Saturday, 8 September 2018

ಅಬಕಾರಿ ಇಲಾಖೆ ಕಾರ್ಯಚಾರಣೆ: 3ಲಕ್ಷ ರೂ ಮೌಲ್ಯದ ಗಾಂಜಾ ವಶ (04-09-2018)

ಅಬಕಾರಿ ಇಲಾಖೆ ಕಾರ್ಯಚಾರಣೆ: 3ಲಕ್ಷ ರೂ ಮೌಲ್ಯದ ಗಾಂಜಾ ವಶ

ಚಾಮರಾಜನಗರ, ಸೆ. 4  - ಅಬಕಾರಿ ಇಲಾಖೆಯ ಅಧಿಕಾರಿಗಳು ಕೊಳ್ಳೇಗಾಲ ತಾಲ್ಲೂಕಿನ ಕರಳಕಟ್ಟೆ ಗ್ರಾಮದ ಜಮೀನಲ್ಲಿ ಹಾಗೂ ಅಲ್ಲಿದ್ದ ಮನೆಯ ಮೇಲೆ ದಾಳಿನಡೆಸಿ ಅಕ್ರಮವಾಗಿ ಬೆಳೆದಿದ್ದ ಹಾಗೂ ದಾಸ್ತಾನು ಮಾಡಲಾಗಿದ್ದ 3 ಲಕ್ಷ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಭಾನುವಾರ ಕೊಳ್ಳೇಗಾಲ ತಾಲ್ಲೂಕಿನ ಕರಳಕಟ್ಟೆ ಗ್ರಾಮದ ಗುಂಡಾಲ ಜಲಾಶಯ ರಸ್ತೆಯ ಪಕ್ಕದ ಜಡೇಗೌಡ ಎಂಬಾತನಿಗೆ ಸೇರಿದ ಜಮೀನು ಹಾಗೂ ಅಲ್ಲಿಯೇ ಇದ್ದ ಮನೆಯ ಮೇಲೆ ದಾಳಿನಡೆಸಿ ಅಕ್ರಮವಾಗಿ ಬೆಳೆದಿದ್ದ 324 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು ಅಲ್ಲದೆ ಮಾರಾಟಕ್ಕೆ ಸಿದ್ದಪಡಿಸಿದ್ದ 1.6ಕೆ.ಜಿ ವಣಗಿದ ಗಾಂಜಾವನ್ನು ಜಪ್ತಿಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಡೇಗೌಡನ್ನು ಬಂದಿಸಿದ್ದು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.
ಅಬಕಾರಿ ಉಪ ಅಧೀಕ್ಷಕರಾದ ಗಂಗಾಂದರ ಹೆಚ್.ಮುದೆಣ್ಣವರ್, ನಿರೀಕ್ಷಕರಾದ ಎ.ಎ.ಮುಜಾವರ್, ಕೆ.ವಿ.ಲೋಹಿತ್, ಎಂ.ಬಿ.ಉಮಾಶಂಕರ್, ಅರಣ್ಯಾಧಿಕಾರಿಗಳಾದ ಮಹೇಶ್, ನವೀನ್, ಅಬಕಾರಿ ಸಿಬ್ಬಂಧಿ ರವಿಕುಮಾರ್, ಕೃಷ್ಣಮೂರ್ತಿ, ರಮೇಶ, ಪ್ರದೀಪ್, ಜಯಪ್ರಕಾಶ್, ಸುಂದ್ರಪ್ಪ, ಸಿದ್ದಯ್ಯ, ವೀರತಪ್ಪ ಮಂಜುನಾಥ, ಸಂತೋಷ್‍ಕುಮಾರ್, ಮಹೇಶ ಆನಂದ, ಹೇಮಂತ್, ಮೋಹನ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿ ಪರಿಶಿಷ್ಟವರ್ಗಗಳ ಇಲಾಖೆ ಸೂಚನೆ 
ಚಾಮರಾಜನಗರ, ಸೆ. 4 - ಪ್ರಸಕ್ತ ಸಾಲಿನ ಪರಿಶಿಷ್ಟವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮಂಜೂರು ಮಾಡಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮುಲಕ ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸುವಂತೆ ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಸೂಚಿಸಿದೆ
ಆನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಲು ವೆಬ್ ಸೈಟ್ ತಿತಿತಿ.ssಠಿ.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಅವಕಾಶ ಕಲ್ಪಿಸಿದೆ.
ಸರ್ಕಾರಿ, ಅನುದಾನಿತ, ಅನುದಾನರಹಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ನೋಂದಾಯಿಸಲು ಆಯಾಶಾಲಾ ಶಿಕ್ಷಕರು ಪೋಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಯ SಂಖಿS Iಆ(ಎಸ್.ಎ.ಟಿ.ಎಸ್ ಐಡಿ) ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಅಥವಾ ಇ.ಐ.ಡಿ ಸಂಖ್ಯೆ, ಹೆಸರು, ಆಧಾರ್ ಇಲ್ಲದಿದ್ದಲ್ಲಿ ವಿದ್ಯಾರ್ಥಿಯ ಹೆಸರಿನಲ್ಲಿವ ಬ್ಯಾಂಕ್ ಖಾತೆಯ ವಿವರ ಅಂದರೆ ಬ್ಯಾಂಕ್ ಹೆಸರು, ವಿಳಾಸ, ಐ.ಎಫ್.ಸಿ ಕೋಡ್ ಖಾತೆ ಸಂಖ್ಯೆ, ವಿದ್ಯಾರ್ಥಿಯ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅದರ ನೊಂದಣಿ ಸಂಖ್ಯೆ, ವಸತಿ ನಿಲಯದ ವಿದ್ಯಾರ್ಥಿಯಾಗಿದ್ದಲ್ಲಿ ನಿಲಯ ನಿರ್ವಹಣೆಯ ತಂತ್ರಾಂಶದ ನೋಂದಣಿ ಸಂಖ್ಯೆ (ಹೆಚ್.ಎಂ.ಐ.ಎಸ್)ನ್ನು ಅರ್ಜಿಯ ಜೊತೆ ನೋಂದಾಯಿಸಬೇಕು ಎಂದು ಚಾಮರಾಜನಗರ ಹಾಗೂ ಕೊಳ್ಳೇಗಾಲ ತಾಲ್ಲೂಕು ಪರಿಶಿಷ್ಟವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಸೆ. 4  - ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಸೆಪ್ಟೆಂಬರ್ 5ರಂದು ಸಂತೇಮರಳ್ಳಿ ಉಪವಿಭಾಗದ ಕಾಗಲವಾಡಿ ಶಾಖೆಯ ಹಿರಿಕೆರೆ ಫೀಡರ್ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲಿರುವ ಪರಿವರ್ತಕಗಳಿಗೆ ಮೀಟರ್ ಅಳವಡಿಸುತ್ತಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸಂಬಂಧ ಪಟ್ಟ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ಸೆಸ್ಕ ಸಂತೇಮರಹಳ್ಳಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 6ರಂದು ಸುಗಮ ಸಂಗೀತ ತರಬೇತಿ ಶಿಭಿರ ಉದ್ಘಾಟನೆ
ಚಾಮರಾಜನಗರ, ಸೆ. 4  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಸುಗಮ ಸಂಗೀತ ತರಬೇತಿ ಶಿಬಿರದ ಉದ್ಘಾಟನೆ ಸಮಾರಂಭವು ಸೆಪ್ಟೆಂಬರ್ 6ರಂದು ಬೆಳಗ್ಗೆ 11 ಗಂಟೆಗೆ ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
ಸಂಸ್ಕøತಿ ಚಿಂತಕರಾದ ಪ್ರೊ.ಜಿ.ಎಸ್.ಜಯದೇವ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಫಯಾಜ್‍ಖಾನ್ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಮುಖ್ಯ ಅತಿಥಿಯಾಗಿ ಪಾಲ್ಗೊಳುವರು. ಸದಸ್ಯ ಸಂಚಾಲಕರಾದ ಆನಂದ ಮಾದಲಗೆರೆ ಪ್ರಾಸ್ತಾವಿಕ ನುಡಿಗಳನ್ನಾಡುವರು. ಶಿಬಿರದ ನಿರ್ದೇಶಕರಾದ ಬಿ.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಟಿ.ರಾಜಾರಾಮ್, ಪುರುಷೋತ್ತಮ, ಸಿ.ಎಂ.ನರಸಿಂಹಮೂರ್ತಿ ಪಾಲ್ಗೊಳುವರು.
ಸೆಪ್ಟೆಂಬರ್ 9ರಂದು ಮಧ್ಯಾಹ್ನ ಮೂರು ಗಂಟೆಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾಧಿಕಾರಿ ಬಿ.ಬಿ.ಕಾವೇರಿಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ||ಕೆ.ಹರೀಶ್‍ಕುಮಾರ್, ಹೊಂಬಾಳೆ ಪ್ರತಿಭಾರಂಗದ ಅಧ್ಯಕ್ಷರಾದ ಎಚ್.ಪಲ್ಗುಣ ಪ್ರಮಾಣಪತ್ರ ವಿತರಿಸುವರು. ಮೈಸೂರಿನ ರಘುಲೀಲಾ ಸಂಗೀತ ಮಂದಿರದ ನಿರ್ದೇಶಕರಾದ ಸುನೀತ ಚಂದ್ರಕುಮಾರ ಮುಖ್ಯಅತಿಥಿಯಾಗಿ ಪಾಲ್ಗೊಳುವರು.
ಶಿಭಿರಾರ್ಥಿಗಳಿಂದ ಸುಮಗ ಸಂಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಸುಗಮ ಸಂಗೀತ ತರಬೇತಿ ಶಿಬಿರದಲ್ಲಿ ಭಾಗವಹಿಸುವವರು ಸ್ಥಳದಲ್ಲಿಯೇ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸೆ. 5ರಂದು ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ
ಚಾಮರಾಜನಗರ, ಸೆ. 04– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭವು ಸೆಪ್ಟೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಎನ್. ಮಹೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ನಿವೃತ್ತ ಶಿಕ್ಷಕರನ್ನು ಸನ್ಮಾನಿಸುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, , ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮರಗದಮಣಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಧಮೇಂಧರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವವರ ವಿವರ
ಚಾಮರಾಜನಗರ, ಸೆ. 04 – ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ 2018-19ನೇ ಸಾಲಿನ ಜಿಲ್ಲಾಮಟ್ಟದ ಶಿಕ್ಷಕರ ಪ್ರಶಸ್ತಿಗೆ 3 ವಿಭಾಗಗಳಲ್ಲಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ವಿವರ ಇಂತಿದೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ- ಚಾಮರಾಜನಗರ ತಾಲೂಕು: ಎಂ. ಡಿ. ಮಹದೇವಯ್ಯ, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಯಡಪುರ, ಗುಂಡ್ಲುಪೇಟೆ ತಾಲ್ಲೂಕು: ಜಯರಾಮು, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಟಿಪುರ, ಕೊಳ್ಳೇಗಾಲ ತಾಲ್ಲೂಕು: ಡಿ. ಮಹಾದೇವ, ಪ್ರಭಾರ ಮುಖ್ಯ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೆಲ್ಲಳ್ಳಿಮಾಳ, ಹನೂರು ತಾಲ್ಲೂಕು: ತನುಜ ಫಾತೀಮ ಬ್ರಿಟ್ಟೋ, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಂಡಯ್ಯನಪಾಳ್ಯ, ಯಳಂದೂರು ತಾಲ್ಲೂಕು: ಕೆ. ಪುಟ್ಟಿ, ಸಹ ಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮದ್ದೂರು.
ಹಿರಿಯ ಪ್ರಾಥಮಿಕ ಶಾಲಾ ವಿಭಾಗ- ಚಾಮರಾಜನಗರ ತಾಲೂಕು: ಆರ್. ಚಿಕ್ಕಬಸವ, ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಯ್ಯನಪುರ. ಗುಂಡ್ಲುಪೇಟೆ ತಾಲ್ಲೂಕು: ಲತ್ತೀಶ್ಯ ಚಿನ್ನಪ್ಪ, ದೈಹಿಕ ಶಿಕ್ಷಣ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆಲಸೂರು, ಕೊಳ್ಳೇಗಾಲ ತಾಲ್ಲೂಕು: ಎಸ್. ನಾಗರಾಜು, ಪ್ರಭಾರ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಭೀಮನಗರ. ಹನೂರು ತಾಲ್ಲೂಕು: ಎಸ್. ಕೃಷ್ಣ, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದಿನ್ನಹಳ್ಳಿ, ಯಳಂದೂರು ತಾಲ್ಲೂಕು: ನಂಜುಂಡಸ್ವಾಮಿ, ಪ್ರಭಾರ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆಸ್ತೂರು-2.
ಪ್ರೌಢಶಾಲಾ ವಿಭಾಗ- ಚಾಮರಾಜನಗರ ತಾಲೂಕು: ಕೆಂಪಣ್ಣ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ದೊಡ್ಡರಾಯಪೇಟೆ, ಗುಂಡ್ಲುಪೇಟೆ ತಾಲ್ಲೂಕು: ಮಹದೇವಸ್ವಾಮಿ, ಸಹ ಶಿಕ್ಷಕರು, ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಬೇಗೂರು. ಕೊಳ್ಳೇಗಾಲ ತಾಲ್ಲೂಕು: ಚಿಕ್ಕರಾಜು, ಹಿಂದಿ ಭಾಷಾ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ದೊಡ್ಡಿಂದವಾಡಿ, ಹನೂರು ತಾಲ್ಲೂಕು: ಪಿ.ಸಿ. ನಿರ್ಮಲ, ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ರಾಮಾಪುರ, ಯಳಂದೂರು ತಾಲ್ಲೂಕು: ಪಿ.ಬಿ. ಲಕ್ಷ್ಮಿ, ಸಹ ಶಿಕ್ಷಕರು, ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ, ಯಳಂದೂರು ಇವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರು ಸೆಪ್ಟೆಂಬರ್ 5ರಂದು ನಗರದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
x

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು