ನಗರಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ
ಚಾಮರಾಜನಗರ, ಆ.29 - ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಗಳಿಗೆ ಆಗಸ್ಟ್ 31 ರಂದು ನಡೆಯಲಿರುವ ಚುನಾವಣೆ ಸಂಬಂಧ ಮತದಾನಕ್ಕೆ ಜಿಲ್ಲಾಡಳಿತವು ಸರ್ವ ಸಿದ್ಧತೆ ಮಾಡಿಕೊಂಡಿದೆ.ಚಾಮರಾಜನಗರ ನಗರಸಭೆಗೆ ಸಂಬಂಧಿಸಿದಂತೆ ಒಟ್ಟು 31 ವಾರ್ಡ್‍ಗಳಿದ್ದು, 26106 ಪುರುಷರು, 27650 ಮಹಿಳೆಯರು, ಇತರೆ 7 ಮತದಾರರು ಸೇರಿದಂತೆ ಒಟ್ಟು 53763 ಮತದಾರರು ಮತ್ತು 4 ಮಂದಿ ಸೇವಾ ಮತದಾರರಿದ್ದಾರೆ. ಕೊಳ್ಳೇಗಾಲ ನಗರಸಭೆಗೆ ಸಂಬಂಧಿಸಿದಂತೆ ಒಟ್ಟು 31 ವಾರ್ಡ್‍ಗಳಿದ್ದು 21963 ಪುರುಷರು, 22488 ಮಹಿಳೆಯರು, ಇತರೆ 4 ಮತದಾರರು ಸೇರಿದಂತೆ ಒಟ್ಟು 44455 ಮತದಾರರು ಇದ್ದಾರೆ.
ಚಾಮರಾಜನಗರ ನಗರಸಭೆಗೆ ಸಂಬಂಧಿಸಿದಂತೆ ಒಟ್ಟು 61 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 11 ಅತೀ ಸೂಕ್ಷ್ಮ, 14 ಸೂಕ್ಷ್ಮ ಮತ್ತು 36 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಕೊಳ್ಳೇಗಾಲ ನಗರಸಭೆಗೆ ಸಂಬಂಧಿಸಿದಂತೆ ಒಟ್ಟು 45 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 10 ಅತೀ ಸೂಕ್ಷ್ಮ, 19 ಸೂಕ್ಷ್ಮ ಮತ್ತು 16 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ.
ಚಾಮರಾಜನಗರ ನಗರಸಭೆಯ 31 ವಾರ್ಡ್‍ಗಳಿಗೆ ಆಯ್ಕೆ ಬಯಸಿ ಒಟ್ಟು 132 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಕೊಳ್ಳೇಗಾಲ ನಗರಸಭೆಯ 31 ವಾರ್ಡ್‍ಗಳಿಗೆ ಅಂತಿಮವಾಗಿ ಒಟ್ಟು 112 ನಾಮಪತ್ರಗಳು ಕ್ರಮಬದ್ದವಾಗಿದ್ದು 6 ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡ ನಂತರ ಒಟ್ಟು 101 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. (6ನೇ ವಾರ್ಡಿನಿಂದ ಗಂಗಮ್ಮ್ಮ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9ನೇ ವಾರ್ಡಿನಿಂದ ಬಹುಜನ ಸಮಾಜ ಪಾರ್ಟಿ (ಬಿ.ಎಸ್.ಪಿ) ಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಎಸ್. ರಮೇಶ್ ಅವರು ನಿಧನರಾದ ಪ್ರಯುಕ್ತ 9ನೇ ವಾರ್ಡಿನ ಚುನಾವಣೆಯನ್ನು ರದ್ದುಪಡಿಸಲಾಗಿದ್ದು, ಈ ವಾರ್ಡಿನಲ್ಲಿ ಸ್ಪರ್ಧಿಸಿರುವ 4 ಅಭ್ಯರ್ಥಿಗಳು ಸೇರಿ ಒಟ್ಟು 5 ಅಭ್ಯರ್ಥಿಗಳನ್ನು ಹೊರತುಪಡಿಸಿ)
ಚಾಮರಾಜನಗರ ನಗರಸಭೆ ಮತದಾನಕ್ಕಾಗಿ 75 ಬ್ಯಾಲೆಟ್ ಯೂನಿಟ್ ಮತ್ತು 75 ಕಂಟ್ರೋಲ್ ಯೂನಿಟ್‍ಗಳನ್ನು ಬಳಸಲಾಗುತ್ತಿದೆ. ಕೊಳ್ಳೇಗಾಲ ನಗರಸಭೆ ಮತದಾನಕ್ಕಾಗಿ 55 ಬ್ಯಾಲೆಟ್ ಯೂನಿಟ್ ಮತ್ತು 55 ಕಂಟ್ರೋಲ್ ಯೂನಿಟ್ ಗಳನ್ನು ಬಳಸಲಾಗುತ್ತಿದೆ.
ಚಾಮರಾಜನಗರ ನಗರಸಭೆ ಚುನಾವಣೆ ಕರ್ತವ್ಯಕ್ಕಾಗಿ 68 ಪ್ರಿಸೈಡಿಂಗ್ ಅಧಿಕಾರಿ, 68 ಮೊದಲನೇ ಮತಗಟ್ಟೆ ಅಧಿಕಾರಿ, 136 ಮತಗಟ್ಟೆ ಅಧಿಕಾರಿಗಳನ್ನೊಳಗೊಂಡಂತೆ ಒಟ್ಟು 272 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೊಳ್ಳೇಗಾಲ ನಗರಸಭೆ ಚುನಾವಣೆ ಕರ್ತವ್ಯಕ್ಕಾಗಿ 50 ಪ್ರಿಸೈಡಿಂಗ್ ಅಧಿಕಾರಿ, 50 ಮೊದಲನೇ ಮತಗಟ್ಟೆ ಅಧಿಕಾರಿ, 100 ಮತಗಟ್ಟೆ ಅಧಿಕಾರಿಗಳನ್ನೊಳಗೊಂಡಂತೆ ಒಟ್ಟು 200 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮಸ್ಟರಿಂಗ್ ಹಾಗೂ ಡೀಮಸ್ಟರಿಂಗ್ ಕೇಂದ್ರವಾಗಿದೆ. ಕೊಳ್ಳೇಗಾಲ ನಗರಸಭೆ ಚುನಾವಣೆಗೆ ಸಂಬಂಧಿಸಿದಂತÉ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಎಂ.ಜಿ.ಎಸ್.ವಿ. ಜೂನಿಯರ್ ಕಾಲೇಜು ಮಸ್ಟರಿಂಗ್ ಹಾಗೂ ಡೀಮಸ್ಟರಿಂಗ್ ಕೇಂದ್ರವಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ಒರ್ವ ಡಿ.ಎಸ್.ಪಿ, ಮೂವರು ಸಿ.ಪಿ.ಐ., ಆರು ಮಂದಿ ಪಿ.ಎಸ್.ಐ/ಎ.ಎಸ್.ಐ ಮತ್ತು ಮತಗಟ್ಟೆಗಳಿಗೆ 11 ಮಂದಿ ಎ.ಎಸ್.ಐ, 25 ಹೆಡ್ ಕಾನ್ಸ್‍ಟೇಬಲ್, 61 ಪೊಲೀಸ್ ಕಾನ್ಸ್‍ಟೇಬಲ್, 61 ಹೋಂಗಾರ್ಡ್‍ಗಳು ಕಾರ್ಯ ನಿರ್ವಹಿಸಲಿದ್ದಾರೆ. ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯಲ್ಲಿ ಒರ್ವ ಡಿ.ಎಸ್.ಪಿ, ಇಬ್ಬರು ಸಿ.ಪಿ.ಐ., ಆರು ಮಂದಿ ಪಿ.ಎಸ್.ಐ/ಎ.ಎಸ್.ಐ ಮತ್ತು ಮತಗಟ್ಟೆಗಳಿಗೆ 10 ಮಂದಿ ಎ.ಎಸ್.ಐ, 29 ಹೆಡ್‍ಕಾನ್ಸ್‍ಟೇಬಲ್, 45 ಪೊಲೀಸ್ ಕಾನ್ಸ್‍ಟೇಬಲ್, 45 ಹೋಂಗಾರ್ಡ್‍ಗಳು ಕಾರ್ಯ ನಿರ್ವಹಿಸಲಿದ್ದಾರೆ.
ಚಾಮರಾಜನಗರ ನಗರಸಭೆ ಚುನಾವಣೆಗೆ ನೇಮಕ ವಾಗಿರುವ ಮತಗಟ್ಟೆ ಅಧಿಕಾರಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು 7 ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು 10 ಜೀಪ್‍ಗಳ ವ್ಯವಸ್ಥೆ ಮಾಡಲಾಗಿದೆ. ಕೊಳ್ಳೇಗಾಲ ನಗರಸಭೆ ಚುನಾವಣೆಗೆ ನೇಮಕ ಮಾಡಿರುವ ಮತಗಟ್ಟೆ ಅಧಿಕಾರಿಗಳನ್ನು ಮತಗಟ್ಟೆಗಳಿಗೆ ಕರೆದೊಯ್ಯಲು 4 ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು 10 ಜೀಪ್‍ಗಳ ವ್ಯವಸ್ಥೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯವು ಸೆಪ್ಟೆಂಬರ್ 3 ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ. ಚಾಮರಾಜನಗರ ನಗರಸಭೆಗೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ ಎಣಿಕೆ ಕೇಂದ್ರವಾಗಿದೆ. ಕೊಳ್ಳೇಗಾಲ ನಗರಸಭೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಎಂ.ಜಿ.ಎಸ್.ವಿ ಜ್ಯೂನಿಯರ್ ಕಾಲೇಜು ಮತ ಎಣಿಕೆ ಕೇಂದ್ರವಾಗಿದೆ.
ಮತ ಎಣಿಕೆ ಕಾರ್ಯವು ತಲಾ 8 ಟೇಬಲ್‍ಗಳಲ್ಲಿ ನಡೆಯಲಿದೆ. ಪ್ರತಿ ನಗರಸಭೆಗೆ 9 ಜನ ಮೇಲ್ವಿಚಾರಕರು, 9 ಜನ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ನೇಮಕವಾvರುವ ಅಧಿಕಾರಿಗಳಿಗೆ ಮಾಸರ್ ಟ್ರೈನರ್ಸ್ ಮೂಲಕ ಈಗಾಗಲೇ ತರಬೇತಿ ನೀಡಲಾಗಿದೆ.
ಮತ ಎಣಿಕೆ ಕಾರ್ಯವು ನಡೆಯಲಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರ ಪ್ರದೇಶ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ಸಿಆರ್‍ಪಿಸಿ 144 ರ ಕಾಲಂ ರನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ.
ಮತದಾನದ ಹಿನ್ನೆಲೆಯಲ್ಲಿ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ ಮತ್ತು ಜಾತ್ರೆಗಳನ್ನು ಆಗಸ್ಟ್ 31 ರಂದು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗವು ಸಾಮಾನ್ಯ ಚುನಾವಣಾ ವೀಕ್ಷಕರು, ವಿಶೇಷ ಚುನಾವಣಾ ವೀಕ್ಷಕರು ಮತ್ತು ವೆಚ್ಚ ವೀಕ್ಷಕರನ್ನು ನೇಮಕ ಮಾಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರಸಭೆ ಚುನಾವಣೆ: ಆಗಸ್ಟ್ 31 ರಂದು ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ
ಚಾಮರಾಜನಗರ, ಆ.29 ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರಪಾಲಿಕೆ ಚುನಾವಣೆಗೆ ಆಗಸ್ಟ್ 31 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಆಯಾಯ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಆಗಸ್ಟ್ 31 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ.
ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು. ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರ ಸಾರ್ವಜನಿಕರ ರಜೆ ಎಂದು ಘೋಷಿಸಲಾಗಿದೆ.
ನಗರಸಭೆ ಚುನಾವಣೆ : ಕ್ಷೇತ್ರದಲ್ಲದವರು ಕ್ಷೇತ್ರ ಬಿಡುವಂತೆ ಸೂಚನೆ
ಚಾಮರಾಜನಗರ, ಆ. 28 ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆ ಚುನಾವಣೆ ಸಂಬಂಧ ಅಗಸ್ಟ್ 31ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯ ವರೆಗೆ ಮತದಾನ ನಡೆಯಲ್ಲಿದ್ದು ಮತದಾನ ಪ್ರಾರಂಭವಾಗುವ ಮುಂಚಿನ 48ಗಂಟೆಯ ಒಳಗೆ ಬಹಿರಂಗ ಪ್ರಚಾರ ಮುಕ್ತಾಯವಾಗುವ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಪರ ಮತ ಯಾಚಿಸುವ ಕ್ಷೇತ್ರದ ಮತದಾರರಲ್ಲದವರು, ಏಜೆಂಟರು ರಾಜಕೀಯ ಪಕ್ಷಗಳ ಮುಖಂಡರು, ತಾರಾ ಪ್ರಚಾರಕರು, ಅಗಸ್ಟ್ 29ರ ಬೆಳಿಗ್ಗೆ 7 ಗಂಟೆಯೊಳಗಾಗಿ ಕ್ಷೇತ್ರದ ವ್ಯಾಪ್ತಿಯನ್ನು ಬಿಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಯವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮತದಾನ ಪ್ರಾರಂಭವಾಗುವ ಮುಂಚಿನ 48ಗಂಟೆಯೊಳಗೆ ಪ್ರಚಾರ ಸಂಬಂಧ ಯಾವ ಯಾವ ಕಾರ್ಯಗಳನ್ನು ಮಾಡಬಾರದೆಂಬ ಕುರಿತು ತಿಳಿಸಿದ್ದಾರೆ.ಸಂಬಂಧ ಪಟ್ಟ ನಗರ ಸಭೆ ವ್ಯಾಪ್ತಿಯಲ್ಲಿ ಮತದಾನ ಪ್ರಾರಂಭವಾಗುವ ಮುಂಚಿನ 48 ಗಂಟೆಗಳ ಒಳಗೆ ಯಾವುದೇ ವ್ಯಕ್ತಿ, ರಾಜಕೀಯ ಪಕ್ಷ, ಉಮೇದುವಾರರು(ಅಭ್ಯರ್ಥಿಗಳಾಗಲೀ ಅಥವಾ ಅವರ ಪರವಾಗಿ ಅವರ ಬೆಂಬಲಿಗರಾಗಲೀ) ಚುನಾವಣೆ ಸಂಬಂಧ ಯಾವುದೇ ಸಭೆ ಸಮಾರಂಭ ಮೆರವಣಿಗೆ ನಡೆಸತಕ್ಕದ್ದಲ್ಲ. ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುವಂತಿಲ್ಲ.
ಸಾರ್ವಜನಿಕರಿಗೆ, ಮತದಾರರಿಗೆ ಸುದ್ದಿಮಾಧ್ಯಮಗಳಾದ ಎಫ್.ಎಂ. ರೇಡಿಯೂ, ದೂರದರ್ಶನ, ಸಿನಿಮಾ ಇತ್ಯಾದಿಗಳ ಮೂಲಕ ಚುನಾವಣಾ ಪ್ರಚಾರ ಮಾಡತಕ್ಕದ್ದಲ್ಲ. ಮೊಬೈಲ್ ಮೂಲಕ ಎಸ್.ಎಂ.ಎಸ್, ವಾಟ್ಸ್‍ಪ್, ಫೇಸ್‍ಬುಕ್, ಟ್ವೀಟರ್, ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸತಕ್ಕದ್ದಲ್ಲ. ಮತದಾರರಿಗೆ ವೀಡಿಯೋ ಕ್ಲಿಪ್ಪಿಂಗ್ಸ್ ಪ್ರದರ್ಶಿಸತಕ್ಕದ್ದಲ್ಲ. ಯಾವುದೇ ಮತಗಟ್ಟೆಯ ಮುಂದೆ ಜನರನ್ನು ಆಕರ್ಷಿಸಲು ಸಂಗೀತ, ನಾಟಕ, ರಂಗ ಕಲಾಪಗಳನ್ನು ನಡೆÀಸುವಂತಿಲ್ಲ, ಮತದಾನ ನಡೆಯುವ ದಿನ ಮತ್ತು ಮತ ಎಣಿಕೆ ನಡೆಯುವ ದಿನದಂದು ಸಾರ್ವಜನಿಕ ಸಭೆಗಳನ್ನು ನಡೆಸುವಂತಿಲ್ಲ. ಮತಗಟ್ಟೆಗಳಿಗೆ ಮತದಾರರನ್ನು ವಾಹನಗಳಲ್ಲಿ ಕರೆದು ತರುವುದು ಹಾಗೂ ಅಲ್ಲಿಂದ ಕರೆದುಕೊಂಡು ಹೋಗುವಂತಿಲ್ಲ. ದಿನಪತ್ರಿಕೆಗಳಲ್ಲಿ ಜಾಹಿರಾತು ಹೊರಡಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ನಗರಸಭೆ ಚುನಾವಣೆ : ಸಂತೆ ಜಾತ್ರೆ ನಿಷೇಧ
ಚಾಮರಾಜನಗರ, ಆ. 28 - ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆ ಸಂಬಂಧ ಹಿನ್ನಲೆಯಲ್ಲಿ ಸಂಬಂಧಿಸಿದ ನಗರ ಸಭೆ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವ ಹಿತದೃಷ್ಠಿಯಿಂದ ಅಗಸ್ಟ್ 31ರಂದು ಬೆಳಿಗ್ಗೆ 5ರಿಂದ ಸಂಜೆ 7 ಗಂಟೆಯವರೆಗೆ ಚಾಮರಾಜನಗರ ನಗg,À ಕೊಳ್ಳೇಗಾಲ ನಗರಸಭೆ ಸಭೆ ಮತ್ತು ಟೌನ್ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.ನಗರಸಭೆ ಚುನಾವಣೆ : ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಡಿ.ಸಿ ಆದೇಶ
ಚಾಮರಾಜನಗರ, ಆ. :- ಜಿಲ್ಲೆಯ ಚಾಮರಾಜನಗರ ನಗರಸಭೆ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆಗೆ ಅಗಸ್ಟ್ 31ರಂದು ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ನಗರಸಭೆ ಪ್ರದೇಶಗಳಲ್ಲಿ ಅರ್ಹ ಕಾರ್ಮಿಕ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿಯವರು ಆದೇಶ ಹೊರಡಿಸಿದ್ದಾರೆ.ಸದರಿ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿಯವರು ತಿಳಿಸಿದ್ದಾರೆ.
No comments:
Post a Comment