Tuesday, 8 May 2018

( 07-05-2018)ಮೇ 10ಕ್ಕೆ ಬಹಿರಂಗ ಪ್ರಚಾರ ಅಂತ್ಯ ನಂತರದ ಮುದ್ರಣ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ



ಮೇ 10ಕ್ಕೆ ಬಹಿರಂಗ ಪ್ರಚಾರ ಅಂತ್ಯ
ನಂತರದ ಮುದ್ರಣ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ

ಚಾಮರಾಜನಗರ, ಮೇ 07 - ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 12ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10ರಂದು ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಈ ಹಿನ್ನಲೆಯಲ್ಲಿ ಮೇ 11 ಮತ್ತು 12 ರಂದು ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ ಸಂಸ್ಥೆ ಅಥವಾ ಖಾಸಗಿ ವ್ಯಕ್ತಿ ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದಲ್ಲಿ  ಜಿಲ್ಲಾ ಮಾಧ್ಯಮ ಪ್ರಮಾಣಿಕರಣ ಮತ್ತು ಮಾಧ್ಯಮ ನಿಗಾ ಸಮಿತಿ (ಎಂ.ಸಿ.ಎಂ.ಸಿ) ಯಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಾದ ಬಿ.ಬಿ.ಕಾವೇರಿ ಅವರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಮೇ 11 ಹಾಗೂ 12ರಂದು ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಲು ಮೇ 9ರ ಒಳಗಾಗಿ ಸಂಬಂಧಿಸಿದ ರಾಜಕೀಯ ಪಕ್ಷಗಳು ಪ್ರಕಟಿಸಬೇಕಾದ ಜಾಹಿರಾತಿನ ಅಂಶಗಳನ್ನು ಸ್ವಯಂ ದೃಢೀಕರಿಸಿ ನಿಗದಿತ ನಮೂನೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರಿಗೆ ಸಲ್ಲಿಸಿ ಅನುಮತಿ ಪಡೆಯುವುದು ಹಾಗೂ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅದೇ ಮಾದರಿಯಲ್ಲಿ ಜಿಲ್ಲಾ ಚುನಾಣಾಧಿಕಾರಿಗಳ ಅಧ್ಯಕ್ಷತೆಯ ಎಂಸಿಎಂಸಿ ಸಮಿತಿಗೆ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಅನುಮತಿ ಪಡೆದುಕೊಂಡು ಜಾಹೀರಾತು ಪ್ರಕಟಿಸಬೇಕು ಎಂದು ತಿಳಿಸಿದ್ದಾರೆ.
 ದೃಶ್ಯ, ರೇಡಿಯೋ ಹಾಗೂ ಸ್ಥಳೀಯ ಕೇಬಲ್ ವಾಹಿನಿಗಳಲ್ಲಿ  ಮೇ 10ರಂದು ಸಾಯಂಕಾಲ 6 ಗಂಟೆಯಿಂದ ಮೇ 12ರಂದು ಸಾಯಂಕಾಲ 6.30ರವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಅಥವಾ ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರುವ ಯಾವುದೇ ಚರ್ಚೆ ಸಂವಾದ ವಿಶ್ಲೇಷಣೆ ಚುನಾವಣೋತ್ತರ ಸಮೀಕ್ಷೆಯಂತಹ ವಿಷಯಗಳನ್ನು ಪ್ರಚಾರ ಮಾಡುವುದು ಅಥವಾ ಬಿತ್ತರಿಸುವುದು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


 ಸಾಹಸ ಚಾರಣ : ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 07 - ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ರಾಕ್ ಕ್ಲೈಂಬಿಂಗ್, ರಿವರ್ ಕ್ರಾಸಿಂಗ್ ಸಾಹಸ ಚಾರಣ ಕ್ರೀಡೆಯನ್ನು ಮೇ 16 ರಿಂದ 18ರವರೆಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಂತಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ನೊಂದಾಯಿತ ಸಂಘಗಳ ಯುವಕ ಯುವತಿಯರು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು, 15 ರಿಂದ 35ರ ವಯೋಮಿತಿಯ ಜಿಲ್ಲೆಯ ಯುವಜನರು ಭಾಗವಹಿಸಲು ಅವಕಾಶವಿದೆ. ಭಾಗವಹಿಸುವ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಮೇ 11ರ ಒಳಗೆ ಸಲ್ಲಿಸಬೇಕು.  ಭಾಗವಹಿಸುವ ಅಭ್ಯರ್ಥಿಗಳಿಗೆ ದಿನಭತ್ಯೆ ಹಾಗೂ ಪ್ರಯಾಣ ಭತ್ಯೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿÀ ಸಂಖ್ಯೆ: 08226-224932, ಮೊಬೈಲ್ 9482718278 ಸಂಪರ್ಕಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ  ಪ್ರಕಟಣೆಯಲ್ಲಿ ತಿಳಿಸಿದ್ದಾರÉ.




ಮೇ 20 ರಂದು ಸಹಕಾರ ಸಂಘದ ಚುನಾವಣೆ

ಚಾಮರಾಜನಗರ, ಮೇ 07 - ಕೊಳ್ಳೇಗಾಲ ತಾಲೂಕು ರೇಷ್ಮೆ ನೂಲು ಬಿಚ್ಚಿಸುವವರ ಕೈಗಾರಿಕಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯನ್ನು ಮೇ 20ರಂದು ನಡೆಸಲಿದೆ.
ಮೇ 12 (ಮಧ್ಯಾಹ್ನ 3 ಗಂಟೆಯವರೆಗೆ) ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು,  ಮೇ 13 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ14(ಮಧ್ಯಾಹ್ನ 3 ಗಂಟೆಯ ಒಳಗೆ) ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನಾಂಕವಾಗಿದೆ.  ಚುನಾವಣೆ 20ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಸಹಕಾರ ಸಂಘದವನ್ನು ಸಂಪರ್ಕಿಸುವಂತೆ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಪ್ರಕಟಣೆ ತಿಳಿಸಿದೆ.


ಪ.ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 07 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2018-19ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಜವಾಹರ್ ನವೋದಯ ವಿದ್ಯಾಲಯ  : ಪ್ರವೇಶಪತ್ರ ಪಡೆಯಲು ಸೂಚನೆ
ಚಾಮರಾಜನಗರ, ಮೇ. 07 - ಪ್ರಸಕ್ತ ಸಾಲಿಗೆ ಜವಾಹರ್ ನವೋದಯ ವಿದ್ಯಾಲಯಕ್ಕೆ 9ನೇ ತರಗತಿ ದಾಖಲಾತಿಗೆ ಮೇ 19ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್ ತಿತಿತಿ.ಟಿvshq.oಡಿg ಮೂಲಕ ಡೌನ್‍ಲೋಡ್ ಮÁಡಿಕೊಳ್ಳಬಹುದು. ಡೌನ್ ಲೋಡ್ ಮಾಡಿಕೊಳ್ಳಲು ತೊಂದರೆಯಾದಲ್ಲಿ ಕಚೇರಿಯಿಂದಲೇ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9449090970 ಮತ್ತು 9448552463ನ್ನು ಸಂಪರ್ಕಿಸುವಂತೆ ಜವಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರ

ಶಾಲಾ ದಾಖಲಾತಿ ಆಂದೋಲನ

ಚಾಮರಾಜನಗರ, ಮೇ. 07 :- ಸಾರ್ವಜನಿಕ ಶಿಕ್ಷಣ ಇಲಾಖೆಯು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರನ್ವಯ 6 ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಯಾವುದೇ ತಾರತಮ್ಯವಿಲ್ಲದೆ ಕಡ್ಡಾಯ, ಉಚಿತ ಹಾಗೂ ಗುಣಮಟ್ಟದ ಪ್ರಾಥಮಿಕ ಶಿಕ್ಷಣವನ್ನು ಒದಗಿಸಲು ಉದ್ದೇಶಿಸಿದ್ದು,  ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ.
5 ವರ್ಷ 10 ತಿಂಗಳು ತುಂಬಿದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು, ಶಾಲೆಗೆ ಬರುತ್ತಿರುವ ಎಲ್ಲ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಂದೇ ಶಾಲೆಗೆ ಹಾಜರಾಗುವಂತೆ ಮಾಡಲು ಹಾಗೂ ವಿವಿಧ ಕಾರಣಗಳಿಂದ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸದೆ ಶಾಲೆ ಬಿಟ್ಟ ಮಕ್ಕಳನ್ನು ಪುನ: ಶಾಲೆಗೆ ಕರೆತರುವ ಉದ್ದೇಶದಿಂದ ಮೇ 16 ರಿಂದ 31ರವರೆಗೆ ವಿಶೇಷ ದಾಖಲಾತಿ ಆಂದೋಲನ ಹಾಗೂ ಮೇ 29 ರಿಂದ ಜೂನ್ 30ರವರೆಗೆ ಸಾಮಾನ್ಯ ದಾಖಲಾತಿ ನಡೆಸಲಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಸಾರ್ವಜನಿಕರು, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ವರ್ಗದವರು ಭಾಗವಹಿಸಿ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸುವಲ್ಲಿ ಪೂರ್ಣ ಪ್ರಮಾಣದ ಸಹಕಾರ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.












No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು