ಗ್ರಂಥಾಲಯಗಳ ಸಮರ್ಪಕ ನಿರ್ವಹಣೆಗೆ ಜಿ.ಪಂ. ಅಧ್ಯಕ್ಷರ ಸೂಚನೆ
ಚಾಮರಾಜನಗರ, ಜು. 11 - ಗ್ರಾಮ ಪಂಚಾಯಿತಿಗಳಲ್ಲಿ ಇರುವ ಗ್ರಂಥಾಲಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾವು ಪ್ರತಿನಿಧಿಸುತ್ತಿರುವ ಕೊಳ್ಳೇಗಾಲ ತಾಲೂಕಿನ ಪಾಳ್ಯ ಸೇರಿದಂತೆ ತಾಲೂಕಿನ ಹಲವೆಡೆ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯಗಳು ನಿರ್ವಹಣೆ ಸರಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯಗಳು ಗ್ರಾಮೀಣ ಜನರಿಗೆ ಅನುಕೂಲವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್ ಮಾತನಾಡಿ ವಿವಿಧ ನಿಗಮಗಳು ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಯಿಸುವ ಕೆಲಸವನ್ನು ವಿಳಂಬ ಮಾಡಿವೆ. ಇನ್ನುಮುಂದೆ ನಿಗದಿತ ಸಮಯಕ್ಕೆ ಸರಿಯಾಗಿ ಕೊಳವೆ ಬಾವಿಗಳ ಸೌಲಭ್ಯ ಲಭಿಸುವಂತೆ ನಿಗಮದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಕಾಲುವೆ, ನಾಲೆಗಳಿಗೆ ನೀರು ಹರಿಸುವ ಬಗ್ಗೆ ಅಧಿಕಾರಿಗಳು ಮುಂಚಿತವಾಗಿ ಮಾಹಿತಿ ನೀಡಿದರೆ ರೈತರು ಯಾವ ಬೆಳೆ ಬೆಳೆಯಬೇಕೆಂದು ನಿರ್ಧರಿಸಲು ಅನುಕೂಲವಾಗುತ್ತದೆ. ಈ ಬಗ್ಗೆ ನೀರಾವರಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜನರಿಗೆ ಉಪಯುಕ್ತವಾದ ಮಾಹಿತಿಯನ್ನು ತಲುಪಿಸಬೇಕು ಎಂದರು.
ನಾಲೆ, ಕಾಲುವೆ, ಕೆರೆಗಳಲ್ಲಿ ಹೂಳು ತೆಗೆಯಬೇಕು. ಇದರಿಂದ ನೀರು ಸದ್ಭಳಕೆಯಾಗಲಿದೆ. ಹೂಳು ತೆಗೆಯುವ ಕಾಮಗಾರಿಗೆ ಸಕಾಲದಲ್ಲಿ ಕ್ರಿಯಾಯೋಜನೆ ತಯಾರಿಸಿ ಕೆಲಸ ಪೂರ್ಣಗೊಳಿಸಬೇಕೆಂದು ಯೋಗೇಶ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಕೆಲಸಗಳನ್ನು ನಿರ್ವಹಿಸಬೇಕು. ಗ್ರಾಮೀಣ ಜನರಿಗೆ ಅನುಕೂಲವಾಗುವ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದೆ. ಅಧಿಕಾರಿಗಳು ಹೆಚ್ಚು ಗಮನ ವಹಿಸಿ ಗುರಿ ಸಾಧಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್ ಪಾಂಡೆ, ಉಪಕಾರ್ಯದರ್ಶಿ ಮುನಿರಾಜಪ್ಪ ಇತರರು ಸಭೆಯಲ್ಲಿ ಹಾಜರಿದ್ದರು.
ಹಲ್ಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಚಾಮರಾಜನಗರ, ಜು. 11 - ಎಕಾಏಕಿ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಸಾವಿಗೆ ಕಾರಣರಾಗಿದ್ದ ಉಮ್ಮತ್ತೂರು ಗ್ರಾಮದ ನಟರಾಜು ಎಂಬುವರಿಗೆ ಅಧಿಕ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.
ಸಿದ್ದರಾಜು ಹಲ್ಲೆಗೆ ಒಳಗಾಗಿ ಸಾವಿಗೀಡಾದ ವ್ಯಕ್ತಿ. ಕಳೆದ 2013ರ ಜೂನ್ 20ರಂದು ಉಮ್ಮತ್ತೂರು ಗ್ರಾಮದಲ್ಲಿ ನಟರಾಜು ಸಿದ್ದರಾಜುವಿನೊಂದಿಗೆ ಜಗಳ ತೆಗೆದು ಎದೆಗೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿದ್ದ. ತೀವ್ರ ಗಾಯಗೊಂಡಿದ್ದ ಸಿದ್ದರಾಜುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾಕಷ್ಟು ಸಮಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಿದ್ದರಾಜು ಚಿಕಿತ್ಸೆ ಫ¯ಕಾರಿಯಾಗದೆ ಅಸುನೀಗಿದ್ದರು.
ಪ್ರಕರಣ ದಾಖಲಾಗಿ ಆರೋಪ ರುಜುವಾತಾದ ಹಿನ್ನಲೆಯಲ್ಲಿ ಆರೋಪಿ ನಟರಾಜುವಿಗೆ ಅಧಿಕ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಡಿ. ವಿನಯ್ ಅವರು ಇಂದು ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ.ದಂಡವನ್ನು ವಿಧಿಸಿ ತೀರ್ಪು ನೀಡಿದರು.
ಅಕಾಲಿಕ ಮರಣಕ್ಕೆ ಸಂಬಂಧಪಟ್ಟಂತೆ ಮೃತರ ಪತ್ನಿ ಪರಿಹಾರ ಕೋರಿ ಸಿ.ಆರ್.ಪಿ.ಸಿ ಕಲಂ 357 ಎ (2)ರಡಿಯಲ್ಲಿ ಸಲ್ಲಿಸಿರುವ ಮನವಿಯನ್ನು ನ್ಯಾಯಾಲಯ ಪುರಸ್ಕರಿದ್ದು, ಪರಿಹಾರ ಮೊತ್ತವನ್ನು ನಿರ್ದಿಷ್ಟಪಡಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಕಳುಹಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಬಿಯೋಜಕರಾದ ಎಂ.ಎಸ್. ಉಷಾ ವಾದ ಮಂಡಿಸಿದ್ದರು.
ಜುಲೈ 12ರಂದು ರಸ್ತೆ ಸುರಕ್ಷತಾ ಸಪ್ತಾಹ ಮಾಸಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
ಚಾಮರಾಜನಗರ, ಜು. 11:- ಜಿಲ್ಲಾ ಪೊಲೀಸ್ ಇಲಾಖೆ, ಈಶ್ವರಿ ಸೋಷಿಯಲ್ ಟ್ರಸ್ಟ್ ಆಶ್ರಯದಲ್ಲಿ ಸಾಲುಗಿಡ ನೆಡುವ ಕಾರ್ಯಕ್ರಮವನ್ನು ಜುಲೈ 12ರಂದು ಬೆಳಿಗ್ಗೆ 11 ಗಂಟೆಗೆ ನಗರದ ತ್ಯಾಗರಾಜ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಡಾ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ನಗರಸಭಾ ಅಧ್ಯಕ್ಷರಾದ ಶೋಭಾ, ರೋಟರಿ ಸಂಸ್ಥೆಯ ಅಧ್ಯಕ್ಷರಾದ ಡಿ. ನಾಗರಾಜ, ಯುನೈಟೆಡ್ ಇಂಡಿಯಾ ಇನ್ಷೂರೆನ್ಸ್ ಕಂಪನಿಯ ದೊಡ್ಡರಾಯಪೇಟೆ ಗಿರೀಶ್, ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಇದೇ ವೇಳೆ ಕನ್ನಡ ಕೋಗಿಲೆ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಮಹೇಶ್ ರಾಮಸಮುದ್ರ ಹಾಗೂ ಮಹದೇವಸ್ವಾಮಿ ಅವರನ್ನು ಸನ್ಮಾನಿಸಲಾಗುತ್ತದೆ. ಟ್ರಸ್ಟ್‍ನ ಸಿ.ಎಂ. ವೆಂಕಟೇಶ್ ಪ್ರಾಸ್ತಾವಿಕ ನುಡಿಗಳಾನ್ನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 12ರಂದು ಡೆಂಗಿ ವಿರೋಧಿ ಜಾಗೃತಿ ಜಾಥಾ
ಚಾಮರಾಜನಗರ, ಜು. 11 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಉಲಾಖೆಯು ಡೆಂಗಿ ವಿರೋಧಿ ಮಾಸಾಚರಣೆ ಅಂಗವಾಗಿ ಜುಲೈ 12ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಅವರಣದಿಂದ ಜನಜಾಗೃತಿ ಜಾಥಾ ಆಯೋಜಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 12ರಂದು ವಿಚಾರಣಾಧೀನ ಕೈದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ
ಚಾಮರಾಜನಗರ, ಜು. 11 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸೋಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ವಿಚಾರಣಾಧೀನ ಕೈದಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ 12 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾರಗೃಹ ಅವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾರಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಅಧ್ಯಕ್ಷತೆ ವಹಿಸುವರು.
ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಡಾ. ಮಹೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಅರುಣ್‍ಕುಮಾರ್, ಡಿ.ವೈ.ಎಸ್.ಪಿ ಜಯಕುಮಾರ್, ವೈದ್ಯರಾದ ಡಾ. ರವಿಶಂಕರ್, ಡಾ. ಕೃಷ್ಣಪ್ರಸಾದ್, ಡಾ. ಸುಷ್ಮಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಚಾಮರಾಜನಗರ,ಜು.11- ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಅಪಘಾತವನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಸಂಚಾರ ಠಾಣೆ ಸಬ್ ಇನ್ಸ್‍ಪೆಕ್ಟರ್ ದೀಪಕ್ ಕರೆ ನೀಡಿದರು.
ಅವರು ತಾಲೂಕಿನ ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಸಂಚಾರಿ ಠಾಣೆಯಿಂದ ಏರ್ಪಡಿಸಿದ್ದ ಸಂಚಾರಿ ನಿರ್ವಹಣೆ ಮತ್ತು ರಸ್ತೆ ಸುರ್ಷತಾ ಸಪ್ತಾಹ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬ ಬೈಕ್ ಸವಾರರು ಬೈಕ್ ಚಾಲನಾ ಪರವಾನಗಿ, ಬೈಕ್ ದಾಖಲಾತಿಗಳು, ವಾಹನ ವಿಮೆಗಳನ್ನು ಕಡ್ಡಾಯವಾಗಿ ಹೊಂದ ಬೇಕು ಮತ್ತು ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸುವ್ಯದರಿಂದ ಅಪಘಾತಗಳು ಸಂಭವಿಸಿದಾಗ ತಲೆ ಪೆಟ್ಟಾಗುವುದನ್ನು ತಪ್ಪಿಸಿ ಸಾವನ್ನು ತಡೆಗಟ್ಟುತ್ತದೆ ಎಚಿದ ಅವರು, ಸಂಚಾರಿ ನಿಯಮಗಳನ್ನು ಪಾಲಿಸಿದಾಗ ಅಪಘಾತಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದರು.
ಬಹುತೇಕ ಅಪಘಾತಗಳು ಚಾಲಕ ಅಜಾಗರುಕತೆಯಿಂದ ಸಂಭವಿಸುತ್ತದೆ ಇದರಿಂದ ಬೈಕ್ ಚಾಲನೆ ಮಾಡುವಾಗ ಮೊಬೈಲ್‍ನಲ್ಲಿ ಮಾತನಾಡಬೇಡಿ ಮೊಬೈಲ್‍ನಲ್ಲಿ ಮಾತನಾಡಬೇಕಾದರೆ ಬೈಕ್ ಅನು ರಸ್ತೆ ಬದಿ ನಿಲ್ಲಿಸಿ ಮಾತನಾಡಿ ನಂತರ ಬೈಕ್ ಚಾಲನೆ ಮಾಡಿ ಎಂದು ಸಲಹೆ ನೀಡಿದರು. ಸಮಿಕ್ಷೆ ಪ್ರಕಾರ ದೇಶದಲ್ಲಿ ಪ್ರತಿವರ್ಷ 1.50 ಲಕ್ಷ ಜನರು ಅಪಘಾತದಿಂದ ಸಾವನ್ನುಪ್ಪುತ್ತಿದ್ದಾರೆ ಎಂದು ಆತಂಕವ್ಯಕ್ತಪಡಿಸಿದ ಅವರು, ಆದ್ದರಿಂದ ಪ್ರತಿಯೊಬ್ಬರು ಸಹ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳ ತಡೆಗೆ ಪೋಲಿಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ವಿದ್ಯಾರ್ಥಿಗಳು ಈ ಬಗ್ಗೆ ತಮ್ಮ ಪೋಷಕರು ಮತ್ತು ತಮ್ಮ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವೆಂಕಟಯ್ಯನಛತ್ರ ಗ್ರಾಮಪಂಚಾಯಿತಿ ಅಧ್ಯಕ್ಷ ಸೋಮಣ್ಣ, ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಣ್ಣ, ಸಂಚಾರಿ ಠಾಣೆ ಎಎಸ್‍ಐ ವೆಂಕಟೇಶ್, ಸಿಬ್ಬಂದಿಗಳಾದ ಕುಮಾರ್, ಮಂಜು, ನವೀನ್. ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
.............................................
ಬಹುತೇಕ ಅಪಘಾತಗಳು ಚಾಲಕ ಅಜಾಗರುಕತೆಯಿಂದ ಸಂಭವಿಸುತ್ತದೆ ಇದರಿಂದ ಬೈಕ್ ಚಾಲನೆ ಮಾಡುವಾಗ ಮೊಬೈಲ್‍ನಲ್ಲಿ ಮಾತನಾಡಬೇಡಿ ಮೊಬೈಲ್‍ನಲ್ಲಿ ಮಾತನಾಡಬೇಕಾದರೆ ಬೈಕ್ ಅನು ರಸ್ತೆ ಬದಿ ನಿಲ್ಲಿಸಿ ಮಾತನಾಡಿ ನಂತರ ಬೈಕ್ ಚಾಲನೆ ಮಾಡಿ ಎಂದು ಸಲಹೆ ನೀಡಿದರು. ಸಮಿಕ್ಷೆ ಪ್ರಕಾರ ದೇಶದಲ್ಲಿ ಪ್ರತಿವರ್ಷ 1.50 ಲಕ್ಷ ಜನರು ಅಪಘಾತದಿಂದ ಸಾವನ್ನುಪ್ಪುತ್ತಿದ್ದಾರೆ ಎಂದು ಆತಂಕವ್ಯಕ್ತಪಡಿಸಿದ ಅವರು, ಆದ್ದರಿಂದ ಪ್ರತಿಯೊಬ್ಬರು ಸಹ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳ ತಡೆಗೆ ಪೋಲಿಸ್ ಇಲಾಖೆಗೆ ಸಹಕಾರ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ವಿದ್ಯಾರ್ಥಿಗಳು ಈ ಬಗ್ಗೆ ತಮ್ಮ ಪೋಷಕರು ಮತ್ತು ತಮ್ಮ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವೆಂಕಟಯ್ಯನಛತ್ರ ಗ್ರಾಮಪಂಚಾಯಿತಿ ಅಧ್ಯಕ್ಷ ಸೋಮಣ್ಣ, ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಣ್ಣ, ಸಂಚಾರಿ ಠಾಣೆ ಎಎಸ್‍ಐ ವೆಂಕಟೇಶ್, ಸಿಬ್ಬಂದಿಗಳಾದ ಕುಮಾರ್, ಮಂಜು, ನವೀನ್. ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
.............................................
ಜುಲೈ 14 ರಂದು ಎಲ್ಲೆಡೆ ಲೋಕ ಅದಾಲತ್: ಸದುಪಯೋಗಕ್ಕೆ ಮನವಿ
ಚಾಮರಾಜನಗರ, ಜು. 10 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜುಲೈ 14 ರಂದು ಬೆಳಿಗ್ಗೆ 11 ಗಂಟೆಗೆ ರಾಜಿ ಸಂಧಾನದ ಅಂದರೆ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ವೈವಾಹಿಕ, ಕೌಟುಂಬಿಕ, ಪಾಲು ವಿಭಾಗ, ಬ್ಯಾಂಕ್ ಪ್ರಕರಣಗಳು, ಚೆಕ್ ಬೌನ್ಸ್, ಹಣಕಾಸಿನ ದಾವೆ, ಸಿವಿಲ್, ಕಂದಾಯ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಕಾಯಿದೆ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಬಸವರಾಜ ಅವರ ಮಾರ್ಗದರ್ಶನದಲ್ಲಿ ನಗರದ ನ್ಯಾಯಾಲಯಗಳ ಆವರಣದ ಎ.ಡಿ.ಆರ್ ಕಟ್ಟಡದಲ್ಲಿ ಮತ್ತು ಎಲ್ಲಾ ತಾಲ್ಲೂಕುಗಳ ನ್ಯಾಯಾಲಯಗಳ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಇತ್ಯರ್ಥ ಮಾಡಲಾಗುತ್ತದೆ. ಕಕ್ಷಿದಾರರು ಬ್ಯಾಂಕುಗಳು ಇತರೆ ನಾಗರಿಕರು ಲೋಕ ಅದಾಲತ್ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳÀುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಜು.11 ರಂದು ಜಿ.ಪಂ. ಕೆ.ಡಿ.ಪಿ. ಸಭೆ
ಚಾಮರಾಜನಗರ, ಜು. 10 - ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಜಿಲ್ಲಾ ಮಾಸಿಕ ಪ್ರಗತಿ ಪರಿಶೀಲನೆ ಸಭೆಯು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ಜುಲೈ 11ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ
ಚಾಮರಾಜನಗರ, ಜು. 10 - ಜಿಲ್ಲಾ ಉದ್ಯೋಗ ವಿನಿಯಮ ಇಲಾಖೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಚಿತ ತರಬೇತಿಯನ್ನು ಜು.21 ರವರೆಗೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರತಿದಿನ ಮಧ್ಯಾಹ್ನ 2 ರಿಂದ 5 ಗಂಟೆಯವರೆಗೆ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು (ವಿಶೇಷವಾಗಿ ಪದವಿ ಮಟ್ಟದ ಅಭ್ಯರ್ಥಿಗಳು) ತಮ್ಮ ಹೆಸರು ಭಾವಚಿತ್ರ ವಿವರಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08226-224430 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ.ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ: ವಿವಿಧ ಸಾಲ ಸೌಲಭ್ಯ, ಸ್ವಸಹಾಯ ಗುಂಪುಗಳ ರಚನೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 10 :- ಗುಂಡ್ಲುಪೇಟೆ ಪುರಸಭೆಯು ಡೇ ನಲ್ಮ್ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವವರೆಗೆ ಹಾಗೂ ಸ್ವಸಹಾಯ ಗುಂಪಿನ ಸದಸ್ಯರಿಗೆ ಸಾಲ ಸೌಲಭ್ಯ ನೀಡಲಿದ್ದು ಅರ್ಜಿ ಆಹ್ವಾನಿಸಿದೆ.ಎಂ.ಎಸ್.ಐ.ಡಿ.ಯೋಜನೆಯಡಿ ಮಹಿಳೆಯರು, ಪುರುಷರು, ವಿಕಲಚೇತನರ ಸ್ವಸಹಾಯ ಗುಂಪುಗಳನ್ನು (ಚಿಂದಿ ಆಯುವವರು, ರಿಕ್ಷಾ, ನೈರ್ಮಲ್ಯ ಕೆಲಸಗಾರರು ಸೇರಿದಂತೆ) ರಚಿಸಿ ಕೊಡಲಾಗುತ್ತದೆ. 3 ತಿಂಗಳ ನಂತರ ಸುತ್ತು ನಿಧಿ ನೀಡಲಾಗುತ್ತದೆ ಬೀದಿ ಬದಿ ವ್ಯಾಪಾರ ಮಾಡುವವರು ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರು ಜುಲೈ 25ರೊಳಗೆ ಪುರಸಭೆ ಕಾರ್ಯಾಲಯ ಸಂಪರ್ಕಿಸಿ ಮಾಹಿತಿ ಪಡೆಯುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ: ಅರ್ಜಿ ಆಹ್ವಾನ
ಚಾಮರಾಜನಗರ, ಜು. 10- ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕ್ರೀಡೆ, ಕಲೆ, ಸಾಂಸ್ಕøತಿಕ, ಸಮಾಜ ಸೇವೆ, ಸಂಗೀತ, ನಾವೀನ್ಯತೆ ಹಾಗೂ ತಾರ್ಕಿಕ ಸಾಧನೆಯಂತಹ ಅಸಾಧಾರಣ ಸಾಧನೆ ಮಾಡಿರುವ ಮಕ್ಕಳಿಗೆ ಕೊಡ ಮಾಡುವ ಜಿಲ್ಲಾಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
5 ರಿಂದ 18 ವರ್ಷದೊಳಗಿರಬೇಕು. ಒಟ್ಟು 14 ಮಕ್ಕಳಿಗೆ ಪ್ರಶಸ್ತಿ ನೀಡಲಾಗುತ್ತದೆ. 10 ಸಾವಿರವು ನಗದು ಬಹುಮಾನ ಒಳಗೊಂಡಿರುತ್ತದೆ.ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜುಲೈ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಡಳಿತ ನ್ಯಾಯಾಧೀಕರಣ ತರಬೇತಿಗೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 10 - ಸಮಾಜ ಕಲ್ಯಾಣ ಇಲಾಖೆಯು ಆಡಳಿತ ನ್ಯಾಯಾಧೀಕರಣ ತರಬೇತಿಗಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಕಡೆಯ ದಿನಾಂಕಕ್ಕೆ ಕಾನೂನು ಪದವಿಯಲ್ಲಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. 40ರ ವಯೋಮಿಯೊಳಗಿರಬೇಕು, ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ. ನಿಗದಿ ಮಾಡಲಾಗಿದೆ.
ತರಬೇತಿ ಅವಧಿಯಲ್ಲಿ ತಿಂಗಳಿಗೆ 5 ಸಾವಿರ ರೂ. ಶಿಷ್ಯ ವೇತನ ನೀಡಲಾಗುತ್ತದೆ. ಅರ್ಜಿ ಜೊತೆ ಜಾತಿ ವರಮಾನ ದೃಢೀಕರಣ ಅಂಕಪಟ್ಟಿಗಳು ಇತರೆ ಪತ್ರಗಳನ್ನು ದೃಢೀಕರಿಸಿ 2 ಪಾಸ್‍ಪೋಟೋ ಅಳತೆಯ ಭಾವಚಿತ್ರ ಲಗತ್ತಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 30 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳನ್ನು ತಿತಿತಿ.sತಿ.ಞಚಿಡಿ.ಟಿiಛಿ.iಟಿ ನೋಡಬಹುದು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದಲೂ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment