Wednesday, 11 July 2018

(15-06-2018) ಜೂ. 18ರಂದು ಮಾನವ ಸಾಗಾಣಿಕೆ ತಡೆ ಜಾಗೃತಿ ಕಾಂiÀರ್iಕ್ರಮ

ಜೂ. 18ರಂದು ಮಾನವ ಸಾಗಾಣಿಕೆ ತಡೆ ಜಾಗೃತಿ ಕಾಂiÀರ್iಕ್ರಮ

ಚಾಮರಾಜನಗರ, ಜೂ. 15 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಓಡಿಪಿ ಸಂಸ್ಥೆ ಹಾಗೂ ಸಾಧನ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಸಾಗಾಣಿಕೆ ತಡೆಯಿರಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಜೂನ್ 18ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನೂತನ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ ಉಪನ್ಯಾಸ ನೀಡುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಎನ್. ವನಜಾಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಂiÀi ಮಂಡಳಿ ಸದಸ್ಯರಾದ ಟಿ.ಜೆ. ಸುರÉೀಶ್, ಓಡಿಪಿ ಸಂಸ್ಥೆಯ ವಲಯ ಸಂಯೋಜಕರಾದ ಸಿಸ್ಟರ್ ಪೆಲ್ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜೂ. 20ರಂದು  ಯೋಗ ಜಾಗೃತಿ ಜಾಥಾ 

ಚಾಮರಾಜನಗರ, ಜೂ. 15 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮಾಹಿಕ ಜಾಥಾ ಕಾರ್ಯಕ್ರಮ ಆಯೋಜಿಸಲÁಗಿದೆ.
ಜಾಥಾ ಕಾರ್ಯಕ್ರಮ ನ್ಯಾಯಾಲಯದ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಶಾಲಾ ಮಕ್ಕಳು, ಯೋಗಪಟುಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಳ್ಳುವರು.
ಜಾಥಾ ನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಜಿಲ್ಲಾ ಅಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಯಳಂದೂರು ಪ.ಪಂ : ಬಯಲು ಶೌಚಮುಕ್ತ ಪ್ರದೇಶ ಘೋಷಿಸಲು ಸಲಹೆ, ಆಕ್ಷೇಪಣೆ ಆಹ್ವಾನ

ಚಾಮರಾಜನಗರ, ಜೂ. 15 - ಯಳಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ವಾರ್ಡುಗಳನ್ನು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಿಸಲು ತೀರ್ಮಾನಿಸಲಾಗಿದೆ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11 ವಾರ್ಡ್‍ಗಳಲ್ಲಿ ವಾರ್ಡ್ ಸಂಖ್ಯೆ 1, 2. 3, 5 ಹಾಗೂ 6 ಸೇರಿ ಒಟ್ಟು 5 ವಾರ್ಡುಗಳನ್ನು ಸಮೀಕ್ಷೆ ಮಾಡಿದ್ದು, ಸಾರ್ವಜನಿಕರು ವೈಯುಕ್ತಿಕ ಹಾಗೂ ಸಮುದಾಯ ಶೌಚಾಲಯಗಳನ್ನು ಬಳಸುತ್ತಿದ್ದಾರೆ. ಯೋಜನೆಯಡಿ ಈ ವಾರ್ಡುಗಳನ್ನು ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು. ಸಂಘಸಂಸ್ಥೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ತಮ್ಮ ಸಲಹೆ ಅಥವಾ ಆಕ್ಷೇಪಣೆಗಳು ಇದ್ದಲ್ಲಿ ಜೂನ್ 30ರೊಳಗೆ ಪಟ್ಟಣ ಪಂಚಾಯಿತಿ ಕಾಯರ್Áಲಯಕ್ಕೆ ಸಲ್ಲಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಉಮÁಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 17ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಜೂ. 15 - ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 17ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಣ್ಯದಹುಂಡಿ, ದಾಸನೂರು, ಇಂಡಸ್ಟ್ರಿಯಲ್ ಏರಿಯಾ, ಕೆಲ್ಲಂಬಳ್ಳಿ, ಬೆಂಡರವಾಡಿ, ಮಹದೇವನಗರ, ಬದನಗುಪ್ಪೆ, ತೊರವಳ್ಳಿ ಎನ್‍ಜೆವೈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 19ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 15  ಚಾಮರಾಜನಗರ ತಾಲೂಕಿನ ಹರವೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 19ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದ್ದು ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಉತ್ತುವಳ್ಳಿ, ಹೊಸಳ್ಳಿ, ಮುಕ್ಕಡಹಳ್ಳಿ, ಉಡಿಗಾಲ, ಕಲ್ಪುರ, ಮೂಡ್ಲಕೂಡು, ಹೆಗ್ಗವಾಡಿ, ತಮ್ಮಡಹಳ್ಳಿ, ದೇವಲಾಪುರ, ನಂಜದೇವನಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಂಡ್ಲುಪೇಟೆ : ವಾಜಪೇಯಿ ವಸತಿ ಯೋಜನೆಯಡಿ ಮನೆ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 15  ಗುಂಡ್ಲುಪೇಟೆ ಪುರಸಭೆಯು ವಾಜಪೇಯಿ ವಸತಿ ಯೋಜನೆಯಡಿ 2017-18ನೇ ಸಾಲಿಗೆ ಮನೆ ನಿರ್ಮಿಸಿಕೊಳ್ಳುವ ಸಲುವಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ಇತರೆ ಜನಾಂಗದವರಿಗೆ 157 ಹಾಗೂ ಅಲ್ಪಸಂಖ್ಯಾತರಿಗೆ 18 ಮನೆ ನಿರ್ಮಾಣ ಸೇರಿ ಒಟ್ಟು 175 ಮನೆ ನಿರ್ಮಾಣದ ಗುರಿ ಹೊಂದಲಾಗಿದೆ.
ಯೋಜನೆಯಡಿ ಪಕ್ಕಾ ಮನೆ ನಿರ್ಮಿಸಲು ರಾಜ್ಯ ಸರ್ಕಾರದ 1 ಲಕ್ಷದ 20 ಸಾವಿರ ರೂ., ಕೇಂದ್ರ ಸರ್ಕಾರದ 1 ಲಕ್ಷದ 50 ಸಾವಿರ ರೂ.ಗಳನ್ನು ಹಂತಹಂತವಾಗಿ ಆಶ್ರಯ ಯೋಜನೆ ಸಮಿತಿಯಲ್ಲಿ ಆಯ್ಕೆಯಾಗಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಅನುಮೋದನೆಯಾದ ನಂತರ ನೀಡಲಾಗುವುದು.
ಅರ್ಜಿದಾರರ ಕುಟುಂಬ ನಿವೇಶನ ಹೊಂದಿದ್ದು ವಸತಿ ರಹಿತರಾಗಿರಬೇಕು. ಸಾರ್ವಜನಿಕ ಸ್ಥಳ, ತಾತ್ಕಾಲಿಕ ಶೆಡ್, ಶಿಥಿಲವಾದ ಮನೆ ಅಥವಾ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದು 300 ಚ.ಮೀ.ಗೆ ಹೆÀಚ್ಚು ಇಲ್ಲದ 4ಕ್ಕಿಂತ ಹೆಚ್ಚು ಸದಸ್ಯರು ವಾಸಿಸುತ್ತಿರಬೇಕು. ಕರ್ನಾಟಕ ಯಾವುದೇ ಜಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ವಾರ್ಷಿಕ ಆದಾಯ 87 ಸಾವಿರ ರೂ.ಗಿಂತ ಕಡಿಮೆ ಇರಬೇಕು. ಬೇರಾವುದೇ ಯೋಜನೆ, ಇಲಾಖೆಯಿಂದ ವಸತಿ ಸೌಲಭ್ಯ ಪಡೆದಿರಬಾರದು. ಸ್ವಂತ ನಿವೇಶನದ ಖಾತೆ ಹೊಂದಿರಬೇಕು. ಆಯ್ಕೆಯಾಗಿ ಮಂಜೂರಾತಿ ಪತ್ರ ನೀಡಿದ ನಂತರ ಹಳೆಯ ಮನೆಯನ್ನು ತೆರವುಗೊಳಿಸಬೇಕು. ನಿವೇಶನವನ್ನು 15 ವರ್ಷಗಳ ಕಾಲ ಪುರಸಭೆಗೆ ಅಡಮಾನ ಮಾಡಿಕೊಡಬೇಕು.
ಅರ್ಜಿಯನ್ನು ಈ ಹಿಂದೆ ಸಲ್ಲಿಸಿದ್ದಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಪುರಸಭೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಭಾವಚಿತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಅಸೆಸ್‍ಮೆಂಟ್ ಪ್ರತಿ, ಸ್ವಂತ ಮನೆ ಇಲ್ಲದಿರುವ ಬಗ್ಗೆ ಅಫಿಡವಿಟ್, ಕಟ್ಟಡ ನಿರ್ಮಾಣ ಲೈಸನ್ಸ್ ಪ್ರತಿ, ಹಳೆ ಮನೆ ಇದ್ದಲ್ಲಿ ಅದರ ಫೋಟೋಗಳನ್ನು ಲಗತ್ತಿಸಿ ಪುರಸÀಭೆಗೆ 15 ದಿನದೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಜೂ. 15 :- ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶವಿದೆ.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ತಹಸೀಲ್ದಾರ್ ಕಚೇರಿ ಹಾಗೂ ಆಯಾ ನಗರಸಭೆ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ತಿಳಿವಳಿಕೆಗಾಗಿ ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಹೆಸರು, ಅವರು ವಾಸವಿರುವ ವಾರ್ಡಿನ ವ್ಯಾಪ್ತಿಯಲ್ಲಿರದೇ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಜೂನ್ 17ರೊಳಗೆ ಆಯಾ ತಹಸೀಲ್ದಾರ್ ಕಚೇರಿ, ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 20 ರವರೆಗೆ ಚಾ.ನಗರ ಸಭೆ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಚಾಮರಾಜನಗರ, ಜೂ. 16 :- ಚಾಮರಾಜನಗರ ಸಭೆಯ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 20 ರವರೆಗೆ ಕಾಲಾವಕಾಶ ನಿಗದಿ ಮಾಡಲಾಗಿದೆ.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಆಯಾ ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಹಾಗೂ ಸಂಬಂಧಿಸಿದ ತಹಸೀಲ್ದಾರ್ ಕಚೇರಿಯಲ್ಲಿ ಜೂನ್ 17 ರವರೆಗೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ ಎಂದು ಈಗಾಗಲೇ ಪ್ರಕಟಿಸಲಾಗಿದೆ. ಆದರೆ ಚಾಮರಾಜನಗರ ನಗರ ಸಭೆಯ ಕರಡು ಮತದಾರರ ಪಟ್ಟಿಯನ್ನು ಜೂನ್ 14 ರಂದು ಪ್ರಚುರ ಪಡಿಸಲಾಗಿದೆ. ಹೀಗಾಗಿ ಚಾಮರಾಜನಗರ ಸಭೆಯ ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 17 ರ ಬದಲಾಗಿ ಜೂನ್ 20 ರವರೆಗೆ ಕಾಲಾವಕಾಶ ನಿಗದಿಪಡಿಸಲಾಗಿದೆ.
ಈ ಹಿನ್ನಲೆಯಲ್ಲಿ ಚಾಮರಾಜನಗರ ನಗರ ಸಭೆಯ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮತದಾರರ ಹೆಸರು, ಅವರು ವಾಸಿಸುವ ವಾರ್ಡಿನ ವ್ಯಾಪ್ತಿಯಲ್ಲಿರದೇ ಬೇರೆ ವಾರ್ಡಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಹಾಗೂ ಗ್ರಾಮೀಣ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಹೆಸರುಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆಕ್ಷೇಪಣೆಗಳನ್ನು ಜೂನ್ 20 ರೊಳಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 18 ರಂದು ಕೃಷಿ ಸಚಿವರಿಂದ ಚಾ.ನಗರ ಮೈಸೂರು ಜಿಲ್ಲೆಯ ಕೃಷಿ ಇಲಾಖೆ ಪ್ರಗತಿ ಪರಿಶೀಲನೆ 

ಚಾಮರಾಜನಗರ, ಜೂ. 16 - ಕೃಷಿ ಸಚಿವರಾದ ಎನ್.ಎಚ್ ಶಿವಶಂಕರ ರೆಡ್ಡಿ ಅವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 18 ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸುವರೆಂದು ಪ್ರಕಟಣೆ ತಿಳಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಜೂ. 16  ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜೂನ್ 18 ರಿಂದ 21 ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜೂನ್ 18ರಂದು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು 9 ಗಂಟೆಗೆ ಉಪ್ಪಿನಮೋಳೆಗೆ ಆಗಮಿಸುವರು. 10.30 ಗಂಟೆಗೆ ಚಾಮರಾಜನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುವ ಸಚಿವರು 11 ಗಂಟೆಗೆ ನಗರದ ಎ.ಪಿ.ಎಂ.ಸಿ ಮಾರುಕಟ್ಟೆ ಅವರಣದಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಹಮ್ಮಿಕೊಂಡಿರುವ ಕೃತಜ್ಞತಾ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ ನಗರದಲ್ಲಿ ಏರ್ಪಡಿಸಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜೂನ್ 19, 20 ಮತ್ತು 21ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಅಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು