ನದಿಗೆ ಹೆಚ್ಚು ನೀರು : ಜನರ ನೆರವಿಗೆ ಸಹಾಯವಾಣಿ- ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿ.ಸಿ.ಮನವಿ
ಚಾಮರಾಜನಗರ, ಜು. 16 :- ಕಬಿನಿ ಜಲಾಶಯ ಹಾಗೂ ಕೆ.ಆರ್.ಎಸ್ ಅಣೆಕಟ್ಟೆಯಿಂದ ಹೆಚ್ಚಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ಕೊಳ್ಳೇಗಾಲ ತಾಲ್ಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಹಾಗೂ ನದಿ ದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮನವಿ ಮಾಡಿದ್ದಾರೆ.ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಜಲಾಶಯಗಳು ಭರ್ತಿಯಾಗಿವೆ. ಕಬಿನಿ ಜಲಾಶಯದಿಂದ 40ಸಾವಿರ ಕ್ಯೂಸೆಕ್ಸ್ ಹಾಗೂ ಕೆ.ಆರ್.ಎಸ್.ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ಸೇರಿದಂತೆ 1,10,000ಕ್ಯೂಸೆಕ್ಸ್ ನೀರನ್ನು ನದಿಗೆ ಬಿಟ್ಟಿರುವುದಾಗಿ ತಿಳಿದು ಬಂದಿದ್ದು ನದಿಯಲ್ಲಿ ಹೆಚ್ಚಿನ ಪ್ರವಾಹ ಬರುವ ಸಂಭವವಿದೆ.
ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಎಡಕುರಿಯ, ಸತ್ತೇಗಾಲ ಗ್ರಾಮಗಳಲ್ಲಿ ಹಾಗೂ ನದಿಯ ತಗ್ಗು ಪ್ರದೇಶ ಹಾಗೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು ಅವರ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಜನರ ನೆರವಿಗಾಗಿ ಸಹಾಯವಾಣಿ ತೆರೆಯಲಾಗಿದೆ. ಯಾವುದೇ ನೆರವು ಅವಶ್ಯವಿದ್ದಲ್ಲಿ ತಹಸೀಲ್ದಾರ್ ಕೊಳ್ಳೇಗಾಲ ತಾಲ್ಲೂಕು ಮೊ.9448625194, ಅಗ್ನಿ ಶಾಮಕ ಅಧಿಕಾರಿ ಚಾಮರಾಜನಗರ ಮೊ.9964263822, ತಾಲ್ಲೂಕು ಕಂಟ್ರೋಲ್ ರೂಮ್ ದೂ.ಸಂ.08224-252046 ಮತ್ತು 252042, ಜಿಲ್ಲಾ ಕಂಟ್ರೋಲ್ ರೂಮ್ ದೂ.ಸಂ.08226-223160, ರಾಜಸ್ವ ನಿರೀಕ್ಷಕರು, ಕಸಬಾ, ಕೊಳ್ಳೇಗಾಲ ಮೊ.9741489698, ಗ್ರಾಮಲೆಕ್ಕಾಧಿಕಾರಿ ಮೊ.9731200229 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು. 19ರಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ - ಸಸಿ ನೆಡುವ ಕಾರ್ಯಕ್ರಮ
ಚಾಮರಾಜನಗರ, ಜು. 18 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲÁ ವಕೀಲರ ಸಂಘ, ಓಡಿಪಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜುಲೈ 19ರಂದು ಬೆಳಿಗ್ಗೆ 10 ಗಂಟೆಗೆ ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ - ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಓಡಿಪಿ ಸಂಸ್ಥೆ ನಿರ್ದೇಶಕರಾದ ವಂ.ಸ್ವಾಮಿ. ಸ್ನಾನಿ ಡಿ ಅಲ್ಮೇಡಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್, ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮಲತಾ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರೆತನ್ ಕುಮÁರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಂ. ರವಿ, ಗಾಳಿಪುರ ನಗರಸಭೆ ಸದಸ್ಯರಾದ ಮಹೇಶ್, ಓಡಿಪಿ ಸಂಸ್ಥೆಯ ಮಹಿಳೋದಯ ಮಹಿಳಾ ಒಕ್ಕೂಟದ ಸಂಯೋಜಕರಾದ ಸುನೀತಾ, ಬಾಲ ನ್ಯಾಯ ಮಂಡಳಿ ಸದಸ್ಯರಾದ ಟಿ.ಜಿ. ಸುರೇಶ್, ಕಾಗಲವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ, ಸದಸ್ಯರಾದ ಜ್ಯೋತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ವಿವಿಧ ಯೋಜನೆಯಡಿ ಸಾಲಸೌಲಭ್ಯಕ್ಕೆ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 18 :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2018-19ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ನೀಡುವ ಸಾಲಸೌಲಭ್ಯಕ್ಕೆ ಮತೀಯ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಿದೆ.
ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರು ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ಯೋಜನೆ, ಶ್ರಮಶಕ್ತಿ, ಮೈಕ್ರೋಸಾಲ, ಅರಿವು ಸಾಲ (ವಿದ್ಯಾಭ್ಯಾಸಕ್ಕೆ), ಗಂಗಾಕಲ್ಯಾಣ ಯೋಜನೆ, ಪಶುಸಂಗೋಪನೆ, ಕೃಷಿ ಯಂತ್ರೋಪಕರಣ ಕೊಳ್ಳಲು ಅಲ್ಪಸಂಖ್ಯಾತರ ಕಲ್ಯಾಣ ಯೋಜನೆ, ಆಟೋಮೊಬೈಲ್ ಸರ್ವೀಸ್, ರೇಷ್ಮೆ ಚಟುವಟಿಕೆ ತರಬೇತಿ ಮತ್ತು ಸಾಲ ಯೋಜನೆ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ, ಕೃಷಿ ಭೂಮಿ ಖರೀದಿ, ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಹಿಂತಿರುಗಿರುವ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಮನೆ ಮಳಿಗೆ, ಗೃಹ ನಿವೇಶನ ಖರೀದಿ ಮತ್ತು ಮನೆ ನಿರ್ಮಾಣಕ್ಕೆ ಪಡೆದ ಸಾಲದ ಮೇಲಿನ ಬಡ್ಡಿ ಸಹಾಯಧನ (ಕ್ರಿಶ್ಚಿಯನ್ ಸಮುದಾಯದವರಿಗೆ ಮಾತ್ರ) ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.
ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಾಗಿದ್ದಲ್ಲಿ 81 ಸಾವಿರ, ನಗರ ಪ್ರದೇಶದವರಾಗಿದ್ದಲ್ಲಿ 1 ಲಕ್ಷದ 3 ಸಾವಿರ ರೂ. ಮೀರಿರಬಾರದು. ಅರಿವು ಯೋಜನೆಗೆ ಈ ಮಿತಿ ಅನ್ವಯವಾಗುವುದಿಲ್ಲ.
ಅರ್ಜಿದಾರರು ವಿಳಾಸ ದೃಢೀಕರಣಕ್ಕಾಗಿ ಆಧಾರ್ ಪ್ರತಿ ಸಲ್ಲಿಸಬೇಕು ಮತ್ತು ಬ್ಯಾಂಕ್ ಉಳಿತಾಯ ಖಾತೆಗೆ ಹೊಂದಾಣಿಕೆ ಮಾಡಬೇಕು. ನಿಗಮದ ಸೌಲಭ್ಯವನ್ನು ಈ ಹಿಂದೆ ಪಡೆದವರು ಮತ್ತೆ ಸಾಲಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
ವಿವಿಧ ಯೋಜನೆಗಳಡಿ ಸಾಲ ಬಯಸಿ ಭರ್ತಿ ಮಾಡಿದ ಅರ್ಜಿಗಳನ್ನು ವೆಬ್ ಪೇಜ್‍ನಲ್ಲಿ ಞmಜಛಿ.ಞಚಿಡಿ.ಟಿiಛಿ.iಟಿ/ಟoಚಿಟಿ/ಟogiಟಿ.ಚಿsಠಿx ಮತ್ತು ಅರಿವು (ವಿದ್ಯಾಭ್ಯಾಸ ಸಾಲ) ಯೋಜನೆ ಅರ್ಜಿಗಳನ್ನು ವೆಬ್ ಪೇಜ್‍ನಲ್ಲಿ ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ. 08226-222332 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜಿಲ್ಲಾ ವಿಶೇಷ ಕ್ರೀಡಾಕೂಟಗಳ ವೇಳಾಪಟ್ಟಿ ಪ್ರಕಟ
ಚಾಮರಾಜನಗರ, ಜು. 18 - ಸಾರ್ವಜನಿಕ ಶಿಕ್ಷಣ ಇಲಾಖೆಯು 14 ರಿಂದ 17ರ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ನೇರ ಜಿಲ್ಲಾಮಟ್ಟದ ವಿಶೇಷ ಕ್ರೀಡೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯಲ್ಲಿ ಜುಲೈ 23ರಂದು ಬ್ಯಾಸ್ಕೆಟ್ ಬಾಲ್, 24ರಂದು ಹ್ಯಾಂಡ್ ಬಾಲ್, ಆಗಸ್ಟ್ 1ರಂದು 16 ವರ್ಷದ ಬಾಲಕರಿಗೆ ಕ್ರಿಕೆಟ್ ಕ್ರೀಡೆ ನಡೆಸಲಿದೆ. ಜುಲೈ 25ರಂದು ಯಳಂದೂರಿನ ಎಸ್‍ಡಿವಿಎಸ್ ಶಾಲೆಯಲ್ಲಿ ಯೋಗ, ಕೊಳ್ಳೇಗಾಲದ ಎಸ್‍ವಿಕೆ ಶಾಲೆಯಲ್ಲಿ ಜುಲೈ 26ರಂದು ಚೆಸ್, 27ರಂದು ಟಿಟಿ, ಜುಲೈ 30ರಂದು ಕೊಳ್ಳೇಗಾಲದ ಆದರ್ಶ ಶಾಲೆಯಲ್ಲಿ ಹಾಕಿ ಸ್ಪರ್ಧೆಗಳು ನಡೆಯಲಿವೆ.
