ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಚಾಲನೆ
ಚಾಮರಾಜನಗರ, ಸೆ.1 - ಭಾರತೀಯ ಅಂಚೆ ಇಲಾಖೆಯ ಮಹತ್ವದ ಕ್ರಾಂತಿಯಂದೆ ಭಾವಿಸಲಾಗಿರುವ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಜಿಲ್ಲೆಯಲ್ಲೂ ಸಹ ಇಂದು ಅದ್ದೂರಿಯಾಗಿ ಆರಂಭಗೊಂಡಿತು.ನಗರದ ವಾಲ್ಮೀಕಿ ಭವನದಲ್ಲಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಶಾಖೆಗೆ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಭಾರತೀಯ ಅಂಚೆ ಇಲಾಖೆಗೆ ತನ್ನದೆ ಆದ ಮಹತ್ವ ಇದೆ. ಬ್ಯಾಂಕಿಂಗ್ ವಲಯಕ್ಕೂ ಇಲಾಖೆ ಹೆಜ್ಜೆ ಇಡುವ ಮೂಲಕ ಪ್ರಸ್ತುತ ಸಂದರ್ಭಕ್ಕೆ ಅವಶ್ಯಕತೆಗೆ ಅನುಗುಣವಾಗಿ ತೆರೆದು ಕೊಂಡಿರುವುದು ಉತ್ತಮವಾಗಿದೆ ಎಂದರು.
ಬ್ಯಾಂಕ್ ಸೌಲಭ್ಯಗಳು ಪಟ್ಟಣ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ ಎಲ್ಲ ಗ್ರಾಮೀಣ ಭಾಗಗಳಿಗೂ ತಲುಪುವಂತಾಗಬೇಕು ಈ ನಿಟ್ಟಿನಲ್ಲಿ ಭಾರತೀಯ ಅಂಚೆ ಇಲಾಖೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅರಂಭಿಸಿದೆ. ಈ ಕಾರ್ಯ ಯಶಸ್ವಿಯಾಗಲಿ ಎಂದು ಜಿಲ್ಲಾಧಿಕಾರಿ ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಮಾತನಾಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಚೆ ಇಲಾಖೆಯು ಸಹ ಬ್ಯಾಂಕ್ ವಲಯಕ್ಕೆ ಕಾಲಿರಿಸಿರುವುದು ಹೆಮ್ಮೆಯ ವಿಷಯವಾಗಿದೆ. ಸರ್ಕಾರಿ ಇಲಾಖೆಯೂ ಬ್ಯಾಂಕ್ ಕ್ಷೇತ್ರಕ್ಕೂ ಮುಂದಾಗಿರುವುದು ವಿಶಿಷ್ಠವಾಗಿದೆ. ಪ್ರೀತಿ, ನಂಬಿಕೆ ಉಳಿಸಿಕೊಂಡು ಬ್ಯಾಂಕ್ ಕಾರ್ಯ ನಿರ್ವಹಿಸುವಂತಾಗಲಿ ಎಂದು ಆಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದರ್‍ಕುಮಾರ್‍ಮೀನಾ ಮಾತನಾಡಿ ಅಂಚೆ ಇಲಾಖೆಗೆ 150 ವರ್ಷಗಳ ಇತಿಹಾಸವಿದೆ. ಅರ್ಥಿಕ ಸೇರ್ಪಡೆ, ಜಾಗೃತಿ, ಅರ್ಥಿಕ ಸಾಕ್ಷರತೆಯ ಗುರಿಯೊಂದಿಗೆ ಗ್ರಾಮೀಣರ ಮನೆ ಬಾಗಿಲಲ್ಲೆ ಬ್ಯಾಂಕ್ ಸೇವೆಗೆ ಮುಂದಾಗಿರುವುದು ಹೊಸ ಬೆಳವಣಿಗೆಯಾಗಿದೆ ಎಂದರು
ಅಂಚೆ ಇಲಾಖೆ ಅಧೀಕ್ಷಕರಾದ ಹೆಚ್.ಸಿ. ಸದಾನಂದ, ಬ್ಯಾಂಕಿನ ವ್ಯವಸ್ಠಾಪಕರಾದ ಮಾನುಸ್‍ಜಾರ್ಜ್, ಸಹಾಯಕ ಅಂಚೆ ಅಧೀಕ್ಷಕರಾದ ನರಸಿಂಹಮೂರ್ತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸೆ. 2ರಂದು ನಗರದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ
ಚಾಮರಾಜನಗರ, ಸೆ. 01 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದರ್ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಶ್ರೀಕೃಷ್ಣ ಜಯಂತಿ ಕುರಿತು ಚಾಮರಾಜನಗರದ ಪ್ರದೀಪ್‍ಕುಮಾರ್ ದೀಕ್ಷಿತ್ ಅವರು ಉಪನ್ಯಾಸ ನೀಡಲಿದ್ದಾರೆ.
ನಗರದ ಕಲಾಸರಸ್ವತಿ ನಾಟ್ಯ ಸಂಸ್ಥೆಯ ಕು. ಅಕ್ಷತಾ ಎಸ್. ಜೈನ್ ಮತ್ತು ತಂಡದವರು ನೃತ್ಯ ರೂಪಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆÉಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್. ಚೆನ್ನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ: ಡಾ.ಕೆ.ಹರೀಶ್‍ಕುಮಾರ್
ಚಾಮರಾಜನಗರ, ಸೆ.1 - ರಾಜ್ಯದಲ್ಲಿ ಏಕೀಕೃತ ವಿದ್ಯಾರ್ಥಿವೇತನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸದರಿ ತಂತ್ರಾಂಶದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಯೋಜನೆಗಳನ್ನು ನಿರ್ವಹಿಸಲಾಗುವುದು. ಸದರಿ ಯೋಜನೆಯಡಿ ವಿದ್ಯಾರ್ಥಿ ವೇತನ ಸೌಲಭ್ಯ ವೇತನವನ್ನು ಪಡೆಯಲು ವೆಬ್‍ಸೈಟ್ ವಿಳಾಸ: hಣಣಠಿs:/ssಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ತಾಲ್ಲೂಕುವಾರು ಅರ್ಜಿ ಸ್ವೀಕಾರ ಕೇಂದ್ರಗಳನ್ನು ತೆರೆದಿದ್ದು, ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ಎಸ್.ಎ.ಟಿ.ಎಸ್-ಐ.ಡಿ (ಸಂಬಂಧಪಟ್ಟ ಶಾಲೆಗಳಿಂದ) ವಿದ್ಯಾರ್ಥಿಯ ಆಧಾರ್/ಐಡಿ ಹಾಗೂ ಆಧಾರ್ ಇಐಡಿ ಸಂಖ್ಯೆಯಲ್ಲಿ ನಮೂದಿಸಿರುವಂತೆ ಹೆಸರು. ಪೋಷಕರ ಆಧಾರ್/ಇಐಡಿ ನಮೂದಿಸಿರುವಂತೆ ಹೆಸರು. ವಿದ್ಯಾರ್ಥಿಯ ಆಧಾರ್ ಇಲ್ಲದಿದ್ದಲ್ಲಿ, ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಖಾತೆಯ ವಿವರಗಳು (ಬ್ಯಾಂಕ್ ಹೆಸರು, ಬ್ಯಾಂಕ್ ವಿಳಾಸ ಐಎಫ್‍ಎಸ್‍ಇ ಕೋಡ್, ಖಾತೆ ಸಂಖ್ಯೆ), ವಿದ್ಯಾರ್ಥಿ ಹೆಸರಿನಲ್ಲಿ ನೀಡಲಾದ ಗಣಕೇಕೃತ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳ ಆರ್.ಡಿ ಸಂಖ್ಯೆಗಳು, ವಸತಿನಿಲಯ ವಿದ್ಯಾರ್ಥಿಯಾಗಿದ್ದಲ್ಲಿ ವಸತಿ ನಿರ್ವಹಣೆ ತಂತ್ರಾಂಶದ ನೋಂದಣಿ ಸಂಖ್ಯೆ, (ಹೆಚ್.ಎಂ.ಐ.ಎಸ್/ಇ-ಪಾಸ್ ಐಡಿ), ಅಲ್ಪಸಂಖ್ಯಾತ ವಿದ್ಯಾರ್ಥಿಯಾಗಿದ್ದಲ್ಲಿ ಹಾಲಿ ಶೈಕ್ಷಣಿಕ ವರ್ಷದ ಎನ್.ಎಸ್.ಪಿ ನೋಂದಣಿ ಸಂಖ್ಯೆ. ಪೋಷಕರು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿದ್ದಲ್ಲಿ ಸಂಬಂಧಿಸಿದ ದಾಖಲೆ ಪತ್ರಗಳನ್ನು ಸಲ್ಲಿಸಬೇಕು.
ಸದರಿ ದಾಖಲೆಗಳನ್ನು ಶಾಲೆಗಳಿಗೆ ಮತ್ತು ಮಾಹಿತಿ ಕೇಂದ್ರಗಳಲ್ಲಿ ನೀಡಿ, ಅಪ್‍ಲೋಡ್ ಮಾಡಿಸಲು ಎಲ್ಲಾ ಪೋಷಕರ ವರ್ಗದವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಕ್ರಮವಹಿಸಿ ಅರ್ಹ ವಿದ್ಯಾರ್ಥಿಗಳಿಗೆ ದೊರಕುವ ವಿದ್ಯಾರ್ಥಿ ವೇತನವನ್ನು ತಲುಪಿಸಲು ಸಹಕರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.2 ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಸೆ.1:- ಚಾಮರಾಜನಗರ ಪಟ್ಟಣ ವ್ಯಾಪ್ತಿಯಲ್ಲಿ ಜಿಓಎಸ್ ಅಳವಡಿಕೆ ಕಾರ್ಯವು ಸೆ.2 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜೋಡಿ ರಸ್ತೆ, ರಥದ ಬೀದಿ, ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಗುಂಡ್ಲುಪೇಟೆ ಸರ್ಕಲ್, ಶ್ರೀವೀರಭದ್ರೇಶ್ವರ ದೇವಸ್ಥಾನ, ಸಂತೇಮರಹಳ್ಳಿ ಸರ್ಕಲ್ ಮತ್ತು ಟೌನ್-1 ವ್ಯಾಪ್ತಿಗೆ ಸೇರಿದ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.11 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ. ಸಭೆ
ಚಾಮರಾಜನಗರ, ಸೆ.1 ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಸೆಪ್ಟೆಂಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.3 ರಂದು ಪದವೀಧÀರ ಪಾಥಮಿಕ ಶಿಕ್ಷಕರ ನೇಮಕಾತಿ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆ
ಚಾಮರಾಜನಗರ, ಸೆ.1 :- ಚಾಮರಾಜನಗರ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪಧವೀಧರ ಪ್ರಾಥಮಿಕ ಶಿಕ್ಷಕರ (6ರಿಂದ8) ವೃಂದದ ನೇಮಕಾತಿಗೆ ಸಂಬಂಧಿಸಿದಂತೆ 1:3 ಅನುಪಾತದಂತೆ ತಾತ್ಕಲಿಕವಾಗಿ ಪರಿಶೀಲನಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ ಕಾರ್ಯವು ಸೆಪ್ಟೆಂಬರ್ 3 ರÀಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ದಾಖಲಾತಿ ಪರಿಶೀಲನಾ ಸಂಬಂಭ ಸೂಚನೆಗಳನ್ನು ಪ್ರತ್ಯೇಕವಾಗಿ ನೀಡಲಾಗುವುದು. ಈ ಪ್ರಕ್ರಿಯೆ ನಂತರ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಿದ್ದು ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ತಮಗೆ ದೂರವಾಣಿಯಲ್ಲಿ ತಿಳಿಸಿದ ದಿನಾಂಕದಂದು ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಆಕ್ಷೇಪಣೆಗಳಿದ್ದರೆ ಕಚೇರಿಯ ಸ್ವೀಕೃತಿ ವಿಭಾಗಕ್ಕೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448978661, 6360444933, 8496975459, 08226-222406 ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರಿಯ ವಿದ್ಯಾಲಯದಲ್ಲಿ ಹೆಚ್ಚುವರಿ ತರಗತಿ ಮಂಜೂರು:ಸಂಸದರಿಂದ ಕೃತಜ್ಞತೆ
ಚಾಮರಾಜನಗರ, ಸೆ.1 - ನಗರದ ಮಾದಾಪುರ ಬಳಿಯ ಕೇಂದ್ರಿಯ ವಿದ್ಯಾಲಯದಲ್ಲಿ 2018-19 ನೇ ಸಾಲಿನಿಂದಲೇ ಜಾರಿಗೆ ಬರುವಂತೆ 1 ರಿಂದ 5 ನೇ ತರಗತಿವರೆಗೆ (ಪ್ರತಿ ತರಗತಿಯಲ್ಲಿ 40 ವಿದ್ಯಾರ್ಥಿಗಳು) ಹೆಚ್ಚುವರಿ ತರಗತಿಗೆ ಮಂಜೂರಾತಿ ದೊರೆತಿದೆ.
ಇತ್ತೀಚೆಗೆ ಕೇಂದ್ರಿಯ ವಿದ್ಯಾಲಯ ಕಟ್ಟಡದ ಉದ್ಘಾಟನೆ ವೇಳೆ ಕೇಂದ್ರ ಸಚಿವರಾದ ಅನಂತ್ ಅವರಿಗೆ ಹೆಚ್ಚುವರಿ ತರಗತಿಗೆ ಮಂಜೂರು ಮಾಡುವಂತೆ ಕೋರಲಾಗಿತ್ತು. ನವದೆಹಲಿಯಲ್ಲಿರುವ ಕೇಂದ್ರಿಯ ವಿದ್ಯಾಲಯದ ಆಯುಕ್ತರನ್ನು ಸಹ ಹೆಚ್ಚುವರಿ ತರಗತಿ ನಡೆಸಲು ಮನವಿ ಮಾಡಲಾಗಿತ್ತು. ಈ ಎಲ್ಲಾ ಮನವಿಗೆ ಸ್ಪಂಧಿಸಿ ಪ್ರಸಕ್ತ ಸಾಲಿನಿಂದಲೇ ಹೆಚ್ಚ್ಚುವರಿ ತರಗತಿಗೆ ಮಂಜೂರಾತಿ ಸಿಗಲು ಶ್ರಮಿಸಿದ ಕೇಂದ್ರ ಸಚಿವರು ಹಾಗೂ ಕೇಂದ್ರಿಯ ವಿದ್ಯಾಲಯದ ಮೇಲಾಧಿಕಾರಿಗಳಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 2ರಂದು ನಗರದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ
ಚಾಮರಾಜನಗರ, ಸೆ. 01- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಯವರು ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದರ್ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಶ್ರೀಕೃಷ್ಣ ಜಯಂತಿ ಕುರಿತು ಚಾಮರಾಜನಗರದ ಪ್ರದೀಪ್‍ಕುಮಾರ್ ದೀಕ್ಷಿತ್ ಅವರು ಉಪನ್ಯಾಸ ನೀಡಲಿದ್ದಾರೆ.
ನಗರದ ಕಲಾಸರಸ್ವತಿ ನಾಟ್ಯ ಸಂಸ್ಥೆಯ ಕು. ಅಕ್ಷತಾ ಎಸ್. ಜೈನ್ ಮತ್ತು ತಂಡದವರು ನೃತ್ಯ ರೂಪಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆÉಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೆಚ್. ಚೆನ್ನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
x
No comments:
Post a Comment