ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಹದಿನೆಂಟು ನಾಮಪತ್ರ ಸಲ್ಲಿಕೆ
ಚಾಮರಾಜನಗರ, ಏ. 20 - ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಹದಿನೆಂಟು ನಾಮಪತ್ರ ಸಲ್ಲಿಕೆಯಾಗಿದೆ.
ಹನೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಪ್ರೀತನ್ ಕೆ.ಎನ್, ಒಂದು ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಆರ್. ನರೇಂದ್ರ ಅವರು ನಾಲ್ಕು ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದಿಂದ ಎಂ.ಆರ್. ಮಂಜುನಾಥ್ ಹಾಗೂ ಭಾರತೀಯ ಜನತಾ ಪಕ್ಷದಿಂದ ಕೆ.ಎಸ್. ಪರಿಮಳಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಕೆ.ಆರ್. ಮಲ್ಲಿಕಾರ್ಜುನಪ್ಪ ಅವರು ನಾಲ್ಕು ನಾಮಪತ್ರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಸಿ. ಪುಟ್ಟರಂಗಶೆಟ್ಟಿ ಅವರು ಮೂರು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎಂ. ಚಿನ್ನಸ್ವಾಮಿ ಎಂಬುವವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಸಿ.ಎಸ್. ನಿರಂಜನಕುಮಾರ್ ಅವರು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಒಟ್ಟಾರೆ ಇಂದು ಎಂಟು ಅಭ್ಯರ್ಥಿಗಳಿಂದ ಹದಿನೆಂಟು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.
ನವಜಾತ ಶಿಶುವಿನ ಪೋಷಕರ ಪತ್ತೆಗೆ ಸಹಕರಿಸಿ
ಚಾಮರಾಜನಗರ, ಏ. 20 - ಗುಂಡ್ಲುಪೇಟೆ ಪಟ್ಟಣದ ಕುರುಬರ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದ ಚರಂಡಿಯ ಬಳಿ ಏಪ್ರಿಲ್ 14ರಂದು ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಶಿಶುವಿನ ಪೋಷಕರ ಪತ್ತೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.ಮಗುವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಮಕ್ಕಳ ವಾರ್ಡ್‍ಗೆ ದಾಖಲಿಸಿದ್ದು ಮಗು ಆರೋಗ್ಯವಾಗಿದೆ.
ಮಗು 6 ದಿನಗಳದ್ದಾಗಿದ್ದು ಕೆಂಪು ಮೈಬಣ್ಣ ಹೊಂದಿದೆ. ಕೋಲು ಮುಖ ಹೊಂದಿದ್ದು ಸುಮಾರು 2 ಕೆಜಿ ತೂಕವಿರುತ್ತದೆ.
ಮಗುವಿನ ಪೋಷಕರು ಇದ್ದಲ್ಲಿ ಅಥವಾ ಈ ಸಂಬಂಧ ಮಾಹಿತಿ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಠಡಿ ಸಂಖ್ಯೆ 127, ಮೊದಲನೇ ಮಹಡಿ, ಜಿಲ್ಲಾಡಳಿತ, ಚಾಮರಾಜನಗರ (ದೂ.ಸಂ. 08226-222354), ಮಕ್ಕಳ ಕಲ್ಯಾಣ ಸಮಿತಿ, ಬಾಲಕಿಯರ ಸರ್ಕಾರಿ ಬಾಲಮಂದಿರ, ಹೌಸಿಂಗ್ ಬೋರ್ಡ್ ಕಾಲೋನಿ, ಚಾಮರಾಜನಗರ ಅಥವಾ ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಏಪ್ರಿಲ್ 22ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆ
ಚಾಮರಾಜನಗರ, ಏ. 20 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಭಗೀರಥ ಜಯಂತಿಯನ್ನು ಏಪ್ರಿಲ್ 22ರಂದು ಬೆಳಗ್ಗೆ 11ಗಂಟೆಗೆ ನಗರದ ಜಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
.
No comments:
Post a Comment