Tuesday, 17 July 2018

ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ : ಆರ್. ಧ್ರುವನಾರಾಯಣ (17-07-2018)


ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ : ಆರ್. ಧ್ರುವನಾರಾಯಣ 

ಚಾಮರಾಜನಗರ, ಜು. 17:- ಮಿತಿಮೀರಿದ ಪ್ರಮಾಣದಲ್ಲಿ ಏರುತ್ತಿರುವ ಜನಸಂಖ್ಯೆ ಪ್ರಮಾಣವನ್ನು ನಿಯಂತ್ರಣ ಮಾಡದಿದ್ದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಠಿಯಾಗಲಿದೆ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವಜನಸಂಖ್ಯಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಳ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ನಂತರದ ಸ್ಥಾನದಲ್ಲಿದೆ. ಚೀನಾ ಹಾಗೂ ಭಾರತದ ನಡುವೆ ಜನಸಂಖ್ಯೆ ಪ್ರಮಾಣದಲ್ಲಿ ಭಾರಿ ಅಂತರವೇನಿಲ್ಲ. ಭಾರತದಲ್ಲಿ ಪ್ರಸ್ತುತ ಜನಸಂಖ್ಯೆ ಏರಿಕೆ ಪ್ರಮಾಣವನ್ನು ಗಮನಿಸಿದಾಗÀ 2024ರ ವೇಳೆಗೆ ಚೀನಾವನ್ನು ಜನಸಂಖ್ಯೆಯಲ್ಲಿ ಹಿಂದಿಕ್ಕುವ ಸಾಧ್ಯತೆಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು.
ಜನಸಂಖ್ಯೆ ಪ್ರಮಾಣ ಏರಿಕೆ ತಡೆಯಲು ಆರೋಗ್ಯ ಪೂರಕ ತಿಳಿವಳಿಕೆ ನೀಡಬೇಕಿದೆ. ಜನಸಂಖ್ಯೆ ಸ್ಪೋಟದಿಂದ ಆಗುವ ಅಪಾಯಗಳ ಕುರಿತು ಮನವರಿಕೆ ಮಾಡಿಕೊಡಬೇಕಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ನಿಟ್ಟಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲೆಯಲ್ಲಿ ತಾಯಿ ಶಿಶುವಿನ ಮರಣ ಪ್ರಮಾಣ ಗಣನೀಯವಾಗಿ ತಗ್ಗಿರುವುದು ಉತ್ತಮ ಬೆಳವಣಿಗೆಯಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ತಾಯಿ ಮಗುವಿನ ಆರೋಗ್ಯ ಕಾಳಜಿಗೆ ವಿಶೇಷ ಒತ್ತು ನೀಡಲಾಗಿದೆ. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯಶಸ್ವಿಗೆ ಕಾರಣರಾಗಿದ್ದಾರೆ ಎಂದು ಧ್ರುವನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಜನಸಂಖ್ಯೆ ಹೆಚ್ಚಳವನ್ನು ಮಾನವ ಸಂಪನ್ಮೂಲ ಅಭಿವೃದ್ಧಿಯನ್ನಾಗಿ ಪರಿವರ್ತಿಸಿದರೆ ಪ್ರಗತಿಯನ್ನು ಗಣನೀಯವಾಗಿ ಕಾಣಬಹುದು. ಜನರ ಮಾನಸಿಕ ಪರಿವರ್ತನೆಯಾದರೆ ಜನಸಂಖ್ಯೆ ಏರಿಕೆಗೆ ಕಡಿವಾಣ ಹಾಕಬಹುದು. ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವಿಶ್ವಜನಸಂಖ್ಯಾ ದಿನ ಆಚರಣೆಯ ಕುರಿತು ಮುಖ್ಯ ಉಪನ್ಯಾಸ ನೀಡಿದ ಉಪನ್ಯಸಕರಾದ ಎಸ್. ರಾಮಕೃಷ್ಣ ವಿಶ್ವದಲ್ಲಿ 763 ಕೋಟಿ ಜನಸಂಖ್ಯೆ ಇದೆ. ಭಾರತದ ಜನಸಂಖ್ಯೆ 136 ಕೋಟಿ ಆಗಿದೆ. ಜನಸಂಖ್ಯೆ ಪ್ರಮಾಣ ವಿಶ್ವದಲ್ಲಿ ನಿಯಂತ್ರಣವಾಗದಿದ್ದರೆ ಜೈವಿಕ ಅಸಮಾನತೆ ಉಂಟಾಗಲಿದೆ. ಭೂಮಿಯ ಮೇಲೆ ಒತ್ತಡ ಹೆಚ್ಚಾಗಲಿದೆ. ಭವಿಷ್ಯದ ದಿನಗಳಲ್ಲಿ ಜಲಕ್ಷಾಮ ಆಮ್ಲಜನಕ ಕೊರತೆಯಿಂದ ಜನರು ಬಳಲಬೇಕಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಮಾತನಾಡಿ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಜನಸಂಖ್ಯೆ ಪ್ರಮಾಣ ನಿಯಂತ್ರಣದಲ್ಲಿರಬೇಕು. ಎಲ್ಲರೂ ಸಾಮಾಜಿಕವಾಗಿ ಹಾಗು ಆರ್ಥಿಕವಾಗಿ ಉತ್ತಮ ಬಾಳ್ವೆ ನಡೆಸಲು ಸೌಲಭ್ಯಗಳು ಸಮಾನವಾಗಿ ಹಂಚಿಕೆಯಾಗಬೇಕು. ಜನಸಂಖ್ಯೆ ಪ್ರಮಾಣ ಸಮತೋಲನದಲ್ಲಿ ಇದ್ದಾಗ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.
ಇದೇವೇಳೆ ಉತ್ತಮ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ಉಪಾಧ್ಯಕ್ಷರಾದ ಜೆ. ಯೋಗೇಶ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಅನಿಲ್ ಕುಮಾರ್, ಆರ್‍ಸಿಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಾರಾಯಣಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಜನಸಂಖ್ಯಾ ನಿಯಂತ್ರಣ ಸಂಬಂಧ ಜಾಗೃತಿ ಜಾಥಾ ನಡೆಸಲಾಯಿತು.
ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಜು. 17 :- ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜುಲೈ 20 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ಜುಲೈ 20ರಂದು ಕೊಳ್ಳೇಗಾಲ, 21ರಂದು ಯಳಂದೂರು, 23ರಂದು ಚಾಮರಾಜನಗರ, 24ರಂದು ಗುಂಡ್ಲುಪೇಟೆ ಹಾಗೂ 25ರಂದು ಹನೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಗ್ರಾಮೀಣ ಯುವಜನರು ಆತ್ವವಿಶ್ವಾಸ ವೃದ್ಧಿಸಿಕೊಳ್ಳಲು ಧ್ರುವನಾರಾಯಣ ಸಲಹೆ
ಚಾಮರಾಜನಗರ, ಜು. 17:- ಗ್ರಾಮೀಣ ಪ್ರದೇಶದ ಯುವಜನರು ಕೀಳರಿಮೆ ತೊರೆದು ಆತ್ಮವಿಶ್ವಾಸ ಬೆಳೆಸಿಕೊಂಡು ಪ್ರಸ್ತುತ ಉದ್ಯೋಗ ಅವಕಾಶಗಳನ್ನು ಹೆಚ್ಚು ಪಡೆಯುವಂತಾಗಬೇಕೆಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಲಹೆ ಮಾಡಿದರು.
ನಗರದ ಜಿಲ್ಲಾಡಳಿತದ ಭವನದ ಕೆಡಿಪಿ ಸಭಾಂಗಣದಲ್ಲಿ ಇಂದು ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಸಂದರ್ಭಗಳಿಗೆ ಅನುಸಾರವಾಗಿ ಲಭಿಸುತ್ತಿರುವ ಉದ್ಯೋಗ ಅವಕಾಶಗಳಿಗೆ ಅನೇಕ ಕೌಶಲ ಅಗತ್ಯವಿದೆ. ಕೌಶಲ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ. ಬರಿ ತರಬೇತಿ ಪಡೆದರಷ್ಟೇ ಸಾಲದು ಉದ್ಯೋಗ ನಿರ್ವಹಿಸಲು ಅವಶ್ಯವಿರುವ ಸಂವಹನ ಕಲೆಯನ್ನು ಸಹ ಸಿದ್ಧಿಮಾಡಿಕೊಳ್ಳಬೇಕು. ಆತ್ಮ ವಿಶ್ವಾಸ ವೃದ್ಧಿಸಿಕೊಂಡು ಮುನ್ನಡೆದರೆ ಯಶಸ್ವಿಯಾಗಬಹುದೆಂದು ಧ್ರುವನಾರಾಯಣ ಕಿವಿಮಾತು ಹೇಳಿದರು.
ಶಿಕ್ಷಣ ಒಂದೇ ಇಂದಿನ ಉದ್ಯೋಗಕ್ಕೆ ಸಾಲದು. ಕೌಶಲ ತರಬೇತಿ ಪ್ರತಿಯೊಬ್ಬರೂ ಪಡೆಯಬೇಕು. ಇತರೆ ಮುಂದುವರೆದ ರಾಷ್ಟ್ರಗಳು ಶೇ. 90ರಷ್ಟು ಕೌಶಲ ತರಬೇತಿಯನ್ನು ನೀಡುತ್ತಿವೆ. ನಮ್ಮಲ್ಲಿ ಕೌಶಲ ಪ್ರಮಾಣ ತೀರಾ ಕಡಿಮೆ ಇದೆ. ಪರಿಣತಿ ತರಬೇತಿ ನೀಡುವವರ ಸಂಖ್ಯೆಯೂ ಹೆಚ್ಚು ಇಲ್ಲ. ಹೀಗಾಗಿ ಇಂದಿನ ಅಗತ್ಯಕ್ಕೆ ಅನುಗುಣವಾಗಿ ಕೌಶಲ ಹೆಚ್ಚಳ ಮಾಡುವ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಸರ್ಕಾರ ನೀಡುತ್ತಿರುವ ಕೌಶಲ ಪೂರಕ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ದೀನ್ ದಯಾಳ್ ಉಪಾಧ್ಯಾಯ ಕೌಶಲ್ಯ ಯೋಜನೆ ತರಬೇತಿಯು ಗ್ರಾಮೀಣ ಪ್ರದೇಶದ ಬಡ ಯುವಜನರ ಅನುಕೂಲಕ್ಕಾಗಿ ತರಲಾಗಿದೆ. ಈ ಯೋಜನೆ ತರಬೇತಿ ಪಡೆಯಲು ಇತರರಿಗೂ ಉತ್ತೇಜನ ನೀಡಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಮಹತ್ವಾಕಾಂಕ್ಷೆಯ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಗ್ರಾಮೀಣ ಅಭ್ಯರ್ಥಿಗಳಿಗೆ ಕಂಪ್ಯೂಟರ್, ಆಂಗ್ಲ ಭಾಷೆ ಸಂವಹನ, ಸೇಲ್ಸ್ ಮತ್ತು ರೀಟೇಲ್ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡುವ ಕುರಿತು ತರಬೇತಿ ನೀಡಲಾಗಿದೆ. ತರಬೇತಿ ಪಡೆದಿರುವವರು ತಮ್ಮ ಅನುಭವ ಹಾಗೂ ನಿರೀಕ್ಷಿಸಿರುವ ಸೌಲಭ್ಯಗಳ ಬಗ್ಗೆ ತಿಳಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಕ್ರಮ ರೂಪಿಸಲು ಸಾಧ್ಯವಾಗುತ್ತದೆ ಎಂದರು.
ತರಬೇತಿ ಪಡೆದಿರುವ ಗ್ರಾಮೀಣ ವಿದ್ಯಾರ್ಥಿಗಳು ಉತ್ಸಾಹದಿಂದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರೊಂದಿಗೆ ತರಬೇತಿ ಕುರಿತು ಅನಿಸಿಕೆಗಳನ್ನು ಸಂವಾದದಲ್ಲಿ ಹಂಚಿಕೊಂಡರು.
ಇದೇವೇಳೆ ಜಿಲ್ಲಾ ಪಂಚಾಯತ್ ಜಿಲ್ಲಾ ವ್ಯವಸ್ಥಾಪಕರಾದ ಗೋವಿಂದರಾಜು ಯೋಜನೆಯಡಿ ವಿದ್ಯಾರ್ಥಿಗಳ ಆಯ್ಕೆ, ತರಬೇತಿ, ಉದ್ಯೋಗ ಅವಕಾಶಗಳ ಕುರಿತು ವಿವರ ನೀಡಿದರು. ಜಿಲ್ಲಾ ಪ್ರಂಚಾಯತ್ ಯೋಜನಾ ನಿರ್ದೇಶಕರಾದ ಶ್ರೀಧರ್, ತರಬೇತಿ ನಿರ್ವಹಣೆ ಹೊತ್ತಿರುವ ಐಟಿ ಕಾಟ್ ಸಂಸ್ಥೆಯ ಶೃತಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ: ಅರ್ಜಿ ಸಲ್ಲಿಕೆಗೆ ಅವಕಾಶ. ಚಾಮರಾಜನಗರ, ಜು. 17 - ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರÀನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ನಿರ್ದೇಶನ ನೀಡಿದೆ.
ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತರ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ನೋಂದಣಿಯಾಗದೆ ಇರುವವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು. ಮಾಜಿ ಯೋಧರು, ವಿಧುರರು, ಅಂಗವಿಕಲರು ಮತ್ತು ಹಿರಿಯ ನಾಗರಿಕರಾಗಿದ್ದಲ್ಲಿ ಪುರುಷರು ಸಹ ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬವು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದ್ದು, ಬಡತನ ರೇಖೆಗಿಂತ ಕೆಳಗಿರಬೇಕು. ಸಾಮಾಜಿಕ, ಆರ್ಥಿಕ ಮತ್ತು ಜಾತಿ ಜನಗಣತಿಯಂತೆ ವಸತಿ ರಹಿತರು, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿರುವವರು ಅರ್ಹರಾಗಿರುತ್ತಾರೆ. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು, ಯಾವುದೇ ಯೋಜನೆ, ಇಲಾಖೆಯಿಂದ ವಸತಿ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ಜುಲೈ 23 ರೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆಧಾರ್‍ಕಾರ್ಡ್, ಪಡಿತರ ಚೀಟಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳೊಡನೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜುಲೈ 19, 20 ರಂದು ಸಿ.ಎಂ.ಇ.ಜಿ.ಪಿ ಅರ್ಜಿದಾರರಿಗೆ ಸಂದರ್ಶನÀ. ಚಾಮರಾಜನಗರ, ಜು. 17 :- 2018-19ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಸೇವೆ ಘಟಕ ಪ್ರಾರಂಭದ ಉದ್ದೇಶಕ್ಕಾಗಿ ಸಾಲ-ಸೌಲಭ್ಯಕ್ಕೆ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜುಲೈ 19 ರಂದು ಹಾಗೂ ಕರ್ನಾಟಕ ಖಾದಿ ಮತ್ತು ಗ್ರಾಮೋದ್ದಯೋಗ ಮಂಡಳಿಗೆ  ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜುಲೈನ 20 ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲ್ಲೂಕಿನ ಮರಿಯಾಲದಲ್ಲಿರುವ ರುಡ್‍ಸೆಟ್ ಸಂಸ್ಥೆಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕಾಗಿ ಕರೆಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ. ಒಂದು ವೇಳೆ ಕರೆಪತ್ರಗಳು ತಲುಪದೇ ಇದ್ದರೂ ಸಹ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ವೇಳೆ ಅರ್ಜಿಯೊಂದಿಗೆ ಲಗತ್ತಿಸಿದ ಭಾವಚಿತ್ರ, ವಿದ್ಯಾರ್ಹತೆ, ಜನ್ಮ ದಿನಾಂಕ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತರೆ ಅಗತ್ಯ ಧೃಢೀಕರಣ ಪತ್ರಗಳ ಪ್ರತಿಯನ್ನು ಹಾಜರುಪಡಿಸಬೇಕು. ವಿವರಗಳಿಗೆ ನಗರದ ಜಿಲ್ಲಾಡಳಿತಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ದೂರವಾಣಿ ಸಂಖ್ಯೆ:08226-224915 ಸಂಪರ್ಕಿಸುವಂತೆ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






x

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು