ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ : ಮತದಾನಕ್ಕೆ ಸಕಲ ವ್ಯವಸ್ಥೆ
ಚಾಮರಾಜನಗರ, ಜೂ. 07 ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8ರಂದು ಮತದಾನ ನಡೆಯಲಿದ್ದು ಜಿಲ್ಲೆಯಲ್ಲಿ ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.ನಗರದ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ಇಂದು ಮಸ್ಟರಿಂಗ್ ಕಾರ್ಯ ನಡೆಯಿತು. ಬಳಿಕ ಮತಗಟ್ಟೆಗಳಿಗೆ ಚುನಾವಣೆ ಕಾರ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿ ಸಿಬ್ಬಂದಿಯವರು ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪರಿಕರಗಳೊಂದಿಗೆ ತೆರಳಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ಜೂನ್ 8ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ ತಾಲೂಕು ಕಚೇರಿಯ ಮಿನಿ ವಿಧಾನಸೌದಧ ಮೀಟಿಂಗ್ ಹಾಲ್ನಲ್ಲಿ ಹಾಗೂ ಹನೂರು ವಿಶೇಷ ತಹಸೀಲ್ದಾರ್ ಕಚೇರಿಯಲ್ಲಿ ತಲಾ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 5 ಮತಗಟ್ಟೆಗಳನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ 1351 ಪುರುಷ ಮತದಾರರು, 548 ಮಹಿಳಾ ಮತದಾರರು ಸೇರಿದಂತೆ ಒಟ್ಟು 1899 ಮತದಾರರು ಇದ್ದಾರೆ. ಗುಂಡ್ಲುಪೇಟೆ ತಾಲೂಕಿನಲ್ಲಿ 285 ಪುರುಷರು, 61 ಮಹಿಳೆಯರು ಸೇರಿದಂತೆ 346 ಮತದಾರರಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 438 ಪುರುಷರು, 232 ಮಹಿಳೆಯರು ಸೇರಿದಂತೆ 670 ಮತದಾರರಿದ್ದಾರೆ. ಯಳಂದೂರು ತಾಲೂಕಿನಲ್ಲಿ 132 ಪುರುಷರು, 43 ಮಹಿಳೆಯರು ಸೇರಿದಂತೆ 175 ಮತದಾರರಿದ್ದಾರೆ. ಕೊಳ್ಳೇಗಾಲ ತಾಲೂಕಿನಲ್ಲಿ 342 ಪುರುಷರು 189 ಮಹಿಳೆಯರು ಸೇರಿದಂತೆ 531 ಮತದಾರರಿದ್ದಾರೆ. ಹನೂರು ತಾಲೂಕಿನಲ್ಲಿ 154 ಪುರುಷರು 23 ಮಹಿಳೆಯರು ಸೇರಿದಂತೆ 177 ಮತದಾರರಿದ್ದಾರೆ.
ಚುನಾವಣೆ : ಮತದಾನ ಕೇಂದ್ರದ 200 ಮೀ. ಒಳವ್ಯಾಪ್ತಿಯಲ್ಲಿ ಮಾಹಿತಿ ಕೇಂದ್ರ ಸ್ಥಾಪನೆಗೆ ಅವಕಾಶ ಇಲ್ಲ
ಚಾಮರಾಜನಗರ, ಜೂ. 07 - ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು ಮತದಾನ ಕೇಂದ್ರದ 200 ಮೀ. ಪ್ರದೇಶದ ಒಳವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವಂತಿಲ್ಲ.
ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರ, ನಗರ ಸ್ಥಳೀಯ ಸಂಸ್ಥೆಗಳ ಲಿಖಿತ ಅನುಮತಿಯೊಂದಿಗೆ 200 ಮೀ. ಪ್ರದೇಶದ ಹೊರಗೆ ಕೇವಲ ಒಂದು ಮಾಹಿತಿ ಕೇಂದ್ರವನ್ನು ಮಾತ್ರ (1 ಟೇಬಲ್ ಹಾಗೂ 2 ಕುರ್ಚಿಗಳಿಗೆ ಸೀಮಿತಗೊಳಿಸಿ, 3 ಅಡಿ ಅಗಲ ನಾಲ್ಕೂವರೆ ಅಡಿ ಉದ್ದದ ಬ್ಯಾನರ್) ಮತದಾರರಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡುವ ಸಲುವಾಗಿ ಸ್ಥಾಪಿಸಬಹುದಾಗಿದೆ.
ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಮುಂಚಿತವಾಗಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳಾಗಿರುವ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮತದಾನ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಮಾಹಿತಿ ಕೇಂದ್ರ ಸ್ಥಾಪಿಸುವಂತಿಲ್ಲ
ಚಾಮರಾಜನಗರ, ಜೂ. 07 :- ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಮತಕೇಂದ್ರಗಳ 200 ಮೀ. ಪ್ರದೇಶದ ಒಳವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವಂತಿಲ್ಲ.ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರ, ನಗರ ಸ್ಥಳೀಯ ಸಂಸ್ಥೆಗಳ ಲಿಖಿತ ಅನುಮತಿಯೊಂದಿಗೆ 200 ಮೀ. ಪ್ರದೇಶದ ಹೊರಗೆ ಕೇವಲ ಒಂದು ಮಾಹಿತಿ ಕೇಂದ್ರವನ್ನು ಮಾತ್ರ (ಒಂದು ಟೇಬಲ್ ಹಾಗೂ ಎರಡು ಕುರ್ಚಿಗಳಿಗೆ ಸೀಮಿತಗೊಳಿಸಿ) ಮತದಾರರಿಗೆ ಅನಧಿಕೃತ ಗುರುತಿನ ಚೀಟಿಗಳನ್ನು ನೀಡುವ ಸಲುವಾಗಿ ಸ್ಥಾಪಿಸಬಹುದಾಗಿದೆ.
ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಮುಂಚಿತವಾಗಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಿ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹೇಮಲತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣೆ : ಜೂ. 8ರಂದು ಮತದಾನ
ಚಾಮರಾಜನಗರ, ಜೂ. 07 - ಕರ್ನಾಟಕ ವಿಧಾನ ಪರಿಷತ್ತಿಗೆ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂನ್ 8ರಂದು ನಡೆಯಲಿರುವ ಚುನಾವಣೆಗೆ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಲಾಗಿದೆ.
ಮತಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನ, ಅನುದಾನ ರಹಿತ ವಿದ್ಯಾಸಂಸ್ಥೆ ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಇತರೆ ಬ್ಯಾಂಕುಗಳು, ರಾಜ್ಯ, ಕೇಂದ್ರ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಹಾಗೂ ಎಲ್ಲ ವ್ಯಾವಹಾರಿಕ, ಔದ್ಯಮಿಕ ಸಂಸ್ಥೆಗಳು, ಇನ್ನಿತರ ಎಸ್ಟಾಬ್ಲಿಷ್ಮೆಂಟ್ನಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅರ್ಹ ಮತದಾರರಿಗೆ ಸೀಮಿತವಾಗುವಂತೆ ಮತದಾನ ಮಾಡಲು ಸರ್ಕಾರದ ಅಧಿಸೂಚನೆ ದಿನಾಂಕ 5.6.2018ರಂತೆ ಜೂನ್ 8ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಲಾಗಿದೆ.
ಮತದಾರರು ದಕ್ಷಿಣ ಶಿಕ್ಷಕರ ಕ್ಷೇತ್ರ, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರಿನ ಮೂಲಕವೇ ಭಾಗದ ಸಂಖ್ಯೆ, ಮತದಾನ ಕೇಂದ್ರದ ವಿವರಗಳನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಡಿಛಿmಥಿsuಡಿu.gov.iಟಿ ನ ಊಥಿಠಿeಡಿ ಟiಟಿಞ ಮೂಲಕ ಪರಿಶೀಲಿಸಬಹುದು. ಅಲ್ಲದೆ, ಹೆಚ್ಚಿನ ಮಾಹಿತಿಯನ್ನು ಸಹ ಪಡೆಯಬಹುದು. ಮತದಾರರು ಈ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಹೇಮಲತ ಅವರು ಪ್ರ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment