Thursday, 16 August 2018

ನೈಸರ್ಗಿಕ ಸಂಪತ್ತು ರಕ್ಷಣೆ ಮೂಲಭೂತ ಕರ್ತವ್ಯ : ಜಿಲ್ಲಾ ನ್ಯಾಯಾಧೀಶರಾದ ಜಿ. ಬಸವರಾಜ ,ಸ್ವಾತಂತ್ರ್ಯ ದಿನ ಆಚರಣೆ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ (19-07-2018)

ನೈಸರ್ಗಿಕ ಸಂಪತ್ತು ರಕ್ಷಣೆ ಮೂಲಭೂತ ಕರ್ತವ್ಯ : ಜಿಲ್ಲಾ ನ್ಯಾಯಾಧೀಶರಾದ ಜಿ. ಬಸವರಾಜ   

ಚಾಮರಾಜನಗರ, ಜು. 19 - ಅಮೂಲ್ಯವಾದ ನೈಸರ್ಗಿಕ ಸಂಪತ್ತಿನ ಬಗ್ಗೆ ಕಾಳಜಿ ವಹಿಸಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವೂ ಆಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿಳಿಸಿದರು.  

 ನಗರದ ಹೊರವಲಯದಲ್ಲಿರುವ ಕರಿವರದರಾಜನ ಬೆಟ್ಟದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಓಡಿಪಿ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವೃಕ್ಷ ಕ್ರಾಂತಿ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು. ಉತ್ತಮ ಪರಿಸರವಿದ್ದರೆ ಮಾನವ ಪ್ರಾಣಿಸಂಕುಲಗಳ ಜೀವಕ್ಕೂ ಸುರಕ್ಷತೆ ಇರುತ್ತದೆ. ಪರಿಸರ ನಾಶವಾದರೆ ಆರೋಗ್ಯಕರ ವಾತಾವರಣ ಇಲ್ಲವಾಗುತ್ತದೆ. ವೃಕ್ಷಗಳಿದ್ದಷ್ಟೂ ಆರೋಗ್ಯಪೂರಕ ಜೀವನ ನಡೆಸಲು ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಪರಿಸರ ಕುರಿತು ಗಮನ ಹರಿಸುವುದು ಒಳಿತು ಎಂದು ನ್ಯಾಯಾಧೀಶರು ಸಲಹೆ ಮಾಡಿದರು. ಪ್ರಾಕೃತಿಕ ಸಂಪತ್ತು ಕಾಪಾಡುವುದು ಎಲ್ಲರ ಹೊಣೆಗಾರಿಕೆಯಾಗಿದೆ. ಪರಿಸರ ಸಮತೋಲನಕ್ಕೆ ಅರಣ್ಯ ಸೇರಿದಂತೆ ಎಲ್ಲ ನಿಸರ್ಗ ಸಂಪತ್ತು ನೆರವಾಗಲಿದೆ. ಹೀಗಾಗಿ ಪ್ರಕೃತಿ ಸಂಪತ್ತಿನ ರಕ್ಷಣೆ ಬಗ್ಗೆ ವಿಶೇಷ ಆಸಕ್ತಿ ವಹಿಸಬೇಕು. ಯಾವುದೇ ಭಾಗದಲ್ಲಿ ನೈಸರ್ಗಿಕ ಸಂಪತ್ತನ್ನು ದೋಚುವವರು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಗಮನಕ್ಕೆ ತರಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಿಗೂ ದೂರು ನೀಡಬಹುದು ಎಂದು ನ್ಯಾಯಾಧೀಶರು ತಿಳಿಸಿದರು. ಪರಿಸರ ಸಂರಕ್ಷಣೆ ಬಗ್ಗೆ ವಿಶೇಷವಾಗಿ ಕಾಳಜಿ ಇಟ್ಟು ಸ್ವಯಂಸೇವಾ ಸಂಸ್ಥೆಗಳು, ವಕೀಲರ ಸಂಘ ಗಿಡ ನೆಟ್ಟು ಪೋಷಿಸುವ ಕೆಲಸಕ್ಕೆ ಮುಂದಾಗಿರುವುದು ಅಭಿನಂದನೀಯ ಕಾರ್ಯವಾಗಿದೆ. ಈ ಉತ್ತಮ ಕೆಲಸಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕೈಜೋಡಿಸಲಿದೆ ಎಂದು ನ್ಯಾಯಾಧೀಶರು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ ಮಾತನಾಡಿ ಹಸಿರೇ ಉಸಿರು ಎಂಬುದನ್ನು ಎಲ್ಲರೂ ಅರಿಯಬೇಕು. ಕಾಡಿದ್ದರೆ ನಾಡು ಅರಣ್ಯ ಸಂಪತ್ತಿನಿಂದ ವಾಯು ಮಾಲಿನ್ಯ ಕಡಿಮೆಯಾಗಲಿದೆ. ವೃಕ್ಷ ಸಂಪತ್ತು ವೃದ್ಧಿಸುವ ದಿಸೆಯಲ್ಲಿ ಪ್ರತಿಯೊಬ್ಬರಲ್ಲಿ ಕರ್ತವ್ಯ ಪ್ರಜ್ಞೆ ಉಂಟಾಗಬೇಕೆಂದು ತಿಳಿಸಿದರು. ಓಡಿಪಿ ಸಂಸ್ಥೆಯ ನಿರ್ದೇಶಕರಾದ ವಂ. ಸ್ವಾಮಿ. ಸ್ಟ್ಯಾನಿ ಡಿ ಆಲ್ಮೆಡಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೇಮಲತಾ, ಪ್ರಾದೇಶಿಕ ವಲಯ ಅರಣ್ಯಾಧಿಕಾಶರಿ ರಖನ್ ಕುಮಾರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಂ. ರವಿ, ಓಡಿಪಿ ಸಂಸ್ಥೆಯ ಸಂಯೋಜಕರಾದ ಸುನಿತ, ಸಿದ್ದರಾಜು, ಇತರರು ಕಾರ್ಯಕ್ರಮದಲ್ಲಿ ಇದ್ದರು. ಜು. 24ರಂದು ಕಬ್ಬಹಳ್ಳಿಯಲ್ಲಿ ರಕ್ತದಾನ ಶಿಬಿರ ಚಾಮರಾಜನಗರ, ಜು. 18 - ಗುಂಡ್ಲುಪೇಟೆ ತಾಲೂಕಿನ ಕಬ್ಬಹಳ್ಳಿಯ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಶ್ರೀಮತಿ ಸುಬ್ಬಮ್ಮ ಮತ್ತು ಶ್ರೀ ಸಿರಿಯಪ್ಪನವರ ಸರ್ಕಾರಿ ಸಮುದಾಯ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 24ರಂದು ಬೆಳಿಗ್ಗೆ 10 ಗಂಟೆಗೆ ಕಬ್ಬಹಳ್ಳಿಯ ಶ್ರೀ ಮದ್ದಾನೇಶ್ವರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಆಸಕ್ತರು ರಕ್ತದಾನ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ವಿವರಗಳಿಗೆ ಪ್ರಾಂಶುಪಾಲರಾದ ಡಾ. ಎನ್.ಎಸ್. ಮಹದೇವಪ್ರಸಾದ್, ಮೊ. 9481320044 ಹಾಗೂ ಎಂ. ಪ್ರಭುಸ್ವಾಮಿ, ಮೊ. 9741522341 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ರಕ್ಷಣಾ ಪಿಂಚಣಿ ಅದಾಲತ್ : ಅರ್ಜಿ ಆಹ್ವಾನ ಚಾಮರಾಜನಗರ, ಜು. 19:- ಅಲಹಾಬಾದ್‍ನ ಡಿಫೆನ್ಸ್ ಅಕೌಂಟ್ಸ್ (ಪಿಂಚಣಿ) ಪ್ರಧಾನ ಕಂಟ್ರೋಲರ್ ಅವರು ರಕ್ಷಣಾ ಪಿಂಚಣಿ ಅದಾಲತ್ ಅನ್ನು ಆಗಸ್ಟ್ 23 ಹಾಗೂ 24ರಂದು ಮೈಸೂರಿನಲ್ಲಿ ನಡೆಸಲಿರುವ ಹಿನ್ನೆಲೆಯಲ್ಲಿ ಕುಂದುಕೊರತೆ ನಿವಾರಣೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಕ್ಷಣಾ ಪಿಂಚಣಿ, ಸಿವಿಲ್ ಪಿಂಚಣಿ ಪಡೆಯುತ್ತಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರು ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆಗಳು ಇದ್ದಲ್ಲಿ ಅದಾಲತ್‍ನಲ್ಲಿ ನೇರವಾಗಿ ಪರಿಹಾರ ಪಡೆಯಬಹುದಾಗಿದೆ. ಕುಂದುಕೊರತೆ ನಿವಾರಣೆ ಅರ್ಜಿಯನ್ನು ಮೈಸೂರಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಿಂದ ಪಡೆದು ಭರ್ತಿ ಮಾಡಿ ಸೇವಾ ದಾಖಲೆಗಳು, ಪಿಂಚಣಿ ಪಡೆಯುತ್ತಿರುವ ಖಜಾನೆ, ಬ್ಯಾಂಕ್ ವಿವರ ಪೇಮೆಂಟ್ ಆರ್ಡರ್‍ನಂತಹ ದಾಖಲೆಗಳನ್ನು ಲಗತ್ತಿಸಿ ಶ್ರೀ ಎಸ್.ಕೆ. ಶರ್ಮ, ಪೆನ್ಷನ್ ಅದಾಲತ್ ಆಫೀಸರ್, ಪ್ರಿನ್ಸಿಪಾಲ್ ಸಿಡಿಎ (ಪೆನ್ಷನ್ಸ್), ದ್ರೌಪದಿ ಘಾಟ್, ಅಲಹಾಬಾದ್ – 211014 ಇಲ್ಲಿಗೆ ಕಳುಹಿಸಬೇಕು. ಇ ಮೇಲ್ ವಿಳಾಸ ಛಿಜಚಿ-ಚಿಟbಜ@ಟಿiಛಿ.iಟಿ ಅಥವಾ ಫ್ಯಾಕ್ಸ್ ಸಂಖ್ಯೆ 0532-2421873 ಮೂಲಕವೂ ಕಳುಹಿಸಬಹುದು. ವಿವರಗಳಿಗೆ ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರನ್ನು ಅಥವಾ ದೂ.ಸಂ. 0821-2425240 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಜು. 23ರಂದು ನಗರದಲ್ಲಿ ಉದ್ಯೋಗ ಮೇಳ ಚಾಮರಾಜನಗರ, ಜು. 19 - ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಉದ್ಯೋಗ ಮೇಳವನ್ನು ಜುಲೈ 23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ. ಮೈಸೂರು, ಬೆಂಗಳೂರು ಮೂಲದ ಖಾಸಗಿ ಕಂಪನಿಗಳಾದ ಹೈಪ್ರೋಸೆಸ್ ಸರ್ವೀಸ್ (ಇಂಡಿಯಾ) ಪ್ರೈ. ಲಿ., ಯುರೇಕಾ ಫೋರ್ಬ್, ನವಭಾರತ್ ಫರ್ಟಿಲೈಸರ್ ಲಿ., ಬಿಎಸ್‍ಐ ಕಾರ್ಪೋರೇಷನ್, ಪದ್ಮ ಅಂಡ್ ಕೋ, ಇಮ್ಯಾನ್ಯುಯಲ್ ಸಾಫ್ಟ್ ಸ್ಕಿಲ್ ಪ್ರೈ. ಲಿ., ಗಿರೀಶ್ ಗಾರ್ಮೆಂಟ್ಸ್, ಚಾಮರಾಜನಗರದ ಎಲ್‍ಐಸಿ ಆಫ್ ಇಂಡಿಯಾ ಸೇರಿದಂತೆ ಇತರೆ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಹತೆಯುಳ್ಳ 18 ರಿಂದ 35ರ ವಯೋಮಿತಿಯೊಳಗಿರುವವರು ಉದ್ಯೋಗ ಮೇಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಗತ್ಯ ಸ್ವವಿವರಗಳೊಂದಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಜಿಲ್ಲಾ ಉದ್ಯೋಗಾಧಿಕಾರಿ (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಜು. 30ರಂದು ದೊಡ್ಡಿಂದುವಾಡಿಯಲ್ಲಿ ಅಂಚೆ ಸಂತೆ ಚಾಮರಾಜನಗರ, ಜು. 19 – ಅಂಚೆ ಇಲಾಖೆಯು ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಹೋಬಳಿ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಜುಲೈ 30ರಂದು ಅಂಚೆ ಸಂತೆ ಹಮ್ಮಿಕೊಂಡಿದೆ. ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುತ್ತದೆ. ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಹೆಚ್.ಸಿ. ಸದಾನಂದ ಪ್ರಕಟಣೆಯಲ್ಲಿ ಕೋರಿದ್ದಾರೆ. ಕೊಳ್ಳೇಗಾಲ : ನಲ್ಮ್ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ ಚಾಮರಾಜನಗರ, ಜು. 19 :- ಕೊಳ್ಳೇಗಾಲ ನಗರಸಭೆಯು ದೀನ್ ದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ವ್ಯಕ್ತಿಗತ ಹಾಗೂ ಗುಂಪು ಉದ್ಯಮಶೀಲತೆಗಾಗಿ ಸಾಲ ಮತ್ತು ಸಹಾಯಧನ ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯ ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜು. 21ರಂದು ತಾ.ಪಂ. ಸಾಮಾನ್ಯ ಸಭೆ ಚಾಮರಾಜನಗರ, ಜು. 19 - ಚಾಮರಾಜನಗರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ಅಧ್ಯಕ್ಷರಾದ ದೊಡ್ಡಮ್ಮ ಅವರ ಅಧ್ಯಕ್ಷತೆಯಲ್ಲಿ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೇನೆ ಸೇರ್ಪಡೆ ಮಾರ್ಗದರ್ಶನ ತರಬೇತಿಗೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಚಾಮರಾಜನಗರ, ಜು. 19:- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆಗೆ ಸೇರಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಕುರಿತು ನೀಡಲಿರುವ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ -1, 2ಎ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 25 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡಬಹುದು. ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಸಹಾಯವಾಣಿ ಸಂಖ್ಯೆ 8050770004 ಸಂಪರ್ಕಿಸಿ ಸಹ ಮಾಹಿತಿ ಪಡೆಯಬಹುದೆಂದು ಹಿಂದುಳಿದ ವಗರ್Àಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

********************************************** 

ಸ್ವಾತಂತ್ರ್ಯ ದಿನ ಆಚರಣೆ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ

ಚಾಮರಾಜನಗರ, ಜು. 19 - ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸ್ವಾತಂತ್ರೋತ್ಸವ ಆಚರಣೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಬೇಕು. ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣ ಹಾಗೂ ಸುಗಮ ಆಚರಣೆಗೆ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಸಮಿತಿಯಲ್ಲಿ ಕಾರ್ಯನಿರ್ವಹಿಸಬೇಕಾದ ಅಧಿಕಾರಿಗಳ ವಿವರವನ್ನು ನೀಡಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ಸೂಚಿಸಲಾಗಿರುವ ಸಿದ್ಧತಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು ಶಾಲಾ ಮಕ್ಕಳಿಗೆ ನೆರಳಿನ ವ್ಯವಸ್ಥೆಯಾಗಬೇಕು. ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗಬಾರದು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಗೌರವಿಸುವ ಕೆಲಸವಾಗಬೇಕು. ಬ್ಯಾಂಕು ಖಾಸಗಿ ಶಾಲೆಗಳು ಇತರೆ ಕಚೇರಿಗಳಲ್ಲು ಕಡ್ಡಾಯವಾಗಿ ಧ್ವಜಾರೋಹಣ ನೆರವೇರಬೇಕು. ಕಾರ್ಮಿಕರಿಗೆ ಅಂದು ಕಡ್ಡಾಯವಾಗಿ ರಜೆ ಸೌಲಭ್ಯ ಸಿಗಬೇಕು ಎಂಬ ಸಲಹೆಗಳನ್ನು ನೀಡಿದರು. 

ಎಲ್ಲರ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಶಾಲಾ ಮಕ್ಕಳಿಗೆ ನೆರಳಿನ ವ್ಯವಸ್ಥೆಗೆ ಪೂರಕವಾಗುವಂತೆ ಶಾಮಿಯಾನ ಹಾಕಬೇಕು. ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸುವ ಬಗ್ಗೆ ಸಂಬಂಧಪಟ್ಟ ಸಮಿತಿಯು ಕ್ರಮ ವಹಿಸಬೇಕು. ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲ ಶಾಲೆಗಳಲ್ಲಿ ಇತರೆ ಕಚೇರಿಗಳಲ್ಲೂ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಲು ಸೂಚಿಸಲಾಗುತ್ತದೆ. ಬ್ಯಾಂಕುಗಳಲ್ಲಿಯೂ ಸಹ ಸ್ವಾತಂತ್ರ್ಯ ದಿನ ಆಚರಣೆಗೆ ಸೂಕ್ತ ಕ್ರಮ ವಹಿಸಲು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುತ್ತದೆ. ಕಾರ್ಮಿಕರಿಗೆ ರಜೆ ಸೌಲಭ್ಯ ಸಿಗುವಂತಾಗಲು ಕಾರ್ಮಿಕ ಅಧಿಕಾರಿಗಳು ಅಗತ್ಯ ಸೂಚನೆ ನೀಡಲು ಸಹ ತಿಳಿಸಲಾಗುವುದೆಂದು ಜಿಲ್ಲಾಧಿಕಾರಿ ಹೇಳಿದರು.

ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳ ತಾಲೀಮು ಆರಂಭಿಸಬೇಕು. ತಾಲೀಮು ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಪಾಹಾರ, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸÀಬೇಕು ಎಂದರು. 

ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ವೇದಿಕೆ, ಆಹ್ವಾನಿತರು, ವಿದ್ಯಾರ್ಥಿಗಳು, ಗಣ್ಯರು ಕುಳಿತುಕೊಳ್ಳಲು ಶಾಮಿಯಾನ ಹಾಗೂ ಆಸನಗಳ ವ್ಯವಸ್ಥೆ ಮಾಡಬೇಕು. ಸಂಜೆ ಚಾಮರಾಜೇಶ್ವರ ದೇವಾಲಯ ಬಳಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಉತ್ತಮ ಕಾರ್ಯಕ್ರಮಗಳು ಮೂಡಿಬರಬೇಕು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ಅವರು ಸಾಂಸ್ಕøತಿಕ ಕಾರ್ಯಕ್ರಮಗಳು ಪುನರಾವರ್ತಿತವಾಗದೆ ವೈವಿದ್ಯಮಯವಾಗಿ ಇರುವಂತೆ ನೋಡಿಕೊಳ್ಳಬೇಕು. ಸಮನ್ವಯದಿಂದ ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲ ಅಧಿಕಾರಿಗಳು ಇಲಾಖೆಯ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿ ಸಿಬ್ಬಂದಿಯವರ ಹಾಜರಾತಿಯನ್ನು ಗಮನಿಸಲಾಗುವುದು. ಗೈರುಹಾಜರಾಗುವವರ ವಿರುದ್ಧ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೆಚ್ಚುವರಿ ಜಿಲಾಧಿಕಾರಿ ಕೆ.ಎಂ. ಗಾಯತ್ರಿ, ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿನಯ್, ಚಾ.ಗು. ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶರಾದ ಮಹದೇವಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


 



No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು