ಶಿಕ್ಷಣ ಕ್ಷೇತ್ರದ ಸಮಗ್ರ ಬದಲಾವಣೆಗೆ ಸರ್ಕಾರ ಬದ್ಧ: ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ಸೆ. 05 :- ಜಿಲ್ಲೆಗೆ ಶೈಕ್ಷಣಿಕ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣ ಕ್ಷೇತ್ರದ ಸಮಗ್ರ ಬದಲಾವಣೆಗೆ ಸರ್ಕಾರ ಕಟಿಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮತ್ತು ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಣ ತಜ್ಞರು ಹಾಗೂ ಆದರ್ಶ ಶಿಕ್ಷಕರಾಗಿದ್ದರು. ಅವರ ಜನ್ಮದಿವನ್ನು ಶಿಕ್ಷಕರ ದಿನವಾಗಿ ಆಚರಣೆ ಮಾಡುತ್ತಿರುವುದು ನಮ್ಮ ಹೆಮ್ಮೆಯಾಗಿದೆ. ಶಿಕ್ಷಕ ವೃತ್ತಿ ಇತರೆ ಎಲ್ಲಕ್ಕಿಂತ ಸರ್ವಶ್ರೇಷ್ಠವಾದುದಾಗಿದೆ. ಕಲ್ಲುಬಂಡೆಯಂತಹ ವಿದ್ಯಾರ್ಥಿಗಳನ್ನು ಕಡೆದು ಸುಂದರ ಶಿಲೆಯಾಗಿಸಿ ಸಮಾಜದ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.
ಶಾಲಾಕಟ್ಟಡಗಳ ನವೀಕರಣ, ಅಗತ್ಯವಿರುವೆಡೆ ಶಿಕ್ಷಕರ ನೇಮಕಾತಿ, ವಿದ್ಯಾರ್ಥಿನಿಲಯಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಇನ್ನಿತರೆ ಅವಶ್ಯ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ಕಾರ ಸಾಕಷ್ಟು ಕಾಳಜಿ ವಹಿಸುತ್ತಿದೆ. ಉನ್ನತ ಶಿಕ್ಷಣಕ್ಕಾಗಿ ಹಲವು ಶಿಕ್ಷಣಸಂಸ್ಥೆಗಳು ಜಿಲ್ಲೆಯಲ್ಲಿ ಆರಂಭವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ದೇಶ, ರಾಜ್ಯ ಹಾಗೂ ಜಿಲ್ಲೆಯ ಪ್ರಗತಿಗೆ ಶಿಕ್ಷಣವೇ ಮಾನದಂಡವಾಗಿದೆ. ಸ್ವಾತಂತ್ರ್ಯ ನಂತರ ಶೇ. 12ರಷ್ಟಿದ್ದ ದೇಶದ ಸಾಕ್ಷರತೆ ಇಂದು ಶೇ.75ಕ್ಕೆ ತಲುಪಿದೆ ಇದು ಅಭಿವೃದ್ಧಿ ಸೂಚಕವಾಗಿದೆ. ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಅದರಲ್ಲೂ ಪ್ರಾಥಮಿಕ ಹಂತದಲ್ಲಿಯೇ ಗುಣಾತ್ಮಕ ಶಿಕ್ಷಣ ಶೈಕ್ಷಣಿಕ ಪ್ರಗತಿಗೆ ಮುನ್ನುಡಿ ಬರೆಯಬೇಕು ಎಂದರು.
ಜಿಲ್ಲೆಯ ಹಲವೆಡೆ ಶಾಲೆಗಳಿಗೆ ಮೂಲಸೌಕರ್ಯಗಳ ಕೊರತೆಯಿದೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಜಿಲ್ಲೆಗೆ ಸಾಕಷ್ಟು ಅನುದಾನ ನೀಡಿದೆ. ಈಗಾಗಲೇ ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ಕಾಲೇಜನ್ನು ಆರಂಭಿಸಲಾಗಿದೆ. ಪ್ರಸ್ತುತ ವರ್ಷದಿಂದಲೇ ಕಾನೂನು ಕಾಲೇಜು ಸಹ ಕಾರ್ಯರಂಭ ಮಾಡಲಿದೆ ಎಂದು ತಿಳಿಸಿದರು.
ತಾವು ಬೋಧಿಸುವ ಶಿಕ್ಷಣ ಮತ್ತು ಕಲಿಯುವ ಮಕ್ಕಳನ್ನು ಪ್ರೀತಿಸುವವರೆ ನಿಜವಾದ ಶಿಕ್ಷ್ಷಕರು. ವಿದ್ಯಾರ್ಥಿಗಳನ್ನು ದೇಶದ ಆಸ್ತಿಯನ್ನಾಗಿ ಮಾಡುವಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದ ಡಾ. ರಾಧಾಕೃಷ್ಣನ್, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಇಂದಿನ ಶಿಕ್ಷಕರು ಅಳವಡಿಸಿಕೊಳ್ಳಬೇಕಿದೆ ಎಂದು ಧ್ರುವನಾರಾಯಣ ಅವರು ಸಲಹೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಶಿಕ್ಷಣ ಕ್ಷೇತ್ರದ ಬದಲಾವಣೆ ಶಿಕ್ಷಕರಿಂದ ಮಾತ್ರ ಸಾಧ್ಯ. ದೇಶದಲ್ಲಿ ಅತ್ಯಂತ ಸ್ಪರ್ಧಾತ್ಮಕ ಬೇಡಿಕೆಯುಳ್ಳ ಈ ಕ್ಷೇತ್ರ ಭಾರಿ ಸವಾಲಿನ ಹಾದಿಯಲ್ಲಿದೆ. ಶಿಕ್ಷಣ ಇಂದು ವ್ಯಾಪಾರೀಕರಣವಾಗುತ್ತಿದೆ ಇದನ್ನು ತಪ್ಪಿಸಲು ಶಿಕ್ಷಕರು ಪ್ರಜ್ಞಾವಂತರಾಗಬೇಕು. ಶಿಕ್ಷಕರಲ್ಲಿ ಕ್ರಿಯಾಶೀಲತೆ ವೃದ್ಧಿಯಾದರೆ ಮಾತ್ರ ಶಿಕ್ಷಣ ಅಭಿವೃದ್ಧಿಪಥದಲ್ಲಿ ಸಾಗುತ್ತದೆ ಎಂದರು.
ಯಾವುದೇ ಚೌಕಟ್ಟಿನೊಳಗೆ ನೀಡುವುದು ಶಿಕ್ಷಣವಲ್ಲ. ವಿದ್ಯಾರ್ಥಿಗಳಲ್ಲಿ ಚೈತನ್ಯ, ಕ್ರಿಯಾಶೀಲತೆಯನ್ನು ಮೂಡಿಸಿ ಅವರ ಪ್ರಬುದ್ಧತೆಯನ್ನು ವ್ಯಕ್ತಪಡಿಸುವಂತಹ ಶಿಕ್ಷಣವನ್ನು ನೀಡಬೇಕಾಗಿದೆ. ಮಕ್ಕಳಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆಯನ್ನು ಬೆಳೆಸಬೇಕು. ಅ ಮೂಲಕ ಶಿಕ್ಷಕರು ಎಲ್ಲರ ನಿರೀಕ್ಷೆಗಳನ್ನು ಮೀರಿ ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ಡಾ. ಹರೀಶ್‍ಕುಮಾರ್ ಅವರು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮಕೃಷ್ಣ ಅವರು ಡಾ.ಎಸ್. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರನ್ನು ಸನ್ಮಾನಿಸಿ ಶಿಕ್ಷಕರ ಕಲ್ಯಾಣ ನಿಧಿಯಿಂದ 5 ಸಾವಿರ ರೂ. ಗಳ ನಗದು ಬಹುಮಾನ ಹಾಗೂ ಪಾರಿತೋಷಕಗಳನ್ನು ವಿತರಿಸಲಾಯಿತು. ಅಲ್ಲದೆ ನಿವೃತ್ತ ಶಿಕ್ಷಕರನ್ನು ಸಹ ಸನ್ಮಾನಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ಎರ್ಪಡಿಸಲಾಗಿದ್ದ ತಾಲೂಕುಮಟ್ಟದ ಸಾಂಸ್ಕøತಿಕ ಸ್ಪರ್ಧೆ ಹಾಗೂ ಕ್ರೀಡೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮರುಗದಮಣಿ, ಸದಸ್ಯರಾದ ಉಮಾವತಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ದೊಡ್ಡಮ್ಮ, ಎ.ಪಿ.ಎಂ.ಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ, ಡಯಟ್ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಹೆಚ್.ಸಿ. ಚಂದ್ರಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ಯಾಮಲ, ಡಿ.ವೈ.ಎಸ್.ಪಿ ಜಯಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಆರ್. ರಾಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಲಕ್ಷ್ಮೀಪತಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದರು.
ಸೆಪ್ಟೆಂಬರ್ 10ರಂದು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ
ಚಾಮರಾಜನಗರ, ಸೆ. 05 - ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಅಧ್ಯಕ್ಷರಾದ ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಕ್ತ ವಿ.ವಿ. ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ
ಚಾಮರಾಜನಗರ, ಸೆ. 05 ನಗರದಲ್ಲಿರುವ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರದಲ್ಲಿ ಪ್ರಥಮ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ದಂಡಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕಡೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿದೆ.
2,50,000 ರೂ. ಗಳಿಗಿಂತ ಕಡಿಮೆ ಅದಾಯ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಮೂಲಕ ಉಚಿತವಾಗಿ ಪ್ರವೇಶ ಪಡೆಯಲು ಅವಕಾಶವಿದೆ. ಬಿ.ಪಿ.ಎಲ್ ಕಾರ್ಡು ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ. 25ರಷ್ಟು ರಿಯಾಯಿತಿ ಇದೆ.
ಅರ್ಜಿಯನ್ನು ವಿ.ವಿ. ನಿಲಯದ ಅಧಿಕೃತ ವೆಬ್‍ಸೈಟ್ ತಿತಿತಿ.ಞsoumಥಿsoಡಿe.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಸದರಿ ವೆಬ್ ಸೈಟ್ ಅಥವಾ ನಗರದ ರಾಮಸಮುದ್ರದ ಕೆ.ಎಚ್.ಬಿ ಬಡಾವಣೆಯಲ್ಲಿರುವ ಇಮ್ಯಾನುವೆಲ್ ಪಬ್ಲಿಕ್ ಶಾಲೆಯ ಎದುರು ಇರುವ ಮುಕ್ತ ವಿ.ವಿ.ಯ ಪ್ರಾದೇಶಿಕ ಕೇಂದ್ರದ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08226-222191, ಮೊ. 9632346618, 9448500718 ಸಂಪಕಿಸುವಂತೆ ಕೇಂದ್ರದ ನಿರ್ದೇಶಕರಾದ ಎನ್ ಮಹದೇವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಸೆ. 05 - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಗುಂಡ್ಲುಪೇಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 7ರಂದು ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಗುಂಡ್ಲುಪೇಟೆ 66/11 ಕೆ.ವಿ, ಬೊಮ್ಮಲಾಪುರ 66/11 ಕೆ.ವಿ ಮತ್ತು ಹಂಗಳ 66/11 ಕೆ.ವಿ ವ್ಯಾಪ್ತಿ ಪ್ರದೇಶಗಳಲ್ಲಿ ಅಂದು ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
x
No comments:
Post a Comment