ಅ. 21ರಂದು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ
ಚಾಮರಾಜನಗರ, ಅ. 06 - ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 21ರಂದು ನಗರದಲ್ಲಿ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ಆಯೋಜಿಸಲು ನಿರ್ಧಾರ ಮಾಡಲಾಯಿತು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಈ ಹಿಂದೆ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗಿತ್ತು. ಈಗ ಜಯಂತಿ ಕಾರ್ಯಕ್ರಮವನ್ನು ಎಲ್ಲರ ಸಲಹೆ ಹಾಗೂ ಸಹಕಾರ ಪಡೆದು ಅರ್ಥಪೂರ್ಣವಾಗಿ ಏರ್ಪಡಿಸಬೇಕಾಗಿದೆ ಎಂದರು.
ಕಳೆದ ಬಾರಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ಮೆರವಣಿಗೆ, ವೇದಿಕೆ, ಸ್ವಾಗತ, ಅಲಂಕಾರಿಕಾ, ಅತಿಥ್ಯ, ವಿಚಾರ ಸಂಕಿರಣ, ಪ್ರಚಾರ ಸೇರಿದಂತೆ ವಿವಿಧ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗಿತ್ತು. ಪ್ರಸ್ತುತ ಅದೇ ಸಮಿತಿಗಳು ಈ ಬಾರಿಯು ಸಹ ಕಾರ್ಯೋನ್ಮುಖವಾಗಲಿವೆ. ಈ ನಿಟ್ಟಿನಲ್ಲಿ ವಿವಿಧ ಸಂಘಸಂಸ್ಥೆಗಳ ಮುಖಂಡರು ಕಾರ್ಯಕ್ರಮ ಆಯೋಜನೆಗೆ ಸಲಹೆ ನೀಡುವಂತೆ ಸಭೆಯಲ್ಲಿ ಕೋರಿದರು.
ಇದೇ ವೇಳೆ ಮಾತನಾಡಿದ ಮುಖಂಡರು ಪ್ರವಾಸಿ ಮಂದಿರದಿಂದ ಕಲಾತಂಡಗಳೊಂದಿಗೆ ಹೊರಡುವ ಭಾವಚಿತ್ರ ಮೆರವಣಿಗೆಗೆ ಈ ಬಾರಿ ಮೆರುಗು ನೀಡುವಂತಹ ಸಾರೋಟಿನ ವ್ಯವಸ್ಥೆಯಾಗಬೇಕು. ಮೆರವಣಿಗೆಗೆ ಜಿಲ್ಲೆಯ ಕಲಾತಂಡಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು. ಇದು ಜಿಲ್ಲಾಮಟ್ಟದ ಕಾರ್ಯಕ್ರಮವಾಗಿದ್ದು, ಆಹ್ವಾನಪತ್ರಿಕೆಗಳು ಸಮರ್ಪಕವಾಗಿ ತಲುಪಬೇಕು. ಜಯಂತಿ ಆಚರಣೆ ಸಂಬಂಧ ಕೆಲ ಸಮಿತಿಯಲ್ಲಿ ಬದಲಾವಣೆಯಾಗಬೇಕು. ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಕಾಯ್ದೆಯ ಕುರಿತು ವಿಚಾರ ಸಂಕಿರಣ ಏರ್ಪಡಿಸಬೇಕು. ಅಂಬೇಡ್ಕರ್ ಪ್ರತಿಮೆಗೆ ವಿಶೇಷ ದೀಪಾಲಂಕಾರ ಸೇರಿದಂತೆ ಹಲವು ಸಲಹೆ, ಅಭಿಪ್ರಾಯಗಳನ್ನು ಮುಖಂಡರು ನೀಡಿದರು.
ಎಲ್ಲರ ಸಲಹೆ ಆಲಿಸಿದ ಜಿಲ್ಲಾಧಿಕಾರಿಯವರು ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಸೂಕ್ತ ನಿರ್ದೇಶನ ನೀಡಲಾಗುವುದು. ವೇದಿಕೆ ಕಾರ್ಯಕ್ರಮ ಹಾಗೂ ಜಯಂತಿ ಹಿಂದಿನ ದಿನದ ವಿಚಾರಸಂಕಿರಣ ಕಾರ್ಯಕ್ರಮಕ್ಕೂ ಮುಖ್ಯ ಭಾಷಣಕಾರರ ಆಯ್ಕೆಗೆ ಸಲಹೆ ಪಡೆಯಲಾಗುವುದು. ಅಂತಿಮವಾಗಿ ಎಲ್ಲರ ಒಪ್ಪಿಗೆ ಅನುಸಾರ ಆಯ್ಕೆ ನಡೆಸಿ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಮಹಾತ್ಮರ ಜನ್ಮದಿನದಂದು ಸಮಾಜಮುಖಿ ಕೆಲಸ ಮಾಡಿದರೆ ಅದು ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ. ಯಾವುದೇ ಆರೋಗ್ಯವಂತ ವ್ಯಕ್ತಿ ಅಂದು ರಕ್ತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಕಾರ್ಯಕ್ರಮ ಸಿದ್ದತೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಜಯಂತಿ ಕಾರ್ಯಕ್ರಮ ಆಯೋಜನೆ ಕುರಿತು ಸಭೆ ಸೇರಿ 2-3 ದಿನದಲ್ಲಿ ಚರ್ಚಿಸಿ ತಮಗೆ ವರದಿ ಸಲ್ಲಿಸಬೇಕು. ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣವೆಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ತಿರುಮಲೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುಳ, ಆಹಾರ ಮತ್ತು ನಾÀಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ರಾಚಪ್ಪ, ಮುಖಂಡರಾದ ಆಲೂರು ಮಲ್ಲು, ಅರಕಲವಾಡಿ ನಾಗೇಂದ್ರ, ಸಿ.ಕೆ. ಮಂಜುನಾಥ್, ಸಿ.ಎಂ. ಕೃಷ್ಣಮೂರ್ತಿ, ಆರ್. ಸುಂದರ್, ಅರಕಲವಾಡಿ ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಕೆ.ಎಂ. ನಾಗರಾಜು, ವೇಣುಗೋಪಾಲ್, ಶ್ರೀಧರಮೂರ್ತಿ, ಸೋಮಶೇಖರ ಬಿಸಲ್ವಾಡಿ, ಶ್ರೀಕಂಠಮೂರ್ತಿ, ರಾಮಸಮುದ್ರ ಬಸವರಾಜು, ಸಿ.ಎಂ. ಶಿವಣ್ಣ, ಕಂದಹಳ್ಳಿ ನಾರಾಯಣ, ಯಳಂದೂರು ರಾಜಣ್ಣ, ಆಲೂರು ನಾಗೇಂದ್ರ ಇತರರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಣೆ
ಚಾಮರಾಜನಗರ, ಅ. 06 ಅಪ್ರಾಪ್ತ ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊಂದಿರುವ ವ್ಯಕ್ತಿಗೆ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.
ಯಳಂದೂರು ತಾಲೂಕಿನ ದುಗ್ಗಟ್ಟಿ ಗ್ರಾಮದ ರವಿಕುಮಾರ್ ಅಲಿಯಾಸ್ ರವಿ ಆರೋಪಿ. ಈತ ಅಪ್ರಾಪ್ತ ಅಂಗವಿಕಲ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆಂದು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವಿಕುಮಾರ್ ಅಲಿಯಾಸ್ ರವಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿರಸ್ಕರಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ. ಯೋಗೇಶ್ ವಾದ ಮಂಡಿಸಿದ್ದರು.
***********************
ಮಹಾತ್ಮಗಾಂಧಿ – 150 ಅಭಿಯಾನಕ್ಕೆ ಜಿಲ್ಲಾದ್ಯಂತ ಅದ್ದೂರಿ ಸ್ವಾಗತ
ಚಾಮರಾಜನಗರ, ಅ. 06 (- ಮಹಾತ್ವ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಗಾಂಧೀಜಿಯವರ ಹೋರಾಟ, ಬದುಕು ಇತರೆ ಗಾಂಧಿ ವಿಚಾರಧಾರೆಗಳನ್ನು ಪ್ರಸ್ತುತಪಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಗಾಂಧಿ-150 ಅಭಿಯಾನ ಸ್ಥಬ್ದಚಿತ್ರಕ್ಕೆ ಇಂದು ಜಿಲ್ಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಮೂಗೂರು ಮಾರ್ಗವಾಗಿ ಜಿಲ್ಲೆಯ ಗಡಿಭಾಗವಾದ ಟಗರಪುರ ಪ್ರವೇಶಿಸಿದ ಗಾಂಧಿ ಅಭಿಯಾನವನ್ನು ಜಿಲ್ಲೆಯುದ್ದಕ್ಕೂ ಪುಷ್ಪ ಗೌರವದ ಮೂಲಕ ವಿಶೇಷವಾಗಿ ಬರಮಾಡಿಕೊಳ್ಳಲಾಯಿತು.
ಟಗರಪುರದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ನಿಂಗರಾಜು, ಮುಖಂಡರಾದ ರಾಜಣ್ಣ, ನಾಗಸುಂದರ್, ಅಧಿಕಾರಿಗಳಾದ ಲಿಂಗರಾಜು ಇತರರು ಪುಷ್ಪಮಾಲೆಯನ್ನು ಅರ್ಪಿಸುವ ಮೂಲಕ ಸ್ವಾಗತಿಸಿದರು.
ಕೊಳ್ಳೇಗಾಲ ಪಟ್ಟಣ ಪ್ರವೇಶಿಸಿದ ವೇಳೆ ಗಾಂಧೀಜಿಯವರ ಸ್ಥಬ್ದಚಿತ್ರಕ್ಕೆ ಅಲ್ಲಿಯೂ ಸಹ ಸ್ಥಳೀಯ ಜನಪ್ರತಿನಿಧಿಗಳು ಮುಖ್ಯ ದ್ವಾರದಲ್ಲಿ ಪುಷ್ಪಾರ್ಚನೆ ಮೂಲಕ ಅದ್ದೂರಿ ಸ್ವಾಗತ ನೀಡಿದರು. ತದನಂತರ ಕೊಳ್ಳೇಗಾಲ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಭಿಯಾನ ಮುಂದುವರೆಯಿತು. ನಾಗರಿಕರು, ವಿದ್ಯಾರ್ಥಿಗಳು ಗಾಂಧೀಜಿಯವರ ಸಮಗ್ರ ಚಿತ್ರಣ ನೀಡುವ ಸ್ಥಬ್ದಚಿತ್ರವನ್ನು ಕುತೂಹಲದಿಂದ ವೀಕ್ಷಿಸಿದರು.
ಯಳಂದೂರು ಪಟ್ಟಣಕ್ಕೆ ಆಗಮಿಸಿದ ಗಾಂಧೀ ಅಭಿಯಾನವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಪುಷ್ಪನಮನ ಸಲ್ಲಿಸಿ ಬರಮಾಡಿಕೊಂಡರು. ತಾಲೂಕು ಪಂಚಾಯತ್ ಸದಸ್ಯರಾದ ನಾಗರಾಜು, ಕಾಲೇಜು ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಸಹ ಹಾಜರಿದ್ದು ಗಾಂಧೀಜಿಯವರ ಸ್ಥಬ್ದಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇವೇಳೆ ಮಾತನಾಡಿದ ಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಮಹಾತ್ಮಗಾಂಧೀಜಿಯವರ ಬದುಕು, ಹೋರಾಟ ಮತ್ತು ಸಾಧನೆಗಳ ಸಂದೇಶವನ್ನು ಜನಮಾನಸಕ್ಕೆ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯಾದ್ಯಂತ ಗಾಂಧಿ ಅಭಿಯಾನವನ್ನು ಹಮ್ಮಿಕೊಂಡಿದೆ. ಜಿಲ್ಲೆಯಲ್ಲೂ ಸಹ ಅಭಿಯಾನ ಮುಂದುವರಿಯುತ್ತಿದ್ದು ಯಶ್ವಸಿಗೊಳ್ಳಲಿ ಎಂದರು.
ಗಾಂಧೀಜಿಯವರ ಬದುಕು ಆದರ್ಶಗಳು ನಮ್ಮ ಪೀಳಿಗೆಗೂ ಆದರ್ಶವಾಗಲಿ. ಈ ದಿಕ್ಕಿನಲ್ಲಿ ರಾಷ್ಟ್ರ ಸರ್ವತೋಮುಖವಾಗಿ ಮುಂದುವರೆಯಲಿ. ಎಲ್ಲರೂ ಸಹಮತದಿಂದ ಬಾಳ್ವೆ ನಡೆಸಲು ದಾರಿದೀಪವಾಗಲಿ ಎಂದು ಸಚಿವರಾದ ಎನ್. ಮಹೇಶ್ ಅವರು ಆಶಿಸಿದರು.
ಬಳಿಕ ಸಂತೆಮರಹಳ್ಳಿ ಮೂಲಕ ಹಾದು ಚಾಮರಾಜನಗರ ಪಟ್ಟಣದ ಮುಖ್ಯದ್ವಾರ ಬಳಿ ಆಗಮಿಸಿದ ಅಭಿಯಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ಕೆರೆಹಳ್ಳಿ ನವೀನ್, ನಗರಸಭಾ ಸದಸ್ಯರಾದ ರಾಜಪ್ಪ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅದ್ದೂರಿಯಾಗಿ ಸ್ವಾಗತಿಸಿದರು.
ಗಾಂಧಿ ಪುತ್ಥಳಿಗೆ ಪುಷ್ಪಾರ್ಚನೆಯ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಿ ಪಟ್ಟಣಕ್ಕೆ ಬರಮಾಡಿಕೊಂಡರು. ಗಾಂಧೀಜಿಯವರ ಜೀವನ, ಸ್ವಾತಂತ್ರ್ಯ ಹೋರಾಟ, ತತ್ವ, ಮೌಲ್ಯಗಳನ್ನು ಪ್ರತಿಬಿಂಬಿಸುವ ಸ್ಥಬ್ದಚಿತ್ರ ಅಭಿಯಾನ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಿ ಎಂದು ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಾರೈಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎ. ರಮೇಶ್, ಕನಿಷ್ಟ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ ಉಮೇಶ್, ಇತರೆ ಅಧಿಕಾರಿಗಳು ಹಾಜರಿದ್ದರು.
ಅ. 21ರಂದು ನಗರದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ
ಚಾಮರಾಜನಗರ, ಅ. 06 :- ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 21ರಂದು ನಗರದಲ್ಲಿ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲು ನಿರ್ಧಾರ ಮಾಡಲಾಯಿತು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಈ ಹಿಂದೆ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗಿತ್ತು. ಜಯಂತಿ ಕಾರ್ಯಕ್ರಮವನ್ನು ಎಲ್ಲರ ಸಲಹೆ ಹಾಗೂ ಸಹಕಾರ ಪಡೆದು ಅಕ್ಟೋಬರ್ 21ರಂದು ಸಕಲ ಸಿದ್ದತೆಗಳೊಂದಿಗೆ ಏರ್ಪಡಿಸಲಾಗುತ್ತಿದೆ ಎಂದರು.
ಕಳೆದ ಬಾರಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ಮೆರವಣಿಗೆ, ವೇದಿಕೆ, ಸ್ವಾಗತ, ಅಲಂಕಾರಿಕಾ, ಅತಿಥ್ಯ, ವಿಚಾರ ಸಂಕಿರಣ, ಪ್ರಚಾರ ಸೇರಿದಂತೆ ವಿವಿಧ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗಿತ್ತು. ಪ್ರಸ್ತುತ ಅದೇ ಸಮಿತಿಗಳು ಈ ಬಾರಿಯು ಸಹ ಕಾರ್ಯೋನ್ಮುಖವಾಗಲಿವೆ. ಈ ನಿಟ್ಟಿನಲ್ಲಿ ವಿವಿಧ ಸಂಘಸಂಸ್ಥೆಗಳ ಮುಖಂಡರು ಕಾರ್ಯಕ್ರಮ ಆಯೋಜನೆಗೆ ಸಲಹೆ ನೀಡುವಂತೆ ಸಭೆಯಲ್ಲಿ ಕೋರಿದರು.
ಇದೇ ವೇಳೆ ಮಾತನಾಡಿದ ಮುಖಂಡರು ಪ್ರವಾಸಿ ಮಂದಿರದಿಂದ ಕಲಾತಂಡಗಳೊಂದಿಗೆ ಹೊರಡುವ ಭಾವಚಿತ್ರ ಮೆರವಣಿಗೆಗೆ ಈ ಬಾರಿ ಮೆರುಗು ನೀಡುವಂತಹ ಸಾರೋಟಿನ ವ್ಯವಸ್ಥೆಯಾಗಬೇಕು. ಮೆರವಣಿಗೆಗೆ ಜಿಲ್ಲೆಯ ಕಲಾತಂಡಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು. ಇದು ಜಿಲ್ಲಾಮಟ್ಟದ ಕಾರ್ಯಕ್ರಮವಾಗಿದ್ದು, ಆಹ್ವಾನಪತ್ರಿಕೆಗಳು ಸಮರ್ಪಕವಾಗಿ ತಲುಪಬೇಕು. ಜಯಂತಿ ಆಚರಣೆ ಸಂಬಂಧ ಕೆಲ ಸಮಿತಿಯಲ್ಲಿ ಬದಲಾವಣೆಯಾಗಬೇಕು. ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಕಾಯ್ದೆಯ ಕುರಿತು ವಿಚಾರ ಸಂಕಿರಣ ಏರ್ಪಡಿಸಬೇಕು. ಅಂಬೇಡ್ಕರ್ ಪ್ರತಿಮೆಗೆ ವಿಶೇಷ ದೀಪಾಲಂಕಾರ ಸೇರಿದಂತೆ ಹಲವು ಸಲಹೆ, ಅಭಿಪ್ರಾಯಗಳನ್ನು ಮುಖಂಡರು ನೀಡಿದರು.
ಎಲ್ಲರ ಸಲಹೆ ಆಲಿಸಿದ ಜಿಲ್ಲಾಧಿಕಾರಿಯವರು ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಸೂಕ್ತ ನಿರ್ದೇಶನ ನೀಡಲಾಗುವುದು. ವೇದಿಕೆ ಕಾರ್ಯಕ್ರಮ ಹಾಗೂ ಜಯಂತಿ ಹಿಂದಿನ ದಿನದ ವಿಚಾರಸಂಕಿರಣ ಕಾರ್ಯಕ್ರಮಕ್ಕೂ ಮುಖ್ಯ ಭಾಷಣಕಾರರ ಆಯ್ಕೆಗೆ ಸಲಹೆ ಪಡೆಯಲಾಗುವುದು. ಅಂತಿಮವಾಗಿ ಎಲ್ಲರ ಒಪ್ಪಿಗೆ ಅನುಸಾರ ಆಯ್ಕೆ ನಡೆಸಿ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಮಹಾತ್ಮರ ಜನ್ಮದಿನದಂದು ಸಮಾಜಮುಖಿ ಕೆಲಸ ಮಾಡಿದರೆ ಅದು ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ. ಯಾವುದೇ ಆರೋಗ್ಯವಂತ ವ್ಯಕ್ತಿ ಅಂದು ರಕ್ತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಕಾರ್ಯಕ್ರಮ ಸಿದ್ದತೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಜಯಂತಿ ಕಾರ್ಯಕ್ರಮ ಆಯೋಜನೆ ಕುರಿತು ಸಭೆ ಸೇರಿ ಶೀಘ್ರವಾಗಿ ಚರ್ಚಿಸಿ ತಮಗೆ ವರದಿ ಸಲ್ಲಿಸಬೇಕು. ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣವೆಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು.
ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ತಿರುಮಲೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ರಾಚಪ್ಪ, ಮುಖಂಡರಾದ ಆಲೂರು ಮಲ್ಲು, ಅರಕಲವಾಡಿ ನಾಗೇಂದ್ರ, ಸಿ.ಕೆ. ಮಂಜುನಾಥ್, ಸಿ.ಎಂ. ಕೃಷ್ಣಮೂರ್ತಿ, ಆರ್. ಸುಂದರ್, ಅರಕಲವಾಡಿ ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಕೆ.ಎಂ. ನಾಗರಾಜು, ವೇಣುಗೋಪಾಲ್, ಶ್ರೀಧರಮೂರ್ತಿ, ಸೋಮಶೇಖರ ಬಿಸಲ್ವಾಡಿ, ಶ್ರೀಕಂಠಮೂರ್ತಿ, ರಾಮಸಮುದ್ರ ಬಸವರಾಜು, ಸಿ.ಎಂ. ಶಿವಣ್ಣ, ಕಂದಹಳ್ಳಿ ನಾರಾಯಣ, ಯಳಂದೂರು ರಾಜಣ್ಣ, ಆಲೂರು ನಾಗೇಂದ್ರ ಇತರರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
************************
ವಿವಿಧ ತರಬೇತಿಗೆ ಪ.ಜಾ, ಪ.ಪಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
***********************
ಮಹಾತ್ಮಗಾಂಧಿ – 150 ಅಭಿಯಾನಕ್ಕೆ ಜಿಲ್ಲಾದ್ಯಂತ ಅದ್ದೂರಿ ಸ್ವಾಗತ
ಮೂಗೂರು ಮಾರ್ಗವಾಗಿ ಜಿಲ್ಲೆಯ ಗಡಿಭಾಗವಾದ ಟಗರಪುರ ಪ್ರವೇಶಿಸಿದ ಗಾಂಧಿ ಅಭಿಯಾನವನ್ನು ಜಿಲ್ಲೆಯುದ್ದಕ್ಕೂ ಪುಷ್ಪ ಗೌರವದ ಮೂಲಕ ವಿಶೇಷವಾಗಿ ಬರಮಾಡಿಕೊಳ್ಳಲಾಯಿತು.
ಟಗರಪುರದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ನಿಂಗರಾಜು, ಮುಖಂಡರಾದ ರಾಜಣ್ಣ, ನಾಗಸುಂದರ್, ಅಧಿಕಾರಿಗಳಾದ ಲಿಂಗರಾಜು ಇತರರು ಪುಷ್ಪಮಾಲೆಯನ್ನು ಅರ್ಪಿಸುವ ಮೂಲಕ ಸ್ವಾಗತಿಸಿದರು.
ಕೊಳ್ಳೇಗಾಲ ಪಟ್ಟಣ ಪ್ರವೇಶಿಸಿದ ವೇಳೆ ಗಾಂಧೀಜಿಯವರ ಸ್ಥಬ್ದಚಿತ್ರಕ್ಕೆ ಅಲ್ಲಿಯೂ ಸಹ ಸ್ಥಳೀಯ ಜನಪ್ರತಿನಿಧಿಗಳು ಮುಖ್ಯ ದ್ವಾರದಲ್ಲಿ ಪುಷ್ಪಾರ್ಚನೆ ಮೂಲಕ ಅದ್ದೂರಿ ಸ್ವಾಗತ ನೀಡಿದರು. ತದನಂತರ ಕೊಳ್ಳೇಗಾಲ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಭಿಯಾನ ಮುಂದುವರೆಯಿತು. ನಾಗರಿಕರು, ವಿದ್ಯಾರ್ಥಿಗಳು ಗಾಂಧೀಜಿಯವರ ಸಮಗ್ರ ಚಿತ್ರಣ ನೀಡುವ ಸ್ಥಬ್ದಚಿತ್ರವನ್ನು ಕುತೂಹಲದಿಂದ ವೀಕ್ಷಿಸಿದರು.
ಯಳಂದೂರು ಪಟ್ಟಣಕ್ಕೆ ಆಗಮಿಸಿದ ಗಾಂಧೀ ಅಭಿಯಾನವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಪುಷ್ಪನಮನ ಸಲ್ಲಿಸಿ ಬರಮಾಡಿಕೊಂಡರು. ತಾಲೂಕು ಪಂಚಾಯತ್ ಸದಸ್ಯರಾದ ನಾಗರಾಜು, ಕಾಲೇಜು ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಸಹ ಹಾಜರಿದ್ದು ಗಾಂಧೀಜಿಯವರ ಸ್ಥಬ್ದಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇವೇಳೆ ಮಾತನಾಡಿದ ಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಮಹಾತ್ಮಗಾಂಧೀಜಿಯವರ ಬದುಕು, ಹೋರಾಟ ಮತ್ತು ಸಾಧನೆಗಳ ಸಂದೇಶವನ್ನು ಜನಮಾನಸಕ್ಕೆ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯಾದ್ಯಂತ ಗಾಂಧಿ ಅಭಿಯಾನವನ್ನು ಹಮ್ಮಿಕೊಂಡಿದೆ. ಜಿಲ್ಲೆಯಲ್ಲೂ ಸಹ ಅಭಿಯಾನ ಮುಂದುವರಿಯುತ್ತಿದ್ದು ಯಶ್ವಸಿಗೊಳ್ಳಲಿ ಎಂದರು.
ಗಾಂಧೀಜಿಯವರ ಬದುಕು ಆದರ್ಶಗಳು ನಮ್ಮ ಪೀಳಿಗೆಗೂ ಆದರ್ಶವಾಗಲಿ. ಈ ದಿಕ್ಕಿನಲ್ಲಿ ರಾಷ್ಟ್ರ ಸರ್ವತೋಮುಖವಾಗಿ ಮುಂದುವರೆಯಲಿ. ಎಲ್ಲರೂ ಸಹಮತದಿಂದ ಬಾಳ್ವೆ ನಡೆಸಲು ದಾರಿದೀಪವಾಗಲಿ ಎಂದು ಸಚಿವರಾದ ಎನ್. ಮಹೇಶ್ ಅವರು ಆಶಿಸಿದರು.
ಬಳಿಕ ಸಂತೆಮರಹಳ್ಳಿ ಮೂಲಕ ಹಾದು ಚಾಮರಾಜನಗರ ಪಟ್ಟಣದ ಮುಖ್ಯದ್ವಾರ ಬಳಿ ಆಗಮಿಸಿದ ಅಭಿಯಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ಕೆರೆಹಳ್ಳಿ ನವೀನ್, ನಗರಸಭಾ ಸದಸ್ಯರಾದ ರಾಜಪ್ಪ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅದ್ದೂರಿಯಾಗಿ ಸ್ವಾಗತಿಸಿದರು.
ಗಾಂಧಿ ಪುತ್ಥಳಿಗೆ ಪುಷ್ಪಾರ್ಚನೆಯ ಮೂಲಕ ಗಣ್ಯರು ಗೌರವ ನಮನ ಸಲ್ಲಿಸಿ ಪಟ್ಟಣಕ್ಕೆ ಬರಮಾಡಿಕೊಂಡರು. ಗಾಂಧೀಜಿಯವರ ಜೀವನ, ಸ್ವಾತಂತ್ರ್ಯ ಹೋರಾಟ, ತತ್ವ, ಮೌಲ್ಯಗಳನ್ನು ಪ್ರತಿಬಿಂಬಿಸುವ ಸ್ಥಬ್ದಚಿತ್ರ ಅಭಿಯಾನ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಿ ಎಂದು ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಾರೈಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎ. ರಮೇಶ್, ಕನಿಷ್ಟ ವೇತನ ಸಲಹಾ ಮಂಡಳಿಯ ಮಾಜಿ ಅಧ್ಯಕ್ಷರಾದ ಉಮೇಶ್, ಇತರೆ ಅಧಿಕಾರಿಗಳು ಹಾಜರಿದ್ದರು.
ಅ. 21ರಂದು ನಗರದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ
ಚಾಮರಾಜನಗರ, ಅ. 06 :- ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 21ರಂದು ನಗರದಲ್ಲಿ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲು ನಿರ್ಧಾರ ಮಾಡಲಾಯಿತು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಈ ಹಿಂದೆ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗಿತ್ತು. ಜಯಂತಿ ಕಾರ್ಯಕ್ರಮವನ್ನು ಎಲ್ಲರ ಸಲಹೆ ಹಾಗೂ ಸಹಕಾರ ಪಡೆದು ಅಕ್ಟೋಬರ್ 21ರಂದು ಸಕಲ ಸಿದ್ದತೆಗಳೊಂದಿಗೆ ಏರ್ಪಡಿಸಲಾಗುತ್ತಿದೆ ಎಂದರು.
ಕಳೆದ ಬಾರಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ಮೆರವಣಿಗೆ, ವೇದಿಕೆ, ಸ್ವಾಗತ, ಅಲಂಕಾರಿಕಾ, ಅತಿಥ್ಯ, ವಿಚಾರ ಸಂಕಿರಣ, ಪ್ರಚಾರ ಸೇರಿದಂತೆ ವಿವಿಧ ಸಮಿತಿ ಹಾಗೂ ಉಪಸಮಿತಿಗಳನ್ನು ರಚಿಸಲಾಗಿತ್ತು. ಪ್ರಸ್ತುತ ಅದೇ ಸಮಿತಿಗಳು ಈ ಬಾರಿಯು ಸಹ ಕಾರ್ಯೋನ್ಮುಖವಾಗಲಿವೆ. ಈ ನಿಟ್ಟಿನಲ್ಲಿ ವಿವಿಧ ಸಂಘಸಂಸ್ಥೆಗಳ ಮುಖಂಡರು ಕಾರ್ಯಕ್ರಮ ಆಯೋಜನೆಗೆ ಸಲಹೆ ನೀಡುವಂತೆ ಸಭೆಯಲ್ಲಿ ಕೋರಿದರು.
ಇದೇ ವೇಳೆ ಮಾತನಾಡಿದ ಮುಖಂಡರು ಪ್ರವಾಸಿ ಮಂದಿರದಿಂದ ಕಲಾತಂಡಗಳೊಂದಿಗೆ ಹೊರಡುವ ಭಾವಚಿತ್ರ ಮೆರವಣಿಗೆಗೆ ಈ ಬಾರಿ ಮೆರುಗು ನೀಡುವಂತಹ ಸಾರೋಟಿನ ವ್ಯವಸ್ಥೆಯಾಗಬೇಕು. ಮೆರವಣಿಗೆಗೆ ಜಿಲ್ಲೆಯ ಕಲಾತಂಡಗಳನ್ನು ಹೆಚ್ಚಾಗಿ ಬಳಸಿಕೊಳ್ಳಬೇಕು. ಇದು ಜಿಲ್ಲಾಮಟ್ಟದ ಕಾರ್ಯಕ್ರಮವಾಗಿದ್ದು, ಆಹ್ವಾನಪತ್ರಿಕೆಗಳು ಸಮರ್ಪಕವಾಗಿ ತಲುಪಬೇಕು. ಜಯಂತಿ ಆಚರಣೆ ಸಂಬಂಧ ಕೆಲ ಸಮಿತಿಯಲ್ಲಿ ಬದಲಾವಣೆಯಾಗಬೇಕು. ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಕಾಯ್ದೆಯ ಕುರಿತು ವಿಚಾರ ಸಂಕಿರಣ ಏರ್ಪಡಿಸಬೇಕು. ಅಂಬೇಡ್ಕರ್ ಪ್ರತಿಮೆಗೆ ವಿಶೇಷ ದೀಪಾಲಂಕಾರ ಸೇರಿದಂತೆ ಹಲವು ಸಲಹೆ, ಅಭಿಪ್ರಾಯಗಳನ್ನು ಮುಖಂಡರು ನೀಡಿದರು.
ಎಲ್ಲರ ಸಲಹೆ ಆಲಿಸಿದ ಜಿಲ್ಲಾಧಿಕಾರಿಯವರು ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಸೂಕ್ತ ನಿರ್ದೇಶನ ನೀಡಲಾಗುವುದು. ವೇದಿಕೆ ಕಾರ್ಯಕ್ರಮ ಹಾಗೂ ಜಯಂತಿ ಹಿಂದಿನ ದಿನದ ವಿಚಾರಸಂಕಿರಣ ಕಾರ್ಯಕ್ರಮಕ್ಕೂ ಮುಖ್ಯ ಭಾಷಣಕಾರರ ಆಯ್ಕೆಗೆ ಸಲಹೆ ಪಡೆಯಲಾಗುವುದು. ಅಂತಿಮವಾಗಿ ಎಲ್ಲರ ಒಪ್ಪಿಗೆ ಅನುಸಾರ ಆಯ್ಕೆ ನಡೆಸಿ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಮಹಾತ್ಮರ ಜನ್ಮದಿನದಂದು ಸಮಾಜಮುಖಿ ಕೆಲಸ ಮಾಡಿದರೆ ಅದು ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ. ಯಾವುದೇ ಆರೋಗ್ಯವಂತ ವ್ಯಕ್ತಿ ಅಂದು ರಕ್ತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಕಾರ್ಯಕ್ರಮ ಸಿದ್ದತೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರುಗಳು ಜಯಂತಿ ಕಾರ್ಯಕ್ರಮ ಆಯೋಜನೆ ಕುರಿತು ಸಭೆ ಸೇರಿ ಶೀಘ್ರವಾಗಿ ಚರ್ಚಿಸಿ ತಮಗೆ ವರದಿ ಸಲ್ಲಿಸಬೇಕು. ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣವೆಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು.
ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ತಿರುಮಲೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಮಂಜುಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ರಾಚಪ್ಪ, ಮುಖಂಡರಾದ ಆಲೂರು ಮಲ್ಲು, ಅರಕಲವಾಡಿ ನಾಗೇಂದ್ರ, ಸಿ.ಕೆ. ಮಂಜುನಾಥ್, ಸಿ.ಎಂ. ಕೃಷ್ಣಮೂರ್ತಿ, ಆರ್. ಸುಂದರ್, ಅರಕಲವಾಡಿ ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಕೆ.ಎಂ. ನಾಗರಾಜು, ವೇಣುಗೋಪಾಲ್, ಶ್ರೀಧರಮೂರ್ತಿ, ಸೋಮಶೇಖರ ಬಿಸಲ್ವಾಡಿ, ಶ್ರೀಕಂಠಮೂರ್ತಿ, ರಾಮಸಮುದ್ರ ಬಸವರಾಜು, ಸಿ.ಎಂ. ಶಿವಣ್ಣ, ಕಂದಹಳ್ಳಿ ನಾರಾಯಣ, ಯಳಂದೂರು ರಾಜಣ್ಣ, ಆಲೂರು ನಾಗೇಂದ್ರ ಇತರರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
************************
ಚಾಮರಾಜನಗರ, ಅ. 06 ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2018-19ನೇ ಸಾಲಿಗೆ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ವಿವಿಧ ವೃತ್ತಿಗಳಲ್ಲಿ 3 ತಿಂಗಳ ಅವಧಿಯ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
18 ರಿಂದ 35ರೊಳಗಿನ ವಯೋಮಿತಿಯ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದವರಿಗೆ ಮರಿಯಾಲದ ಜೆಎಸ್‍ಎಸ್ ನೈಪುಣ್ಯತಾ ತರಬೇತಿ ಸಂಸ್ಥೆಯಲ್ಲಿ ಬ್ಯುಟಿಷಿಯನ್, ಯಳಂದೂರು ಕೇಂದ್ರದಲ್ಲಿ ಎಲೆಕ್ಟ್ರಿಕಲ್ ವೈರಿಂಗ್ ಮತ್ತು ಹೋಂ ಅಪ್ಲೈಯನ್ಸೆಸ್ ರಿಪೇರಿ ಹಾಗೂ ಕೊಳ್ಳೇಗಾಲ ಕೇಂದ್ರದಲ್ಲಿ ಕಂಪ್ಯೂಟರ್ ಆಫೀಸ್ ಆಟೋಮೇಷನ್ ವೃತ್ತಿಗೆ ತರಬೇತಿ ನೀಡಲಾಗುವುದು.
ನಿಗದಿತ ನಮೂನೆಯ ಅರ್ಜಿಯೊಂದಿಗೆ ವಿದ್ಯಾರ್ಹತೆ ಮತ್ತು ಜನ್ಮ ದಿನಾಂಕದ ದಾಖಲಾತಿ ಪತ್ರದ ಪ್ರತಿ, ಜಾತಿ, ಪಡಿತರ ಚೀಟಿ, ವಾಸಸ್ಥಳ ದೃಢೀಕರಣ ಪತ್ರ, ಮತದಾರರ ಗುರುತಿನ ಚೀಟಿ ಪ್ರತಿ ಹಾಗೂ ಇತರೆ ದಾಖಲಾತಿಗಳೊಂದಿಗೆ ಅಕ್ಟೋಬರ್ 17ರೊಳಗೆ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ಮರಿಯಾಲದ ಜೆಎಸ್‍ಎಸ್ ನೈಪುಣ್ಯತಾ ತರಬೇತಿ ಸಂಸ್ಥೆಗೆ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಗೆ ಅಕ್ಟೋಬರ್ 23ರಂದು ಬೆಳಿಗ್ಗೆ 11 ಗಂಟೆಗೆ ಜೆ.ಎಸ್.ಎಸ್. ನೈಪುಣ್ಯತಾ ತರಬೇತಿ ಸಂಸ್ಥೆಯಲ್ಲಿ ಸಂದರ್ಶನ ನಡೆಸಲಾಗುವುದು. ಅಕ್ಟೋಬರ್ 25ರಿಂದ ತರಬೇತಿ ಆರಂಭವಾಗಲಿದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ಮರಿಯಾಲದ ಜೆಎಸ್‍ಎಸ್ ನೈಪುಣ್ಯತಾ ತರಬೇತಿ ಸಂಸ್ಥೆಯ ಮಹದೇವಸ್ವಾಮಿ (ಮೊ. 9538308797) ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿಕೆಟ್ ಪಡೆಯದ ಪ್ರಯಾಣಿಕರಿಂದ ದಂಡ ವಸೂಲಿ
ಚಾಮರಾಜನಗರ, ಅ. 06 :- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಸೆಪ್ಟೆಂಬರ್ ತಿಂಗಳಲ್ಲಿ ಟಿಕೆಟ್ ಪಡೆಯದೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ 324 ಪ್ರಯಾಣಿಕರಿಂದ 38235 ರೂ. ದಂಡವನ್ನು ವಸೂಲಿ ಮಾಡಿದೆ.
ಸೆಪ್ಟೆಂಬರ್ ತಿಂಗಳಲ್ಲಿ 2215 ಬಸ್ಸುಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 218 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗ, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಅ. 06 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗ, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2018-19ನೇ ಸಾಲಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದೆ. ಅರ್ಜಿಯನ್ನು ವೆಬ್‍ಸೈಟ್ ತಿತಿತಿ.ಞಚಿಡಿeಠಿಚಿss.ಚಿgg.gov.iಟಿ ಹಾಗೂ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಮೂಲಕ ಸಲ್ಲಿಸಬೇಕು.
ಕಾರ್ಯಕ್ರಮ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನ, ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಯನ್ನು ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಮೂಲಕ ಅಥವಾ ಸಹಾಯವಾಣಿ ಸಂಖ್ಯೆ 8050770005, 8050770004ನಿಂದಲೂ ಪಡೆದುಕೊಳ್ಳಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಅ. 16, 17ರಂದು ನಗರದಲ್ಲಿ ರಾಜ್ಯಮಟ್ಟದ ಟೆನ್ನಿಕಾಯ್ಟ್ ಪಂದ್ಯಾವಳಿ
ಚಾಮರಾಜನಗರ, ಅ. 06 ಪದವಿಪೂರ್ವ ಶಿಕ್ಷಣ ಇಲಾಖೆಯು 2018-19ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಟೆನ್ನಿಕಾಯ್ಟ್ ಪಂದ್ಯಾವಳಿಯನ್ನು ಅಕ್ಟೋಬರ್ 16 ಹಾಗೂ 17ರಂದು ನಗರದಲ್ಲಿ ಏರ್ಪಡಿಸಿದೆ.
ಬಾಲಕರಿಗೆ ನಗರದ ಬಾಲರಪಟ್ಟಣದಲ್ಲಿರುವ ಸೆಂಟ್ ಫ್ರಾನ್ಸಿಸ್ ಪದವಿಪೂರ್ವ ಕಾಲೇಜಿನಲ್ಲಿ ಹಾಗೂ ಬಾಲಕಿಯರಿಗೆ ಜೆ.ಎಸ್.ಎಸ್. ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ನಡೆಸಲಾಗುವುದು.
ಸ್ಪರ್ಧಾಳುಗಳಿಗೆ ವಾಸ್ತವ್ಯದ ವ್ಯವಸ್ಥೆಯನ್ನು ಬಾಲಕರಿಗೆ ನಗರದ ಸೇವಾಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಹಾಗೂ ಬಾಲಕಿಯರಿಗೆ ಜೆ.ಎಸ್.ಎಸ್. ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಕಲ್ಪಿಸಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಅ. 0 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್‍ಪೂರ್ವ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್ ಎಸ್ ಪಿ) ಮೂಲಕ ಸಲ್ಲಿಸಲು ಅಕ್ಟೋಬರ್ 15ರವರೆಗೆ ಕಾಲಾವಕಾಶ ವಿಸ್ತರಿಸಿದೆ.
ಪ್ರವರ್ಗ 1ರ ಪೋಷಕರ ಆದಾಯ ಮಿತಿ 1 ಲಕ್ಷ ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಪೋಷಕರ ಆದಾಯ ಮಿತಿ 44,500 ರೂ.ಗಳಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 10ರಂದು ನಗರದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ
ಚಾಮರಾಜನಗರ, ಅ. 06 - ನೆಹರು ಯುವಕೇಂದ್ರವು ನಗರದ ಸಿದ್ದಾರ್ಥ ಪ್ರಥಮದರ್ಜೆ ಕಾಲೇಜು, ಕಾಗಲವಾಡಿಮೋಳೆ ಸೂರ್ಯೋದಯ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 10ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸಿದ್ದಾರ್ಥ ಪ್ರಥಮದರ್ಜೆ ಕಾಲೇಜು ಆಟದ ಮೈದಾನದಲ್ಲಿ ಚಾಮರಾಜನಗರ ತಾಲೂಕುಮಟ್ಟದ ಕ್ರೀಡಾಕೂಟ ಆಯೋಜಿಸಿದೆ.
ಯುವಕ ಯುವತಿಯರಿಗೆ ಕಬಡ್ಡಿ, ಗುಂಡು ಎಸೆತ, 100 ಹಾಗೂ 200 ಮೀಟರ್ ಓಟದ ಸ್ಪರ್ಧೆಗಳಿವೆ.
ಪ್ರವೇಶ ಉಚಿತವಾಗಿದ್ದು ಅಂದು ಬೆಳೆಗ್ಗೆ ಸ್ಥಳದಲ್ಲಿಯೇ ಹೆಸರು ನೊಂದಾಯಿಸಿಕೊಳ್ಳಬೇಕು. ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ನೆಹರು ಯುವ ಕೇಂದ್ರ ದೂ.ಸಂ. 08226-222120, ಮಹದೇವಸ್ವಾಮಿ ಪಿ (ಮೊ. 9986426671), ಸುಂದರ ಆರ್ (ಮೊ. 9900930559), ರಾಜೇಶ್ ಎಂ (ಮೊ. 8660640332), ಸೌಭಾಗ್ಯ (ಮೊ. 98455337208), ಉಮಾ ಮಹೇಶ್ವರಿ (ಮೊ. 9739251509) ಅವರನ್ನು ಸಂಪರ್ಕಿಸುವಂತೆ ನೆಹರು ಯುವಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ. ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments:
Post a Comment