Friday, 1 June 2018

28-05-2018 (ತೀವ್ರತರ ಅತಿಸಾರ ಭೇದಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ)


ತೀವ್ರತರ ಅತಿಸಾರ ಭೇದಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ

ಚಾಮರಾಜನಗರ, ಮೇ. 28 - ತೀವ್ರತರ ಅತಿಸಾರ ಭೇದಿಯಿಂದ ಮಕ್ಕಳ ಸಾವಿನ ಪ್ರಮಾಣ ತಗ್ಗಿಸುವ ದಿಸೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಪಾಕ್ಷಿಕ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲೂ ಚಾಲನೆ ದೊರೆತಿದೆ.
ನಗರದ ನಗರ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ 5 ವರ್ಷದೊಳಗಿನ ಮಕ್ಕಳಿಗೆ ಓಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಇಂದಿನಿಂದ ಒಂದು ತಿಂಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಗಳಲ್ಲಿ ಮನೆಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಎಲ್ಲಾ ಮಕ್ಕಳ ಸಮೀಕ್ಷೆ ನಡೆಸಿ ಓಆರ್‍ಎಸ್ ವಿತರಿಸುವರು. ಅತಿಸಾರ ಭೇದಿಯಾದ ಮಕ್ಕಳಿಗೆ ಜಿಂಕ್ ಮಾತ್ರ ನೀಡಲಾಗುತ್ತದೆ. ಮನೆಗಳಲ್ಲಿ ಓಆರ್‍ಎಸ್ ತಯಾರಿಸುವ ವಿಧಾನ ಹಾಗೂ ಕೈಗಳನ್ನು ಸ್ವಚ್ಚಗೊಳಿಸುವ ಬಗ್ಗೆ ಶಿಕ್ಷಣ ನೀಡಲಾಗುತ್ತದೆ ಎಂದು ತಿಳಿಸಿದರು.
ಚಾಮರಾಜನಗರ ತಾಲೂಕಿನ 24724, ಗುಂಡ್ಲುಪೇಟೆ ತಾಲೂಕಿನ 15470, ಕೊಳ್ಳೇಗಾಲ ತಾಲೂಕಿನ 29478 ಹಾಗೂ ಯಳಂದೂರು ತಾಲೂಕಿನ 5980 ಮಕ್ಕಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 75652 ಮಕ್ಕಳನ್ನು ನೊಂದಾಯಿಸಲಾಗಿದೆ. ಎಲ್ಲ ಮಕ್ಕಳಿಗೂ ಮನೆಮನೆಗೆ ತೆರಳಿ ಓಆರ್‍ಎಸ್ ಅನ್ನು ವಿತರಿಸಲಾಗುವುದು ಎಂದರು,
ಆರ್‍ಸಿಎಚ್ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಡಾ. ಮಮತಾ ಕುಮಾರಿ, ಡಿಎಚ್‍ಇಓ ನಾರಾಯಣಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿಶ್ವ ಪರಿಸರ ದಿನಾಚರಣೆ : ಶಾಲಾ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ

ಚಾಮರಾಜನಗರ, ಮೇ. 28 - ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ವತಿಯಿಂದ ಜೂನ್ 1ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಶಾಲಾ ಮಕ್ಕಳಿಗೆ ಪರಿಸರ ಕುರಿತು ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿದೆ.
ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಸ್ಥಳದಲ್ಲಿಯೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದು. ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರಕಲೆಗೆ ಬೇಕಾಗುವ ಬಣ್ಣ, ಇನ್ನಿತರೆ ವಸ್ತುಗಳನ್ನು ತರಬೇಕು.
ಹೆಚ್ಚಿನ ವಿವರಗಳಿಗೆ ಎಂ.ಜಿ. ರಘುರಾಂ, ಪರಿಸರ ಅಧಿಕಾರಿ (ಮೊ.9845026348), ವೈ.ಎಸ್. ರಾಧ, ಉಪ ಪರಿಸರ ಅಧಿಕಾರಿ (ಮೊ. 9880933020), ಎನ್.ವಿ. ಹರಿಪ್ರಸಾದ್, ಸಹಾಯಕ ಪರಿಸರ ಅಧಿಕಾರಿ (ಮೊ. 9972830015) ಅಥವಾ ಕಚೇರಿ ದೂರವಾಣಿ ಸಂಖ್ಯೆ 08226-223846 ಅನ್ನು ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 28 - ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2017-18ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ  ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ.ಜಾ, ಪ.ಪಂ. ಕುಂದುಕೊರತೆ ನಿವಾರಣಾ ಸಭೆ : ದೂರು ಸಲ್ಲಿಸಲು ಅವಕಾಶ

ಚಾಮರಾಜನಗರ, ಮೇ. 28 ( ನವದೆಹಲಿಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಮೇಲೆ ಸರ್ಕಾರಿ ನೌಕರರು ದೌರ್ಜನ್ಯ ಎಸಗಿದ ಬಗ್ಗೆ ಹಾಗೂ ಸರ್ಕಾರಿ ನೌಕರರ ನಿರ್ಲಕ್ಷ್ಯದಿಂದ ದೌರ್ಜನ್ಯಕ್ಕೊಳಗಾದ ಬಗೆಗಿನ ದೂರುಗಳಿದ್ದಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಸಮಸ್ಯೆ ಹಾಗೂ ಕುಂದುಕೊರತೆಗಳ ಬಗ್ಗೆ ಜುಲೈ 26 ಹಾಗೂ 27ರಂದು ಬೆಂಗಳೂರಿನಲ್ಲಿ ಕುಂದುಕೊರತೆ ನಿವಾರಣಾ ಸಭೆ ನಡೆಸಲು ತೀರ್ಮಾನಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಮೇಲೆ ಸರ್ಕಾರಿ ನೌಕರರು ದೌರ್ಜನ್ಯ ಎಸಗಿದ ಬಗ್ಗೆ ಮತ್ತು ಸರ್ಕಾರಿ ನೌಕರರ ನಿರ್ಲಕ್ಷ್ಯದಿಂದ ದೌರ್ಜನ್ಯಕ್ಕೊಳಗಾದ ಬಗೆಗಿನ ದೂರುಗಳಿದ್ದಲ್ಲಿ ರಿಜಿಸ್ಟಾರ್, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಮಾನವ ಅಧಿಕಾರ ಭವನ, ಬ್ಲಾಕ್-ಸಿ, ಜಿ.ಪಿ.ಒ ಕಾಂಪ್ಲೆಕ್ಸ್, ಐಎನ್‍ಎ, ನವದೆಹಲಿ-110023 ಇಲ್ಲಿಗೆ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಜೂನ್ 10ರೊಳಗೆ ಸಲ್ಲಿಸಬೇಕು. ದೂರುಗಳನ್ನು ಇಮೇಲ್ ರಿಡಿಟಚಿತಿಟಿhಡಿಛಿ@ಟಿiಛಿ.iಟಿ ಗೆ ಅಥವಾ ಫ್ಯಾಕ್ ಸಂಖ್ಯೆ 011-24651334 ಮೂಲಕ ಸಹ ಕಳುಹಿಸಬಹುದು. ದೂರುದಾರರು ತಮ್ಮ ದೂರವಾಣಿ ಸಂಖ್ಯೆ ಅಥವಾ ಈಮೇಲ್ ವಿಳಾಸವನ್ನು ನಮೂದಿಸಬೇಕು.
ವಿಚಾರಣೆಗೆ ಅರ್ಹವೆಂದು ಕಂಡುಬಂದ ದೂರುಗಳನ್ನು ಸಾರ್ವಜನಿಕ ವಿಚಾರಣೆಗೆ ತೆಗೆದುಕೊಳ್ಳಲಾಗುವುದೆಂದು ಪ್ರಕಟಣೆ ತಿಳಿಸಿದೆ.

ಮಿಲಿಟರಿ ಬಾಲಕರ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 28 – ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರದಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 6 ರಿಂದ 12ನೇ ತರಗತಿವರೆಗೆ ಮತ್ತು ಡಿಪ್ಲೊಮಾ ಓದುತ್ತಿರುವ ಮಾಜಿ ಸೈನಿಕರ ಹಾಗೂ ಅವಲಂಬಿತರ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.
ಮೈಸೂರಿನ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ ನಂತರವೇ ನಿಲಯದಲ್ಲಿ ಪ್ರವೇಶ ನೀಡಲಾಗುವುದು.
ಅರ್ಜಿಯನ್ನು ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಮೇ 31ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0821-2425240 ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 28 - ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಪದವೀಧರ ಅಭ್ಯರ್ಥಿಗಳನ್ನು ಯುಪಿಎಸ್‍ಸಿ, ಕೆಪಿಎಸ್‍ಸಿ, ಬ್ಯಾಂಕ್ ಅಧಿಕಾರಿ, ಗ್ರೂಪ್ ಸಿ ಹಾಗೂ ಕೇಂದ್ರದ ಸಿಬ್ಬಂದಿ ಆಯೋಗ ನಡೆಸುವ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 28:- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2018-19ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡಲು ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ(ವಿಶ್ವಕರ್ಮ, ಅಲ್ಪಸಂಖ್ಯಾತರು, ಉಪ್ಪಾರ, ಬೆಸ್ತ, ಅಂಬಿಗ ಇದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪೋಷಕರ ಕುಟುಂಬದ ವಾರ್ಷಿಕ ವರಮಾನ 3.5 ಲಕ್ಷ ರೂ. ಮಿತಿಯೊಳಗಿರಬೇಕು. ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ /ಜbಛಿಜಛಿ ಮೂಲಕ ಜೂನ್ 8ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ 08226-223587 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ 

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು