10ನೇ ತರಗತಿಯ ಆಂಗ್ಲ ಮಾಧ್ಯಮ ಶಾಲೆಗಳಿಗೆ ನೋಂದಣಿ ಶುಲ್ಕ 1 ಲಕ್ಷ ಹಾಗೂ ಸಂಸ್ಕರಣಾ ಶುಲ್ಕ 20 ಸಾವಿರ ರೂ.ಗಳಾಗಿದ್ದು ಡಿಡಿಯನ್ನು ಆಯುಕ್ತರು ಅಥವಾ ಅಪರ ಅಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಶಿಕ್ಷಣ ಇಲಾಖಾ ವೆಬ್ ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಹರ್ ನವೋದಯ ವಿದ್ಯಾಲಯ : ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ವಿತರಣೆ

ಚಾಮರಾಜನಗರ, ಏ. 03:- ಜವಹರ್ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ವಿತರಿಸಲಾಗುತ್ತಿದೆ.
ಪರೀಕ್ಷೆಯು ಏಪ್ರಿಲ್ 21ರಂದು ನಡೆಯಲಿದ್ದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಯಾವುದೇ ಸಾಮಾನ್ಯ ಸೇವಾ ಕೇಂದ್ರದಲ್ಲಿ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಂದ ಪಡೆದುಕೊಳ್ಳುವುದು.
ಪ್ರವೇಶ ಪತ್ರ ಪಡೆಯುವ ಸಂಬಂಧ ಯಾವುದೇ ತೊಂದರೆ ಉಂಟಾದಲ್ಲಿ ಅಥವಾ ಹೆಚ್ಚಿನ ಮಾಹಿತಿಗೆ ಜವಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷಾ ಪ್ರಭಾರಿ ಬಿ.ಎಚ್. ಸುರೇಶ್ ಇವರನ್ನು ಸಹಾಯವಾಣಿ 9742476738 ಮೂಲಕ ಸಂಪರ್ಕಿಸುವಂತೆ ಜವಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಆರ್.ಡಿ.ಆರ್. ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ

ಚಾಮರಾಜನಗರ, ಏ. 03 - ಜಿಲ್ಲೆಯ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಏಪ್ರಿಲ್ 5ರಿಂದ 30ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸಲಿದ್ದಾರೆ.
ಏಪ್ರಿಲ್ 5ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, 10ರಂದು ಚಾಮರಾಜನಗರ ತಾಲೂಕಿಗೆ ಸಂಬಂಧಿಸಿದಂತೆ ನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ಸ್ವೀಕರಿಸುವರು.
ಏಪ್ರಿಲ್ 16ರಂದು ಯಳಂದೂರು, 25ರಂದು ಕೊಳ್ಳೇಗಾಲ ಹಾಗೂ 30ರಂದು ಹನೂರಿನಲ್ಲಿ ದೂರುಗಳನ್ನು ಅಲ್ಲಿನ ಸರ್ಕಾರಿ ಅತಿಥಿಗೃಹದಲ್ಲಿ ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

ಏ. 6 ರಿಂದ ತಾತ್ಕಾಲಿಕವಾಗಿ ಗ್ರಂಥಾಲಯ ಸೇವೆ ಸ್ಥಗಿತ 

ಚಾಮರಾಜನಗರ, ಏ. 03 - ಚಾಮರಾಜನಗರ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಏಪ್ರಿಲ್ 6 ರಿಂದ 14ರವರೆಗೆ ಪುಸ್ತಕ ಹಾಗೂ ಪೀಠೋಪಕರಣಗಳ ವಾರ್ಷಿಕ ದಾಸ್ತಾನು ಕಾರ್ಯ ನಡೆಯಲಿದೆ.
ಈ ಹಿನ್ನೆಲಯಲ್ಲಿ ಶಾಖಾ ಗ್ರಂಥಾಲಯಗಳಾದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕುಗಳಲ್ಲಿ ದಾಸ್ತಾನು ತಪಾಸಣೆ ನಡೆಯಲಿರುವುದರಿಂದ ತಾತ್ಕಾಲಿಕವಾಗಿ ಗ್ರಂಥಾಲಯ ಸೇವೆ ಸ್ಥಗಿತಗೊಳ್ಳಲಿದೆ.
ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಡಿ. ನಾಗವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




















No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು