Tuesday, 14 August 2018

ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

ಲೋಕಸಭಾ ಸದಸ್ಯರಿಂದ ಹಾಲಿನ ಡೇರಿ ಕಾಮಗಾರಿ ವೀಕ್ಷಣೆ
ಚಾಮರಾಜನಗರ, ಆ. 04 - ತಾಲೂಕಿನ ಕುದೇರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಮಹತ್ವಾಕಾಂಕ್ಷಿ ಹಾಲಿನ ಡೇರಿ ನಿರ್ಮಾಣ ಕಾಮಗಾರಿಯನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಇಂದು ವೀಕ್ಷಿಸಿದರು.
ಒಟ್ಟು 3 ಲಕ್ಷ ಲೀಟರ್ ಯೋಜನಾ ಸಾಮಥ್ರ್ಯದ ಹಾಲು ಸಂಸ್ಕರಣಾ ಘಟಕ  ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಲೋಕಸಭಾ ಸದಸ್ಯರು ಬಹುತೇಕ ಪೂರ್ಣಗೊಂಡಿರುವ ಪೂರಕ ವಿವಿಧ ಘಟಕಗಳನ್ನು ಪರಿಶೀಲಿಸಿದರು.
2 ಲಕ್ಷ ಲೀಟರ್ ಸಾಮಥ್ರ್ಯದ ಯುಎಚ್‍ಟಿ ಹಾಲಿನ ಘಟಕ, 30 ಸಾವಿರ ಲೀಟರ್ ಸಾಮಥ್ರ್ಯದ ಮೊಸರು ತಯಾರಿಕಾ ಸ್ಥಾವರ, 4 ಸಾವಿರ ಕೆಜಿ ಬೆಣ್ಣೆ, 3 ಸಾವಿರ ಲೀಟರ್ ತುಪ್ಪ ತಯಾರಿಸಲು ಸಿದ್ಧಪಡಿಸಲಾಗಿರುವ ಯಂತ್ರೋಪಕರಣಗಳನ್ನು ಅಳವಡಿಸಿದ ಘಟಕಗಳನ್ನು ಧ್ರುವನಾರಾಯಣ ವೀಕ್ಷಿಸಿದರು.
ಇದೇವೇಳೆ ಮಾತನಾಡಿದ ಧ್ರುವನಾರಾಯಣ ಅವರು ಚಾಮರಾಜನಗರ ಹಾಲು ಒಕ್ಕೂಟವು ಪ್ರತ್ಯೇಕ ಒಕ್ಕೂಟವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ ಪ್ರತಿದಿನ 3 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಈ ಹಿಂದೆಯೇ ಆರಂಭವಾಗಿರುವ ಡೇರಿ ಯೋಜನೆ ಕಾಮಗಾರಿಯು ಚುರುಕುಗೊಂಡಿದ್ದು ಬಹಳಷ್ಟು ಶೀಘ್ರವಾಗಿ ಕೆಲಸ ಮುಗಿಯಲಿದೆ. ಈಗಾಗಲೇ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಸೆಪ್ಟೆಂಬರ್ ಮಾಹೆಯಲ್ಲಿ ನೂತನ ಡೇರಿ ಕಾರ್ಯಾರಂಭವಾಗುವ ನಿರೀಕ್ಷೆ ಇದೆ ಎಂದರು.
ಡೇರಿ ಯೋಜನೆ ನಿರ್ವಹಿಸಲು ಅಗತ್ಯವಿರುವ ಎಲ್ಲ ಯಂತ್ರೋಪಕರಣಗಳ ಅಳವಡಿಕೆ ಕೆಲಸ ನಡೆದಿದೆ. ಸೆಪ್ಟೆಂಬರ್ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಡೇರಿ ಕಾರ್ಯ ನಿರ್ವಹಿಸಲು ಎಲ್ಲವೂ ಸಿದ್ಧವಾಗಿದೆ. ಇದರಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಡೇರಿ ನಿರ್ಮಾಣವಾಗುವುದು ಮಹತ್ವದ ಯೋಜನೆಯಾಗಿದೆ. ಹಾಲು ಒಕ್ಕೂಟ ಪ್ರತಿನಿಧಿಗಳು ಸಹ ಯೋಜನೆಗೆ ಶ್ರಮಿಸಿದ್ದಾರೆ. ಸಹಕಾರ ಸಂಘಗಳು ಸಹ ಯೋಜನೆಗೆ ಮುಖ್ಯ ಕೊಡುಗೆಯಾಗಲಿವೆ. ಜನಪ್ರತಿನಿಧಿಗಳೂ ಸಹ ಅತ್ಯಂತ ಪ್ರಾಮುಖ್ಯತೆ ಪಡೆದಿರುವ ಡೇರಿ ಯೋಜನೆಗೆ ಹೆಚ್ಚಿನ ಸಂಪೂರ್ಣ ಸಹಕಾರ, ನೆರವು ನೀಡಿದ್ದಾರೆ ಎಂದರು.
ಹಾಲು ಒಕ್ಕೂಟದ ಅಧ್ಯಕ್ಷರಾದ ಗುರುಮಲ್ಲಪ್ಪ, ನಿರ್ದೇಶಕರಾದ ರವಿಶಂಕರ್, ಮಾದಪ್ಪ, ಪ್ರಮೋದಾ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ವಿಜಯ್ ಕುಮಾರ್, ಮುಖಂಡರಾದ ಬಾಲರಾಜು, ಇತರರು ಈ ಸಂದರ್ಭದಲ್ಲಿ ಇದ್ದರು.


ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ
ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ 

ಚಾಮರಾಜನಗರ, ಆ. 04 - ಕನ್ನಡ ಪುಸ್ತಕ ಪ್ರಾಧಿಕಾರವು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಸಕ್ತ ಆಗಸ್ಟ್ ತಿಂಗಳಲ್ಲಿ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ.
ಕÀನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳಲ್ಲಿ ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸುವ ಉದ್ದೇಶದಿಂದ ಆಗಸ್ಟ್ ಮಾಹೆಯಲ್ಲಿ ಮಾತ್ರ ಪ್ರಾಧಿಕಾರದಿಂದ ಪ್ರಕಟವಾಗಿರುವ ಎಲ್ಲಾ ಪುಸ್ತಕಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಪ್ರಾಧಿಕಾರದಿಂದ ತೆರೆಯಲಾಗಿರುವ ಜಿಲ್ಲೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ, ಬೆಂಗಳೂರಿನ ಜೆಸಿ ರಸ್ತೆಯ ರವೀಂದ್ರ ಕಲಾಕ್ಷೇತ್ರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಪುಸ್ತಕಗಳ ಮಾರಾಟಕ್ಕೆ ವÀ್ಯವಸ್ಥೆ ಮಾಡಿದೆ.
ಅಂತರ್ಜಾಲ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಲ್ಲಿಯೂ ಹಣ ಪಾವತಿಸಿ ಪುಸ್ತಕಗಳನ್ನು ಖರೀದಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ. 080-22484516, 22107704/05 ಅನ್ನು ಸಂಪರ್ಕಿಸುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಗ್ರಾಮೀಣ ಕುಶಲಕರ್ಮಿಗಳಿಂದ
ವಸತಿ ಕಾರ್ಯಾಗಾರ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 04  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಪ್ರಸಕ್ತ ಸಾಲಿಗೆÀ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ವಸತಿ ಕಾರ್ಯಗಾರ ನಿರ್ಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದು ನಿವೇಶನ ಹೊಂದಿರುವ ಆಸಕ್ತ ಕುಶಲಕರ್ಮಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತÀ್ಯ ದಾಖಲೆಗಳೊಂದಿಗೆ ಆಗಸ್ಟ್ 25ರೊಳಗೆ ಸಲ್ಲಿಸಬೇಕು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆ. 21ರಂದು ನಿಟ್ರೆ ಗ್ರಾವÀುದಲ್ಲಿ ಅಂಚೆ ಸಂತೆ 

ಚಾಮರಾಜನಗರ, ಆ. 04 - ಅಂಚೆ ಇಲಾಖೆಯು ಜಿಲ್ಲೆಯ ಬೇಗೂರು ಹೋಬಳಿಯ ನಿಟ್ರೆ ಗ್ರಾಮದಲ್ಲಿ ಆಗಸ್ಟ್ 21ರಂದು ಅಂಚೆ ಸಂತೆ ಹಮ್ಮಿಕೊಂಡಿದೆ.
ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ ಸ್ವೀಕರಿಸಲಾಗುತ್ತದೆ.
ನಿಟ್ರೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಹೆಚ್.ಸಿ. ಸದಾನಂದ ಪ್ರಕಟಣೆಯಲ್ಲಿ ಕೋರಿದ್ದಾರೆ.


ಕಾಣೆಯಾದ ಬಾಲಕಿಯ ಸುಳಿವು ನೀಡಲು ಮನವಿ
ಚಾಮರಾಜನಗರ, ಆ. 04 - ಚಾಮರಾಜನಗರದ ಸರ್ಕಾರಿ ಬಾಲಕಿಯರ ಬಾಲಮಂದಿರದಿಂದ ನಾಪತ್ತೆಯಾಗಿರುವ ಮಮತ ಎಂಬ ಬಾಲಕಿಯ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ಕೋಲು ಮುಖ, ಕಪ್ಪು ಬಣ್ಣ, 3.5 ಅಡಿ ಎತ್ತರ, 30 ಕೆಜಿ ತೂಕವಿರುತ್ತಾಳೆ. ಕ್ರೀಮ್ ಬಣ್ಣದ ಟಾಪ್, ಸಿಮೆಂಟ್ ಕಲರ್ ಪ್ಯಾಂಟ್, ರೆಡ್ ಕಲರ್ ದುಪ್ಪಟ ಧರಿಸಿರುತ್ತಾಳೆ.
ಇವಳ ಸುಳಿವು ಸಿಕ್ಕಲ್ಲಿ ಚಾಮರಾಜನಗರದ ಪಟ್ಟಣ ಪೊಲೀಸ್ ಠಾಣೆಗೆ ಅಥವಾ ದೂರವಾಣಿ ಸಂಖ್ಯೆ 08226-222047ಗೆ ತಿಳಿಸುವಂತೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.

ಆ. 9ರಂದು ಜಿಲ್ಲೆಗೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಭೇಟಿ

ಚಾಮರಾಜನಗರ, ಆ. 04 :- ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಡಾ. ಸುಚೇತನ ಸ್ವರೂಪ ಅವರು ಆಗಸ್ಟ್ 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳ ಜತೆಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಕುರಿತು ಸಂವಾದ ನಡೆಸುವರು. ನಂತರ ಬೆಂಗಳೂರಿಗೆ ತೆರಳುವರು.






No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು