ವಿಧಾನಸಭಾ ಚುನಾವಣೆ- 2018
ಏ.30ರಂದು ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ಕಾರ್ಯಕ್ರಮ
ಚಾಮರಾಜನಗರ, ಏ. 29 - ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚಾಮರಾಜನಗರ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳಿಗೆ ಏಪ್ರಿಲ್ 30ರಂದು ಬೆಳಿಗ್ಗೆ 9 ಗಂಟೆಗೆ ಚುನಾವಣಾ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕಾಗಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಿ ಈಗಾಗಲೇ ಅದೇಶ ಹೊರಡಿಸಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದಲ್ಲಿ ತರಬೇತಿ ಏರ್ಪಡಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳು ಕಡ್ಡಾಯವಾಗಿ ಹಾಜರಿರÀಬೇಕು. ತಪ್ಪಿದಲ್ಲಿ ಗೈರು ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸಿ ಶಿಸ್ತುಕ್ರಮ ಜರುಗಿಸಲಾಗುವುದು. ತರಬೇತಿಗೆ ಇತರೆ ಪೊಲಿಂಗ್ ಅಧಿಕಾರಿಗಳು ಹಾಜರಾಗುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment