ಶಿಕ್ಷಣಕ್ಕೆ ಮಹತ್ವ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕರೆ
ಚಾಮರಾಜನಗರ, ಜು. 27 - ಹಿಂದುಳಿದ ವರ್ಗಗಳ ಜನರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮಾಜದಲ್ಲಿ ಏಳಿಗೆಯಾಗಲು ಸಾಧ್ಯವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಜನರು ಶಿಕ್ಷಣಕ್ಕೆ ವಿಶೇಷ ಒತ್ತು ಕೊಡಬೇಕು. ಎಷ್ಟೇ ಕಷ್ಟವಾದರೂ ಸಹಿ ಮಕ್ಕಳ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಬೇಕು. ವಿದ್ಯೆ ಇಲ್ಲದೆ ಹೋದರೆ ಉತ್ತಮ ಅವಕಾಶಗಳು ಇಂದು ಲಭಿಸುವುದಿಲ್ಲ. ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಪಡೆಯಲು ಹಾಗೂ ಆರ್ಥಿಕವಾಗಿ ಮುನ್ನಡೆಯಲು ಶಿಕ್ಷಣ ನೀಡಬೇಕಾದುದು ಇಂದಿನ ಅವಶ್ಯಕತೆಯಾಗಿದೆ ಎಂದು ಸಚಿವರು ತಿಳಿಸಿದರು.
ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ಜನಾಂಗದವರು ಶಿಕ್ಷಣಪಡೆಯಲು ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದೆ. ವಸತಿ ಶಾಲೆ, ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಸೇರಿದಂತೆ ವ್ಯಾಸಂಗಕ್ಕೆ ಪೂರಕವಾಗಿರುವ ಸೌಕರ್ಯಗಳನ್ನು ಕಲ್ಪಿಸುತ್ತಿದೆ. ಈ ಎಲ್ಲ ಅನುಕೂಲತೆಗಳನ್ನು ಸದುಪಯೋಗ ಮಾಡಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಉತ್ತೇಜಿಸಬೇಕೆಂದು ಸಚಿವರು ಸಲಹೆ ಮಾಡಿದರು.
ಹಡಪದ ಅಪ್ಪಣ್ಣನವರು ಬಸವಣ್ಣನವರಂತೆ ಕಾಯಕವೇ ಕೈಲಾಸ ಎಂಬ ತತ್ವವನ್ನು ಪ್ರತಿಪಾದಿಸಿ ತಮ್ಮದೇ ಆದ ವಿಶಿಷ್ಟ ಶ್ರದ್ಧೆಯ ಮೂಲಕ ಪ್ರಮುಖರಾದರು. ಅಪ್ಪಣ್ಣನವರ ವಚನ, ಸಂದೇಶ ಹಾಗೂ ಮೌಲ್ಯ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಜಯಂತಿ ಕಾರ್ಯಕ್ರಮಕ್ಕೂ ಅರ್ಥ ಬರುತ್ತದೆ ಎಂದು ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.
ಸವಿತಾ ಸಮಾಜದ ಜನರಿಗೆ ವಸತಿ, ನಿವೇಶನ, ರುದ್ರಭೂಮಿ ಇತರೆ ಬೇಕಿರುವ ಸೌಲಭ್ಯಗಳಿಗೆ ಪೂರಕವಾಗಿ ಸ್ಪಂದಿಸಲಾಗುತ್ತದೆ. ಗಂಗಾಕಲ್ಯಾಣ ಯೋಜನೆ, ನೇರಸಾಲ, ವಿದ್ಯಾಭ್ಯಾಸಕ್ಕೆ ನೆರವು ಇತರೆ ಅಗತ್ಯ ಸೌಲಭ್ಯಗಳನ್ನು ಸಹ ಪಡೆಯಲು ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಗಮನ ಹರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಅವರು ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಜತೆ ನಿಂತು ಸಮಾಜದ ಉನ್ನತಿಗೆ ವಚನಗಳ ಮೂಲಕ ಮಾರ್ಗದರ್ಶನ ಮಾಡಿದ್ದಾರೆ. ಮೇಲುಕೀಳು ತೊರೆದು ಪ್ರತಿಯೊಬ್ಬರೂ ಸಮಾಜದಲ್ಲಿ ತಲೆಎತ್ತಿ ನಿಲ್ಲಬೇಕು ಎಂಬ ವೈಶಾಲ್ಯ ಭಾವನೆ ಹೊಂದಿದ್ದರು ಎಂದರು.
ಮುಖ್ಯ ಉಪನ್ಯಾಸ ನೀಡಿದ ಪ್ರಗತಿಪರ ಚಿಂತಕರಾದ ಅರಕಲವಾಡಿ ನಾಗೇಂದ್ರ ಅವರು 12ನೇ ಶತಮಾನದಲ್ಲಿ ಬಸವಣ್ಣನವರನ್ನು ಅನುಸರಿಸಿ 1 ಲಕ್ಷ 96 ಸಾವಿರ ಶರಣರು ಇದ್ದರು. ಈ ಎಲ್ಲರ ಪೈಕಿ ಹಡಪದ ಅಪ್ಪಣ್ಣ ಅವರು ವಿಶೇಷವಾಗಿ ನಿಲ್ಲುತ್ತಾರೆ. ಕಾಯಕ ನಿಷ್ಟೆ, ದಾನದ ಮಹತ್ವ ಕುರಿತು ಅಪಾರವಾಗಿ ಪ್ರತಿಪಾದಿಸಿದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಇದ್ದರು ಎಂದರು.
ಹಡಪದ ಅಪ್ಪಣ್ಣ ಅವರು 200ಕ್ಕೂ ಹೆಚ್ಚು ಮೌಲ್ಯಯುತ ವಚನಗಳನ್ನು ರಚಿಸಿದ್ದಾರೆ. ಇವರ ಪತ್ನಿ ಲಿಂಗಮ್ಮ ಸಹ ಶರಣೆಯಾಗಿದ್ದರು. ಅಪ್ಪಣ್ಣನವರು ಎಂದೂ ಸಹ ಡಾಂಬಿಕತನವಾಗಿ ನಡೆದುಕೊಳ್ಳಲಿಲ್ಲ. ನಡೆನುಡಿಯಲ್ಲಿ ಶ್ರೇಷ್ಟರೆನಿಸಿಕೊಂಡರು. ಪ್ರಸ್ತುತ ಸಂದರ್ಭಗಳಿಗೂ ಮಾರ್ಗದರ್ಶನ ಮಾಡುವ ಸಂದೇಶಗಳು ಅಪ್ಪಣ್ಣನವರ ವಚನಗಳಲ್ಲಿ ಇವೆ ಎಂದು ನಾಗೇಂದ್ರ ಅವರು ತಿಳಿಸಿದರು.
ಸವಿತಾ ಸಮಾಜದ ಜನರು ಇಂದು ಸಂಕಷ್ಟದಲ್ಲಿದ್ದಾರೆ. ವಸತಿ, ನಿವೇಶನ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸಾಲಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಮುನ್ನಡೆಯಲು ಪ್ರತ್ಯೇಕವಾಗಿ ನಿಗಮ ಸ್ಥಾಪನೆ ಮಾಡಬೇಕಾದ ಬೇಡಿಕೆಯನ್ನು ಇಟ್ಟಿದ್ದಾರೆ. ಈ ಎಲ್ಲ ಈಡೇರಿದರೆ ಸವಿತಾ ಸಮಾಜದ ಜನರ ಬದುಕೂ ಸಹ ಹಸನಾಗಲಿದೆ ಎಂದು ನಾಗೇಂದ್ರ ಅವರು ಗಮನ ಸೆಳೆದರು.
ನಗರಸಭೆ ಅಧ್ಯಕ್ಷರಾದ ಶೋಭ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕರಿ ಧರ್ಮೇಂದ್ರ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಸಮಾಜದ ಮುಖಂಡರಾದ ಮುದ್ದುಮಾದು, ನಂಜದೇವರು, ಚಿನ್ನಸ್ವಾಮಿ, ಮಂಜುನಾಥ್, ಮಂಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜು. 28ರಂದು ನಗರದಲ್ಲಿ ಮಾದಕ ಔಷಧü ವಿಪತ್ತು ನಿರ್ಮೂಲನೆ ಕುರಿತು ಕಾನೂನು ಕಾರ್ಯಾಗಾರ
ಚಾಮರಾಜನಗರ, ಜು. 27 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ವೈದ್ಯಕೀಯ ವಿಜ್ಞಾನ ಸಂಸ್ಥೆ, ಪದವಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಔಷಧಿಗಳ ದುರುಪಯೋಗ, ಮಾದಕ ಔಷಧ ದುರ್ಬಳಕೆ, ಮತ್ತು ವಿಪತ್ತಿನ ನಿರ್ಮೂಲನೆ ಕುರಿತು ಕಾನೂನು ಕಾರ್ಯಗಾರ ಏರ್ಪಡಿಸಲಾಗಿದೆ.ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅಧ್ಯಕ್ಷತೆ ವಹಿಸುವರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಜೆ. ವಿಶಾಲಾಕ್ಷಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಚ್. ಪ್ರಸಾದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ಯಾಮಲ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಜಯಶೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಎ. ರಮೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲ ನ್ಯಾಯಮಂಡಳಿ ಸದಸ್ಯರಾದ ಟಿ.ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಾಗಾರದಲ್ಲಿ ಬೆಳಿಗ್ಗೆ 11.30 ಗಂಟೆಗೆ ಮೊದಲ ಅಧಿವೇಶನದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಅವರು ಮಾದಕ ವಸ್ತುಗಳ ಬಳಕೆ ಮತ್ತು ಅಪರಾಧ ಕುರಿತು ವಿಷಯ ಮಂಡನೆ ಮಾಡುವರು. ಮಧ್ಯಾಹ್ನ 12.30 ಗಂಟೆಗೆ 2ನೇ ಅಧಿವೇಶನದಲ್ಲಿ ಹಿರಿಯ ವಕೀಲರಾದ ಪುಟ್ಟರಾಜು ಅವರು ಮಾದಕ ವಸ್ತುಗಳ ನಿರ್ಮೂಲನೆಯಲ್ಲಿ ಯುವಜನಾಂಗದ ಪಾತ್ರ ಹಾಗೂ ವಕೀಲರಾದ ಸಿ.ವಿ. ರಾಘವೇಂದ್ರಗುರು ಅವರು ಮಾದಕ ವಸ್ತು ದುರ್ಬಳಕೆಗೆ ಬಲಿಯಾದವರಿಗೆ ಕಾನೂನು ಸೇವೆಗಳು ಮತ್ತು ಮಾದಕ ಔಷÀಧಿ ವಿಪತ್ತಿನ ನಿರ್ಮೂಲನೆ ಕುರಿತು ಮಾತನಾಡುವರು. ಮಧ್ಯಾಹ್ನ 3 ಗಂಟೆಗೆ 3ನೇ ಅಧಿವೇಶನದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವೈದ್ಯರಾದ ಡಾ. ಸುಷ್ಮಾ ಅವರು ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳು ಮತ್ತು ಮಾನಸಿಕ ಆರೋಗ್ಯ ವಿಷಯ ಕುರಿತು ಮಾತನಾಡುವರು ಎಂದು ಪ್ರಕಟಣೆ ತಿಳಿಸಿದೆ.
ಜು. 28ರಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಿಗೆ ಪೌರಸನ್ಮಾನ
ಚಾಮರಾಜನಗರ, ಜು. 27 - ಚಾಮರಾಜನಗರ ನಗರಸಭೆ ವತಿಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಪೌರಸನ್ಮಾನ ಕಾರ್ಯಕ್ರಮವನ್ನು ಜುಲೈ 28ರಂದು ಬೆಳಿಗ್ಗೆ 9.30 ಗಂಟೆಗೆ ನಗರಸಭಾ ಕಚೇರಿ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಶೋಭ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೌರಾಯುಕ್ತರಾದ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜು. 29ರಂದು ಅಂತರಾಷ್ಟ್ರೀಯ ಹುಲಿ ದಿನಾಚರಣೆ : ವಿಶೇಷ ಅಂಚೆಲಕೋಟೆ ಬಿಡುಗಡೆ ಸಮಾರಂಭ
ಚಾಮರಾಜನಗರ, ಜು. 27 - ನವದೆಹಲಿಯ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ರಾಜ್ಯ ಅರಣ್ಯ ಇಲಾಖೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಹಾಗೂ ವಿಶೇಷ ಅಂಚೆ ಲಕೋಟೆ ಬಿಡುಗಡೆ ಸಮಾರಂಭವನ್ನು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕ್ಯಾಂಪಸ್‍ನಲ್ಲಿ ಜುಲೈ 29ರಂದು ಬೆಳಿಗ್ಗೆ 11.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ವಿಶೇಷ ಅಂಚೆಲಕೋಟೆ ಬಿಡುಗಡೆ ಮಾಡುವರು. ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಯೋಗೇಶ್, ಗುಂಡ್ಲುಪೇಟೆ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕೆ.ಎ. ಜಗದೀಶಮೂರ್ತಿ, ಉಪಾಧ್ಯಕ್ಷರಾದ ರೂಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಸದಸ್ಯರಾದ ಮಹದೇವಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ. ಲಿಂಗರಾಜು, ಉಪಾಧ್ಯಕ್ಷರಾದ ಭ್ರಮರಾಂಭ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಿ. ಜಯರಾಂ, ಕರ್ನಾಟಕ ವಲಯದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಾಲ್ರ್ಸ್ ಲೋಬೋ, ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರಕುಮಾರ್, ಅಂಚೆ ಕಚೇರಿಗಳ ಹಿರಿಯ ಅಧೀಕ್ಷಕರಾದ ಸಂದೇಶ್ ಮಹದೇವಪ್ಪ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುಭಾಷ್ ಮಾಲ್ಖೆಡೆ, ಜಗತ್ ರಾಮ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ಪಿ.ಬಿ. ಕರುಣಾಕರ್, ಅಸಿಸ್ಟೆಂಟ್ ಇನ್ಸ್‍ಪೆಕ್ಟರ್ ಜನರಲ್ ಆಫ್ ಫಾರೆಸ್ಟ್‍ನ ರಾಜೇಂದ್ರ ಗಾರವಾಡ, ಗೌರವ ವನ್ಯಜೀವಿ ಪರಿಪಾಲಕರಾದ ಕೆ.ಬಿ. ಚೋಳರಾಜ್, ಶರತ್ ಚಂಪತಿ, ಡಾ. ಸಂಜಯ್, ಡಾ. ಕೃತಿಕ, ಶಿವಸ್ವಾಮಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಜು. 28ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಕುಂದುಕೊರತೆ ಸಭೆ
ಚಾಮರಾಜನಗರ, ಜು. 27 :- ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಕುಂದುಕೊರತೆ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಮಾಸಿಕ ಸಭೆಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರತಿ ತಿಂಗಳು ಪರಿಶಿಷ್ಟ ಜಾತಿ ಪರಿಶಿಷ್ಟ ಜನಾಂಗದವರ ಕುಂದುಕೊರತೆ ಸಭೆ ಆಯೋಜಿಸಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇಲಾಖೆ ಮಟ್ಟದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳ ಮಾಸಿಕ ಸಭೆಯನ್ನು ಆಯೋಜಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಜನತೆ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment