Friday, 17 August 2018

108 ಆಂಬ್ಯುಲೆನ್ಸ್ ಸಿಬ್ಬಂದಿ ಮಾಡದ್ದನ್ನ HI WAY PATROL & Trafic ಪೊಲೀಸ್ ಸಿಬ್ಬಂದಿ‌ ಮಾಡಿದರು . ಇಷ್ಟಕ್ಕೂ ಏನದು.? ನಮ್ಮ ಕಡೆಯಿಂದ ಧನ್ಯವಾಧ (17-08-25018)

ಮುಖ್ಯಮಂತ್ರಿಗಳೇ, ಇದೇನಾ 108 ನ ಅಮಾನವೀಯತೆ.! 

ಮಾನವೀಯತೆ ಮೆರೆದ ಸಂಚಾರಿ ಮತ್ತು  ಹೈ-ವೇ ಪ್ಯಾಟ್ರೋಲ್ ವಿಭಾಗದ,ಪೋಲೀಸರು

  ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ

 ಚಾಮರಾಜನಗರ: ಅಪಘಾತವಾದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವುದನ್ನು ಬಿಟ್ಟು ಸತ್ತಿದ್ದಾರೋ ಅಥವಾ ಬೇರೆಯವರು ಅವರು ಆಸ್ಪತ್ರೆಗೆ ವರ್ಗಾಯಿಸಿದ್ದಾರೆ ಎಂಬ ಮಾಹಿತಿ ಅರಿತೋ 108 ವ್ಯವಸ್ಥೆ ತಟಸ್ಥವಾದ ಘಟನೆ ಚಾಮರಾಜನಗರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದಿದೆ.


 ಚಾಮರಾಜನಗರ ಹರದನಹಳ್ಳಿ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಸಮಯ 11.15 ವೇಳೆಯಲ್ಲಿ ಅಪಘಾತವಾಗಿದೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರು 108 ಕರೆ ಮಾಡಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಬರುವ ವೇಳೇಗಾಗಲೇ ನಮ್ಮ ಚಾಮರಾಜನಗರದ ಹೈವೆ.,ಪ್ಯಾಟ್ರಾಲ್ ಪೊಲೀಸರೆ ಅವರೇ ಕರೆದುಕೊಂಡು ಬಂದು  ಆಸ್ಪತ್ರೆಗೆ ದಾಖಲು ಮಾಡಿ ಮೆರೆದಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಈರೋಡಿನ ಕೋವಿಲ್ ಪಾಲಯಂ ನ ವಿಜಯಮಂಗಲಂ ಮೂಲದ   ಕಾರ್ತಿಕ್ ಮತ್ತು ಸೆಲ್ವಮಣಿಗೆ ಕಾರು ಡಿಕ್ಕಿಯಾದ ಪರಿಣಾಮ ರಸ್ತೆಯಲ್ಲಿ ಸತ್ತಂತೆ ಬಿದ್ದಿದ್ದಾರೆ ಆದರೆ ಅವರು ಸತ್ತಿರಲಿಲ್ಲ..  ಆವೇಳೆಗೆ ಕರೆ ಮಾಢಿದರೂ ಸರಿಯಾಗಿ ಸ್ಪಂದಿಸಲಿಲ್ಲ  ಎಂಬುದು ಸಾರ್ವಜನಿಕರೋರ್ವರ ಆರೋಪವಾಗಿದೆ.
ಅಪಘಾತವಾದಾಗ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಕೆಲಸ ಅವರದ್ದಾಗಿದ್ದು ಅಲ್ಲಿಯ ತನಕ ಯಾವುದೇ ಪ್ರತಿಕ್ರಿಯೆ ಮಾಢದೇ ಇರುವುದರಿಂಧ ಸಂಚಾರಿ ಪೊಲೀಸರು ಅವರೇ ಖುದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾರ್ವಜನಿಕರೋರ್ವರು ಆರೋಪಿಸುವಂತೆ 108 ಬರುತ್ತಿದೆ ಆದರೆ ಸತ್ತಿದ್ದರೆ ಬರೋಲ್ಲ ಎಂದು ತಟಸ್ಥರಾಗಿ ಉಳಿದಿದ್ದಾರೆ ಎಂದು ಹೇಳುತ್ತಿದ್ದು 108 ವಾಹನ ವ್ಯವಸ್ಥೆಯು ನಮಗೆ ತಿಳಿದುಬಂದ ಮಾಹಿತಿ ಪ್ರಕಾರ ಕುದೇರು ವಿಭಾಗದಿಂದ ಬರಬೇಕಿತ್ತು ಎಂದು ಬೆಂಗಳೂರು 108 ಮೂಲ ತಿಳಿಸಿದೆ.
ಸಂಚಾರ ಪೋಲೀಸರಲ್ಲಿ ಒಬ್ಬರಾದ ಶಿವಕುಮಾರ್ ಎಂಬುವವರು ಈ ಬಗ್ಗೆ 108 ಗೆ ಕರೆ ಮಾಡಿ ಲೋಪೆವಾಗಿದಿಯೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಿ ಅಷ್ಟೆ ಅಲ್ಲ ಜಿಪಿಎಸ್ ಅಳವಡಿಸಿರುವುದರಿಂದ ನಿಮಗೆ ವಾಸ್ತವ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿ ವಿಚಾರದಲ್ಲಿ ಸ್ಪಷ್ಟನೆ ಕೇಳಲಾಗಿ, ವಿಚಾರ ಮಾಡಿ ಮಾಹಿತಿ ನೀಡುತ್ತೇವೆ ಎಂದು ಬೆಂಗಳೂರಿನ 108 ವ್ಯವಸ್ಥೆಯ ಮಹಿಳಾ ಸುಪರ್‍ವೈಷರ್ ಒಬ್ಬರು ತಿಳಿಸಿದ್ದರೂ ಯಾವುದೇ ಮಾಹಿತಿಯನ್ನೆ ನೀಡದೇ ಸುಮ್ಮನಾಗಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಅವರೇ ಆಗಿದ್ದರೆ ಸತ್ತವರನ್ನು ಕರೆದುಕೊಂಡು ಬರಲು 108 ವ್ಯವಸ್ಥೆ ಇಲ್ಲ ಅಂದರೆ ಇದೇಂಥಾ ಅಮಾನವೀಯತೆ ನೀವೆ ನೋಡಿ ಸ್ವಾಮಿ..ಜಿಡ್ಡುಗಟ್ಟಿರುವ ಜಿವಿಕೆ 108 ಗೆ ತುರ್ತು ಚಿಕಿತ್ಸೆ ನೀವೇ ನೀಡಬೇಕಾಗಿದೆ.


Thursday, 16 August 2018

ನದಿ ಪಾತ್ರದ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಪರಿಶೀಲನೆ (16-08-2018)

ನದಿ ಪಾತ್ರದ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಪರಿಶೀಲನೆ


ಚಾಮರಾಜನಗರ, ಆ. 16 - ಕೊಳ್ಳೇಗಾಲ ತಾಲೂಕಿನ ಕಾವೇರಿ ನದಿ ಪ್ರವಾಹ ಪೀಡಿತ ವಿವಿಧ ಗ್ರಾಮಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.


 ಕಾವೇರಿ ನದಿ ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹ ಸ್ಥಿತಿಗೆ ಸಿಲುಕಿರುವ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಬೆಳಿಗ್ಗೆಯಿಂದಲೇ ವ್ಯಾಪಕವಾಗಿ ಭೇಟಿ ಕೊಟ್ಟು ಅಲ್ಲಿ ಉಂಟಾಗಿರುವ ಬೆಳೆ ಹಾನಿ, ಜಲಾವೃತ ಮನೆಗಳು ಇನ್ನಿತರ ಪರಿಸ್ಥಿತಿಯನ್ನು ಸಚಿವರು ಖುದ್ದು ವೀಕ್ಷಿಸಿದರು.

ಮೊದಲಿಗೆ ದಾಸನಪುರ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು ಜಲಾವೃತಗೊಂಡಿರುವ ಬೆಳೆ, ರಸ್ತೆಯಲ್ಲಿ ಹರಿದಾಡುತ್ತಿರುವ ನೀರು ಇತರೆ ತೊಂದರೆಗಳನ್ನು ಪರಿಶೀಲಿಸಿದರು. ಜನರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಬೆಳೆ ನಷ್ಟವನ್ನು ಅಧಿಕಾರಿಗಳು ಅಂದಾಜು ಮಾಡಲಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದ ಆಗಿರುವ ನಷ್ಟವನ್ನು ಲೆಕ್ಕ ಹಾಕಲಾಗುತ್ತದೆ. ಅಗತ್ಯ ಪರಿಹಾರವನ್ನು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಬಳಿಕ ಹಳೇ ಹಂಪಾಪುರ ಗ್ರಾಮಕ್ಕೆ ಬೇಟಿ ಕೊಟ್ಟರು. ಅಲ್ಲಿಯೂ ಜಲಾವೃತಗೊಂಡಿರುವ ಜಮೀನು, ಕೊಟ್ಟಿಗೆ ಸೇರಿದಂತೆ ಇತರೆ ಸ್ಥಳಗಳನ್ನು ವೀಕ್ಷಿಸಿದರು. ಗ್ರಾಮದಂಚಿನ ನಿವಾಸಿಗಳು ನೀರು ತುಂಬಿ ಆಗಿರುವ ಅನಾಹುತಗಳ ಬಗ್ಗೆ ಅಳಲು ತೋಡಿಕೊಂಡರು. ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದರೆ ಮತ್ತಷ್ಟು ಮುಳುಗಡೆಯಾಗುವ ಸಾಧ್ಯತೆ ಉಂಟಾಗಬಹುದೆಂಬ ಅತಂಕ ವ್ಯಕ್ತಪಡಿಸಿದರು.
ಇದೇ ವೇಳೆ ಸ್ಥಳದಲ್ಲಿಯೆ ಇದ್ದ ಅಧಿಕಾರಿಗಳಿಗೆ ಮುಂದೆ ಹೆಚ್ಚಿನ ನೀರು ಆವೃತವಾದರೆ ಉಂಟಾಗಬಹುದಾದ ಪರಿಸ್ಥಿತಿ, ಪರಿಹಾರಕ್ಕೆ ಎಲ್ಲ ಅಗತ್ಯ ಸಿದ್ದತೆಗಳನ್ನು ಕಲ್ಪಿಸಲು ಸಜ್ಜಾಗಿರುವಂತೆ ಸಚಿವರು ನಿರ್ದೇಶನ ನೀಡಿದರು.
ಗ್ರಾಮದಲ್ಲಿ ಇರುವ ಶಾಲೆಯಲ್ಲಿ ಗಂಜೀ ಕೇಂದ್ರ ತೆರೆಯಲು ಆದೇಶಿಸಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಹ ಸ್ಪಂದಿಸಿ ಅಧಿಕಾರಿಗಳಿಗೆ ಗಂಜೀಕೇಂದ್ರ ಆರಂಭಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಸೂಚಿಸಿದರು.
ಬಳಿಕ ಮುಳ್ಳೂರು ಗ್ರಾಮಕ್ಕೆ ತೆರಳಿದ ಸಚಿವರು ಅಲ್ಲಿಯೂ ಗ್ರಾಮದ ಕೊನೆಯ ಭಾಗದಲ್ಲಿ ನೀರು ತುಂಬಿಕೊಂಡು ಉಂಟಾಗಿರುವ ತೊಂದರೆ ಪರಿಸ್ಥಿತಿಯನ್ನು ವೀಕ್ಷಿಸಿದರು. ಅಲ್ಲಿಯೂ ಸಹ ಊರಿನ ಗ್ರಾಮಸ್ಥರು ಪರಿಹಾರ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು.
ತದನಂತರ ಹಳೇ ಆಣಗಳ್ಳಿ, ಹರಳೆ ಗ್ರಾಮಗಳಿಗೂ ಸಚಿವರು ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹೆಚ್ಚಿನ ನೀರು ಬಂದು ಮತ್ತಷ್ಟು ಪರಿಸ್ಥಿತಿ ಬಿಗಡಾಯಿಸುವ ಹಂತಕ್ಕೆ ಹೋಗದಂತೆ ಎಲ್ಲಿ ಜನರನ್ನು ಸ್ಥಳಾಂತರ ಮಾಡುವ ಅವಶ್ಯಕತೆ ಇದೆಯೋ ಅಂತಹ ಕೆಲಸವನ್ನು ಆದ್ಯತೆ ಮೇರೆಗೆ ಮಾಡಬೇಕು. ಕೊಳ್ಳೇಗಾಲ ಪಟ್ಟಣದಲ್ಲಿ ಪ್ರವಾಹ ಸಂತ್ರಸ್ಥರಿಗೆ ವಾಸ್ತವ್ಯ, ಊಟ, ಉಪಾಹಾರ ಸೇರಿದಂತೆ ಎಲ್ಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಉಸ್ತುವಾರಿ ಸಚಿವರು ಸೂಚಿಸಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸಹ ಗ್ರಾಮಗಳ ಜನರೊಂದಿಗೆ ಮಾತನಾಡಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಿದ್ದೇವೆ. ಎಲ್ಲಾ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲಿದ್ದೇವೆ ಎಂದು ಧೈರ್ಯ ತುಂಬಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ, ತಹಶೀಲ್ದಾರ್ ಚಂದ್ರಮೌಳಿ, ಪ್ರವಾಹ ಪರಿಸ್ಥಿತಿ ಗ್ರಾಮಗಳ ಉಸ್ತುವಾರಿಗಾಗಿ ನೇಮಕವಾಗಿರುವ ನೋಡೆಲ್ ಅಧಿಕಾರಗಳಾದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಲ್. ಗಂಗಾಧರ್, ರೇಷ್ಮೇ ಇಲಾಖೆ ಸಹಾಯಕ ನಿರ್ದೇಶಕರಾದ ರಾಚಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗೇಶ್, ಎನ್.ಆರ್.ಇ.ಜಿ ಸಹಾಯಕ ನಿರ್ದೇಶಕ ಲಿಂಗರಾಜು, ನಗರಸಭೆ ಆಯುಕ್ತರಾದ ಸುರೇಶ್ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

ಕಬಿನಿ, ಕೆ.ಆರ್.ಎಸ್‍ನಿಂದ ಮತ್ತಷ್ಟು ನೀರು ಬಿಡುಗಡೆ: ಮುಂಜಾಗರೂಕತೆ ವಹಿಸಲು ಜಿಲ್ಲಾಧಿಕಾರಿ ಮನವಿ 

ಚಾಮರಾಜನಗರ, ಆ. 16 – ಕಬಿನಿ ಜಲಾಶಯ ಹಾಗೂ ಕೆ.ಆರ್.ಎಸ್. ಅಣೆಕಟ್ಟೆಯಿಂದ ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುತ್ತಿರುವ ಸಾಧ್ಯತೆ ಹಿನ್ನಲೆಯಲ್ಲಿ ಕೊಳ್ಳೆಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಮುಂಜಾಗರೂಕತೆ ವಹಿಸಬೇಕು ಮತ್ತು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಇಂದು ತಿಳಿಸಿದ್ದಾರೆ.
ಕಬಿನಿ ಜಲಾಶಯದಿಂದ 75 ಸಾವಿರ ಕ್ಯೂಸೆಕ್ಸ್, ಕೆ.ಆರ್.ಎಸ್. ಅಣೆಕಟ್ಟೆಯಿಂದ 1 ಲಕ್ಷದ 25 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂಬ ಮಾಹಿತಿ ಸೀಕರಿಸಲಾಗಿದೆ. ಮಳೆಯು ಸಹ ಹೆಚ್ಚಾಗುತ್ತಿರುವುದರಿಂದ ಕೆ.ಆರ್.ಎಸ್. ಅಣೆಕಟ್ಟೆಯಿಂದ ಮತ್ತಷ್ಟು ಹೆಚ್ಚಿನ ನೀರನ್ನು ಬಿಡುವ ಸಾಧ್ಯತೆ ಇರುವುದಾಗಿ ಮಾಹಿತಿ ತಿಳಿದು ಬಂದಿದೆ. ಈಗಾಗಲೇ ನದಿಗೆ ಬಿಡುಗಡೆಗೊಳಿಸಿರುವ ನೀರಿನಿಂದ ದಾಸನಪುರ, ಮುಳ್ಳುರು, ಹಳೇ ಹಂಪಾಪುರ, ಹಳೇ ಅಣಗಳ್ಳಿ ಗ್ರಾಮಗಳು ನೀರಿನಿಂದ ಅವೃತವಾಗಿದ್ದು, ಗಂಜೀಕೇಂದ್ರ ತೆರೆಯಲು ಕ್ರಮ ವಹಿಸಲಾಗುತ್ತಿದೆ.
ಪ್ರಸ್ತುತ ನದಿಗೆ ಜಲಾಶಯಗಳಿಂದ ಹೆಚ್ಚಿನ ನೀರನ್ನು ಹೊರಬಿಡುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಮತ್ತು ನದಿದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಆಸ್ತಿ-ಪಾಸ್ತಿ, ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನದಿಗಳಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ಜಾನುವಾರು ತೊಳೆಯುವುದು, ಈಜು ಇನ್ನಿತರ ಚಟುವಟಿಕೆಗಳನ್ನು ಮಾಡಬಾರದು. ನದಿ, ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ನದಿಗೆ ಇಳಿಯಬಾರದು. ಪ್ರವಾಹದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗರೂಕತೆ ವಹಿಸಲು ನಿಯೋಜಿತರಾಗಿರುವ ಆಗಮಿಸುವ ಅಧಿಕಾರಿ, ಸಿಬ್ಬಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ 

ಚಾಮರಾಜನಗರ, ಆ. 16 – ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 19ರಂದು ನಿಗದಿ ಮಾಡಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಪ್ರವಾಹದ ಕಾರಣದಿಂದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅನಾನುಕೂಲ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಆ. 16 – 2018-19ನೇ ಸಾಲಿನ ಪರಿಷ್ಕರಿಸಿರುವ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಯಲ್ಲಿ ಮಾರ್ಗಸೂಚಿ ಬೆಲೆ ಕುರಿತು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸಂಬಮಧಪಟ್ಟ ಉಪ ನೊಂದಣಾ ಕಚೇರಿಗೆ 15 ದಿನದೊಳಗಾಗಿ ಸಲ್ಲಿಸುವಂತೆ ಜಿಲ್ಲಾ ನೊಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಶುಭಾಗ್ಯ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 16– ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಪ್ರಸಕ್ತ ಸಾಲಿನ ಪಶುಭಾಗ್ಯ ಯೋಜನೆಯಡಿ ಮಹಿಳೆಯರಿಗಾಗಿ (ಅಮೃತ ಯೋಜನೆ) ಕರು ಸಾಕಾಣಿಕೆ, ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ ಘಟಕಗಳ ಯೋಜನೆಗೆ ನೀಡುವ ನೆರವಿಗೆ ಅರ್ಜಿ ಆಹ್ವಾನಿಸಿದೆ.
ಬಡತನ ರೇಖೆಗಿಂತ ಕೆಳಗಿರುವ ಭೂರಹಿತ ಕೃಷಿ ಕಾರ್ಮಿಕ ಮಹಿಳೆಯರು, ಅಲ್ಪಸಂಖ್ಯಾತರು, ವಿಕಲಚೇತನರು, ವಿಧವೆಯರು, ದೇವದಾಸಿಯರು, ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿಯನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10ರೊಳಗರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಪಶು ಆಸ್ಪತ್ರೆ ಕಚೇರಿಗೆಖುದ್ದಾಗಿ ಅಥವಾ ಚಾಮರಾಜನಗರ ದೂರವಾಣಿ ಸಂಖ್ಯೆ: 08226-222757, ಗುಂಡ್ಲುಪೇಟೆ 08229-222346, ಕೊಳ್ಳೇಗಾಲ 08224-252215, ಯಳಂದೂರು 08226-240128 ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರಾದ ಡಾ. ಎಂ.ಸಿ. ಪದ್ಮನಾಭ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನಗರಸಭೆ ಚುನಾವಣೆ: 39 ನಾಮಪತ್ರ ಸಲ್ಲಿಕೆ

ಚಾಮರಾಜನಗರ, ಆ. 16- ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆಗೆ ಇಂದು ಒಟ್ಟು 39 ನಾಮಪತ್ರ ಸಲ್ಲಿಕೆಯಾಗಿದೆ.
ಚಾಮರಾಜನಗರ ನಗರಸಭೆ ಚುನಾವಣೆಗೆ 24 ಹಾಗೂ ಕೊಳ್ಳೇಗಾಲ ನಗರಸಭೆಗೆ ಚುನಾವಣೆಗೆ 15 ನಾಮಪತ್ರಗಳು ಇಂದು ಸಲ್ಲಿಕೆಯಾಗಿವೆ ಎಂದು ಪ್ರಕಟಣೆ ತಿಳಿಸಿದೆ.

 


ನಗರದ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ (26-07-2018)


ಮತೀಯ ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ
ಚಾಮರಾಜನಗರ, ಜೂ. 2- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಜನಾಂಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಜನಾಂಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಗೆ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 30 ವರ್ಷ ಮೀರಿರಬಾರದು. ಬಾರ್ ಕೌನ್ಸಿನ್‍ನಲ್ಲಿ ಹೆಸರು ನೊಂದಾಯಿಸಿರಬೇಕು. 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪಡೆದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷ ಮೀರಿರಬಾರದು. ತರಬೇತಿ 4 ವರ್ಷಗಳ ಅವಧಿಯದ್ದಾಗಿದ್ದು ಮಾಹೆಯಾನ 4 ಸಾವಿರ ರೂ. ತರಬೇತಿ ಭತ್ಯೆ ನೀಡಲಾಗುವುದು.
ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತಹಸೀಲ್ದಾರ್ ಅವರಿಂದ ಪಡೆದ ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಕಾನೂನು ಪದವಿ ಅಂಕಪಟ್ಟಿಗಳು, ಪದವಿ ಪತ್ರ, ಬಾರ್ ಕೌನ್ಸಿಲ್ ನೋಂದಣಿ ಪತ್ರ ದೃಢೀಕೃತ ಪ್ರತಿ, 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜುಲೈ 20ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಸಹಾಯಧನಕ್ಕಾಗಿ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 23- ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಕೈಮಗ್ಗ ವೃತ್ತಿಯಲ್ಲಿ ತೊಡಗಿರುವ ನೇಕಾರರಿಗೆ ಕೈಮಗ್ಗ, ಕಚ್ಚಾ ನೂಲು ಖರೀದಿ, ತಂತ್ರಜ್ಞಾನ ಉನ್ನತೀಕರಣಗಳಿಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ರಾಷ್ಟ್ರೀಯ ಬ್ಯಾಂಕುಗಳಿಂದ ಸಾಲ ಪಡೆಯಲು ಇಚ್ಚಿಸುವ ಕೈಮಗ್ಗ ನೇಕಾರರು ಅರ್ಜಿಯನ್ನು ಸದಸ್ಯತ್ವ ಹೊಂದಿರುವ ಸಹಕಾರ ಸಂಘಗಳ ಶಿಫಾರಸ್ಸಿನೊಂದಿಗೆ ಹತ್ತಿರದ ರಾಷ್ಟ್ರೀಕೃತ ಬ್ಯಾಂಕುಗಳಿಂದ ಪಡೆದು ಭರ್ತಿ ಮಾಡಿ ಬ್ಯಾಂಕುಗಳಿಗೆ ಸಲ್ಲಿಸಬೇಕು. ಅಸಂಘಟಿತ ವಲಯದ ಸದಸ್ಯರು ಅರ್ಜಿಗಳನ್ನು ರಾಷ್ಟ್ರೀಕೃತ ಬ್ಯಾಂಕಿನಿಂದ ಅರ್ಜಿ ಪಡೆದು ಭರ್ತಿ ಮಾಡಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಜೂನ್ 30ರೊಳಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ನೇಕಾರರ ಗುರುತಿನ ಚೀಟಿ, ಆರೋಗ್ಯ ವಿಮಾ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಕಾರ್ಡ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ವಾಸಸ್ಥಳದ ಬ್ಯಾಂಕಿನಿಂದ ಪಡೆದ ನಿರಾಕ್ಷೇಪಣಾ ಪತ್ರ (ಎನ್‍ಓಸಿ)ಗಳನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-222883 ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 25ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 23 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತೆರಕಣಾಂಬಿ, ಬೇಗೂರು, ಹಂಗಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 25ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಹೋಬಳಿಯ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ತೆರಕಣಾಂಬಿ ವ್ಯಾಪ್ತಿಯ ಬೊಮ್ಮನಹಳ್ಳಿ, ಕುಂದಗೆರೆ, ಕಟ್ನವಾಡಿ, ದೇಪಾಪುರ, ಎನ್‍ಜೆವೈ, ಗೋವಿಂದನಗರ, ಕಗ್ಗಳ, ಕೆಲಸಿಪುರ, ಲಕ್ಕೂರು, ಫ್ಯಾಕ್ಟರಿ, ವಾಟರ್ ಸಪ್ಲೈ ಪ್ರದೇಶಗಳು. ಬೇಗೂರು ವ್ಯಾಪ್ತಿಯ ಹಿರೀಕಾಟಿ, ನಿಟ್ರೆ, ಬೇಗೂರು ವಾಟರ್ ಸಪ್ಲೈ, ಹೆಗ್ಗಡಹಳ್ಳಿ, ಮಂಚಳ್ಳಿ, ಎನ್‍ಜೆವೈ, ಶೆಟ್ಟಹಳ್ಳಿ, ದೇಸಿಪುರ, ಇಂಡಸ್ಟ್ರಿಯಲ್, ಹೊರೆಯಾಲ, ಹÀಂಗಳ ವ್ಯಾಪ್ತಿಯ ಹಂಗಳ, ಶಿವಪುರ, ಕಾಳಿಗೋರನಹಳ್ಳಿ, ಎನ್ ಜೆ ವೈ ಎಲಟ್ಟಿಪ್ಪೆ, ಗೊಪಾಲ್‍ಪುರ, ಎನ್‍ಜೆವೈ, ದೇವರಹಳ್ಳಿ, ಹೊನ್ನೇಗೌಡನಹಳ್ಳಿ, ಮಲ್ಲಯ್ಯನಪುರದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 24ರಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 23  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜೂನ್ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9.45 ಗಂಟೆಗೆ ಸಂತೆಮರಹಳ್ಳಿಗೆ ಆಗಮಿಸುವರು. 10 ಗಂಟೆಗೆ ಸಂತೆಮರಹಳ್ಳಿಯ ಎಪಿಎಂಸಿ ಆವರಣದಲ್ಲಿ ಕೃಷಿ ಮಾರುಕಟ್ಟೆ ಸಮಿತಿ ವತಿಯಿಂದ ಏರ್ಪಡಿಸಿರುವ ವ್ಯಾಪಾರ ಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
11.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. 11.45ಕ್ಕೆ ಚಾಮರಾಜನಗರದಲ್ಲಿ ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಸಂತೆಮರಹಳ್ಳಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರು.
ಜೂ. 24ರಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 23 - ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜೂನ್ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ ಚಾಮರಾಜನಗರದಲ್ಲಿ ನಡೆಯಲಿರುವ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ  ಉಪ್ಪಿನಮೋಳೆಗೆ ತೆರಳುವರು.

ಸಿಜಿಎಲ್ ಪರೀಕ್ಷೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ
ಚಾಮರಾಜನಗರ, ಜೂ. 23:- ಸ್ಟಾಫ್ ಸೆಲೆಕ್ಷನ್ ಕಮೀಷನ್ ಆಯೋಗದೊಂದಿಗೆ ನಡೆಸಲಾಗುವ ಸಂಯೋಜಿತ ಪದವಿ ಮಟ್ಟದ (ಸಿಜಿಎಲ್) ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಾಗುವುದು.
ತರಬೇತಿಯನ್ನು ಸ್ಟಡಿ ಸರ್ಕಲ್ ಕಾರ್ಯಕ್ರಮದಲ್ಲಿ ಜುಲೈ 1 ರಿಂದ 15ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ (ದೂ.ಸಂ.08226-224430) ನೀಡಲಾಗುವುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಸ್ವವಿವರದೊಂದಿಗೆ ಹೆಸರು ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ,ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬುಡಕಟ್ಟು ಸಮುದಾಯದ ಕ್ರೀಟಾಪಟುಗಳ ಮಾಹಿತಿ ಸಂಗ್ರಹಣೆ

ಚಾಮರಾಜನಗರ, ಜೂ. 23 - ನವದೆಹಲಿಯ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯವು ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ಕ್ರೀಡಾಪಟುಗಳನ್ನು ಅವರು ಆಸಕ್ತಿ ಹೊಂದಿರುವ ಕ್ರೀಡೆಗಳಲ್ಲಿ ಪ್ರೋತ್ಸಾಹಿಸÀಲು ಉದ್ದೇಶಿಸಿದೆ.
ಒಳಾಂಗಣ, ಹೊರಾಂಗಣ ಕ್ರೀಡೆಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಕ್ರೀಡಾಪಟುಗಳನ್ನು ಗುರುತಿಸಿ ಅವರ ಪ್ರತಿಭೆಯನ್ನು ಸಾಕಾರಗೊಳಿಸಲಾಗುವುದು.
ಬುಡಕಟ್ಟು ಸಮುದಾಯದ ಯುವ ಕ್ರೀಡಾಪಟುಗಳಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ತರಬೇತಿ ನೀಡಲಾಗುವುದು. ಅರ್ಹತೆ ಹೊಂದಿರುವ ರಾಜ್ಯದ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ಆಸಕ್ತ ಕ್ರೀಡಾಪಟುಗಳು ನಿರ್ದೇಶಕರು, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, 1540, ಅನಿಕೇತನ ರಸ್ತೆ, ಕುವೆಂಪುನಗರ, ಮೈಸೂರು - 570023, ದೂ.ಸಂಖ್ಯೆ 2560274, 2560275, ಇ ಮೇಲ್ ಣಡಿimಥಿsoಡಿe@gmಚಿiಟ.ಛಿom  ವಿಳಾಸಕ್ಕೆ ಸ್ವವಿವರವುಳ್ಳ ಮಾಹಿತಿಯನ್ನು ನೀಡುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕÉೂೀರಿದ್ದಾರೆ.
ಪ್ರವಾಸಿ ಟ್ಯಾಕ್ಸಿ ಖರೀದಿಗಾಗಿ ಸಹಾಯಧನ : ಫಲಾನುಭವಿಗಳ ಆಯ್ಕೆ ಪಟ್ಟಿ ಪ್ರಕಟ
ಚಾಮರಾಜನಗರ, ಜೂ. 25  ಪ್ರವಾಸೋದ್ಯಮ ಇಲಾಖೆವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಗಾಗಿ ಸಹಾಯಧನಕ್ಕಾಗಿ ಆಯ್ಕೆಯಾಗಿರುವ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜುಲೈ 4ರಂದು ಪರಿಶಿಷ್ಟಜಾತಿ, ವರ್ಗ, ಸಫಾಯಿ ಕರ್ಮಚಾರಿಗಳ ಹಿರತಕ್ಷಣಾ ಹಾಗೂ ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ, ಜೂ. 25  ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಜುಲೈ 4ರಂದು ಬೆಳಿಗ್ಗೆ 10 ಗಂಟೆÉಗೆ ಪರಿಶಿಷ್ಟ ಜಾತಿ ಮತ್ತು ವರ್ಗದವರ ಹಿತರಕ್ಷಣಾ ಸಮಿತಿ ಸಭೆ ಹಾಗೂ 11 ಗಂಟೆಗೆ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಸಫಾಯಿ ಕರ್ಮಚಾರಿಗಳ ಉಸ್ತುವಾರಿ ಸಮಿತಿ ಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ.
ಉಪವಿಭಾಗಮಟ್ಟದ ಪರಿಶಿಷ್ಟ ಜಾತಿ ಹಾಗೂ ವರ್ಗದವರು, ಸಫಾಯಿ ಕರ್ಮಚಾರಿಗಳು ಮತ್ತು ಸಂಘಸಂಸ್ಥೆಯ ಪ್ರತಿನಿಧಿಗಳು ತಮ್ಮ ಕುಂದುಕೊರತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲು ಇಚ್ಚಿಸಿದಲ್ಲಿ ಸಹಾಯಕ ನಿರ್ದೇಶಕರು(ಗ್ರೇಡ್-1), ತಾಲೂಕು ಸಮಾಜ ಕಲ್ಯಾಣ ಇಲಾಖೆ, ಹಾಗೂ ಸದಸ್ಯ ಕಾರ್ಯದರ್ಶಿ, ಪರಿಶಿಷ್ಟ ಜಾತಿ, ವರ್ಗದವರ ಹಿತರಕ್ಷಣಾ ಸಮಿತಿ ಕೊಳ್ಳೇಗಾಲ ಉಪವಿಭಾU ಇವರಿಗೆ ಲಿಖಿತವಾಗಿ ಜುಲೈ 2ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಜೂನ್ 29, 30 ಹಾಗೂ ಜುಲೈ 1ರಂದು ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನ
ಚಾಮರಾಜನಗರ, ಜೂ. 25  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನ ಕಾರ್ಯಕ್ರಮವನ್ನು ಜೂನ್ 29, 30 ಮತ್ತು ಜುಲೈ 1 ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಕುರಿತು ಗೋಷ್ಠಿಗಳನ್ನು ಏರ್ಪಡಿಸಲಾಗಿದ್ದು, ರಾಜ್ಯದ ಹೆಸರಾಂತ ವಿಜ್ಞಾನಿಗಳು, ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನಿಗದಿತ ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಲು ಮಾತ್ರ ಅವಕಾಶವಿದೆ.
ಅಸಕ್ತರು ನೊಂದಣಿ ನಮೂನೆಗಳಿಗಾಗಿ ಸ್ಥಳೀಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸದಸ್ಯರು ಅಥವಾ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಕೇಂದ್ರಕಚೇರಿ ದೂರವಾಣಿ ಸಂಖ್ಯೆ 080-26718939, ಮೊ. 9008442557 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

      ನಗರದ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಜೂ. 26:- ಚಾಮರಾಜನಗರ ಪಟ್ಟಣದ ವಿವಿಧೆಡೆ ಪ್ರಗತಿಯಲ್ಲಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಇಂದು ವ್ಯಾಪಕ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಮೊದಲು ನಗರದ ಗಾಳೀಪುರ ಬಡಾವಣೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಯವರು ನಾಗರಿಕರಿಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ದೊಡ್ಡಅಂಗಡಿ ಬೀದಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ರಸ್ತೆ ಬಳಿ ನಡೆಯುತ್ತಿರುವ ಕಾಮಗಾರಿ ಹಾಗೂ ಅನ್ವರ್‍ಪಾಷ ಕಲ್ಯಾಣ ಮಂಟಪದ ರಸ್ತೆಗೆ ಭೇಟಿ ನೀಡಿ ಅಲ್ಲಿ ನಿರ್ವಹಿಸಲಾಗುತ್ತಿರುವ ರಸ್ತೆ ಮತ್ತು ಚರಂಡಿ ಕೆಲಸವನ್ನು ವಿಕ್ಷೀಸಿ ಯಾವುದೇ ವಿಳಂಬ ಮಾಡದೇ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಅದಾದ ನಂತರ ಪ್ರಗತಿಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಬಳಿ ರಸ್ತೆ, ಪಿಕಾರ್ಡ್ ಅಸ್ಪತ್ರೆ ರಸ್ತೆ ಹಾಗೂ ಕಲಾಮಂದಿರದ ಮುಂಭಾಗದ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರಿಗೆ ಕೆಲ ಸ್ಥಳೀಯರು ತಮ್ಮ ಅಹವಾಲುಗಳನ್ನು ಮುಂದಿಟ್ಟರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು ರಸ್ತೆ ಅಗಲೀಕರಣದಿಂದ ಸ್ಥಳೀಯರು ಹಾಗೂ ಬಡಾವಣೆಯ ನಿವಾಸಿಗಳಿಗೂ ಅನುಕೂಲವಾಗಲಿದೆ. ಹಾಗಾಗಿ ಪಟ್ಟಣ ಅಭಿವೃದ್ಧಿ ಉದ್ದೇಶದಿಂದ ರಸ್ತೆ ಹಾಗೂ ಉತ್ತಮ ಚರಂಡಿ ಕಾಮಗಾರಿಗೆ ಸಹಕರಿಸಬೇಕೆಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಟ್ಟರು.
ನಗರದ ಜಿಲ್ಲಾಸ್ಪತ್ರೆ ಬಳಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಆಸ್ಪತ್ರೆಗೆ ದಿನನಿತ್ಯ ಸಾಕಷ್ಟು ರೋಗಿಗಳು, ಸಾರ್ವಜನಿಕರು ಭೇಟಿ ನೀಡುತ್ತಾರೆ. ಈ ಸ್ಥಳದಲ್ಲಿ ಯಾವುದೇ ಅನಾನುಕೂಲವಾಗದಂತೆ ಕಾಮಗಾರಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ತದನಂತರ ಬಿ. ರಾಚಯ್ಯ ಜೋಡಿರಸ್ತೆಯಲ್ಲಿ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಸಹ ನಾಗರಿಕರಿಗೆ ಅನುಕೂಲವಾಗುವಂತೆ ಅದಷ್ಟು ಬೇಗನೆ ನಿರ್ವಹಿಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಯವರು ಕಾಮಗಾರಿಯಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ಗುಣಮಟ್ಟದ ಕಾಮಗಾರಿ ನಡೆಯಬೇಕು. ಅಧಿಕಾರಿಗಳು ಸ್ಥಳದಲ್ಲಿ ಖುದ್ದು ಹಾಜರಿದ್ದು, ಕಾಮಗಾರಿ ಸುಗಮವಾಗಿ ಸಾಗುವಂತೆ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು.
ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತ್ಯಮೂರ್ತಿ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಜೂನಿಯರ್ ಎಂಜಿನಿಯರ್ ಶ್ರೀನಿವಾಸ್, ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್, ಒಳಚರಂಡಿ (ಯು.ಜಿ.ಡಿ)ಕಾಮಗಾರಿ ಎಂಜಿನಿಯರ್ ರಮೇಶ್, ಹಾಗೂ ಇತರರು ಇದೇ ಸಂದರ್ಭದಲ್ಲಿ ಹಾಜರಿದ್ದರು. 
ಜೂ. 27ರಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 26 - ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜೂನ್ 27ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. 11 ಗಂಟೆಗೆ ಕೊಳ್ಳೇಗಾಲದ ಎಸ್.ವಿ.ಕೆ ಶಾಲೆ ಅವರಣದಲ್ಲಿ ಏರ್ಪಡಿಸಲಾಗಿರುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಮುಳ್ಳೂರಿನಲ್ಲಿ ನಡೆಯಲಿರುವ ದಾಸ್ತಾನು ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 3 ಗಂಟೆಗೆ ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       

ಜೂ. 29ರಂದು ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ
ಚಾಮರಾಜನಗರ, ಜೂ. 26 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡ ಜಂಯತಿ ಕಾರ್ಯಕ್ರಮವನ್ನು ಜೂನ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ತಾ.ಪಂ. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಾಹಿತಿ ಬನ್ನೂರು ಕೆ. ರಾಜು ಅವರು ಅವರು ನಾಡಪ್ರಭು ಕೆಂಪೇಗೌಡ ಅವರು ಕುರಿತು ವಿಶೇಷ ಉಪನ್ಯಾಸ ನೀಡುವರು. ನಗರದ ಎಂ. ನಟರಾಜು ಮತ್ತು ತಂಡದವರಿಂದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜೂ. 27ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 26 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಹಾಗೂ ಬೊಮ್ಮಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 27ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಕಬ್ಬಳ್ಳಿ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯ ಕಬ್ಬಳ್ಳಿ, ಸೋಮಳ್ಳಿ, ಅಕ್ಕಲಪುರ ಮತ್ತು ಸೋಮಳ್ಳಿ ಎನ್.ಜೆ.ವೈ ಕೇಂದ್ರ ಮತ್ತು ಬೊಮ್ಮಲಾಪುರ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯ ಬೊಮ್ಮಲಾಪುರ, ಬೆಳವಾಡಿ, ಬಾಚಳ್ಳಿ, ದಾರಿಬೇಗೂರು, ಕೊಡಸೋಗೆ ಮತ್ತು ಹೆಗ್ಗವಾಡಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 27ರಂದು ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ
ಚಾಮರಾಜನಗರ, ಜೂ. 26 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸೋಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ ಜೂನ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ವಿನಯ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ರಮೇಶ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ. ರಾಜೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್, ಜಿಲ್ಲಾ ಸರ್ಜನ್ ಡಾ. ರಘುರಾಮ್, ಭಾರತೀಯ ರೆಡ್ ಕ್ರಾಸ್ ಸೋಸೈಟಿ  ಕಾರ್ಯದರ್ಶಿ ಡಾ. ಮಹೇಶ್, ಪ್ರಧಾನ ಕಾರ್ಯದರ್ಶಿಗಳಾದ ಅರುಣ್‍ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.








ನದಿಗೆ ಹೆಚ್ಚು ನೀರು : ಜನರ ನೆರವಿಗೆ ಸಹಾಯವಾಣಿ- ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿ.ಸಿ.ಮನವಿ (16-07-2018)

ನದಿಗೆ ಹೆಚ್ಚು ನೀರು : ಜನರ ನೆರವಿಗೆ ಸಹಾಯವಾಣಿ- ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿ.ಸಿ.ಮನವಿ 

ಚಾಮರಾಜನಗರ, ಜು. 16 :- ಕಬಿನಿ ಜಲಾಶಯ ಹಾಗೂ ಕೆ.ಆರ್.ಎಸ್ ಅಣೆಕಟ್ಟೆಯಿಂದ ಹೆಚ್ಚಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಹಾಗೂ ನದಿ ದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮನವಿ ಮಾಡಿದ್ದಾರೆ.

ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಜಲಾಶಯಗಳು ಭರ್ತಿಯಾಗಿವೆ. ಕಬಿನಿ ಜಲಾಶಯದಿಂದ 40ಸಾವಿರ ಕ್ಯೂಸೆಕ್ಸ್ ಹಾಗೂ ಕೆ.ಆರ್.ಎಸ್.ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ಸೇರಿದಂತೆ 1,10,000ಕ್ಯೂಸೆಕ್ಸ್ ನೀರನ್ನು ನದಿಗೆ ಬಿಟ್ಟಿರುವುದಾಗಿ ತಿಳಿದು ಬಂದಿದ್ದು ನದಿಯಲ್ಲಿ ಹೆಚ್ಚಿನ ಪ್ರವಾಹ ಬರುವ ಸಂಭವವಿದೆ.

ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಎಡಕುರಿಯ, ಸತ್ತೇಗಾಲ ಗ್ರಾಮಗಳಲ್ಲಿ ಹಾಗೂ ನದಿಯ ತಗ್ಗು ಪ್ರದೇಶ ಹಾಗೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು ಅವರ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಜನರ ನೆರವಿಗಾಗಿ ಸಹಾಯವಾಣಿ ತೆರೆಯಲಾಗಿದೆ. ಯಾವುದೇ ನೆರವು ಅವಶ್ಯವಿದ್ದಲ್ಲಿ ತಹಸೀಲ್ದಾರ್ ಕೊಳ್ಳೇಗಾಲ ತಾಲ್ಲೂಕು ಮೊ.9448625194, ಅಗ್ನಿ ಶಾಮಕ ಅಧಿಕಾರಿ ಚಾಮರಾಜನಗರ ಮೊ.9964263822, ತಾಲ್ಲೂಕು ಕಂಟ್ರೋಲ್ ರೂಮ್ ದೂ.ಸಂ.08224-252046 ಮತ್ತು 252042, ಜಿಲ್ಲಾ ಕಂಟ್ರೋಲ್ ರೂಮ್ ದೂ.ಸಂ.08226-223160, ರಾಜಸ್ವ ನಿರೀಕ್ಷಕರು, ಕಸಬಾ, ಕೊಳ್ಳೇಗಾಲ ಮೊ.9741489698, ಗ್ರಾಮಲೆಕ್ಕಾಧಿಕಾರಿ ಮೊ.9731200229 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು. 19ರಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ - ಸಸಿ ನೆಡುವ ಕಾರ್ಯಕ್ರಮ
ಚಾಮರಾಜನಗರ, ಜು. 18 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲÁ ವಕೀಲರ ಸಂಘ, ಓಡಿಪಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ 19ರಂದು ಬೆಳಿಗ್ಗೆ 10 ಗಂಟೆಗೆ ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ - ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಓಡಿಪಿ ಸಂಸ್ಥೆ ನಿರ್ದೇಶಕರಾದ ವಂ.ಸ್ವಾಮಿ. ಸ್ನಾನಿ ಡಿ ಅಲ್ಮೇಡಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮಲತಾ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರೆತನ್ ಕುಮÁರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಂ. ರವಿ, ಗಾಳಿಪುರ ನಗರಸಭೆ ಸದಸ್ಯರಾದ ಮಹೇಶ್, ಓಡಿಪಿ ಸಂಸ್ಥೆಯ ಮಹಿಳೋದಯ ಮಹಿಳಾ ಒಕ್ಕೂಟದ ಸಂಯೋಜಕರಾದ ಸುನೀತಾ, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜಿ. ಸುರೇಶ್, ಕಾಗಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ, ಸದಸ್ಯರಾದ ಜ್ಯೋತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 18 :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2018-19ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ನೀಡುವ ಸಾಲಸೌಲಭ್ಯಕ್ಕೆ ಮತೀಯ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಿದೆ.
ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರು ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ಯೋಜನೆ, ಶ್ರಮಶಕ್ತಿ, ಮೈಕ್ರೋಸಾಲ, ಅರಿವು ಸಾಲ (ವಿದ್ಯಾಭ್ಯಾಸಕ್ಕೆ), ಗಂಗಾಕಲ್ಯಾಣ ಯೋಜನೆ, ಪಶುಸಂಗೋಪನೆ, ಕೃಷಿ ಯಂತ್ರೋಪಕರಣ ಕೊಳ್ಳಲು ಅಲ್ಪಸಂಖ್ಯಾತರ ಕಲ್ಯಾಣ ಯೋಜನೆ, ಆಟೋಮೊಬೈಲ್ ಸರ್ವೀಸ್, ರೇಷ್ಮೆ ಚಟುವಟಿಕೆ ತರಬೇತಿ ಮತ್ತು ಸಾಲ ಯೋಜನೆ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ, ಕೃಷಿ ಭೂಮಿ ಖರೀದಿ, ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂತಿರುಗಿರುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಮನೆ ಮಳಿಗೆ, ಗೃಹ ನಿವೇಶನ ಖರೀದಿ ಮತ್ತು ಮನೆ ನಿರ್ಮಾಣಕ್ಕೆ ಪಡೆದ ಸಾಲದ ಮೇಲಿನ ಬಡ್ಡಿ ಸಹಾಯಧನ (ಕ್ರಿಶ್ಚಿಯನ್ ಸಮುದಾಯದವರಿಗೆ ಮಾತ್ರ) ಯೋಜನೆಯಡಿ  ಆರ್ಥಿಕ ನೆರವು ನೀಡಲಾಗುತ್ತದೆ.
ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಾಗಿದ್ದಲ್ಲಿ 81 ಸಾವಿರ, ನಗರ ಪ್ರದೇಶದವರಾಗಿದ್ದಲ್ಲಿ 1 ಲಕ್ಷದ 3 ಸಾವಿರ ರೂ. ಮೀರಿರಬಾರದು. ಅರಿವು ಯೋಜನೆಗೆ ಈ ಮಿತಿ ಅನ್ವಯವಾಗುವುದಿಲ್ಲ.
ಅರ್ಜಿದಾರರು ವಿಳಾಸ ದೃಢೀಕರಣಕ್ಕಾಗಿ ಆಧಾರ್ ಪ್ರತಿ ಸಲ್ಲಿಸಬೇಕು ಮತ್ತು ಬ್ಯಾಂಕ್ ಉಳಿತಾಯ ಖಾತೆಗೆ ಹೊಂದಾಣಿಕೆ ಮಾಡಬೇಕು. ನಿಗಮದ ಸೌಲಭ್ಯವನ್ನು ಈ ಹಿಂದೆ ಪಡೆದವರು ಮತ್ತೆ ಸಾಲಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
ವಿವಿಧ ಯೋಜನೆಗಳಡಿ ಸಾಲ ಬಯಸಿ ಭರ್ತಿ ಮಾಡಿದ ಅರ್ಜಿಗಳನ್ನು ವೆಬ್ ಪೇಜ್‍ನಲ್ಲಿ ಞmಜಛಿ.ಞಚಿಡಿ.ಟಿiಛಿ.iಟಿ/ಟoಚಿಟಿ/ಟogiಟಿ.ಚಿsಠಿx ಮತ್ತು ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ ಅರ್ಜಿಗಳನ್ನು ವೆಬ್ ಪೇಜ್‍ನಲ್ಲಿ ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ. 08226-222332 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜಿಲ್ಲಾ ವಿಶೇಷ ಕ್ರೀಡಾಕೂಟಗಳ ವೇಳಾಪಟ್ಟಿ ಪ್ರಕಟ
ಚಾಮರಾಜನಗರ, ಜು. 18 - ಸಾರ್ವಜನಿಕ ಶಿಕ್ಷಣ ಇಲಾಖೆಯು 14 ರಿಂದ 17ರ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ನೇರ ಜಿಲ್ಲಾಮಟ್ಟದ ವಿಶೇಷ ಕ್ರೀಡೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯಲ್ಲಿ ಜುಲೈ 23ರಂದು ಬ್ಯಾಸ್ಕೆಟ್ ಬಾಲ್, 24ರಂದು ಹ್ಯಾಂಡ್ ಬಾಲ್, ಆಗಸ್ಟ್ 1ರಂದು 16 ವರ್ಷದ ಬಾಲಕರಿಗೆ ಕ್ರಿಕೆಟ್ ಕ್ರೀಡೆ ನಡೆಸಲಿದೆ. ಜುಲೈ 25ರಂದು ಯಳಂದೂರಿನ ಎಸ್‍ಡಿವಿಎಸ್ ಶಾಲೆಯಲ್ಲಿ ಯೋಗ, ಕೊಳ್ಳೇಗಾಲದ ಎಸ್‍ವಿಕೆ ಶಾಲೆಯಲ್ಲಿ ಜುಲೈ 26ರಂದು ಚೆಸ್, 27ರಂದು ಟಿಟಿ, ಜುಲೈ 30ರಂದು ಕೊಳ್ಳೇಗಾಲದ ಆದರ್ಶ ಶಾಲೆಯಲ್ಲಿ ಹಾಕಿ ಸ್ಪರ್ಧೆಗಳು ನಡೆಯಲಿವೆ.
ಜುಲೈ 31ರಂದು ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಫುಟ್ ಬಾಲ್, ಷಟಲ್ ಬ್ಯಾಡ್ಮಿಂಟನ್, ಆಗಸ್ಟ್ 2ರಂದು ಕೊಳ್ಳೇಗಾಲದ ಕೆಯುಸಿ ಶಾಲೆಯಲ್ಲಿ ಲಾನ್ ಟೆನಿಸ್, ಆಗಸ್ಟ್ 7ರಂದು ಕೊಳ್ಳೇಗಾಲದ ಲಯನ್ಸ್ ಶಾಲೆಯಲ್ಲಿ ಕರಾಟೆ ಕ್ರೀಡೆ ನಡೆಯಲಿದೆ.
ಜುಲೈ 20ರೊಳಗೆ ಶಾಲಾ ಹೋಬಳಿ ಮಟ್ಟದ ಕ್ರೀಡಾಕೂಟ, ಆಗಸ್ಟ್ 25ರೊಳಗೆ ತಾಲೂಕು ಮಟ್ಟದ ಕ್ರೀಡಾಕೂಟ ಪೂರ್ಣಗೊಳ್ಳಲಿದೆ. ಆಗಸ್ಟ್ 29, 30ರಂದು ಜಿಲ್ಲಾಮಟ್ಟದ ಪಂದ್ಯಾಟ, ಸೆಪ್ಟೆಂಬರ್ 18, 19ರಂದು ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. ದೇವರಾಜ ಅರಸು ನಿಗಮದಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ : ಅರ್ಜಿ ಆಹ್ವಾನ
ಚಾಮರಾಜನಗರ, ಜು. 18 -  ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ: 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1.00 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ.
2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿ. ಮೂಲಕ ಸೀಟು ಪಡೆದು ಡಿಪ್ಲೋಮೊ ಲ್ಯಾಟರಲ್ ಎಂಟ್ರಿ (ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿ.ಜಿ.ಕೋರ್ಸ್‍ಗಳಾದ ಎಂ.ಬಿ.ಎ.,  ಎಂ.ಸಿ.ಎ.,  ಎಂ.ಟೆಕ್.,  ಎಂ.ಇ.,  ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಸಾಲ ಲಭಿಸಲಿದೆ.
ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿಗೆ ಸೇರಿದವರಾಗಿರಬೇಕು.  (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಅದೆ ಉಪಜಾತಿಗಳನ್ನು ಹೊರತುಪಡಿಸಿ). ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷ ರೂ. ಮಿತಿಯಲ್ಲಿ ಇರಬೇಕು.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಬೇಕು. ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನವಾಗಿದೆ. 
ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ   ಕೋರ್ಸ್‍ಗಳನ್ನು ಹೊರತುಪಡಿಸಿದ ಕೋರ್ಸ್‍ಗಳಾದ ಪಿ. ಹೆಚ್.ಡಿ.,  ಬಿ.ಸಿ.ಎ/ಎಂ.ಸಿ.ಎ.,  ಎಂ. ಎಸ್. ಅಗ್ರಿಕಲ್ಚರ್,  ಬಿಎಸ್ಸಿ ನರ್ಸಿಂಗ್,  ಬಿಎಸ್ಸಿ ಪ್ಯಾರಾ ಮೆಡಿಕಲ್,  ಬಿ.ಎಸ್ಸಿ ಬಯೋ ಟೆಕ್ನಾಲಜಿ, ಬಿ.ಟೆಕ್,  ಬಿ.ಪಿ.ಟಿ.,  ಜಿ.ಎನ್.ಎಂ.,  ಬಿ.ಹೆಚ್.ಎಂ.,  ಎಂ.ಡಿ.ಎಸ್,  ಎಂ.ಎಸ್.ಡಬ್ಲ್ಯೂ.,  ಎಲ್. ಎಲ್.ಎಂ.,  ಎಂ.ಎಫ್.ಎ.,  ಎಂ.ಎಸ್ಸಿ ಬಯೋಟೆಕ್ನಾಲಜಿ., ಎಂ.ಎಸ್ಸಿ. ಎಜಿ.,   ಎಂ.ಡಿ.ಎಸ್., ಎಂ.ಎಸ್. ಡಬ್ಲ್ಯೂ.,  ಎಲ್.ಎಲ್.ಎಂ.,  ಎಂ.ಎಫ್.ಎ., ಎಂ.ಎಸ್ಸಿ. ಬಯೋಟೆಕ್ನಾಲಜಿ., ಎಂ.ಎಸ್ಸಿ. ಎಜಿ.ಗೆ 2018-19ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಸರ್ಕಾರಿ/ಅನುದಾನಿತ ಕಾಲೇಜುಗಳಿಗೆ ನೇರ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ  ಜುಲೈ 25ರೊಳಗೆ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಆಗಸ್ಟ್ 4ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಚಾಮರಾಜನಗರ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08226-223587 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ತೋಟಗಾರಿಕೆ ಸೌಲಭ್ಯಗಳಿಗೆ ಸಹಾಯಧನ
ಚಾಮರಾಜನಗರ, ಜು. 18 - ತೋಟಗಾರಿಕೆ ಇಲಾಖೆಯು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ, ಶೀಥಲ ಗೃಹ, ಫ್ರೀಕೂಲಿಂಗ್, ಶೀಥಲ ವಾಹನ, ಹಣ್ಣು ಮಾಗಿಸುವ ಕೇಂದ್ರ, ಮೌಲ್ಯವರ್ಧಿತ ಮತ್ತು ಸಂಸ್ಕರಣಾ ಘಟಕ, ಆಹಾರ ಸಂರಕ್ಷಣೆ ಮತ್ತು ಸಾಮಥ್ರ್ಯ ಅಭಿವೃದ್ಧಿ, ಅರಿಶಿನ ಒಣಗಿಸುವ ಘಟಕ, ಅಣಬೆ ಉತ್ಪಾದನಾ ಘಟಕ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಿದೆ.
ಆಸಕ್ತರು ಅರ್ಜಿ ನಮೂನೆ ಜತೆ ಭಾವಚಿತ್ರ, ಪಹಣಿ, ಮ್ಯೂಟೇಷನ್, ಖಾತೆ, ಚೆಕ್ ಬಂದಿ, ಗ್ರಾಮ ನಕ್ಷೆ, ಬ್ಯಾಂಕ್ ವಿವರ, ಪ್ರಾಜೆಕ್ಟ್ ರಿಪೋರ್ಟ್, ಇನ್ನಿತರ ದಾಖಲೆಗಳೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಪ್ರಸ್ತಾವನೆ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಗುರುಸ್ವಾಮಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಾಮರಾಜನಗರ (ಮೊ. 9663238008, 94811881592), ಬಿ.ಎಂ ಶಿವಲಿಂಗಪ್ಪ, ಗುಂಡ್ಲುಪೇಟೆ - ಮೊ. 9945764867, ಎಚ್. ಶಶಿಧರ್, ಕೊಳ್ಳೇಗಾಲ, ಮೊ. 9844364293, ಕೇಶವ್, ಯಳಂದೂರು - ಮೊ. 9480536610 ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.
ತೋಟಗಾರಿಕೆ ಬೆಳೆಗಾರರು ರೈತರಿಗೆ ನೀರಿನ ಟ್ಯಾಂಕರ್ ಖರೀದಿಗೆ ಸಹಾಯಧನ
ಚಾಮರಾಜನಗರ, ಜು. 18- ತೋಟಗಾರಿಕೆ ಇಲಾಖೆಯು ರೈತರು ಬೆಳೆಗಾರರಿಗೆ ನೀರಿನ ಟ್ಯಾಂಕರ್ ಖರೀದಿಸಿಕೊಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರ ಹೆಸರಿನಲ್ಲಿ ಪಹಣಿ ಇರಬೇಕು. ಸಾಮಾನ್ಯ ವರ್ಗದ ರೈತರಾಗಿದ್ದಲ್ಲಿ ಕನಿಷ್ಟ 1 ಹೆಕ್ಟೇರ್ ಪ್ರದೇಶದಲ್ಲಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ 1 ಎಕರೆ ಪ್ರದೇಶದಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆ ಬೆಳೆಯುತ್ತಿದ್ದು ಕನಿಷ್ಟ 30 ಹೆಚ್‍ಪಿ ಸಾಮಥ್ರ್ಯದ ಟ್ರ್ಯಾಕ್ಟರ್ ಹೊಂದಿರಬೇಕು.
ಅರ್ಜಿಯೊಂದಿಗೆ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಮ್ಯೂಟೇಷನ್, ಚೆಕ್ ಬಂದಿ, ಕಂದಾಯ ಇಲಾಖೆಯಿಂದ ಪಡೆದ ಗಣಕೀಕೃತ ಬೆಳೆ ದೃಢೀಕರಣ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಟ್ರ್ಯಾಕ್ಟರ್ ಆರ್‍ಸಿ ಪುಸ್ತಕ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜು. 24ರಂದು ಕಬ್ಬಹಳ್ಳಿಯಲ್ಲಿ ರಕ್ತದಾನ ಶಿಬಿರ
ಚಾಮರಾಜನಗರ, ಜು. 18- ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಶ್ರೀಮತಿ ಸುಬ್ಬಮ್ಮ ಮತ್ತು ಶ್ರೀ ಸಿರಿಯಪ್ಪನವರ ಸರ್ಕಾರಿ ಸಮುದಾಯ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 24ರಂದು ಬೆಳಿಗ್ಗೆ 10 ಗಂಟೆಗೆ ಕಬ್ಬಹಳ್ಳಿಯ ಶ್ರೀ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಆಸಕ್ತರು ರಕ್ತದಾನ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ವಿವರಗಳಿಗೆ ಪ್ರಾಂಶುಪಾಲರಾದ ಡಾ. ಎನ್.ಎಸ್. ಮಹದೇವಪ್ರಸಾದ್, ಮೊ. 9481320044 ಹಾಗೂ ಎಂ. ಪ್ರಭುಸ್ವಾಮಿ, ಮೊ. 9741522341 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನಗರಸಭೆ ಚುನಾವಣೆ: ಮತದಾರರ ಪಟ್ಟಿ ಪ್ರಕ್ರಿಯೆ ಸಮರ್ಪಕ ನಿರ್ವಹಣೆಗೆ ವೀಕ್ಷಕರ ಸೂಚನೆ
ಚಾಮರಾಜನಗರ, ಜು. 18 :- ಮುಂಬರುವ ದಿನಗಳಲ್ಲಿ ನಡೆಯಲಿರುವ ಜಿಲ್ಲೆಯ ನಗರಸಭಾ ಚುನಾವಣೆ ಹಿನ್ನಲೆಯಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗÀದಂತೆ ನಿಗಾ ವಹಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಕುರಿತ ಚುನಾವಣಾ ವೀಕ್ಷಕರಾದ ಡಾ. ಆರುಂಧತಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆಗೆ ನಡೆಯಲಿರುವ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಮೊದಲಿಗೆ 2018ರ ನಗರಸಭಾ ಚುನಾವಣೆ ಕುರಿತ ಮತದಾರರ ಕರಡು ಪಟ್ಟಿ ತಯಾರಿಕೆ ಸಂಬಂಧ ನಗರಸಭೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಚುನಾವಣಾ ವೀಕ್ಷಕರು ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪಗಳಿಗೆ ಅವಕಾ± ನೀಡಬಾರದು ಎಂದರು.
ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ 2013ರ ಚುನಾವಣೆಯಲ್ಲಿ ತೆರೆಯಲಾಗಿದ್ದ 58 ಮತಗಟ್ಟೆಗಳನ್ನು ಈ ಬಾರಿ ವಾರ್ಡ್‍ಗಳಿಗನುಗುಣವಾಗಿ 61ಕ್ಕೆ ಹೆಚ್ಚಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 9 ಸೂಕ್ಷ್ಮ ಮತ್ತು 6 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಮತದಾರರ ಪಟ್ಟಿ ಕುರಿತು ದಾಖಲಾಗಿರುವ ದೂರು ಹಾಗೂ ಆಕ್ಷೇಪಣೆಗಳನ್ನು ಸಮರ್ಪಕವಾಗಿ ಪರಿಶೀಲಿಸಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ 31 ವಾರ್ಡ್‍ಗಳಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಾಗಿ 45 ಮತಗಟ್ಟೆಗಳನ್ನು ತೆರೆಂiÀiಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವಂತೆ 10 ಸೂಕ್ಷ್ಮ ಹಾಗೂ 20 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಮತದಾರರ ಪಟ್ಟಿ ಸಿದ್ದಪಡಿಸುವಲ್ಲಿ ಬರುವ ಆಕ್ಷೇಪಣೆ, ದೂರುಗಳನ್ನು ಸಂಬಂಧsಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುವುದರೊಂದಿಗೆ ವೈಯಕ್ತಿಕವಾಗಿಯು ಸರಿ ಇದೆಯೆ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಎಂದು ಡಾ. ಆರುಂಧತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಅವರು ಮಾತನಾಡಿ ಇತ್ತೀಚಿಗಷ್ಟೆ ವಿಧಾನಸಭಾ ಚುನಾವಣೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ನಗರಸಭಾ ಚುನಾವಣೆಯನ್ನು ಸಹ ಹಗುರವಾಗಿ ಪರಿಗಣಿಸದೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು. ವೀಕ್ಷಕರು ನೀಡಿರುವ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿನ ಪೂರ್ವಸಿದ್ದತೆಗಳನ್ನು  ಸಂಬಂಧಪಟ್ಟ ತಹಶೀಲ್ದಾರರು ಹಾಗೂ ನಗರಸಭೆ ಆಯುಕ್ತರು ಹೊಂದಾಣಿಕೆಯಿಂದ ಕೈಗೊಳ್ಳಬೇಕು ಎಂದರು.
ಚುನಾವಣಾ ಕೈಪಿಡಿಯಲ್ಲಿರುವ ಅಂಶಗಳನ್ನು ಮನನ ಮಾಡಿಕೊಳ್ಳಬೇಕು. ಮತದಾರರು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಮತಗಟ್ಟೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ಯಾವುದೇ ಆಕ್ಷೇಪಣೆ, ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಮತಗಟ್ಟೆಗಳಲ್ಲಿ ಮತದಾನಕ್ಕೆ ಅನುಕೂಲವಾಗುವ ಸಲುವಾಗಿ ಮತಗಟ್ಟೆಗಳನ್ನು ನೆಲಮಹಡಿಯಲ್ಲಿ ತೆರೆಯಬೇಕು. ಕುಡಿಯುವ ನೀರು, ದೀಪದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪ ವಿಭಾಗಾಧಿಕಾರಿ ಫೌಜಿಯಾ ತರನ್ನುಂ, ತಹಶೀಲ್ದಾರರು ನಗರಸಭೆ ಅಧಿಕಾರಿಗಳು ಇತರರು ಸಭೆಯಲ್ಲಿ ಹಾಜರಿದ್ದರು. 









ಜು. 17ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಚಾಮರಾಜನಗರ, ಜು. 16  ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 17ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ (ಕೊಠಡಿ ಸಂಖ್ಯೆ 103) ಪೂರ್ವಭಾವಿ ಸಭೆ ಕರೆಯಲಾಗಿದೆ.
ಜಿಲ್ಲೆಯ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಕನ್ನಡಪರ ಸಂಘಟನೆಗಳ ಮುಖಂಡರು ಸಭೆಗೆ ಆಗಮಿಸಿ ಸಲಹೆ, ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪÀ್ರಕಟಣೆಯಲ್ಲಿ ಕೋರಿದ್ದಾರೆ.
ಜು. 17ರಂದು ನಗರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಚಾಮರಾಜನಗರ, ಜು. 16 - ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಚಾಮರಾಜೇಶ್ವರ ದೇವಾಲಯದ ಬಳಿ ಜಾಥಾ ಹೊರಡಲಿದೆ. ಬೆಳಿಗ್ಗೆ 10 ಗಂಟೆಗೆ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್.ಮಹೇಶ್ ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮಕೃಷ್ಣ ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಪ್ರಶಸ್ತಿ ಪ್ರಧಾನ ಮಾಡುವರು.
ಶಾಸಕರಾದ ಆರ್.ನರೇಂದ್ರ, ಸಿ.ಎಸ್.ನಿರಂಜನ್ ಕುಮಾರ್, ಮರಿತಿಬ್ಬೆಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್.ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ.ಯೋಗೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎಸ್.ದಯಾನಿಧಿ, ನಗರಸಭೆ ಅಧ್ಯಕ್ಷರಾದ ಶೋಭಾ, ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪಾನ್ಯಾಸಕರಾದ ಎಸ್.ರಾಮಕೃಷ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪಿಎಂಇಜಿಪಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.
ಚಾಮರಾಜನಗರ, ಜು. 16:- ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಕಾರ್ಯಕ್ರಮ (ಪಿಎಂಇಜಿಪಿ) ದಡಿ ಕೈಗಾರಿಕಾ, ಸೇವಾ ಘಟಕಗಳಿಗೆ ಸಾಲ ನೀಡುವ ಸಲುವಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕೈಗಾರಿಕಾ ಘಟಕಗಳಿಗೆ 25 ಲಕ್ಷ ರೂ.ವರೆಗೆ ಹಾಗೂ ಸೇವಾ ಘಟಕಗಳಿಗೆ 10 ಲಕ್ಷ ರೂವರೆಗೆ ಸಾಲ ನೀಡಲಾಗುತ್ತದೆ. ಶೇ.25 ರಿಂದ 35 ರಷ್ಟು ಸಹಾಯಧನ ನೀಡಲಾಗುತ್ತದೆ.
ಯೋಜನೆಯು ಹೊಸ ಉದ್ದಿಮೆದಾರರಿಗೆ ಮಾತ್ರ ಅನ್ವಯಿಸುತ್ತದೆ. ಅರ್ಜಿಯೊಂದಿಗೆ ಭಾವಚಿತ್ರ, ಆಧಾರ್ ಕಾರ್ಡ್, ವಿಳಾಸದ ಪುರಾವೆ, ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ (ಗ್ರಾಮೀಣರಿಗೆ ಮಾತ್ರ) ಯೋಜನಾ ವರದಿ ಪ್ರತಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ವೆಬ್‍ಸೈಟ್ ತಿತಿತಿ.ಞviಛಿ.oಡಿg.iಟಿ/ತಿತಿತಿ.ಠಿmegಠಿ.iಟಿ  ನೋಡಬಹುದು. ಹೆಚ್ಚಿನ ಮಾಹಿತಿಗೆ  ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಗ್ರಾಮೋದ್ಯೋಗ ಮಂಡಳಿ ಕಚೇರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಎಂ.ಎನ್.ಮುರುಳೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜು. 16:- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜುಲೈ 17ಹಾಗೂ 18ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 17ರಂದು ಸಂಜೆ 5.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಬಳಿಕ ಕೊಳ್ಳೇಗಾಲದಲ್ಲೇ ವಾಸ್ತವ್ಯ ಹೂಡುವರು.
ಜುಲೈ 18ರಂದು ಬೆಳಿಗ್ಗೆ 11ಗಂಟೆಗೆ ಕೊಳ್ಳೇಗಾಲ ಪಟ್ಟಣದಲ್ಲಿ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ, ಮಧ್ಯಾಹ್ನ 12.30ಗಂಟೆಗೆ ಕೊಳ್ಳೇಗಾಲ ತಾಲ್ಲೂಕಿನ ಹೊಸ ಹಂಪಾಪುರದಲ್ಲಿ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಮಧ್ಯಾಹ್ನ 3ಗಂಟೆಗೆ ಯಳಂದೂರು ತಾಲ್ಲೂಕಿನ ಹೊನ್ನೂರಿನಲ್ಲಿ ಕನಕ ಸಮುದಾಯ ಭವನದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಗಂಟೆಗೆ ಕೊಳ್ಳೇಗಾಲದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಸಂಜೆ 6 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,

ಸಿಇಟಿ ತರಬೇತಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 16 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್ ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜುಲೈ 24 ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಿಂದ ನಗರದ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ಚಾಮರಾಜನಗರ, ಜು. 16 (ಕರ್ನಾಟಕ ವಾರ್ತೆ):- ಜಿಲ್ಲಾ ಕೇಂದ್ರದಲ್ಲಿ ಕೈಗೊಂಡಿರುವ ವಿವಿಧ ರಸ್ತೆ, ಚರಂಡಿ, ಕಟ್ಟಡ  ಕಾಮಗಾರಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ವ್ಯಾಪಕವಾಗಿ ಪರಿಶೀಲಿಸಿದರು.
ಇಂದು ಬೆಳಿಗ್ಗೆಯಿಂದಲೇ ನಗರಾದ್ಯಂತ ಚುರುಕಿನಿಂದ ಕಾಮಗಾರಿಗಳನ್ನು ಸಚಿವರು ವಿಕ್ಷೀಸಿದರು. ಮೊದಲಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಮುಂಭಾಗದಲ್ಲಿರುವ ಶಿಥಿಲಗೊಂಡ ಒವರ್ ಹೆಡ್‍ಟ್ಯಾಂಕ್‍ನ್ನು ಪರಿಶೀಲಿಸಿದರು. ಇದಕ್ಕೆ ಪರ್ಯಾಯವಾಗಿ ಹೊಸ ಟ್ಯಾಂಕ್ ನಿರ್ಮಾಣ ಇಲ್ಲವೆ ದುರಸ್ಥಿ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ತುರ್ತಾಗಿ ನಿರ್ಧಾರ ಕೈಗೊಂಡು ಕಾಮಗಾರಿಗೆ ಅಗತ್ಯ ಪ್ರಕ್ರಿಯೆ ವಹಿಸುವಂತೆ ಸೂಚಿಸಿದರು.
ಬಳಿಕ ಅನ್ವರ್‍ಪಾಷ ಕಲ್ಯಾಣ ಮಂಟಪ ಬಳಿ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಕರಿವರದರಾಜನಬೆಟ್ಟದ ಬಳಿ ಇರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ಕೊಟ್ಟರು. ಘಟಕದ ಬಳಿ ಇರುವ ಮಣ್ಣುಗುಡ್ಡೆಯನ್ನು ಸಮತಟ್ಟುಗೊಳಿಸುವ ಕೆಲಸವನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತದನಂತರ ಚಿಕ್ಕಂಗಡಿ ಬೀದಿ, ದೊಡ್ಡಂಗಡಿ ಬೀದಿ, ರಥದ ಬೀದಿಯಲ್ಲಿ ನಿರ್ಮಾಣವಾಗಿರುವ ರಸ್ತೆ ಕಾಮಗಾರಿಯನ್ನು ವಿಕ್ಷೀಸಿದರು. ಕೆಲವೆಡೆ ಕಾಮಗಾರಿ ಸರಿ ಇಲ್ಲದಿರುವ ಬಗ್ಗೆ ಆಕ್ಷೇಪಿಸಿ ಸರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಅಂಗಡಿ ಮಾಲೀಕರು ಸಚಿವರಿಗೆ ಮನವಿ ಮಾಡಿ ಶೀಘ್ರವಾಗಿ ಕಾವiಗಾರಿ ಪೂರ್ಣಗೊಳಿಸಬೇಕು. ಇದರಿಂದ ವ್ಯಾಪಾರ, ವಹಿವಾಟು ಎಂದಿನಂತೆ ನಡೆಯಲು ಅನುಕೂಲವಾಗಲಿದೆ ಎಂದರು.
ರಥದ ಬೀದಿಯಲ್ಲಿ ನಗರೋತ್ಥಾನದಡಿಯಲ್ಲಿ 290 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸಂಕೀರ್ಣ ಕಾಮಗಾರಿ ಸ್ಥಳಕ್ಕೂ ಭೇಟಿ ಕೊಟ್ಟು ಸಚಿವರು ಪರಿಶೀಲಿಸಿದರು. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ವ್ಯಾಪಾರ ಮಾಡುವವರಿಗೆ ಸೌಲಭ್ಯ ತಲುಪುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ ಸÀಚಿವರು ಅಲ್ಲಿನ ವ್ಯಾಪಾರಸ್ಥರಿಗೆ ತಾತ್ಕಾಲಿಕವಾಗಿ ಮಾರಿಗುಡಿ ಬಳಿ ವ್ಯಾಪಾರ ಸ್ಥಳವನ್ನು ಸ್ಥಳಾಂತರ ಮಾಡಿ. ನಿಮಗೆ ಇದೇ ಜಾಗದಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡಿಕೊಡಲಿದ್ದೇವೆ ಎಂದರು. ತಾತ್ಕಾಲಿಕವಾಗಿ ವ್ಯಾಪಾರ ಮಾಡಲು ಶೆಡ್ ನಿರ್ಮಾಣ ಮಾಡಿಕೊಡಬೇಕು ಎಂದು ತರಕಾರಿ ವ್ಯಾಪಾರಿಗಳು ಕೋರಿದರು. ಅಲ್ಲಿಯೆ ಇದ್ದ ನಗರಸಭೆ ಆಯುಕ್ತರಿಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಬಳಿಕ ನಗರದ ಬಿ. ರಾಚಯ್ಯ ಜೋಡಿರಸ್ತೆ ಕಾಮಗಾರಿ ಪರಿಶೀಲಿಸಿದರು. ರಾಮಸಮುದ್ರದಲ್ಲಿಯೂ ರಸ್ತೆ ಕಾಮಗಾರಿ ಹಾಗೂ ಇತರೆ ಕಾಮಗಾರಿಯನ್ನು ವಿಕ್ಷೀಸಿದರು. ಇದೇ ವೇಳೆ ಹೊಸ ಹೌಸಿಂಗ್‍ಬೋರ್ಡ್ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರು ಘಟಕ ಕಾಮಗಾರಿಗೆ ಸಚಿವರು ಚಾಲನೆ ನೀಡಿದರು. ಬಡಾವಣೆಯ ನಿವಾಸಿಗಳು ಬೀದಿದೀಪ, ರಸ್ತೆ, ಚರಂಡಿ ಸೇರಿದಂತೆ ಇತರೆ ಮೂಲ ಸೌಕರ್ಯವನ್ನು ಒದಗಿಸಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸೆಪ್ಟೆಂಬರ್ ವೇಳೆಗೆ ನಗರದ ಎಲ್ಲಾ ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಈ ಬಾರಿಯು ದಸರಾ ಆಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮಾಡಲಾಗುತ್ತದೆ. ಈ ವೇಳೆಗೆ ಎಲ್ಲ ರಸ್ತೆಗಳು, ಇತರೆ ಅಭಿವೃದ್ಧಿ ಕೆಲಸಗಳು ಸಿದ್ಧಗೊಂಡಿರುತ್ತವೆ ಎಂದರು.
ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ಸದಸ್ಯರಾದ ಚೆಂಗುಮಣಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಕನಿಷ್ಠ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ ಉಮೇಶ್, ನಗರಸಭೆ ಆಯುಕ್ತಾದ ರಾಜಣ್ಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತ್ಯಮೂರ್ತಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಡಿ.ಟಿ. ವಾಸುದೇವ್, ನಗರಸಭೆ ಮಾಜಿ ಸದಸ್ಯರಾದ ಅಸ್ಗರ್ ಮುನ್ನಾ ಇತರರು ಕಾಮಗಾರಿ ಪರಿಶೀಲನೆ ವೇಳೆ ಹಾಜರಿದ್ದರು.   

ನೈಸರ್ಗಿಕ ಸಂಪತ್ತು ರಕ್ಷಣೆ ಮೂಲಭೂತ ಕರ್ತವ್ಯ : ಜಿಲ್ಲಾ ನ್ಯಾಯಾಧೀಶರಾದ ಜಿ. ಬಸವರಾಜ ,ಸ್ವಾತಂತ್ರ್ಯ ದಿನ ಆಚರಣೆ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ (19-07-2018)

ನೈಸರ್ಗಿಕ ಸಂಪತ್ತು ರಕ್ಷಣೆ ಮೂಲಭೂತ ಕರ್ತವ್ಯ : ಜಿಲ್ಲಾ ನ್ಯಾಯಾಧೀಶರಾದ ಜಿ. ಬಸವರಾಜ   

ಚಾಮರಾಜನಗರ, ಜು. 19 - ಅಮೂಲ್ಯವಾದ ನೈಸರ್ಗಿಕ ಸಂಪತ್ತಿನ ಬಗ್ಗೆ ಕಾಳಜಿ ವಹಿಸಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವೂ ಆಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿಳಿಸಿದರು.  

 ನಗರದ ಹೊರವಲಯದಲ್ಲಿರುವ ಕರಿವರದರಾಜನ ಬೆಟ್ಟದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಓಡಿಪಿ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವೃಕ್ಷ ಕ್ರಾಂತಿ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು. ಉತ್ತಮ ಪರಿಸರವಿದ್ದರೆ ಮಾನವ ಪ್ರಾಣಿಸಂಕುಲಗಳ ಜೀವಕ್ಕೂ ಸುರಕ್ಷತೆ ಇರುತ್ತದೆ. ಪರಿಸರ ನಾಶವಾದರೆ ಆರೋಗ್ಯಕರ ವಾತಾವರಣ ಇಲ್ಲವಾಗುತ್ತದೆ. ವೃಕ್ಷಗಳಿದ್ದಷ್ಟೂ ಆರೋಗ್ಯಪೂರಕ ಜೀವನ ನಡೆಸಲು ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಪರಿಸರ ಕುರಿತು ಗಮನ ಹರಿಸುವುದು ಒಳಿತು ಎಂದು ನ್ಯಾಯಾಧೀಶರು ಸಲಹೆ ಮಾಡಿದರು. ಪ್ರಾಕೃತಿಕ ಸಂಪತ್ತು ಕಾಪಾಡುವುದು ಎಲ್ಲರ ಹೊಣೆಗಾರಿಕೆಯಾಗಿದೆ. ಪರಿಸರ ಸಮತೋಲನಕ್ಕೆ ಅರಣ್ಯ ಸೇರಿದಂತೆ ಎಲ್ಲ ನಿಸರ್ಗ ಸಂಪತ್ತು ನೆರವಾಗಲಿದೆ. ಹೀಗಾಗಿ ಪ್ರಕೃತಿ ಸಂಪತ್ತಿನ ರಕ್ಷಣೆ ಬಗ್ಗೆ ವಿಶೇಷ ಆಸಕ್ತಿ ವಹಿಸಬೇಕು. ಯಾವುದೇ ಭಾಗದಲ್ಲಿ ನೈಸರ್ಗಿಕ ಸಂಪತ್ತನ್ನು ದೋಚುವವರು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಗಮನಕ್ಕೆ ತರಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಿಗೂ ದೂರು ನೀಡಬಹುದು ಎಂದು ನ್ಯಾಯಾಧೀಶರು ತಿಳಿಸಿದರು. ಪರಿಸರ ಸಂರಕ್ಷಣೆ ಬಗ್ಗೆ ವಿಶೇಷವಾಗಿ ಕಾಳಜಿ ಇಟ್ಟು ಸ್ವಯಂಸೇವಾ ಸಂಸ್ಥೆಗಳು, ವಕೀಲರ ಸಂಘ ಗಿಡ ನೆಟ್ಟು ಪೋಷಿಸುವ ಕೆಲಸಕ್ಕೆ ಮುಂದಾಗಿರುವುದು ಅಭಿನಂದನೀಯ ಕಾರ್ಯವಾಗಿದೆ. ಈ ಉತ್ತಮ ಕೆಲಸಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕೈಜೋಡಿಸಲಿದೆ ಎಂದು ನ್ಯಾಯಾಧೀಶರು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ಮಾತನಾಡಿ ಹಸಿರೇ ಉಸಿರು ಎಂಬುದನ್ನು ಎಲ್ಲರೂ ಅರಿಯಬೇಕು. ಕಾಡಿದ್ದರೆ ನಾಡು ಅರಣ್ಯ ಸಂಪತ್ತಿನಿಂದ ವಾಯು ಮಾಲಿನ್ಯ ಕಡಿಮೆಯಾಗಲಿದೆ. ವೃಕ್ಷ ಸಂಪತ್ತು ವೃದ್ಧಿಸುವ ದಿಸೆಯಲ್ಲಿ ಪ್ರತಿಯೊಬ್ಬರಲ್ಲಿ ಕರ್ತವ್ಯ ಪ್ರಜ್ಞೆ ಉಂಟಾಗಬೇಕೆಂದು ತಿಳಿಸಿದರು. ಓಡಿಪಿ ಸಂಸ್ಥೆಯ ನಿರ್ದೇಶಕರಾದ ವಂ. ಸ್ವಾಮಿ. ಸ್ಟ್ಯಾನಿ ಡಿ ಆಲ್ಮೆಡಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೇಮಲತಾ, ಪ್ರಾದೇಶಿಕ ವಲಯ ಅರಣ್ಯಾಧಿಕಾಶರಿ ರಖನ್ ಕುಮಾರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಂ. ರವಿ, ಓಡಿಪಿ ಸಂಸ್ಥೆಯ ಸಂಯೋಜಕರಾದ ಸುನಿತ, ಸಿದ್ದರಾಜು, ಇತರರು ಕಾರ್ಯಕ್ರಮದಲ್ಲಿ ಇದ್ದರು. ಜು. 24ರಂದು ಕಬ್ಬಹಳ್ಳಿಯಲ್ಲಿ ರಕ್ತದಾನ ಶಿಬಿರ ಚಾಮರಾಜನಗರ, ಜು. 18 - ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಶ್ರೀಮತಿ ಸುಬ್ಬಮ್ಮ ಮತ್ತು ಶ್ರೀ ಸಿರಿಯಪ್ಪನವರ ಸರ್ಕಾರಿ ಸಮುದಾಯ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 24ರಂದು ಬೆಳಿಗ್ಗೆ 10 ಗಂಟೆಗೆ ಕಬ್ಬಹಳ್ಳಿಯ ಶ್ರೀ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಆಸಕ್ತರು ರಕ್ತದಾನ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ವಿವರಗಳಿಗೆ ಪ್ರಾಂಶುಪಾಲರಾದ ಡಾ. ಎನ್.ಎಸ್. ಮಹದೇವಪ್ರಸಾದ್, ಮೊ. 9481320044 ಹಾಗೂ ಎಂ. ಪ್ರಭುಸ್ವಾಮಿ, ಮೊ. 9741522341 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ರಕ್ಷಣಾ ಪಿಂಚಣಿ ಅದಾಲತ್ : ಅರ್ಜಿ ಆಹ್ವಾನ ಚಾಮರಾಜನಗರ, ಜು. 19:- ಅಲಹಾಬಾದ್‍ನ ಡಿಫೆನ್ಸ್ ಅಕೌಂಟ್ಸ್ (ಪಿಂಚಣಿ) ಪ್ರಧಾನ ಕಂಟ್ರೋಲರ್ ಅವರು ರಕ್ಷಣಾ ಪಿಂಚಣಿ ಅದಾಲತ್ ಅನ್ನು ಆಗಸ್ಟ್ 23 ಹಾಗೂ 24ರಂದು ಮೈಸೂರಿನಲ್ಲಿ ನಡೆಸಲಿರುವ ಹಿನ್ನೆಲೆಯಲ್ಲಿ ಕುಂದುಕೊರತೆ ನಿವಾರಣೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಕ್ಷಣಾ ಪಿಂಚಣಿ, ಸಿವಿಲ್ ಪಿಂಚಣಿ ಪಡೆಯುತ್ತಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆಗಳು ಇದ್ದಲ್ಲಿ ಅದಾಲತ್‍ನಲ್ಲಿ ನೇರವಾಗಿ ಪರಿಹಾರ ಪಡೆಯಬಹುದಾಗಿದೆ. ಕುಂದುಕೊರತೆ ನಿವಾರಣೆ ಅರ್ಜಿಯನ್ನು ಮೈಸೂರಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಿಂದ ಪಡೆದು ಭರ್ತಿ ಮಾಡಿ ಸೇವಾ ದಾಖಲೆಗಳು, ಪಿಂಚಣಿ ಪಡೆಯುತ್ತಿರುವ ಖಜಾನೆ, ಬ್ಯಾಂಕ್ ವಿವರ ಪೇಮೆಂಟ್ ಆರ್ಡರ್‍ನಂತಹ ದಾಖಲೆಗಳನ್ನು ಲಗತ್ತಿಸಿ ಶ್ರೀ ಎಸ್.ಕೆ. ಶರ್ಮ, ಪೆನ್ಷನ್ ಅದಾಲತ್ ಆಫೀಸರ್, ಪ್ರಿನ್ಸಿಪಾಲ್ ಸಿಡಿಎ (ಪೆನ್ಷನ್ಸ್), ದ್ರೌಪದಿ ಘಾಟ್, ಅಲಹಾಬಾದ್ – 211014 ಇಲ್ಲಿಗೆ ಕಳುಹಿಸಬೇಕು. ಇ ಮೇಲ್ ವಿಳಾಸ ಛಿಜಚಿ-ಚಿಟbಜ@ಟಿiಛಿ.iಟಿ ಅಥವಾ ಫ್ಯಾಕ್ಸ್ ಸಂಖ್ಯೆ 0532-2421873 ಮೂಲಕವೂ ಕಳುಹಿಸಬಹುದು. ವಿವರಗಳಿಗೆ ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರನ್ನು ಅಥವಾ ದೂ.ಸಂ. 0821-2425240 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಜು. 23ರಂದು ನಗರದಲ್ಲಿ ಉದ್ಯೋಗ ಮೇಳ ಚಾಮರಾಜನಗರ, ಜು. 19 - ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಉದ್ಯೋಗ ಮೇಳವನ್ನು ಜುಲೈ 23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ. ಮೈಸೂರು, ಬೆಂಗಳೂರು ಮೂಲದ ಖಾಸಗಿ ಕಂಪನಿಗಳಾದ ಹೈಪ್ರೋಸೆಸ್ ಸರ್ವೀಸ್ (ಇಂಡಿಯಾ) ಪ್ರೈ. ಲಿ., ಯುರೇಕಾ ಫೋರ್ಬ್, ನವಭಾರತ್ ಫರ್ಟಿಲೈಸರ್ ಲಿ., ಬಿಎಸ್‍ಐ ಕಾರ್ಪೋರೇಷನ್, ಪದ್ಮ ಅಂಡ್ ಕೋ, ಇಮ್ಯಾನ್ಯುಯಲ್ ಸಾಫ್ಟ್ ಸ್ಕಿಲ್ ಪ್ರೈ. ಲಿ., ಗಿರೀಶ್ ಗಾರ್ಮೆಂಟ್ಸ್, ಚಾಮರಾಜನಗರದ ಎಲ್‍ಐಸಿ ಆಫ್ ಇಂಡಿಯಾ ಸೇರಿದಂತೆ ಇತರೆ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಹತೆಯುಳ್ಳ 18 ರಿಂದ 35ರ ವಯೋಮಿತಿಯೊಳಗಿರುವವರು ಉದ್ಯೋಗ ಮೇಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ಸ್ವವಿವರಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಜಿಲ್ಲಾ ಉದ್ಯೋಗಾಧಿಕಾರಿ (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಜು. 30ರಂದು ದೊಡ್ಡಿಂದುವಾಡಿಯಲ್ಲಿ ಅಂಚೆ ಸಂತೆ ಚಾಮರಾಜನಗರ, ಜು. 19 – ಅಂಚೆ ಇಲಾಖೆಯು ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಹೋಬಳಿ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಜುಲೈ 30ರಂದು ಅಂಚೆ ಸಂತೆ ಹಮ್ಮಿಕೊಂಡಿದೆ. ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುತ್ತದೆ. ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಹೆಚ್.ಸಿ. ಸದಾನಂದ ಪ್ರಕಟಣೆಯಲ್ಲಿ ಕೋರಿದ್ದಾರೆ. ಕೊಳ್ಳೇಗಾಲ : ನಲ್ಮ್ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ ಚಾಮರಾಜನಗರ, ಜು. 19 :- ಕೊಳ್ಳೇಗಾಲ ನಗರಸಭೆಯು ದೀನ್ ದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ವ್ಯಕ್ತಿಗತ ಹಾಗೂ ಗುಂಪು ಉದ್ಯಮಶೀಲತೆಗಾಗಿ ಸಾಲ ಮತ್ತು ಸಹಾಯಧನ ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯ ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು. 21ರಂದು ತಾ.ಪಂ. ಸಾಮಾನ್ಯ ಸಭೆ ಚಾಮರಾಜನಗರ, ಜು. 19 - ಚಾಮರಾಜನಗರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ಅಧ್ಯಕ್ಷರಾದ ದೊಡ್ಡಮ್ಮ ಅವರ ಅಧ್ಯಕ್ಷತೆಯಲ್ಲಿ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೇನೆ ಸೇರ್ಪಡೆ ಮಾರ್ಗದರ್ಶನ ತರಬೇತಿಗೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಚಾಮರಾಜನಗರ, ಜು. 19:- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆಗೆ ಸೇರಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಕುರಿತು ನೀಡಲಿರುವ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ -1, 2ಎ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 25 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡಬಹುದು. ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಸಹಾಯವಾಣಿ ಸಂಖ್ಯೆ 8050770004 ಸಂಪರ್ಕಿಸಿ ಸಹ ಮಾಹಿತಿ ಪಡೆಯಬಹುದೆಂದು ಹಿಂದುಳಿದ ವಗರ್Àಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

********************************************** 

ಸ್ವಾತಂತ್ರ್ಯ ದಿನ ಆಚರಣೆ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ, ಜು. 19 - ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸ್ವಾತಂತ್ರೋತ್ಸವ ಆಚರಣೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಬೇಕು. ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣ ಹಾಗೂ ಸುಗಮ ಆಚರಣೆಗೆ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಸಮಿತಿಯಲ್ಲಿ ಕಾರ್ಯನಿರ್ವಹಿಸಬೇಕಾದ ಅಧಿಕಾರಿಗಳ ವಿವರವನ್ನು ನೀಡಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ಸೂಚಿಸಲಾಗಿರುವ ಸಿದ್ಧತಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು ಶಾಲಾ ಮಕ್ಕಳಿಗೆ ನೆರಳಿನ ವ್ಯವಸ್ಥೆಯಾಗಬೇಕು. ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗಬಾರದು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಗೌರವಿಸುವ ಕೆಲಸವಾಗಬೇಕು. ಬ್ಯಾಂಕು ಖಾಸಗಿ ಶಾಲೆಗಳು ಇತರೆ ಕಚೇರಿಗಳಲ್ಲು ಕಡ್ಡಾಯವಾಗಿ ಧ್ವಜಾರೋಹಣ ನೆರವೇರಬೇಕು. ಕಾರ್ಮಿಕರಿಗೆ ಅಂದು ಕಡ್ಡಾಯವಾಗಿ ರಜೆ ಸೌಲಭ್ಯ ಸಿಗಬೇಕು ಎಂಬ ಸಲಹೆಗಳನ್ನು ನೀಡಿದರು. 

ಎಲ್ಲರ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಶಾಲಾ ಮಕ್ಕಳಿಗೆ ನೆರಳಿನ ವ್ಯವಸ್ಥೆಗೆ ಪೂರಕವಾಗುವಂತೆ ಶಾಮಿಯಾನ ಹಾಕಬೇಕು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಬಗ್ಗೆ ಸಂಬಂಧಪಟ್ಟ ಸಮಿತಿಯು ಕ್ರಮ ವಹಿಸಬೇಕು. ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲ ಶಾಲೆಗಳಲ್ಲಿ ಇತರೆ ಕಚೇರಿಗಳಲ್ಲೂ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಲು ಸೂಚಿಸಲಾಗುತ್ತದೆ. ಬ್ಯಾಂಕುಗಳಲ್ಲಿಯೂ ಸಹ ಸ್ವಾತಂತ್ರ್ಯ ದಿನ ಆಚರಣೆಗೆ ಸೂಕ್ತ ಕ್ರಮ ವಹಿಸಲು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುತ್ತದೆ. ಕಾರ್ಮಿಕರಿಗೆ ರಜೆ ಸೌಲಭ್ಯ ಸಿಗುವಂತಾಗಲು ಕಾರ್ಮಿಕ ಅಧಿಕಾರಿಗಳು ಅಗತ್ಯ ಸೂಚನೆ ನೀಡಲು ಸಹ ತಿಳಿಸಲಾಗುವುದೆಂದು ಜಿಲ್ಲಾಧಿಕಾರಿ ಹೇಳಿದರು.

ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳ ತಾಲೀಮು ಆರಂಭಿಸಬೇಕು. ತಾಲೀಮು ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಪಾಹಾರ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸÀಬೇಕು ಎಂದರು. 

ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ವೇದಿಕೆ, ಆಹ್ವಾನಿತರು, ವಿದ್ಯಾರ್ಥಿಗಳು, ಗಣ್ಯರು ಕುಳಿತುಕೊಳ್ಳಲು ಶಾಮಿಯಾನ ಹಾಗೂ ಆಸನಗಳ ವ್ಯವಸ್ಥೆ ಮಾಡಬೇಕು. ಸಂಜೆ ಚಾಮರಾಜೇಶ್ವರ ದೇವಾಲಯ ಬಳಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಉತ್ತಮ ಕಾರ್ಯಕ್ರಮಗಳು ಮೂಡಿಬರಬೇಕು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರು ಸಾಂಸ್ಕøತಿಕ ಕಾರ್ಯಕ್ರಮಗಳು ಪುನರಾವರ್ತಿತವಾಗದೆ ವೈವಿದ್ಯಮಯವಾಗಿ ಇರುವಂತೆ ನೋಡಿಕೊಳ್ಳಬೇಕು. ಸಮನ್ವಯದಿಂದ ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲ ಅಧಿಕಾರಿಗಳು ಇಲಾಖೆಯ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿ ಸಿಬ್ಬಂದಿಯವರ ಹಾಜರಾತಿಯನ್ನು ಗಮನಿಸಲಾಗುವುದು. ಗೈರುಹಾಜರಾಗುವವರ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲಾಧಿಕಾರಿ ಕೆ.ಎಂ. ಗಾಯತ್ರಿ, ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿನಯ್, ಚಾ.ಗು. ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶರಾದ ಮಹದೇವಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


 



ಪರಿಶಿಷ್ಟರ ಕಲ್ಯಾಣ ಯೋಜನೆ ಪ್ರಗತಿ ಸಾಧನೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಾಕೀತು (28-07-2018)

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವೇಳಾ ಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ

ಚಾಮರಾಜನಗರ, ಜು. 28 - ಭಾರತ ಚುನಾವಣಾ ಆಯೋಗವು ದಿನಾಂಕ 01.01.2019ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಸಲು ಆದೇಸಿಶಿ ವೇಳಾಪಟ್ಟಿ ಪ್ರಕಟಿಸಿದೆ
ಜುಲೈ16ರಿಂದ ಆಗಸ್ಟ್ 10ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಲಿದ್ದಾರೆ, ಆಗಸ್ಟ್ 27ರಿಂದ ಸೆಪ್ಟಂಬರ್ 15ರವರೆಗೆ ಮತಗಟ್ಟೆಗಳ ಪುನರ್‍ವಿಂಗಡಣೆ, ಮತಗಟ್ಟೆಗಳ ಭೌತಿಕ ಪರಿಶೀಲನೆ ನಡೆಸಲಾಗುತ್ತದೆ. ಸೆಪ್ಟಂಬರ್ 17ರಿಂದ ಅಕ್ಟೋಬರ್ 10ರವರೆಗೆ ಪೂರಕ ಪಟ್ಟಿ ತಯಾರಿಕೆ. ಇಂಟಿಗ್ರೇಶನ್ ಮತ್ತು ಕರಡು ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಅಕ್ಟೋಬರ್ 10ರಿಂದ ನವಂಬರ್ 20ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಯಾ ತಾಲ್ಲೂಕಿನ ಮತಗಟ್ಟೆಗಳಲ್ಲಿ ಬಿ.ಎಲ್.ಓ ಮೂಲಕ ಹಾಗೂ ಆಯಾ ತಾಲ್ಲೂಕು ಕಚೇರಿಯಲ್ಲಿ ಸ್ವೀಕರಿಸಲಾಗುತ್ತದೆ. ಡಿಸೆಂಬರ್ 20ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. 2019ರ ಜನವರಿ 3ರೊಳಗೆ ಮತದಾರರ ಪಟ್ಟಿಗೆ ಹೆಸರು, ಫೋಟೋ ಸೇರ್ಪಡೆ, ಪೂರಕ ಪಟ್ಟಿಗಳನ್ನು ಸಿದ್ದಪಡಿಸಲಾಗುತ್ತದೆ. ಜನವರಿ 4ರಂದು ಅಂತಿಮ ಮತದಾರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ನೇಮಕ ಮಾಡಲಾಗಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು ಆಗಸ್ಟ್ 10ರವರೆಗೆ ಮನೆಮನೆಗೆ ಭೇಟಿನೀಡಿ ಹಾಲಿ ಇರುವ ಮತದಾರರ ಪಟ್ಟಿಯಲ್ಲಿ ಸಂಬಂಧಿಸಿದ ಕುಟುಂಬದ ಎಲ್ಲಾ ಸದಸ್ಯರ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು ಮನೆಯ ಮುಖ್ಯಸ್ಥರೊಡನೆ ಪರಿಶೀಲಿಸುವರು.

ಪರಿಶೀಲನಾ ಸಮಯದಲ್ಲಿ ದಿನಾಂಕ 01.01.2018ಕ್ಕೆ 18 ವರ್ಷ ತುಂಬಿರುವ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವ ಹಾಗೂ ದಿನಾಂಕ 01.01.2019ಕ್ಕೆ 18 ವರ್ಷ ತುಂಬುವ ಮತದಾರರ ಹೆಸರನ್ನು ಸೇರ್ಪಡೆಗೊಳಿಸಲು ನಮೂನೆ-6ರಲ್ಲಿ ಅರ್ಜಿಸಲ್ಲಿಸಬೇಕಿದೆ. ಮೃತ ಮತದಾರರ ಹಾಗೂ ಪುನಾರಾವರ್ತನೆಗೊಂಡಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲು ನಮೂನೆ-7ರಲ್ಲಿ, ಮತದಾರರ ಪಟ್ಟಿಯಲ್ಲಿರುವ ಹೆಸರುನ್ನು ತಿದ್ದುಪಡಿಮಾಡಲು ನಮೂನೆ-8ರಲ್ಲಿ ಅರ್ಜಿಸಲ್ಲಿಸಬೇಕು. ಒಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಯಿಂದ ಮತ್ತೊಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಹಾಗೂ ಅನಿವಾಸಿಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎರಲ್ಲಿ ಅರ್ಜಿ ಸಲ್ಲಿಸಬೇಕು.

ಮತಗಟ್ಟೆ ಮತದ ಅಧಿಕಾರಿಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸುವ ಸಮಯದಲ್ಲಿ ನಾಗರಿಕರು ಅಗತ್ಯ ಮಾಹಿತಿ ನೀಡಬೇಕು. ಭಾರತ ಚುನಾವಣಾ ಆಯೋಗದ ಮಹತ್ತರವಾದ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಶೇ100ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ನಾಗರಿಕರು ಹೆಚ್ಚಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಮನವಿ ಮಾಡಿದ್ದಾರೆ.

 ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹೆಚ್ಚಿನ ವಿವರಗಳಿಗಾಗಿ ಮತದಾರರ ನೊಂದಣಾಧಿಕಾರಿ ಹಾಗೂ ಕೊಳ್ಳೇಗಾಲ ಉಪವಿಭಾಗ ಅಧಿಕಾರಿ ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರ್, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ: ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ, ಜು. 28:- ಆಧುನಿಕ ಸಮಾಜದಲ್ಲಿ ವಿದ್ಯಾವಂತ ಯುವ ಜನರೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು ಇದರ ಪರಿಹಾರಕ್ಕೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾದೀಶರಾದ ಜಿ. ಬಸವರಾಜ ಅವರು ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ಔಷದ ವಿಪತ್ತು ನಿರ್ಮೂಲನೆ ಕುರಿತ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದಾಗ 16ರಿಂದ 22ರ ವಯೋಮಿತಿಯ ಯುವ ಜನರು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಚಟಕ್ಕೆ ಒಳಗಾಗಿರುವುದು ಆತಂಕಕಾರಿ ವಿಷಯವಾಗಿದೆ. ಅದರಲ್ಲೂ ಅಕ್ಷರಸ್ಥರೆ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳ ಬಳಕೆಗೆ ಮುಂದಾಗಿರುವುದು ಕಂಡುಬಂದಿದೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವ ಜನರು ಅಪಾಯಕಾರಿ ವ್ಯಸನಕ್ಕೆ ಮೊರೆಹೋಗಿರುವುದಕ್ಕೆ ವ್ಯಾಪಕವಾಗಿ ಅರಿವು ಮೂಡಿಸಿ ಸರಿದಾರಿಯಲ್ಲಿ ತರಬೇಕಿದೆ ಎಂದರು.
18ವರ್ಷ ಒಳಪಟ್ಟವರಿಗೆ ಧೂಮಪಾನ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಇದಕ್ಕಾಗಿ ಕಾಯಿದೆ ಸಹ ತರಲಾಗಿದೆ. ಮಧ್ಯ, ಮಾದಕ ವಸ್ತುಗಳ ಮೋಹಕ್ಕೆ ಬಲಿಯಾಗಿ ಜೀವನ ಹಾಳುಮಾಡಿಕೊಳ್ಳುವ ಯುವ ಜನರನ್ನು ಎಚ್ಚರಿಸಿ ಮುಖ್ಯವಾಹಿನಿಗೆ ತರುವ ಕೆಲಸವನ್ನು ಆದ್ಯತೆ ಮೇಲೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹ ಜಾಗೃತಿ ಮೂಡಿಸಲು ಕಾರ್ಯಗಾರಗಳನ್ನು ಆಯೋಜನೆ ಮಾಡುತ್ತಿದೆ ಎಂದು ಜಿಲ್ಲಾ ನ್ಯಾಯಾದೀಶರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರÀ ಸದಸ್ಯ ಕಾರ್ಯದರ್ಶಿಯವರಾದ ಸಿ.ಜಿ. ವಿಶಾಲಾಕ್ಷಿ ಮಾತನಾಡಿ ಯುವಶಕ್ತಿ ದೇಶದ ಅಮೂಲ್ಯ ಆಸ್ತಿ. ಇಂತಹ ಯುವ ಜನರನ್ನು ಮಾದಕ ಔಷದ, ವಸ್ತುಗಳನ್ನು ನೀಡಿ ದಾರಿ ತಪ್ಪಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಎಚ್ಚರವಹಿಸಬೇಕಿದೆ. ಉತ್ತಮ ಸಮಾಜ ನಿರ್ಮಾಣಮಾಡಲು ಯುವ ಜನರಿಗೆ ಮಾರ್ಗದರ್ಶನಮಾಡಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಮಾತನಾಡಿ ಬದಲಾದ ಆಧುನಿಕ ಜೀವನ ಶೈಲಿಯು ಮಾದಕ ವಸ್ತುಗಳ ಬಗ್ಗೆ ಯುವಜನರನ್ನು ಆಕರ್ಷಿಸುತ್ತಿದೆ. ನಗರ ಪ್ರದೇಶಗಳಲ್ಲಿ ಪೋಷಕರ ಪ್ರೀತಿ ವಾತ್ಸಲ್ಯದಿಂದ ವಂಚಿತರಾದವರು, ಸಹಪಾಠಿಗಳ ಪ್ರಭಾವಕ್ಕೆ ಒಳಗಾಗುವರು ಕೆಟ್ಟ ಹವ್ಯಾಸಗಳನ್ನು ರೂಢಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ವ್ಯಾಸಂಗಕ್ಕೆ ಮಾತ್ರ ಮಹತ್ವ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದೊರೆತು ನೆಮ್ಮದಿಯ ಬದುಕು ಸಾಗಿಸಬಹುದೆಂದು ಸಲಹೆ ಮಾಡಿದರು.
ಜಂಟಿ ಕೃಷಿ ನಿರ್ದೇಶಕರಾದ ಎಂ. ತಿರುಮಲೇಶ್ ಮಾತನಾಡಿ ವಿದ್ಯಾರ್ಥಿಗಳು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ಚಿಂತನ ಲಹರಿಯನ್ನು ಉತ್ತಮ ವಿಷಯಗಳಿಗೆ ಕೇಂದ್ರೀಕರಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆಯಿಂದ ಓದಿನೆಡೆಗೆ ತೊಡಗಿಕೊಳ್ಳಬೇಕು. ಅನಗತ್ಯ ವಿಚಾರಗಳನ್ನು ದೂರಮಾಡಿದರೆ ಜೀವನ ಸುಂದರವಾಗಲಿದೆ ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಮಾತನಾಡಿ ಯುವ ಜನರು ಮಾದಕ ವಸ್ತುಗಳ ಸೇವನೆಯನ್ನು ಹೆಚ್ಚು ಮಾಡಿರುವ ವಿಷಯವನ್ನು ಇತ್ತೀಚಿನ ವರದಿಗಳು ದೃಢಪಡಿಸಿವೆ. ಪಟ್ಟಣ ನಗರ ಕೇಂದ್ರಿತ ಪ್ರದೇಶಗಳಲ್ಲೇ ಮಾದಕ ವಸ್ತುಗಳಿಗೆ ವಿದ್ಯಾರ್ಥಿಗಳು ಮೋಹಿತರಾಗಿರುವುದು ವಿಷಾದ ಸಂಗತಿ. ವಿದ್ಯಾರ್ಥಿಗಳನ್ನು ಜಾಗೃತಗೊಳಿಸುವ ಕೆಲಸಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಚ್.ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎ. ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ ಜಯಶೀಲ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್‍ಕುಮಾರ್, ಬಾಲ ನ್ಯಾಯಮಂಡಳಿ ಸದಸ್ಯರಾದ ಟಿ.ಜೆ ಸುರೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ : ಮೂಲಸೌಕರ್ಯ ಪರಿಶೀಲನೆ
ಚಾಮರಾಜನಗರ, ಜು. 28 - ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಹೊರವಲಯದಲ್ಲಿರುವ ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಮೊದಲಿಗೆ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿದ ಸಚಿವರು ಭೋದಕ ವರ್ಗದಿಂದ ಕಾಲೇಜು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.     
ಬಳಿಕ ಪುರುಷವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಚಿವರು ವಿದ್ಯಾರ್ಥಿಗಳ ಕೊಠಡಿಗಳನ್ನು ಖುದ್ದು ವೀಕ್ಷಿಸಿದರು. ಕೊಠಡಿಗಳಲ್ಲಿ ಸರಿಯಾದ ವ್ಯವಸ್ಥೆ ಇದೆಯೇ? ಊಟ ಉಪಹಾರದ ಗುಣಮಟ್ಟ ಚೆನ್ನಾಗಿದೆಯೇ? ಉತ್ತಮ ಸಾಮಾಗ್ರಿಗಳನ್ನು ಬಳಕೆಮಾಡಲಾಗುತ್ತಿದೆಯೇ? ಎಂದು ಪ್ರಶ್ನಿಸಿದರು.
ಅಡುಗೆ ತಯಾರಿಸುವ ಕೋಣೆ, ಅಡುಗೆ ಸಾಮಾಗ್ರಿಗಳನ್ನು ದಾಸ್ತಾನು ಮಾಡಿರುವ ಕೊಠಡಿ, ಊಟದ ಹಾಲ್‍ಗಳನ್ನು ಸಚಿವರು ಪರಿಶೀಲಿಸಿದರು, ಕುಡಿಯುವ ನೀರು ಪೂರೈಸಲು ಅಳವಡಿಸಿರುವ ವ್ಯವಸ್ಥೆಯನ್ನು ವೀಕ್ಷಿಸಿ ಶುದ್ಧ ಸರಬರಾಜಿಗೆ ಕ್ರಮ ಹೇಗೆ ವಹಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದರು, ವಿದ್ಯಾರ್ಥಿಗಳಿಗೆ ಸಿದ್ಧಪಡಿಸಲಾಗುತ್ತಿದ್ದ ಆಹಾರವನ್ನು ಸಹ ವೀಕ್ಷಿಸಿದರು.
ವಿದ್ಯಾರ್ಥಿನಿಯರ ಹಾಸ್ಟಲ್‍ಗೂ ಭೇಟಿಕೊಟ್ಟ ಸಚಿವರು ಊಟ ಶುಚಿತ್ವ, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳು ಸರಿಯಾಗಿ ಇದೆಯೇ? ಎಂದು ಕೇಳಿ ತಿಳಿದುಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಪದೇಪದೇ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಜನರೇಟರ್ ವ್ಯವಸ್ಥೆ ಸಮರ್ಪಕವಾಗಿ ಒದಗಿಸಬೇಕು. ವಾರಾಂತ್ಯ ರಜೆಯಲ್ಲಿ ಪಟ್ಟಣಕ್ಕೆ ಹೋಗಿಬರಲು ಬಸ್ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.
ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ಜನರೇಟರ್ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಬೇಕು, ಕಾಲೇಜು ಆವರಣದ ಬಳಿ ಘನತ್ಯಾಜ್ಯ ಸುರಿಯುವುದನ್ನು ನಾಳೆಯಿಂದಲೇ ನಿಲ್ಲಿಸಬೇಕು ಎಂದು ಸಚಿವರು ಸೂಚಿಸಿದರು. ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ವಾರದಲ್ಲಿ ರಜೆ ದಿನಗಳಂದು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು. 
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಹಾಸ್ಟೆಲ್‍ನಲ್ಲಿ ಕೆಲ ವ್ಯವಸ್ಥೆಗಳು ಸರಿಯಿಲ್ಲವೆಂಬ ಕೆಲ ಮಾಹಿತಿ ಹಿನ್ನಲೆಯಲ್ಲಿ ಭೇಟಿ ನೀಡಲಾಗಿದೆ. ಆದರೆ ವಿದ್ಯಾರ್ಥಿಗಳು ಊಟ ಉಪಹಾರ ವ್ಯವ¸ ಬಗ್ಗೆ  ಯಾವುದೇ ದೂರು ನೀಡಿಲ್ಲ. ಬಸ್, ವಿದ್ಯುತ್, ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ. ಈ ಎಲ್ಲಾ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು
ಕಾಲೇಜು ಆವರಣ ಕಾಂಪೌಂಡ್‍ಗೆ 4.25ಕೋಟಿರೂ. ರಸ್ತೆ ನಿರ್ಮಾಣಕ್ಕೆ 5.75ಕೋಟಿರೂ. ಅನುದಾನ ನಿಗದಿಯಾಗಿದ್ದು ಕಾಮಗಾರಿ ನಿರ್ವಹಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆದಷ್ಟು ಶೀಘ್ರವೇ ಕಾಮಗಾರಿ ಆರಂಭವಾಗಲಿದ್ದು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ನಗರಸಭೆ ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ, ಸದಸ್ಯರಾದ ಚೆಂಗುಮಣಿ, ವೈದ್ಯಕೀಯ ಕಾಲೇಜು ಡೀನ್ ಡಾ. ಡಿ.ಹೆಚ್.ರಾಜೇಂದ್ರ, ಜಿಲ್ಲಾ ಸರ್ಜನ್ ಡಾ. ರಘುರಾಮ್, ಡಾ. ಮಹೇಶ್ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.












ಪರಿಶಿಷ್ಟರ ಕಲ್ಯಾಣ ಯೋಜನೆ ಪ್ರಗತಿ ಸಾಧನೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಾಕೀತು
ಚಾಮರಾಜನಗರ, ಜು. 21 :- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಉಪಯೋಜನೆ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಶೇ. 100ರಷ್ಟು ಬಳಕೆ ಮಾಡಿ ಆಯಾ ಜಾತಿ ವರ್ಗದ ಜನತೆಯ ಕಲ್ಯಾಣಕ್ಕೆ ವಿನಿಯೋಗಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ವಿವಿಧ ಇಲಾಖೆಗಳು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಇಲಾಖೆಗಳಿಗೆ ಆಯಾ ಕಾರ್ಯಕ್ರಮದ ಜತೆಯಲ್ಲಿಯೇ ಪ್ರತೀ ವರ್ಷವೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನತೆಯ ಕಲ್ಯಾಣಕ್ಕೂ ಪ್ರತ್ಯೇಕ ಅನುದಾನ ನಿಗದಿ ಮಾಡಲಾಗುತ್ತದೆ. ವಿಶೇಷವಾಗಿ ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಯಾವುದೇ ಕಾರಣಕ್ಕೂ ವ್ಯಪಗತವಾಗದಂತೆ ನೋಡಿಕೊಳ್ಳಬೇಕು. ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಸದ್ಬಳಕೆಯಾಗುವಂತೆ ಅಧಿಕಾರಿಗಳು ಆರಂಭದಿಂದಲೇ ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅನೇಕ ಇಲಾಖೆಗಳಿಗೆ ಎಂದಿನಂತೆ ಕಾರ್ಯಕ್ರಮದಡಿ ಅನುದಾನ ನಿಗದಿಯಾಗಿದೆ. ಈಗಾಗಲೇ ಅನುದಾನ ಪಡೆದಿರುವ ಇಲಾಖೆಗಳು ಗ್ರಾಮಸಭೆಗಳನ್ನು ನಡೆಸಿ ಫಲಾನುಭವಿಗಳ ಆಯ್ಕೆಗೆ ಕ್ರಮ ತೆಗೆದುಕೊಳ್ಳಬೇಕು. ಇತರೆ ಇಲಾಖೆಗಳು ನಿಯಮಾನುಸಾರ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಮುಂದಾಗಬೇಕೆಂದು ಕಾವೇರಿ ಅವರು ತಿಳಿಸಿದರು.
ಅನುದಾನ ಇನ್ನು ಬರದಿರುವ ಇಲಾಖೆಗಳು ಕೇಂದ್ರ ಕಚೇರಿಯನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಪಂಗಡಗಳ ಜನರ ಅನುದಾನ ವಿನಿಯೋಗದಲ್ಲಿ ವಿಳಂಬ ಮಾಡುವುದನ್ನು ಸಹಿಸಲಾಗುವುದಿಲ್ಲ. ಪರಿಶಿಷ್ಟರ ಅಭಿವೃದ್ಧಿ ಕೆಲಸಗಳಿಗೆ ನಿಗದಿಯಾದ ಅನುದಾನ ಪರಿಶಿಷ್ಟರ ಕಾಲೋನಿಯ ಕಾಮಗಾರಿಗಳಿಗೆ ನಿರ್ವಹಣೆಯಾಗಬೇಕು. ಯಾವುದೇ ದುರುಪಯೋಗವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಪರಿಶಿಷ್ಟ ಕಲ್ಯಾಣಕ್ಕೆ ಬಿಡುಗಡೆಯಾಗುವ ಅನುದಾನ ಆಯಾ ನಿಗದಿತ ಅವಧಿಯಲ್ಲಿಯೇ ವೆಚ್ಚ ಮಾಡಬೇಕು. ಕಾಲಮಿತಿಯೊಳಗೆ ಕಾರ್ಯಕ್ರಮಗಳು ಅನುಷ್ಠಾನವಾಗಬೇಕು. ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಿ ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಿನಿಂದಲೇ ಪರಿಶಿಷ್ಟ ಜನರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಉಪಯೋಜನೆ ವಿಶೇಷ ಘಟಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಕೆ, ಮಂಜೂರಾತಿ, ಸಭೆ ಆಯೋಜನೆ ಇನ್ನಿತರ ಕೆಲಸಗಳನ್ನು ವಿಶೇಷ ಗಮನವಿಟ್ಟು ಶೀಘ್ರ ಕೈಗೆತ್ತಿಕೊಳ್ಳಬೇಕು. ನಿಗಧಿತ ಗುರಿ ಅನುಸಾರ ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್.ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣÁಧಿಕಾರಿ ಕೃಷ್ಣಪ್ಪ ಅನುದಾನ ಬಿಡುಗಡೆ ವಿವರ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.
ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಕಾಶ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರಾದ ಆರ್. ರಾಚಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದೇವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ನರೇಗಾದಡಿ ತೋಟಗಾರಿಕೆ ಬೆಳೆ ಪ್ರದೇಶ ವಿಸ್ತರಣೆಗೆ ಸಹಾಯಧನ

ಚಾಮರಾಜನಗರ, ಜು. 21 - ತೋಟಗಾರಿಕೆ ಇಲಾಖೆಯು 2018-19ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಿದೆ.
ತೆಂಗು, ಮಾವು, ಸಪೋಟ, ಸೀಬೆ, ನೇರಳೆ, ಪಪ್ಪಾಯ, ಅಂಗಾಂಶ ಕೃಷಿ ಬಾಳೆ, ನಿಂಬೆ, ಇನ್ನಿತರ ತೋಟಗಾರಿಕೆ ಬೆಳೆಯನ್ನು ಹೊಸದಾಗಿ ನಾಟಿ ಮಾಡಲು ಸಹಾಯಧನ ನೀಡಲಿದೆ.
ಆಸಕ್ತ ರೈತರು ಭಾವಚಿತ್ರ, ಅರ್ಜಿ ನಮೂನೆ, ಪಹಣಿ, ಚೆಕ್ ಬಂದಿ, ಚುನಾವಣಾ ಗುರುತಿನ ಚೀಟ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಉದ್ಯೋಗ ಚೀಟಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕು ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆ ಸದುಪಯೋಗ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜು. 23ರ ಉದ್ಯೋಗ ಮೇಳ ರದ್ದು
ಚಾಮರಾಜನಗರ, ಜು. 21- ಉದ್ಯೋಗ ಮತ್ತು ತರಬೇತಿ ಇಲಾಖೆಯು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಜುಲೈ 23ರಂದು ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಮೇಳವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 23ರಂದು ಬೃಹತ್, ಮಧ್ಯಮ ಕೈಗಾರಿಕೆ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜು. 21– ಬೃಹತ್, ಮಧ್ಯಮ ಕೈಗಾರಿಕೆ, ಸಕ್ಕರೆ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಕೆ.ಜೆ. ಜಾರ್ಜ್ ಅವರು ಜುಲೈ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕಿನ ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡುವರು. ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮರಾಜನಗರ ಕೈಗಾರಿಕೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಚಾಮರಾಜನಗರ ಕೈಗಾರಿಕೆ ಅಸೋಸಿಯೇಷನ್ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12.45 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 2.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟರ ಕಲ್ಯಾಣ ಯೋಜನೆ ಪ್ರಗತಿ ಸಾಧನೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಾಕೀತು

ಚಾಮರಾಜನಗರ, ಜು. 21 :- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಉಪಯೋಜನೆ ವಿಶೇಷ ಘಟಕ ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಶೇ. 100ರಷ್ಟು ಬಳಕೆ ಮಾಡಿ ಆಯಾ ಜಾತಿ ವರ್ಗದ ಜನತೆಯ ಕಲ್ಯಾಣಕ್ಕೆ ವಿನಿಯೋಗಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ವಿವಿಧ ಇಲಾಖೆಗಳು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ಇಲಾಖೆಗಳಿಗೆ ಆಯಾ ಕಾರ್ಯಕ್ರಮದ ಜತೆಯಲ್ಲಿಯೇ ಪ್ರತೀ ವರ್ಷವೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನತೆಯ ಕಲ್ಯಾಣಕ್ಕೂ ಪ್ರತ್ಯೇಕ ಅನುದಾನ ನಿಗದಿ ಮಾಡಲಾಗುತ್ತದೆ. ವಿಶೇಷವಾಗಿ ಪರಿಶಿಷ್ಟರಿಗೆ ಮೀಸಲಾದ ಅನುದಾನವನ್ನು ಯಾವುದೇ ಕಾರಣಕ್ಕೂ ವ್ಯಪಗತವಾಗದಂತೆ ನೋಡಿಕೊಳ್ಳಬೇಕು. ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಸದ್ಬಳಕೆಯಾಗುವಂತೆ ಅಧಿಕಾರಿಗಳು ಆರಂಭದಿಂದಲೇ ಗಮನ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅನೇಕ ಇಲಾಖೆಗಳಿಗೆ ಎಂದಿನಂತೆ ಕಾರ್ಯಕ್ರಮದಡಿ ಅನುದಾನ ನಿಗದಿಯಾಗಿದೆ. ಈಗಾಗಲೇ ಅನುದಾನ ಪಡೆದಿರುವ ಇಲಾಖೆಗಳು ಗ್ರಾಮಸಭೆಗಳನ್ನು ನಡೆಸಿ ಫಲಾನುಭವಿಗಳ ಆಯ್ಕೆಗೆ ಕ್ರಮ ತೆಗೆದುಕೊಳ್ಳಬೇಕು. ಇತರೆ ಇಲಾಖೆಗಳು ನಿಯಮಾನುಸಾರ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಮುಂದಾಗಬೇಕೆಂದು ಕಾವೇರಿ ಅವರು ತಿಳಿಸಿದರು.
ಅನುದಾನ ಇನ್ನು ಬರದಿರುವ ಇಲಾಖೆಗಳು ಕೇಂದ್ರ ಕಚೇರಿಯನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಪಂಗಡಗಳ ಜನರ ಅನುದಾನ ವಿನಿಯೋಗದಲ್ಲಿ ವಿಳಂಬ ಮಾಡುವುದನ್ನು ಸಹಿಸಲಾಗುವುದಿಲ್ಲ. ಪರಿಶಿಷ್ಟರ ಅಭಿವೃದ್ಧಿ ಕೆಲಸಗಳಿಗೆ ನಿಗದಿಯಾದ ಅನುದಾನ ಪರಿಶಿಷ್ಟರ ಕಾಲೋನಿಯ ಕಾಮಗಾರಿಗಳಿಗೆ ನಿರ್ವಹಣೆಯಾಗಬೇಕು. ಯಾವುದೇ ದುರುಪಯೋಗವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಪರಿಶಿಷ್ಟ ಕಲ್ಯಾಣಕ್ಕೆ ಬಿಡುಗಡೆಯಾಗುವ ಅನುದಾನ ಆಯಾ ನಿಗದಿತ ಅವಧಿಯಲ್ಲಿಯೇ ವೆಚ್ಚ ಮಾಡಬೇಕು. ಕಾಲಮಿತಿಯೊಳಗೆ ಕಾರ್ಯಕ್ರಮಗಳು ಅನುಷ್ಠಾನವಾಗಬೇಕು. ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಿ ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈಗಿನಿಂದಲೇ ಪರಿಶಿಷ್ಟ ಜನರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಾಗಿ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಉಪಯೋಜನೆ ವಿಶೇಷ ಘಟಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಕೆ, ಮಂಜೂರಾತಿ, ಸಭೆ ಆಯೋಜನೆ ಇನ್ನಿತರ ಕೆಲಸಗಳನ್ನು ವಿಶೇಷ ಗಮನವಿಟ್ಟು ಶೀಘ್ರ ಕೈಗೆತ್ತಿಕೊಳ್ಳಬೇಕು. ನಿಗಧಿತ ಗುರಿ ಅನುಸಾರ ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್.ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣÁಧಿಕಾರಿ ಕೃಷ್ಣಪ್ಪ ಅನುದಾನ ಬಿಡುಗಡೆ ವಿವರ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.
ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಕಾಶ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರಾದ ಆರ್. ರಾಚಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದೇವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಹದೇವಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು

ನರೇಗಾದಡಿ ತೋಟಗಾರಿಕೆ ಬೆಳೆ ಪ್ರದೇಶ ವಿಸ್ತರಣೆಗೆ ಸಹಾಯಧನ

ಚಾಮರಾಜನಗರ, ಜು. 21 - ತೋಟಗಾರಿಕೆ ಇಲಾಖೆಯು 2018-19ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಿದೆ.
ತೆಂಗು, ಮಾವು, ಸಪೋಟ, ಸೀಬೆ, ನೇರಳೆ, ಪಪ್ಪಾಯ, ಅಂಗಾಂಶ ಕೃಷಿ ಬಾಳೆ, ನಿಂಬೆ, ಇನ್ನಿತರ ತೋಟಗಾರಿಕೆ ಬೆಳೆಯನ್ನು ಹೊಸದಾಗಿ ನಾಟಿ ಮಾಡಲು ಸಹಾಯಧನ ನೀಡಲಿದೆ.
ಆಸಕ್ತ ರೈತರು ಭಾವಚಿತ್ರ, ಅರ್ಜಿ ನಮೂನೆ, ಪಹಣಿ, ಚೆಕ್ ಬಂದಿ, ಚುನಾವಣಾ ಗುರುತಿನ ಚೀಟ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಉದ್ಯೋಗ ಚೀಟಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕು ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆ ಸದುಪಯೋಗ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಜು. 23ರ ಉದ್ಯೋಗ ಮೇಳ ರದ್ದು
ಚಾಮರಾಜನಗರ, ಜು. 21- ಉದ್ಯೋಗ ಮತ್ತು ತರಬೇತಿ ಇಲಾಖೆಯು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಜುಲೈ 23ರಂದು ನಗರದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗಮೇಳವನ್ನು ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 23ರಂದು ಬೃಹತ್, ಮಧ್ಯಮ ಕೈಗಾರಿಕೆ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜು. 21– ಬೃಹತ್, ಮಧ್ಯಮ ಕೈಗಾರಿಕೆ, ಸಕ್ಕರೆ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಕೆ.ಜೆ. ಜಾರ್ಜ್ ಅವರು ಜುಲೈ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕಿನ ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡುವರು. ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮರಾಜನಗರ ಕೈಗಾರಿಕೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಚಾಮರಾಜನಗರ ಕೈಗಾರಿಕೆ ಅಸೋಸಿಯೇಷನ್ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12.45 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 2.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವೇಳಾ ಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ (28-08-2018)

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ವೇಳಾ ಪಟ್ಟಿ ಪ್ರಕಟ : ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ

ಚಾಮರಾಜನಗರ, ಜು. 28 - ಭಾರತ ಚುನಾವಣಾ ಆಯೋಗವು ದಿನಾಂಕ 01.01.2019ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಸಲು ಆದೇಸಿಶಿ ವೇಳಾಪಟ್ಟಿ ಪ್ರಕಟಿಸಿದೆ
ಜುಲೈ16ರಿಂದ ಆಗಸ್ಟ್ 10ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಲಿದ್ದಾರೆ, ಆಗಸ್ಟ್ 27ರಿಂದ ಸೆಪ್ಟಂಬರ್ 15ರವರೆಗೆ ಮತಗಟ್ಟೆಗಳ ಪುನರ್‍ವಿಂಗಡಣೆ, ಮತಗಟ್ಟೆಗಳ ಭೌತಿಕ ಪರಿಶೀಲನೆ ನಡೆಸಲಾಗುತ್ತದೆ. ಸೆಪ್ಟಂಬರ್ 17ರಿಂದ ಅಕ್ಟೋಬರ್ 10ರವರೆಗೆ ಪೂರಕ ಪಟ್ಟಿ ತಯಾರಿಕೆ. ಇಂಟಿಗ್ರೇಶನ್ ಮತ್ತು ಕರಡು ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಅಕ್ಟೋಬರ್ 10ರಿಂದ ನವಂಬರ್ 20ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಯಾ ತಾಲ್ಲೂಕಿನ ಮತಗಟ್ಟೆಗಳಲ್ಲಿ ಬಿ.ಎಲ್.ಓ ಮೂಲಕ ಹಾಗೂ ಆಯಾ ತಾಲ್ಲೂಕು ಕಚೇರಿಯಲ್ಲಿ ಸ್ವೀಕರಿಸಲಾಗುತ್ತದೆ. ಡಿಸೆಂಬರ್ 20ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. 2019ರ ಜನವರಿ 3ರೊಳಗೆ ಮತದಾರರ ಪಟ್ಟಿಗೆ ಹೆಸರು, ಫೋಟೋ ಸೇರ್ಪಡೆ, ಪೂರಕ ಪಟ್ಟಿಗಳನ್ನು ಸಿದ್ದಪಡಿಸಲಾಗುತ್ತದೆ. ಜನವರಿ 4ರಂದು ಅಂತಿಮ ಮತದಾರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ನೇಮಕ ಮಾಡಲಾಗಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು ಆಗಸ್ಟ್ 10ರವರೆಗೆ ಮನೆಮನೆಗೆ ಭೇಟಿನೀಡಿ ಹಾಲಿ ಇರುವ ಮತದಾರರ ಪಟ್ಟಿಯಲ್ಲಿ ಸಂಬಂಧಿಸಿದ ಕುಟುಂಬದ ಎಲ್ಲಾ ಸದಸ್ಯರ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಲು ಮನೆಯ ಮುಖ್ಯಸ್ಥರೊಡನೆ ಪರಿಶೀಲಿಸುವರು.

ಪರಿಶೀಲನಾ ಸಮಯದಲ್ಲಿ ದಿನಾಂಕ 01.01.2018ಕ್ಕೆ 18 ವರ್ಷ ತುಂಬಿರುವ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವ ಹಾಗೂ ದಿನಾಂಕ 01.01.2019ಕ್ಕೆ 18 ವರ್ಷ ತುಂಬುವ ಮತದಾರರ ಹೆಸರನ್ನು ಸೇರ್ಪಡೆಗೊಳಿಸಲು ನಮೂನೆ-6ರಲ್ಲಿ ಅರ್ಜಿಸಲ್ಲಿಸಬೇಕಿದೆ. ಮೃತ ಮತದಾರರ ಹಾಗೂ ಪುನಾರಾವರ್ತನೆಗೊಂಡಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡಲು ನಮೂನೆ-7ರಲ್ಲಿ, ಮತದಾರರ ಪಟ್ಟಿಯಲ್ಲಿರುವ ಹೆಸರುನ್ನು ತಿದ್ದುಪಡಿಮಾಡಲು ನಮೂನೆ-8ರಲ್ಲಿ ಅರ್ಜಿಸಲ್ಲಿಸಬೇಕು. ಒಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಯಿಂದ ಮತ್ತೊಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎ ರಲ್ಲಿ ಹಾಗೂ ಅನಿವಾಸಿಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ಎರಲ್ಲಿ ಅರ್ಜಿ ಸಲ್ಲಿಸಬೇಕು.

ಮತಗಟ್ಟೆ ಮತದ ಅಧಿಕಾರಿಗಳು ಮನೆಮನೆಗೆ ತೆರಳಿ ಪರಿಶೀಲನೆ ನಡೆಸುವ ಸಮಯದಲ್ಲಿ ನಾಗರಿಕರು ಅಗತ್ಯ ಮಾಹಿತಿ ನೀಡಬೇಕು. ಭಾರತ ಚುನಾವಣಾ ಆಯೋಗದ ಮಹತ್ತರವಾದ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಶೇ100ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ನಾಗರಿಕರು ಹೆಚ್ಚಿನ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಮನವಿ ಮಾಡಿದ್ದಾರೆ.

 ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹೆಚ್ಚಿನ ವಿವರಗಳಿಗಾಗಿ ಮತದಾರರ ನೊಂದಣಾಧಿಕಾರಿ ಹಾಗೂ ಕೊಳ್ಳೇಗಾಲ ಉಪವಿಭಾಗ ಅಧಿಕಾರಿ ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರ್, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ: ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ, ಜು. 28:- ಆಧುನಿಕ ಸಮಾಜದಲ್ಲಿ ವಿದ್ಯಾವಂತ ಯುವ ಜನರೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು ಇದರ ಪರಿಹಾರಕ್ಕೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾದೀಶರಾದ ಜಿ. ಬಸವರಾಜ ಅವರು ತಿಳಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ಔಷದ ವಿಪತ್ತು ನಿರ್ಮೂಲನೆ ಕುರಿತ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದಾಗ 16ರಿಂದ 22ರ ವಯೋಮಿತಿಯ ಯುವ ಜನರು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಚಟಕ್ಕೆ ಒಳಗಾಗಿರುವುದು ಆತಂಕಕಾರಿ ವಿಷಯವಾಗಿದೆ. ಅದರಲ್ಲೂ ಅಕ್ಷರಸ್ಥರೆ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವಸ್ತುಗಳ ಬಳಕೆಗೆ ಮುಂದಾಗಿರುವುದು ಕಂಡುಬಂದಿದೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವ ಜನರು ಅಪಾಯಕಾರಿ ವ್ಯಸನಕ್ಕೆ ಮೊರೆಹೋಗಿರುವುದಕ್ಕೆ ವ್ಯಾಪಕವಾಗಿ ಅರಿವು ಮೂಡಿಸಿ ಸರಿದಾರಿಯಲ್ಲಿ ತರಬೇಕಿದೆ ಎಂದರು.
18ವರ್ಷ ಒಳಪಟ್ಟವರಿಗೆ ಧೂಮಪಾನ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ಇದಕ್ಕಾಗಿ ಕಾಯಿದೆ ಸಹ ತರಲಾಗಿದೆ. ಮಧ್ಯ, ಮಾದಕ ವಸ್ತುಗಳ ಮೋಹಕ್ಕೆ ಬಲಿಯಾಗಿ ಜೀವನ ಹಾಳುಮಾಡಿಕೊಳ್ಳುವ ಯುವ ಜನರನ್ನು ಎಚ್ಚರಿಸಿ ಮುಖ್ಯವಾಹಿನಿಗೆ ತರುವ ಕೆಲಸವನ್ನು ಆದ್ಯತೆ ಮೇಲೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹ ಜಾಗೃತಿ ಮೂಡಿಸಲು ಕಾರ್ಯಗಾರಗಳನ್ನು ಆಯೋಜನೆ ಮಾಡುತ್ತಿದೆ ಎಂದು ಜಿಲ್ಲಾ ನ್ಯಾಯಾದೀಶರು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರÀ ಸದಸ್ಯ ಕಾರ್ಯದರ್ಶಿಯವರಾದ ಸಿ.ಜಿ. ವಿಶಾಲಾಕ್ಷಿ ಮಾತನಾಡಿ ಯುವಶಕ್ತಿ ದೇಶದ ಅಮೂಲ್ಯ ಆಸ್ತಿ. ಇಂತಹ ಯುವ ಜನರನ್ನು ಮಾದಕ ಔಷದ, ವಸ್ತುಗಳನ್ನು ನೀಡಿ ದಾರಿ ತಪ್ಪಿಸುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಎಚ್ಚರವಹಿಸಬೇಕಿದೆ. ಉತ್ತಮ ಸಮಾಜ ನಿರ್ಮಾಣಮಾಡಲು ಯುವ ಜನರಿಗೆ ಮಾರ್ಗದರ್ಶನಮಾಡಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ಮಾತನಾಡಿ ಬದಲಾದ ಆಧುನಿಕ ಜೀವನ ಶೈಲಿಯು ಮಾದಕ ವಸ್ತುಗಳ ಬಗ್ಗೆ ಯುವಜನರನ್ನು ಆಕರ್ಷಿಸುತ್ತಿದೆ. ನಗರ ಪ್ರದೇಶಗಳಲ್ಲಿ ಪೋಷಕರ ಪ್ರೀತಿ ವಾತ್ಸಲ್ಯದಿಂದ ವಂಚಿತರಾದವರು, ಸಹಪಾಠಿಗಳ ಪ್ರಭಾವಕ್ಕೆ ಒಳಗಾಗುವರು ಕೆಟ್ಟ ಹವ್ಯಾಸಗಳನ್ನು ರೂಢಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ವ್ಯಾಸಂಗಕ್ಕೆ ಮಾತ್ರ ಮಹತ್ವ ನೀಡಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ದೊರೆತು ನೆಮ್ಮದಿಯ ಬದುಕು ಸಾಗಿಸಬಹುದೆಂದು ಸಲಹೆ ಮಾಡಿದರು.
ಜಂಟಿ ಕೃಷಿ ನಿರ್ದೇಶಕರಾದ ಎಂ. ತಿರುಮಲೇಶ್ ಮಾತನಾಡಿ ವಿದ್ಯಾರ್ಥಿಗಳು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ಚಿಂತನ ಲಹರಿಯನ್ನು ಉತ್ತಮ ವಿಷಯಗಳಿಗೆ ಕೇಂದ್ರೀಕರಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆಯಿಂದ ಓದಿನೆಡೆಗೆ ತೊಡಗಿಕೊಳ್ಳಬೇಕು. ಅನಗತ್ಯ ವಿಚಾರಗಳನ್ನು ದೂರಮಾಡಿದರೆ ಜೀವನ ಸುಂದರವಾಗಲಿದೆ ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಮಾತನಾಡಿ ಯುವ ಜನರು ಮಾದಕ ವಸ್ತುಗಳ ಸೇವನೆಯನ್ನು ಹೆಚ್ಚು ಮಾಡಿರುವ ವಿಷಯವನ್ನು ಇತ್ತೀಚಿನ ವರದಿಗಳು ದೃಢಪಡಿಸಿವೆ. ಪಟ್ಟಣ ನಗರ ಕೇಂದ್ರಿತ ಪ್ರದೇಶಗಳಲ್ಲೇ ಮಾದಕ ವಸ್ತುಗಳಿಗೆ ವಿದ್ಯಾರ್ಥಿಗಳು ಮೋಹಿತರಾಗಿರುವುದು ವಿಷಾದ ಸಂಗತಿ. ವಿದ್ಯಾರ್ಥಿಗಳನ್ನು ಜಾಗೃತಗೊಳಿಸುವ ಕೆಲಸಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಚ್.ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎ. ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿ ಜಯಶೀಲ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್‍ಕುಮಾರ್, ಬಾಲ ನ್ಯಾಯಮಂಡಳಿ ಸದಸ್ಯರಾದ ಟಿ.ಜೆ ಸುರೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ : ಮೂಲಸೌಕರ್ಯ ಪರಿಶೀಲನೆ
ಚಾಮರಾಜನಗರ, ಜು. 28 - ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಹೊರವಲಯದಲ್ಲಿರುವ ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಮೊದಲಿಗೆ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿದ ಸಚಿವರು ಭೋದಕ ವರ್ಗದಿಂದ ಕಾಲೇಜು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.     
ಬಳಿಕ ಪುರುಷವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಚಿವರು ವಿದ್ಯಾರ್ಥಿಗಳ ಕೊಠಡಿಗಳನ್ನು ಖುದ್ದು ವೀಕ್ಷಿಸಿದರು. ಕೊಠಡಿಗಳಲ್ಲಿ ಸರಿಯಾದ ವ್ಯವಸ್ಥೆ ಇದೆಯೇ? ಊಟ ಉಪಹಾರದ ಗುಣಮಟ್ಟ ಚೆನ್ನಾಗಿದೆಯೇ? ಉತ್ತಮ ಸಾಮಾಗ್ರಿಗಳನ್ನು ಬಳಕೆಮಾಡಲಾಗುತ್ತಿದೆಯೇ? ಎಂದು ಪ್ರಶ್ನಿಸಿದರು.
ಅಡುಗೆ ತಯಾರಿಸುವ ಕೋಣೆ, ಅಡುಗೆ ಸಾಮಾಗ್ರಿಗಳನ್ನು ದಾಸ್ತಾನು ಮಾಡಿರುವ ಕೊಠಡಿ, ಊಟದ ಹಾಲ್‍ಗಳನ್ನು ಸಚಿವರು ಪರಿಶೀಲಿಸಿದರು, ಕುಡಿಯುವ ನೀರು ಪೂರೈಸಲು ಅಳವಡಿಸಿರುವ ವ್ಯವಸ್ಥೆಯನ್ನು ವೀಕ್ಷಿಸಿ ಶುದ್ಧ ಸರಬರಾಜಿಗೆ ಕ್ರಮ ಹೇಗೆ ವಹಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದರು, ವಿದ್ಯಾರ್ಥಿಗಳಿಗೆ ಸಿದ್ಧಪಡಿಸಲಾಗುತ್ತಿದ್ದ ಆಹಾರವನ್ನು ಸಹ ವೀಕ್ಷಿಸಿದರು.
ವಿದ್ಯಾರ್ಥಿನಿಯರ ಹಾಸ್ಟಲ್‍ಗೂ ಭೇಟಿಕೊಟ್ಟ ಸಚಿವರು ಊಟ ಶುಚಿತ್ವ, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳು ಸರಿಯಾಗಿ ಇದೆಯೇ? ಎಂದು ಕೇಳಿ ತಿಳಿದುಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಪದೇಪದೇ ವಿದ್ಯುತ್ ಸಂಪರ್ಕ ಕಡಿತವಾಗುತ್ತದೆ. ಜನರೇಟರ್ ವ್ಯವಸ್ಥೆ ಸಮರ್ಪಕವಾಗಿ ಒದಗಿಸಬೇಕು. ವಾರಾಂತ್ಯ ರಜೆಯಲ್ಲಿ ಪಟ್ಟಣಕ್ಕೆ ಹೋಗಿಬರಲು ಬಸ್ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.
ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳಿಗೆ ಜನರೇಟರ್ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಬೇಕು, ಕಾಲೇಜು ಆವರಣದ ಬಳಿ ಘನತ್ಯಾಜ್ಯ ಸುರಿಯುವುದನ್ನು ನಾಳೆಯಿಂದಲೇ ನಿಲ್ಲಿಸಬೇಕು ಎಂದು ಸಚಿವರು ಸೂಚಿಸಿದರು. ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ವಾರದಲ್ಲಿ ರಜೆ ದಿನಗಳಂದು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ನಿರ್ದೇಶನ ನೀಡಿದರು. 
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಹಾಸ್ಟೆಲ್‍ನಲ್ಲಿ ಕೆಲ ವ್ಯವಸ್ಥೆಗಳು ಸರಿಯಿಲ್ಲವೆಂಬ ಕೆಲ ಮಾಹಿತಿ ಹಿನ್ನಲೆಯಲ್ಲಿ ಭೇಟಿ ನೀಡಲಾಗಿದೆ. ಆದರೆ ವಿದ್ಯಾರ್ಥಿಗಳು ಊಟ ಉಪಹಾರ ವ್ಯವ¸ ಬಗ್ಗೆ  ಯಾವುದೇ ದೂರು ನೀಡಿಲ್ಲ. ಬಸ್, ವಿದ್ಯುತ್, ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ. ಈ ಎಲ್ಲಾ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು
ಕಾಲೇಜು ಆವರಣ ಕಾಂಪೌಂಡ್‍ಗೆ 4.25ಕೋಟಿರೂ. ರಸ್ತೆ ನಿರ್ಮಾಣಕ್ಕೆ 5.75ಕೋಟಿರೂ. ಅನುದಾನ ನಿಗದಿಯಾಗಿದ್ದು ಕಾಮಗಾರಿ ನಿರ್ವಹಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆದಷ್ಟು ಶೀಘ್ರವೇ ಕಾಮಗಾರಿ ಆರಂಭವಾಗಲಿದ್ದು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ನಗರಸಭೆ ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ, ಸದಸ್ಯರಾದ ಚೆಂಗುಮಣಿ, ವೈದ್ಯಕೀಯ ಕಾಲೇಜು ಡೀನ್ ಡಾ. ಡಿ.ಹೆಚ್.ರಾಜೇಂದ್ರ, ಜಿಲ್ಲಾ ಸರ್ಜನ್ ಡಾ. ರಘುರಾಮ್, ಡಾ. ಮಹೇಶ್ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.






















ಪರಿಶಿಷ್ಠರ ಮೇಲಿನ ದೌರ್ಜನ್ಯ ಪ್ರಕರಣಗಳ ದಾಖಲು ನಿರಾಕರಿಸುವವರ ವಿರುದ್ಧ ಕ್ರಮ : ಧರ್ಮೇಂದರ್ ಕುಮಾರ್ ಮೀನಾ (28-07-2018)

ಪರಿಶಿಷ್ಠರ ಮೇಲಿನ ದೌರ್ಜನ್ಯ ಪ್ರಕರಣಗಳ ದಾಖಲು ನಿರಾಕರಿಸುವವರ ವಿರುದ್ಧ ಕ್ರಮ  : ಧರ್ಮೇಂದರ್ ಕುಮಾರ್ ಮೀನಾ

ಚಾಮರಾಜನಗರ, ಜು. 28- ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲು ಹಿಂದೇಟು ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪರಿಶಿಷ್ಠ ಜಾತಿ ಪರಿಶಿಷ್ಠ ವರ್ಗಗಳ ಜನರ ಕುಂದುಕೊರತೆ ಸಮಸ್ಯೆ ಆಲಿಕೆ ಕುರಿತ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡಗಳ ಜನರ ಹಿತರಕ್ಷಣೆ ಪೊಲೀಸ್ ಇಲಾಖೆಯ ಮುಖ್ಯ ಕರ್ತವ್ಯ ಕೂಡ ಆಗಿದೆ. ಜಿಲ್ಲೆಯ ಯಾವುದೇ ಭಾಗದಲ್ಲಿ ಪರಿಶಿಷ್ಠರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗಿ ದೂರು ದಾಖಲು ಮಾಡಲು ಮುಂದಾದರೆ ವಿಳಂಬ ಮಾಡದೆ ಸ್ಪಂದಿಸಬೇಕು. ಯಾವುದೇ ಕಾರಣಕ್ಕೂ ಪ್ರಕರಣ ದಾಖಲು ಮಾಡಿಕೊಳ್ಳಲು ನಿರಾಕರಿಸುವುದು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಇಲಾಖೆ ಗಂಭೀರ ಕ್ರಮ ಜರುಗಿಸಲಿದೆ ಎಂದು ಧರ್ಮೇಂದರ್ ಕುಮಾರ್ ಮೀನಾ ತಿಳಿಸಿದರು.
ಪರಿಶಿಷ್ಠರ ಸಮಸ್ಯೆಯು ಸೇರಿದಂತೆ ಯಾವುದೇ ದೂರು ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲು ವಿಳಂಬನೀತಿ ಅನುಸರಿಸುವುದು ಅಥವಾ ನಿರ್ಲಕ್ಷ್ಯವಹಿಸುವುದು ಕಂಡುಬಂದರೆ ನೇರವಾಗಿ ನನ್ನನ್ನೇ ಕಂಡು ದೂರು ನೀಡಬಹುದು. ದೂರವಾಣಿ ಅಥವಾ ಸಂದೇಶ ಮೂಲಕವು ದೂರು ಬಗ್ಗೆ ತಿಳಿಸಿದರೆ ತಾವೇ ಖುದ್ದು ಕ್ರಮ ವಹಿಸಲು ಸೂಚನೆ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಮುಖಂಡರು ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ದಲಿತರು ವಾಸಿಸುವ ಕಾಲೋನಿಗಳಲ್ಲಿ ಆಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಗಮನಕ್ಕೆ ತಂದರು.
ಕೆಲ ಭಾಗಗಳಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ, ಯುವ ಜನರಿಗೆ ಉದ್ಯೋಗ ನೀಡಬೇಕು, ಜನಾಂಗದವರಿಗೆ ಎಲ್ಲಾ ಸೌಲಭ್ಯಗಳು ಬಳಕೆ ಮಾಡಲು ಅಡ್ಡಿ ಮಾಡಲಾಗುತ್ತಿದೆ. ಚರಂಡಿ ಇತರೆ ಸೌಲಭ್ಯಗಳಿಗೂ ತೊಂದರೆಯಾಗುತ್ತಿದೆ. ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸಿದ ಬಳಿಕ ದೂರುದಾರರಿಗೆ ಸ್ವೀಕೃತಿ ನೀಡಬೇಕು ಎಂದು ಗಮನಕ್ಕೆ ತಂದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗಗಳ ಕುಂದುಕೊರತೆ ಸಭೆಯನ್ನು ಆಯೋಜಿಸಬೇಕು ಪೊಲೀಸ್ ಅಧಿಕಾರಿಗಳು ಇಂತಹ ಸಭೆಯನ್ನು ಏರ್ಪಡಿಸಿದರೆ ಇನ್ನಷ್ಟು ಸ್ಥಳೀಯ ಸಮಸ್ಯೆಗಳನ್ನು ನಿವೇದಿಸಿ ಪರಿಹಾರಕ್ಕೆ ಅನುಕೂಲವಾಗುತ್ತದೆ ಎಂದು ಮುಖಂಡರು ಸಲಹೆಮಾಡಿದರು.
ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಸಭೆಯಲ್ಲಿ ಕೇಳಿಬಂದಿರುವ ಸಲಹೆಗಳನ್ನು ಪರಿಗಣಿಸಲಾಗುವುದು. ಪರಿಶಿಷ್ಠರ ಕಾಯ್ದೆ ಅನುಸಾರ ಕ್ರಮವಹಿಸಲಾಗುವುದು ಎಂದರು.
ಅಬಕಾರಿ ಉಪ ಆಯುಕ್ತರಾದ ನಾಗೇಶ್, ಡಿವೈಎಸ್‍ಪಿ ಜಯಕುಮಾರ್, ಪುಟ್ಟಮಾದಯ್ಯ ಮುಖಂಡರಾದ ಕೆ.ಎಂ.ನಾಗರಾಜು, ಅರಕಲವಾಡಿ ನಾಗೇಂದ್ರ, ಪಿ. ಸಂಘಸೇನ, ದೊಡ್ಡಿಂದುವಾಡಿ ಸಿದ್ದರಾಜು, ಆಲೂರು ನಾಗೇಂದ್ರ, ರಾಮಸಮುದ್ರ ಸುರೇಶ್, ಶಿವಣ್ಣ, ಕೃಷ್ಣಯ್ಯ, ಮಾದೇವನಾಯಕ, ಹೊಂಗನೂರು ಕೆಂಪರಾಜು, ಮಾದೇಶ್, ರವಿಕುಮಾರ್, ದೊರೆಸ್ವಾಮಿ ಮತ್ತಿತರರು ಸಭೆಯಲ್ಲಿ ಮಾತನಾಡಿದರು.

ಜುಲೈ 30ರಿಂದ ಭತ್ತ ಖರೀದಿ ಕೇಂದ್ರ ಆರಂಭ : ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ
ಚಾಮರಾಜನಗರ, ಜು. 28  ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸುವ ಸಲುವಾಗಿ ಜುಲೈ 30 ರಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಸಂತೇಮರಹಳ್ಳಿಯ ಎ.ಪಿ.ಎಂ.ಸಿ ಆವರಣ ಮತ್ತು ಕೊಳ್ಳೇಗಾಲದ ಎ.ಪಿ.ಎಂ.ಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ.
ಸರ್ಕಾರದ ಆದೇಶದಂತೆ ಖರೀದಿ ಪ್ರಕ್ರಿಯೆ ನಡೆಯಲಿದೆ. ಜುಲೈ 30 ರಿಂದ ಆಗಸ್ಟ್ 14ರ ವರೆಗೆ ರೈತರ ನೋಂದಣಿ ಕಾರ್ಯ ನಡೆಯಲಿದೆ. ತದನಂತರ ನೋಂದಣಿಯಾದ ರೈತರಿಂದ ಭತ್ತ ಖರೀದಿಸಲಾಗುತ್ತದೆ. ಸಾಮಾನ್ಯ ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 1550ರೂ. ದರದಲ್ಲಿ ಖರೀದಿಸಲಾಗುತ್ತದೆ.
ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಮಾತ್ರ ಭತ್ತ ಖರೀದಿಸಲಾಗುವುದು. ಗರಿಷ್ಠ 75 ಕ್ವಿಂಟಾಲ್‍ಗೆ ಮೀರದಂತೆ ಖರೀದಿಸಲು ಆದೇಶವಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.
ಆಧಾರ್ ನೊಂದಣಿ  ಇರುವ ರೈತರಿಂದ ಮಾತ್ರ ಭತ್ತ ಖರೀದಿ ಮಾಡಲಾಗುತ್ತದೆ. ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯನ್ನು ತಂತ್ರಾಂಶದಲ್ಲಿ ನೋಂದಾಯಿಸಿ ಖರೀದಿಸಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಅವರು ಮನವಿ ಮಾಡಿಕೊಂಡಿದ್ದಾರೆ.

ಭರಚುಕ್ಕಿಗೆ ಜಿಲ್ಲಾಧಿಕಾರಿ ಭೇಟಿ: ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ (02-08-2018)&(03-08-2018)


ಭರಚುಕ್ಕಿಗೆ ಜಿಲ್ಲಾಧಿಕಾರಿ ಭೇಟಿ: ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ  

 ಚಾಮರಾಜನಗರ:ಆ.2  ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳ ಭರಚುಕ್ಕಿಯಲ್ಲಿ ಇದೇ ಆಗಸ್ಟ್ 18 ಹಾಗೂ 19 ರಂದು ಜಲಪಾತೋತ್ಸವ ನಿಗದಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಇಂದು ಭರಚುಕ್ಕಿಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಗತ್ಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.


ವೇದಿಕೆ ಕಾರ್ಯಕ್ರಮ ನಡೆಯುವ ಜಲಪಾತದ ಬಳಿಯ ಸ್ಥಳಕ್ಕೆ ಭೇಟಿ ಕೊಟ್ಟು ವೇದಿಕೆ ನಿರ್ಮಾಣ, ಗಣ್ಯರು, ಆಹ್ವಾನಿತರು, ವೀಕ್ಷಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ ಬಗ್ಗೆ ಕೈಗೊಳ್ಳಬೇಕಿರುವ ಸಿದ್ಧತೆ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ವಿವರಿಸಿದರು.

ಜಲಪಾತಕ್ಕೆ ರಂಗುರಂಗಿನ ಬೆಳಕಿನ ವ್ಯವಸ್ಥೆ, ವೀಕ್ಷಕರು ಸುರಕ್ಷ್ಷಿತವಾಗಿ ಜಲಪಾತ ವೀಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಲಪಾತೋತ್ಸವದಲ್ಲಿ ಆಹಾರ ಮೇಳವನ್ನು ಸಹ ಏರ್ಪಡಿಸಬೇಕಿರುವ ಹಿನ್ನಲೆಯಲ್ಲಿ ಕಳೆದ ಜಲಪಾತೋತ್ಸವ ಸಂದರ್ಭದಲ್ಲಿ ನಿಗದಿಯಾಗಿರುವ ಸ್ಥಳಕ್ಕೂ ಭೇಟಿ ನೀಡಿ ವೀಕ್ಷಿಸಿದರು. ಈ ಬಾರಿಯೂ ಹೆಚ್ಚಿನ ಆಹಾರ ಮಳಿಗೆಗಳನ್ನು ತೆರಯುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಲಪಾತೋತ್ಸವಕ್ಕೆ ಆಗಮಿಸುವ ಜನರ ವಾಹನಗಳ ನಿಲುಗಡೆಗೆ ಗುರುತಿಸಲಾಗಿರುವ ಸ್ಥಳವನ್ನು ವೀಕ್ಷಿಸಿದರು. ಕೂಡಲೇ ವಾಹನ ನಿಲುಗಡೆ ಸ್ಥಳವನ್ನು ಸ್ವಚ್ಚಗೊಳಿಸಿ ಅಣಿ ಮಾಡುವ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದರು.

ಇದಕ್ಕೂ ಮೊದಲು ಭರಚುಕ್ಕಿಯ ಮಯೂರ ಹೋಟೆಲ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಯವರು ಜಲಪಾತೋತ್ಸವ ಸುಗಮ ಆಯೋಜನೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ನಿಗದಿಪಡಿಸಿರುವ ಕರ್ತವ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕೆಂದರು.

ಜಲಪಾತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರು ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಶಿಷ್ಟಾಚಾರ ಅನುಸಾರ ಎಲ್ಲಾ ಸಿದ್ಧತೆಯನ್ನು ಕೈಗೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ಸಮಿತಿಯಲ್ಲಿರುವ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಸಿದ್ಧತಾ ಪರಿಶೀಲನಾ ಸಭೆ ವೇಳೆ ಕೈಗೊಂಡಿರುವ ಪ್ರಗತಿ ಕ್ರಮಗಳ ಕುರಿತು ವಿವರಿಸಬೇಕು ಎಂದು ಕಾವೇರಿಯವರು ತಿಳಿಸಿದರು.  

ಮುಖ್ಯವಾಗಿ ಎರಡು ದಿನಗಳ ಕಾಲ ನಡೆಯುವ ಜಲಪಾತೋತ್ಸವ ಸಮಾರಂಭದಲ್ಲಿ ಉತ್ತಮ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕಿದೆ. ಹೀಗಾಗಿ ಸಾಂಸ್ಕøತಿಕ ಕಲಾ ತಂಡಗಳು, ಕಲಾವಿದರ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಮಾತನಾಡಿ, ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ ಪ್ರಕ್ರಿಯೆಯನ್ನು ಯಾವುದೇ ಗೊಂದಲವಿಲ್ಲದಂತೆ ನಿರ್ವಹಿಸಬೇಕು. ಕಲಾವಿದರ ಅಸಮಾಧಾನಕ್ಕೆ ಅವಕಾಶವಾಗಬಾರದು. ಒಟ್ಟಾರೆ ಜಲಪಾತೋತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ಯಶಸ್ವಿಗೊಳ್ಳಲು ಅಧಿಕಾರಿಗಳು ಪೂರ್ಣಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕಾವೇರಿಯವರು ಮಾತನಾಡಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಬೇಕು, ಕೆಎಸ್‍ಆರ್‍ಟಿಸಿ ವತಿಯಿಂದ ಭರಚುಕ್ಕಿ ಜಲಪಾತೋತ್ಸವಕ್ಕೆ ಹೋಗಿಬರಲು ಹೆಚ್ಚು ಬಸ್ಸುಗಳನ್ನು ಜಿಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದಲೂ ನಿಯೋಜಿಸಬೇಕೆಂದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್‍ವರಿಷ್ಟಾಧಿಕಾರಿ ಗೀತಾ ಪ್ರಸನ್ನ, ಉಪವಿಭಾಗಾಧಿಕಾರಿ ಬಿ.ಫೌಜಿಯಾ ತರುನ್ನುಮ್, ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿ ಧಾಮದ ವಲಯ ಅರಣ್ಯಾಧಿಕಾರಿ ಏಡುಕೊಂಡಲು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ಧನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ತಹಶೀಲ್ದಾರ್ ಚಂದ್ರಮೌಳಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಇತರರು ಹಾಜರಿದ್ದರು.

__________________________________________________

ಡಿ.ಎ.ಆರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಚಾಮರಾಜನಗರ, ಆ. 03 - ಚಾಮರಾಜನಗರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಡಿ.ಎ.ಆರ್) ಹುದ್ದೆಗಳ ನೇಮಕಾತಿಗಾಗಿ 1520  ಅಭ್ಯರ್ಥಿಗಳಿಗೆ ಆಗಸ್ಟ್ 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾಕೇಂದ್ರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಮಹರ್ಷಿ ಭಗೀರಥ (ಚನ್ನಿಪುರದ ಮೋಳೆ) ರಸ್ತೆಯಲ್ಲಿರುವ ಸೇವಾಭಾರತಿ ಶಿಕ್ಷಣ ಸಂಸ್ಥೆ, ನಂಜನಗೂಡು-ಮೈಸೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತು ಮೈಸೂರು ರಸ್ತೆಯಲ್ಲಿರುವ ಬೇಡರಪುರದ ಸುವರ್ಣಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಖಾಲಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಅರ್ಹರಾದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆ ಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳಬಹುದಾಗಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್, ಲ್ಯಾಪ್‍ಟಾಪ್, ಕ್ಯಾಲುಕ್ಯುಲೇಟರ್, ಪೇಜರ್, ಚಿಟ್ಸ್, ನೋಟ್‍ಬುಕ್, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಇತರೆ ಸಾಮಗ್ರಿಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ. ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ ಅರ್ಹತೆ ಮತ್ತು ಮೀಸಲಾತಿ ಆಧಾರದಲ್ಲಿ ನಡೆಯಲಿದ್ದು, ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ, ಹಣ ವಸೂಲಾತಿ, ಪಾರಿತೋಷಕ ನೀಡುವುದು ಸಲ್ಲದು. ಈ ನಿಟ್ಟಿನಲ್ಲಿ ಮದ್ಯವರ್ತಿಗಳ ಭರವಸೆಗಳಿಗೆ ಮಾರುಹೋಗಬಾರದೆಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 5ರಂದು ಡಿ.ಎ.ಆರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ: ನಿಷೇಧಾಜ್ಞೆ

ಚಾಮರಾಜನಗರ, ಆ. 03 - ಚಾಮರಾಜನಗರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಡಿ.ಎ.ಆರ್) ಹುದ್ದೆಗಳ ನೇಮಕಾತಿಗಾಗಿ 1520  ಅಭ್ಯರ್ಥಿಗಳಿಗೆ ಆಗಸ್ಟ್ 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾಕೇಂದ್ರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ನ್ಯಾಯೋಚಿತವಾಗಿ ಹಾಗೂ ಶಾಂತಿ ಸುವ್ಯವಸ್ಥೆಯಿಂದ ನಡೆಸುವ ಸದುದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಿ.ಬಿ. ಕಾವೇರಿ ಅವರು ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.
ಮಹರ್ಷಿ ಭಗೀರಥ (ಚನ್ನಿಪುರದ ಮೋಳೆ) ರಸ್ತೆಯಲ್ಲಿರುವ ಸೇವಾಭಾರತಿ ಶಿಕ್ಷಣ ಸಂಸ್ಥೆ, ನಂಜನಗೂಡು-ಮೈಸೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತು ಮೈಸೂರು ರಸ್ತೆಯಲ್ಲಿರುವ ಬೇಡರಪುರದ ಸುವರ್ಣಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿವೆ.
ಅಲ್ಲದೆ, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.
ಈ ನಿಷೇದಾಜ್ಞೆಯು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿವರ್ಗದವರಿಗೆ ಹಾಗೂ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.





Tuesday, 14 August 2018

ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಲೋಕಸಭಾ ಸದಸ್ಯರಿಂದ ಹಾಲಿನ ಡೇರಿ ಕಾಮಗಾರಿ ವೀಕ್ಷಣೆ
ಚಾಮರಾಜನಗರ, ಆ. 04 - ತಾಲೂಕಿನ ಕುದೇರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಮಹತ್ವಾಕಾಂಕ್ಷಿ ಹಾಲಿನ ಡೇರಿ ನಿರ್ಮಾಣ ಕಾಮಗಾರಿಯನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಇಂದು ವೀಕ್ಷಿಸಿದರು.
ಒಟ್ಟು 3 ಲಕ್ಷ ಲೀಟರ್ ಯೋಜನಾ ಸಾಮಥ್ರ್ಯದ ಹಾಲು ಸಂಸ್ಕರಣಾ ಘಟಕ  ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಲೋಕಸಭಾ ಸದಸ್ಯರು ಬಹುತೇಕ ಪೂರ್ಣಗೊಂಡಿರುವ ಪೂರಕ ವಿವಿಧ ಘಟಕಗಳನ್ನು ಪರಿಶೀಲಿಸಿದರು.
2 ಲಕ್ಷ ಲೀಟರ್ ಸಾಮಥ್ರ್ಯದ ಯುಎಚ್‍ಟಿ ಹಾಲಿನ ಘಟಕ, 30 ಸಾವಿರ ಲೀಟರ್ ಸಾಮಥ್ರ್ಯದ ಮೊಸರು ತಯಾರಿಕಾ ಸ್ಥಾವರ, 4 ಸಾವಿರ ಕೆಜಿ ಬೆಣ್ಣೆ, 3 ಸಾವಿರ ಲೀಟರ್ ತುಪ್ಪ ತಯಾರಿಸಲು ಸಿದ್ಧಪಡಿಸಲಾಗಿರುವ ಯಂತ್ರೋಪಕರಣಗಳನ್ನು ಅಳವಡಿಸಿದ ಘಟಕಗಳನ್ನು ಧ್ರುವನಾರಾಯಣ ವೀಕ್ಷಿಸಿದರು.
ಇದೇವೇಳೆ ಮಾತನಾಡಿದ ಧ್ರುವನಾರಾಯಣ ಅವರು ಚಾಮರಾಜನಗರ ಹಾಲು ಒಕ್ಕೂಟವು ಪ್ರತ್ಯೇಕ ಒಕ್ಕೂಟವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಪ್ರತಿದಿನ 3 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಈ ಹಿಂದೆಯೇ ಆರಂಭವಾಗಿರುವ ಡೇರಿ ಯೋಜನೆ ಕಾಮಗಾರಿಯು ಚುರುಕುಗೊಂಡಿದ್ದು ಬಹಳಷ್ಟು ಶೀಘ್ರವಾಗಿ ಕೆಲಸ ಮುಗಿಯಲಿದೆ. ಈಗಾಗಲೇ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಸೆಪ್ಟೆಂಬರ್ ಮಾಹೆಯಲ್ಲಿ ನೂತನ ಡೇರಿ ಕಾರ್ಯಾರಂಭವಾಗುವ ನಿರೀಕ್ಷೆ ಇದೆ ಎಂದರು.
ಡೇರಿ ಯೋಜನೆ ನಿರ್ವಹಿಸಲು ಅಗತ್ಯವಿರುವ ಎಲ್ಲ ಯಂತ್ರೋಪಕರಣಗಳ ಅಳವಡಿಕೆ ಕೆಲಸ ನಡೆದಿದೆ. ಸೆಪ್ಟೆಂಬರ್ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಡೇರಿ ಕಾರ್ಯ ನಿರ್ವಹಿಸಲು ಎಲ್ಲವೂ ಸಿದ್ಧವಾಗಿದೆ. ಇದರಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಡೇರಿ ನಿರ್ಮಾಣವಾಗುವುದು ಮಹತ್ವದ ಯೋಜನೆಯಾಗಿದೆ. ಹಾಲು ಒಕ್ಕೂಟ ಪ್ರತಿನಿಧಿಗಳು ಸಹ ಯೋಜನೆಗೆ ಶ್ರಮಿಸಿದ್ದಾರೆ. ಸಹಕಾರ ಸಂಘಗಳು ಸಹ ಯೋಜನೆಗೆ ಮುಖ್ಯ ಕೊಡುಗೆಯಾಗಲಿವೆ. ಜನಪ್ರತಿನಿಧಿಗಳೂ ಸಹ ಅತ್ಯಂತ ಪ್ರಾಮುಖ್ಯತೆ ಪಡೆದಿರುವ ಡೇರಿ ಯೋಜನೆಗೆ ಹೆಚ್ಚಿನ ಸಂಪೂರ್ಣ ಸಹಕಾರ, ನೆರವು ನೀಡಿದ್ದಾರೆ ಎಂದರು.
ಹಾಲು ಒಕ್ಕೂಟದ ಅಧ್ಯಕ್ಷರಾದ ಗುರುಮಲ್ಲಪ್ಪ, ನಿರ್ದೇಶಕರಾದ ರವಿಶಂಕರ್, ಮಾದಪ್ಪ, ಪ್ರಮೋದಾ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ವಿಜಯ್ ಕುಮಾರ್, ಮುಖಂಡರಾದ ಬಾಲರಾಜು, ಇತರರು ಈ ಸಂದರ್ಭದಲ್ಲಿ ಇದ್ದರು.


ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ
ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ 

ಚಾಮರಾಜನಗರ, ಆ. 04 - ಕನ್ನಡ ಪುಸ್ತಕ ಪ್ರಾಧಿಕಾರವು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಸಕ್ತ ಆಗಸ್ಟ್ ತಿಂಗಳಲ್ಲಿ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ.
ಕÀನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳಲ್ಲಿ ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸುವ ಉದ್ದೇಶದಿಂದ ಆಗಸ್ಟ್ ಮಾಹೆಯಲ್ಲಿ ಮಾತ್ರ ಪ್ರಾಧಿಕಾರದಿಂದ ಪ್ರಕಟವಾಗಿರುವ ಎಲ್ಲಾ ಪುಸ್ತಕಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಪ್ರಾಧಿಕಾರದಿಂದ ತೆರೆಯಲಾಗಿರುವ ಜಿಲ್ಲೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ, ಬೆಂಗಳೂರಿನ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಪುಸ್ತಕಗಳ ಮಾರಾಟಕ್ಕೆ ವÀ್ಯವಸ್ಥೆ ಮಾಡಿದೆ.
ಅಂತರ್ಜಾಲ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಲ್ಲಿಯೂ ಹಣ ಪಾವತಿಸಿ ಪುಸ್ತಕಗಳನ್ನು ಖರೀದಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ. 080-22484516, 22107704/05 ಅನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಗ್ರಾಮೀಣ ಕುಶಲಕರ್ಮಿಗಳಿಂದ
ವಸತಿ ಕಾರ್ಯಾಗಾರ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 04  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಪ್ರಸಕ್ತ ಸಾಲಿಗೆÀ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು ನಿವೇಶನ ಹೊಂದಿರುವ ಆಸಕ್ತ ಕುಶಲಕರ್ಮಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತÀ್ಯ ದಾಖಲೆಗಳೊಂದಿಗೆ ಆಗಸ್ಟ್ 25ರೊಳಗೆ ಸಲ್ಲಿಸಬೇಕು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆ. 21ರಂದು ನಿಟ್ರೆ ಗ್ರಾವÀುದಲ್ಲಿ ಅಂಚೆ ಸಂತೆ 

ಚಾಮರಾಜನಗರ, ಆ. 04 - ಅಂಚೆ ಇಲಾಖೆಯು ಜಿಲ್ಲೆಯ ಬೇಗೂರು ಹೋಬಳಿಯ ನಿಟ್ರೆ ಗ್ರಾಮದಲ್ಲಿ ಆಗಸ್ಟ್ 21ರಂದು ಅಂಚೆ ಸಂತೆ ಹಮ್ಮಿಕೊಂಡಿದೆ.
ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುತ್ತದೆ.
ನಿಟ್ರೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಹೆಚ್.ಸಿ. ಸದಾನಂದ ಪ್ರಕಟಣೆಯಲ್ಲಿ ಕೋರಿದ್ದಾರೆ.


ಕಾಣೆಯಾದ ಬಾಲಕಿಯ ಸುಳಿವು ನೀಡಲು ಮನವಿ
ಚಾಮರಾಜನಗರ, ಆ. 04 - ಚಾಮರಾಜನಗರದ ಸರ್ಕಾರಿ ಬಾಲಕಿಯರ ಬಾಲಮಂದಿರದಿಂದ ನಾಪತ್ತೆಯಾಗಿರುವ ಮಮತ ಎಂಬ ಬಾಲಕಿಯ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ಕೋಲು ಮುಖ, ಕಪ್ಪು ಬಣ್ಣ, 3.5 ಅಡಿ ಎತ್ತರ, 30 ಕೆಜಿ ತೂಕವಿರುತ್ತಾಳೆ. ಕ್ರೀಮ್ ಬಣ್ಣದ ಟಾಪ್, ಸಿಮೆಂಟ್ ಕಲರ್ ಪ್ಯಾಂಟ್, ರೆಡ್ ಕಲರ್ ದುಪ್ಪಟ ಧರಿಸಿರುತ್ತಾಳೆ.
ಇವಳ ಸುಳಿವು ಸಿಕ್ಕಲ್ಲಿ ಚಾಮರಾಜನಗರದ ಪಟ್ಟಣ ಪೊಲೀಸ್ ಠಾಣೆಗೆ ಅಥವಾ ದೂರವಾಣಿ ಸಂಖ್ಯೆ 08226-222047ಗೆ ತಿಳಿಸುವಂತೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.

ಆ. 9ರಂದು ಜಿಲ್ಲೆಗೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಭೇಟಿ

ಚಾಮರಾಜನಗರ, ಆ. 04 :- ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಡಾ. ಸುಚೇತನ ಸ್ವರೂಪ ಅವರು ಆಗಸ್ಟ್ 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳ ಜತೆಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತು ಸಂವಾದ ನಡೆಸುವರು. ನಂತರ ಬೆಂಗಳೂರಿಗೆ ತೆರಳುವರು.






ಡಿ.ದೇವರಾಜ ಅರಸು, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ,ನಗರಸಭೆ ಚುನಾವಣೆ : ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ (07-08-20108),& (14-08-2018)

ಡಿ.ದೇವರಾಜ ಅರಸು, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ

ಚಾಮರಾಜನಗರ, ಆ. 14- ಜಿಲ್ಲಾಡಳಿತದ ವತಿಯಿಂದ ಹಿಂದುಳಿದ ವರ್ಗಗಳ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಯವರಾದ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಮತ್ತು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ  ಆಯೋಜಿಸಲು ನಿರ್ಧಾರ ಕೈಗೊಳ್ಳಲಾಯಿತು.

ಡಿ. ದೇವರಾಜ ಅರಸು ಜನ್ಮದಿನ ಆಚರಣೆ ಸಂಬಂಧ ಸಲಹೆ ಪಡೆಯುವ ವೇಳೆ ಸಭೆಯಲ್ಲಿ ಹಾಜರಿದ್ದ  ಮುಖಂಡರು ಆಗಸ್ಟ್ 20ರಂದು ಡಿ. ದೇವರಾಜ ಅರಸು ಅವರ ಜನ್ಮದಿನ ಆಚರಿಸಬೇಕಿದೆ. ಕಾಲಾವಕಾಶ ಕಡಿಮೆ ಇದ್ದು ತಡವಾಗಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಅವಧಿಯಲ್ಲಿ ಸಿದ್ಧತಾ ಕಾರ್ಯ ಹೇಗೆ ನಡೆಯಲಿದೆ. ಹೀಗಾಗಿ ಆಗಸ್ಟ್ 20ರ ಬದಲು ಮತ್ತೊಂದು ದಿನ ಕಾರ್ಯಕ್ರಮ ಆಯೋಜಿಸಬೇಕೆಂದು ತಿಳಿಸಿದರು.  

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರು ಗಣ್ಯರ ಲಭ್ಯತೆ ಇನ್ನಿತರ ಅಗತ್ಯ ಸಿದ್ದತೆಗಳನ್ನು ಗಮನಿಸಿಕೊಂಡು ಕಾಯ್ಕ್ರಮಕ್ಕೆ ದಿನಾಂಕ ನಿಗದಿ ಮಾಡಲಾಗುವುದು. ಉಳಿದಂತೆ ಕಾರ್ಯಕ್ರಮಕ್ಕೆ ಆಗಬೇಕಿರುವ ಸಿದ್ದತೆ, ಮುಖ್ಯ ಭಾಷಣಕಾರರ ಆಯ್ಕೆ, ಇತರೆ ಕೆಲಸಗಳನ್ನು ನಿರ್ವಹಿಸಲಾಗುವುದು ಎಂದರು.

ಅರಸು ಅವರ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಬೇಕು. ಅರಸು ಅವರ ಬಗೆಗಿನ ಪುಸ್ತಕಗಳನ್ನು ವಿತರಿಸುವಂತಗಬೇಕು ಎಂದು ಮುಖಂಡರು ಸಲಹೆ ಮಾಡಿದರು.

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 27ರಂದೇ ಹಮ್ಮಿಕೊಳ್ಳಲು ನಿರ್ಣಯ ತೆಗೆದುಕೊಳ್ಳಲಾಯಿತು. ಕಾರ್ಯಕ್ರಮಕ್ಕೂ ಮುಖ್ಯ ಉಪನ್ಯಾಸಕರನ್ನು ಆಯ್ಕೆ ಮಾಡಲು ಹಾಜರಿದ್ದ ಮುಖಂಡರಿಗೆ ಸಲಹೆ ಕೇಳಲಾಯಿತು. ಎಲ್ಲಾ ಅಭಿಪ್ರಾಯ ಆಲಿಸಿ ಅಂತಿಮವಾಗಿ ಉಪನ್ಯಾಸಕರನ್ನು ಅಯ್ಕೆ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರು ಕುರಿತ ಪುಸ್ತಕಗಳ ಮಾರಾಟ, ವಿತರಣೆಗೂ ಸಮಾರಂಭದಲ್ಲಿ ಅವಕಾಶ ಮಾಡಿಕೊಡಬೇಕೆಂಬ ಸಲಹೆ ಕೂಡ ಕೇಳಿಬಂದ ಹಿನ್ನಲೆಯಲ್ಲಿ ಇದಕ್ಕೆ ಪೂರಕವಾಗಿ ಸ್ಪಂದಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. 

ಕಾರ್ಯಕ್ರಮ ಆಯೋಜನೆಗೆ ಎಲ್ಲ ಸಿದ್ದತಾ ಕ್ರಮಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೈಗೊಳ್ಳಲಿದೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸಲು ಅಗತ್ಯವಿರುವ ಸಹಕಾರವನ್ನು ನೀಡಬೇಕೆಂದು ಹೆಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚೆನ್ನಪ್ಪ, ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಸಿ.ಎಂ. ಕೃಷ್ಣಮೂರ್ತಿ, ಚಾ.ರಂ. ಶ್ರೀನಿವಾಸಗೌಡ, ಕೆ.ಎಂ. ನಾಗರಾಜು, ನಿಜಧ್ವನಿ ಗೋವಿಂದರಾಜು, ರಾಮಸಮುದ್ರ ಸುರೇಶ್, ಪರ್ವತರಾಜು, ಅರಕಲವಾಡಿ ನಾಗೇಂದ್ರ, ಗು. ಪುರುಷೋತ್ತಮ್, ಆಲೂರು ನಾಗೇಂದ್ರ, ಕಂದಹಳ್ಳಿ ನಾರಾಯಣ, ನಾಗೇಶ್, ಶಿವಣ್ಣ, ಶಿವಕುಮಾರ್, ವೆಂಕಟೇಶ್, ರಮೇಶ್, ಇತರೆ ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. 

ಆ. 15ರ ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಮಿಕರಿಗೆ ರಜೆ ನೀಡಲು ಸೂಚನೆ

ಚಾಮರಾಜನಗರ, ಆ. 14 - ಸ್ವಾತಂತ್ರ್ಯ ದಿನ ಆಚರಣೆಯ ಆಗಸ್ಟ್ 15ರಂದು ಜಿಲ್ಲೆಯ ಎಲ್ಲಾ ಅಂಗಡಿ, ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಹಾಗೂ ಕೆಲಸಗಾರರಿಗೆ ರಜೆ ನೀಡುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸೂಚಿಸಿದ್ದಾರೆ.

ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬಗಳ ರಜೆ) ಕಾಯಿದೆ ಹಾಗೂ ನಿಯಮಗಳ ಅನ್ವಯ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯಂದು ರಜೆ ನೀಡಬೇಕು. ಆದರೆ ಕಾರ್ಮಿಕರು ರಜೆ ನಿರಾಕರಿಸಿ ಸ್ವಚ್ಚೆಯಿಂದ ಅಂದು ಕೆಲಸ ಮಾಡಲು ಬಯಸಿದರೆ ಅಂತಹ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಒಂದು ಪಟ್ಟು ವೇತನ ನೀಡಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂಚನೆ ನೀಡಿದ್ದಾರೆ. 

ಆ. 15ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ 

ಚಾಮರಾಜನಗರ, ಆ. 14  ಜಿಲ್ಲಾಡಳಿತದ ವತಿಯಿಂದ 72ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಎನ್. ಮಹೇಶ್ ಅವರು ಘನ ಉಪಸ್ಥಿತಿ ವಹಿಸುವರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಶೋಭ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಜೆ 5.30 ರಿಂದ 6.30ರವರೆಗೆ ಅರುಣ್ ಕುಮಾರ್ ಮತ್ತು ತಂಡದವರಿಂದ ದೇಶಭಕ್ತಿ ಗೀತೆ ಗಾಯನ, ಸಂಜೆ 6.30 ರಿಂದ 7.30ರವರೆಗೆ ಶಾಲಾ ಮಕ್ಕಳಿಂದ ಕಾರ್ಯಕ್ರಮ ನಡೆಯಲಿದೆ. 7.30 ರಿಂದ 8 ಗಂಟೆÀಯವರೆಗೆÉ ಚಾಮರಾಜನಗರದ ಅವತಾರ್ ನೃತ್ಯ ಶಾಲೆಯ ಅವತಾರ್ ಪ್ರವೀಣ್ ಮತ್ತು ತಂಡದವರಿಂದ ನೃತ್ಯ ರೂಪಕ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.                      


ಕಬಿನಿ, ಕೆ.ಆರ್.ಎಸ್‍ನಿಂದ ಹೆಚ್ಚು ನೀರು ಬಿಡುಗಡೆ: ಮುನ್ನೆಚ್ಚರಿಕೆ ವಹಿಸಲು ಡಿ.ಸಿ. ಮನವಿ 

ಚಾಮರಾಜನಗರ, ಆ. 14  ಕಬಿನಿ ಜಲಾಶಯ ಹಾಗೂ ಕೆ.ಆರ್.ಎಸ್. ಅಣೆಕಟ್ಟೆಯಿಂದ ಹೆಚ್ಚು ನೀರನ್ನು ನದಿಗೆ ಬಿಡುತ್ತಿರುವ ಸಾಧ್ಯತೆ ಹಿನ್ನಲೆಯಲ್ಲಿ ಕೊಳ್ಳೆಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ.

ಕಬಿನಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್, ಕೆ.ಆರ್.ಎಸ್. ಅಣೆಕಟ್ಟೆಯಿಂದ 1 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂಬ ಮಾಹಿತಿ ಸೀಕರಿಸಲಾಗಿದೆ. ಮಳೆಯು ಅಧಿಕವಾಗುತ್ತಿರುವುದರಿಂದ ಕೆ.ಆರ್.ಎಸ್. ಅಣೆಕಟ್ಟೆಯಿಂದ ಇನ್ನು ಹೆಚ್ಚಿನ ನೀರನ್ನು ಬಿಡುವ ಸಾಧ್ಯತೆ ಇರುವುದಾಗಿ ಮಾಹಿತಿ ಬಂದಿದೆ. ಈ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಮತ್ತು ದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಆಸ್ತಿ-ಪಾಸ್ತಿ, ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನದಿಗಳಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ಜಾನುವಾರು ತೊಳೆಯುವುದು, ಈಜು ಇನ್ನಿತರ ಚಟುವಟಿಕೆಗಳನ್ನು ಮಾಡಬಾರದು. ನದಿ, ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರು ನದಿಗೆ ಇಳಿಯಬಾರದು. ಪ್ರವಾಹದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗರೂಕತೆ ವಹಿಸಲು ಆಗಮಿಸುವ ಅಧಿಕಾರಿ, ಸಿಬ್ಬಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಗರಸಭೆ ಚುನಾವಣೆ : ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ, ಆ. 07 :- ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆಗೆ ನಿಯೋಜಿತರಾಗಿರುವ ಅಧಿಕಾರಿಗಳು ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಗರಸಭೆ ಚುನಾವಣೆಗೆ ನೇಮಕವಾಗಿರುವ ಚುನಾವಣಾ ಅಧಿಕಾರಿ, ಮಾದರಿ ನೀತಿಸಂಹಿತೆ ಪಾಲನೆ ತಂಡ, ಸೆಕ್ಟರ್ ಅಧಿಕಾರಿಗಳು, ಚುನಾವಣಾ ವೆಚ್ಚ ನಿರ್ವಹಣಾ ತಂಡದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಳ್ಳೇಗಾಲ ಹಾಗೂ ಚಾಮರಾಜನಗರ ನಗರಸಭಾ ಚುನಾವಣೆಗೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಗಸ್ಟ್ 10ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಅವಧಿಯೂ ಆರಂಭವಾಗಲಿದೆ. ಹೀಗಾಗಿ ಚುನಾವಣೆ ಕೆಲಸಕ್ಕೆ ನೇಮಕಗೊಂಡಿರುವ ಅಧಿಕಾರಿಗಳು ಚುನಾವಣಾ ಕೆಲಸವನ್ನು ಹಗುರವಾಗಿ ಪರಿಗಣಿಸದೆ ಜವಾಬ್ದಾರಿಯುತವಾಗಿ ಕರ್ತವ್ಯ ನಿಭಾಯಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಎರಡೂ ನಗರಸಭೆಗಳಲ್ಲಿ ತಲಾ 31 ವಾರ್ಡ್‍ಗಳು ಇವೆ. ಚಾಮರಾಜನಗರ ನಗರಸಭೆಯಲ್ಲಿ 61, ಕೊಳ್ಳೇಗಾಲ ನಗರಸಭೆಯಲ್ಲಿ 45 ಮತಗಟ್ಟೆಗಳು ಬರಲಿವೆ. ಈ ಮತಗಟ್ಟೆಗಳಲ್ಲಿ ವಿದ್ಯುತ್, ಕುಡಿಯುವ ನೀರು ಇತರೆ ಮೂಲಸೌಕರ್ಯಗಳು ಲಭ್ಯವಿದೆಯೇ ಎಂಬ ಬಗ್ಗೆ ತುರ್ತಾಗಿ ಮತ್ತೊಮ್ಮೆ ಪರಿಶೀಲಿಸಬೇಕು. ಅಗತ್ಯ ಸೌಲಭ್ಯಗಳು ಬೇಕಿದ್ದರೆ ಕಲ್ಪಿಸುವ ಕೆಲಸವನ್ನು ಶೀಘ್ರವೇ ಪೂರ್ಣಗೊಳಿಸಬೇಕು ಎಂದÀು ನಿರ್ದೇಶನ ನೀಡಿದರು.
ಮಾದರಿ ಚುನಾವಣಾ ಸಂಬಂಧ ಆಗಸ್ಟ್ 2ರಿಂದಲೇ ಸದಾಚಾರಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಪ್ರಕ್ರಿಯೆ ಮುಗಿಯುವ ಸೆಪ್ಟೆಂಬರ್ 1ರವರೆಗೆ ಸದಾಚಾರ ಸಂಹಿತೆ ಇರಲಿದೆ. ಈ ಅವಧಿಯಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಈಗಾಗಲೇ ಸದಾಚಾರ ಸಂಹಿತೆ ಪಾಲನೆ ಸಂಬಂಧ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕಾವೇರಿ ಅವರು ಸೂಚಿಸಿದರು.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ವೆಚ್ಚ ಮಾಡಲಿರುವ ಲೆಕ್ಕಪತ್ರಗಳ ಕುರಿತು ನಿಗಾ ವಹಿಸಲು ನಿಯೋಜಿತರಾಗಿರುವ ಚುನಾವಣಾ ವೆಚ್ಚ ನಿರ್ವಹಣಾ ತಂಡದ ಅಧಿಕಾರಿಗಳು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಅವಧಿ ದಿನದಿಂದಲೇ ಅಭ್ಯರ್ಥಿಗಳ ಖರ್ಚುವೆಚ್ಚವನ್ನು ಲೆಕ್ಕಕ್ಕೆ ಪರಿಗಣಿಸಬೇಕಾಗುತ್ತದೆ. ಸೆಕ್ಟರ್ ಅಧಿಕಾರಿಗಳು ಸಹ ನೇಮಕವಾಗಿದ್ದು ಆಯಾ ನಿಗದಿತ ವಾರ್ಡುಗಳಲ್ಲಿ ಚುನಾವಣಾ ಸಂಬಂಧ ವಹಿಸಬೇಕಿರುವ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರು.
ಚುನಾವಣಾ ಅಕ್ರಮ ತಡೆಗಟ್ಟುವ ಸಲುವಾಗಿ ನಗರಸಭೆ ವ್ಯಾಪ್ತಿಯ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗುತ್ತಿದೆ. ಚಾಮರಾಜನಗರ ನಗರಸಭೆಗೆ ಸಂಬಂಧಿಸಿದಂತೆ 5, ಕೊಳ್ಳೇಗಾಲ ನಗರಸಭೆಗೆ ಸಂಬಂಧಿಸಿದಂತೆ 4 ಚೆಕ್ ಪೋಸ್ಟ್‍ಗಳ ಕಾರ್ಯಚಟುವಟಿಕೆಗಳಿಗೆ ಸ್ಥಳ ನಿಗದಿಮಾಡಲಾಗಿದೆ. ಆಯಾ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಚೆಕ್ ಪೋಸ್ಟ್‍ಗಳು ಕಾರ್ಯ ನಿರ್ವಹಿಸಲಿವೆ. ಇನ್ನೂ ಅಗತ್ಯಬಿದ್ದಲ್ಲಿ ಸ್ಥಾಪನೆ ಮಾಡಬಹುದಾದ ಚೆಕ್ ಪೋಸ್ಟ್‍ಗಳ ವಿವರಗಳನ್ನು ಆಯಾ ಭಾಗದ ಚುನಾವಣಾ ಅಧಿಕಾರಿಗಳು ನೀಡುವಂತೆ ಕಾವೇರಿ ಅವರು ತಿಳಿಸಿದರು.
ಮತದಾನ ಅಧಿಕಾರಿ ಸಿಬ್ಬಂದಿ ಸೇರಿದಂತೆ ಇನ್ನಿತರ ಚುನಾವಣೆ ಕೆಲಸಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲು ಮಾಸ್ಟರ್ ಟ್ರೈನರ್ಸ್‍ಗಳನ್ನು ನೇಮಕ ಮಾಡಲಾಗಿದೆ. ಶ್ರೀಘ್ರವೇ ತರಬೇತಿ ಆಯೋಜನೆಗೆ ಅಗತ್ಯ ಕ್ರಮ ವಹಿಸಬೇಕು. ಒಟ್ಟಾರೆ ಚುನಾವಣೆಗೆ ನಿಯೋಜಿತರಾಗಿರುವ ಎಲ್ಲ ಹಂತದ ಅಧಿಕಾರಿ ಸಿಬ್ಬಂದಿ ಯಾವುದೇ ಲೋಪವಿಲ್ಲದೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಲು ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಇದೇವೇಳೆ ಪವರ್ ಪಾಯಿಂಟ್ ಮೂಲಕ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತರಬೇತಿ ಸಹ ನೀಡಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಚುನಾವಣಾ ಕಾರ್ಯಕ್ಕೆ ನೇಮಕವಾಗಿರುವ ತಹಸೀಲ್ದಾರರು, ನಗರಸಭೆ ಆಯುಕ್ತರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತೆರೆ

ಎನ್‍ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಮಾಹಿತಿ ಅಪ್ ಲೋಡ್ ಮಾಡಲು ಸೂಚನೆ
ಚಾಮರಾಜನಗರ, ಆ. 07 - ಜಿಲ್ಲೆಯಲ್ಲಿ 2014ರಿಂದ 2017ನೇ ಸಾಲಿನವರೆಗೆ ನಡೆದ ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಹರಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಅಕ್ಟೋಬರ್ 31ರೊಳಗೆ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ.
2014, 2015, 2016 ಹಾಗೂ 2017ನೇ ಸಾಲಿನಲ್ಲಿ ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಎಲ್ಲ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ನವದೆಹಲಿಯ ಎಂಎಚ್‍ಆರ್‍ಡಿ ಸಿದ್ಧಪಡಿಸಿರುವ ಎನ್‍ಎಸ್‍ಪಿ - 2.0 ತಿತಿತಿ.sಛಿhoಟಚಿಡಿshiಠಿs.gov.iಟಿ ನಲ್ಲಿ ವಿದ್ಯಾರ್ಥಿಗಳ ವಿವರವನ್ನು ಅಪ್ ಲೋಡ್ ಮಾಡುವುದು ಕಡ್ಡಾಯವಾಗಿದೆ.
ನಿಗದಿತ ಕಡೆಯ ದಿನಾಂಕದ ನಂತರ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿವೇತನಕ್ಕೆ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಶಾಲಾ ಮುಖ್ಯಶಿಕ್ಷಕರಿಂದ ಮಾಹಿತಿ ಅಪ್ ಲೋಡ್ ಮಾಡಿಸುವುದು ಆಯಾ ಬ್ಲಾಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಸಾಧಾರಣ ದೈರ್ಯ, ಸಾಹಸ ಪ್ರದರ್ಶಿಸಿದ ಬಾಲಕ ಬಾಲಕಿಯರಿಗೆ ಪ್ರಶಸ್ತಿ : ಅರ್ಜಿ ಆಹ್ವಾನ
ಚಾಮರಾಜನಗರ, ಆ. 07  ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಸಾಧಾರಣ ದÉೈರ್ಯ ಸಾಹಸ ಪ್ರದರ್ಶಿಸಿದ ಬಾಲಕ ಬಾಲಕಿಯರಿಗೆ ನೀಡುವ 2018-19ನೇ ಸಾಲಿನ ಹೊಯ್ಸಳ ಹಾಗೂ ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
6 ರಿಂದ 18 ªರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 2017ರಿಂದ ಜುಲೈ 2018ರ ನಡುವೆ ನಡೆದಿರುವ ಸಾಧನೆಯನ್ನು ಪರಿಗಣಿಸಲಾಗುವುದು. ದೈರ್ಯ ಶೌರ್ಯ ಕುರಿತ ಜಿಲ್ಲಾಮಟ್ಟದ ಸಾಧನೆ ಪ್ರದರ್ಶಿಸಿದ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಇತರೆ  ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 31ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಸಂಪರ್ಕಿಸುಂತೆ ಇಲಾಖೆ ಪ್ರಕಟಣೆ ತಿಳಿಸಿದೆ.


01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು