ಪಟಾಕಿ, ಬಿಡಿ ಪೆಟ್ರೋಲ್ ಮಾರಾಟ ನಿಷೇಧ
ಚಾಮರಾಜನಗರ, ಮೇ. 19 - ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಹುಮತ ಸಾಬೀತು ಪ್ರಕ್ರಿಯೆ ನಂತರ ಸಂಭ್ರಮಾಚರಣೆಯ ಹೆಸರಿನಲ್ಲಿ ಪಟಾಕಿ ಸಿಡಿಸಿ ಸೋತವರನ್ನು ಕೆರಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಮಾರಾಟ ಹಾಗೂ ಬಿಡಿ ಪೆಟ್ರೋಲ್ ಮಾರಾಟ ನಿಷೇಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಆದೇಶ ಹೊರಡಿಸಿದ್ದಾರೆ.ಸಿಆರ್‍ಪಿಸಿ 1973ರ ಕಲಂ 144ರ ಪ್ರಕಾರ ಜಿಲ್ಲೆಯಾದ್ಯಂತ ಮೇ 19ರ ಬೆಳಿಗ್ಗೆ 6 ಗಂಟೆಯಿಂದ ಮೇ 21ರ ಮಧ್ಯರಾತ್ರಿ 6 ಗಂಟೆಯವರೆಗೆ ಪಟಾಕಿ ಮಾರಾಟ ಹಾಗೂ ಪೆಟ್ರೋಲ್ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ
ಚಾಮರಾಜನಗರ, ಮೇ. 19 ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ವಿಶ್ವಾಸಮತ ಸಂಬಂಧ ಪರ ವಿರೋಧ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳ ರ್ಯಾಲಿ, ಮೆರವಣಿಗೆ, ಸಭೆ ಸಮಾರಂಭ, ಪಟಾಕಿ ಸಿಡಿಸುವಿಕೆ, ಉದ್ರೇಕಕಾರಿ ಘೋಷಣೆ, ಪರಸ್ಪರ ಛೇಡಿಸುವಿಕೆಯಂತಹ ಸಾಧ್ಯತೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ 19ರ ಬೆಳಿಗ್ಗೆ 10 ರಿಂದ ರಾತ್ರಿ 10 ಗಂಟೆಯವರೆಗೆ ಯಾವುದೇ ರ್ಯಾಲಿ, ಮೆರವಣಿಗೆ, ಸಭೆ ಸಮಾರಂಭ, ಪಟಾಕಿ ಸಿಡಿಸುವಿಕೆ, ಘೋಷಣೆ ಕೂಗುವುದು, ವಿರೋಧಪಕ್ಷಗಳ ಕಾರ್ಯಕರ್ತರು ಪರಸ್ಪರ ಛೇಡಿಸುವುದು ಇತ್ಯಾದಿ ನಡೆಸದಂತೆ ಸಿಆರ್‍ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ವಿಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಆದೇಶ ಹೊರಡಿಸಿದ್ದಾರೆ.ಮೇ. 21ರಂದು ಹರದನಹಳ್ಳಿಯಲ್ಲಿ ಜನಸÀಂಪರ್ಕ ಸಭೆ
ಚಾಮರಾಜನಗರ, ಮೇ. 19 (ಕರ್ನಾಟಕ ವಾರ್ತೆ):– ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರ ತಾಲೂಕಿನ ಹರದನಹಳ್ಳಿ ಉಪವಿಭಾಗದ ಕಚೇರಿಯಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಿದೆ.ಸಾರ್ವಜನಿಕರು ಸಭೆಗೆ ಹಾಜರಾಗಿ ವಿದ್ಯುತ್ ಸಂಬಂಧಿಸಿದ ಯಾವುದೇ ಕುಂದುಕೊರತೆಗಳಿದ್ದಲ್ಲಿ ಸಭೆಗೆ ತಿಳಿಸಿ ಪರಿಹರಿಸಿಕೊಳ್ಳುವಂತೆ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ. 20ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಮೇ. 19– ಚಾಮರಾಜನಗರದ ಬಿ.ರಾಚಯ್ಯ ಚೋಡಿ ರಸ್ತೆ ಭಾಗಗಳಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಕಾಮಗಾರಿಯನ್ನು ಮೇ 20ರಂದು ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಬಿ.ರಾಚಯ್ಯ ಜೋಡಿ ರಸ್ತೆ, ಹೌಸಿಂಗ್ ಬೋರ್ಡ್, ಕರಿನಂಜನಪುರ, ಕೋರ್ಟ್ ರಸ್ತೆ, ರಾಮಸಮುದ್ರ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕೊಳ್ಳೇಗಾಲ : ಪಪಂ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 – ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ವಿವಿಧೆಡೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿವರ್Àಹಣೆಯಾಗುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯಲಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಕೊಳ್ಳೇಗಾಲ ಪಟ್ಟಣ, ಬಂಡಳ್ಳಿ, ಒಡೆಯರಪಾಳ್ಯದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮಲೆಮಹದೇಶ್ವರ ಬೆಟ್ಟದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಕೊಳ್ಳೇಗಾಲ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳಿಗೆ ಉಚಿತ ಊಟ ತಿಂಡಿ, ಸಮವಸ್ತ್ರ, ಪಠ್ಯಪುಸ್ತಕ, ಲೇಖನಸಾಮಗ್ರಿ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನೆ, ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಅರ್ಜಿಗಳನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯ ಅಥವಾ ಕೊಳ್ಳೇಗಾಲ ಪಟ್ಟಣದಲ್ಲಿರುವ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 10ರೊಳಗೆ ಸಂಬಂಧಿಸಿದ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment