Thursday, 26 July 2018

ಒಂದು ಕೋಟಿ ಮೂವತ್ತೈದು ಸಾವಿರದ ನಾಲ್ಕು ನೂರ ತೊಂಭತ್ತೊಂಭತ್ತು ರೂ ಒಡೆಯ ನಮ್ಮ ಮಾದಪ್ಪ (26-07-2018)

(ರಾಮಸಮುದ್ರ  ಎಸ್.ವೀರಭದ್ರಸ್ವಾಮಿ)
ದಿನಾಂಕ:26-07-2018ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ  ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ,ಕೆ.ಎ.ಎಸ್.(ಹಿ.ಶ್ರೇ)ರವರ ಅಧ್ಯಕ್ಷತೆಯಲ್ಲಿ ಹಾಗೂ  ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಯಿತು. 

ಸದರಿ ಹುಂಡಿಗಳ  ಪರ್ಕಾವಣೆಯಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರುಗಳಾದ ಕೊಪ್ಪಾಳಿ ಮಹದೇವನಾಯ್ಕ, ಡಿ.ದೇವರಾಜು, ಬಿ.ಮಹದೇವಪ್ಪ, ಜವರೇಗೌಡ ಹಾಗೂ  ಪ್ರಾಧಿಕಾರದ  ಉಪ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ್ ಮೂರ್ತಿ ರವರು,  ಎಂ. ಬಸವರಾಜು ಅಧೀಕ್ಷಕರು,   ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ  ಜಿಲ್ಲಾಧಿಕಾರಿಯವರ ಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್  ಮತ್ತು ಮಹದೇಶ್ವರಬೆಟ್ಟ  ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯಯವಸ್ಥಾಪಕರಾದ ಸೆಂದಿಲ್ ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು.ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು
ರೂ.1,00,35,499/-  ( ಒಂದು ಕೋಟಿ ಮೂವತ್ತೈದು ಸಾವಿರದ ನಾಲ್ಕು ನೂರ ತೊಂಭತ್ತೊಂಭತ್ತು  ರೂಗಳು) ಬಂದಿರುತ್ತದೆ. ಇದಲ್ಲದೇ  ಚಿನ್ನದ  ಪದಾರ್ಥಗಳು 36  ಗ್ರಾಂ ( ಮೂವತ್ತಾರು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 680  ( ಆರುನೂರ ಎಂಭತ್ತು ಗ್ರಾಂ ) ದೊರೆತಿರುತ್ತದೆ. 

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು