Thursday, 16 August 2018

ನಗರದ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ (26-07-2018)


ಮತೀಯ ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ
ಚಾಮರಾಜನಗರ, ಜೂ. 2- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಜನಾಂಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಜನಾಂಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಗೆ ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 30 ವರ್ಷ ಮೀರಿರಬಾರದು. ಬಾರ್ ಕೌನ್ಸಿನ್‍ನಲ್ಲಿ ಹೆಸರು ನೊಂದಾಯಿಸಿರಬೇಕು. 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪಡೆದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷ ಮೀರಿರಬಾರದು. ತರಬೇತಿ 4 ವರ್ಷಗಳ ಅವಧಿಯದ್ದಾಗಿದ್ದು ಮಾಹೆಯಾನ 4 ಸಾವಿರ ರೂ. ತರಬೇತಿ ಭತ್ಯೆ ನೀಡಲಾಗುವುದು.
ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತಹಸೀಲ್ದಾರ್ ಅವರಿಂದ ಪಡೆದ ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಕಾನೂನು ಪದವಿ ಅಂಕಪಟ್ಟಿಗಳು, ಪದವಿ ಪತ್ರ, ಬಾರ್ ಕೌನ್ಸಿಲ್ ನೋಂದಣಿ ಪತ್ರ ದೃಢೀಕೃತ ಪ್ರತಿ, 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜುಲೈ 20ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಸಹಾಯಧನಕ್ಕಾಗಿ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 23- ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಕೈಮಗ್ಗ ವೃತ್ತಿಯಲ್ಲಿ ತೊಡಗಿರುವ ನೇಕಾರರಿಗೆ ಕೈಮಗ್ಗ, ಕಚ್ಚಾ ನೂಲು ಖರೀದಿ, ತಂತ್ರಜ್ಞಾನ ಉನ್ನತೀಕರಣಗಳಿಗಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.
ರಾಷ್ಟ್ರೀಯ ಬ್ಯಾಂಕುಗಳಿಂದ ಸಾಲ ಪಡೆಯಲು ಇಚ್ಚಿಸುವ ಕೈಮಗ್ಗ ನೇಕಾರರು ಅರ್ಜಿಯನ್ನು ಸದಸ್ಯತ್ವ ಹೊಂದಿರುವ ಸಹಕಾರ ಸಂಘಗಳ ಶಿಫಾರಸ್ಸಿನೊಂದಿಗೆ ಹತ್ತಿರದ ರಾಷ್ಟ್ರೀಕೃತ ಬ್ಯಾಂಕುಗಳಿಂದ ಪಡೆದು ಭರ್ತಿ ಮಾಡಿ ಬ್ಯಾಂಕುಗಳಿಗೆ ಸಲ್ಲಿಸಬೇಕು. ಅಸಂಘಟಿತ ವಲಯದ ಸದಸ್ಯರು ಅರ್ಜಿಗಳನ್ನು ರಾಷ್ಟ್ರೀಕೃತ ಬ್ಯಾಂಕಿನಿಂದ ಅರ್ಜಿ ಪಡೆದು ಭರ್ತಿ ಮಾಡಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಜೂನ್ 30ರೊಳಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ನೇಕಾರರ ಗುರುತಿನ ಚೀಟಿ, ಆರೋಗ್ಯ ವಿಮಾ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಕಾರ್ಡ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ವಾಸಸ್ಥಳದ ಬ್ಯಾಂಕಿನಿಂದ ಪಡೆದ ನಿರಾಕ್ಷೇಪಣಾ ಪತ್ರ (ಎನ್‍ಓಸಿ)ಗಳನ್ನು ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-222883 ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 25ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 23 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತೆರಕಣಾಂಬಿ, ಬೇಗೂರು, ಹಂಗಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 25ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಹೋಬಳಿಯ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ತೆರಕಣಾಂಬಿ ವ್ಯಾಪ್ತಿಯ ಬೊಮ್ಮನಹಳ್ಳಿ, ಕುಂದಗೆರೆ, ಕಟ್ನವಾಡಿ, ದೇಪಾಪುರ, ಎನ್‍ಜೆವೈ, ಗೋವಿಂದನಗರ, ಕಗ್ಗಳ, ಕೆಲಸಿಪುರ, ಲಕ್ಕೂರು, ಫ್ಯಾಕ್ಟರಿ, ವಾಟರ್ ಸಪ್ಲೈ ಪ್ರದೇಶಗಳು. ಬೇಗೂರು ವ್ಯಾಪ್ತಿಯ ಹಿರೀಕಾಟಿ, ನಿಟ್ರೆ, ಬೇಗೂರು ವಾಟರ್ ಸಪ್ಲೈ, ಹೆಗ್ಗಡಹಳ್ಳಿ, ಮಂಚಳ್ಳಿ, ಎನ್‍ಜೆವೈ, ಶೆಟ್ಟಹಳ್ಳಿ, ದೇಸಿಪುರ, ಇಂಡಸ್ಟ್ರಿಯಲ್, ಹೊರೆಯಾಲ, ಹÀಂಗಳ ವ್ಯಾಪ್ತಿಯ ಹಂಗಳ, ಶಿವಪುರ, ಕಾಳಿಗೋರನಹಳ್ಳಿ, ಎನ್ ಜೆ ವೈ ಎಲಟ್ಟಿಪ್ಪೆ, ಗೊಪಾಲ್‍ಪುರ, ಎನ್‍ಜೆವೈ, ದೇವರಹಳ್ಳಿ, ಹೊನ್ನೇಗೌಡನಹಳ್ಳಿ, ಮಲ್ಲಯ್ಯನಪುರದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 24ರಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 23  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜೂನ್ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 9.45 ಗಂಟೆಗೆ ಸಂತೆಮರಹಳ್ಳಿಗೆ ಆಗಮಿಸುವರು. 10 ಗಂಟೆಗೆ ಸಂತೆಮರಹಳ್ಳಿಯ ಎಪಿಎಂಸಿ ಆವರಣದಲ್ಲಿ ಕೃಷಿ ಮಾರುಕಟ್ಟೆ ಸಮಿತಿ ವತಿಯಿಂದ ಏರ್ಪಡಿಸಿರುವ ವ್ಯಾಪಾರ ಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
11.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. 11.45ಕ್ಕೆ ಚಾಮರಾಜನಗರದಲ್ಲಿ ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಸಂತೆಮರಹಳ್ಳಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರು.
ಜೂ. 24ರಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 23 - ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜೂನ್ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ ಚಾಮರಾಜನಗರದಲ್ಲಿ ನಡೆಯಲಿರುವ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ  ಉಪ್ಪಿನಮೋಳೆಗೆ ತೆರಳುವರು.

ಸಿಜಿಎಲ್ ಪರೀಕ್ಷೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ
ಚಾಮರಾಜನಗರ, ಜೂ. 23:- ಸ್ಟಾಫ್ ಸೆಲೆಕ್ಷನ್ ಕಮೀಷನ್ ಆಯೋಗದೊಂದಿಗೆ ನಡೆಸಲಾಗುವ ಸಂಯೋಜಿತ ಪದವಿ ಮಟ್ಟದ (ಸಿಜಿಎಲ್) ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಾಗುವುದು.
ತರಬೇತಿಯನ್ನು ಸ್ಟಡಿ ಸರ್ಕಲ್ ಕಾರ್ಯಕ್ರಮದಲ್ಲಿ ಜುಲೈ 1 ರಿಂದ 15ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ (ದೂ.ಸಂ.08226-224430) ನೀಡಲಾಗುವುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಸ್ವವಿವರದೊಂದಿಗೆ ಹೆಸರು ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ,ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬುಡಕಟ್ಟು ಸಮುದಾಯದ ಕ್ರೀಟಾಪಟುಗಳ ಮಾಹಿತಿ ಸಂಗ್ರಹಣೆ

ಚಾಮರಾಜನಗರ, ಜೂ. 23 - ನವದೆಹಲಿಯ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯವು ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ಕ್ರೀಡಾಪಟುಗಳನ್ನು ಅವರು ಆಸಕ್ತಿ ಹೊಂದಿರುವ ಕ್ರೀಡೆಗಳಲ್ಲಿ ಪ್ರೋತ್ಸಾಹಿಸÀಲು ಉದ್ದೇಶಿಸಿದೆ.
ಒಳಾಂಗಣ, ಹೊರಾಂಗಣ ಕ್ರೀಡೆಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಕ್ರೀಡಾಪಟುಗಳನ್ನು ಗುರುತಿಸಿ ಅವರ ಪ್ರತಿಭೆಯನ್ನು ಸಾಕಾರಗೊಳಿಸಲಾಗುವುದು.
ಬುಡಕಟ್ಟು ಸಮುದಾಯದ ಯುವ ಕ್ರೀಡಾಪಟುಗಳಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ತರಬೇತಿ ನೀಡಲಾಗುವುದು. ಅರ್ಹತೆ ಹೊಂದಿರುವ ರಾಜ್ಯದ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ಆಸಕ್ತ ಕ್ರೀಡಾಪಟುಗಳು ನಿರ್ದೇಶಕರು, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, 1540, ಅನಿಕೇತನ ರಸ್ತೆ, ಕುವೆಂಪುನಗರ, ಮೈಸೂರು - 570023, ದೂ.ಸಂಖ್ಯೆ 2560274, 2560275, ಇ ಮೇಲ್ ಣಡಿimಥಿsoಡಿe@gmಚಿiಟ.ಛಿom  ವಿಳಾಸಕ್ಕೆ ಸ್ವವಿವರವುಳ್ಳ ಮಾಹಿತಿಯನ್ನು ನೀಡುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ಕÉೂೀರಿದ್ದಾರೆ.
ಪ್ರವಾಸಿ ಟ್ಯಾಕ್ಸಿ ಖರೀದಿಗಾಗಿ ಸಹಾಯಧನ : ಫಲಾನುಭವಿಗಳ ಆಯ್ಕೆ ಪಟ್ಟಿ ಪ್ರಕಟ
ಚಾಮರಾಜನಗರ, ಜೂ. 25  ಪ್ರವಾಸೋದ್ಯಮ ಇಲಾಖೆವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಗಾಗಿ ಸಹಾಯಧನಕ್ಕಾಗಿ ಆಯ್ಕೆಯಾಗಿರುವ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜುಲೈ 4ರಂದು ಪರಿಶಿಷ್ಟಜಾತಿ, ವರ್ಗ, ಸಫಾಯಿ ಕರ್ಮಚಾರಿಗಳ ಹಿರತಕ್ಷಣಾ ಹಾಗೂ ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ, ಜೂ. 25  ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಜುಲೈ 4ರಂದು ಬೆಳಿಗ್ಗೆ 10 ಗಂಟೆÉಗೆ ಪರಿಶಿಷ್ಟ ಜಾತಿ ಮತ್ತು ವರ್ಗದವರ ಹಿತರಕ್ಷಣಾ ಸಮಿತಿ ಸಭೆ ಹಾಗೂ 11 ಗಂಟೆಗೆ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಸಫಾಯಿ ಕರ್ಮಚಾರಿಗಳ ಉಸ್ತುವಾರಿ ಸಮಿತಿ ಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ.
ಉಪವಿಭಾಗಮಟ್ಟದ ಪರಿಶಿಷ್ಟ ಜಾತಿ ಹಾಗೂ ವರ್ಗದವರು, ಸಫಾಯಿ ಕರ್ಮಚಾರಿಗಳು ಮತ್ತು ಸಂಘಸಂಸ್ಥೆಯ ಪ್ರತಿನಿಧಿಗಳು ತಮ್ಮ ಕುಂದುಕೊರತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲು ಇಚ್ಚಿಸಿದಲ್ಲಿ ಸಹಾಯಕ ನಿರ್ದೇಶಕರು(ಗ್ರೇಡ್-1), ತಾಲೂಕು ಸಮಾಜ ಕಲ್ಯಾಣ ಇಲಾಖೆ, ಹಾಗೂ ಸದಸ್ಯ ಕಾರ್ಯದರ್ಶಿ, ಪರಿಶಿಷ್ಟ ಜಾತಿ, ವರ್ಗದವರ ಹಿತರಕ್ಷಣಾ ಸಮಿತಿ ಕೊಳ್ಳೇಗಾಲ ಉಪವಿಭಾU ಇವರಿಗೆ ಲಿಖಿತವಾಗಿ ಜುಲೈ 2ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಜೂನ್ 29, 30 ಹಾಗೂ ಜುಲೈ 1ರಂದು ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನ
ಚಾಮರಾಜನಗರ, ಜೂ. 25  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನ ಕಾರ್ಯಕ್ರಮವನ್ನು ಜೂನ್ 29, 30 ಮತ್ತು ಜುಲೈ 1 ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಕುರಿತು ಗೋಷ್ಠಿಗಳನ್ನು ಏರ್ಪಡಿಸಲಾಗಿದ್ದು, ರಾಜ್ಯದ ಹೆಸರಾಂತ ವಿಜ್ಞಾನಿಗಳು, ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನಿಗದಿತ ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಲು ಮಾತ್ರ ಅವಕಾಶವಿದೆ.
ಅಸಕ್ತರು ನೊಂದಣಿ ನಮೂನೆಗಳಿಗಾಗಿ ಸ್ಥಳೀಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸದಸ್ಯರು ಅಥವಾ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‍ನ ಕೇಂದ್ರಕಚೇರಿ ದೂರವಾಣಿ ಸಂಖ್ಯೆ 080-26718939, ಮೊ. 9008442557 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

      ನಗರದ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಜೂ. 26:- ಚಾಮರಾಜನಗರ ಪಟ್ಟಣದ ವಿವಿಧೆಡೆ ಪ್ರಗತಿಯಲ್ಲಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಇಂದು ವ್ಯಾಪಕ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ಮೊದಲು ನಗರದ ಗಾಳೀಪುರ ಬಡಾವಣೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಯವರು ನಾಗರಿಕರಿಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ದೊಡ್ಡಅಂಗಡಿ ಬೀದಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ರಸ್ತೆ ಬಳಿ ನಡೆಯುತ್ತಿರುವ ಕಾಮಗಾರಿ ಹಾಗೂ ಅನ್ವರ್‍ಪಾಷ ಕಲ್ಯಾಣ ಮಂಟಪದ ರಸ್ತೆಗೆ ಭೇಟಿ ನೀಡಿ ಅಲ್ಲಿ ನಿರ್ವಹಿಸಲಾಗುತ್ತಿರುವ ರಸ್ತೆ ಮತ್ತು ಚರಂಡಿ ಕೆಲಸವನ್ನು ವಿಕ್ಷೀಸಿ ಯಾವುದೇ ವಿಳಂಬ ಮಾಡದೇ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಅದಾದ ನಂತರ ಪ್ರಗತಿಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಬಳಿ ರಸ್ತೆ, ಪಿಕಾರ್ಡ್ ಅಸ್ಪತ್ರೆ ರಸ್ತೆ ಹಾಗೂ ಕಲಾಮಂದಿರದ ಮುಂಭಾಗದ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರಿಗೆ ಕೆಲ ಸ್ಥಳೀಯರು ತಮ್ಮ ಅಹವಾಲುಗಳನ್ನು ಮುಂದಿಟ್ಟರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು ರಸ್ತೆ ಅಗಲೀಕರಣದಿಂದ ಸ್ಥಳೀಯರು ಹಾಗೂ ಬಡಾವಣೆಯ ನಿವಾಸಿಗಳಿಗೂ ಅನುಕೂಲವಾಗಲಿದೆ. ಹಾಗಾಗಿ ಪಟ್ಟಣ ಅಭಿವೃದ್ಧಿ ಉದ್ದೇಶದಿಂದ ರಸ್ತೆ ಹಾಗೂ ಉತ್ತಮ ಚರಂಡಿ ಕಾಮಗಾರಿಗೆ ಸಹಕರಿಸಬೇಕೆಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಟ್ಟರು.
ನಗರದ ಜಿಲ್ಲಾಸ್ಪತ್ರೆ ಬಳಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಆಸ್ಪತ್ರೆಗೆ ದಿನನಿತ್ಯ ಸಾಕಷ್ಟು ರೋಗಿಗಳು, ಸಾರ್ವಜನಿಕರು ಭೇಟಿ ನೀಡುತ್ತಾರೆ. ಈ ಸ್ಥಳದಲ್ಲಿ ಯಾವುದೇ ಅನಾನುಕೂಲವಾಗದಂತೆ ಕಾಮಗಾರಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ತದನಂತರ ಬಿ. ರಾಚಯ್ಯ ಜೋಡಿರಸ್ತೆಯಲ್ಲಿ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಸಹ ನಾಗರಿಕರಿಗೆ ಅನುಕೂಲವಾಗುವಂತೆ ಅದಷ್ಟು ಬೇಗನೆ ನಿರ್ವಹಿಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಯವರು ಕಾಮಗಾರಿಯಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ. ಗುಣಮಟ್ಟದ ಕಾಮಗಾರಿ ನಡೆಯಬೇಕು. ಅಧಿಕಾರಿಗಳು ಸ್ಥಳದಲ್ಲಿ ಖುದ್ದು ಹಾಜರಿದ್ದು, ಕಾಮಗಾರಿ ಸುಗಮವಾಗಿ ಸಾಗುವಂತೆ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು.
ನಗರಸಭೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತ್ಯಮೂರ್ತಿ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಜೂನಿಯರ್ ಎಂಜಿನಿಯರ್ ಶ್ರೀನಿವಾಸ್, ಲೋಕೊಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್, ಒಳಚರಂಡಿ (ಯು.ಜಿ.ಡಿ)ಕಾಮಗಾರಿ ಎಂಜಿನಿಯರ್ ರಮೇಶ್, ಹಾಗೂ ಇತರರು ಇದೇ ಸಂದರ್ಭದಲ್ಲಿ ಹಾಜರಿದ್ದರು. 
ಜೂ. 27ರಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 26 - ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜೂನ್ 27ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. 11 ಗಂಟೆಗೆ ಕೊಳ್ಳೇಗಾಲದ ಎಸ್.ವಿ.ಕೆ ಶಾಲೆ ಅವರಣದಲ್ಲಿ ಏರ್ಪಡಿಸಲಾಗಿರುವ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಮುಳ್ಳೂರಿನಲ್ಲಿ ನಡೆಯಲಿರುವ ದಾಸ್ತಾನು ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 3 ಗಂಟೆಗೆ ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವುದು. ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.       

ಜೂ. 29ರಂದು ನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ
ಚಾಮರಾಜನಗರ, ಜೂ. 26 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡ ಜಂಯತಿ ಕಾರ್ಯಕ್ರಮವನ್ನು ಜೂನ್ 29ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ನಗರಸಭೆ ಅಧ್ಯಕ್ಷರಾದ ಶೋಭ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ತಾ.ಪಂ. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಅವರುಗಳು ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಾಹಿತಿ ಬನ್ನೂರು ಕೆ. ರಾಜು ಅವರು ಅವರು ನಾಡಪ್ರಭು ಕೆಂಪೇಗೌಡ ಅವರು ಕುರಿತು ವಿಶೇಷ ಉಪನ್ಯಾಸ ನೀಡುವರು. ನಗರದ ಎಂ. ನಟರಾಜು ಮತ್ತು ತಂಡದವರಿಂದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜೂ. 27ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 26 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಹಾಗೂ ಬೊಮ್ಮಲಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 27ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಕಬ್ಬಳ್ಳಿ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯ ಕಬ್ಬಳ್ಳಿ, ಸೋಮಳ್ಳಿ, ಅಕ್ಕಲಪುರ ಮತ್ತು ಸೋಮಳ್ಳಿ ಎನ್.ಜೆ.ವೈ ಕೇಂದ್ರ ಮತ್ತು ಬೊಮ್ಮಲಾಪುರ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯ ಬೊಮ್ಮಲಾಪುರ, ಬೆಳವಾಡಿ, ಬಾಚಳ್ಳಿ, ದಾರಿಬೇಗೂರು, ಕೊಡಸೋಗೆ ಮತ್ತು ಹೆಗ್ಗವಾಡಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 27ರಂದು ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ
ಚಾಮರಾಜನಗರ, ಜೂ. 26 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸೋಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ ಜೂನ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ವಿನಯ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ರಮೇಶ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ದೀಪಾ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ. ರಾಜೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್, ಜಿಲ್ಲಾ ಸರ್ಜನ್ ಡಾ. ರಘುರಾಮ್, ಭಾರತೀಯ ರೆಡ್ ಕ್ರಾಸ್ ಸೋಸೈಟಿ  ಕಾರ್ಯದರ್ಶಿ ಡಾ. ಮಹೇಶ್, ಪ್ರಧಾನ ಕಾರ್ಯದರ್ಶಿಗಳಾದ ಅರುಣ್‍ಕುಮಾರ್ ವಿಶೇಷ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.








No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು