ಕೈಗಾರಿಕಾ ಘಟಕ ಸ್ಥಾಪನೆ ಉದ್ಯಮಿಗಳ ಆಕರ್ಷಣೆಗೆ ಅಗತ್ಯ ಪ್ರಕ್ರಿಯೆ ಕೈಗೊಳ್ಳಿ : ಕೈಗಾರಿಕಾ ಸಚಿವರ ಸೂಚನೆ
ಚಾಮರಾಜನಗರ, ಜು. 23 - ತಾಲೂಕಿನ ಬದನಗುಪ್ಪೆ - ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿಗಳ ಹಂತದಲ್ಲೂ ಅಗತ್ಯ ಪ್ರಕ್ರಿಯೆ ಕೈಗೊಳ್ಳುವಂತೆ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಚಿವರಾದ ಕೆ.ಜೆ. ಜಾರ್ಜ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ ಇತರೆ ಉದ್ಯಮ ಘಟಕಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬದನಗುಪ್ಪೆ - ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗಿದೆ. ಸಧ್ಯಕ್ಕೆ ಉದ್ಯಮಗಳು ಆರಂಭವಾಗಲು ಅಗತ್ಯವಿರುವ ನೀರು, ವಿದ್ಯುತ್ ನೀಡಲು ಸಹ ತಾತ್ಕಾಲಿಕವಾಗಿ ವ್ಯವಸ್ಥೆ ಇದೆ. ಉದ್ಯಮಿಗಳು ಕೈಗಾರಿಕಾ ಘಕಟಗಳನ್ನು ಸ್ಥಾಪಿಸಲು ಮುಂದೆ ಬರುವಂತೆ ಉತ್ತೇಜಿಸಲು ಅಧಿಕಾರಿಗಳು ಕೂಡ ಇಲಾಖಾ ಮಟ್ಟದಲ್ಲಿ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ತಿಳಿಸಿದರು.
ಉದ್ಯಮ ಆರಂಭ ಬಯಸಿ ಬರುವವರಿಗೆ ಕೈಗಾರಿಕಾ ಪ್ರದೇಶದಲ್ಲಿ ಲಭ್ಯವಿರುವ ಸೌಕರ್ಯಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಉದ್ಯಮ ಸ್ಥಾಪನೆಗೆ ಪರಿಸರ ಇಲಾಖೆ ಇತರೆ ಅಗತ್ಯ ಅನುಮತಿ ಪ್ರಕ್ರಿಯೆಯನ್ನು ಕೈಗೊಂಡ ಕೂಡಲೇ ಕ್ರಮ ವಹಿಸಬೇಕು. ಸ್ಥಳೀಯ ಹಂತದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಬೇಕು.
ಉನ್ನತಮಟ್ಟದಲ್ಲಿ ಪರಿಹಾರ ಸಾಧ್ಯವಾಗಲಿದೆ ಎಂಬುದು ಕಂಡುಬಂದರೆ ಕೂಡಲೇ ಗಮನಕ್ಕೆ ತರಬೇಕು. ಸರ್ಕಾರದ ಮಟ್ಟದಲ್ಲಿ ಸೂಕ್ತ ನೀತಿ ರೂಪಿಸಿ ನಿಯಮಾನುಸಾರ ಉದ್ಯಮದಾರರಿಗೆ ಕೈಗಾರಿಕಾ ಘಟಕ ಆರಂಭಿಸಲು ನೆರವು ನೀಡಲಾಗುತ್ತದೆ ಎಂದರು.
ಕಬಿನಿ ನದಿಯಿಂದ ಕೈಗಾರಿಕಾ ಪ್ರದೇಶಕ್ಕೆ ಶಾಶ್ವತವಾಗಿ ನೀರು ಒದಗಿಸುವ ಯೋಜನೆ ಕಾರ್ಯವನ್ನು ಪರಿಶೀಲಿಸಲಾಗಿದೆ. ನಂಜನಗೂಡು ಬಳಿ ಜಾಕ್ ವೆಲ್ ನಿರ್ಮಾಣಕ್ಕೆ ಬೇಕಾದ ಭೂಮಿ ಮಾಲೀಕರಿಗೆ ಪರಿಹಾರ ನೀಡಲು ಮುಂದಿನ ಮಂಡಳಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದುಹೋಗಲಿರುವ ಪೈಪ್ ಲೈನ್ ಕಾಮಗಾರಿಗೂ ಪರಿಹಾರ ಸೂಚಿಸಲಾಗಿದೆ. ವಿಳಂಬ ಮಾಡದೆ ನೀರು ಹಾಗು ವಿದ್ಯುತ್‍ನ್ನು ಶಾಶ್ವತವಾಗಿ ಪೂರೈಸುವ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದು ಸಚಿವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಗ್ರಾನೈಟ್ ಉದ್ಯಮವು ಪ್ರಮುಖವಾಗಿದೆ. ಹೀಗಾಗಿ ಗ್ರಾನೈಟ್ ಸಂಬಂಧಿತ ಕೈಗಾರಿಕಾ ಘಟಕಗಳನ್ನು ದೊಡ್ಡ ಪ್ರಮಾಣದಲ್ಲಿ ಆರಂಭಿಸಲು ಅವಕಾಶವಿದೆ. ಜತೆಗೆ ಫುಡ್ ಪಾರ್ಕ್ ಸ್ಥಾಪನೆಯಿಂದಲೂ ಹೆಚ್ಚಿನ ಉದ್ಯವಿಗಳನ್ನು ಆಕರ್ಷಿಸಬಹುದು. ಅಲ್ಲದೆ ಅರಿಶಿನ ಬೆಳೆಯೂ ಸಹ ಜಿಲ್ಲೆಯಲ್ಲಿ ಪ್ರಮುಖವಾಗಿ ಇರುವುದರಿಂದ ಸಂಸ್ಕರಣೆಯಂತಹ ಘಟಕಗಳನ್ನು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಕೈಗಾರಿಕಾ ಪ್ರದೇಶದಲ್ಲಿಯೇ ಸ್ಥಾಪಿಸಬಹುದು. ಈ ಎಲ್ಲ ಅವಶ್ಯಕತೆಗಳಿಗೆ ಪೂರಕವಾಗಿ ಸ್ಥಳೀಯವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತ್ಯೇಕ ಸಭೆ ನಡೆಸಬೇಕು. ಕೈಗಾರಿಕಾ ಘಟಕಗಳಿಗೆ ಯಾವ ಬಗೆಯ ಸೌಕರ್ಯಗಳು ನೆರವು ಬೇಕಿದೆ ಎಂಬುದನ್ನು ಗಮನಕ್ಕೆ ತಂದಲ್ಲಿ ಉನ್ನತ ಹಂತದಲ್ಲಿ ಮಂಜೂರಾತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಆರಂಭದಲ್ಲಿ ಒಂದಷ್ಟು ಕೈಗಾರಿಕೆ ಉದ್ಯಮಿಗಳನ್ನು ಆರಂಭಿಸಿ ಪೂರಕ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕಾರ್ಯ ನಡೆದರೆ ಇನ್ನಷ್ಟು ಉದ್ಯಮಿಗಳು ಕೈಗಾರಿಕಾ ಘಟಕಗಳ ಸ್ಥಾಪನೆಗೆ ಮುಂದೆ ಬರಲಿದ್ದಾರೆ. ಹೀಗಾಗಿ ಪ್ರತಿ ಇಲಾಖೆಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು. ಕೈಗಾರಿಕಾ ಪ್ರದೇಶ ಸದುಪಯೋಗವಾಗಬೇಕು. ಇದರಿಂದ ಉದ್ಯೋಗ ಅವಕಾಶಗಳು ಹೆಚ್ಚಲಿವೆ. ಜಿಲ್ಲೆಯ ಅಭಿವೃದ್ಧಿಯೂ ಸಹಾಯಕವಾಗಲಿದೆ. ಒಟ್ಟಾರೆ ಕೈಗಾರಿಕಾ ಪ್ರದೇಶ ಪ್ರಗತಿಗೆ ತಾವು ಸಂಪೂರ್ಣ ಬದ್ಧರಾಗಿದ್ದು ಎಲ್ಲಾ ಹಂತದಲ್ಲೂ ನೆರವು ನೀಡಲು ಸಿದ್ಧರಿದ್ದೇವೆ ಎಂದು ಕೈಗಾರಿಕಾ ಸಚಿವರು ನುಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕೈಗಾರಿಕಾ ಪ್ರದೇಶದಲ್ಲಿ ತಾತ್ಕಾಲಿಕವಾಗಿ ವಿದ್ಯುತ್, ನೀರು ಪೂರೈಸಲು ಯಾವುದೇ ತೊಂದರೆಯಿಲ್ಲ. ಶಾಶ್ವತವಾಗಿ ಯೋಜನೆಗಳು ಪೂರ್ಣವಾಗಬೇಕಿದೆ. ಉದ್ಯೋಗ ಅವಕಾಶ ಹಾಗೂ ಅಭಿವೃದ್ಧಿಯ ನಿರೀಕ್ಷೆಯಿಂದ ಆರಂಭಿಸಲಾದ ಕೈಗಾರಿಕಾ ಪ್ರದೇಶಕ್ಕೆ ಎಲ್ಲ ಬಗೆಯ ಮೂಲ ಸೌಕರ್ಯಗಳು ಲಭಿಸಿ ಕೈಗಾರಿಕಾ ಘಟಕಗಳು ಪ್ರಾರಂಭವಾಗಬೇಕಿದೆ ಎಂದರು.
ಶಾಸಕರಾದ ಆರ್. ನರೇಂದ್ರ, ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ನಗರಸಭೆ ಅಧ್ಯಕ್ಷರಾದ ಶೋಭ ಪುಟ್ಟಸ್ವಾಮಿ, ಕೈಗಾರಿಕೆ ಮತ್ತು ವಾಣಿಜ್ಯ ಸಂಘದ ರಾಜ್ಯ ಅಧ್ಯಕ್ಷರಾದ ಶಿವಕುಮಾರ್, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯರಾಮ್, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾದ ಎಂ.ಎನ್. ಮರುಳೇಶ್, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸಭೆಗೂ ಮೊದಲು ಸಚಿವರು ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ, ನಂಜನಗೂಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಕಬಿನಿ ನದಿಯಿಂದ ನೀರು ಪೂರೈಸುವ ಜಾಕ್ ವೆಲ್ ಪ್ರದೇಶಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಉದ್ಯಮಿಗಳೊಂದಿಗೂ ಸಭೆ ನಡೆಸಿದ ಸಚಿವರು ಕೈಗಾರಿಕಾ ಬೆಳವಣಿಗೆ ಸಂಬಂಧ ವಿಸ್ತøತವಾಗಿ ಸಮಾಲೋಚಿಸಿದರು. ಕೈಗಾರಿಕಾ ಉದ್ಯಮಗಳ ಕುರಿತು ಅಹವಾಲುಗಳನ್ನು ಆಲಿಸಿ ಅಗತ್ಯ ಪರಿಹಾರಕ್ಕೆ ಮುಂದಾಗುವುದಾಗಿ ತಿಳಿಸಿದರು.
ಜು. 27ರಂದು ನಗರದಲ್ಲಿ ಹಡÀಪದ ಅಪ್ಪಣ್ಣ ಜಯಂತಿ ಆಚರಣೆ
ಚಾಮರಾಜನಗರ, ಜು. 23 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ನಗರತದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಾಸಕರಾದ ಆರ್. ನರೇಂದ್ರ, ಸಿ,ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗÀರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ.ಎನ್.ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಗರದ ಪ್ರಗತಿಪರ ಚಿಂತಕರಾದ ಅರಕಲವಾಡಿ ನಾಗೇಂದ್ರ ಅವರು ಮುಖ್ಯ ಭಾಷಣ ಮಾಡುವರು. ಗುಂಡ್ಲುಪೇಟೆಯ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರಿಂದ ವಚನಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜು. 28ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಕುಂದುಕೊರತೆ ಸಭೆ
ಚಾಮರಾಜನಗರ, ಜು. 23 - ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಕುಂದುಕೊರತೆ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಮಾಸಿಕ ಸಭೆಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.ಪ್ರತಿ ತಿಂಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಜನಾಂಗದವರ ಕುಂದುಕೊರತೆ ಸಭೆ ಆಯೋಜಿಸಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇಲಾಖೆ ಮಟ್ಟದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳ ಮಾಸಿಕ ಸಭೆಯನ್ನು ಆಯೋಜಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಜನತೆ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನರ ಕ್ಷೇತ್ರ ಸೇವಾ ಸಾಧನೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 23 ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಸಂಸ್ಥೆಗಳಿಗೆ ನೀಡಲಾಗುವ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ನೀಡುವ ಈ ಪ್ರಶಸ್ತಿಗೆ ಪೂರಕ ದಾಖಲೆಗಳೊಂದಿಗೆ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿಗೆ ಆಗಸ್ಟ್ 6ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ವೆಬ್ ಸೈಟ್ ತಿತಿತಿ.ಜisಚಿbiಟiಣಥಿಚಿಜಿಜಿಚಿiಡಿs.gov.iಟಿ ನಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿ ಅಥವಾ ದೂ.ಸಂ. 08226-223688 ಇಲ್ಲವೆ 224688 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 23:- ತಾಲೂಕಿನ ಹರದನಹಳ್ಳಿಯಲ್ಲಿರುವ ಪರಿಶಿಷ್ಟ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಎನ್‍ಎಂ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸ್ವವಿವರವುಳ್ಳ ಅರ್ಜಿ ಸಲ್ಲಿಸಲು ಆಗಸ್ಟ್ 7 ಕಡೆಯ ದಿನವಾಗಿದೆ. ವಿವರಗಳಿಗೆ ವಸತಿ ಶಾಲೆಯ ಪ್ರಾಂಶುಪಾಲರ ಮೊಬೈಲ್ ಸಂಖ್ಯೆ 9448167272 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
x
No comments:
Post a Comment