Thursday, 16 August 2018

ಭರಚುಕ್ಕಿಗೆ ಜಿಲ್ಲಾಧಿಕಾರಿ ಭೇಟಿ: ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ (02-08-2018)&(03-08-2018)


ಭರಚುಕ್ಕಿಗೆ ಜಿಲ್ಲಾಧಿಕಾರಿ ಭೇಟಿ: ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ  

 ಚಾಮರಾಜನಗರ:ಆ.2  ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳ ಭರಚುಕ್ಕಿಯಲ್ಲಿ ಇದೇ ಆಗಸ್ಟ್ 18 ಹಾಗೂ 19 ರಂದು ಜಲಪಾತೋತ್ಸವ ನಿಗದಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಇಂದು ಭರಚುಕ್ಕಿಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಗತ್ಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.


ವೇದಿಕೆ ಕಾರ್ಯಕ್ರಮ ನಡೆಯುವ ಜಲಪಾತದ ಬಳಿಯ ಸ್ಥಳಕ್ಕೆ ಭೇಟಿ ಕೊಟ್ಟು ವೇದಿಕೆ ನಿರ್ಮಾಣ, ಗಣ್ಯರು, ಆಹ್ವಾನಿತರು, ವೀಕ್ಷಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ ಬಗ್ಗೆ ಕೈಗೊಳ್ಳಬೇಕಿರುವ ಸಿದ್ಧತೆ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ವಿವರಿಸಿದರು.

ಜಲಪಾತಕ್ಕೆ ರಂಗುರಂಗಿನ ಬೆಳಕಿನ ವ್ಯವಸ್ಥೆ, ವೀಕ್ಷಕರು ಸುರಕ್ಷ್ಷಿತವಾಗಿ ಜಲಪಾತ ವೀಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಲಪಾತೋತ್ಸವದಲ್ಲಿ ಆಹಾರ ಮೇಳವನ್ನು ಸಹ ಏರ್ಪಡಿಸಬೇಕಿರುವ ಹಿನ್ನಲೆಯಲ್ಲಿ ಕಳೆದ ಜಲಪಾತೋತ್ಸವ ಸಂದರ್ಭದಲ್ಲಿ ನಿಗದಿಯಾಗಿರುವ ಸ್ಥಳಕ್ಕೂ ಭೇಟಿ ನೀಡಿ ವೀಕ್ಷಿಸಿದರು. ಈ ಬಾರಿಯೂ ಹೆಚ್ಚಿನ ಆಹಾರ ಮಳಿಗೆಗಳನ್ನು ತೆರಯುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಲಪಾತೋತ್ಸವಕ್ಕೆ ಆಗಮಿಸುವ ಜನರ ವಾಹನಗಳ ನಿಲುಗಡೆಗೆ ಗುರುತಿಸಲಾಗಿರುವ ಸ್ಥಳವನ್ನು ವೀಕ್ಷಿಸಿದರು. ಕೂಡಲೇ ವಾಹನ ನಿಲುಗಡೆ ಸ್ಥಳವನ್ನು ಸ್ವಚ್ಚಗೊಳಿಸಿ ಅಣಿ ಮಾಡುವ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಿದರು.

ಇದಕ್ಕೂ ಮೊದಲು ಭರಚುಕ್ಕಿಯ ಮಯೂರ ಹೋಟೆಲ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಯವರು ಜಲಪಾತೋತ್ಸವ ಸುಗಮ ಆಯೋಜನೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ನಿಗದಿಪಡಿಸಿರುವ ಕರ್ತವ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕೆಂದರು.

ಜಲಪಾತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರು ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಶಿಷ್ಟಾಚಾರ ಅನುಸಾರ ಎಲ್ಲಾ ಸಿದ್ಧತೆಯನ್ನು ಕೈಗೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ಸಮಿತಿಯಲ್ಲಿರುವ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಸಿದ್ಧತಾ ಪರಿಶೀಲನಾ ಸಭೆ ವೇಳೆ ಕೈಗೊಂಡಿರುವ ಪ್ರಗತಿ ಕ್ರಮಗಳ ಕುರಿತು ವಿವರಿಸಬೇಕು ಎಂದು ಕಾವೇರಿಯವರು ತಿಳಿಸಿದರು.  

ಮುಖ್ಯವಾಗಿ ಎರಡು ದಿನಗಳ ಕಾಲ ನಡೆಯುವ ಜಲಪಾತೋತ್ಸವ ಸಮಾರಂಭದಲ್ಲಿ ಉತ್ತಮ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕಿದೆ. ಹೀಗಾಗಿ ಸಾಂಸ್ಕøತಿಕ ಕಲಾ ತಂಡಗಳು, ಕಲಾವಿದರ ಪಟ್ಟಿಯನ್ನು ಅಂತಿಮಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಮಾತನಾಡಿ, ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ ಪ್ರಕ್ರಿಯೆಯನ್ನು ಯಾವುದೇ ಗೊಂದಲವಿಲ್ಲದಂತೆ ನಿರ್ವಹಿಸಬೇಕು. ಕಲಾವಿದರ ಅಸಮಾಧಾನಕ್ಕೆ ಅವಕಾಶವಾಗಬಾರದು. ಒಟ್ಟಾರೆ ಜಲಪಾತೋತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ಯಶಸ್ವಿಗೊಳ್ಳಲು ಅಧಿಕಾರಿಗಳು ಪೂರ್ಣಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕಾವೇರಿಯವರು ಮಾತನಾಡಿ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಬೇಕು, ಕೆಎಸ್‍ಆರ್‍ಟಿಸಿ ವತಿಯಿಂದ ಭರಚುಕ್ಕಿ ಜಲಪಾತೋತ್ಸವಕ್ಕೆ ಹೋಗಿಬರಲು ಹೆಚ್ಚು ಬಸ್ಸುಗಳನ್ನು ಜಿಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದಲೂ ನಿಯೋಜಿಸಬೇಕೆಂದರು. 

ಹೆಚ್ಚುವರಿ ಜಿಲ್ಲಾ ಪೊಲೀಸ್‍ವರಿಷ್ಟಾಧಿಕಾರಿ ಗೀತಾ ಪ್ರಸನ್ನ, ಉಪವಿಭಾಗಾಧಿಕಾರಿ ಬಿ.ಫೌಜಿಯಾ ತರುನ್ನುಮ್, ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿ ಧಾಮದ ವಲಯ ಅರಣ್ಯಾಧಿಕಾರಿ ಏಡುಕೊಂಡಲು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ಧನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ತಹಶೀಲ್ದಾರ್ ಚಂದ್ರಮೌಳಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಇತರರು ಹಾಜರಿದ್ದರು.

__________________________________________________

ಡಿ.ಎ.ಆರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಚಾಮರಾಜನಗರ, ಆ. 03 - ಚಾಮರಾಜನಗರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಡಿ.ಎ.ಆರ್) ಹುದ್ದೆಗಳ ನೇಮಕಾತಿಗಾಗಿ 1520  ಅಭ್ಯರ್ಥಿಗಳಿಗೆ ಆಗಸ್ಟ್ 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾಕೇಂದ್ರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಮಹರ್ಷಿ ಭಗೀರಥ (ಚನ್ನಿಪುರದ ಮೋಳೆ) ರಸ್ತೆಯಲ್ಲಿರುವ ಸೇವಾಭಾರತಿ ಶಿಕ್ಷಣ ಸಂಸ್ಥೆ, ನಂಜನಗೂಡು-ಮೈಸೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತು ಮೈಸೂರು ರಸ್ತೆಯಲ್ಲಿರುವ ಬೇಡರಪುರದ ಸುವರ್ಣಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಖಾಲಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಅರ್ಹರಾದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯ ಕರೆ ಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳಬಹುದಾಗಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್, ಲ್ಯಾಪ್‍ಟಾಪ್, ಕ್ಯಾಲುಕ್ಯುಲೇಟರ್, ಪೇಜರ್, ಚಿಟ್ಸ್, ನೋಟ್‍ಬುಕ್, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಇತರೆ ಸಾಮಗ್ರಿಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ. ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ ಅರ್ಹತೆ ಮತ್ತು ಮೀಸಲಾತಿ ಆಧಾರದಲ್ಲಿ ನಡೆಯಲಿದ್ದು, ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ, ಹಣ ವಸೂಲಾತಿ, ಪಾರಿತೋಷಕ ನೀಡುವುದು ಸಲ್ಲದು. ಈ ನಿಟ್ಟಿನಲ್ಲಿ ಮದ್ಯವರ್ತಿಗಳ ಭರವಸೆಗಳಿಗೆ ಮಾರುಹೋಗಬಾರದೆಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ. 5ರಂದು ಡಿ.ಎ.ಆರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ: ನಿಷೇಧಾಜ್ಞೆ

ಚಾಮರಾಜನಗರ, ಆ. 03 - ಚಾಮರಾಜನಗರ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಡಿ.ಎ.ಆರ್) ಹುದ್ದೆಗಳ ನೇಮಕಾತಿಗಾಗಿ 1520  ಅಭ್ಯರ್ಥಿಗಳಿಗೆ ಆಗಸ್ಟ್ 5ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಜಿಲ್ಲಾಕೇಂದ್ರದ 4 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ನ್ಯಾಯೋಚಿತವಾಗಿ ಹಾಗೂ ಶಾಂತಿ ಸುವ್ಯವಸ್ಥೆಯಿಂದ ನಡೆಸುವ ಸದುದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಿ.ಬಿ. ಕಾವೇರಿ ಅವರು ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.
ಮಹರ್ಷಿ ಭಗೀರಥ (ಚನ್ನಿಪುರದ ಮೋಳೆ) ರಸ್ತೆಯಲ್ಲಿರುವ ಸೇವಾಭಾರತಿ ಶಿಕ್ಷಣ ಸಂಸ್ಥೆ, ನಂಜನಗೂಡು-ಮೈಸೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸತ್ಯಮಂಗಲ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತು ಮೈಸೂರು ರಸ್ತೆಯಲ್ಲಿರುವ ಬೇಡರಪುರದ ಸುವರ್ಣಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿವೆ.
ಅಲ್ಲದೆ, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.
ಈ ನಿಷೇದಾಜ್ಞೆಯು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿವರ್ಗದವರಿಗೆ ಹಾಗೂ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.





No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು