ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018
ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ
ಚಾಮರಾಜನಗರ, ಏ. 17 - ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೊದಲ ದಿನಾವಾದ ಇಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ಚಾಮರಾಜನಗರ ಜಿಲ್ಲೆಯ ಹನೂರು, ಕೊಳ್ಳೇಗಾಲ(ಎಸ್‍ಸಿ), ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018 ವಿಧಾನಸಭಾ ಕ್ಷೇತ್ರಕ್ಕೆ ವೆಚ್ಚ ವೀಕ್ಷಕರು
ಚಾಮರಾಜನಗರ, ಏ. 17:- ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ವೆಚ್ಚ ವೀಕ್ಷಕರನ್ನು ನೇಮಕ ಮಾಡಿದೆ. ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸುಧಾನ್ಶು ಶೇಖರ್ ಅವರು ವೆಚ್ಚ ವೀಕ್ಷಕರಾಗಿದ್ದಾರೆ. ಇವರ ಮೊಬೈಲ್ ಸಂಖ್ಯೆ 9480909300 ಆಗಿದೆ. ಚಾಮರಾಜನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ (ಐಬಿ) ದಲ್ಲಿ ವೆಚ್ಚ ವೀಕ್ಷಕರು ವಾಸ್ತವ್ಯ ಹೂಡಿದ್ದು ಸಾರ್ವಜನಿಕರು ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಭೇಟಿ ಮಾಡಿ ಸಂಪರ್ಕಿಸಬಹುದಾಗಿದೆ. ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಗೆ ಎಂ.ರಾಮಮೋಹನ್ ರಾವ್ ಅವರು ವೆಚ್ಚ ವೀಕ್ಷಕರಾಗಿದ್ದಾರೆ. ಇವರ ಮೊಬೈಲ್ ಸಂಖ್ಯೆ: 9480334600 ಆಗಿದೆ. ಚುನಾವಣಾ ವೆಚ್ಚಗಳಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಇವರ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಚಾಮರಾಜನಗರÀದಲ್ಲಿ ಇರುವ ಕಂಟ್ರೋಲ್ ರೂಂ ಶುಲ್ಕ ರಹಿತ ದೂರವಾಣಿ ಸಂಖ್ಯೆ 18004250133 ಹಾಗೂ 08226-226007, ವಾಟ್ಸಾಪ್ ಸಂಖ್ಯೆ 9483237191 ಸಂಪರ್ಕಿಸಿಯೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳನ್ನು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.ಏಪ್ರಿಲ್ 19ರಂದು ಭಗಿರಥ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ಏ. 17- ಜಿಲ್ಲಾಡಳಿತದ ವತಿಯಿಂದ ಭಗಿರಥ ಜಯಂತಿಯನ್ನು ಆಚರಿಸಬೇಕಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡುವ ಬಗ್ಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 19ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಗೆ ಜಿಲ್ಲೆಯ ಎಲ್ಲಾ ಸಮುದಾಯ ಮುಖಂಡರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಆಗಮಿಸಿ ಭಗಿರಥ ಜಯಂತಿ ಆಚರಣೆ ಸಂಬಂಧ ಸಲಹೆ, ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.ಭದ್ರತಾ ಕಾಯ್ಕೆಯಡಿ 36 ಪ್ರಕರಣಗಳು ದಾಖಲು: 7 ಅಬಕಾರಿ ಪ್ರಕರಣ ದಾಖಲು
ಚಾಮರಾಜನಗರ, ಏ. 17- ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಪೊಲೀಸ್ ಇಲಾಖೆಯು ಮುಂಜಾಗ್ರತ ಕ್ರಮ ಜರುಗಿಸಿದ್ದು, ಏಪ್ರಿಲ್ 16ರಂದು ಭದ್ರತಾ ಕಾಯ್ದೆಯಡಿ ಒಟ್ಟು 36 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.ಅಬಕಾರಿ ಕಾಯ್ದೆಯಡಿ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ 2, ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ 3, ಬೇಗೂರು ಹಾಗೂ ಸಂತೇಮರಹಳ್ಳೆ ಠಾಣೆಯಲ್ಲಿ ತಲಾ 1 ಪ್ರಕರಣ ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿವೆ. ಒಟ್ಟು 3114 ರೂ. ಮೌಲ್ಯದ 10.98 ಲೀ. ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟು 75 ಜಾಮೀನು ರಹಿತ ವಾರೆಂಟ್ ಕಾರ್ಯಗತಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಏ. 18ರಂದು ಜಿಲ್ಲಾಡಳಿತದ ವತಿಯಿಂದ ಬಸವ ಜಯಂತಿ ಆಚರಣೆ
ಚಾಮರಾಜನಗರ, ಏ. 17 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮಹಾನ್ ಮಾನವತಾವಾದಿ, ಯುಗಪುರುಷ, ಸಮಾಜ ಸುಧಾರಕರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಸಮಾರಂಭವನ್ನು ಏಪ್ರಿಲ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕೊಳ್ಳೇಗಾಲದ ಸರ್ಕಾರಿ ಎಂಜಿಎಸ್‍ವಿ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ಎಲ್. ದೊರೆಸ್ವಾಮಿ ಅವರು ಮುಖ್ಯ ಭಾಷಣ ಮಾಡುವರು.
ಗುಂಡ್ಲುಪೇಟೆ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರಿಂದ ವಚನ ಗಾಯನ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
.
ಪ್ರತಿಷ್ಠಿತ ಶಾಲೆಗಳ 6, 8ನೇ ತರಗತಿಗೆ ಪ.ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳ ಸೇರ್ಪಡೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಏ. 17 - 2018-19ನೇ ಸಾಲಿಗೆ ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6 ಮತ್ತು 8ನೇ ತರಗತಿಗೆ ಸೇರ್ಪಡೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 121 ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದು. ತಡವಾಗಿ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಆಯ್ಕೆಗೆ ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗೆ ಇಲಾಖೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಏ. 17. - ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್ 23 ರಿಂದ 28ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.ಏಪ್ರಿಲ್ 23ರಂದು ಚಾಮರಾಜನಗರ, 24ರಂದು ಗುಂಡ್ಲುಪೇಟೆ, 25ರಂದು ಕೊಳ್ಳೇಗಾಲ, 26ರಂದು ಹನೂರು ಹಾಗೂ 28ರಂದು ಯಳಂದೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
No comments:
Post a Comment