ಜುಲೈ 31ರಂದು ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಫುಟ್ ಬಾಲ್, ಷಟಲ್ ಬ್ಯಾಡ್ಮಿಂಟನ್, ಆಗಸ್ಟ್ 2ರಂದು ಕೊಳ್ಳೇಗಾಲದ ಕೆಯುಸಿ ಶಾಲೆಯಲ್ಲಿ ಲಾನ್ ಟೆನಿಸ್, ಆಗಸ್ಟ್ 7ರಂದು ಕೊಳ್ಳೇಗಾಲದ ಲಯನ್ಸ್ ಶಾಲೆಯಲ್ಲಿ ಕರಾಟೆ ಕ್ರೀಡೆ ನಡೆಯಲಿದೆ.
ಜುಲೈ 20ರೊಳಗೆ ಶಾಲಾ ಹೋಬಳಿ ಮಟ್ಟದ ಕ್ರೀಡಾಕೂಟ, ಆಗಸ್ಟ್ 25ರೊಳಗೆ ತಾಲೂಕು ಮಟ್ಟದ ಕ್ರೀಡಾಕೂಟ ಪೂರ್ಣಗೊಳ್ಳಲಿದೆ. ಆಗಸ್ಟ್ 29, 30ರಂದು ಜಿಲ್ಲಾಮಟ್ಟದ ಪಂದ್ಯಾಟ, ಸೆಪ್ಟೆಂಬರ್ 18, 19ರಂದು ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. ದೇವರಾಜ ಅರಸು ನಿಗಮದಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ : ಅರ್ಜಿ ಆಹ್ವಾನ
ಚಾಮರಾಜನಗರ, ಜು. 18 - ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ: 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1.00 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲು ಅರ್ಜಿ ಆಹ್ವಾನಿಸಿದೆ.
2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿ. ಮೂಲಕ ಸೀಟು ಪಡೆದು ಡಿಪ್ಲೋಮೊ ಲ್ಯಾಟರಲ್ ಎಂಟ್ರಿ (ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿ.ಜಿ.ಕೋರ್ಸ್‍ಗಳಾದ ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್., ಎಂ.ಇ., ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಸಾಲ ಲಭಿಸಲಿದೆ.
ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಅದೆ ಉಪಜಾತಿಗಳನ್ನು ಹೊರತುಪಡಿಸಿ). ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷ ರೂ. ಮಿತಿಯಲ್ಲಿ ಇರಬೇಕು.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಬೇಕು. ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನವಾಗಿದೆ.
ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿದ ಕೋರ್ಸ್‍ಗಳಾದ ಪಿ. ಹೆಚ್.ಡಿ., ಬಿ.ಸಿ.ಎ/ಎಂ.ಸಿ.ಎ., ಎಂ. ಎಸ್. ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿಎಸ್ಸಿ ಪ್ಯಾರಾ ಮೆಡಿಕಲ್, ಬಿ.ಎಸ್ಸಿ ಬಯೋ ಟೆಕ್ನಾಲಜಿ, ಬಿ.ಟೆಕ್, ಬಿ.ಪಿ.ಟಿ., ಜಿ.ಎನ್.ಎಂ., ಬಿ.ಹೆಚ್.ಎಂ., ಎಂ.ಡಿ.ಎಸ್, ಎಂ.ಎಸ್.ಡಬ್ಲ್ಯೂ., ಎಲ್. ಎಲ್.ಎಂ., ಎಂ.ಎಫ್.ಎ., ಎಂ.ಎಸ್ಸಿ ಬಯೋಟೆಕ್ನಾಲಜಿ., ಎಂ.ಎಸ್ಸಿ. ಎಜಿ., ಎಂ.ಡಿ.ಎಸ್., ಎಂ.ಎಸ್. ಡಬ್ಲ್ಯೂ., ಎಲ್.ಎಲ್.ಎಂ., ಎಂ.ಎಫ್.ಎ., ಎಂ.ಎಸ್ಸಿ. ಬಯೋಟೆಕ್ನಾಲಜಿ., ಎಂ.ಎಸ್ಸಿ. ಎಜಿ.ಗೆ 2018-19ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಸರ್ಕಾರಿ/ಅನುದಾನಿತ ಕಾಲೇಜುಗಳಿಗೆ ನೇರ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಜುಲೈ 25ರೊಳಗೆ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಆಗಸ್ಟ್ 4ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಚಾಮರಾಜನಗರ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08226-223587 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವಿವಿಧ ತೋಟಗಾರಿಕೆ ಸೌಲಭ್ಯಗಳಿಗೆ ಸಹಾಯಧನ
ಚಾಮರಾಜನಗರ, ಜು. 18 - ತೋಟಗಾರಿಕೆ ಇಲಾಖೆಯು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ, ಶೀಥಲ ಗೃಹ, ಫ್ರೀಕೂಲಿಂಗ್, ಶೀಥಲ ವಾಹನ, ಹಣ್ಣು ಮಾಗಿಸುವ ಕೇಂದ್ರ, ಮೌಲ್ಯವರ್ಧಿತ ಮತ್ತು ಸಂಸ್ಕರಣಾ ಘಟಕ, ಆಹಾರ ಸಂರಕ್ಷಣೆ ಮತ್ತು ಸಾಮಥ್ರ್ಯ ಅಭಿವೃದ್ಧಿ, ಅರಿಶಿನ ಒಣಗಿಸುವ ಘಟಕ, ಅಣಬೆ ಉತ್ಪಾದನಾ ಘಟಕ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಿದೆ.
ಆಸಕ್ತರು ಅರ್ಜಿ ನಮೂನೆ ಜತೆ ಭಾವಚಿತ್ರ, ಪಹಣಿ, ಮ್ಯೂಟೇಷನ್, ಖಾತೆ, ಚೆಕ್ ಬಂದಿ, ಗ್ರಾಮ ನಕ್ಷೆ, ಬ್ಯಾಂಕ್ ವಿವರ, ಪ್ರಾಜೆಕ್ಟ್ ರಿಪೋರ್ಟ್, ಇನ್ನಿತರ ದಾಖಲೆಗಳೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಪ್ರಸ್ತಾವನೆ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಗುರುಸ್ವಾಮಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಾಮರಾಜನಗರ (ಮೊ. 9663238008, 94811881592), ಬಿ.ಎಂ ಶಿವಲಿಂಗಪ್ಪ, ಗುಂಡ್ಲುಪೇಟೆ - ಮೊ. 9945764867, ಎಚ್. ಶಶಿಧರ್, ಕೊಳ್ಳೇಗಾಲ, ಮೊ. 9844364293, ಕೇಶವ್, ಯಳಂದೂರು - ಮೊ. 9480536610 ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ.
ತೋಟಗಾರಿಕೆ ಬೆಳೆಗಾರರು ರೈತರಿಗೆ ನೀರಿನ ಟ್ಯಾಂಕರ್ ಖರೀದಿಗೆ ಸಹಾಯಧನ
ಚಾಮರಾಜನಗರ, ಜು. 18- ತೋಟಗಾರಿಕೆ ಇಲಾಖೆಯು ರೈತರು ಬೆಳೆಗಾರರಿಗೆ ನೀರಿನ ಟ್ಯಾಂಕರ್ ಖರೀದಿಸಿಕೊಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರ ಹೆಸರಿನಲ್ಲಿ ಪಹಣಿ ಇರಬೇಕು. ಸಾಮಾನ್ಯ ವರ್ಗದ ರೈತರಾಗಿದ್ದಲ್ಲಿ ಕನಿಷ್ಟ 1 ಹೆಕ್ಟೇರ್ ಪ್ರದೇಶದಲ್ಲಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ 1 ಎಕರೆ ಪ್ರದೇಶದಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆ ಬೆಳೆಯುತ್ತಿದ್ದು ಕನಿಷ್ಟ 30 ಹೆಚ್‍ಪಿ ಸಾಮಥ್ರ್ಯದ ಟ್ರ್ಯಾಕ್ಟರ್ ಹೊಂದಿರಬೇಕು.
ಅರ್ಜಿಯೊಂದಿಗೆ ಭಾವಚಿತ್ರ, ಪ್ರಸಕ್ತ ಸಾಲಿನ ಪಹಣಿ, ಮ್ಯೂಟೇಷನ್, ಚೆಕ್ ಬಂದಿ, ಕಂದಾಯ ಇಲಾಖೆಯಿಂದ ಪಡೆದ ಗಣಕೀಕೃತ ಬೆಳೆ ದೃಢೀಕರಣ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಟ್ರ್ಯಾಕ್ಟರ್ ಆರ್‍ಸಿ ಪುಸ್ತಕ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜು. 24ರಂದು ಕಬ್ಬಹಳ್ಳಿಯಲ್ಲಿ ರಕ್ತದಾನ ಶಿಬಿರ
ಚಾಮರಾಜನಗರ, ಜು. 18- ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಶ್ರೀಮತಿ ಸುಬ್ಬಮ್ಮ ಮತ್ತು ಶ್ರೀ ಸಿರಿಯಪ್ಪನವರ ಸರ್ಕಾರಿ ಸಮುದಾಯ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 24ರಂದು ಬೆಳಿಗ್ಗೆ 10 ಗಂಟೆಗೆ ಕಬ್ಬಹಳ್ಳಿಯ ಶ್ರೀ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಆಸಕ್ತರು ರಕ್ತದಾನ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ವಿವರಗಳಿಗೆ ಪ್ರಾಂಶುಪಾಲರಾದ ಡಾ. ಎನ್.ಎಸ್. ಮಹದೇವಪ್ರಸಾದ್, ಮೊ. 9481320044 ಹಾಗೂ ಎಂ. ಪ್ರಭುಸ್ವಾಮಿ, ಮೊ. 9741522341 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ನಗರಸಭೆ ಚುನಾವಣೆ: ಮತದಾರರ ಪಟ್ಟಿ ಪ್ರಕ್ರಿಯೆ ಸಮರ್ಪಕ ನಿರ್ವಹಣೆಗೆ ವೀಕ್ಷಕರ ಸೂಚನೆ
ಚಾಮರಾಜನಗರ, ಜು. 18 :- ಮುಂಬರುವ ದಿನಗಳಲ್ಲಿ ನಡೆಯಲಿರುವ ಜಿಲ್ಲೆಯ ನಗರಸಭಾ ಚುನಾವಣೆ ಹಿನ್ನಲೆಯಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗÀದಂತೆ ನಿಗಾ ವಹಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಕುರಿತ ಚುನಾವಣಾ ವೀಕ್ಷಕರಾದ ಡಾ. ಆರುಂಧತಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆಗೆ ನಡೆಯಲಿರುವ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಮೊದಲಿಗೆ 2018ರ ನಗರಸಭಾ ಚುನಾವಣೆ ಕುರಿತ ಮತದಾರರ ಕರಡು ಪಟ್ಟಿ ತಯಾರಿಕೆ ಸಂಬಂಧ ನಗರಸಭೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಚುನಾವಣಾ ವೀಕ್ಷಕರು ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪಗಳಿಗೆ ಅವಕಾ± ನೀಡಬಾರದು ಎಂದರು.
ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ 2013ರ ಚುನಾವಣೆಯಲ್ಲಿ ತೆರೆಯಲಾಗಿದ್ದ 58 ಮತಗಟ್ಟೆಗಳನ್ನು ಈ ಬಾರಿ ವಾರ್ಡ್‍ಗಳಿಗನುಗುಣವಾಗಿ 61ಕ್ಕೆ ಹೆಚ್ಚಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 9 ಸೂಕ್ಷ್ಮ ಮತ್ತು 6 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಮತದಾರರ ಪಟ್ಟಿ ಕುರಿತು ದಾಖಲಾಗಿರುವ ದೂರು ಹಾಗೂ ಆಕ್ಷೇಪಣೆಗಳನ್ನು ಸಮರ್ಪಕವಾಗಿ ಪರಿಶೀಲಿಸಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ 31 ವಾರ್ಡ್‍ಗಳಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಾಗಿ 45 ಮತಗಟ್ಟೆಗಳನ್ನು ತೆರೆಂiÀiಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವಂತೆ 10 ಸೂಕ್ಷ್ಮ ಹಾಗೂ 20 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಮತದಾರರ ಪಟ್ಟಿ ಸಿದ್ದಪಡಿಸುವಲ್ಲಿ ಬರುವ ಆಕ್ಷೇಪಣೆ, ದೂರುಗಳನ್ನು ಸಂಬಂಧsಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುವುದರೊಂದಿಗೆ ವೈಯಕ್ತಿಕವಾಗಿಯು ಸರಿ ಇದೆಯೆ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು ಎಂದು ಡಾ. ಆರುಂಧತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಅವರು ಮಾತನಾಡಿ ಇತ್ತೀಚಿಗಷ್ಟೆ ವಿಧಾನಸಭಾ ಚುನಾವಣೆ ಯಶಸ್ವಿಯಾಗಿ ನಿರ್ವಹಿಸಲಾಗಿದೆ. ನಗರಸಭಾ ಚುನಾವಣೆಯನ್ನು ಸಹ ಹಗುರವಾಗಿ ಪರಿಗಣಿಸದೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು. ವೀಕ್ಷಕರು ನೀಡಿರುವ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿನ ಪೂರ್ವಸಿದ್ದತೆಗಳನ್ನು ಸಂಬಂಧಪಟ್ಟ ತಹಶೀಲ್ದಾರರು ಹಾಗೂ ನಗರಸಭೆ ಆಯುಕ್ತರು ಹೊಂದಾಣಿಕೆಯಿಂದ ಕೈಗೊಳ್ಳಬೇಕು ಎಂದರು.
ಚುನಾವಣಾ ಕೈಪಿಡಿಯಲ್ಲಿರುವ ಅಂಶಗಳನ್ನು ಮನನ ಮಾಡಿಕೊಳ್ಳಬೇಕು. ಮತದಾರರು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಮತಗಟ್ಟೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಬೇಕು. ಯಾವುದೇ ಆಕ್ಷೇಪಣೆ, ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಮತಗಟ್ಟೆಗಳಲ್ಲಿ ಮತದಾನಕ್ಕೆ ಅನುಕೂಲವಾಗುವ ಸಲುವಾಗಿ ಮತಗಟ್ಟೆಗಳನ್ನು ನೆಲಮಹಡಿಯಲ್ಲಿ ತೆರೆಯಬೇಕು. ಕುಡಿಯುವ ನೀರು, ದೀಪದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಉಪ ವಿಭಾಗಾಧಿಕಾರಿ ಫೌಜಿಯಾ ತರನ್ನುಂ, ತಹಶೀಲ್ದಾರರು ನಗರಸಭೆ ಅಧಿಕಾರಿಗಳು ಇತರರು ಸಭೆಯಲ್ಲಿ ಹಾಜರಿದ್ದರು.
ಜು. 17ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಚಾಮರಾಜನಗರ, ಜು. 16 ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 17ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ (ಕೊಠಡಿ ಸಂಖ್ಯೆ 103) ಪೂರ್ವಭಾವಿ ಸಭೆ ಕರೆಯಲಾಗಿದೆ.
ಜಿಲ್ಲೆಯ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಕನ್ನಡಪರ ಸಂಘಟನೆಗಳ ಮುಖಂಡರು ಸಭೆಗೆ ಆಗಮಿಸಿ ಸಲಹೆ, ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪÀ್ರಕಟಣೆಯಲ್ಲಿ ಕೋರಿದ್ದಾರೆ.
ಜು. 17ರಂದು ನಗರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಚಾಮರಾಜನಗರ, ಜು. 16 - ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಚಾಮರಾಜೇಶ್ವರ ದೇವಾಲಯದ ಬಳಿ ಜಾಥಾ ಹೊರಡಲಿದೆ. ಬೆಳಿಗ್ಗೆ 10 ಗಂಟೆಗೆ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್.ಮಹೇಶ್ ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮಕೃಷ್ಣ ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಪ್ರಶಸ್ತಿ ಪ್ರಧಾನ ಮಾಡುವರು.
ಶಾಸಕರಾದ ಆರ್.ನರೇಂದ್ರ, ಸಿ.ಎಸ್.ನಿರಂಜನ್ ಕುಮಾರ್, ಮರಿತಿಬ್ಬೆಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್.ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ.ಯೋಗೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎಸ್.ದಯಾನಿಧಿ, ನಗರಸಭೆ ಅಧ್ಯಕ್ಷರಾದ ಶೋಭಾ, ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪಾನ್ಯಾಸಕರಾದ ಎಸ್.ರಾಮಕೃಷ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪಿಎಂಇಜಿಪಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.
ಚಾಮರಾಜನಗರ, ಜು. 16:- ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಕಾರ್ಯಕ್ರಮ (ಪಿಎಂಇಜಿಪಿ) ದಡಿ ಕೈಗಾರಿಕಾ, ಸೇವಾ ಘಟಕಗಳಿಗೆ ಸಾಲ ನೀಡುವ ಸಲುವಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕೈಗಾರಿಕಾ ಘಟಕಗಳಿಗೆ 25 ಲಕ್ಷ ರೂ.ವರೆಗೆ ಹಾಗೂ ಸೇವಾ ಘಟಕಗಳಿಗೆ 10 ಲಕ್ಷ ರೂವರೆಗೆ ಸಾಲ ನೀಡಲಾಗುತ್ತದೆ. ಶೇ.25 ರಿಂದ 35 ರಷ್ಟು ಸಹಾಯಧನ ನೀಡಲಾಗುತ್ತದೆ.
ಯೋಜನೆಯು ಹೊಸ ಉದ್ದಿಮೆದಾರರಿಗೆ ಮಾತ್ರ ಅನ್ವಯಿಸುತ್ತದೆ. ಅರ್ಜಿಯೊಂದಿಗೆ ಭಾವಚಿತ್ರ, ಆಧಾರ್ ಕಾರ್ಡ್, ವಿಳಾಸದ ಪುರಾವೆ, ವಿದ್ಯಾರ್ಹತೆ, ಜಾತಿ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ (ಗ್ರಾಮೀಣರಿಗೆ ಮಾತ್ರ) ಯೋಜನಾ ವರದಿ ಪ್ರತಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ವೆಬ್‍ಸೈಟ್ ತಿತಿತಿ.ಞviಛಿ.oಡಿg.iಟಿ/ತಿತಿತಿ.ಠಿmegಠಿ.iಟಿ ನೋಡಬಹುದು. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಗ್ರಾಮೋದ್ಯೋಗ ಮಂಡಳಿ ಕಚೇರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಎಂ.ಎನ್.ಮುರುಳೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜು. 16:- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜುಲೈ 17ಹಾಗೂ 18ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ 17ರಂದು ಸಂಜೆ 5.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಬಳಿಕ ಕೊಳ್ಳೇಗಾಲದಲ್ಲೇ ವಾಸ್ತವ್ಯ ಹೂಡುವರು.
ಜುಲೈ 18ರಂದು ಬೆಳಿಗ್ಗೆ 11ಗಂಟೆಗೆ ಕೊಳ್ಳೇಗಾಲ ಪಟ್ಟಣದಲ್ಲಿ ಕುಡಿಯುವ ನೀರಿನ ಘಟಕಗಳ ಉದ್ಘಾಟನೆ, ಮಧ್ಯಾಹ್ನ 12.30ಗಂಟೆಗೆ ಕೊಳ್ಳೇಗಾಲ ತಾಲ್ಲೂಕಿನ ಹೊಸ ಹಂಪಾಪುರದಲ್ಲಿ ಅಂಗನವಾಡಿ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಮಧ್ಯಾಹ್ನ 3ಗಂಟೆಗೆ ಯಳಂದೂರು ತಾಲ್ಲೂಕಿನ ಹೊನ್ನೂರಿನಲ್ಲಿ ಕನಕ ಸಮುದಾಯ ಭವನದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಗಂಟೆಗೆ ಕೊಳ್ಳೇಗಾಲದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಸಂಜೆ 6 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಸಿಇಟಿ ತರಬೇತಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 16 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದ ಮಲ್ಟಿ ಪರ್ಪಸ್ ಹಾಲ್ ನಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಜುಲೈ 24 ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224370 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಿಂದ ನಗರದ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ಚಾಮರಾಜನಗರ, ಜು. 16 (ಕರ್ನಾಟಕ ವಾರ್ತೆ):- ಜಿಲ್ಲಾ ಕೇಂದ್ರದಲ್ಲಿ ಕೈಗೊಂಡಿರುವ ವಿವಿಧ ರಸ್ತೆ, ಚರಂಡಿ, ಕಟ್ಟಡ ಕಾಮಗಾರಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ವ್ಯಾಪಕವಾಗಿ ಪರಿಶೀಲಿಸಿದರು.
ಇಂದು ಬೆಳಿಗ್ಗೆಯಿಂದಲೇ ನಗರಾದ್ಯಂತ ಚುರುಕಿನಿಂದ ಕಾಮಗಾರಿಗಳನ್ನು ಸಚಿವರು ವಿಕ್ಷೀಸಿದರು. ಮೊದಲಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಮುಂಭಾಗದಲ್ಲಿರುವ ಶಿಥಿಲಗೊಂಡ ಒವರ್ ಹೆಡ್‍ಟ್ಯಾಂಕ್‍ನ್ನು ಪರಿಶೀಲಿಸಿದರು. ಇದಕ್ಕೆ ಪರ್ಯಾಯವಾಗಿ ಹೊಸ ಟ್ಯಾಂಕ್ ನಿರ್ಮಾಣ ಇಲ್ಲವೆ ದುರಸ್ಥಿ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವರು ತುರ್ತಾಗಿ ನಿರ್ಧಾರ ಕೈಗೊಂಡು ಕಾಮಗಾರಿಗೆ ಅಗತ್ಯ ಪ್ರಕ್ರಿಯೆ ವಹಿಸುವಂತೆ ಸೂಚಿಸಿದರು.
ಬಳಿಕ ಅನ್ವರ್‍ಪಾಷ ಕಲ್ಯಾಣ ಮಂಟಪ ಬಳಿ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಕರಿವರದರಾಜನಬೆಟ್ಟದ ಬಳಿ ಇರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ಕೊಟ್ಟರು. ಘಟಕದ ಬಳಿ ಇರುವ ಮಣ್ಣುಗುಡ್ಡೆಯನ್ನು ಸಮತಟ್ಟುಗೊಳಿಸುವ ಕೆಲಸವನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತದನಂತರ ಚಿಕ್ಕಂಗಡಿ ಬೀದಿ, ದೊಡ್ಡಂಗಡಿ ಬೀದಿ, ರಥದ ಬೀದಿಯಲ್ಲಿ ನಿರ್ಮಾಣವಾಗಿರುವ ರಸ್ತೆ ಕಾಮಗಾರಿಯನ್ನು ವಿಕ್ಷೀಸಿದರು. ಕೆಲವೆಡೆ ಕಾಮಗಾರಿ ಸರಿ ಇಲ್ಲದಿರುವ ಬಗ್ಗೆ ಆಕ್ಷೇಪಿಸಿ ಸರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಅಂಗಡಿ ಮಾಲೀಕರು ಸಚಿವರಿಗೆ ಮನವಿ ಮಾಡಿ ಶೀಘ್ರವಾಗಿ ಕಾವiಗಾರಿ ಪೂರ್ಣಗೊಳಿಸಬೇಕು. ಇದರಿಂದ ವ್ಯಾಪಾರ, ವಹಿವಾಟು ಎಂದಿನಂತೆ ನಡೆಯಲು ಅನುಕೂಲವಾಗಲಿದೆ ಎಂದರು.
ರಥದ ಬೀದಿಯಲ್ಲಿ ನಗರೋತ್ಥಾನದಡಿಯಲ್ಲಿ 290 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾರುಕಟ್ಟೆ ಸಂಕೀರ್ಣ ಕಾಮಗಾರಿ ಸ್ಥಳಕ್ಕೂ ಭೇಟಿ ಕೊಟ್ಟು ಸಚಿವರು ಪರಿಶೀಲಿಸಿದರು. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ವ್ಯಾಪಾರ ಮಾಡುವವರಿಗೆ ಸೌಲಭ್ಯ ತಲುಪುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿದ ಸÀಚಿವರು ಅಲ್ಲಿನ ವ್ಯಾಪಾರಸ್ಥರಿಗೆ ತಾತ್ಕಾಲಿಕವಾಗಿ ಮಾರಿಗುಡಿ ಬಳಿ ವ್ಯಾಪಾರ ಸ್ಥಳವನ್ನು ಸ್ಥಳಾಂತರ ಮಾಡಿ. ನಿಮಗೆ ಇದೇ ಜಾಗದಲ್ಲಿ ನೂತನ ಮಾರುಕಟ್ಟೆ ನಿರ್ಮಾಣ ಮಾಡಿಕೊಡಲಿದ್ದೇವೆ ಎಂದರು. ತಾತ್ಕಾಲಿಕವಾಗಿ ವ್ಯಾಪಾರ ಮಾಡಲು ಶೆಡ್ ನಿರ್ಮಾಣ ಮಾಡಿಕೊಡಬೇಕು ಎಂದು ತರಕಾರಿ ವ್ಯಾಪಾರಿಗಳು ಕೋರಿದರು. ಅಲ್ಲಿಯೆ ಇದ್ದ ನಗರಸಭೆ ಆಯುಕ್ತರಿಗೆ ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.
ಬಳಿಕ ನಗರದ ಬಿ. ರಾಚಯ್ಯ ಜೋಡಿರಸ್ತೆ ಕಾಮಗಾರಿ ಪರಿಶೀಲಿಸಿದರು. ರಾಮಸಮುದ್ರದಲ್ಲಿಯೂ ರಸ್ತೆ ಕಾಮಗಾರಿ ಹಾಗೂ ಇತರೆ ಕಾಮಗಾರಿಯನ್ನು ವಿಕ್ಷೀಸಿದರು. ಇದೇ ವೇಳೆ ಹೊಸ ಹೌಸಿಂಗ್‍ಬೋರ್ಡ್ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರು ಘಟಕ ಕಾಮಗಾರಿಗೆ ಸಚಿವರು ಚಾಲನೆ ನೀಡಿದರು. ಬಡಾವಣೆಯ ನಿವಾಸಿಗಳು ಬೀದಿದೀಪ, ರಸ್ತೆ, ಚರಂಡಿ ಸೇರಿದಂತೆ ಇತರೆ ಮೂಲ ಸೌಕರ್ಯವನ್ನು ಒದಗಿಸಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸೆಪ್ಟೆಂಬರ್ ವೇಳೆಗೆ ನಗರದ ಎಲ್ಲಾ ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಈ ಬಾರಿಯು ದಸರಾ ಆಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮಾಡಲಾಗುತ್ತದೆ. ಈ ವೇಳೆಗೆ ಎಲ್ಲ ರಸ್ತೆಗಳು, ಇತರೆ ಅಭಿವೃದ್ಧಿ ಕೆಲಸಗಳು ಸಿದ್ಧಗೊಂಡಿರುತ್ತವೆ ಎಂದರು.
ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ಸದಸ್ಯರಾದ ಚೆಂಗುಮಣಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಕನಿಷ್ಠ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ ಉಮೇಶ್, ನಗರಸಭೆ ಆಯುಕ್ತಾದ ರಾಜಣ್ಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತ್ಯಮೂರ್ತಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಡಿ.ಟಿ. ವಾಸುದೇವ್, ನಗರಸಭೆ ಮಾಜಿ ಸದಸ್ಯರಾದ ಅಸ್ಗರ್ ಮುನ್ನಾ ಇತರರು ಕಾಮಗಾರಿ ಪರಿಶೀಲನೆ ವೇಳೆ ಹಾಜರಿದ್ದರು.
No comments:
Post a Comment