ವಿಧಾನಸಭಾ ಚುನಾವಣೆ – 2018
ಚುನಾವಣಾ ಪ್ರಕ್ರಿಯೆಯ ಪರಿಪೂರ್ಣ ಮಾಹಿತಿ ಹೊಂದಿ: ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚನೆ
ಚಾಮರಾಜನಗರ, ಏ. 07 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿ ಹೊಂದಿರುವುದಲ್ಲದೆ, ಮತಯಂತ್ರ(ಇ.ವಿ.ಎಂ) ಹಾಗೂ ವಿ.ವಿ. ಪ್ಯಾಟ್ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ಅರಿವಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತವತಿಯಂದ ಮಾಸ್ಟರ್ ಟ್ರೈನರ್ಸ್, ಸೆಕ್ಟರ್ ಅಧಿಕಾರಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
ಚಾಮರಾಜನಗರ, ಏ. 07 :- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಹಂತದ ಮಾಹಿತಿ ಹೊಂದಿರುವುದಲ್ಲದೆ, ಮತಯಂತ್ರ(ಇ.ವಿ.ಎಂ) ಹಾಗೂ ವಿ.ವಿ. ಪ್ಯಾಟ್ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ಅರಿವಿರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತವತಿಯಂದ ಮಾಸ್ಟರ್ ಟ್ರೈನರ್ಸ್, ಸೆಕ್ಟರ್ ಅಧಿಕಾರಿ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.ಚುನಾವಣಾ ಆಯೋಗವು ಕಾಲಕಾಲಕ್ಕೆ ನಿರ್ವಹಿಸಬೇಕಿರುವ ಕಾರ್ಯವೈಖರಿ, ನೀತಿ, ನಿಯಮಗಳನ್ನು ಪರಿಷ್ಕರಿಸುತ್ತಿದೆ. ಅದನ್ನು ಅನುಷ್ಠಾನಗೊಳಿಸಲು ಚುನಾವಣಾ ಪ್ರಕ್ರಿಯೆಗೆ ಸಂಬಂಧಪಟ್ಟ ಎಲ್ಲ ಮಾಹಿತಿಗಳ ಸಂಪೂರ್ಣ ಅರಿವು ಹೊಂದಬೇಕು. ಯಾವುದೇ ಹಂತದ ಅಧಿಕಾರಿಗಳು ಎಷ್ಟೇ ಬಾರಿ ತರಬೇತಿ ಪಡೆದಿದ್ದರೂ ಸಹ ಚುನಾವಣಾ ಕಾರ್ಯವಿಧಾನದಲ್ಲಿ ಹೆಚ್ಚಿನ ಪರಿಪೂರ್ಣತೆ ಹೊಂದಿ, ಆಯೋಗದ ಮಾರ್ಗಸೂಚಿಗಳನ್ನು ಯಶಸ್ವಿಯಾಗಿ ಪಾಲಿಸಬೇಕು ಎಂದರು.
ಮತದಾನವು ಒಂದು ಪವಿತ್ರ ಕಾರ್ಯವಾಗಿದೆ. ಚುನಾವಣೆಯ ಮಾರ್ಗಸೂಚಿಗಳು ಸರಳವಾಗಿ ಅರ್ಥವಾಗುವುದರೊಂದಿಗೆ ಅದರಲ್ಲಿ ಪಾಲ್ಗೊಳ್ಳುವ ವಿವಿಧ ಹಂತದ ಅಧಿಕಾರಿಗಳು ಹಾಗೂ ಮತದಾರರು ಚುನಾವಣೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವ ಸಲುವಾಗಿ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ(ಈesಣivಚಿಟ oಜಿ ಆemoಛಿಡಿesಥಿ) ದ ಮಾದರಿಯಲ್ಲಿ ನಡೆಸಲು ಆಯೋಗವು ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾನ ದಿನದಂದು ಮತಗಟ್ಟೆಯಲ್ಲಿ ಪಿ.ಆರ್.ಒ(ಪ್ರಿಸೈಡಿಂಗ್ ಅಧಿಕಾರಿ), ಮತಗಟ್ಟೆಯ ವಿವಿಧ ಅಧಿಕಾರಿಗಳು ಮತಯಂತ್ರದ ಕುರಿತು ಸಂಪೂರ್ಣ ತಿಳಿವಳಿಕೆ ಇರಬೇಕು. ಮತಗಟ್ಟೆಯ ಎಲ್ಲಾ ಚಲನ-ವಲನಗಳನ್ನು ಸೂಕ್ಷ್ಮ ಮತಿಯಿಂದ ಗಮನಿಸÀಬೇಕು. ಮತದಾನದ ಹಿಂದಿನ ದಿನವೇ ಮತಗಟ್ಟೆಯ ಎಲ್ಲಾ ಸಿದ್ದತೆಗಳನ್ನು ನಿರ್ವಹಿಸಬೇಕು ಎಂದರು. ಇದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಫ್ಲೋ-ಚಾರ್ಟ್ ನೀಡಲಾಗುವುದು ಎಂದರು.
ಅಣಕು ಮತದಾನದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಇಡೀ ಮತದಾನ ಪ್ರಕ್ರಿಯೆಗೆ ತೊಂದರೆ ಉಂಟಾಗಬಹುದು. ಪ್ರಿಸೈಡಿಂಗ್ ಅಧಿಕಾರಿಯು ಅತ್ಯಂತ ಜಾಣ್ಮೆ, ವಿವೇಕ ಹಾಗೂ ನಿಷ್ಪಕ್ಷಪಾತದಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ಅನುಮಾನ, ಸಮಸ್ಯೆಗಳಿದ್ದರೂ ತಮ್ಮ ವಿವೇಚನೆ ಬಳಸದೇ ಮತ್ತು ಬಹುಮತದ ಅಭಿಪ್ರಾಯಗಳಿಗೆ ಮನ್ನಣೆ ನೀಡದೇ ತಮ್ಮ ಮೇಲಧಿಕಾರಿಗೆ ತಿಳಿಸಿ ಪರಿಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಮಾತನಾಡಿ ಮತಗಟ್ಟೆಗಳಿಗೆ ಕನಿಷ್ಠ ಮೂಲಸೌಲಭ್ಯ ಒದಗಿಸಲಾಗುತ್ತಿದೆ. ಮತಗಟ್ಟೆಗಳಿಗೆ ಅಗತ್ಯವಾದ ಕುಡಿಯುವ ನೀರು, ಶೌಚಾಲಯ, ನೆರಳಿನ ವ್ಯವಸ್ಥೆ, ಅಂಗವಿಕಲರಿಗೆ ರ್ಯಾಂಪ್, ಹಾಗೂ ವಿಶ್ರಾಂತಿ ಕೊಠಡಿಗಳನ್ನು ತೆರೆಯಲಾಗುವುದು ಎಂದರು.
ಮತದಾನದ ಕುರಿತು ಜಿಲ್ಲೆಯ ಯಾವುದೇ ಭಾಗದಲ್ಲಿ ಹಾಗೂ ಯಾವುದೇ ಕ್ಷಣದಲ್ಲಿ ಪ್ರತಿಹಂತದ ಮಾಹಿತಿ ಪಡೆಯುವ ಸಲುವಾಗಿ ಸಂಪರ್ಕಕ್ಕೆ ಸಿಗಲು ಅನುಕೂಲವಾಗುವಂತೆ ವ್ಯವಸ್ಥೆಯನ್ನು ಉತ್ತಮಗೊಳಿಸಲಾಗುವುದು ಎಂದು ಸಿ.ಇ.ಒ. ಹರೀಶ್‍ಕುಮಾರ್ ಅವರು ತಿಳಿಸಿದರು.
ಮಾಸ್ಟರ್ ಟ್ರೈನರ್‍ಗಳಾದ ಶ್ರೀನಿವಾಸಕುಮಾರ್ ಹಾಗೂ ಗಣೇಶ್‍ಕುಮಾರ್, ತರಬೇತಿ ನೋಡೆಲ್ ಆಧಿಕಾರಿ ಯೋಗೇಶ್ ಅವರು ಚುನಾವಣಾ ಪೂರ್ವಸಿದ್ದತೆ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಹಾಜರಿದ್ದ ವಿವಿಧ ಹಂತದ ಅಧಿಕಾರಿಗಳಿಗೆ ಮಾಹಿತಿ ಒದಗಿಸಿದರು.
ನಂತರ ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ. ಪ್ಯಾಟ್ ಕಾರ್ಯವಿಧಾನ ಕುರಿತು ಪ್ರಾಯೋಗಿಕ ತರಬೇತಿನ್ನು ಅಧಿಕಾರಿಗಳಿಗೆ ನೀಡಲಾಯಿತು.
ಏಪ್ರಿಲ್ 8ರಂದು ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಮಿಂಚಿನ ನೋಂದಣಿ ಅಭಿಯಾನ
ಚಾಮರಾಜನಗರ, ಏ. 07 - ಚುನಾವಣಾ ಆಯೋಗವು ಆಯಾ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಏಪ್ರಿಲ್ 8ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಆಯಾ ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ.ಏಪ್ರಿಲ್ 8 ರಂದು ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿದ್ದು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿ ಸ್ವೀಕರಿಸಲಿದ್ದಾರೆ. ನಿಯಮಾನುಸಾರ ಪರಿಶೀಲಿಸಿ ಅರ್ಹರನ್ನು ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತದೆ.
ಈ ಅವಕಾಶವನ್ನು ಜಿಲ್ಲೆಯ ಜನತೆ ಸದುಪಯೋಗ ಮಾಡಿಕೊಳ್ಳಬೇಕು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಹಮ್ಮಿಕೊಂಡಿರುವ ಮಿಂಚಿನ ನೋಂದಣಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಬಿ.ಬಿ ಕಾವೇರಿ ಅವರು ಮನವಿ ಮಾಡಿದ್ದಾರೆ.
No comments:
Post a Comment