ಮಾನವ ಸಾಗಾಣಿಕೆ ವಿರುದ್ಧ ಕಾಯಿದೆ ಜಾಗೃತಿ ಅಗತ್ಯ: ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ, ಜೂ. 18 :- ಮಹಿಳೆಯರು, ಮಕ್ಕಳ ಶೋಷಣೆ ತಡೆಗಾಗಿ ರೂಪಿಸಲಾಗಿರುವ ಕಾಯಿದೆಗಳ ಬಗ್ಗೆ ಜಾಗೃತರಾಗಿದ್ದರೆ ಎದುರಾಗುವ ತೊಂದರೆಗಳ ವಿರುದ್ಧ ಹೋರಾಡಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿಳಿಸಿದರು.ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಒ.ಡಿ.ಪಿ ಹಾಗೂ ಸಾಧನಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು, ಮಕ್ಕಳ ಸಾಗಾಣಿಕೆ, ಜೀತ ಪದ್ಧತಿ ತಡೆಗಾಗಿ ಸಾಕಷ್ಟು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು, ಮಕ್ಕಳನ್ನು ಲೈಂಗಿಕ ಶೋಷಣೆಗೆ ಗುರಿ ಮಾಡದಿರಲು ಕಠಿಣ ಕಾಯ್ದೆಗಳು ಇದ್ದರು ಇಂದೂ ಸಹ ಪ್ರಕರಣಗಳು ವರದಿಯಾಗುತ್ತಲೆ ಇವೆ. ಮಾನವ ಸಾಗಾಣಿಕೆ, ಶೋಷಣೆ ತಪ್ಪಿಸುವ ಸಲುವಾಗಿ ಇರುವ ಕಾನೂನುಗಳ ಬಗ್ಗೆ ಅರಿವು ಹೊಂದಬೇಕಾದ ಅಗತ್ಯ ಇದೆ ಎಂದು ನ್ಯಾಯಯಾಧೀಶರು ತಿಳಿಸಿದರು.
18 ವರ್ಷ ಒಳಪಟ್ಟವರ ಮೇಲೆ ಬಲವಂತವಾಗಿ ಲೈಂಗಿಕ ಶೋಷಣೆ, ದೌರ್ಜನ್ಯ ಎಸಗುವವರ ವಿರುದ್ಧ ಕ್ರಮ ವಹಿಸಲು ಪೋಕ್ಸೋ ಕಾಯಿದೆ ನೆರವಾಗಲಿದೆ. ಯಾವುದೇ ತೊಂದರೆಗೆ ಒಳಗಾದಾಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ವಕೀಲರು, ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಗಮನಕ್ಕೆ ತಂದರೆ ಕ್ರಮವಹಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಾಧೀಶರು ತಿಳಿಸಿದರು.
ವಿಶೇಷ ಉಪನ್ಯಾಸ ನೀಡಿದ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಕೆ.ವಿ. ಸ್ಟ್ಯಾನ್ಲಿ ಅವರು ಮಹಿಳೆಯರು, ಮಕ್ಕಳನ್ನು ಪದಾರ್ಥಗಳಂತೆ ಮಾರಾಟ ಮಾಡಿ ವಾಮಮಾರ್ಗದಿಂದ ಹಣ ಸಂಪಾದಿಸುವವರು ಇದ್ದಾರೆ. ದುರ್ಲಾಭಕ್ಕಾಗಿ ಮಾನವ ಸಾಗಾಣಿಕೆಯಂತಹ ನೀಚ ಕಾಯಕಕ್ಕೆ ಇಳಿಯುವವರ ವಿರುದ್ಧ ಯಾವುದೇ ಅಂಜಿಕೆ ಇಲ್ಲದೆ ಮಾಹಿತಿ ನೀಡಬೇಕು ಎಂದರು.
ಮಾನವ ಸಾಗಾಣಿಕೆ ಅಸಮಾನತೆ ಸಮಾಜ, ಶೋಷಣೆÉಯ ಪ್ರತೀಕವಾಗಿದೆ. ಮಾನವ ಸಾಗಾಣಿಕೆ ತಡೆಯಲು ಪ್ರಬಲ ಇಚ್ಚಾಶಕ್ತಿ ಬೇಕು. ಮನುಷ್ಯನ ಘನತೆ, ಬದುಕು ಅರಿತು ಮನುಷ್ಯನನ್ನು ಮನುಷ್ಯನಾಗಿ ನೋಡುವ ಪ್ರವೃತ್ತಿ ಬೆಳೆಯಬೇಕು. ಶೋಷಣೆ ಪ್ರವೃತ್ತಿ ಹೋಗಬೇಕು. ಸಂಘಟನೆಗಳು, ಅಧಿಕಾರಿಗಳು ಸೇರಿ ಎಲ್ಲರು ಸಂಘಟಿತ ಪ್ರಯತ್ನ ಮಾಡಿದರೆ ಮಾನವ ಸಾಗಾಣಿಕೆಯಂತಹ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಯಬಹುದೆಂದು ಸ್ಟ್ಯಾನ್ಲಿ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂ ಸೇವೆಗಳ ಪ್ರಾಧಿಕಾರದ ಸದಸ್ಯರು ಅದ ಸಿ.ಜೆ. ವಿಶಾಲಾಕ್ಷಿ ಮಾತನಾಡಿ ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕಾದರೆ ಸಾಮಾಜಿಕ ಪಿಡುಗುಗಳನ್ನು ತಡೆಯಬೇಕು. ಸ್ವಯಂ ಸೇವಾ ಸಂಸ್ಥೆಗಳು ದುಷ್ಟ ಪದ್ದತಿ ದೂರ ಮಾಡಲು ಕೈಜೋಡಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾನವ ಸಾಗಾಣಿಕೆಯಲ್ಲಿ ಭಾರತ ದೇಶವು 3ನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿಯಾಗಿದೆ. ಅಂತರಾಷ್ಟ್ರೀಯ ಪಿಡುಗಾಗಿರುವ ಮಾನವ ಸಾಗಾಣಿಕೆಯಂತಹ ಜಾಲವನ್ನು ಮೂಲೋತ್ಪಾಟನೆ ಮಾಡಲು ಎಲ್ಲರ ಪಾತ್ರವು ಸಹ ಪ್ರಮುಖವಾಗಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಎಸ್. ವನಜಾಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜೆ. ಸುರೇಶ್, ಒ.ಡಿ.ಪಿ ಸಂಸ್ಥೆಯ ಜೇಸುದಾಸ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ದೂರು ಸ್ವೀಕಾರ
ಚಾಮರಾಜನಗರ, ಜೂ. 18 - ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಜೂನ್ 20ರಿಂದ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.ಜೂನ್ 20ರಂದು ಚಾಮರಾಜನಗರ, 22ರಂದು ಕೊಳ್ಳೇಗಾಲ, 23ರಂದು ಗುಂಡ್ಲುಪೇಟೆ, 25ರಂದು ಹನೂರು, 26ರಂದು ಯಳಂದೂರು ಪಟ್ಟಣದ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ಹಾಗೂ ನೋಟರಿಯವರಿಂದ ಅಫಿಡವಿಟ್ ಮಾಡಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ವಿಳಂಬ ಸೇರಿದಂತೆ ಇತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ನಾಗರಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಲೋಕಯುಕ್ತ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಜೂನ್ 19ರಂದು ಚನ್ನಿಪುರಮೋಳೆಯಲ್ಲಿ ವಿಶ್ವ ಬಾಲ ಕಾರ್ಮಿಕ, ದೌರ್ಜನ್ಯ ವಿರೋಧಿ ದಿನ
ಚಾಮರಾಜನಗರ, ಜೂ. 18 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆÉ, ಹಾಗೂ ಸಾಧನಾ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋದಿ ಹಾಗೂ ವಿಶ್ವ ಬಾಲ ದೌರ್ಜನ್ಯ ವಿರೋಧಿ ದಿನ ಕಾರ್ಯಕ್ರಮವನ್ನು ಜೂನ್ 19ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಚನ್ನಿಪುರಮೋಳೆಯ ಹಸಿರು ಶಾಲೆ ಪುರಸ್ಕ್ರತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಏರ್ಪಡಿಸಲಾಗಿದೆ.ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜಯಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಟಿ.ಜೆ. ಸುರೇಶ್ ಅವರು ಉಪನ್ಯಾಸ ನೀಡುವರು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 21ರಂದು ನಗರದಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆÀ
ಚಾಮರಾಜನಗರ, ಜೂ. 18 - ಭಾರತ ಸರ್ಕಾರದ ಆಯುಷ್ ಮಂತ್ರಾಲಯ, ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಸಹಯೋಗದೊಂದಿಗೆ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರಂದು ಬೆಳಿಗ್ಗೆ 6.30ರಿಂದ 9 ಗಂಟೆಯವರೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು(ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿ.ಪಂ. ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ತಾ.ಪಂ. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಕಬಿನಿಗೆ ಹೆಚ್ಚು ನೀರು : ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
ಚಾಮರಾಜನಗರ, ಜೂ. 17 :- ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು ನದಿಗೆ ಹೆಚ್ಚು ನೀರನ್ನು ಬಿಡುವ ಸಂಭವ ಇರುವ ಹಿನ್ನಲೆಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶ ಹಾಗೂ ದಂಡೆಗಳಲ್ಲಿ ವಾಸುತ್ತಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ನದಿಗೆ ಹೆಚ್ಚು ನೀರು ಬಿಡುವ ಸಂಭವವಿರುವುದಾಗಿ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ. ಹೀಗಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ದಂಡೆಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 18ರಂದು ಮಾನವ ಸಾಗಾಣಿಕೆ ತಡೆ ಜಾಗೃತಿ ಕಾಂiÀರ್iಕ್ರಮ
ಚಾಮರಾಜನಗರ, ಜೂ. 17 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಓಡಿಪಿ ಸಂಸ್ಥೆ ಹಾಗೂ ಸಾಧನ ಸಂಸ್ಥೆ ಇವರ ಸಹಯೋಗದಲ್ಲಿ ಮಾನವ ಸಾಗಾಣಿಕೆ ತಡೆಯಿರಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಜೂನ್ 18ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನೂತನ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ವಿ. ಸ್ಟ್ಯಾನ್ಲಿ ಉಪನ್ಯಾಸ ನೀಡುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಎನ್. ವನಜಾಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಂiÀi ಮಂಡಳಿ ಸದಸ್ಯರಾದ ಟಿ.ಜೆ. ಸುರÉೀಶ್, ಓಡಿಪಿ ಸಂಸ್ಥೆಯ ವಲಯ ಸಂಯೋಜಕರಾದ ಸಿಸ್ಟರ್ ಪೆಲ್ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment