ವಿಧಾನ ಪರಿಷತ್ ಚುನಾವಣೆ : ಮತದಾನಕ್ಕೆ ಅವಶ್ಯ ದಾಖಲೆಗಳು
ಚಾಮರಾಜನಗರ, ಜೂ. 04 - ಕರ್ನಾಟಕ ವಿಧಾನ ಪರಿಷತ್‍ನ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತ ಚಲಾಯಿಸಲು ಮತದಾರರು ಗುರುತಿನ ಚೀಟಿ ಹಾಜರುಪಡಿಸಿ ಮತ ಚಲಾಯಿಸಬಹುದಾಗಿರುತ್ತದೆ. ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ (ಎಪಿಕ್) ಹಾಜರುಪಡಿಸಬೇಕು. ಒಂದು ವೇಳೆ ಇದನ್ನು ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
ಭಾವಚಿತ್ರವಿರುವ ಪಾಸ್‍ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ, ರಾಜ್ಯ ಸರ್ಕಾರಿ ಸಾರ್ವಜನಿಕ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ನೀಡಿರುವ ಗುರುತಿನ ಚೀಟಿ, ಬ್ಯಾಂಕ್, ಅಂಚೆ ಇಲಾಖೆಯಿಂದ ನೀಡಲಾಗಿರುವ ಪಾಸ್‍ಪುಸ್ತಕ (ದಿನಾಂಕ 31.05.2018 ರೊಳಗೆ ಖಾತೆ ತೆರೆದಿರಬೇಕು), ಆದಾಯ ತೆರಿಗೆ ಗುರುತಿನ ಚೀಟಿ (ಪಾನ್ ಕಾರ್ಡ್), ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಡಿಯಲ್ಲಿ ಭಾರತೀಯ ನೋಂದಣಾಧಿಕಾರಿಗಳು ನೀಡಿರುವ ಸ್ಮಾರ್ಟ್‍ಕಾರ್ಡ್, ಆರೋಗ್ಯ ವಿಮಾ ಯೋಜನೆಯ ಗುರುತಿನ ಚೀಟಿ (ಸ್ಮಾರ್ಟ್ ಕಾರ್ಡ್) (ಕಾರ್ಮಿಕ ಇಲಾಖೆಯಿಂದ ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಪಿಂಚಣಿ ದಾಖಲಾತಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಸ್ವಾತಂತ್ರ್ಯ ಹೋರಾಟಗಾರರ ಗುರುತಿನ ಚೀಟಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಆಯುಧ ಪರವಾನಗಿ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಸಕ್ಷಮ ಪ್ರಾಧಿಕಾರದಿಂದ ನೀಡಿರುವ ಅಂಗವಿಕಲರ ದೃಢೀಕರಣ ಪತ್ರ (ದಿನಾಂಕ 31.05.2018 ರೊಳಗೆ ನೀಡಿರುವಂತದ್ದು), ಮಾಜಿ ಸೈನಿಕರ ಸಿಎಸ್‍ಡಿ ಕ್ಯಾಂಟೀನ್ ಗುರುತಿನ ಚೀಟಿ, ಆಧಾರ್ ಕಾರ್ಡ್ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರುಪಡಿಸಿ, ಮತದಾನ ಮಾಡಬಹುದೆಂದು ಚುನಾವಣಾ ಅಧಿಕಾರಿಗಳೂ ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹೇಮಲತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ :
ಮತಗಟ್ಟೆಯ 100 ಮೀ. ಅಂತರದಲ್ಲಿ ಪ್ರಚಾರ ನಿಷೇಧ
ಚಾಮರಾಜನಗರ, ಜೂ. 06 - ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಸಂಬಂಧ ಮತದಾನ ನಡೆಯುವ ಮತಗಟ್ಟೆಯ 100 ಮೀಟರ್ ಅಂತರದೊಳಗಿರುವ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಪ್ರಚಾರ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲದ ತಾಲೂಕು ಕಚೇರಿ, ಹನೂರಿನ ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ಮತಗಟ್ಟೆ ಇದ್ದು ಇದರ 100 ಅಂತರದೊಳಗಿರುವ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಪ್ರಚಾರ ನಡೆಸುವಂತಿಲ್ಲ. ಯಾವುದೇ ಉಮೇದುವಾರ ಅಭ್ಯರ್ಥಿಗೆ ಮತ ನೀಡುವಂತೆ ಕೇಳುವುದು, ಮತ ಹಾಕದಂತೆ ಪ್ರೇರೇಪಿಸುವುದು, ಯಾವುದೇ ಪಕ್ಷದ ಚಿಹ್ನೆಯನ್ನು ಪ್ರದರ್ಶಿಸುವುದು ಇತ್ಯಾದಿಗಳನ್ನು ನಿರ್ಬಂಧಿಸಲಾಗಿದೆ. ಈ ಸಂಬಂಧ ಪ್ರಜಾ ಪ್ರತಿನಿಧಿ ಕಾಯಿದೆ 1951ರ ಕಲಂ 130ನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಜೂ. 06- ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾದ್ಯಂತ ಜೂನ್ 6 ರಿಂದ 8ರವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.ಜೂನ್ 8ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶ ಒಳಗೊಂಡಂತೆ ಪೂರ್ಣ ಜಿಲ್ಲಾ ವ್ಯಾಪ್ತಿಯಲ್ಲಿ ಜೂನ್ 6ರ ಸಂಜೆ 5 ಗಂಟೆಯಿಂದ ಜೂನ್ 8ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಬೇಕೆಂದು ಹಾಗೂ ಯಾವುದೇ ರೀತಿಯ ಮದ್ಯ ಮಾರಾಟ ಮಾಡಬಾರದೆಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರÀÉ.
ಜೂ. 13ರಂದು ಉದ್ಯೋಗ ಮೇಳ
ಚಾಮರಾಜನಗರ, ಜೂ. 06 ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳು ವಿವಿಧ ಹುದ್ದೆಗಳ ನೇಮಕಾತಿಗಾಗಿ ಜೂನ್ 13ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.ರಾಣಿ ಮದ್ರಾಸ್, ಮಾತೃತ್ವಂ, ಪೀಪಲ್ ಮ್ಯಾನೇಜ್‍ಮೆಂಟ್ ಸಿಸ್ಟಂ, ಹಿಂದೂಜ ಗ್ಲೋಬಲ್ ಸಲ್ಯೂಶÀನ್, ಯೂರೆಕ ಫೋರ್ಬ್, ನವಭಾರತ್ ಫರ್ಟಿಲೈಸರ್ ಲಿಮಿಟೆಡ್ ಹಾಗೂ ಹಿಮೈತ್ ಸಿಂಗ್ ಕಾ (ಹಾಸನ) ಇತರೆ ಕಂಪನಿಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದು. 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ (ದೂ.ಸಂ. 08226-224430) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ತೋಟಗಾರಿಕೆ ಇಲಾಖೆಯಿಂದ ರೈತರಿಗೆ ವಿವಿಧ ಗಿಡಗಳ ಮಾರಾಟ
ಚಾಮರಾಜನಗರ, ಜೂ. 06 - ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ರೈತರಿಗೆ ಮಾವು, ಸೀಬೆ, ನಿಂಬ್, ಕರಿಬೇವು ಹಾಗೂ ವಿವಿಧ ಅಲಂಕಾರಿಕ ಗಿಡಗಳನ್ನು ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.ರೈತರು ಸಸಿ, ಕಸಿಗಳನ್ನು ನಗರದ ಸತ್ತಿ ರಸ್ತೆಯಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಖರೀದಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.
ಜೂ. 7ರಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ
ಚಾಮರಾಜನಗರ, ಜೂ. 06 - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2018-19ನೆ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್‍ಪಾಸ್‍ಗಳನ್ನು ವಿತರಿಸಲು ಮುಂದಾಗಿದೆ.
ಮೊದಲನೆ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜೂನ್ 7 ರಿಂದ ಆಯಾ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲು ಕ್ರಮ ಕೈಗೊಂಡಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಿಸಲಾಗುತ್ತದೆ. ಈ ವರ್ಗದ ವಿದ್ಯಾರ್ಥಿಗಳು ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಶುಲ್ಕ ಒಟ್ಟು ರೂ. 150 ಮೊತ್ತವನ್ನು ಪಾವತಿಸಬೇಕು. ಉಚಿತ ಬಸ್ ಪಾಸ್ ಪಡೆಯಲು ಜಾತಿ ಪ್ರಮಾಣ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ನಿಗಮದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ನಿಗಮದ ವೆಬ್‍ಸೈಟ್ ತಿತಿತಿ.ಞsಡಿಣಛಿ.iಟಿ ನಲ್ಲಿ ಪಾಸ್ ಅರ್ಜಿಗಳು ಲಭ್ಯವಿರುತ್ತವೆ. ಭರ್ತಿ ಮಾಡಿದ ಅರ್ಜಿಯನ್ನು ಶಾಲೆಗಳಲ್ಲಿ ದೃಢೀಕರಿಸಬೇಕಿರುತ್ತದೆ. ವಿದ್ಯಾರ್ಥಿಗಳು ಅಭ್ಯಸಿಸುತ್ತಿರುವ ಶಾಲೆಗಳ ಮುಖಾಂತರ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ವಿದ್ಯಾರ್ಥಿಗಳು ನೇರವಾಗಿ ಪಾಸ್ ಕೌಂಟರ್‍ಗೆ ಬರುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment