ವಿಧಾನಸಭಾ ಚುನಾವಣೆ- 2018
ಮೇ. 7ರಂದು ಮತಗಟ್ಟೆ ಅಧಿಕಾರಿಗಳಿಗೆ 2ನೇ ಹಂತದ ಚುನಾವಣಾ ತರಬೇತಿ ಕಾರ್ಯಕ್ರಮ
ಚಾಮರಾಜನಗರ, ಮೇ. 06 - ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚಾಮರಾಜನಗರ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳ ಚುನಾವನಾ ಕೆಲಸಕ್ಕೆ ನೇಮಕವಾಗಿರುವ ಮತಗಟ್ಟೆ ಅಧಿಕಾರಿಗಳಿಗೆ ಮೇ 7ರಂದು 2ನೇ ಹಂತದ ಚುನಾವಣಾ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದಲ್ಲಿ ತರಬೇತಿ ಏರ್ಪಡಿಸಲಾಗಿದೆ.
ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳು ಬೆಳಿಗ್ಗೆ 9 ಗಂಟೆಗೆ ತರಬೇತಿಗೆ ಹಾಜರಾಗಬೇಕು. 2,3,4 ನೇ ಮತಗಟ್ಟೆ ಅಧಿಕಾರಿಗಳಿಗೆ (ಪಿ.ಒ) ಮಧ್ಯಾಹ್ನ 2 ಗಂಟೆಗೆ ತರಬೇತಿ ಆಯೋಜಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ತರಬೇತಿಗೆ ತಪ್ಪದೆ ಕಡ್ಡಾಯವಾಗಿ ಹಾಜರಾಗಬೇಕು. ಗೈರು ಹಾಜರಾಗುವ ಮತಗಟ್ಟೆ ಅಧಿಕಾರಿಗಳಿಗೆ ಪ್ರಜಾ ಪ್ರತಿನಿಧಿ ಕಾಯ್ದೆ ಅನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.
ಮೇ. 6ರಂದು ಪುಣಜನೂರು ಚೆಕ್‍ಪೋಸ್ಟ್‍ನಲ್ಲಿ ಅಕ್ರಮ ಹಣ ವಶ
ಚಾಮರಾಜನಗರ, ಮೇ. 06- ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೇ 6ರಂದು ಪುಣಜನೂರು ಚೆಕ್‍ಪೋಸ್ಟ್ ಮೂಲಕ ಸಾಗಣೆ ಮಾಡುತ್ತಿದ್ದ 1,82,100 ರೂ. ಗಳನ್ನು ಮಾದರಿ ನೀತಿ ಸಂಹಿತೆ ಅನುಷ್ಠಾನಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೇ. 12ರಂದು ಸಂತೆ ಮತ್ತು ಜಾತ್ರೆ ನಿಷೇಧ
ಚಾಮರಾಜನಗರ, ಮೇ. 06 - ವಿಧಾನಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ಮೇ. 12ರಂದು ಮತದಾನ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯ ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತಗಳ ವ್ಯಾಪ್ತಿಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.ಚಾಮರಾಜನಗರ ಜಿಲ್ಲಾ ವ್ಯಾಪ್ತಿಯೊಳಗಿನ ಎಲ್ಲಾ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 5 ರಿಂದ ಸಂಜೆ 7 ಗಂಟೆಯವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ಮೇ. 12ರಂದು ವೇತನ ಸಹಿತ ರಜೆ
ಚಾಮರಾಜನಗರ, ಮೇ. 06 - ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ಮೇ. 12ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿರುವುದರಿಂದ ವ್ಯವಹಾರಿಕ, ಔದ್ಯಮಿಕ ಹಾಗೂ ಇನ್ನಿತರ ಸಾರ್ವಜನಿಕ ಸಂಸ್ಥೆಗಳಲ್ಲಿ ಖಾಯಂ ಮತ್ತು ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮತದಾರರಾಗಿರುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಮಂಜೂರು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.ಸದರಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ತಪ್ಪಿದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 135ಬಿ(3)ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
No comments:
Post a Comment