Friday, 22 June 2018

ಪ್ರಾಚೀನ, ಪಾರಂಪರಿಕ ಮಹತ್ವ ವಸ್ತು ಸಂಗ್ರಹಣೆ : ನಾಗರಿಕರ ಸಹಕಾರ ಕೋರಿಕೆ (22-06-2018)


ನೇರ ಫೋನ್ ಇನ್ ಕಾರ್ಯಕ್ರಮ ಮುಂದೂಡಿಕೆ

ಚಾಮರಾಜನಗರ, ಜೂ. 22  ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಜೂನ್ 23ರಂದು ನಿಗದಿಯಾಗಿದ್ದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಚೀನ, ಪಾರಂಪರಿಕ ಮಹತ್ವ ವಸ್ತು ಸಂಗ್ರಹಣೆ : ನಾಗರಿಕರ ಸಹಕಾರ ಕೋರಿಕೆ

ಚಾಮರಾಜನಗರ, ಜೂ. 22 - ಜಿಲ್ಲೆಯಲ್ಲಿ ದೊರೆಯುವ ಪ್ರಾಚೀನ ಐತಿಹಾಸಿಕ ಹಾಗೂ ಪಾರಂಪರಿಕ ಮಹತ್ವದ ವಸ್ತುಗಳ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ವಸ್ತುಗಳು ಲಭಿಸಿದಲ್ಲಿ ಯಳಂದೂರು ಪಟ್ಟಣದಲ್ಲಿರುವ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ನೀಡುವಂತೆ ಕೋರಲಾಗಿದೆ.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಯಳಂದೂರು ಪಟ್ಟಣದಲ್ಲಿ ದಿವಾನ್ ಪೂರ್ಣಯ್ಯನವರ ಹೆಸರಿನಲ್ಲಿ ಸರ್ಕಾರಿ ವಸ್ತು ಸಂಗ್ರಹಾಲಯ ಸ್ಥಾಪನೆ ಮಾಡಲಾಗಿದೆ. ಇದರ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜಿಲ್ಲೆಯಲ್ಲಿ ಇರುವ ಏಕೈಕ ಸರ್ಕಾರಿ ವಸ್ತುಸಂಗ್ರಹಾಲಯ ಇದಾಗಿದ್ದು ಇದನ್ನು ಆಕರ್ಷಣೀಯ ಪ್ರವಾಸಿ ತಾಣ ಹಾಗೂ ಶೈಕ್ಷಣಿಕ ಚಟುವಟಿಕೆಗಳ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸುವುದು ಇಲಾಖೆಯ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ದೊರೆಯುವ ಪ್ರಾಚೀನ ಐತಿಹಾಸಿಕ ಪಾರಂಪರಿಕ ಮಹತ್ವದ ವಸ್ತುಗಳನ್ನು ಸಂಗ್ರಹಿಸುವ ಕಾರ್ಯ ಮಾಡಲಾಗುತ್ತದೆ. ಸಾರ್ವಜನಿಕರು ಖಾಸಗಿ ಸಂಸ್ಥೆಗಳು ಯಾರೇ ಇರಲಿ ಅವರಲ್ಲಿ ಇರಬಹುದಾದ ಶಾಸನಗಳು, ವೀರಗಲ್ಲು, ಸತಿಕಲ್ಲು, ಮೂರ್ತಿ ಶಿಲ್ಪಗಳು, ತಾಳೆಗರಿಗಳು, ನಾಣ್ಯಗಳು, ಆಯುಧಗಳು, ಕಂಚಿನ ವಿಗ್ರಹಗಳು ಹಾಗೂ 100 ವರ್ಷಕ್ಕಿಂತÀ ಮೇಲ್ಪಟ್ಟ ಯಾವುದೇ ಪ್ರಾಚ್ಯ ವಸ್ತುಗಳು ಕಂಡುಬಂದಲ್ಲಿ ನೀಡಬೇಕು. ಅಲ್ಲದೆ ಮುಖ್ಯವಾಗಿ ದಿವಾನ್ ಪೂರ್ಣಯ್ಯನವರಿಗೆ ಸಂಬಂಧಿಸಿದ ಪುರಾತನ ವಸ್ತುಗಳು ಕಂಡುಬಂದಲ್ಲಿ ಯಳಂದೂರಿನ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತುಸಂಗ್ರಹಾಲಯದ ಮೇಲ್ವಿಚಾರಕರು ಅಥವಾ ಕ್ಯೂರೇಟರ್ ಅವರಿಗೆ ತಲುಪಿಸುವಂತೆ ಕೋರಲಾಗಿದೆ.
ದೂರವಾಣಿ ಸಂಖ್ಯೆ 0821-2424673, ಮೊಬೈಲ್ ಸಂಖ್ಯೆ 7829404796 ಅಥವಾ 7411517651 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ : ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 22- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜುಲೈ 1ರಂದು ಉಚಿತ ಸಾಮೂಹಿಕ ವಿವಾಹವನ್ನು ಏರ್ಪಡಿಸಿರುವ ಹಿನ್ನೆಲೆಯಲ್ಲಿ ಮದುವೆ ಆಗಬಯಸುವ ವಧೂವರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮದುವೆ ಆಗಬಯಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಅಥವಾ ಮೂಳೆ ತಜ್ಞರಿಂದ ಪಡೆದ ದೃಢೀಕರಣ ಪತ್ರ ಲಗತ್ತಿಸಬೇಕು. ವರ ಮತ್ತು ವಧುವಿನ ಭಾವಚಿತ್ರ, ಜಾತಿ ದೃಢೀಕರಣ ಪತ್ರ, ಈ ಹಿಂದೆ ಮದುವೆ ಆಗಿರದ ಬಗ್ಗೆ ಅವರು ವಾಸಿಸುವ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿ ಕಚೇರಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಂದ ಪಡೆದ ಪತ್ರ ಲಗತ್ತಿಸಬೇಕು. 2ನೇ ಮದುವೆ ಅಥವಾ ಬಾಲ್ಯ ವಿವಾಹಕ್ಕೆ ಅವಕಾಶವಿರುವುದಿಲ್ಲ.
ವಧುವಿಗೆ ಚಿನ್ನದ ಮಾಂಗಲ್ಯ, ಬೆಳ್ಳಿ ಕಾಲುಂಗುರ, ಸೀರೆ ರವಿಕೆ, ವರನಿಗೆ ಪಂಚ ಶರ್ಟು, ಟವಲನ್ನು ಪ್ರಾಧಿಕಾರದ ವತಿಯಿಂದ ಉಚಿತವಾಗಿ ನೀಡಲಾಗುವುದು.
ಆಸಕ್ತರು ಅರ್ಜಿ ನಮೂನೆಯನ್ನು ಪಡೆದು ಹೆಸರು, ವಿಳಾಸ, ಇನ್ನಿತರ ವಿವರಗಳೊಂದಿಗೆ ಜೂನ್ 28ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08227-244893, ಮೊಬೈಲ್ 9480215865 ಸಂಪರ್ಕಿಸುವಂತೆ ಶ್ರೀ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.





ಜೂ. 23ರಂದು ಲೋಕಸಭಾ ಸದಸ್ಯರಿಂದ ಬಳೇಮಂಟಪ, ಇತರೆ ಕಟ್ಟಡಗಳ ಪರಿವೀಕ್ಷಣೆ

ಚಾಮರಾಜನಗರ, ಜೂ. 22:- ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಯಳಂದೂರು ಪಟ್ಟಣಕ್ಕೆ ಜೂನ್ 23 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರ್ಕಿಯಾಲಜಿ ನಿರ್ದೇಶಕರು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪಾರಂಪಾರಿಕ ಕಟ್ಟಡ ಇತರೆ ಕಟ್ಟಡಗಳನ್ನು ಪರಿಶೀಲಿಸುವರು.
ಯಳಂದೂರು ಪಟ್ಟಣದಲ್ಲಿರುವ ಬಳೇಮಂಟಪ, ದಿವಾನ್ ಪೂರ್ಣಯ್ಯವರ ಕಟ್ಟಡ ಹಾಗೂ ವಾಲ್ಮೀಕಿ ಭವನದ ಪರಿವೀಕ್ಷಣೆಯನ್ನು ಕೈಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಚಾಮರಾಜನಗರ, ಜೂ.- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ 2018-19ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.
ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ಪ್ರವರ್ಗ 1, ಪ.ಜಾ, ಪ.ಪಂಗಡದವರಿಗೆ ರೂ. 2.50 ಲಕ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದವರಿಗೆ 1 ಲಕ್ಷ ರೂ. ನಿಗದಿಪಡಿಸಿದೆ.
ಅರ್ಜಿ ಹಾಗೂ ಇತರೆ ಮಾಹಿತಿಯನ್ನು ಆನ್ ಲೈನ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನಲ್ಲಿ ಪಡೆದು ಜುಲೈ 20ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ತಾಂತ್ರಿಕ ತೊಂದರೆ ಆದಲ್ಲಿ bಛಿತಿ.hosಣeಟeಟs@ಞಚಿಡಿಟಿಚಿಣಚಿಞಚಿ.gov.iಟಿ ಗೆ ಇ ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸುವುದು.
ಸಹಾಯವಾಣಿ 080-8050370006 ಸಂಪರ್ಕಿಸಿಯೂ ಮಾಹಿತಿ ಪಡೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದÉ.

ಮಿಲಿಟರಿ ಬಾಲಕರ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 22– ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6 ರಿಂದ 12ನೇ ತರಗತಿವರೆಗೆ ಮತ್ತು ಡಿಪ್ಲೊಮಾ ಓದುತ್ತಿರುವ ಮಾಜಿ ಸೈನಿಕರ ಹಾಗೂ ಅವಲಂಬಿತರ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.
ಮೈಸೂರು ನಗರದ ಸುತ್ತಮುತ್ತಲಿನ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದವರಿಗೆ ನಿಲಯದಲ್ಲಿ ಪ್ರವೇಶ ನೀಡಲಾಗುವುದು.
ಅರ್ಜಿಯನ್ನು ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜುಲೈ 9ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2425240 ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 22  ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಲೆ, ಸಾಂಸ್ಕøತಿಕ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಮೇರೆಗೆ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
5 ರಿಂದ 18 ವರ್ಷದೊಳಗಿನ (ದಿನಾಂಕ 1.8.2000 ಹಾಗೂ ನಂತರ ಹುಟ್ಟಿದ) ಮಕ್ಕಳನ್ನು 2018ನೇ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಪ್ರಶಸ್ತಿಯು ಒಂದು ಚಿನ್ನದ ಪದಕ, 20 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ಪುಸ್ತಕ ಓಚರ್ ಪ್ರಶಸ್ತಿ ಪತ್ರ ಹಾಗೂ 35 ಬೆಳ್ಳಿ ಪದಕ (ಪ್ರತಿ ರಾಜ್ಯ ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ) 10 ಸಾವಿರ ರೂ, ನಗದು, 3 ಸಾವಿರ ರೂ. ಮೌಲ್ಯದ ಪುಸ್ತಕ ಓಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆ ಉಳ್ಳವರಾಗಿರಬೇಕು. ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಆಸಕ್ತ ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜೂನ್ 30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕಾಗಿ ಪರಿಶಿಷ್ಟ ಜಾತಿ, ವರ್ಗ ವಿದ್ಯಾರ್ಥಿಗಳಿಗೆ ಪರೀಕ್ಷೆ

ಚಾಮರಾಜನಗರ, ಜೂ. 22  ಪ್ರತಿಷ್ಠಿತ ಶಾಲೆಗಳಿಗೆ ದಾಖಲು ಮಾಡುವ ಸಲುವಾಗಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜೂನ್ 27ರಂದು ಅರ್ಹತಾ ಪರೀಕ್ಷೆಯನ್ನು ನಡೆಸಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತುರ್ತಾಗಿ ಪಡೆಯುವಂತೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಿಗೆ 6 ಮತ್ತು 8ನೇ ತರಗತಿ ಪ್ರವೇಶಕ್ಕಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಲಾಗಿದೆ. ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜೂನ್ 27ರಂದು ಮಧ್ಯಾಹ್ನ 2.30 ರಿಂದ 4.30 ಗಂಟೆಯವರೆಗೆ ನಗರದ ಸತ್ಯಮಂಗಲ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.
ಜೂನ್ 26ರ ಮಧ್ಯಾಹ್ನ 12 ಗಂಟೆಯ ಒಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆಯುವಂತೆ ಸೂಚಿಸಲಾಗಿದೆ.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ತುರ್ತಾಗಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು.
ಪ್ರವೇಶ ಪತ್ರ ಪಡೆಯದೇ ಇದ್ದಲ್ಲಿ ಅರ್ಹತಾ ಪರೀಕ್ಷೆಗೆ ಹಾಜರಾಗಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Tuesday, 19 June 2018

KSP MOB APP ಬಗ್ಗೆ ನೀವು ತಿಳಿಯಿರಿ, ಇತರರಿಗೂ ತಿಳಿಸಿ. ಶೇರ್ ಮಾಡಿ.. #ರಾಮಸಮುದ್ತ ಎಸ್.ವೀರಭದ್ರಸ್ವಾಮಿ

ಕೆ.ಎಸ್.ಪಿ ಮೊಬೈಲ್ ಅಪ್ಲಿಕೇಶನ್ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧೀಕೃತ ಮೊಬೈಲ್ ತಂತ್ರಾಂಶವಾಗಿರುತ್ತದೆ. ಈ ತಂತ್ರಾಂಶವು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಆವೃತ್ತಿಗಳಲ್ಲಿ ಲಭ್ಯವಿದೆ. ಕೆ.ಎಸ್.ಪಿ ಮೊಬೈಲ್ ತಂತ್ರಾಂಶವು ಈ ಕೆಳಗಿನ ಸೇವೆಗಳನ್ನು ನೀಡುತ್ತದೆ, 1. ಎಸ್.ಒ.ಎಸ್ ಗುಂಡಿಯ ಮೂಲಕ ತುರ್ತುಸ್ಥಿತಿಯ ಬಗ್ಗೆ ಎಸ್ಎಂಎಸ್ ಮೂಲಕ ಯಾವುದೇ ವಿಶ್ವಾಸಾರ್ಹ ಸಂಪರ್ಕಗಳಿಗೆ ಮಾಹಿತಿಯನ್ನು ತಿಳಿಸಲು ನಾಗರೀಕರಿಗೆ ಈ ತಂತ್ರಾಂಶವು ಅನುವುಮಾಡಿಕೊಡುತ್ತದೆ. ಬಳಕೆದಾರರ ದೂರವಾಣಿಯಲ್ಲಿ ಜಿಪಿಎಸ್ ಚಾಲ್ತಿಯಲ್ಲಿದ್ದರೆ, ತಮ್ಮ ಸ್ಥಳವನ್ನು ಸಹ ವಿಶ್ವಾಸಾರ್ಹ ಸಂಪರ್ಕಗಳಿಗೆ ಹಂಚಿಕೊಳ್ಳುವ ಸಾಮರ್ಥ್ಯವನ್ನು ಈ ತಂತ್ರಾಂಶವು ಹೊಂದಿರುತ್ತದೆ. 2. ಕರ್ನಾಟಕ ರಾಜ್ಯ ಪೋಲಿಸ್ ನಾಗರೀಕರಿಗೆ ಈ ತಂತ್ರಾಂದ ಮೂಲಕ ಕೆಲವು ಪೊಲೀಸ್ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದು. ಅವು, ಅ) ನಾಗರೀಕರು ತಮ್ಮ ಸಮೀಪದ ಪೋಲಿಸ್ ಠಾಣೆ ಮತ್ತು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯ ಸಂಪರ್ಕ ಸಂಖ್ಯೆ ಮತ್ತು ಸ್ಥಳವನ್ನು ತಿಳಿಯಬಹುದು. ಪೋಲಿಸ್ ಠಾಣೆಗೆ ತಲುಪಲು ನ್ಯಾವಿಗೇಶನ್ ಲಿಂಕ್ ಗೂಗಲ್ ನಕ್ಷೆಗಳ ಮೂಲಕ ಪಡೆಯಬಹುದು; ಆ) ಫೋಟೋಗಳು, ವೀಡಿಯೊಗಳು, ದಾಖಲೆಗಳು ಮತ್ತು ಆಡಿಯೋ ಫೈಲ್ ಗಳಂತಹ ಲಗತ್ತುಗಳೊಂದಿಗೆ ಕರ್ನಾಟಕದಲ್ಲಿನ ಯಾವುದೇ ಪೋಲೀಸ್ ಘಟಕಗಳಿಗೆ ತಂತ್ರಾಂಶದ ಮೂಲಕ, ತುರ್ತುಸ್ಥಿತಿಯಲ್ಲದ ಘಟನೆಗಳನ್ನು ವರದಿ ಮಾಡಬಹುದು; ಇ) ಕರ್ನಾಟಕದ ಯಾವುದೇ ಪೊಲೀಸ್ ಠಾಣೆಗಳ ಮತ್ತು ಕಛೇರಿಗಳ ವಿಳಾಸ, ದೂರವಾಣಿ ಸಂಪರ್ಕ ಸಂಖ್ಯೆ, ಮಾರ್ಗ ನಕ್ಷೆ ಮತ್ತು ಇ-ಮೇಲ್ ಐಡಿಗಳನ್ನು ಪಡೆಯಬಹುದು; ಈ) ಕರ್ನಾಟಕದಲ್ಲಿ ವರದಿಯಾದ ಯಾವುದೇ ಕಾಣೆಯಾದ ವ್ಯಕ್ತಿಯ ವಿವರಗಳನ್ನು ಪಡೆಯಬಹುದು; ಮತ್ತು, ಉ) ಪ್ರಮುಖ ಘಟನೆಗಳಿಗೆ ಸಂಬಂಧಿಸಿದಂತೆ ನಾಗರೀಕರಿಗೆ ಪೋಲಿಸ್ ರಿಂದ ಪುಶ್ ನೋಟಿಫಿಕೇಶನ್ ಗಳು ಲಭ್ಯವಿರುತ್ತದೆ. ಎಲ್ಲಾ ನಗರ ಪೊಲೀಸ್ / ಜಿಲ್ಲಾ ಪೋಲಿಸ್ ವ್ಯಾಪ್ತಿಯ ಪೊಲೀಸ್ ನಿಯಂತ್ರಣ ಕೊಠಡಿಗಳು ಎಲ್ಲಾ ದೂರುಗಳಿಗೆ ಸ್ಪಂದಿಸಿ, ನಾಗರೀಕರಿಂದ ಸಲ್ಲಿಸಿದ ದೂರುಗಳಿಗೆ ಸ್ವಯಂಚಾಲಿತ ವರದಿ ಸಂಖ್ಯೆಯೊಂದಿಗೆ SMS ದೃಢೀಕರಣ ಕಳುಹಿಸುವ ಸೌಲಭ್ಯವನ್ನು ಹೊಂದಿರುತ್ತದೆ. ನಾಗರೀಕರು ತಂತ್ರಾಂಶದ ಸಲಹೆ ಪುಟದ ಮೂಲಕ ಕರ್ನಾಟಕ ರಾಜ್ಯ ಪೊಲೀಸ್ ಗೆ ತಮ್ಮ ಸಲಹೆಗಳನ್ನು ನೀಡಬಹುದು.   Imf.. from Vasanth.

Sunday, 17 June 2018

(13-06-2018)ಚಾ.ನಗರ ನಗರಸಭೆ : ಮನೆಗಳ ಶೌಚಾಲಯ ಸಂಪರ್ಕಕ್ಕೆ ಒಳಚರಂಡಿ ವ್ಯವಸ್ಥೆ ಕಡ್ಡಾಯ

ಚಾ.ನಗರ ನಗರಸಭೆ : ಮನೆಗಳ ಶೌಚಾಲಯ ಸಂಪರ್ಕಕ್ಕೆ ಒಳಚರಂಡಿ ವ್ಯವಸ್ಥೆ ಕಡ್ಡಾಯ

ಚಾಮರಾಜನಗರ, ಜೂ. 13 - ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ಕೆಯುಐಡಿಎಫ್‍ಸಿ ವತಿಯಿಂದ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು ನಗರದಲ್ಲಿ ವಾಸವಾಗಿರುವ ಸಾರ್ವಜನಿಕರು ಮನೆಗಳಿಂದ ಶೌಚಾಲಯ ಸಂಪರ್ಕ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸಿಕೊಳ್ಳುವಂತೆ ತಿಳಿಸಿದೆ.
ಪ್ರಸ್ತುತ ಒಳಚರಂಡಿ ವ್ಯವಸ್ಥೆ ಇದ್ದರೂ ನಗರದ ಹಲವು ವಾರ್ಡ್‍ಗಳ ನಾಗರಿಕರು ಶೌಚಾಲಯದ ಮಲಿನ ನೀರನ್ನು ನೇರವಾಗಿ ತೆರೆದ ಚರಂಡಿಗೆ ಬಿಟ್ಟಿರುವುದು ಕಂಡುಬಂದಿದ್ದು, ಕಾನೂನಿನ ಪ್ರಕಾರ ಇದು ಅಕ್ಷಮ್ಯ ಅಪರಾಧವಾಗಿದೆ. ದಿ ಪ್ರಾಹಿಬಿಷನ್ ಆಫ್ ಎಂಪ್ಲಾಯ್‍ಮೆಂಟ್ ಆಸ್ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಅಂಡ್ ದೇರ್ ರಿಹ್ಯಾಬಿಟೇಷನ್ಸ್ ಆಕ್ಟ್ 2013ರನ್ವಯ ಸೆಕ್ಷನ್ 5(2)ರ ಪ್ರಕಾರ ಅನೈರ್ಮಲ್ಯ ಶೌಚಾಲಯಗಳ್ಳುಳ್ಳವರು ಅಂದರೆ ಶೌಚಾಲಯಗಳನ್ನು ನೇರವಾಗಿ ತೆರೆದ ಚರಂಡಿಗೆ ಸಂಪರ್ಕ ನೀಡಿರುವವರು ಕಡ್ಡಾಯವಾಗಿ 15 ದಿನಗಳೊಳಗೆ ನೈರ್ಮಲ್ಯ ಶೌಚಾಲಯಗಳನ್ನಾಗಿ ಪರಿವರ್ತಿಸಬೇಕಾಗಿರುತ್ತದೆ. ಅಂದರೆ ಶೌಚಾಲಯದ ಮಲಿನ ನೀರನ್ನು ತೆರೆದ ಚರಂಡಿಗೆ ಬಿಡದೇ ಒಳಚರಂಡಿ ವ್ಯವಸ್ಥೆಗೆ ಸಂಪರ್ಕ ಕಲ್ಪಿಸಿಕೊಳ್ಳಬೇಕು. ಒಂದು ವೇಳೆ ಒಳಚರಂಡಿ ವ್ಯವಸ್ಥೆ ಇಲ್ಲದಿದ್ದ ಸಂದರ್ಭದಲ್ಲಿ ಪಿಟ್ ನಿರ್ಮಿಸಿಕೊಂಡು ಶೌಚಾಲಯಗಳನ್ನು ಪಿಟ್‍ಗೆ ಸಂಪರ್ಕಿಸಬೇಕಾಗಿದೆ.
ಪ್ರಸ್ತುತ ಒಳಚರಂಡಿ ವ್ಯವಸ್ಥೆ ಇರುವ ಕಡೆ ಎಲ್ಲಾ ಮನೆಗಳವರು ತಪ್ಪದೇ ಸ್ವಂತ ಖರ್ಚಿನಲ್ಲಿ ಒಳಚರಂಡಿಗೆ ಸಂಪರ್ಕ ಕಲ್ಪಿಸಿಕೊಳ್ಳುವುದು. ಇಲ್ಲವಾದಲ್ಲಿ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9844110282, 9741123572 ಸಂಪರ್ಕಿಸುವಂತೆ ನಗಂÀಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 18ರಂದು ಬಿಆರ್‍ಪಿ, ಸಿಆರ್‍ಪಿ ಹುದ್ದೆಗೆ ಕೌನ್ಸಿಲಿಂಗ್
ಚಾಮರಾಜನಗರ, ಮೇ. 13  ಸಾರ್ವಜನಿಕ ಶಿಕ್ಷಣ ಇಲÁಖೆಯು ಜಿಲ್ಲೆಯಲ್ಲಿ ಖಾಲಿ ಇರುವ ಬಿಆರ್‍ಪಿ, ಸಿಆರ್‍ಪಿ ಮತ್ತು ಶಿಕ್ಷಣ ಸಂಯೋಜಕರ ಹುದ್ದೆಗಳಿಗೆ ಜಿಲ್ಲಾಡಳಿತ ಭವನದಲ್ಲಿರುವ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜೂನ್ 18ರಂದು ಬೆಳಿಗ್ಗೆ 10.30 ಗಂಟೆಗೆ ಕೌನ್ಸಿಲಿಂಗ್ ನಡೆಸಲಾಗುವುದು.
ಲಿಖಿತ ಪರೀಕ್ಷೆ ನಡೆಸಿ ಸೇವಾನುಭವ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ನೀಡಿರುವ ಅಂಕಗಳೊಂದಿಗೆ ಫಲಿತಾಂಶದ ಮೆರಿಟ್ ಪಟ್ಟಿಯನ್ನು ಡಯಟ್ ಸಲ್ಲಿಸಿದೆ. ಪಟ್ಟಿಯ ಆಧಾರದ ಮೇಲೆ ಕೌನ್ಸಿಲಿಂಗ್ ನಡೆಸಲಾಗುವುದು. ಜೇಷ್ಠತಾ ಪಟ್ಟಿಯಲ್ಲಿನ ಅರ್ಹ ಶಿಕ್ಷಕರು ಕೌನ್ಸಿಲಿಂಗ್‍ನಲ್ಲಿ ಭಾಗವಹಿಸಿ ಖಾಲಿ ಇರುವ ಬಿಆರ್ ಪಿ, ಸಿಆರ್‍ಪಿ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಲು ತಿಳಿಸಿದೆ.
ಸೇವಾನುಭವ ಮತ್ತು ವಿದ್ಯಾರ್ಹತೆಗೆ ಸಂಬಂದಿಸಿದಂತೆ ತಾತ್ಕಾಲಿಕ ಅರ್ಹತಾ ಪಟ್ಟಿಯಲ್ಲಿ ನಮೂದಾಗಿರುವ ಅಂಶಗಳ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಜೂನ್ 15ರ ಸಂಜೆ 5 ಗಂಟೆಯೊಳಗೆ ಉಪನಿರ್ದೇಶಖರ ಕಚೇರಿಗೆ ತಿಳಿಸುವಂತೆ ಸಾರ್ವಜನಿಕ ಶಿಕ್ಷಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತಿಗಳಿಗೆ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 13 – ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಲಾಗಿದ್ದು ಅರ್ಜಿ ಆಹ್ವಾನಿಸಿದೆ.                               
ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ,  ಪದ್ದತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತು ನೇರವಾಗಿಯಾಗಲೀ, ಪರೋಕ್ಷವಾಗಿಯೇ ಆಗಲಿ ಮನನೋಯೊಸುವಂತಹ ವಿಷಯವಾಗಲಿ ಇರಬಾರದು. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ, ಸಂಗತಿಗಳು ಪ್ರಸ್ತಾಪವಾಗಿರಬಾರದು.
ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್‍ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಅಳತೆಯಲ್ಲಿ ಡಿಟಿಪಿ ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದು. ಹಸ್ತಪ್ರತಿಯು ಸಾಹಿತ್ಯ, ಮಾನವಿಕ, ವಿಜ್ಞಾನ, ವಿಚಾರ ಸಾಹಿತ್ಯ, ಇತರೆ ಜ್ಞಾನ ಶಿಸ್ತುಗಳ ಸಂಬಂಧಿಸಿದ್ದಾಗಿದ್ದು ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಪರಿಗಣಿಸಲಾಗುವುದಿಲ್ಲ. ಒಬ್ಬ ಲೇಖಕರ ಒಂದು ಪ್ರತಿಯನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗುವುದು.
ಆಸಕ್ತ ಲೇಖಕರು ಜೂನ್ 30ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಬೇಕು. ಹಸ್ತಪ್ರತಿಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಅಥವಾ ದೂರವಾಣಿ ಸಂಖ್ಯೆ 080-22484516, 22017704 ಸಂಪರ್ಕಿಸುವಂತೆ ¥್ರÁಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಣಜಾಣೆಯರ ಬಳಗಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 13-ಕನ್ನಡ ಪುಸ್ತಕ ಪ್ರಾಧಿಕಾರವು ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಜಾನ ಜಾಣೆಯರ ಬಳಗ ರಚಿಸಲು ಅರ್ಜಿ ಆಹ್ವಾನಿಸಿದೆ.
ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿ ರಚಿಸಿಕೊಂಡು ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದು.  ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 4 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಬಳಗ ಹಮ್ಮಿಕೊಳ್ಳಲಿದೆ. ಪ್ರಾಧಿಕಾರದ ವತಿಯಿಂದ ಒಮದು ಕಾರ್ಯಕ್ರಮಕ್ಕೆ 5 ಸಾವಿರ ರೂ.ಗಳ ಗರಿಷ್ಟ ಮಿತಿಯೊಗಳಗೆ ವಾಸ್ತವಿಕ ವೆಚ್ಚ ಭರಿಸಲಾಗುವುದು. ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಬಳಗವನ್ನು ತೊಡಗಿಸಿಕೊಳ್ಳಲಾಗುವುದು.
ನಿಗಧಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಿಂದ ಅರ್ಜಿಯನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 30ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 (ದೂರವಾಣಿ ಸಂಖ್ಯೆ 080-22484516, 22017704) ಇಲ್ಲಿಗೆ ಸಲ್ಲಿಸುವಂತೆ ¥್ರÁಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಣೆಯಾದ ವ್ಯಕ್ತಿ ಪತ್ತೆ ಸುಳಿವಿಗೆ ಮನವಿ
ಚಾಮರಾಜನಗರ, ಜೂ. 13  ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಚಿಕ್ಕರಂಗನಾಯ್ಕ ಅವರು ಕಾಣೆಯಾಗಿರುವ ಕುರಿತು ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಿರೀಶ್ ನಾಯ್ಕ ಎಂಬುವವರು ಅವರ ತಂದೆಗೆ ಮೂರ್ಛೆ ರೋಗವಿದ್ದು ಯಾವಾಗಲೂ ಮಾತ್ರೆ ತೆಗೆದುಕೊಳ್ಳುತ್ತಿದ್ದರು. 2018ರ ಜನವರಿ 2ರಂದು ಮಧ್ಯಾಹ್ನ ಚಿಕ್ಕಲ್ಲೂರು ಜಾತ್ರೆಗೆÉ ಹೋಗಿಬರುತ್ತೇನೆಂದು ಹೋದವರು ಇಲ್ಲಿವರೆಗೂ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿರುತ್ತಾರೆ.
ಚಿಕ್ಕರಂಗನಾಯ್ಕ ಅವರು 65 ವರ್ಷದವರಾಗಿದ್ದು, 5.5 ಅಡಿ ಎತ್ತರ, ಸಾದಾರಣ ಮೈಕಟ್ಟು, ಕಪ್ಪು ಬಣ್ಣ, ಎಡ ಮಂಡಿಯಲ್ಲಿ ಹಳೆಯ ಗಾಯದ ಗುರುತು ಹೊಂದಿದ್ದಾರೆ. ಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ಬಿಳಿ ಪಂಚೆ, ಬಿಳಿ ಟವಲ್ ಧರಿಸಿರುತ್ತಾರೆ.
ಇವರ ಸುಳಿವು ದೊರೆತಲ್ಲಿ ನಗರದ ಗ್ರಾಮಾಂತರ ಪೊಲೀಸ್ ಠಾಣೆಗೆ ತಿಳಿಸುವಂತೆ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿದ್ಯಾರ್ಥಿ ವೇತನಕ್ಕಾಗಿ ಬೀಡಿ ಕಾರ್ಮಿಕರ ಮಕ್ಕಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 13  ಭಾರತ ಸರ್ಕಾರದ ಕಾರ್ಮಿಕ ಮಂತ್ರಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀಡಿ ಕಾರ್ಮಿಕರ ಕಲ್ಯಾಣನಿಧಿ ಚಿಕಿತ್ಸಾಲಯ ವತಿಯಿಂದ ಬೀಡಿ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲÁಗಿದೆ.
1ನೇ ತರಗತಿಯಿಂದ ಪದವಿಯವರೆಗೆ 250 ರೂ.ನಿಂದ 3 ಸಾವಿರ ರೂ.ಗಳವರೆಗೆ, ಐಟಿಐ ಕೋರ್ಸುಗಳಿಗೆ 10 ಸಾವಿರ ರೂ. ಹಾಗೂ ವೃತ್ತಿಪರ ಶಿಕ್ಷಣಕ್ಕೆ 15 ಸಾವಿರ ರೂ. ವಿದ್ಯಾರ್ಥಿವೇತನ ಲಭಿಸಲಿದೆ. ವಿ¸ದ್ಯಾರ್ಥಿವೇತನದ ಹಣವನ್ನು ಬೀಡಿ ಕಾರ್ಮಿಕರ ಮಕ್ಕಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ಕೋರ್ಸುಗಳಿಗೆ ಆಗಸ್ಟ್ 30ರೊಳಗೆ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಿಗೆ hಣಣಠಿs://sಛಿhoಟಚಿಡಿshiಠಿ.gov.iಟಿ ಆನ್ ಲೈನ್ ಮೂಲಕ ಆಗಸ್ಟ್ 31 ಕಡೆಯ ದಿನ. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ತಿಛಿತಿobiಡಿ.ಞಚಿಡಿ@ಟಿiಛಿ.iಟಿ  ಸಂಪರ್ಕಿಸುವಂತೆ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     


   

(11-06-2018) ಅಂತರಾಷ್ಟ್ರೀಯ ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ

ಅಂತರಾಷ್ಟ್ರೀಯ ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ   

ಚಾಮರಾಜನಗರ, ಮೇ. 11 – ಜಿಲ್ಲೆಯಲ್ಲಿ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆದ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಈ ಬಾರಿಯೂ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಮಾತನಾಡಿ ಕಳೆದ ಬಾರಿಯೂ ಅಂತರರಾಷ್ಟ್ರೀಯ ಯೋಗ ದಿನ ಆಚರಣೆಯನ್ನು ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಲಾಗಿದೆ. ಈ ಬಾರಿಯೂ ಕೂಡ ಪೂರ್ವಸಿದ್ಧತೆಯೊಂದಿಗೆ ಯೋಗ ದಿನ ಆಚರಣೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಕ್ರಮ ವಹಿಸಬೇಕು. ಅಧಿಕಾರಿಗಳು, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಸಂಘಸಂಸ್ಥೆಗಳು ಯೋಗ ಆಸಕ್ತರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ನೆರವೇರಿಸಬೇಕು ಎಂದರು.
ಸಾಮೂಹಿಕ ಯೋಗ ಪ್ರದರ್ಶನ ತಾಲೀಮು ನಡೆಸಬೇಕು. ಹಲವು ಶಾಲೆ ಕಾಲೇಜುಗಳಲ್ಲಿ  ಈ ಹಿಂದಿನಿಂದಲೂ ಯೋಗ ಅಭ್ಯಾಸ ಮಾಡಲಾಗುತ್ತಿದೆ. ಇದರ ಜತೆ ಇತರೆ ವಿದ್ಯಾರ್ಥಿಗಳು, ಆಸಕ್ತರು ಯೋಗ ತಾಲೀಮು ನಡೆಸಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ ಕಾರ್ಯಕ್ರಮದಂದು ವಿಶೇಷ ಗಮನ ಸೆಳೆಯುವಂತೆ ಕಾರ್ಯಕ್ರಮ ಏರ್ಪಡಿಸಲು ಶಿಕ್ಷಣ ಇಲಾಖೆ, ಯೋಗ ಸಂಸ್ಥೆಗಳು ಕೈಜೋಡಿಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಶಿಷ್ಟಾಚಾರ ಅನುಸಾರ ಕಾರ್ಯಕ್ರಮ ಏರ್ಪಾಡು ಮಾಡಬೇಕು. ಸಾಮೂಹಿಕ ಯೋಗ ಪ್ರದರ್ಶನದ ಜತೆಗೆ ಶಾಲಾಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷವಾಗಿ ಯೋಗ ಸ್ಪರ್ಧೆಯನ್ನು ಆಯೋಜನೆ ಮಾಡಬೇಕು. ಯೋಗ ಮಹತ್ವ ತಿಳಿಸುವ ಉಪನ್ಯಾಸವನ್ನೂ ಸಹ ಪ್ರತ್ಯೇಕವಾಗಿ ಹಮ್ಮಿಕೊಳ್ಳಬೇಕೆಂದು ಸೂಚಿಸಿದರು.
ಯೋಗದ ಪ್ರಾಮುಖ್ಯತೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ಸಹ ನಡೆಸಬೇಕು. ಯೋಗ ನಡಿಗೆಯಂತಹ ಕಾರ್ಯಕ್ರಮಗಳ ಆಯೋಜನೆಯನ್ನು ಪೂರ್ವಭಾವಿಯಾಗಿ ಏರ್ಪಡಿಸಬೇಕು. ಕಳೆದ ಬಾರಿ ಯೋಗ ದಿನಾಚರಣೆ ನಡೆದ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಅಗತ್ಯವಿರುವ ಎಲ್ಲ ಸಿದ್ಧತೆಗೆ ಅವಶ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಹರೀಶ್ ಕುಮಾರ್ ಅವರು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಪುನೀತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ಯಾಮಲ, ಪತಂಜಲಿ ಯೋಗ ಸಂಸ್ಥೆ ಅಧ್ಯಕ್ಷರಾ ಎಚ್.ಜಿ. ಕುಮಾರಸ್ವಾಮಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಸಂಸ್ಥೆಯ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಜೂ. 12ರಂದು ನಗರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಚಾಮರಾಜನಗರ, ಜೂ. 11 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಂಘಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆಯನ್ನು ಜೂನ್ 12ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಾಲಯ ಬಳಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಜಾಥಾಗೆ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಶಾಲಾಕ್ಷಿ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಬಿ. ಬಸವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್. ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ. ಶ್ರೀನಿವಾಸ್, ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಸಿಎಸಿಎಲ್‍ಕೆ ಜಿಲ್ಲಾ ಸಂಚಾಲಕರಾದ ಬಿ.ಎಸ್. ಬಸವರಾಜು, ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗವಹಿಸುವರು.
ಬಾಲ ನ್ಯಾಯ ಮಂಡಳಿ ಸದಸ್ಯರು ಹಾಗೂ ಸಾಧನ ಸಂಸ್ಥೆ ನಿರ್ದೇಶಕರಾದ ಟಿ.ಜೆ. ಸುರೇಶ್ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಕೆಎಸ್‍ಆರ್‍ಟಿಸಿ : ಟಿಕೆಟ್ ಪಡೆಯದ ಪ್ರಯಾಣಿಕರಿಗೆ ದಂಡ

ಚಾಮರಾಜನಗರ, ಮೇ. 11 :– ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಕಳೆದ ಮೇ ತಿಂಗಳಲ್ಲಿ ಟಿಕೆಟ್ ಪಡೆಯದೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ 324 ಪ್ರಯಾಣಿಕರಿಗೆ 38780 ರೂ.ಗಳ ದಂಡವನ್ನು ವಸೂಲಿ ಮಾಡಿದೆ.
ಕಳೆದ ಮೇ ತಿಂಗಳಲ್ಲಿ ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 234 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(08-06-2018) ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ. 86.41ರಷ್ಟು ಮತದಾನ

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ : ಜಿಲ್ಲೆಯಲ್ಲಿ ಶೇ. 86.41ರಷ್ಟು ಮತದಾನ

ಚಾಮರಾಜನಗರ, ಜೂ. 08 - ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಲ್ಲಿ ಶೇ. 86.41ರಷ್ಟು ಮತದಾನ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನಲ್ಲಿ ಶೇ. 88.15, ಚಾಮರಾಜನಗರ ತಾಲೂಕಿನಲ್ಲಿ ಶೇ. 83.43, ಯಳಂದೂರು ತಾಲೂಕಿನಲ್ಲಿ ಶೇ. 83.43, ಕೊಳ್ಳೇಗಾಲ ತಾಲೂಕಿನಲ್ಲಿ ಶೇ. 88.70 ಮತ್ತು ಹನೂರು ತಾಲೂಕಿನಲ್ಲಿ ಶೇ. 90.40ರಷ್ಟು ಮತದಾನ ನಡೆದಿದೆ.
ಜಿಲ್ಲೆಯಲ್ಲಿ 1351 ಪುರುಷ ಮತದಾರರು, 548 ಮಹಿಳಾ ಮತದಾರರು ಸೇರಿದಂತೆ ಒಟ್ಟು 1899 ಮತದಾರರು ಇದ್ದಾರೆ. ಈ ಪೈಕಿ 1201 ಪುರುಷರು, 440 ಮಹಿಳೆಯರು ಸೇರಿದಂತೆ ಒಟ್ಟಾರೆ 1641 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ. 88.90ರಷ್ಟು ಪುರುಷರು, ಶೇ. 80.29ರಷ್ಟು ಮಹಿಳೆಯರು ಮತ ಚಲಾಯಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನಲ್ಲಿ 285 ಪುರುಷರು, 61 ಮಹಿಳೆಯರು ಸೇರಿದಂತೆ 346 ಮತದಾರರಿದ್ದಾರೆ. ಈ ಪೈಕಿ 252 ಪುರುಷರು, 53 ಮಹಿಳೆಯರು ಸೇರಿದಂತೆ 305 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ. 88.42ರಷ್ಟು ಪುರುಷರು, 86.89ರಷ್ಟು ಮಹಿಳೆಯರು ಮತ ಚಲಾಯಿಸಿದ್ದಾರೆ.
ಚಾಮರಾಜನಗರ ತಾಲೂಕಿನಲ್ಲಿ 438 ಪುರುಷರು, 232 ಮಹಿಳೆಯರು ಸೇರಿದಂತೆ 670 ಮತದಾರರಿದ್ದಾರೆ. ಈ ಪೈಕಿ 382 ಪುರುಷರು, 177 ಮಹಿಳೆಯರು ಸೇರಿದಂತೆ 559 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ. 87.21ರಷ್ಟು ಪುರುಷರು, ಶೇ 76.29ರಷ್ಟು ಮಹಿಳೆಯರು ಮತ ಚಲಾಯಿಸಿದ್ದಾರೆ.
ಯಳಂದೂರು ತಾಲೂಕಿನಲ್ಲಿ 132 ಪುರುಷರು, 43 ಮಹಿಳೆಯರು ಸೇರಿದಂತೆ 175 ಮತದಾರರಿದ್ದಾರೆ. ಇವರಲ್ಲಿ 115 ಪುರುಷರು, 31 ಮಹಿಳೆಯರು ಸೇರಿದಂತೆ 146 ಮತದಾರರು ಮತ ಚಲಾಯಿಸಿದ್ದಾರೆ. ಶೇ.87.12ರಷ್ಟು ಪುರುಷರು, ಶೇ. 72.09ರಷ್ಟು ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಕೊಳ್ಳೇಗಾಲ ತಾಲೂಕಿನಲ್ಲಿ 342 ಪುರುಷರು 189 ಮಹಿಳೆಯರು ಸೇರಿದಂತೆ 531 ಮತದಾರರಿದ್ದಾರೆ. ಈ ಪೈಕಿ 312 ಪುರುಷರು, 159 ಮಹಿಳೆಯರು ಸೇರಿದಂತೆ 471 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ. 91.23ರಷ್ಟು ಪುರುಷರು, 84.13ರಷ್ಟು ಮಹಿಳೆಯರು ಮತದಾನ ಮಾಡಿದ್ದಾರೆ.
ಹನೂರು ತಾಲೂಕಿನಲ್ಲಿ 154 ಪುರುಷರು 23 ಮಹಿಳೆಯರು ಸೇರಿದಂತೆ 177 ಮತದಾರರಿದ್ದಾರೆ. ಇವರಲ್ಲಿ 140 ಪುರುಷರು, 20 ಮಹಿಳೆಯರು ಸೇರಿದಂತೆ 160 ಮತದಾರರು ಮತದಾನ ಮಾಡಿದ್ದಾರೆ. ಶೇ. 90.91ರಷ್ಟು ಪುರುಷರು, ಶೇ. 86.96ರಷ್ಟು ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. 

ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನ

ಚಾಮರಾಜನಗರ, ಜೂ. 08  ತೋಟಗಾರಿಕೆ ಇಲಾಖೆಯು 2018ರ ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ತೋಟಗಾರಿಕಾ ಬೆಳೆಗಳಿಗೆ ಅನುಷ್ಟಾನಗೊಳಿಸುತ್ತಿದೆ.
ಯೋಜನೆಯನ್ನು ತಾಲ್ಲೂಕಿನಲ್ಲಿ ಬೆಳೆಯುವ ಮುಖ್ಯ ಬೆಳೆಗಳಿಗೆ ಬಿಮಾ ಯೋಜನೆಯನ್ನು ಹೋಬಳಿ ಮಟ್ಟದಲ್ಲಿ ಅನುಷ್ಟಾನಗೊಳಿಸಲಾಗುವುದು.
ಚಾಮರಾಜನಗರ ತಾಲೂಕಿನ ಕಸಬಾ, ಚಂದಕವಾಡಿ ಹೋಬಳಿಗೆ ಈರುಳ್ಳಿ (ನೀರಾವರಿ), ಅರಿಶಿನ, ಟೊಮೆಟೋ (ಅನಿರ್ದಿಷ್ಟ), ಹರದನಹಳ್ಳಿ ಹೋಬಳಿಗೆ ಈರುಳ್ಳಿ (ನೀರಾವರಿ), ಅರಿಶಿನ, ಆಲೂಗೆಡ್ಡೆ, ಟೊಮೆಟೋ (ಅನಿರ್ದಿಷ್ಟ), ಹರವೆ ಹಾಗೂ ಸಂತೆಮರಹಳ್ಳಿ ಹೋಬಳಿಗೆ ಅರಿಶಿನ, ಟೊಮೆಟೋ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ.
ಗುಂಡ್ಲುಪೇಟೆ ತಾಲೂಕಿನ ಕಸಬಾ, ಬೇಗೂರು, ಹಂಗಳ, ತೆರಕಣಾಂಬಿ ಹೋಬಳಿಗೆ ಕೊಳ್ಳೇಗಾಲ ತಾಲೂಕಿನ ಕಸಬಾ, ಪಾಳ್ಯ ಹೋಬಳಿಗೆ ಈರುಳ್ಳಿ (ನೀರಾವರಿ), ಅರಿಶಿನ, ಟೊಮೆಟೋ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ.
ಹನೂರು ತಾಲೂಕಿನ ಹನೂರು ಭಾಗಕ್ಕೆ ಈರುಳ್ಳಿ (ನೀರಾವರಿ), ಅರಿಶಿನ, ಟೊಮೆಟೋ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ. ಲೊಕ್ಕನಹಳ್ಳಿ ಹೋಬಳಿಗೆ ಈರುಳ್ಳಿ (ನೀರಾವರಿ), ಅರಿಶಿನ, ಟೊಮೆಟೋ, ಆಲೂಗಡ್ಡೆ (ಅನಿರ್ದಿಷ್ಟ), ರಾಮಾಪುರ ಹೋಬಳಿಗೆ ಈರುಳ್ಳಿ (ನೀರಾವರಿ, ಅರಿಶಿನ (ಅನಿರ್ಧಿಷ್ಟ)) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ.
ಟೊಮೊಟೋ (ಅನಿರ್ಧಿಷ್ಟ) ಬೆಳೆಗೆ ಪ್ರತಿ ಎಕರೆಗೆ 2388 ರೂ., ಆಲೂಗೆಡ್ಡೆ (ನೀರಾವರಿ) ಪ್ರತಿ ಎಕರೆಗೆ 2935 ರೂ., ಈರುಳ್ಳಿ (ನೀರಾವರಿ) ಪ್ರತಿ ಎಕರೆಗೆ 1518 ರೂ., ಅರಿಶಿನ (ಅನಿರ್ಧಿಷ್ಟ) ಪ್ರತಿ ಎಕರೆಗೆ 2692 ರೂ. ವಿಮಾ ಕಂತನ್ನು ಪಾವತಿಸಬೇಕಿದೆ.
ಹೋಬಳಿ ಪಟ್ಟಿಯಲ್ಲಿ ನೀಡಲಾಗಿರುವ ಬೆಳೆಗಳಿಗೆ ಇಚ್ಚೆಯುಳ್ಳ ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ, ಆಧಾರ್ ಸಂಖ್ಯೆ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ನೋಂದಣಿ ಮಾಡಿ ಸಂರಕ್ಷಣೆ ಪೋರ್ಟಲ್‍ನಲ್ಲಿ ಅಳವಡಿಸಿದ ನಂತರ ಅರ್ಜಿಗಳನ್ನು ಹತ್ತಿರದ ಆರ್ಥಿಕ ಸಂಸ್ಥೆ (ಬ್ಯಾಂಕ್)ಗಳಿಗೆ ಹಾಜರುಪಡಿಸಬೇಕು. ವಿಮಾ ಕಂತನ್ನು ಪಾವತಿಸಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಬೇಕು. ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಲಾಗುವುದು.
ಬೆಳೆ ಸಾಲ ಪಡೆಯದ ರೈತರು ಅಂದಾಜು ಉಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ಪಾಲ್ಗೊಳ್ಳಬಹುದು. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗಧಿಪಡಿಸಿದ ಅವಧಿಯೊಳಗಾಗಿ ನೋಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು, ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು ಅಥವಾ ಹೆಚ್ಚುವರಿ ವಿಮಾ ಕಂತನ್ನು ಪಾವತಿಸಿದಲ್ಲಿ ರೈತರಿಗೆ ಮರು ಪಾವತಿಸಬಹುದು.
ಈ ಯೋಜನೆಯಡಿ 2018ರ ಮುಂಗಾರು ಹಂಗಾಮಿನಲ್ಲಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ (ಇನಂಡೇಷನ್) ಇವುಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ಪರಿಹಾರವನ್ನು ನೀಡಲಾಗುವುದು ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 48 ಗಂಟೆಗಳೊಳಗೆ ತಿಳಿಸಬೇಕು.
ಮಳೆಯ ಅಭಾವ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ.25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ವಿಮೆಯನ್ನು ರದ್ದುಪಡಿಸಲಾಗುವುದು. ಇನ್ನುಳಿದಂತೆ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಬೆಳೆ ವಿಮೆ ಕ್ಲೇವiನ್ನು ಇತ್ಯರ್ಥಪಡಿಸಲಾಗುವುದು.
ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರಿತ್ಯಗಳಾದ ಹೆಚ್ಚಿನ ಮಳೆ, ನೆರೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ, ತೀವ್ರ ಬರಗಾಲ ಮುಂತಾದವುಗಳಿಂದ ಯಾವುದೇ ಅಧಿಸೂಚಿತ ವಿಮಾ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀಕ್ಷಿತ ಇಳುವರಿಯು ಪ್ರಾರಂಭಿಕ ಇಳುವರಿಯ ಶೇ.50 ಕ್ಕಿಂತ ಕಡಿಮೆ ಇದ್ದರೆ, ವಿಮೆ ಮಾಡಿಸಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇಕಡಾ 25ರಷ್ಟು ಹಣವನ್ನು ಮುಂಚಿತವಾಗಿ ವಿಮಾ ಸಂಸ್ಥೆಯು ನೀಡಲಾಗುವುದು. ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಬೆಳೆ ಇಳುವರಿ ಮಾಹಿತಿ ಬಂದನಂತರ ಅಂತಿಮ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಈ ಹಣವನ್ನು ಹೊಂದಾಣಿಕೆ ಮಾಡಲಾಗುವುದು.
ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಗ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.

ಕೊಳ್ಳೇಗಾಲ : ನಿವೇಶನ ಸ್ವಚ್ಚವಾಗಿಡಲು ಮಾಲೀಕರಿಗೆ ನಗರಸಭೆ ಸೂಚನೆ

ಚಾಮರಾಜನಗರ, ಜೂ. 08- ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿರುವ ಮಾಲೀಕರಿಗೆ ನಗರಸಭೆ ನಿವೇಶನವನ್ನು ಸ್ವಚ್ಚಗೊಳಿಸುವಂತೆ ಸೂಚಿಸಿದೆ.
ಮಾಲೀಕರಿಗೆ ಸೇರಿದ ಖಾಲಿ ನಿವೇಶನಗಳಲ್ಲಿ ಗಿಡಗಂಟೆಗಳಿಂದ ತ್ಯಾಜ್ಯ ತುಂಬಿದೆ. ಖಾಲಿ ನಿವೇಶನಗಳು ಹಂದಿ ನಾಯಿಗಳ ವಾಸಸ್ಥಾನವಾಗಿದ್ದು ಸಾರ್ವಜನಿಕರಿಗೆ ಹಾಗೂ ನೆರೆಹೊರೆಯವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ 31 ವಾರ್ಡುಗಳಲ್ಲಿ ಖಾಲಿ ನಿವೇಶನ ಹೊಂದಿರುವವರು ತಮ್ಮ ಸ್ವಂತ ಖರ್ಚಿನಲ್ಲಿ ಸ್ವಚ್ಚಗೊಳಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ತಿಳಿಸಿದೆ.
ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ, ಚಮಚ, ಕ್ಲಿಂಗ್ ಫಿಲ್ಮ್, ಊಟದ ಮೇಜಿನ ಮೇಲೆ ಹರಡುವ ಹಾಳೆ, ಥರ್ಮೋಕೋಲ್ ಹಾಗೂ ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್ ನಂತಹ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಈಗಾಗಲೇ ನಿಷೇಧಿಸಲಾಗಿದ್ದು ಕಾನೂನು ಉಲ್ಲಂಘಿಸಿದಲ್ಲಿ ಪರಿಸರ (ಸಂರಕ್ಷಣೆ) ಕಾಯಿದೆ ಅನ್ವಯ ಕ್ರಮ ಜರುಗಿಸಲಾಗುವುದು.
ಮಾಂಸ ಮಾರಾಟ ಮಾಡುವವರು ಅಂಗಡಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹೊರಗಡೆ ಎಲ್ಲಿಯೂ ಬಿಸಾಡದೆ ಪ್ರತಿದಿನ ಸಂಜೆ ನಗರಸಭೆ ವತಿಯಿಂದ ಬರುವ ವಾಹನಗಳಿಗೆ ನೀಡಬೇಕು.
ಹಂದಿ ಮಾಲೀಕರುಗಳು ಹಂದಿಗಳನ್ನು ನಗರಸಭೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಲು ಬಿಡದೆ ನಗರಸಭೆ ವ್ಯಾಪ್ತಿಯ ಹೊರಗಡೆ ಸ್ಥಳಾಂತರಿಸಬೇಕು.
ಕಟ್ಟಡ ಕಟ್ಟುತ್ತಿರುವವರು ಉತ್ಪತ್ತಿಯಾಗುವ ತ್ಯಾಜ್ಯವನ್ನು ನಗರಸಭೆ ವ್ಯಾಪ್ತಿಯಲ್ಲಿ ಎಲ್ಲೂ ಹಾಕುವಂತಿಲ್ಲ.  ನಗರಸಭೆ ನೀಡಿರುವ ಸೂಚನೆಯನ್ನು ಪಾಲಿಸದೇ ಯಾರಾದರೂ ಉಲ್ಲಂಘಿಸಿದಲ್ಲಿ ನಗರಸಭೆ ವತಿಯಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ಜೂ. 9, 10ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಜೂ. 08  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ನಗರದ ಉಪವಿಭಾಗ ವ್ಯಾಪ್ತಿಗೆ ಬರುವ ಬಿ. ರಾಚಯ್ಯ ಜೋಡಿ ರಸ್ತೆ ಭಾಗಗಳಲ್ಲಿ ರಸ್ತೆ ಅಗಲೀಕರಣ ಮಾಡಲು ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಜೂನ್ 9 ಹಾಗೂ 10ರಂದು ಕೈಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಎರಡೂ ದಿನಗಳಂದು ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಬಿ. ರಾಚಯ್ಯ ಜೋಡಿ ರಸ್ತೆ, ಹೌಸಿಂಗ್ ಬೋರ್ಡ್, ಕರಿನಂಜನಪುರ, ನ್ಯಾಯಾಲಯ ರಸ್ತೆ ಹಾಗೂ ರಾಮಸಮುದ್ರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 9ರಂದು ಕಾನೂನು ಅರಿವು ನೆರವು ಕಾರ್ಯಾಗಾರ

ಚಾಮರಾಜನಗರ, ಜೂ. 08 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಂಗ ಸಿಬ್ಬಂದಿ ವರ್ಗದವರಿಗೆ ಒಂದು ದಿನದ ಕಾನೂನು ಅರಿವು ನೆರವು ಕಾರ್ಯಾಗಾರವನ್ನು ಜೂನ್ 9ರಂದು ಬೆಳಿಗ್ಗೆ 11 ಗಂಟೆಗೆ ನಗರದ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಾಗಾರ ಉದ್ಘಾಟಿಸುವರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ವಿನಯ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ರಮೇಶ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ, ಜಿ. ಯೋಗೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀಕಾಂತ್, ಎನ್. ಶರತ್ ಚಂದ್ರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕೊಳ್ಳೇಗಾಲದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಜೆ. ಕೃಷ್ಣ ಹಾಗೂ ಗುಂಡ್ಲುಪೇಟೆಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ್ ಪಿ. ದಿಡ್ಡಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


ನೆಹರು ಯುವಕೇಂದ್ರದಿಂದ ಪರಿಸರ ದಿನ ಆಚರಣೆ 

ಚಾಮರಾಜನಗರ, ಜೂ. 08 :- ನೆಹರು ಯುವಕೇಂದ್ರ, ಶ್ರೀ ಮಹರ್ಷಿ ವಾಲ್ಮೀಕಿಯುವPರ ಸಂಘ, ಕೆಂಪನಪುರ ಹಾಗೂ ಸಂಯುಕ್ತಯುವಜನ ಸಂಘ, ಚಾಮರಾಜನಗರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಣೆ ಕಾರ್ಯಕ್ರಮವನ್ನು ಇತ್ತೀಚಿಗೆ ಕೆಂಪನಪುರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸೈಟಿ, ಯೋಜನಾ ನಿರ್ದೇಶಕರಾದ ಎಂ. ಮಹೇಶ ಅವರು ಪ್ರತಿಯೊಬ್ಬರು ಗ್ರಾಮದಲ್ಲಿ ಅವರವರ ಜಮೀನಿನಲ್ಲಿ ಗಿಡಗಳನ್ನು ನೆಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ  ಶಾಲೆಯ ಮುಂದೆ ಗಿಡಗಳನ್ನು ನೆಡಬೇಕು. ಇದರಿಂದ ಪರಿಸರ ಉಳಿಸಲು ಸಾಧ್ಯವಾಗುತ್ತದೆ ಎಂದರು.
ಗ್ರಾಮದಲ್ಲಿ ಯುವಕ ಸಂಘ ಮತ್ತು ಯುವತಿ ಸಂಘಗಳನ್ನು ರಚಿಸಬೇಕು. ನೆಹರು ಯುವಕೇಂದ್ರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಅತಿಥಿ ಉಪನ್ಯಾಸವನ್ನು ಎಂ ನಟರಾಜು ಅವರು ನೀಡಿ ನಮ್ಮ ಸುತ್ತ ಮುತ್ತಲ ಪರಿಸರದಲ್ಲಿ ಗಿಡಮರಗಳ ಪೋಷಣೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದರು.
ಮುಖ್ಯ ಅತಿಥಿಯಾಗಿ ಇತಿಹಾಸ ಉಪನ್ಯಾಸಕರಾದ ಪ್ರಭುಸ್ವಾಮಿ ಪಾಲ್ಗೊಂಡರು. ಕಾಲೇಜು ಪ್ರಾಂಶುಪಾಲರಾದ ಮಂಜುನಾಥ ಪ್ರಸನ್ನ ಅಧ್ಯಕ್ಷತೆ ವಹಿಸಿದ್ದರು.

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 08 - ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆಯ್ಕೆ ಪ್ರಾಧಿಕಾರದ ವತಿಯಿಂದ 49 ಅರಣ್ಯ ವೀಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಾಮರಾಜನಗರ ವೃತ್ತದ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಿಭಾಗದಲ್ಲಿ 20, ಪರಿಶಿಷ್ಟ ಪಂಗಡಕ್ಕೆ 2 (ಬ್ಯಾಕ್ ಲಾಗ್), ಕಾವೇರಿ ವನ್ಯಜೀವಿ ವಿಭಾಗ ಕೊಳ್ಳೇಗಾಲ ವಿಭಾಗದಲ್ಲಿ 10 ಮತ್ತು ಪರಿಶಿಷ್ಟ ಪಂಗಡ (ಸಾಮಾನ್ಯ) 1 (ಬ್ಯಾಕ್ ಲಾಗ್), ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ವಿಭಾಗದಲ್ಲಿ 15 ಮತ್ತು ಪರಿಶಿಷ್ಟ ಪಂಗಡ (ಸಾಮಾನ್ಯ-1 (ಬ್ಯಾಕ್ ಲಾಗ್)) ಸೇರಿದಂತೆ ಒಟ್ಟು 49 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರವೇ ಜೂನ್ 11 ರಿಂದ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಜುಲೈ 10 (ಸಂಜೆ 4 ಗಂಟೆಯವರೆಗೆ) ಕಡೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಜೂನ್ 11 ರಿಂದ ಜುಲೈ 13ರ ಮಧ್ಯಾಹ್ನ 2.30 ಗಂಟೆಯವರೆಗೆ ಪಾವತಿಸಲು ಅವಕಾಶವಿದೆ.
ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.ಚಿಡಿಚಿಟಿಥಿಚಿ.gov.iಟಿ ನೋಡುವಂತೆ ಪ್ರಕಟಣೆ ತಿಳಿಸಿದೆ.







(07-06-2018)ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ : ಮತದಾನಕ್ಕೆ ಸಕಲ ವ್ಯವಸ್ಥೆ

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ : ಮತದಾನಕ್ಕೆ ಸಕಲ ವ್ಯವಸ್ಥೆ   

ಚಾಮರಾಜನಗರ, ಜೂ. 07  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8ರಂದು ಮತದಾನ ನಡೆಯಲಿದ್ದು ಜಿಲ್ಲೆಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ನಗರದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಇಂದು ಮಸ್ಟರಿಂಗ್ ಕಾರ್ಯ ನಡೆಯಿತು. ಬಳಿಕ ಮತಗಟ್ಟೆಗಳಿಗೆ ಚುನಾವಣೆ ಕಾರ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿ ಸಿಬ್ಬಂದಿಯವರು ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪರಿಕರಗಳೊಂದಿಗೆ ತೆರಳಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ಜೂನ್ 8ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ತಾಲೂಕು ಕಚೇರಿಯ ಮಿನಿ ವಿಧಾನಸೌದಧ ಮೀಟಿಂಗ್ ಹಾಲ್‍ನಲ್ಲಿ ಹಾಗೂ ಹನೂರು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ತಲಾ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 5 ಮತಗಟ್ಟೆಗಳನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ 1351 ಪುರುಷ ಮತದಾರರು, 548 ಮಹಿಳಾ ಮತದಾರರು ಸೇರಿದಂತೆ ಒಟ್ಟು 1899 ಮತದಾರರು ಇದ್ದಾರೆ. ಗುಂಡ್ಲುಪೇಟೆ ತಾಲೂಕಿನಲ್ಲಿ 285 ಪುರುಷರು, 61 ಮಹಿಳೆಯರು ಸೇರಿದಂತೆ 346 ಮತದಾರರಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 438 ಪುರುಷರು, 232 ಮಹಿಳೆಯರು ಸೇರಿದಂತೆ 670 ಮತದಾರರಿದ್ದಾರೆ. ಯಳಂದೂರು ತಾಲೂಕಿನಲ್ಲಿ 132 ಪುರುಷರು, 43 ಮಹಿಳೆಯರು ಸೇರಿದಂತೆ 175 ಮತದಾರರಿದ್ದಾರೆ. ಕೊಳ್ಳೇಗಾಲ ತಾಲೂಕಿನಲ್ಲಿ 342 ಪುರುಷರು 189 ಮಹಿಳೆಯರು ಸೇರಿದಂತೆ 531 ಮತದಾರರಿದ್ದಾರೆ. ಹನೂರು ತಾಲೂಕಿನಲ್ಲಿ 154 ಪುರುಷರು 23 ಮಹಿಳೆಯರು ಸೇರಿದಂತೆ 177 ಮತದಾರರಿದ್ದಾರೆ.
ಚುನಾವಣೆ : ಮತದಾನ ಕೇಂದ್ರದ 200 ಮೀ. ಒಳವ್ಯಾಪ್ತಿಯಲ್ಲಿ ಮಾಹಿತಿ ಕೇಂದ್ರ ಸ್ಥಾಪನೆಗೆ ಅವಕಾಶ ಇಲ್ಲ
ಚಾಮರಾಜನಗರ, ಜೂ. 07 - ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು ಮತದಾನ ಕೇಂದ್ರದ 200 ಮೀ. ಪ್ರದೇಶದ ಒಳವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವಂತಿಲ್ಲ.
ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರ, ನಗರ ಸ್ಥಳೀಯ ಸಂಸ್ಥೆಗಳ ಲಿಖಿತ ಅನುಮತಿಯೊಂದಿಗೆ 200 ಮೀ. ಪ್ರದೇಶದ ಹೊರಗೆ ಕೇವಲ ಒಂದು ಮಾಹಿತಿ ಕೇಂದ್ರವನ್ನು ಮಾತ್ರ (1 ಟೇಬಲ್ ಹಾಗೂ 2 ಕುರ್ಚಿಗಳಿಗೆ ಸೀಮಿತಗೊಳಿಸಿ, 3 ಅಡಿ ಅಗಲ ನಾಲ್ಕೂವರೆ ಅಡಿ ಉದ್ದದ ಬ್ಯಾನರ್) ಮತದಾರರಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡುವ ಸಲುವಾಗಿ ಸ್ಥಾಪಿಸಬಹುದಾಗಿದೆ.
ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಮುಂಚಿತವಾಗಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳಾಗಿರುವ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾನ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸುವಂತಿಲ್ಲ

ಚಾಮರಾಜನಗರ, ಜೂ. 07 :- ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಮತಕೇಂದ್ರಗಳ 200 ಮೀ. ಪ್ರದೇಶದ ಒಳವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವಂತಿಲ್ಲ.
ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರ, ನಗರ ಸ್ಥಳೀಯ ಸಂಸ್ಥೆಗಳ ಲಿಖಿತ ಅನುಮತಿಯೊಂದಿಗೆ 200 ಮೀ. ಪ್ರದೇಶದ ಹೊರಗೆ ಕೇವಲ ಒಂದು ಮಾಹಿತಿ ಕೇಂದ್ರವನ್ನು ಮಾತ್ರ (ಒಂದು ಟೇಬಲ್ ಹಾಗೂ ಎರಡು ಕುರ್ಚಿಗಳಿಗೆ ಸೀಮಿತಗೊಳಿಸಿ) ಮತದಾರರಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡುವ ಸಲುವಾಗಿ ಸ್ಥಾಪಿಸಬಹುದಾಗಿದೆ.
ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಮುಂಚಿತವಾಗಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಿ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹೇಮಲತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ : ಜೂ. 8ರಂದು ಮತದಾನ
ಚಾಮರಾಜನಗರ, ಜೂ. 07 - ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂನ್ 8ರಂದು ನಡೆಯಲಿರುವ ಚುನಾವಣೆಗೆ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಲಾಗಿದೆ.
ಮತಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನ, ಅನುದಾನ ರಹಿತ ವಿದ್ಯಾಸಂಸ್ಥೆ ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಇತರೆ ಬ್ಯಾಂಕುಗಳು, ರಾಜ್ಯ, ಕೇಂದ್ರ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಹಾಗೂ ಎಲ್ಲ ವ್ಯಾವಹಾರಿಕ, ಔದ್ಯಮಿಕ ಸಂಸ್ಥೆಗಳು, ಇನ್ನಿತರ ಎಸ್ಟಾಬ್ಲಿಷ್‍ಮೆಂಟ್‍ನಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅರ್ಹ ಮತದಾರರಿಗೆ ಸೀಮಿತವಾಗುವಂತೆ ಮತದಾನ ಮಾಡಲು ಸರ್ಕಾರದ ಅಧಿಸೂಚನೆ ದಿನಾಂಕ 5.6.2018ರಂತೆ ಜೂನ್ 8ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಲಾಗಿದೆ.
ಮತದಾರರು ದಕ್ಷಿಣ ಶಿಕ್ಷಕರ ಕ್ಷೇತ್ರ, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರಿನ ಮೂಲಕವೇ ಭಾಗದ ಸಂಖ್ಯೆ, ಮತದಾನ ಕೇಂದ್ರದ ವಿವರಗಳನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಡಿಛಿmಥಿsuಡಿu.gov.iಟಿ  ನ ಊಥಿಠಿeಡಿ ಟiಟಿಞ  ಮೂಲಕ ಪರಿಶೀಲಿಸಬಹುದು. ಅಲ್ಲದೆ, ಹೆಚ್ಚಿನ ಮಾಹಿತಿಯನ್ನು ಸಹ ಪಡೆಯಬಹುದು. ಮತದಾರರು ಈ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹೇಮಲತ ಅವರು ಪ್ರ್ರಕಟಣೆಯಲ್ಲಿ ತಿಳಿಸಿದ್ದಾರೆ.

( 06-06-2018)ವಿಧಾನ ಪರಿಷತ್ ಚುನಾವಣೆ : ಮತದಾನಕ್ಕೆ ಅವಶ್ಯ ದಾಖಲೆಗಳು

ವಿಧಾನ ಪರಿಷತ್ ಚುನಾವಣೆ : ಮತದಾನಕ್ಕೆ ಅವಶ್ಯ ದಾಖಲೆಗಳು


ಚಾಮರಾಜನಗರ, ಜೂ. 04 - ಕರ್ನಾಟಕ ವಿಧಾನ ಪರಿಷತ್‍ನ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತ ಚಲಾಯಿಸಲು ಮತದಾರರು ಗುರುತಿನ ಚೀಟಿ ಹಾಜರುಪಡಿಸಿ ಮತ ಚಲಾಯಿಸಬಹುದಾಗಿರುತ್ತದೆ. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ (ಎಪಿಕ್) ಹಾಜರುಪಡಿಸಬೇಕು. ಒಂದು ವೇಳೆ ಇದನ್ನು ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.

ಭಾವಚಿತ್ರವಿರುವ ಪಾಸ್‍ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ, ರಾಜ್ಯ ಸರ್ಕಾರಿ ಸಾರ್ವಜನಿಕ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ನೀಡಿರುವ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಇಲಾಖೆಯಿಂದ ನೀಡಲಾಗಿರುವ ಪಾಸ್‍ಪುಸ್ತಕ (ದಿನಾಂಕ 31.05.2018 ರೊಳಗೆ ಖಾತೆ ತೆರೆದಿರಬೇಕು), ಆದಾಯ ತೆರಿಗೆ ಗುರುತಿನ ಚೀಟಿ (ಪಾನ್ ಕಾರ್ಡ್), ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಡಿಯಲ್ಲಿ ಭಾರತೀಯ ನೋಂದಣಾಧಿಕಾರಿಗಳು ನೀಡಿರುವ ಸ್ಮಾರ್ಟ್‍ಕಾರ್ಡ್, ಆರೋಗ್ಯ ವಿಮಾ ಯೋಜನೆಯ ಗುರುತಿನ ಚೀಟಿ (ಸ್ಮಾರ್ಟ್ ಕಾರ್ಡ್) (ಕಾರ್ಮಿಕ ಇಲಾಖೆಯಿಂದ ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಪಿಂಚಣಿ ದಾಖಲಾತಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಸ್ವಾತಂತ್ರ್ಯ ಹೋರಾಟಗಾರರ ಗುರುತಿನ ಚೀಟಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಆಯುಧ ಪರವಾನಗಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಸಕ್ಷಮ ಪ್ರಾಧಿಕಾರದಿಂದ ನೀಡಿರುವ ಅಂಗವಿಕಲರ ದೃಢೀಕರಣ ಪತ್ರ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಮಾಜಿ ಸೈನಿಕರ ಸಿಎಸ್‍ಡಿ ಕ್ಯಾಂಟೀನ್ ಗುರುತಿನ ಚೀಟಿ, ಆಧಾರ್ ಕಾರ್ಡ್ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರುಪಡಿಸಿ, ಮತದಾನ ಮಾಡಬಹುದೆಂದು ಚುನಾವಣಾ ಅಧಿಕಾರಿಗಳೂ ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹೇಮಲತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ :
ಮತಗಟ್ಟೆಯ 100 ಮೀ. ಅಂತರದಲ್ಲಿ ಪ್ರಚಾರ ನಿಷೇಧ

ಚಾಮರಾಜನಗರ, ಜೂ. 06 - ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಸಂಬಂಧ ಮತದಾನ ನಡೆಯುವ ಮತಗಟ್ಟೆಯ 100 ಮೀಟರ್ ಅಂತರದೊಳಗಿರುವ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಪ್ರಚಾರ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲದ ತಾಲೂಕು ಕಚೇರಿ, ಹನೂರಿನ ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಮತಗಟ್ಟೆ ಇದ್ದು ಇದರ 100 ಅಂತರದೊಳಗಿರುವ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಪ್ರಚಾರ ನಡೆಸುವಂತಿಲ್ಲ. ಯಾವುದೇ ಉಮೇದುವಾರ ಅಭ್ಯರ್ಥಿಗೆ ಮತ ನೀಡುವಂತೆ ಕೇಳುವುದು, ಮತ ಹಾಕದಂತೆ ಪ್ರೇರೇಪಿಸುವುದು, ಯಾವುದೇ ಪಕ್ಷದ ಚಿಹ್ನೆಯನ್ನು ಪ್ರದರ್ಶಿಸುವುದು ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ. ಈ ಸಂಬಂಧ ಪ್ರಜಾ ಪ್ರತಿನಿಧಿ ಕಾಯಿದೆ 1951ರ ಕಲಂ 130ನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಮದ್ಯ ಮಾರಾಟ ನಿಷೇಧ

ಚಾಮರಾಜನಗರ, ಜೂ. 06- ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾದ್ಯಂತ ಜೂನ್ 6 ರಿಂದ 8ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಜೂನ್ 8ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶ ಒಳಗೊಂಡಂತೆ ಪೂರ್ಣ ಜಿಲ್ಲಾ ವ್ಯಾಪ್ತಿಯಲ್ಲಿ ಜೂನ್ 6ರ ಸಂಜೆ 5 ಗಂಟೆಯಿಂದ ಜೂನ್ 8ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಬೇಕೆಂದು ಹಾಗೂ ಯಾವುದೇ ರೀತಿಯ ಮದ್ಯ ಮಾರಾಟ ಮಾಡಬಾರದೆಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರÀÉ.


ಜೂ. 13ರಂದು ಉದ್ಯೋಗ ಮೇಳ

ಚಾಮರಾಜನಗರ, ಜೂ. 06  ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳು ವಿವಿಧ ಹುದ್ದೆಗಳ ನೇಮಕಾತಿಗಾಗಿ ಜೂನ್ 13ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ರಾಣಿ ಮದ್ರಾಸ್, ಮಾತೃತ್ವಂ, ಪೀಪಲ್ ಮ್ಯಾನೇಜ್‍ಮೆಂಟ್ ಸಿಸ್ಟಂ, ಹಿಂದೂಜ ಗ್ಲೋಬಲ್ ಸಲ್ಯೂಶÀನ್, ಯೂರೆಕ ಫೋರ್ಬ್, ನವಭಾರತ್ ಫರ್ಟಿಲೈಸರ್ ಲಿಮಿಟೆಡ್ ಹಾಗೂ ಹಿಮೈತ್ ಸಿಂಗ್ ಕಾ (ಹಾಸನ) ಇತರೆ ಕಂಪನಿಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದು. 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ (ದೂ.ಸಂ. 08226-224430) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ವಿವಿಧ ಗಿಡಗಳ ಮಾರಾಟ 

ಚಾಮರಾಜನಗರ, ಜೂ. 06 - ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ರೈತರಿಗೆ ಮಾವು, ಸೀಬೆ, ನಿಂಬ್, ಕರಿಬೇವು ಹಾಗೂ ವಿವಿಧ ಅಲಂಕಾರಿಕ ಗಿಡಗಳನ್ನು ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ರೈತರು ಸಸಿ, ಕಸಿಗಳನ್ನು ನಗರದ ಸತ್ತಿ ರಸ್ತೆಯಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಖರೀದಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.
ಜೂ. 7ರಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ
ಚಾಮರಾಜನಗರ, ಜೂ. 06 - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2018-19ನೆ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್‍ಪಾಸ್‍ಗಳನ್ನು ವಿತರಿಸಲು ಮುಂದಾಗಿದೆ.
ಮೊದಲನೆ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೂನ್ 7 ರಿಂದ ಆಯಾ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲು ಕ್ರಮ ಕೈಗೊಂಡಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಿಸಲಾಗುತ್ತದೆ. ಈ ವರ್ಗದ ವಿದ್ಯಾರ್ಥಿಗಳು ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಶುಲ್ಕ ಒಟ್ಟು ರೂ. 150 ಮೊತ್ತವನ್ನು ಪಾವತಿಸಬೇಕು. ಉಚಿತ ಬಸ್ ಪಾಸ್ ಪಡೆಯಲು ಜಾತಿ ಪ್ರಮಾಣ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ನಿಗಮದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ನಿಗಮದ ವೆಬ್‍ಸೈಟ್ ತಿತಿತಿ.ಞsಡಿಣಛಿ.iಟಿ ನಲ್ಲಿ ಪಾಸ್ ಅರ್ಜಿಗಳು ಲಭ್ಯವಿರುತ್ತವೆ. ಭರ್ತಿ ಮಾಡಿದ ಅರ್ಜಿಯನ್ನು ಶಾಲೆಗಳಲ್ಲಿ ದೃಢೀಕರಿಸಬೇಕಿರುತ್ತದೆ. ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವ ಶಾಲೆಗಳ ಮುಖಾಂತರ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳು ನೇರವಾಗಿ ಪಾಸ್ ಕೌಂಟರ್‍ಗೆ ಬರುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Monday, 11 June 2018

(04-062018)ಪ್ಲಾಸ್ಟಿಕ್ ಬಳಕೆ ತ್ಯಜಿಸಿ : ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸಲಹೆ

ಪ್ಲಾಸ್ಟಿಕ್ ಬಳಕೆ ತ್ಯಜಿಸಿ : ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸಲಹೆ

ಚಾಮರಾಜನಗರ, ಜೂ. 04 :- ಪರಿಸರಕ್ಕೆ ಹಾನಿಕಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸದಿದ್ದರೆ ಮತ್ತಷ್ಟು ಅಪಾಯ ತಪ್ಪಿದ್ದಲ್ಲ. ಹೀಗಾಗಿ ಪ್ಲಾಸ್ಟಿಕ್‍ಗೆ ಪರ್ಯಾಯವಾಗಿ ಇತರೆ ವಸ್ತುಗಳನ್ನು ಬಳಸಲು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಲಹೆ ಮಾಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಸಾರ್ವಜನಿಕ ಶಿಕ್ಷಣ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಮಾಲಿನ್ಯಕ್ಕೆ ಮಿತಿಮೀರಿದ ಪ್ಲಾಸ್ಟಿಕ್ ಉಪಯೋಗ ಕಾರಣವಾಗುತ್ತಿದೆ. ವಿಶ್ವದ ಎಲ್ಲೆಡೆ ಪ್ಲಾಸ್ಟಿಕ್ ವಸ್ತುಗಳಿಂದ ತಯಾರಿಸಿದ ವಸ್ತುಗಳನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ. ಭಾರತದಲ್ಲೇ 1 ಲಕ್ಷದ 10 ಸಾವಿರಕ್ಕೂ ಹೆಚ್ಚು ಪ್ಲಾಸ್ಟಿಕ್ ಉದ್ಯಮಗಳು ಇವೆ. ನೂರಾರು ವರ್ಷಗಳ ನಂತರವೂ ಕೊಳೆಯಲಾರದ ಪ್ಲಾಸ್ಟಿಕ್ ಭೂಮಿಗೆ ಕಂಟಕವಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ಬಳಕೆ ಕೈಬಿಟ್ಟರೆ ಮಾತ್ರ ಪರಿಸರ ಉಳಿಯಲಿದೆ ಎಂದರು.
ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ಗಂಭೀರ ಪರಿಣಾಮಗಳನ್ನು ಮನಗಂಡು ಪ್ಲಾಸ್ಟಿಕ್ ಮಾಲಿನÀ್ಯ ಹಿಮ್ಮೆಟ್ಟಿಸಿ ಎಂಬ ಘೋಷವಾಕ್ಯದಡಿ ಈ ಬಾರಿಯ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪ್ಲಾಸ್ಟಿಕ್ ವಸ್ತುಗಳಿಗೆ ಪರ್ಯಾಯವಾದ ಬಟ್ಟೆ, ಕಾಗದದಲ್ಲಿ ತಯಾರಿಸಿದ ವಸ್ತುಗಳನ್ನು ಬಳಕೆ ಮಾಡಬೇಕು. ಎಲ್ಲದಕ್ಕೂ ಪ್ಲಾಸ್ಟಿಕ್ ವಸ್ತುಗಳೇ ಬೇಕು ಎಂಬ ಧೋರಣೆ ಬಿಡಬೇಕು. ಶಾಲಾಕಾಲೇಜು ವಿದ್ಯಾರ್ಥಿಗಳು ಪೋಷಕರಿಗೆ ಪ್ಲಾಸ್ಟಿಕ್‍ನಿಂದ ಆಗುವ ಹಾನಿ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ಅವರು ತಿಳಿಸಿದರು.
ಪರಿಸರ ಸಂರಕ್ಷಣೆ ಎಂಬುದು ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಕಾಯಕದಿಂದಲೇ ಆರಂಭವಾಗಬೇಕು. ಶಾಲೆಗಳಲ್ಲಿ ಪ್ರತಿ ವಿದ್ಯಾರ್ಥಿ ಗಿಡ ನೆಟ್ಟು ಅದರ ಪೋಷಣೆಗೆ ನಿರಂತರವಾಗಿ ಗಮನಿಸಬೇಕು. ಜಲ, ವಾಯು ಸಣರಕ್ಷಣೆಗೂ ಆದ್ಯತೆ ನೀಡಬೇಕು ಎಂದು ಕಾವೇರಿ ಅವರು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‍ಲಾಲ್ ಮೀನಾ ಅವರು ಪರಿಸರ ಸಮತೋಲನ ಇಲ್ಲದಿದ್ದರೆ ನಾನಾ ಅಪಾಯಗಳನ್ನು ಎದುರಿಸಬೇಕಾಗುತ್ತದೆ. ನದಿ ಕಡಲತೀರವನ್ನು ಸಹ ಮಾಲಿನ್ಯಗೊಳಿಸಲಾಗುತ್ತಿದೆ. ಪ್ರಕೃತಿಯಲ್ಲಿ ಸಹಜವಾಗಿ ಸಿಗಬೇಕಾದ ಶುದ್ಧ ಗಾಳಿಯಲ್ಲೂ ಸಹ ಮಾಲಿನ್ಯದ ಅಂಶ ಹೆಚ್ಚು ಕಂಡುಬರುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಮುಂದಿನ ಪೀಳಿಗೆಗೂ ಆರೋಗ್ಯಕರ ಪರಿಸರ ಅನುಭವಿಸಲು ಅನುವು ಮಾಡಿಕೊಡಬೇಕು ಎಂದರು.
ಪರಿಸರ ದಿನ ಅಂಗವಾಗಿ ಏರ್ಪಡಿಸಲಾಗಿದ್ದ ಚಿತ್ರ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಹರೀಶ್ ಕುಮಾರ್ ಅವರು ಜಾಗತೀಕರಣ, ಕೈಗಾರೀಕರಣದಿಂದ ಪರಿಸರ ನಾಶವಾಗುತ್ತಿದೆ. ಅಭಿವೃದ್ಧಿಯ ಚಿಂತನೆ ಭರದಲ್ಲಿ ಪರಿಸರ ಹಾಳುಗೆಡುವುದು ಸರಿಯಲ್ಲ. ಪಾಶ್ಚಾತ್ಯ ಅಭಿವೃದ್ಧಿ ಚಿಂತನೆಗಳು ಇಲ್ಲಿನ ಪರಿಸ್ಥಿತಿಗೆ ಅಗತ್ಯವಿದೆಯೇ ಎಂಬ ಬಗ್ಗೆಯೂ ವಿಶ್ಲೇಷಿಸಬೇಕಿದೆ. ಪರಿಸರ ಬಗೆಗಿನ ಕಾಳಜಿಯುಳ್ಳ ಮನಸ್ಸುಗಳು ಕ್ರಿಯಾಶೀಲವಾಗಿ ಹೊಸ ಬದಲಾವಣೆಗಳತ್ತ ಆಸಕ್ತಿ ತೋರಬೇಕಿದೆ ಎಂದರು.
ಪರಿಸರ ಜಾಗೃತಿ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಶಾಲಾಕ್ಷಿ ಅವರು ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿದು ಕಾಂಕ್ರೀಟ್ ನಾಡನ್ನು ನಿರ್ಮಾಣ ಮಾಡಲಾಗುತ್ತಿದೆ. ಶಬ್ಧ ವಾಯು, ಜಲ ಮಾಲಿನ್ಯವಾಗುತ್ತಿದ್ದರೂ ಇದರಿಂದಾಗುವ ಕೆಡಕುಗಳ ಬಗ್ಗೆ ಮನವರಿಕೆ ಮಾಡಿಕೊಳ್ಳುತ್ತಿಲ್ಲ. ಹಸಿರೇ ಉಸಿರು ಎಂಬ ಬಗ್ಗೆ ಜಾಗೃತಿ ಮೂಡಬೇಕು. ಆರೋಗ್ಯಕರ ವಾತಾವರಣ ಎಲ್ಲರಿಗೂ ನಿರಂತರವಾಗಿ ಲಭ್ಯವಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ವತಃ ಪರಿಸರ ಬಗೆಗೆ ಕಾಳಜಿ ಹೊಂದಬೇಕೆಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರತಂದಿರುವ ನಿಸರ್ಗ ಸಂಧಾನ ಪುಸ್ತಕವನ್ನು ಬಿಡುಗಡೆ ಮಾಡಿದರು.
ರಾಮಸಮುದ್ರದ ಸಿಆರ್‍ಬಿಪಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ಬಿ. ಸುಜಯ್ ಕುಮಾರ್ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ. ರಘುರಾಂ, ಅರಣ್ಯ ಸಂರಕ್ಷಾಧಿಕಾರಿ ಹಾಗೂ ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪಿ. ಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ. ಮಹದೇವಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಬಿ.ಎಲ್. ಶಿವಪ್ರಸಾದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಆವರಣದಲ್ಲಿ ಗಣ್ಯರು ಸಸಿಗಳನ್ನು ನೆಟ್ಟು ನೀರೆರೆದರು.

ಜೂ. 6ರಂದು ಆಲೂರಿನಲ್ಲಿ ವಿಶ್ವಪರಿಸರ ದಿನಾಚರಣೆ
ಚಾಮರಾಜನಗರ, ಜೂ. 05  ನೆಹರು ಯುವ ಕೇಂದ್ರ, ಆಲೂರಿನ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು, ಕೆಂಪನಪುರದ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 6ರಂದು ಬೆಳಿಗ್ಗೆ 11.30 ಗಂಟೆಗೆ ಆಲೂರಿನ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಎಂ. ಮಹೇಶ್ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಕೋಡಿ ಉಗುನೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರಾದ ಎಂ. ನಟರಾಜು ಉಪನ್ಯಾಸ ನೀಡುವರು. ಮುಖ್ಯ ಅತಿಥಿಯÁಗಿ ಸಂಯುಕ್ತ ಯುವಜನ ಸಂಘದ ಅಧ್ಯಕ್ಷರಾದ ಎನ್. ದಾಕ್ಷಾಯಣಿ ಪಾಲ್ಗೊಳ್ಳುವರು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್. ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.

ವಿದ್ಯಾರ್ಥಿ ವೇತನಕ್ಕೆ ದಾಖಲಾತಿ ಸ್ವೀಕಾರ
ಚಾಮರಾಜನಗರ, ಜೂ. 05 ಚಾಮರಾಜನಗರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಹಿಂದುಳಿದ ವರ್ಗದ ಹಾಗೂ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಎಲ್ಲ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ದಾಖಲಾತಿಗಳನ್ನು ಸ್ವೀಕರಿಸಲಾಗುತ್ತಿದೆ.
1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಿ1, 2ಎ, 3ಎ, 3ಬಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಎಲ್ಲ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳು ತಾಲೂಕಿನ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕು.
ತಾಲೂಕಿನ ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು ಶಾಲೆಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.

ಲೋಕಸಭಾ ಸದಸ್ಯರ ಅಧ್ಯಯನ ಪ್ರವಾಸ
ಚಾಮರಾಜನಗರ, ಜೂ. 04 :– ಕೇಂದ್ರ ಸರ್ಕಾರದ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಸ್ಥಾಯಿ ಸಮಿತಿಯ ಸದಸ್ಯರಾಗಿರುವ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಸಮಿತಿಯ ತಂಡದೊಂದಿಗೆ ಉತ್ತರಾಖಾಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಜೂನ್ 6 ರಿಂದ 11ರವರೆಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ.
ಉತ್ತರಾಖಾಂಡ ಮತ್ತು ಹಿಮಾಚಲ ಪ್ರದೇಶ ವ್ಯಾಪ್ತಿಯ ಆಲ್‍ಮೋರಾ, ಪಂಟ್ ನಗರ್, ಗುರುಗ್ರಾಮ್ ಹಾಗೂ ಧರ್ಮಶಾಲಾಗಳಿಗೆ ಭೇಟಿ ನೀಡಲಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಅಲ್ಲಿನ ರೈತರು, ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು. ಜನ್ ಆಯುಷಾದಿ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸುವರು. ಎಚ್‍ಐಎಲ್ ಮತ್ತು ಐಪಿಎಫ್‍ಡಿ ಪ್ರತಿನಿಧಿಗಳೊಂದಿಗೆ ರಸಗೊಬ್ಬರದ ಉಪಯುಕ್ತತೆ ಕುರಿತು ಮಾತುಕತೆ ನಡೆಸುವರು. ಇಲಾಖೆಯ ಪ್ರತಿನಿಧಿಗಳು ಹಾಗೂ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಲೋಕಸಭಾ ಸದಸ್ಯರ ಕಚೇರಿ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಮನೆ ನೀಡಲು ಮನವಿ
ಚಾಮರಾಜನಗರ, ಜೂ. 05 ಚಾಮರಾಜನಗರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಎಂಜಿನಿಯರ್ ಮತ್ತು ವೈದ್ಯಕೀಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡಕ್ಕೆ ಬಾಡಿಗೆ ಮನೆ ಅವಶ್ಯವಿರುತ್ತದೆ.
ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ (ಕೊಠಡಿ ಸಂಖ್ಯೆ 131, 132) (ದೂ.ಸಂ.08226-222180) ಮತ್ತು ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರದ ದೇವರಾಜ ಅರಸು ಭವನದಲ್ಲಿರುವ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ (ದೂ.ಸಂ. 08226-222069) ಸಂಪರ್ಕಿಸುವಂತೆ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಮತದಾನ ಕೇಂದ್ರಗಳ ವಿವರ
ಚಾಮರಾಜನಗರ, ಜೂ. 05 - ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆಗೆ ಜೂನ್ 8ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಮತದಾರರು ಮತದಾನ ಮಾಡುವಂತೆ ಕೋರಲಾಗಿದೆ.
ಮತದಾರರ ಪಟ್ಟಿಯಲ್ಲಿ ಮತದಾರರು ಅವರ ಹೆಸರಿನ ಮೂಲಕವೇ ಭಾಗದ ಸಂಖ್ಯೆ, ಮತದಾನ ಕೇಂದ್ರದ ವಿವರಗಳನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಕಚೇರಿಯ ಡಿಛಿmಥಿsuಡಿu.gov.iಟಿ  ನ ಊಥಿಠಿeಡಿ ಟiಟಿಞ  ಮೂಲಕ ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಸಹ ಪಡೆಯಬಹುದು. ಮತದಾರರು ಈ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ. ಹೇಮಲತ ಅವರು ಪ್ರ್ರಕಟಣೆಯಲ್ಲಿ ತಿಳಿಸಿದ್ದಾರೆ.



ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ : ಮತದಾನಕ್ಕೆ ಅವಶ್ಯವಿರುವ ದಾಖಲೆಗಳು 


ಚಾಮರಾಜನಗರ, ಜೂ. 04  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಆಯಾ ತಾಲ್ಲೂಕು ಕೇಂದ್ರದಲ್ಲಿ ತೆರೆಯಲಾಗಿರುವ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ಮತದಾರರು ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಹಾಜರುಪಡಿಸಿ ಮತ ಚಲಾಯಿಸಬಹುದಾಗಿರುತ್ತದೆ. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಹಾಜರುಪಡಿಸಲು ಸಾಧ್ಯವಾಗದ ಮತದಾರರು ಈ ಕೆಳಕಂಡ ದಾಖಲಾತಿಗಳಲ್ಲಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.

ಭಾವಚಿತ್ರವಿರುವ ಪಾಸ್‍ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ, ರಾಜ್ಯ ಸರ್ಕಾರಿ ಸಾರ್ವಜನಿಕ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ನೀಡಿರುವ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಇಲಾಖೆಯಿಂದ ನೀಡಲಾಗಿರುವ ಪಾಸ್‍ಪುಸ್ತಕ (ದಿನಾಂಕ 31.05.2018 ರೊಳಗೆ ಖಾತೆ ತೆರೆದಿರಬೇಕು), ಆದಾಯ ತೆರಿಗೆ ಗುರುತಿನ ಚೀಟಿ ( ಪಾನ್ ಕಾರ್ಡ್), ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಡಿಯಲ್ಲಿ ಭಾರತೀಯ ನೋಂದಣಾಧಿಕಾರಿಗಳು ನೀಡಿರುವ ಸ್ಮಾರ್ಟ್‍ಕಾರ್ಡ್, ಆರೋಗ್ಯ ವಿಮಾ ಯೋಜನೆಯ ಗುರುತಿನ ಚೀಟಿ (ಸ್ಮಾರ್ಟ್ ಕಾರ್ಡ್) (ಕಾರ್ಮಿಕ ಇಲಾಖೆಯಿಂದ ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಪಿಂಚಣಿ ದಾಖಲಾತಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಸ್ವಾತಂತ್ರ್ಯ ಹೋರಾಟಗಾರರ ಗುರುತಿನ ಚೀಟಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಆಯುಧ ಪರವಾನಗಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಸಕ್ಷಮ ಪ್ರಾಧಿಕಾರದಿಂದ ನೀಡಿರುವ ಅಂಗವಿಕಲರ ದೃಢೀಕರಣ ಪತ್ರ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಮಾಜಿ ಸೈನಿಕರ ಸಿಎಸ್‍ಡಿ ಕ್ಯಾಂಟೀನ್ ಗುರುತಿನ ಚೀಟಿ, ಆಧಾರ್ ಕಾರ್ಡ್ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರುಪಡಿಸಿ, ಮತದಾನ ಮಾಡಬಹುದೆಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(04-06-2218)ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಪೂರ್ವಸಿದ್ಧತೆ ಕೈಗೊಳ್ಳಿ : ಜಿಪಂ ಸಿಇಓ ಡಾ. ಹರೀಶ್ ಕುಮಾರ್ ಸೂಚನೆ

ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಪೂರ್ವಸಿದ್ಧತೆ ಕೈಗೊಳ್ಳಿ : ಜಿಪಂ ಸಿಇಓ ಡಾ. ಹರೀಶ್ ಕುಮಾರ್ ಸೂಚನೆ 

ಚಾಮರಾಜನಗರ, ಜೂ. 04 – ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆಯು ಉತ್ತಮ ಸಾಧನೆ ಮಾಡಲು ಈಗಿನಿಂದಲೇ ಶಿಕ್ಷಕರು ಹಾಗೂ ಅಧಿಕಾರಿಗಳು ಪರಿಶ್ರಮದಿಂದ ಪೂರ್ವಸಿದ್ಧತಾ ಕ್ರಮಗಳನ್ನು ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ, ಅಕ್ಷರ ದಾಸೋಹ, ಶಿಕ್ಷಣ ಇಲಾಖೆಯ ಇತರೆ ಯೋಜನೆ ಸಮರ್ಪಕ ಅನುಷ್ಠಾನ ಸಂಬಂಧ ನಡೆದ ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆಯು ತೀವ್ರ ಹಿನ್ನೆಡೆ ಸಾಧಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಫಲಿತಾಂಶ ಸಾಧನೆಯಲ್ಲಿ ಹಿಂದೆ ಬಿದ್ದಿರುವುದಕ್ಕೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು. ಯಾವ ಹಂತದಲ್ಲಿ ಫಲಿತಾಂಶ ಕುಸಿಯಲು ಕಾರಣವಾಯಿತು ಎಂಬ ಬಗ್ಗೆ ಅಧಿಕಾರಿಗಳು ಹಾಗೂ ಶಿಕ್ಷಕರಿಂದಲೇ ಕಾರಣ ಹಾಗೂ ಅನಿಸಿಕೆಗಳನ್ನು ಆಲಿಸಿದರು.
ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದದ ನಡುವೆ ಪ್ರೀತಿ ಸಂವಹನ ಇರಬೇಕು. ಶಿಕ್ಷಕರು ನೈತಿಕತೆ ಪ್ರಾಮಾಣಿಕತೆ, ಶಿಸ್ತು ಬೆಳೆಸಿಕೊಳ್ಳಬೇಕು. 8ನೇ ತರಗತಿಯಿಂದಲೇ ಬೋಧನಾ ಮಟ್ಟವನ್ನು ಉತ್ತಮಪಡಿಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದರೆ ಎಸ್‍ಎಸ್‍ಎಲ್‍ಸಿ ಹಂತದಲ್ಲಿ ಏಕಾಏಕಿ ಉಂಟಾಗುವ ಒತ್ತಡವನನು ಕಡಿಮೆ ಮಾಡಬಹುದು. ಇದರಿಂದ ವಿದ್ಯಾರ್ಥಿಗಳು ಸಹಜವಾಗಿ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕಗಳಿಸಲು ಸಾಧ್ಯವಾಗುತ್ತದೆ. ಫಲಿತಾಂಶವೂ ಸುಧಾರಣೆಯಾಗಲಿದೆ ಎಂದು ಹರೀಶ್ ಕುಮಾರ್ ಅವರು ತಿಳಿಸಿದರು.
ಶೈಕ್ಷಣಿಕ ಸಾಲಿನ ಆರಂಭದಲ್ಲೇ ಕಳೆದ ಬಾರಿಯ ತಪ್ಪುಗಳು ಪುನರಾವರ್ತನೆಯಾಗದಂತೆ ತಿದ್ದಿಕೊಳ್ಳಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಗುರುತಿಸಿ ಅವರಿಗೆ ಮನದಟ್ಟಾಗುವಂತೆ ಬೋಧನಾ ಕಾರ್ಯವನ್ನು ನಿರ್ವಹಿಸಬೇಕು. ವಿಶೇಷ ಗಮನ ನೀಡಬೇಕು. ಈ ಬಾರಿ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಕಳಪೆ ಸಾಧನೆಯಾದರೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ವಿಷಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನ ಮಾಡಬೇಕು. ವಿದ್ಯಾರ್ಥಿಗಳ ಸಂಖ್ಯೆ, ಹಾಜರಾತಿಯನ್ನು ಗಣನೆಗೆ ತೆಗೆದುಕೊಂಡು ಆ ಪ್ರಕಾರವೇ ಬಿಸಿಯೂಟ ಧಾನ್ಯ ಇನ್ನಿತರ ಅಗತ್ಯ ಪರಿಕರಗಳ ಬೇಡಿಕೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿಯಾಗಿ ಧಾನ್ಯ ಪಡಿತರ ಪದಾರ್ಥಗಳನ್ನು ಪಡೆದು ಬಳಕೆ ಮಾಡದೇ ವ್ಯರ್ಥ ಮಾಡಬಾರದು ಎಂದು ಹರೀಶ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಿಸಿಯೂಟ ವಹಿಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಧಾನ್ಯಗಳು, ಹಾಲಿನ ಪುಡಿ, ಸೇರಿದಂತೆ ಅಗತ್ಯ ಪದಾರ್ಥಗಳನ್ನು ನಮೂದು ಮಾಡಬೇಕು. ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಳ್ಳುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಪಂಚಾಯತ್ ಸಿಇಓ ಅವರು ತಾಕೀತು ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಅವರು ಮಾತನಾಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಗಣಿತ ವಿಜ್ಞಾನದಂತಹ ಕ್ಷಿಷ್ಟಕರ ವಿಷಯಗಳು ಅರ್ಥವಾಗಿವೆಯೇ ಎಂಬ ಬಗ್ಗೆ ಶಿಕ್ಷಕರು ತಿಳಿದುಕೊಳ್ಳಬೇಕು. ಫೆಬ್ರವರಿ ಮಾರ್ಚ್ ತಿಂಗಳಿನಲ್ಲಿ ಪಠ್ಯಕ್ರಮ ಪೂರ್ಣಗೊಳಿಸುವ ಒತ್ತಡವನ್ನು ಮಕ್ಕಳ ಮೇಲೆ ಹೇರದೆ ಆರಂಭದಿಂದಲೇ ಮನದಟ್ಟಾಗುವ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಬೇಕು. ಈ ಬಾರಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಹೆಚ್ಚು ಪರಿಶ್ರಮಪಟ್ಟು ಮಕÀ್ಕಳನ್ನು ಸಜ್ಜುಗೊಳಿಸಬೇಕು ಎಂದರು.
ಅಕ್ಷರ ದಾಸೋಹ ಅಧಿಕಾರಿ ಉದಯಕುಮಾರ್, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇತರರು ಸಭೆಯಲ್ಲಿ ಹಾಜರಿದ್ದರು.

ಮಳೆ ಹಿನ್ನಲೆ : ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಿರಲು ಜಿ.ಪಂ. ಸಿ.ಇ.ಒ ಸುತ್ತೋಲೆ 

ಚಾಮರಾಜನಗರ, ಜೂ. 04 - ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಎದುರಾಗುವ ಯಾವುದೇ ಸಮಸ್ಯೆ ನಿವಾರಿಸಿ ಪರಿಹಾರ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಾಗಿರಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅತಿವೃಷ್ಟಿ ಸಂಭವಿಸಿದ್ದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಹಾರ ಕ್ರಮಕೈಗೊಳ್ಳಬೇಕಾಗುತ್ತದೆ. ಸಕಾಲದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಪ್ರಸ್ತುತ ಸಂದರ್ಭದಲ್ಲಿ ಮುಖ್ಯ ಕರ್ತವ್ಯ ಹಾಗೂ ಜವಾಬಾýರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ಸಮರೋಪಾದಿಯಲ್ಲಿ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಹಾಗೂ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಜರೂರಾಗಿ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಬೇಕಾಗುತ್ತದೆ. ಈ ದಿಸೆಯಲ್ಲಿ ಕೇಂದ್ರ ಸ್ಥಾನದಲ್ಲಿ ಇದ್ದು ಸಮಸ್ಯೆ, ದೂರುಗಳು ಬಂದಾಗ ತಕ್ಷಣವೇ ಸ್ಪಂದಿಸಬೇಕು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ರಜೆ, ಅನ್ಯ ಕಾರ್ಯಗಳ ಮೇಲೆ ತೆರಳುವಂತಿಲ್ಲ. ಕೇಂದ್ರಸ್ಥಾನವನ್ನು ಬಿಡಲು ಅನುಮತಿ ಪಡೆಯದೆ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಧಿಕಾರಿಗಳು ಅನುಮತಿ ಪಡೆದ ನಂತರವೇ ರಜೆಯ ಮೇಲೆ ತೆರಳಬೇಕು. ತಪ್ಪಿದಲ್ಲಿ ಗೈರುಹಾಜರಿಯನ್ನು ವೇತನರಹಿತ ರಜೆ ಎಂದು ಪರಿಗಣಿಸುವುದಲ್ಲದೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹರೀಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕಿರಿಯ ಇಂಜಿನಿಯರ್‍ಗಳಿಗೆ ಅನಿವಾರ್ಯವಿದ್ದಲ್ಲಿ ವೈದ್ಯಕೀಯ ರಜೆಯನ್ನು ಹೊರತುಪಡಿಸಿ ಬೇರೆ ಯಾವುದೇ ರಜೆಯನ್ನು ಯಾವುದೇ ಕಾರಣಕ್ಕೂ ಸಂಬಂಧಪಟ್ಟ ಕಾರ್ಯನಿರ್ವಾಹಕ ಅಧಿಕಾರಿಗಳು ನೀಡÀಬಾರದು.
ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಅತಿವೃಷ್ಟಿ, ನೈರ್ಮಲ್ಯ ಹಾಗೂ ಇತ್ಯಾದಿ ಸಮಸ್ಯೆಗಳಿದ್ದರೆ ಆಯಾ ಹಂತದಲ್ಲಿಯೇ ಪರಿಹಾರಕ್ಕೆ ಮುಂದಾಗಬೇಕಿದೆ. ಅವಶ್ಯವಿದ್ದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿನೀಡಿ ಪರಿಹಾರ ಕ್ರಮಕೈಗೊಳ್ಳಬೇಕು. ಸಮಸ್ಯೆಗಳನ್ನು ಆಲಿಸಿ ತಕ್ಷಣ ಪರಿಹರಿಸಬೇಕು. 
ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ವರ್ಗದವರು ಎಲ್ಲಾ ಗ್ರಾಮಗಳಿಗೆ ಭೇಟಿನೀಡಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ತಿಳಿವಳಿಕೆ ನೀಡಬೇಕು. ಜಿಲ್ಲಾ, ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸಬೇಕು. ಔಷಧಗಳು ದಾಸ್ತಾನು ಇರುವಂತೆ ಕ್ರಮವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ, ಜೂ. 04  ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಶಿಕ್ಷಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.
ರಾಮಸಮುದ್ರದ ಸಿಆರ್ ಬಾಲಪಟ್ಟಣ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮೇಲೆ ಶಿಕ್ಷಕರೊಬ್ಬರು ಹಲ್ಲೆ ನಡೆಸಿರುವುದು ಇಲಾಖೆ ಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಹಲ್ಲೆ ಮಾಡಿದ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ, ಇಂಥಹ ಪ್ರಕರಣಗಳು ಪುನರಾವರ್ತನೆಯಾಗಬಾರದು. ವಿದ್ಯಾರ್ಥಿಗಳ ಮೇಲೆ ದೈಹಿಕ ಅಥವಾ ಮಾನಸಿಕ ಹಿಂಸೆ, ಹಲ್ಲೆ ಮಾಡುವುದು ಮಕ್ಕಳ ರಕ್ಷಣಾ ಹಕ್ಕು ನಿಯಮ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಮಹದೇವಪ್ಪ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿಯ ಮೇಲೆ ದೈಹಿಕ ಹಲ್ಲೆ ನಡೆಸಬಾರದು. ಹೆಚ್ಚು ಹೋಂವರ್ಕ್ ನೀಡಬಾರದು. ಪುಸ್ತಕ ಹೊರೆಯಾಗದಂತೆ ಅಗತ್ಯ ಕ್ರಮಗಳನ್ನು ಶಿಕ್ಷಕರು ವಹಿಸಬೇಕು. ಈ ಎಲ್ಲ ವಿಷಯಗಳ ಸಂಬಂಧ ತುರ್ತಾಗಿ ವರದಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಅವರು ಜಿಲ್ಲೆಯ ಐದೂ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಜೂ. 5ರಂದು ನಗರದಲ್ಲಿ ವಿಶ್ವಪರಿಸರ ದಿನಾಚರಣೆ 

ಚಾಮರಾಜನಗರ, ಜೂ. 04 :- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಸಾರ್ವಜನಿಕ ಶಿಕ್ಷಣ ಹಾಗೂ ತೋಟಗಾರಿಕಾ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5ರಂದು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗಣ್ಯರಿಂದ ಸಸಿ ನೆಡುವ ಕಾರ್ಯಕ್ರಮ ಹಾಗೂ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‍ಲಾಲ್ ಮೀನಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಹರೀಶ್ ಕುಮಾರ್ ಪ್ರಶಸ್ತಿ ವಿತರಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಪುಸ್ತಕ ಬಿಡುಗಡೆ ಮಾಡುವರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಡಾ. ಪಿ. ಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ. ಮಹದೇವಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಬಿ.ಎಲ್. ಶಿವಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರು ಹಾಗೂ ಮುಖ್ಯೋಪಾಧ್ಯಾಯರಾದ ಬಿ. ಸುಜಯ್ ಕುಮಾರ್ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದÉ.
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡಿದರೆ ಕ್ರಮ
ಚಾಮರಾಜನಗರ, ಜೂ. 04  ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂಗಡಿ, ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.
ಪ್ಲಾಸ್ಟಿಕ್‍ನಿಂದ ತಯಾರಿಸಿದ ಕ್ಯಾರಿಬ್ಯಾಗ್, ಬಾವುಟ, ಭಿತ್ತಿಪತ್ರ, ತೋರಣ, ಪ್ಲೆಕ್ಸ್, ತಟ್ಟೆ, ಲೋಟ, ಚಮಚ, ಕ್ಲಿಂಗ್ಸ್ ಫಿಲ್ಕ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು, ಥರ್ಮಕೋಲ್ ವಸ್ತುಗಳನ್ನು ನಿಷೇಧಿಸಲಾಗಿದೆ. ನಿಷೇಧಿತ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಹಾಗೂ ವಿತರಣೆ ಮಾಡುವಂತಿಲ್ಲ. ಒಂದುವೇಳೆ ಇದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದೆಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದಾರೆ.


(02-06-2018)ಉದ್ಯೋಗ ಅವಕಾಶಕ್ಕೆ ನೆರವಾಗುತ್ತಿರುವ ಗುಂಡ್ಲುಪೇಟೆ ಜಿ.ಟಿ.ಟಿ.ಸಿ ಕೇಂದ್ರ



ಉದ್ಯೋಗ ಅವಕಾಶಕ್ಕೆ ನೆರವಾಗುತ್ತಿರುವ ಗುಂಡ್ಲುಪೇಟೆ ಜಿ.ಟಿ.ಟಿ.ಸಿ  ಕೇಂದ್ರ  

ಚಾಮರಾಜನಗರ, ಗುಂಡ್ಲುಪೇಟೆಯಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರವು ಉದ್ಯೋಗಾವಕಾಶಕ್ಕೆ ನೆರವಾಗುವ ಅಲ್ಪಾವಧಿ ಮತ್ತು ದೀರ್ಘಾವಧಿಯ ತರಬೇತಿಗಳನ್ನು ನೀಡುತ್ತಾ ಬಂದಿದ್ದು ಈ ಬಾರಿಯೂ ಸಹ ಉಪಯೋಗವಾಗುವ ಹಲವು ತರಬೇತಿಯನ್ನು ನೀಡಲು ಸಜ್ಜಾಗಿದೆ.
2007ರಲ್ಲಿ ಫ್ರಾರಂಭವಾದ ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ದೀರ್ಘಾವಧಿ ಕೋರ್ಸು ಅಧ್ಯ್ಯಯನಕ್ಕೆ ಅವಕಾಶ ನೀಡಿದ್ದು ಇದುವರೆಗೆ 140 ವಿದ್ಯಾರ್ಥಿಗಳು ತರಬೇತಿ ಪಡೆದು ರಾಷ್ಟ್ರಮಟ್ಟದ ಪ್ರತಿಷ್ಠಿತ ಕೈಗಾರಿಕೆ ಉದ್ಯಮಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ನೌಕರಿ ಅವಕಾಶ ಲಭಿಸಿದೆ.
ಟೂಲ್ ಮತ್ತು ಡೈ ಮೇಕಿಂಗ್ ಕೋರ್ಸಿಗೆ ಈ ಹಿಂದಿನ ವರ್ಷಗಳಲ್ಲಿ 30 ವಿದ್ಯಾರ್ಥಿಗಳಿಗೆ ಮಾತ್ರÀ ಪ್ರವೇಶ ನೀಡಲಾಗುತ್ತಿತ್ತು, ಈ ಕೋರ್ಸು ವ್ಯಾಸಂಗಮಾಡಿದ ವಿದ್ಯಾರ್ಥಿಗಳಿಗೆ ದೇಶವಿದೇಶಗಳಲ್ಲೂ ಹೆಚ್ಚಿನÀ ಉದ್ಯೋಗ ಅವಕಾಶ ಲಭಿಸುತ್ತಿತ್ತು. ಹೀಗಾಗಿ ಸಹಜವಾಗಿ ಕೋರ್ಸು ಪ್ರವೇಶಕ್ಕೆ ಹೆಚ್ಚಿನ ಬೇಡಿಕೆ ಇರುವುದನ್ನು ಮನಗಂಡು ಕರ್ನಾಟಕ ಸರ್ಕಾರ ಮತ್ತು ಎಐಸಿಟಿಇ (ಂIಅಖಿಇ)  ಅನುಮೋದನೆ ಪಡೆದು 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ, ಜಿಲ್ಲೆಯಲ್ಲಿ ಇಂತಹ ಕೋರ್ಸು ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ಅವಕಾಶ ದೊರೆತಿರುವುದು ವಿಶೇಷವಾಗಿದೆ.
ತರಬೇತಿ ಕೇಂದ್ರದಲ್ಲಿ ಇತರೆ ಸರ್ಟಿಫೈಡ್ ಕೋರ್ಸು ವ್ಯಾಸಂಗಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ಇದೆ. ಟೂಲ್ ರೂಂ ಮೆಷಿನಿಷ್ಟ್, ಟೂಲ್ ಅಂಡ್ ಡೈ ಟೆಕ್ನಿಷಿಯನ್ ಕೋರ್ಸುಗಳಲ್ಲಿ ತರಬೇತಿ ಪಡೆಯಬಹುದಾಗಿದೆ.
ಅಲ್ಲದೆ ಕೌಶಲಾಭಿವೃದ್ಧಿ ಇಲಾಖೆ ಪ್ರಾಯೋಜನೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಟೂಲ್ ರೂಂ ಮೆಷಿನಿಷ್ಟ್, ಸಿ.ಎನ್.ಸಿ ಟೆಕ್ನಾಲಜಿಸ್ಟ್ ಕ್ಯಾಡ್/ಕ್ಯಾಮ್ ಸ್ಪೆಷಲಿಸ್ಟ್, ಟರ್ನರ್, ಮಿಲ್ಲರ್ ವಿಷಯದಲ್ಲಿ ಅಲ್ಪಾವಧಿಯ ತರಬೇತಿಯನ್ನು ತರಬೇತಿ ಕೇಂದ್ರವು ನೀಡುತ್ತಿದೆ.
ನೂತನ ತಂತ್ರ ವಿಧಾನ ಸೌಕರ್ಯಗಳನ್ನು ಬಳಸಿಕೊಂಡು ಕೈಗಾರಿಕೆಗಳಲ್ಲಿ ಗರಿಷ್ಠ ಉತ್ಪಾದನೆಗಾಗಿ ತರಬೇತಿ ಹಾಗೂ ಆವಿಷ್ಕಾರಕ್ಕಾಗಿ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಮಹತ್ತರ ಆಶಯದÉೂಂದಿಗೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಆರಂಭವಾಯಿತು. ಉನ್ನತ ಗುಣಮಟ್ಟದ ತರಬೇತಿಯನ್ನು ನೀಡುತ್ತಿರುವ ಕೇಂದ್ರದ ಮುಖ್ಯ ಉದ್ದೇಶವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಗ್ರಾಮೀಣ ಅಭ್ಯರ್ಥಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ಬೇಕಿರುವ ತರಬೇತಿ ತಂತ್ರಜ್ಞಾನ ಕ್ರಮಗಳನ್ನು ರೂಪಿಸುವುದು ಆಗಿದೆ.
 ಗುಂಡ್ಲುಪೇಟೆ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೋರ್ಸುಗಳ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿಗಳನ್ನು ವಿತರಿಸಲಾಗುತ್ತಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 8 ಕಡೆಯ ದಿನವಾಗಿದೆ. ಉದ್ಯೋಗಾವಕಾಶಗಳನ್ನು ಹೆಚ್ಚು ಕಲ್ಪಿಸುವ ಕೋರ್ಸುಗಳ ಅಧ್ಯಯನಕ್ಕೆ  ಅಭ್ಯರ್ಥಿಗಳು ಮುಂದಾಗಬೇಕು. ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದು ಕೇಂದ್ರದ ಪ್ರಾಂಶುಪಾಲರಾದ ಗಣಪತಿ ಎಸ್. ಮೇತ್ರಿ ಮನವಿ ಮಾಡುತ್ತಾರೆ.
ಕೋರ್ಸುಗಳ ವಿವರಗಳಿಗೆ ದೂರವಾಣಿ 08229-222344, ಅಥವಾ ಮೊಬೈಲ್ 9880800692, 9945697513 ಸಂಪರ್ಕಿಸುವಂತೆ ಮೇತ್ರಿ ಅವರು ಮಾಹಿತಿ ನೀಡಿದ್ದಾರೆÉ.
ಜೂ. 5ರಂದು ವಿಶ್ವಪರಿಸರ ದಿನಾಚರಣೆ
ಚಾಮರಾಜನಗರ, ಜೂ. 02:- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಸಾರ್ವಜನಿಕ ಶಿಕ್ಷಣ ಹಾಗೂ ತೋಟಗಾರಿಕಾ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5ರಂದು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಗಣ್ಯರಿಂದ ಸಸಿ ನೆಡುವ ಕಾರ್ಯಕ್ರಮ ಹಾಗೂ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‍ಲಾಲ್ ಮೀನಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಹರೀಶ್ ಕುಮಾರ್ ಪ್ರಶಸ್ತಿ ವಿತರಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಪುಸ್ತಕ ಬಿಡುಗಡೆ ಮಾಡುವರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಮತ್ತು ಅರಣ್ಯ ಸಂರಕ್ಷಣಾಧಿಕಾರಿ ಡಾ. ಪಿ. ಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ. ಮಹದೇವಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಬಿ.ಎಲ್. ಶಿವಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರು ಹಾಗೂ ಮುಖ್ಯೋಪಾಧ್ಯಾಯರಾದ ಬಿ. ಸುಜಯ್ ಕುಮಾರ್ ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದÉ.

ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಷ್ಪಕ್ಷಪಾತ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ 

ಚಾಮರಾಜನಗರ, ಜೂ. 02 - ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಕಾರ್ಯವನ್ನು ನಿಷ್ಪಕ್ಷಪಾತ ಹಾಗೂ ಶ್ರದ್ಧೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ಮೈಕ್ರೋ ಅಬ್ಸರ್‍ವರ್‍ಗಳು ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೂನ್ 8ರಂದು ನಡೆಯುವ ಮತದಾನ ದಿನದಂದು ಯಾವುದೇ ಸಮಸ್ಯೆ, ಗೊಂದಲಕ್ಕೆ ಅಸ್ಪದವಿಲ್ಲದಂತೆ ಕಾರ್ಯನಿರ್ವಹಿಸಲು ಸಿದ್ಧರಾಗಿರಬೇಕು. ಮತಗಟ್ಟೆ ಅಧಿಕಾರಿಗಳ ಕಾರ್ಯನಿರ್ವಹಣೆ ಅತ್ಯಂತ ಪ್ರಾಮುಖ್ಯವಾಗಿದೆ. ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಚುನಾವಣಾ ಕೆಲಸವನ್ನು ಹಗುರವಾಗಿ ಪರಿಗಣಿಸಬಾರದು. ಚುನಾವಣೆಯಲ್ಲಿ ಶಿಕ್ಷಕರು ಮತದಾರರಾಗಿರುವುದರಿಂದ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿಲ್ಲ. ಇತರೆ ಇಲಾಖೆಗಳ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಮೈಕ್ರೋ ಅಬ್ಸರ್‍ವರ್‍ಗಳು ಚುನಾವಣಾ ಪ್ರಕ್ರಿಯೆಯವನ್ನು ಕೂಲಂಕುಶವಾಗಿ ಪರಿಶೀಲಿಸಿ ವೀಕ್ಷಕರಿಗೆ ವರದಿ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರಾಜ್ಯಮಟ್ಟದ ಮಾಸ್ಟರ್‍ಟ್ರೈನರ್ ಶ್ರೀನಿವಾಸಕುಮಾರ್ ಅವರು ಮಾತನಾಡಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆ ಅದಕ್ಕಿಂತ ಸ್ವಲ್ಪ ಭಿನ್ನವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತ ಚಲಾಯಿಸಿದರೆ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ನೋಂದಾಯಿತ ಶಿಕ್ಷಕರು ಮಾತ್ರ ಮತದಾನ ಮಾಡಲಿದ್ದಾರೆ ಎಂದರು.
ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುವ ಪ್ರಿಸೈಡಿಂಗ್ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಮತದಾರರು ಗುರುತಿನ ಚೀಟಿ ಹೊಂದಿರುವುದನ್ನು ಗಮನಿಸಬೇಕು. ಮತ ಚಲಾಯಿಸಿದವರ ಎಡಗೈ ಮಧ್ಯದ ಬೆರಳಿಗೆ ಶಾಯಿ ಹಾಕಬೇಕು ಎಂದು ತಿಳಿಸಿದರು.
ಮತದಾನ ದಿನದಂದು ಬೆಳಿಗ್ಗೆ ಅಭ್ಯರ್ಥಿಗಳ ವಿವರ ಹೊಂದಿರುವ ಪೋಸ್ಟರ್‍ನ್ನು ಮತದಾನ ಕೇಂದ್ರದ ಹೊರಗಡೆ ಗೋಡೆಯಲ್ಲಿ ಅಳವಡಿಸಿರಬೇಕು. ಮತದಾನ ಕೇಂದ್ರದೊಳಗಡೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಎಚ್ಚರವಹಿಸಬೇಕು ಎಂದ ಶ್ರೀನಿವಾಸಕುಮಾರ್ ಅವರು ತಿಳಿಸಿದರು.
ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್, ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈಕ್ರೋ ಅಬ್ಸರ್‍ವರ್ ನೋಡೆಲ್ ಅಧಿಕಾರಿ ಹಾಗೂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಡಾ. ಆನಂದ್, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್ ಸುದರ್ಶನ್ ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ಪ್ರಕ್ರಿಯೆಯ ಕಾರ್ಯನಿರ್ವಹಣೆ ಕುರಿತು ಪವರ್ ಪಾಯಿಂಟ್ ಪ್ರಸಂಟೇಷನ್ ಏರ್ಪಡಿಸಲಾಗಿತ್ತು.   

ಅಪರಿಚಿತ ಶವ ಪತ್ತೆಗೆ ಮನವಿ

ಚಾಮರಾಜನಗರ, ಜೂ. 02  ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆಆರ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಜನವರಿ 1ರಂದು ಸದರಿ ವ್ಯಕ್ತಿ ಮೃತಪಟ್ಟಿದ್ದು ಈತನ ವಾರಸುದಾರರ ಪತ್ತೆಗೆ ಮಾಹಿತಿ ನೀಡುವಂತೆ ಪಟ್ಟಣ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಕೋರಿದ್ದಾರೆ.
ಸುಮಾರು 40 ರಿಂದ 45 ವಷದವರಾಗಿದ್ದು, ಕೃಶ ಶರೀರ, ಗೋಧಿ ಮೈಬಣ್ಣ, ಕೋಲು ಮುಖ, ಕಪ್ಪು ಮತ್ತು ಬಿಳಿ ಮಿಶ್ರಿತ ಬಣ್ಣದ ತಲೆ ಕೂದಲು ಇರುತ್ತದೆ. ಮೃತ ದೇಹವನ್ನು ಮೈಸೂರು ಸರ್ಕಾರಿ ಮೆಡಿಕಲ್ ಕಾಲೇಜಿನ ಶವಾಗಾರತದಲ್ಲಿ ಇಡಲಾಗಿದೆ. ಸದರಿ ವ್ಯಕ್ತಿಯ ಮಾಹಿತಿ ಇದ್ದÀಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂ.ಸಂ. 08226-222243, ಪಟ್ಟಣ ಪೊಲೀಸ್ ಠಾಣೆ 08226-222047, ಮೊಬೈಲ್ 9480804645, ಪೊಲೀಸ್ ಕಂಟ್ರೋಲ್ ರೂಂ 08226-222383ಗೆ ಕರೆ ಮಾಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. 

ಬೇಗೂರು ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 02 - ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾಂತ್ರಿಕ ಹಾಗೂ ತಾಂತ್ರಿಕೇತರ ವೃತ್ತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಜಿಇಟಿ ನವದೆಹಲಿಯಿಂದ ಸಂಯೋಜನೆ ಪಡೆದಿರುವ ಎಲೆಕ್ಟ್ರೀಷಿಯನ್, ಫಿಟ್ಟರ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಐಸಿಟಿಎಸ್‍ಎಂ ಹಾಗೂ ರಾಜ್ಯ ಶಿಕ್ಷಣ ಪರಿಷತ್‍ನಿಂದ ಸಂಯೋಜನೆ ಪಡೆದಿರುವ ಎಂಆರ್‍ಎಸಿ, ಎಂಎಂವಿ, ಟರ್ನರ್, ಮೆಕಾನಿಕ್ ಡೀಸಲ್, ಡ್ರಸ್ ಮೇಕಿಂಗ್ ವೃತ್ತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ.
ದಿನಾಂಕ 1.8.2018ಕ್ಕೆ ಅನ್ವಯವಾಗುವಂತೆ 14 ವರ್ಷ ಮೇಲ್ಪಟ್ಟ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ  ಮೂಲಕ ಜೂನ್ 8ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ. 08229-231010 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕೊಳ್ಳೇಗಾಲ : ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 02 :- ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿ ತರಬೇತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ತೇರ್ಗಡೆಯಾದ ಅಭ್ಯರ್ಥಿಗಳು 2 ವರ್ಷ ಅವಧಿಯ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್ ವೃತ್ತಿ ಪ್ರವೇಶ ಪಡೆಯಬಹುದಾಗಿದೆ.
8ನೇ ತರಗತಿ ತೇರ್ಗಡೆಯಾಗಿದ್ದು ಎಸ್‍ಎಸ್‍ಎಲ್‍ಸಿ ತೇರ್ಗಡೆ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ 1 ವರ್ಷ ಅವಧಿಯ ಸೀವಿಂಗ್ ಟೆಕ್ನಾಲಜಿ ವೃತ್ತಿ ತರಬೇತಿಗೆ ಅವಕಾಶವಿದೆ. ಈ ತರಬೇತಿಗೆ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅರ್ಜಿಯನ್ನು ವೆಬ್ ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ  ಅಥವಾ ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿ ಮೂಲಕ ಜೂನ್ 8ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ. 08224-297036 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ತಾಲೂಕು ಕೇಂದ್ರಗಳಿಗೆ ಭ್ರಷ್ಠಾಚಾರ ನಿಗ್ರಹದಳ ಭೇಟಿ : ದೂರು ಸ್ವೀಕಾರ
ಚಾಮರಾಜನಗರ, ಜೂ. 02 ಜಿಲ್ಲೆಯ ಭ್ರಷ್ಠಾಚಾರ ನಿಗ್ರಹದಳದ ಅಧಿಕಾರಿಗಳು ಜೂನ್ 5ರಿಂದ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಜೂನ್ 5ರಂದು ಗುಂಡ್ಲುಪೇಟೆ, 18ರಂದು ಯಳಂದೂರು, 25ರಂದು ಕೊಳ್ಳೇಗಾಲ, 29ರಂದು ಹನೂರು ಪಟ್ಟಣದ ಸರ್ಕಾರಿ ಅತಿಥಿಗೃಹ ಹಾಗೂ ಜೂನ್ 11ರಂದು ಚಾಮರಾಜನಗರ ಪಟ್ಟಣದ ಎಸಿಬಿ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಸೇರಿದಂತೆ ಇತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ದೂರುಗಳನ್ನು ಸಲ್ಲಿಸಬಹುದಾಗಿದೆ. ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಭ್ರಷ್ಠಾಚಾರ ನಿಗ್ರಹದಳದ ಪೊಲೀಸ್ ಠಾಣೆ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.














Friday, 1 June 2018

31-05-2018 (ತಂಬಾಕು ಸೇವನೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಅಗತ್ಯ : ಜಿ. ಬಸವರಾಜುಡೆಂಗಿ ನಿಯಂತ್ರಣದಲ್ಲಿ ಜನರ ಸಹಭಾಗಿತ್ವಕ್ಕಾಗಿ ಮಾಧ್ಯಮಗಳ ಪಾತ್ರ ಪ್ರಮುಖ: ಡಾ. ಕೆ.ಎಚ್. ಪ್ರಸಾದ್ )

ತಂಬಾಕು ಸೇವನೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಅಗತ್ಯ : ಜಿ. ಬಸವರಾಜು

ಚಾಮರಾಜನಗರ, ಮೇ. 31 - ಕ್ಯಾನ್ಸರ್‍ನಂತಹ ಮಾರಕ ಕಾಯಿಲೆಗೆ ಗುರಿಯಾಗಿಸುವ ತಂಬಾಕು ಸೇವನೆ ಬಗ್ಗೆ ನಾಗರಿಕರು ಸೇರಿದಂತೆ ಪ್ರತಿಯೊಬ್ಬರಲ್ಲೂ ಅರಿವು ಅಗತ್ಯವಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಬಸವರಾಜು ಅವರು ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾಧನ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ತಂಬಾಕು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ. ಬೀಡಿ, ಸಿಗರೇಟು, ಗುಟ್ಕಾ ಹಾಗೂ ಇನ್ನಿತರೆ ತಂಬಾಕು ಪದಾರ್ಥಗಳಲ್ಲಿ 7 ಸಾವಿರ ರಾಸಾಯನಿಕ ವಸ್ತುಗಳಿವೆ. ಅವುಗಳ ಸೇವನೆ ಕುರಿತು ಜನಜಾಗೃತಿ ಅಗತ್ಯವಾಗಿದೆ. ತಂಬಾಕು ಸೇವನೆಯನ್ನು ಗಂಭೀರÀವಾಗಿ ಪರಿಗಣಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಇದನ್ನು ತಡೆಗಟ್ಟಲು 1987ರಿಂದ ತಂಬಾಕು ಸೇವನೆ ವಿರುದ್ಧ ಕಾನೂನು ಜಾರಿಗೊಳಿಸಿದೆ. ಅದರನ್ವಯ ವಿಶ್ವದಾದ್ಯಂತ ಇಂದು ತಂಬಾಕು ದಿನ ಆಚರಿಸಲಾಗುತ್ತಿದೆ ಎಂದರು.

ವಿಶ್ವದಲ್ಲಿ ಪ್ರತಿವರ್ಷ 6 ಮಿಲಿಯನ್ ಜನರು ತಂಬಾಕು ಸೇವನೆಯಿಂದ ಸಾವನಪ್ಪುತ್ತಿದ್ದಾರೆ. ಭಾರತದಲ್ಲಿ 6 ಲಕ್ಷ ಜನ ಈ ಭಯಾನಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ದೇಶದಲ್ಲಿ ತಂಬಾಕು ಸೇವನೆ ನಿಯಂತ್ರಣಕ್ಕಾಗಿ ಕೋಟ್ಪಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ದೇಶಾದ್ಯಂತ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಕೋಟ್ಪಾ ಕಾಯ್ದೆಯಡಿ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಸೇವನೆ ಮಾಡಿದರೆ 200 ರೂ. ದಂಡ ವಿಧಿಸಲಾಗುತ್ತದೆ. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಪದಾರ್ಥಗಳನ್ನು ಮಾರುವಂತಿಲ್ಲ. ಅಲ್ಲದೆ ವಿದ್ಯಾಸಂಸ್ಥೆಗಳ ಅವರಣದಲ್ಲಿನ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥಗಳನ್ನು ಮಾಡಿದರೆ ದಂಡ ವಿಧಿಸಲಾಗುತ್ತಿದೆ. ಜಿಲ್ಲೆಯಲ್ಲಿಯೂ ಕೋಟ್ಪಾ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ 1668 ಮಂದಿಗೆ 13 ಲಕ್ಷದ 6 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಎಂ. ರಮೇಶ್ ಅವರು ಮಾತನಾಡಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಜನರು ಜಾಗರೂಕರಾಗಬೇಕಿದೆ. ತಂಬಾಕು ತ್ಯಜಿಸಿ ಸಮಾಜಕ್ಕೆ ಉತ್ತಮ ಪರಿಸರವನ್ನು ನೀಡಬೇಕು. ತಂಬಾಕಿನ ಹಾನಿ ಬಗ್ಗೆ ನಾಗರಿಕರು ಹಾಗೂ ಯುವಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ತಂಬಾಕು ಸೇವನೆಯಿಂದ ಮನುಕುಲ ವಿನಾಶದತ್ತ ಸಾಗಿದೆ. ಅದರ ನಿಯಂತ್ರಣ ನಮ್ಮ ಕೈಯಲ್ಲೆ ಇದೆ. ತಂಬಾಕು ಪದಾರ್ಥಗಳ ಉತ್ಪನ್ನಗಳ ಸೇವನೆಯನ್ನು ತ್ಯಜಿಸಲು ಪ್ರತಿಯೊಬ್ಬರು ಪಣತೊಡಬೇಕಾಗಿದೆ ಎಂದರು.
ಜೆ.ಎಂ.ಎಫ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ಜಿಲ್ಲಾ ಬಾಲನ್ಯಾಯ ಮಂಡಳಿಯ ಅಧ್ಯಕ್ಷರು ಹಾಗೂ ಸಾಧನ ಸಂಸ್ಥೆಯ ಅಧ್ಯಕ್ಷರಾದ ಟಿ.ಜೆ. ಸುರೇಶ್, ಅರಣ್ಯಾಧಿಕಾರಿಗಳಾದ ಸಂತೋಷ್ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಂಬಾಕು ಮುಕ್ತ ಸಮಾಜಕ್ಕೆ ಕಾನೂನಿಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ :
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ  ಜಿ. ಬಸವರಾಜ 

ಚಾಮರಾಜನಗರ, ಮೇ. 31 - ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ ಕಾನೂನು ನಮ್ಮ ದೇಶದಲ್ಲಿ 2003ರಿಂದ ಜಾರಿಯಲ್ಲಿದೆ. ಆದರೆ, ಧೂಮಪಾನ ಮುಕ್ತ ಸಮಾಜದ ಸೃಷ್ಠಿಗೆ ಕಾನೂನುಗಳಿಗಿಂತ ಸ್ವಯಂ ನಿರ್ಬಂಧವೇ ಹೆಚ್ಚು ಪರಿಣಾಮಕಾರಿ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಸಂವಿಧಾನವು ತನ್ನ ಪ್ರತಿ ಪ್ರಜೆಗೂ ಗೌರವಯುತವಾಗಿ ಜೀವಿಸುವ ಮೂಲಭೂತ ಹಕ್ಕನ್ನು ನೀಡಿದೆ. ಯಾವುದೇ ನಾಗರೀಕರು ಜೀವಿಸುವ ಪರಿಸರ ಹಾನಿಯಾಗದಂತೆ, ಮಲಿನಗೊಳ್ಳದಂತೆ ಕಾಯ್ದುಕೊಳ್ಳಬೇಕು. ಆದರೆ ಧೂಮಪಾನ ಮಾಡುವ ಜನರಿಂದ ಇತರರ ಜೀವಿಸುವ ಮೂಲಭೂತ ಹಕ್ಕಿಗೆ, ಅವರ ಪರಿಸರಕ್ಕೆ ತೊಂದರೆಯಾಗುತ್ತದೆ. ಅಂತಹ ಸಂದರ್ಭದಲ್ಲಿ ಧೂಮಪಾನ ಮಾಡಿದವರ ವಿರುದ್ಧ ದೂರನ್ನು ಕೊಡಬಹುದು. ಅದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ತಿಳಿಸಿದರು.
ಅಷ್ಟೇ ಅಲ್ಲದೆ, ಪರಿಸರದ ಸಮಗ್ರ ರಕ್ಷಣೆ ಸರ್ಕಾರದ ಹಾಗೂ ಸಾರ್ವಜನಿಕರ ಕರ್ತವ್ಯ ಎಂದ ಅವರು ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹಾಗೂ ನೆರೆಹೊರೆಯಲ್ಲಿ ಯಾರೇ ಧೂಮಪಾನ ಮಾಡುತ್ತಿದ್ದಲ್ಲಿ ಅವರಿಗೆ ಇದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಎಂದು ಮನವಿ ಮಾಡಿದರು. ಹಾಗಾದಲ್ಲಿ ಮಾತ್ರ ಈ ದಿನಾಚರಣೆ ಅರ್ಥಪೂರ್ಣವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ. ರಮೇಶ್ ಅವರು ಮಾತನಾಡಿ ಯುವಜನತೆ ಇಂದು ತೆರೆಯ ಮೇಲಿನ ನಟನಟಿಯರ ಶೈಲಿಗಳನ್ನು ಕಣ್ಣುಮುಚ್ಚಿ ಅನುಸರಿಸುತ್ತಾರೆ. ಸಿಗರೇಟು ಸೇದುವುದು, ಮದ್ಯವ್ಯಸನಗಳಿಗೆ ತುತ್ತಾಗುವುದು ಇದರ ಭಾಗವಾಗಿದೆ ಎಂದರು.
ಯುವಜನರು ತಮ್ಮ ಜೀವನವನ್ನು ಆದರ್ಶಪ್ರಾಯವಾಗಿ ರೂಪಿಸಿಕೊಳ್ಳಬೇಕು. ಹಿರಿಯರ ಹಿತನುಡಿಗಳನ್ನು ಪಾಲಿಸಿ ಮತ್ತೊಬ್ಬರನ್ನು ಅನುಸರಿಸದೇ ತಮ್ಮದೇ ಸ್ವಂತಿಕೆ ಹಾಗೂ ಸೌಜನ್ಯಶೀಲತೆಗೆ ಅವಕಾಶ ಕೊಡಬೇಕು ಎಂದ ಅವರು ಯಾವುದೇ ಕೆಟ್ಟ ವ್ಯಸನಗಳಿಗೆ ದಾಸರಾಗಬೇಡಿ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಹರೀಶ್ ಕುಮಾರ್ ಅವರು ಮಾತನಾಡಿ ಮನುಷ್ಯನಿಗೆ ತನ್ನ ಆರೋಗ್ಯ ಹಾಗೂ ದೇಹದ ಮೇಲೆ ಪ್ರೀತಿ ಇರಬೇಕು. ತಮ್ಮ ಮನಸ್ಸನ್ನು ಧಮಪಾನದಂತಹ, ತಂಬಾಕು ಸೇವನೆಯಂತಹ ವ್ಯಸನಗಳಿಂದ ದೂರ ಮಾಡಲು ಪ್ರೇರೇಪಿಸಬೇಕೆಂದು ಯುವಪೀಳಿಗೆಗೆ ಕಿವಿಮಾತು ಹೇಳಿದರು.
ಶಿಕ್ಷಣ ಮಾತ್ರ ಮನುಷ್ಯನನ್ನು ಅತ್ಯುತ್ತಮ ಮಾಡುವುದಿಲ್ಲ. ಜೀವನದ ಪ್ರತಿಯೊಂದು ಕ್ಷೇತ್ರಗಳಲ್ಲೂ ಒಳ್ಳೆಯ ಸಾಧನೆ ಹಾಗೂ ಜ್ಞಾನ ಸಂಗ್ರÀಹಿಸಲು ಯುವಜನತೆ ಶ್ರಮ ಪಡಬೇಕು ಎಂದರು.
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನವನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಂಬಾಕು ನಿಯಂತ್ರಣ ಘಟಕದ ನೋಡಲ್ ಅಧಿಕಾರಿ ಡಾ. ನಾಗರಾಜ್ ಅವರು ಮಾತನಾಡಿ ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ಹಲವಾರು ರೋಗಗಳು ಬರುತ್ತವೆ. ಹೃದಯ, ಉಸಿರಾಟ, ರಕ್ತಚಲನೆಯ ತೊಂದರೆಗಳೂ ಸೇರಿದಂತೆ ಕ್ಯಾನ್ಸರ್ ನಂತಹ ಮಾರಕ ರೋಗಗಳು ಪರಿಣಮಿಸುತ್ತವೆ.
ಬಾಯಿಯಿಂದ ಶುರುವಾಗಿ ಅನ್ನನಾಳ, ಶ್ವಾಸಕೋಶ, ಲಿವರ್, ಪ್ಯಾಂಕ್ರಿಯಾಸ್ ಗಳ ಕ್ಯಾನ್ಸರ್ ಗಳು ಈ ದುಶ್ಚಟದಿಂದ ಬರುತ್ತವೆ ಎಂದ ಅವರು ಧೂಮಪಾನದಿಂದ ಪುರುಷರಲ್ಲಿ ನಪುಂಸಕತೆ ಸೇರಿದಂತೆ ಮಹಿಳೆಯರಲ್ಲಿ ಗರ್ಭಪಾತದಂತಹ ದುಷ್ಪರಿಣಾಮಗಳು ಕಂಡುಬರುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅವರು ತಂಬಾಕು ಬೆಳೆಯ ಮೇಲೆ ಈಗ ಸರ್ಕಾರ ನಿರ್ಬಂಧ ಹೇರಿ ಪರ್ಯಾಯ ಬೆಳೆಯನ್ನು ಬೆಳೆಯುವ ಪರಿಸರ ಸೃಷ್ಠಿ ಮಾಡುತ್ತಿದೆ. ತಂಬಾಕು ಬೆಳೆ ಲಾಭದಾಯಕ ಬೆಳೆಯಾಗಿರುವುದರಿಂದ ಅದಕ್ಕೆ ಪರ್ಯಾಯ ವಾಣಿಜ್ಯ ಬೆಳೆ ಅಳವಡಿಸಲು  ಪ್ರೇರೇಪಿಸಲಾಗುತ್ತಿದೆ ಎಂದರು.
ತಂಬಾಕು ಬೆಳೆ ಉತ್ಪನ್ನದಿಂದ ಹಿಡಿದು ವಿವಿಧ ಇಲಾಖೆಗಳು ತಂಬಾಕು ಮುಕ್ತ ಸಮಾಜದ ನಿರ್ಮಾಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಆರ್ ಸಿ ಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ್ ಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜು, ಜಿಲ್ಲಾ ವಾರ್ತಾಧಿಕಾರಿ ಪಲ್ಲವಿ ಹೊನ್ನಾಪುರ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ನ್ಯಾಯಾಲಯದ ಆವರಣದಿಂದ ಜಿಲ್ಲಾಡಳಿತದ ಭವನದವರೆಗೆ ವಿವಿಧ ನರ್ಸಿಂಗ್ ವಿದ್ಯಾಲಯದ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ತಂಬಾಕು ವಿರೋಧಿ ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಜಾಥಾ ನಡೆಸಿದರು.


ಡೆಂಗಿ ನಿಯಂತ್ರಣದಲ್ಲಿ ಜನರ ಸಹಭಾಗಿತ್ವಕ್ಕಾಗಿ ಮಾಧ್ಯಮಗಳ ಪಾತ್ರ ಪ್ರಮುಖ: ಡಾ. ಕೆ.ಎಚ್. ಪ್ರಸಾದ್ 

ಚಾಮರಾಜನಗರ, ಮೇ. 31 - ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗಿ ಜ್ವರವನ್ನು ಆರಂಭಿಕ ಹಂತದಲ್ಲಿಯೇ ತಡೆಗಟ್ಟಲು ಜನರ ಸಹಭಾಗಿತ್ವ ರೂಪಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾದದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅವರು ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಡೆಂಗಿ ಜ್ವರ ಈಡಿಸ್ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗವಾಹಕವಾಗಿದೆ. ಸ್ವಚ್ಚ ನೀರಿನಲ್ಲಿ ಸಂತಾನ ಅಭಿವೃದ್ಧಿ ಮಾಡುವ ಈ ಸೊಳ್ಳೆಗಳು ಹಗಲು ವೇಳೆಯಲ್ಲಿ ಮಾತ್ರ ವ್ಯಕ್ತಿಯನ್ನು ಕಚ್ಚಿ ರೋಗ ಹರಡುವಲ್ಲಿ ಕ್ರಿಯಾಶೀಲವಾಗುತ್ತದೆ. ಇದರ ಬಗ್ಗೆ ನಾಗರೀಕರು ಜಾಗೃತಿ ಹೊಂದಬೇಕಾಗಿದೆ ಎಂದರು.
ಡೆಂಗಿ ಬಗ್ಗೆ ವಿವರಗಳನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಿದ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ್‍ಕುಮಾರ್ ಅವರು ಮಳೆಗಾಲದಲ್ಲಿ ಹೆಚ್ಚು ಕ್ರಿಯಾಶಿಲವಾಗುವ ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಹಳೆ ವಸ್ತುಗಳಾದ ಮಡಿಕೆ, ಡ್ರಮ್, ಬ್ಯಾರಲ್, ಉಪಯೋಗಿಸಿದ ಒರಳುಕಲ್ಲು ಹಾಗೂ ಹಳೆಯ ಟೈರುಗಳಲ್ಲಿ ಹೆಚ್ಚಾಗಿ ಕಾಣಸಿಗುತ್ತವೆ. ಇವುಗಳ ನಿಯಂತ್ರಣಕ್ಕಾಗಿ ನಾಗರೀಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚತೆಯಿಂದ ಕಾಪಾಡಿಕೊಳ್ಳಲು ಕಾರ್ಯೋನ್ಮುಖರಾಗಬೇಕು ಎಂದರು.
ಡೆಂಗಿ ನಿಯಂತ್ರಣಕ್ಕಾಗಿ ಜನರ ಸಹಭಾಗಿತ್ವದೊಂದಿಗೆ ವಿವಿಧ ಇಲಾಖೆಗಳು ಕೈಜೋಡಿಸಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಶಿಕ್ಷಣ, ಸಮಾಜ ಕಲ್ಯಾಣ, ಮೀನುಗಾರಿಕೆ, ಕೈಗಾರಿಕೆ, ನೀರಾವರಿ, ಕಂದಾಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸಹ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಅವರು ತಿಳಿಸಿದರು.
ಮಾಧ್ಯಮದವರಿಗೆ ಜಿಲ್ಲೆಯ ಯಾವುದೇ ಭಾಗದಿಂದ ಡೆಂಗಿ ಶಂಕಿತ ಪ್ರಕರಣಗಳ ಬಗ್ಗೆ ಮಾಹಿತಿ ಬಂದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಸ್ಪಷ್ಠೀಕರಣ ಅಥವಾ ಹೆಚ್ಚಿನ ಮಾಹಿತಿಯನ್ನು ಅಧೀಕೃತವಾಗಿ ಪಡೆದು ನಂತರ ವರದಿಯನ್ನು ಪ್ರಕಟಿಸುವಂತೆ ಮನವಿ ಮಾಡಿದರು. ಇದರಿಂದ ಸಾರ್ವಜನಿಕರಲ್ಲಿ ಮೂಡಬಹುದಾದ ಅತಂಕವನ್ನು ಸ್ವಲ್ಪಮಟ್ಟಿಗೆ ತಡೆಯಲು ಹಾಗೂ ನೈಜ ಚಿತ್ರಣ ನೀಡಲು ಅನುಕೂಲವಾಗುವುದು ಎಂದು ತಿಳಿಸಿದರು.
ಡೆಂಗಿ ರೋಗ ತಡೆಯುವಿಕೆಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ನಿರಂತರವಾಗಿ ಅರಿವು ಜಾಥಾಗಳನ್ನು ಏರ್ಪಡಿಸುವುದರ ಜೊತೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತೀ ತಿಂಗಳ ಮೊದಲ ಹಾಗೂ 3ನೇ ಶುಕ್ರವಾರ ಮನೆಮನೆಗೆ ಭೇಟಿ ನೀಡಿ ಜನರಿಗೆ ತಿಳಿವಳಿಕೆ ನೀಡಲಿದ್ದಾರೆ. ಡೆಂಗ್ಯೂ ಜ್ವರದ ಸಮರ್ಪಕ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ 33 ಪ್ರಯೋಗಾಲಯ ತೆರೆಯಲಾಗಿದ್ದು, ನಗರದ ಜಿಲ್ಲಾ ಆಸ್ಪತ್ರೆಯಲ್ಲಿಯೂ ಸಹ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಮನೆಮನೆಗೆ ಭೇಟಿ ನೀಡುವ ಆರೋಗ್ಯ ಇಲಾಖೆ ಸಿಬ್ಬಂದಿ ಡೆಂಗ್ಯೂ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ಸಮೀಕ್ಷೆ ಮಾಡಿ ಅದರ ನಿರ್ಮೂನೆಗೆ ಮಾಹಿತಿ ನೀಡುವರು. ಜನರಿಗೆ ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿಯಂತ್ರಕ ಕಾಯಿಲ್‍ಗಳನ್ನು ಅಳವಡಿಸಿಕೊಳ್ಳುವ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಲು ಪ್ರೇರೇಪಿಸುವರು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಲು ಅಗತ್ಯ ಮಾಹಿತಿ ಒದಗಿಸುವರು ಎಂದ ಪ್ರಸಾದ್ ಅವರು ಡೆಂಗ್ಯು ನಿಯಂತ್ರಣಕ್ಕಾಗಿ ತೆರೆಯಲಾಗಿರುವ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಿ ಸಾರ್ವಜನಿಕರು ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಆರ್ ಸಿ ಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜು, ಜಿಲ್ಲಾ ವಾರ್ತಾಧಿಕಾರಿ ಪಲ್ಲವಿ ಹೊನ್ನಾಪುರ, ಮಾಧ್ಯಮ ಪ್ರತಿನಿಧಿಗಳು ಹಾಗೂ ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಡೆಂಗಿ ಜ್ವರ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.


ಸ್ವಚ್ಚ ಭಾರತ ಬೇಸಿಗೆ ಪ್ರಶಿಕ್ಷಣ ಕಾರ್ಯಕ್ರಮ

ಚಾಮರಾಜನಗರ, ಮೇ. 31 - ಚಾಮರಾಜನಗರ ಜಿಲ್ಲಾ ನೆಹರು ಯುವ ಕೇಂದ್ರವು ಯುವ ಜನರು ಸ್ವಚ್ಚ ಭಾರತ ಬೇಸಿಗೆ ಪ್ರಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನೆಹರು ಯುವ ಕೇಂದ್ರದಲ್ಲಿ ಸಂಯೋಜನೆಗೊಂಡ ಯುವ ಮಂಡಳಿಗಳು ಹಾಗೂ ಯುವಜನರಿಂದ ಅರ್ಜಿ ಆಹ್ವಾನಿಸಿದೆ.
ನೋಂದಣಿಯಾದ ಯುವಕ, ಯುವತಿ, ಮಹಿಳಾ ಮಂಡಳಿಗಳು ಹಾಗೂ ಯುವಜನರು 100 ಗಂಟೆಗಳ ಅವಧಿಗೆ ತಮ್ಮ ಗ್ರಾಮ ಅಥವಾ ಪ್ರದೇಶದ ಸ್ವಚ್ಚತೆಯನ್ನು ಮಾಡುವುದರೊಂದಿಗೆ ದೇಶದ ಈ ಮಹತ್ತರ ಅಭಿಯಾನದಲ್ಲಿ ತೊಡಗಿಸಿ ಕೊಳ್ಳಬಹುದಾಗಿದೆ. ಯುವಜನರು ಹಾಗೂ ಸಂಘಸಂಸ್ಥೆಗಳು ಆನ್ ಲೈನ್ hಣಣಠಿ:////sbsi.mಥಿgov.iಟಿ ಮೂಲಕವೂ ಸಹ ಅರ್ಜಿ ಸಲ್ಲಿಸಬಹುದಾಗಿದ್ದು ಜೂನ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ನೋಂದಾಯಿತ ಯುವಜನರು ಹಾಗೂ ಸಂಘಸಂಸ್ಥೆಗಳು ತಮ್ಮ ಗ್ರಾಮ ಅಥವಾ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸ್ಚಚ್ಚತಾ ಕಾರ್ಯಕ್ರಮವನ್ನು ಕೈಗೊಂಡು ಸೂಕ್ತ ದಾಖಲೆಗಳನ್ನು ನೆಹರು ಯುವ ಕೇಂದ್ರ, ಚಾಮರಾಜನಗರ ಇಲ್ಲಿಗೆ ಸಲ್ಲಿಸಬೇಕು.
ಉತ್ತಮ ಕೆಲಸ ಮಾಡಿದ ಯುವ ಸಂಘಗಳಿಗೆ ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟಕ್ಕೆ ರೂ.30000 ಪ್ರಥಮ, ರೂ. 20000 ದ್ವಿತೀಯ, ರೂ. 10000 ತೃತೀಯ ಬಹುಮಾನವಿದೆ. ರಾಜ್ಯ ಮಟ್ಟಕ್ಕೆ ರೂ.50000 ಪ್ರಥಮ, ರೂ. 30000 ದ್ವಿತೀಯ, ರೂ. 20000 ತೃತೀಯ ಬಹುಮಾನವಿದೆ. ರಾಷ್ಟ್ರ ಮಟ್ಟಕ್ಕೆ ರೂ.2 ಲಕ್ಷ ಪ್ರಥಮ, ರೂ. 1 ಲಕ್ಷ ದ್ವಿತೀಯ, ರೂ. 50000 ತೃತೀಯ ಬಹುಮಾನವಿದೆ.
ಸ್ವಚ್ಚ ಭಾರತ ಸಮ್ಮರ್ ಇಂಟರ್ನಷಿಪ್ 100 ತಾಸು, ಸ್ವಚ್ಚತಾ ಕಾರ್ಯಕ್ರಮದಡಿ ನೋಂದಾಯಿತ ಸಂಘಗಳು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳು (ಐಇಸಿ) ಇವೆ. ಅರಿವು ಮೂಡಿಸುವ, ಶೌಚಾಲಯಗಳ ಉಪಯೋಗ, ಸ್ವಚ್ಚ ಕೈ ತೊಳೆಯುವುದು, ಆರೋಗ್ಯಕರ ಕುರಿತು ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೀದಿ ನಾಟಕ ಇತ್ಯಾದಿ ಸ್ಚಚ್ಚತೆ ಕುರಿತು ಕಾರ್ಯಕ್ರಮಗಳ್ನು ಹಮ್ಮಿಕೊಳ್ಳಬೇಕು. ಸ್ವಚ್ಚತಾ ಶಿಬಿರಗಳು, ಸಂಗೀತ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆರೋಗ್ಯಕ್ಕೆ ಮತ್ತು ಸ್ವಚ್ಚತೆಗೆ ಸಂಬಂಧಿಸಿದಂತೆ ಗ್ರಾಮೀಣ ಅಥವಾ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಏರ್ಪಡಿಸಬೇಕು. ಮನೆಮನೆಗೆ ಸಭೆಗಳನ್ನು ನಡೆಸಿ ಆರೋಗ್ಯದ ಬಗ್ಗೆ ಅರಿವು ಮೂಡಿಸಬೇಕು. ಸ್ವಚ್ಚತೆಗೆ ಸಂಬಂಧಿಸಿದಂತೆ ಗೋಡೆ ಬರಹಗಳನ್ನು ಬರೆಯುವುದು ಹಾಗೂ ಚಲನಚಿತ್ರಗಳನ್ನು ಪ್ರದರ್ಶಿಸುವುದು, ಸ್ವಚ್ಚತೆಗೆ ಸಂಬಂಧಿಸಿದಂತೆ ಐಇಸಿ ಸಾಮಗ್ರಿಗಳನ್ನು ಉಚಿತವಾಗಿ ಇದರ ಮೂಲಕ ಪಡೆಯಬಹುದು. ಘನತ್ಯಾಜ್ಯ ವಸ್ತುಗಳ ಚಟುವಟಿಕೆ ಕಾರ್ಯಕ್ರಮದಲ್ಲಿ ಅರಿವು ಮೂಡಿಸುವುದು. ಘನತ್ಯಾಜ್ಯ ವಸ್ತುಗಳ ಸಂಗ್ರಹ ಮತ್ತು ವಿಲೇವಾರಿ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ hಣಣಠಿ:////sbsi.mಥಿgov.iಟಿ ನಲ್ಲಿ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ 08226-222120 ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಮನ್ವಯಾಧಿಕಾರಿ ಎನ್. ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ :
ವಿಮಾ ಸಂಸ್ಥೆ ಆಯ್ಕೆ

ಚಾಮರಾಜನಗರ, ಮೇ. 31 - ಜಿಲ್ಲೆಯಲ್ಲಿ 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಫ್ಯೂಚರ್ ಜೆನೆರೆಲಿ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿ. ವಿಮಾ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ.
ಮಾಹಿತಿಗಾಗಿ ಮೋಹನ್ (ಮೊಬೈಲ್ 9482801144) ಇವರನ್ನು ಸಂಪರ್ಕಿಸಿ ರೈತಬಾಂಧವರು ಬೆಳೆ ವಿಮೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಚಾ.ನಗರ : ಆಂಗ್ಲ ಮಾಧ್ಯಮ ಮಾದರಿ ಶಾಲೆ ದಾಖಲಾತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 31 :- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಜನಾಂಗದ ವಿದ್ಯಾರ್ಥಿಗಳಿಗೆ 6 ಹಾಗೂ 7ನೇ ತರಗತಿ ದಾಖಲಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಧಿತ ಅರ್ಜಿ ನಮೂನೆಯನ್ನು ನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ  ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಯಿಂದ ಪಡೆದು  ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಜೂನ್ 30 ಕಡೆಯ ದಿನವಾಗಿದೆ.   
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ (ದೂ.ಸಂ. 08226-224370)ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
             

ಚಾ.ನಗರ : ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 31 :- ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಜನಾಂಗದ ವಿದ್ಯಾರ್ಥಿಗಳಿಂದ ದಾಖಲಾತಿಗೆ  ಅರ್ಜಿ ಆಹ್ವಾನಿಸಲಾಗಿದೆ.
ನಿಗಧಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ಪಡೆದು  ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.   
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-224370 ಸಂಪರ್ಕಿಸಿ ಪಡೆಯುವಂತೆ ಇಲಾಖಾ ಪ್ರಕಟಣೆ ತಿಳಿಸಿದೆ.

ಗುಂಡ್ಲುಪೇಟೆ : ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 31 - ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಗುಂಡಲುಪೇಟೆಯ ವೀರನಪುರ ಕ್ರಾಸ್‍ನಲ್ಲಿ ನಿರ್ವಹಣೆಯಾಗುತ್ತಿರುವ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಜನಾಂಗದ ವಿದ್ಯಾರ್ಥಿಗಳಿಂದ 6 ರಿಂದ 10ನೇ ತರಗತಿ ದಾಖಲಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಧಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ಪಡೆದು  ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.   
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-224370 ಸಂಪರ್ಕಿಸಿ ಪಡೆಯುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ. 

30-05-018 (ಕಾಲುಬಾಯಿ ಜ್ವರ ಲಸಿಕೆ ಆಂದೋಲನ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ )


ಕಾಲುಬಾಯಿ ಜ್ವರ ಲಸಿಕೆ ಆಂದೋಲನ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ 

ಚಾಮರಾಜನಗರ, ಮೇ. 30 - ಜಿಲ್ಲೆಯಲ್ಲಿ ಜೂನ್ 1ರಿಂದ 25ರವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಿರುವ 14ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮವನ್ನು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಜಿಲ್ಲೆಯಲ್ಲಿ ನಡೆಸಲಿರುವ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರವನ್ನು ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ 14ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎಲ್ಲ ಜಾನುವಾರುಗಳಿಗೆ ನಿಗಧಿತ ವೇಳೆಯಲ್ಲಿ ಲಸಿಕೆ ನೀಡಬೇಕು. ನಿಯೋಜಿತವಾಗಿರುವ ತಂಡಗಳು ಆಯಾ ದಿನವೇ ಲಸಿಕೆ ನೀಡುವ ಕಾರ್ಯದ ಪ್ರಗತಿ ಸಾಧಿಸಬೇಕು ಎಂದರು.
ಜಾನುವಾರುಗಳಿಗೆ ನೀಡಲಾಗುವ ಲಸಿಕೆಯಿಂದ ಯಾವುದೇ ತೊಂದರೆ ಕಂಡುಬಾರದಂತೆ ಮುಂಜಾಗ್ರತೆ ವಹಿಸಬೇಕು. ಜಾನುವಾರು ಮಾಲೀಕರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಸಹ  ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯಾವ ಯಾವ ಗ್ರಾಮಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಆದಷ್ಟು ಮೊದಲೇ ಪ್ರಚುರಪಡಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಾಗಬಾರದು. ಪೂರ್ವ ಸಿದ್ಧತೆಯೊಂದಿಗೆ ಲಸಿಕಾ ಆಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಕಾವೇರಿ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಲಸಿಕಾ ಆಂದೋಲನ ಕುರಿತು ಸಮರ್ಪಕವಾಗಿ ಮಾಹಿತಿ ಒದಗಿಸಬೇಕು. ಗುರುತಿಸಲಾಗಿರುವ ಎಲ್ಲ ಪ್ರದೇಶಗಳಲ್ಲೂ ಪೂರ್ವನಿಯೋಜಿತ ವೇಳಾಪಟ್ಟಿ ಅನುಸಾರ ಕಾರ್ಯಕ್ರಮ ಪೂರ್ಣಗೊಳಿಸಬೇಕು ಎಂದರು.
ಚಾಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿಜಯಕುಮಾರ್, ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಪ್ರಭಾರ ಉಪನಿರ್ದೇಶಕರಾದ ವೆಂಕಟರಾಮು, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಗ್ರಾಮ ಪಂಚಾಯಿತಿ ಉಪಚುನಾವಣೆ : ಅಧಿಸೂಚನೆ ಪ್ರಕಟ

ಚಾಮರಾಜನಗರ, ಮೇ. 30 - ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರೆವಾಗಿರುವ ಜಿಲ್ಲೆಯ ಮೂರು ತಾಲೂಕುಗಳ 4 ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು  ಚುನಾವಣಾ ವೇಳಾಪಟ್ಟಿ ನಿಗದಿಪಡಿಸಿದ್ದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಜೂನ್ 2ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯನ್ನು ಜೂನ್ 4ರಂದು ನಡೆಸಲಾಗುತ್ತದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಜೂನ್ 6 ಕಡೆಯ ದಿನವಾಗಿದೆ. ಜೂನ್ 14ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. (ಮತದಾನ ಅವಶ್ಯವಿದ್ದರೆ) ಮರು ಮತದಾನ ಅವಶ್ಯವಿದ್ದಲ್ಲಿ ಜೂನ್ 15ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲÁಗುತ್ತದೆ. ಮತಗಳ ಎಣಿಕೆ ಕಾರ್ಯವು ತಾಲೂಕು ಕೇಂದ್ರಗಳಲ್ಲಿ ಜೂನ್ 17ರಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಜೂನ್ 17ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮ ಪಂಚಾಯಿತಿಯ ಬಡಗಲಪುರ (ಸಾಮಾನ್ಯ (ಮಹಿಳೆ)), ಬಾಗಳಿ(ಸಾಮಾನ್ಯ), ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ (ಸಾಮಾನ್ಯ) ಗ್ರಾಮ ಪಂಚಾಯಿತಿ, ಯಳಂದೂರು ತಾಲೂಕಿನ ಯರಿಯೂರು (ಅನುಸೂಚಿತ ಪಂಗಡ (ಮಹಿಳೆ)) ಗ್ರಾಮ ಪಂಚಾಯಿತಿಯ ತಲಾ ಒಂದು ಸದಸ್ಯ ಸ್ಥಾನ ಸೇರಿದಂತೆ ಒಟ್ಟು 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಲಸಿಕಾ ಕಾರ್ಯಕ್ರಮದ ಯಶಸ್ಸಿನ ಮೌಲ್ಯಮಾಪನ ನಡೆಸಿ : ಡಾ. ಹರೀಶ್ ಕುಮಾರ್ ಸಲಹೆ 

ಚಾಮರಾಜನಗರ, ಮೇ. 30 :- ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುವ ಲಸಿಕಾ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಪ್ರತ್ಯೇಕ ಸಂಸ್ಥೆಯಿಂದ ಮೌಲ್ಯಮಾಪನ ನಡೆಸಿ ಅದರಿಂದ ವ್ಯವಸ್ಥೆಯಲ್ಲಿ ಅಳವಡಿಸಬಹುದಾದ ಸುಧಾರಣೆಗಳ ಬಗ್ಗೆ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್ ಅವರು ಸಲಹೆ ನೀಡಿದರು.
ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಿಷನ್ ಅಂತ್ಯೋದಯ ಹಾಗೂ ಮಿಷನ್ ಇಂದ್ರಧನುಷ್ ಕಾರ್ಯಕ್ರಮಗಳ ಲಸಿಕಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಕಿಅಂಶಗಳಲ್ಲಿ ಗುರಿ ಮುಟ್ಟುವುದರಿಂದ ಮಾತ್ರ ಲಸಿಕಾ ಕಾರ್ಯಕ್ರಮದ ಯಶಸ್ಸನ್ನು ಅಳೆಯಲು ಸಾಧ್ಯವಿಲ್ಲ. ಬುಡಮಟ್ಟದಲ್ಲಿ ಕಾರ್ಯನಿರ್ವಹಿಸುವಂತ ಅಂಗವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲ ಲಸಿಕಾ ಫಲಾನುಭವಿಗಳ ಸಂಪೂರ್ಣ ಮಾಹಿತಿ ಲಭ್ಯವಿರಬೇಕು. ಅದನ್ನು ಆಧರಿಸಿ ಲಸಿಕಾ ಕಾರ್ಯಕ್ರಮದ ಸಮರ್ಪಕ ಅನುಷ್ಠಾನ ಮಾಡುವುದು ಅವರ ಜವಾಬ್ದಾರಿಯಾಗಿರಬೇಕು ಎಂದ ಅವರು ಈ ವ್ಯವಸ್ಥೆಯನ್ನು ಬಲಪಡಿಸಲು ಪ್ರತ್ಯೇಕ ಸಂಸ್ಥೆಯಿಂದ ಮೌÀಲ್ಯಮಾಪನ ಕಾರ್ಯವನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್ ಅವರಿಗೆ ಸಲಹೆ ನೀಡಿದರು.
ಇದೊಂದು ವಿನೂತನ ಪ್ರಯತ್ನವಾಗಲಿ ಎಂದ ಅವರು ಲಸಿಕಾ ಕಾರ್ಯಕ್ರಮ ಅನುಷ್ಠಾನದ ಸಾಧಕಬಾಧಕಗಳನ್ನು ಅಳೆಯಲು ಇದು ಸೂಕ್ತ ಸಾಧನವಾಗಲಿದ್ದು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಮಾದರಿಯಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಲಸಿಕಾ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ಆಶಾ ಕಾರ್ಯಕರ್ತೆಯರಿಗೆ ಕಾಲಕಾಲಕ್ಕೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿಗಳನ್ನು ಆಯೋಜಿಸುವುದು ಅಗತ್ಯವೆಂದು ತಿಳಿಸಿದ ಡಾ. ಹರೀಶ್ ಕುಮಾರ್ ಇಲಾಖೆಯು ಎಲ್ಲ ಫಲಾನುಭವಿಗಳನ್ನು ತಲುಪಲು ಅಳವಡಿಸಿಕೊಂಡಿರುವ ಸಾಮೂಹಿಕ ವಿಧಾನದ ಜೊತೆಜೊತೆಗೆ ವಯಕ್ತಿಕವಾಗಿ ಅವರುಗಳನ್ನು ತಲುಪುವ ಪ್ರಯತ್ನಗಳನ್ನು ಮಾಡಬೇಕು ಎಂದು ಸೂಚಿಸಿದರು. ತಳಮಟ್ಟದ ನಿರ್ವಹಣೆ ಇಲ್ಲಿ ಹೆಚ್ಚಿನ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್ ಮಾತನಾಡಿ ಇಲಾಖೆಯು ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕೆ ಗುರಿ ಮುಕ್ತ ವಿಧಾನವನ್ನು ಅನುಸರಿಸುತ್ತಿದ್ದು, ಪ್ರತಿ ಗುರುವಾರ ಲಸಿಕಾ ದಿನವಾಗಿ ಹಾಗೂ ಪ್ರತಿ ಮಂಗಳವಾರದಂದು ಮನೆಮನೆಗೆ ತೆರಳಿ ಲಸಿಕೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಪ್ರಸ್ತುತ ಲಸಿಕಾ ಕಾರ್ಯಕ್ರಮ ಸಾಧನೆಯ ಯಾವುದೇ ಮಾಹಿತಿ ತಪ್ಪಾಗಿರಲು ಸಾಧ್ಯತೆ ಇರುವುದಿಲ್ಲ ಎಂದು ಸ್ಪಷ್ಠಪಡಿಸಿದರು.
ಮಿಷನ್ ಇಂದ್ರಧನುಷ್ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 24 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ ಚಾಮರಾಜನಗರದಲ್ಲಿ 09, ಗುಂಡ್ಲುಪೇಟೆಯಲ್ಲಿ 01, ಕೊಳ್ಳೇಗಾಲದಲ್ಲಿ 11 ಹಾಗೂ ಯಳಂದೂರಿನಲ್ಲಿ 03 ಗ್ರಾಮಗಳನ್ನು ಗುರುತಿಸಲಾಗಿದೆ ಎಂದರು.
ಸದರಿ ಗ್ರಾಮಗಳಲ್ಲೇ ಮೌಲ್ಯಮಾಪನ ಕಾರ್ಯವನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು.
ಮಿಷನ್ ಅಂತ್ಯೋದಯದಡಿ ಒಟ್ಟು 10 ಗ್ರಾಮಪಂಚಾಯಿತಿಗಳನ್ನು ಗುರುತಿಸಿ ಲಸಿಕಾ ಕಾರ್ಯಕ್ರಮದ ಶೇ.100ರಷ್ಟು ಪ್ರಗತಿ ಸಾಧಿಸಲು ಕ್ರಮ ವಹಿಸಲಾಗಿದೆ ಎಂದು ಡಾ. ಪ್ರಸಾದ್ ಸಭೆಗೆ ತಿಳಿಸಿದರು.
ಸಭೆಯಲ್ಲಿ ಸಮಿತಿಯ ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.


ನಾಳೆ ವಿಶ್ವ ತಂಬಾಕು ದಿನಾಚರಣೆ

ಚಾಮರಾಜನಗರ, ಮೇ. 30 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾಧನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮೇ 31ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ವಿಶ್ವ ತಂಬಾಕು ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲÁಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜು ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯÁದ ಸಿ.ಜಿ. ವಿಶಾಲಾಕ್ಷಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ರಮೇಶ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ, ಬಾಲ ನ್ಯಾಯ ಮಂಡಳಿ ಅಧ್ಯಕ್ಷರಾದ ಟಿ.ಜೆ. ಸುರೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ನಾಳೆ ಆಕಾಶವಾಣಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಮೇ. 30 - ಬೆಂಗಳೂರಿನ ವಿವಿಧ ಭಾರತಿ (ಆಕಾಶವಾಣಿ) ಹಾಗೂ ರಾಜ್ಯ ಕಾರ್ಮಿಕ  ಇಲಾಖೆ ಸಹಯೋಗದಿಂದ ನಾಳೆ ಅಂದರೆ ಮೇ 31ರಂದು ಸಂಜೆ 7.45 ರಿಂದ 8.42ರವರೆಗೆ ಪ್ರಸಾರವಾಗುವ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಕಾರ್ಮಿಕ ಆಯುಕ್ತರಾದ ವಿ. ಚೈತ್ರ ಅವರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಆಸಕ್ತರು ತಮ್ಮ ಪ್ರಶ್ನೆಗಳನ್ನು ದೂರವಾಣಿ ಸಂಖ್ಯೆ 080-22370477, 22370488, 22370499ಗಳ ಮೂಲಕ ಕೇಳಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿ ವಿನುತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 30 - ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ (ಮೆಳ್ಳಹಳ್ಳಿ ಗೇಟ್) ಯಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ (ಆಂಗ್ಲ ಮಾಧ್ಯಮ) 2018-19ನೇ ಸಾಲಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಬಿಎ ಬಿಎಡ್ (ಕನ್ನಡ ಮೇಜರ್), ಇಂಗ್ಲೀಷ್ ಬಿಎ ಬಿಎಡ್ (ಇಂಗ್ಲೀಷ್ ಮೇಜರ್), ವಿಜ್ಞಾನ ಬಿಎಸ್ಸಿಬಿಎಡ್ (ಸಿಬಿಜಡ್), ದೈಹಿಕ ಶಿಕ್ಷಕರು ಬಿಎಬಿಪಿಇಡಿ, ಸ್ಟಾಫ್ ನರ್ಸ್ - ಜಿಎನ್‍ಎಂ ಹುದ್ದೆಗಳು ಇವೆ.
ಮಹಿಳೆಯರಿಗೆ ಮೊದಲ ಆದ್ಯತೆ ಇದ್ದು ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಸಾಮಥ್ರ್ಯ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಜೂನ್ 4 ಕೊನೆಯ ದಿನ ಆಗಿರುತ್ತದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಥವಾ, ಪ್ರಾಂಶುಪಾಲರು, ಕಿತ್ತೂರುರಾಣಿ ಚೆನ್ನಮ್ಮ ವಸತಿಶಾಲೆ (ಮೆಳ್ಳಹಳ್ಳಿ ಗೇಟ್), ಯಳಂದೂರು ತಾಲೂಕು (ಮೊ. 8050291883) ಇವರನ್ನು ಸಂಪರ್ಕಿಸುವಂತೆ ವಸತಿಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 30- ಕಲೆ, ಸಾಂಸ್ಕøತಿಕ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ  ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮÁಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
5 ರಿಂದ 18ರ ವಯೋಮಿತಿಯೊಳಗಿನ ಅಂದರೆ ದಿನಾಂಕ 1.8.2000 ಹಾಗೂ ನಂತರ ಜನಿಸಿದ ಮಕ್ಕಳನ್ನು 2018ರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ರಾಷ್ಟ್ರ ಮಟ್ಟದ ಪ್ರಶಸ್ತಿಯು ಒಂದು ಚಿನ್ನದ ಪದಕ, 20 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ಪುಸ್ತಕ ಓಚರ್ ಪ್ರಶಸ್ತಿ ಪತ್ರ, ಹಾಗೂ 35 ಬೆಳ್ಳಿ ಪದಕ (ಪ್ರತೀ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ), 10 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಪುಸ್ತಕ ಓಚರ್ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಪ್ರಶಸ್ತಿಗೆ ಆಯ್ಕೆಯಾಗಲು ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅಸಾಧಾರಣ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು. ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ನಿಗದಿತ ನಮೂನೆಯ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳÀ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜೂನ್ 30ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆದುಕೊಳ್ಳುವಂತೆ ಮಹಿಳೆಯರ ಮತ್ತು ಮಕ್ಕಳÀ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಕಲ್ಯಾಣ ಕ್ಷೇತ್ರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 30- ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗೆ ಕೊಡಮಾಡುವ 2018ನೇ ಸಾಲಿನ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಮಕ್ಕಳ ಅಭಿವೃದ್ಧಿ ರಕ್ಷಣೆ ಮತ್ತು ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು 1 ಲಕ್ಷ ರೂ ನಗದು, ಬೆಳ್ಳಿ ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜೂನ್ 8ರೊಳಗೆ ಸಲ್ಲಿಸಬೇಕು. ವಿವರಗಳಿಗೆ  ಕಚೇರಿಯನ್ನು ಸಂಪರ್ಕಿಸುವಂತೆ  ಪ್ರಕಟಣೆ ತಿಳಿಸಿದೆ.


ಕೊಳ್ಳೇಗಾಲ : ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 30 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಣೆಯಾಗುತ್ತಿರುವ ಕೊಳ್ಳೇಗಾಲ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ಮಕ್ಕಳÀ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೊಳ್ಳೇಗಾಲ, ಪಾಳ್ಯ, ಕಾಮಗೆರೆ, ಹನೂರು, ದಿನ್ನಳ್ಳಿ, ರಾಮಾಪುರ, ಕೂಡ್ಲೂರು, ಮಣಗಳ್ಳಿ, ಕುರಟ್ಟಿ ಹೊಸೂರಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮಾರ್ಟಳ್ಳಿ, ಕೊಳ್ಳೇಗಾಲ ಹಾಗೂ ಹನೂರಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ಲಭ್ಯವಿದೆ.
ಕೊಳ್ಳೇಗಾಲ, ಹನೂರಿನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಕೊಳ್ಳೇಗಾಲದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಸರ್ಕಾರಿ ವರ್ಗೀಕೃತ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಹನೂರಿನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲೂ ಪ್ರವೇಶಾತಿ ದೊರೆಯಲಿದೆ.
5 ರಿಂದ 10ನೇ ತರಗತಿವರೆಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ವೆಬ್ ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಜೂನ್ 10 ಕಡೆಯ ದಿನ.
ಹೆಚ್ಚಿನ ವಿವರಗಳಿಗೆ ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.





01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು