Saturday, 1 September 2018

ನಾಗರಿಕರ ಉಪಯೋಗಕ್ಕಾಗಿ ಪೊಲೀಸ್ ಇಲಾಖೆಯಿಂದ ಆ್ಯಪ್ (30-08-2018)

ನಾಗರಿಕರ ಉಪಯೋಗಕ್ಕಾಗಿ ಪೊಲೀಸ್ ಇಲಾಖೆಯಿಂದ ಆ್ಯಪ್

ಚಾಮರಾಜನಗರ, ಆಗಸ್ಟ್. 30  ಪೊಲೀಸ್ ಸೇವೆಯನ್ನು ಸಾರ್ವಜನಿಕರು ಸಮರ್ಪಕವಾಗಿ ಹಾಗೂ ಸಮಗ್ರವಾಗಿ ಬಳಸಿಕೊಳ್ಳಲು ಪೊಲೀಸ್ ಇಲಾಖೆವತಿಯಿಂದ ಆ್ಯಪ್ ಲಭ್ಯವಿದೆ.
ಕರ್ನಾಟಕ ರಾಜ್ಯ ಪೊಲೀಸ್ ಮೊಬೈಲ್ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಆಂಡ್ರಾಯ್ಡ್ ಮತ್ತು ಐ.ಓ.ಎಸ್. ಆಪರೇಟಿಂಗ್ ಸಿಸ್ಟಮ್‍ಗಳಲ್ಲಿ ಲಭ್ಯವಿದ್ದು ಬಳಸಲು ಬಹಳ ಸರಳವಾಗಿದೆ. ಸಾರ್ವಜನಿಕರು ಪೊಲೀಸ್ ಅಧಿಕಾರಿಗಳೊಂದಿಗೆ ನೇರವಾಗಿ ಸಂಪರ್ಕದಲ್ಲಿರಲು ಹಾಗೂ ದೂರುಗಳನ್ನು ದಾಖಲು ಮಾಡಲು ಅನುಕೂಲವಾಗುವಂತೆ ಅಪ್ಲಿಕೇಷನ್‍ನ್ನು ಅಭಿವೃದ್ಧಿಪಡಿಸಲಾಗಿದೆ.
ಕರ್ನಾಟಕ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳ ಹಾಗೂ ಪೊಲೀಸ್ ಇಲಾಖೆಯ ಎಲ್ಲ ಕಚೇರಿಗಳ ದೂರವಾಣಿ ಸಂಖ್ಯೆಗಳು ಹಾಗೂ ಇ-ಮೇಲ್ ವಿಳಾಸ ಆ್ಯಪ್‍ನಲ್ಲಿ ಲಭ್ಯವಿದೆ. ರಾಜ್ಯದ ಯಾವುದೇ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್.) ಗಳನ್ನು  ಮೊಬೈಲ್‍ನಲ್ಲೇ ಪಡೆಯಬಹುದಾಗಿದೆ.
ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ಸಂದೇಶಗಳನ್ನು ಕಳುಹಿಸಲು ಅನುಕೂಲವಾಗಿದೆ. ಹತ್ತಿರದ ಪೊಲೀಸ್ ಠಾಣೆಗಳಿಗೆ ಹೋಗಲು ಮಾರ್ಗವನ್ನು ಸಹ ತಿಳಿಯಬಹುದಾಗಿದೆ. ಕಳುವಾದ ವಾಹನಗಳ ವಿವರಗಳನ್ನು ಸಹ ವೀಕ್ಷಿಸಬಹುದಾಗಿದೆ. ತುರ್ತು ಸಂದರ್ಭದಲ್ಲಿ ಇಲಾಖೆಯಿಂದ ನೀಡುವ ಸೂಚನೆಗಳು, ವಿವಿಧ ಸಾಮಾಜಿಕ ಜಾಲತಾಣಗಳ ಮಾಹಿತಿಯನ್ನು ಪಡೆಯಬಹುದಾಗಿದೆ.
ಪೊಲೀಸ್ ಇಲಾಖೆಯ ಮೊಬೈಲ್ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಇಲಾಖೆಯ ಸೇವೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಸುಗಮ ಸಂಗೀತ ತರಬೇತಿ ಶಿಬಿರಕ್ಕೆ ನೊಂದಣಿ ಆಹ್ವಾನ
ಚಾಮರಾಜನಗರ, ಆಗಸ್ಟ್. 30 ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಸುಗಮ ಸಂಗೀತ ತರಬೇತಿ ಶಿಬಿರವನ್ನು ಸೆಪ್ಟಂಬರ್ 6 ರಿಂದ 8 ರವರೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಿದೆ.
ಮೂರು ದಿನಗಳ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವವರು ಕನ್ನಡದಲ್ಲಿ ಹಾಡಲು, ಓದಲು, ಬರೆಯಲು ಬಲ್ಲವರಾಗಿರಬೇಕು. ಕನಿಷ್ಟ ಸಂಗೀತ ಜ್ಞಾನವುಳ್ಳವರಾಗಿರಬೇಕು. 16 ರಿಂದ 35ರ ವಯೋಮಿತಿಯೊಳಗಿರಬೇಕು. ಶಿಬಿರದಲ್ಲಿ 50 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.
ಶಿಬಿರಾರ್ಥಿಗಳು ಅವರ ಸ್ವಂತ ಖರ್ಚಿನಲ್ಲಿ ಶಿಬಿರದಲ್ಲಿ ಭಾಗವಹಿಸಬೇಕಿದೆ. ಮಧ್ಯಾಹ್ನದ ಲಘು ಭೋಜನ ನೀಡಲಾಗುತ್ತದೆ. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ:08226-222210 ಅಥವಾ ಬೆಂಗಳೂರಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾರ್ ದೂರವಾಣಿ ಸಂಖ್ಯೆ :080-22215072 ಇಲ್ಲಿಗೆ ಸೆಪ್ಟಂಬರ್ 3ರೊಳಗೆ ಕರೆಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಶಿಬಿರದ ಸಂಚಾಲಕರಾದ ಆನಂದ ಮಾದಲಗೆರೆ ಅವರ ಮೊ: 9742116467 ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಅಶೋಕ್ ಎಸ್ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಸೆಪ್ಟಂಬರ್ 1 ರಂದು ನಗರದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಉದ್ಘಾಟನೆ ಸಮಾರಂಭ
ಚಾಮರಾಜನಗರ, ಆಗಸ್ಟ್. 30 - ಭಾರತೀಯ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಶಾಖೆ ಉದ್ಘಾಟನೆ ಕಾರ್ಯಕ್ರಮವು ನಗರದ ನಂಜನಗೂಡು ರಸ್ತೆಯಲ್ಲಿರುವ ವಾಲ್ಮೀಕಿ ಭವನದಲ್ಲಿ ಸೆಪ್ಟಂಬರ್ 1ರಂದು ಮಧ್ಯಾಹ್ನ 2.15 ಗಂಟೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಬ್ಯಾಂಕ್ ಶಾಖೆ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್‍ವರಿಷ್ಠಾಧಿಕಾರಿ ಧರ್ಮೇಂದರ್‍ಕುಮಾರ್ ಮೀನಾ ಗೌರವಾನ್ವಿತ ಅತಿಥಿಗಳಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಸೆಪ್ಟಂಬರ್ 2ರಂದು ಶ್ರೀಕೃಷ್ಣ ವೇಷಧಾರಿ ಸ್ಪರ್ಧೆ
ಚಾಮರಾಜನಗರ, ಆಗಸ್ಟ್. 30 - ಜಿಲ್ಲಾಡಳಿತವತಿಯಿಂದ ಸೆಪ್ಟಂಬರ್ 2ರಂದು ಹಮ್ಮಿಕೊಳ್ಳಲಾಗಿರುವ ಶ್ರೀಕೃಷ್ಣಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 10ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ 10ವರ್ಷದೊಳಗಿನ ಶಾಲಾ ಮಕ್ಕಳಿಗೆ ಶ್ರೀಕೃಷ್ಣವೇಷಧಾರಿ ಸ್ಪರ್ಧೆ ಏರ್ಪಡಿಸಲಾಗಿದೆ.
ಆಸಕ್ತ ಶಾಲಾ ಮಕ್ಕಳು ಪೋಷಕರೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಆಗಸ್ಟ್. 30  ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನ ಸೂಕ್ಷ್ಮ ಹನಿ ನೀರಾವರಿ ಯೋಜನೆ ಪ್ರಯೋಜನ ಪಡೆಯಲು ರೈತರು ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ.
ಯೋಜನೆಗೆ ಎಲ್ಲ ವರ್ಗದ ಸಾಮಾನ್ಯ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ನೊಂದಣಿ ಮಾಡಿಸಬಹುದು.
ಆಸಕ್ತರು ಭಾವಚಿತ್ರ, ಪಹಣಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಸೇರಿದಂತೆ ಇತರೆ ಅಗತ್ಯ ದಾಖಲೆಗಳ ಜೆರಾಕ್ಸ್ ಪ್ರತಿಯೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಹನಿ ನೀರಾವರಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


x

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು