ಮೇ. 26ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಮೇ. 24 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮೇ 26ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ದೂ.ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಎಲ್, ಎಲ್‍ಎಲ್‍ಗೆ ಸಾರಥಿ 4ರ ಅನುಷ್ಠಾನ
ಚಾಮರಾಜನಗರ, ಮೇ. 24 - ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಎಲ್‍ಎಲ್ ಮತ್ತು ಡಿಎಲ್ ನೀಡುವ ಸಂಬಂಧ ಸಾರಥಿ 4ನ್ನು ಅನುಷ್ಠಾನಗೊಳಿಸಲಾಗುತ್ತಿದೆ.ಅರ್ಜಿದಾರರು ಎಲ್‍ಎಲ್, ಡಿಎಲ್, ಇಡಿಎಲ್, ಆರ್‍ಡಿಎಲ್ ಹಾಗೂ ಡಿಎಲ್ ಸಂಬಂಧಿತ ಅರ್ಜಿಗಳನ್ನು ಸಾರಥಿ 4ರ ಅಡಿಯಲ್ಲಿ ಮೇ 25ರಿಂದ ಸಲ್ಲಿಸಬೇಕಿದೆ. ವೆಬ್ ಸೈಟ್ ವಿಳಾಸ ಠಿಚಿಡಿivಚಿhಚಿm.gov.iಟಿ/sಚಿಡಿಚಿಣhiseಡಿviಛಿes ಸಂಪರ್ಕಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಗುಂಡ್ಲುಪೇಟೆ : ಎನ್‍ಸಿವಿಟಿ ವೃತ್ತಿಗೆ ಪ್ರವೇಶಾವಕಾಶ
ಚಾಮರಾಜನಗರ, ಮೇ. 24 - ಗುಂಡ್ಲುಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಇರುವ ವಿದ್ಯುನ್ಮಾನ ದುರಸ್ತಿಗಾರ ಹಾಗೂ ಕೋಪ (ಸಿಓಪಿಎ) ವೃತ್ತಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದ್ದು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್‍ಎಸ್‍ಎಲ್‍ಸಿ ಪಾಸಾದ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಮತ್ತು ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿ ನಲ್ಲಿ ಜೂನ್ 8ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಪಾಚಾರ್ಯರನ್ನು ಅಥವಾ ದೂರವಾಣಿ ಸಂಖ್ಯೆ 08229-222853, ಮೊಬೈಲ್ ಸಂ. 9480190608, 9538778562, 8453875110 ಅನ್ನು ಸಂಪರ್ಕಿಸುವಂತೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲ : ಮೆಟ್ರಿಕ್‍ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 24 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೊಳ್ಳೇಗಾಲ ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಕೊಳ್ಳೇಗಾಲ ಪಟ್ಟಣ, ಹನೂರು, ಕೌದಳ್ಳಿಯ ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಹಾಗೂ ಕೊಳ್ಳೇಗಾಲ ಪಟ್ಟಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಪೊನ್ನಾಚಿ ಹಾಗೂ ರಾಮಾಪುರದ ಅನುದಾನಿತ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಪೊನ್ನಾಚಿಯ ಅನುದಾನಿತ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಹಾಗೂ ಮಲೆಮಹದೇಶ್ವರ ಬೆಟ್ಟದಲ್ಲಿರುವ ಅನುದಾನಿತ ಮೆಟ್ರಿಕ್ ಪೂರ್ವ ಅನಾಥಾಲಯಗಳಿಗೆ ಅರ್ಜಿ ಸಲ್ಲಿಸಬಹುದು.
ಸರ್ಕಾರಿ, ಖಾಸಗಿ ಅಂಗೀಕೃತ ಶಿಕ್ಷಣ ಸಂಸ್ಥೆಗಳಲ್ಲಿ 5 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರು.
ಪ್ರವಗರ್À 1ರ ವಿದ್ಯಾರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ., 2ಎ, 2ಬಿ, 3ಬಿ ವಿದ್ಯಾರ್ಥಿಗಳಿಗೆ 44,500 ರೂ. ಮೀರಿರಬÁರದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಥವಾ ಸಂಬಂಧಿಸಿದ ವಿದ್ಯಾರ್ಥಿನಿಲಯದ ನಿಲಯ ಮೇಲ್ವಿಚಾರಕರನ್ನು ಸಂಪರ್ಕಿಸಿ ಪಡೆದುಕೊಳ್ಳುವಂತೆ ಇಲಾಖೆಯ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 24 - ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ವತಿಯಿಂದ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮಾನÉೀಜ್‍ಮೆಂಟ್ ಕೋರ್ಸ್‍ಗೆ ತರಬೇತಿ ನೀಡಲು ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಕಾರ ಡಿಪ್ಲೊಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಮತ್ತು ಇತರೆ ಎಲ್ಲಾ ರೀತಿಯ ಸಹಕಾರ ಸಂಘ, ಬ್ಯಾಂಕುಗಳಲ್ಲಿ ಉದ್ಯೋಗ ಅವಕಾಶಗಳ ನೇಮಕಾತಿಗೆ ಸಹಕಾರ ಕಾಯಿದೆ ಮತ್ತು ನಿಯಮಗಳಿಗೆ ಅನುಸಾರ ಆದ್ಯತೆ ಕಲ್ಪಿಸಲಾಗಿದೆ.
ಕೋರ್ಸ್‍ನ ಪಠ್ಯಕ್ರಮವು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಹಕಾರ ಮತ್ತು ಗ್ರಾಮೀಣ ಅಭಿವೃದ್ಧಿ, ಸಹಕಾರ ಇಲಾಖೆಯ ಸಹಕಾರಿ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಪೂರಕವಾಗಿದೆ.
ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ 500 ರೂ. ಹಾಗೂ ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಮಾಸಿಕ 400 ರೂ. ಶಿಷ್ಯ ವೇತನ ನೀಡಲಾಗುವುದು.
ಅರ್ಜಿಯನ್ನು ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಸಹಕಾರ ಭವನದಲ್ಲಿ ಪಡೆದು ಭರ್ತಿಮಾಡಿ ಮೇ 30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2520563, ಮೊಬೈಲ್ 9845695487, 9449394844, 9845918519 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕರ್ನಾಟಕ ಸರ್ಕಾರ
ಪೊಲೀಸ್ ಅಧೀಕ್ಷಕರವರ ಕಛೇರಿ, ಚಾಮರಾಜನಗರ ಜಿಲ್ಲೆ, ಚಾಮರಾಜನಗರ
-----------------------------------------------------------------
ದಿನಾಂಕ: 25.05.2018
ಇತ್ತೀಚೆಗೆ ರಾಜ್ಯದ ಕೆಲವು ಕಡೆಗಳಲ್ಲಿ ಮಕ್ಕಳ ಕಳ್ಳರ ಗ್ಯಾಂಗ್ ರಾಜ್ಯಕ್ಕೆ ಬಂದಿದೆ, ಮಕ್ಕಳನ್ನು ಅಪಹರಿಸಲಾಗುತ್ತಿದೆ ಎಂಬ ತಪ್ಪು ಮಾಹಿತಿ, ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿ ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಠಿಸಲಾಗಿರುತ್ತದೆ. ಅಲ್ಲದೇ ಕೆಲವು ಕಡೆಗಳಲ್ಲಿ ಅಪರಿಚಿತ ಅಥವಾ ಅನುಮಾನಾಸ್ಪದವಾಗಿ ಕಂಡುಬರುವ ಅಮಾಯಕರನ್ನು, ಮಕ್ಕಳ ಕಳ್ಳರೆಂದು ಭ್ರಮಿಸಿ ಸಾರ್ವಜನಿಕರು ಹಲ್ಲೆ ಮಾಡಿರುತ್ತಾರೆ. ಬೆಂಗಳೂರು ನಗರದಲ್ಲಿ ಇದೇ ರೀತಿಯಲ್ಲಿ ಅನುಮಾನಿಸಿ ರಾಜಸ್ಥಾನ ಮೂಲದ ಅಮಾಯಕನ ಮೇಲೆ ಜನರ ಗುಂಪು ಹಲ್ಲೆ ನಡೆಸಿ, ಕೊಂದು ಹಾಕಿರುತ್ತಾರೆ. ಅಮಾಯಕನ ಹತ್ಯೆ ಆಗಿರುವುದು ಖಂಡನೀಯವಾಗಿರುತ್ತದೆ ಮತ್ತು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇದುವರೆವಿಗೂ ಚಾಮರಾಜನಗರ ಜಿಲ್ಲೆಯಲ್ಲಿ ಈ ರೀತಿಯ ಮಕ್ಕಳ ಕಳ್ಳತನ ಪ್ರಕರಣಗಳು ವರದಿಯಾಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವಿಷಯಗಳು ಕುಚೇಷ್ಠೆಯ ಗಾಳಿಸುದ್ದಿಗಳಾಗಿದ್ದು, ಅವುಗಳಲ್ಲಿ ಯಾವುದೇ ಸತ್ಯಾಂಶವಿರುವುದಿಲ್ಲ. ಯಾವುದೇ ವ್ಯಕ್ತಿಯ ಪೂರ್ವಾಪರ ವಿಚಾರಿಸದೆ ಬರಿ ಅನುಮಾನದ ಕಾರಣಕ್ಕಾಗಿ ಹಲ್ಲೆ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆ ತಪ್ಪಿದ್ದಲ್ಲ.
ಆದ್ದರಿಂದ ಆಧಾರವಿಲ್ಲದ ಗಾಳಿಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು, ಒಂದು ವೇಳೆ ಯಾವುದೇ ರೀತಿಯ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ / ಸಮೀಪದ ಠಾಣೆಗೆ / ನಿಮ್ಮ ಸರಹದ್ದಿನ ಬೀಟ್ ಸಿಬ್ಬಂದಿಗೆ ಕರೆ ಮಾಡಿದಲ್ಲಿ ಅಂತಹವರನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿ ಸತ್ಯಾಸತ್ಯತೆಯ ಪರಾಮರ್ಶಣೆಯನ್ನು ಕಾನೂನಿನ ಚೌಕಟ್ಟಿನಲ್ಲಿ ನಡೆಸಿ ಕ್ರಮ ಕೈಗೊಳ್ಳಲಾಗುವುದೆಂಬ ಅಂಶವನ್ನು ಹಾಗೂ ಕೇವಲ ಅನುಮಾನದ ದೃಷ್ಠಿಯಿಂದ ಯಾರ ಮೇಲಾದರೂ ಹಲ್ಲೆ ಮಾಡಿದಲ್ಲಿ, ಅಂತಹವರುಗಳ ವಿರುದ್ಧ ಮತ್ತು ಇಂತಹ ಗಾಳಿಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತವಾಗಿ ರವಾನಿಸುವವರ ವಿರುದ್ಧವು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಜರುಗಿಸಲಾಗುವುದೆಂಬ ಮಾಹಿತಿಯನ್ನು ಸಾರ್ವಜನಿಕ ಗಮನಕ್ಕೆ ತರಲಾಗಿದೆ.
ಕ್ರ.ಸಂ ಪೊಲೀಸ್ ಅಧಿಕಾರಿಗಳು ಸ್ಥಿರ ದೂರವಾಣಿ ಸಂಖ್ಯೆ ಮೊಬೈಲ್ ದೂರವಾಣಿ
1 ಪೊಲೀಸ್ ಅಧೀಕ್ಷಕರು 08226-222243 9480804601
2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು 08226-225979 9480804602
3 ಡಿ.ಎಸ್.ಪಿ ಚಾ-ನಗರ 08226-222090 9480804620
4 ಡಿ.ಎಸ್.ಪಿ ಕೊಳ್ಳೇಗಾಲ 08224-252840 9480804621
5 ಜಿಲ್ಲಾ ನಿಯಂತ್ರಣ ಕೊಠಡಿ 08226-222383 9480804600
ಪತ್ರಿಕಾ/ಮಾದ್ಯಮ ಪ್ರತಿನಿಧಿಗಳಿಗೆ ಪ್ರಕಟಣೆಗಾಗಿ.
No comments:
Post a Comment