Wednesday, 11 July 2018

(19-06-2018)ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವರ ಕಟ್ಟುನಿಟ್ಟಿನ ಸೂಚನೆ   

ಚಾಮರಾಜನಗರ, ಜೂ. 19 - ನಗರದಲ್ಲಿ ಕೈಗೊಂಡಿರುವ ಎಲ್ಲ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಹಿಂದುಳದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೆರಿ ಸಭಾಂಗಣದಲ್ಲಿಂದು ಚಾಮರಾಜನಗರ, ಪಟ್ಟಣ ವ್ಯಾಪ್ತಿಯ ರಸ್ತೆ ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಯ ವಿಶೇಷ ಅನುದಾನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿ ವಿಸ್ತರಣೆ ಹಾಗೂ ಪಟ್ಟಣದ ವಿವಿಧೆಡೆ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳು ಚುರುಕುಗೊಳ್ಳಬೇಕು. ಈಗಾಗಲೇ ಕಾಮಗಾರಿ ಪೂರ್ಣವಾಗಲು ಸಾಕಷ್ಟು ವಿಳಂಬವಾಗಿದೆ. ಜನರು ಮತ್ತು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ ಇನ್ನು ವಿಳಂಬಕ್ಕೆ ಅವಕಾಶವಾಗದಂತೆ ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿ¸ಬೇಕು ಎಂದು ಸಚಿವರು ತಾಕೀತು ಮಾಡಿದರು.
ಚಿಕ್ಕಂಗಡಿ ಬೀದಿ, ರಥದ ಬೀದಿ ಸೇರಿದಂತೆ ಎಲ್ಲಾ ಅಪೂರ್ಣಗೊಂಡಿರುವ gಸ್ತೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಚಾಮರಾಜೇಶ್ವರ ದೇವಾಲಯದ ಸುತ್ತಮುತ್ತಲ ಬಳಿ ಕೈಗೊಂಡಿರುವ ಕೆಲಸವು ಅದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.
ನಗರದ ಬಿ. ರಾಚಯ್ಯ ಜೋಡಿ ರಸ್ತೆ ಕಾಮಗಾರಿಯು ಸಾಕಷ್ಟು ಸಮಯದಿಂದ ನಡೆಯುತ್ತಿದೆ. ಈ ಕಾಮಗಾರಿಯ ವೇಗ ಹೆಚ್ಚಬೇಕು. ಈಗಾಗಲೇ ಒಂದು ಬದಿಯಲ್ಲಿ ರಸ್ತೆ ಕಾಮಗಾರಿ ನಿರ್ವಹಣೆಯಾಗುತ್ತಿದೆ. ಇದನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅಡಚಣೆಯಾಗದಂತೆ ಮತ್ತೊಂದು ಬದಿಯಲ್ಲಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಸಚಿವರು ತಿಳಿಸಿದರು.
ನಗರದ ತರಕಾರಿ ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಾಣ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ನಡೆಸುತ್ತಿರುವವರಿಗೆ ಮಾರಿಗುಡಿ ಬೀದಿ ಸಮೀಪ ಸ್ಥಳವಕಾಶ ಮಾಡಿಕೊಡಬೇಕು. ಮಾರುಕಟ್ಟೆ ಕಾಮಗಾರಿಯನ್ನು ಶೀಘ್ರವೇ ಆgಂಭಿಸಲು ಅಗತ್ಯ ಪ್ರಕ್ರಿಯೆಗೆ ಮುಂದಾಗಬೇಕೆಂದು ಸಚಿವರು ನಿರ್ದೇಶನ ನೀಡಿದರು.
ಘನತ್ಯಾಜ್ಯ ಘಟಕದಲ್ಲಿ ಜಪಾನ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಗೊಬ್ಬರ ತಯಾರಿಸುವ 7.62 ಕೋಟಿ ರೂ. ವೆಚ್ಚದ ಪ್ರಸ್ತಾವ ಘಟಕವು ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ಈ ಸಂಬಂಧ ವಹಿಸಬೇಕಿರುವ ಅಗತ್ಯ ಕೆಲಸಕ್ಕೆ ಅದ್ಯತೆ ನೀಡಿ ಅವಶ್ಯಕ ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು ಸಮಸ್ಯೆಗೆ ಸ್ಪಂದಿಸಬೇಕು. ಯಾವ ಭಾಗದಲ್ಲಿ ಸಮಸ್ಯೆ ಇದೆ ಎಂಬ ಮಾಹಿತಿ ಪಡೆದು ತಕ್ಷಣವೇ ಪರಿಹಾರ ಕ್ರಮಗಳಿಗೆ ಮುಂದಾಗಬೇಕು. ಪಟ್ಟಣ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಸಚಿವರು ನೀಡಿರುವ ಸೂಚನೆಗಳನ್ನು ಚಾಚುತಪ್ಪದೆ ಪಾಲಿಸಬೇಕು. ಕಾಮಗಾರಿ ಪೂರ್ಣಗೊಳಿಸಲು ನೀಡಿರುವ ಗಡುವು ಅವಧಿಯೊಳಗೆ ಕೆಲಸ ಮಾಡಬೇಕು. ಕಾಮಗಾರಿ ಪರಿಶೀಲನೆಗಾಗಿ ವ್ಯಾಪಕವಾಗಿ ಸ್ಥಳಕ್ಕೆ ಭೇಟಿ ನೀಡಲಾಗುವುದು ಎಂದರು.
ನಗರಸಭೆ ಅಧ್ಯಕ್ಷರಾದ ಶೋಭಾ, ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ಸದಸ್ಯರಾದ ಬಂಗಾರು, ಕನಿಷ್ಠ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ ಉಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆ ತರಬೇತಿಗೆ ಅರ್ಜಿ ಆಹ್ವಾನ

ಚಾಮರಾಜನಗರ, ಜೂ. 19 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2018-19ನೆ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ 4 ವರ್ಷ ಅವಧಿಯದಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜೂ. 20ರಂದು  ಯೋಗ ಜಾಗೃತಿ ಜಾಥಾ, ಉಪನ್ಯಾಸ

ಚಾಮರಾಜನಗರ, ಜೂ. 19 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಆಯೋಜಿಸಲÁಗಿದೆ.
ಜಾಥಾವು ನ್ಯಾಯಾಲಯದ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಶಾಲಾ ಮಕ್ಕಳು, ಯೋಗಪಟುಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಳ್ಳುವರು.
ಜಾಥಾ ನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಜಿಲ್ಲಾ ಅಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು