Sunday, 14 October 2018

ಚಾಮರಾಜನಗರ ದಸರಾ ಮಹೋತ್ಸವ: ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ (13-10-2018)

ಚಾಮರಾಜನಗರ ದಸರಾ ಮಹೋತ್ಸವ: ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ  
photos by .s.veerabhadra swamy.. 

ಚಾಮರಾಜನಗರ, ಅ. 13 :- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಜಿಲ್ಲೆಯಲ್ಲೂ ಆಯೋಜಿತವಾಗಿರುವ ಚಾಮರಾಜನಗರ ದಸರಾ ಮಹೋತ್ಸವದ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ ವರ್ಣರಂಜಿತ ವೇದಿಕೆಯಲ್ಲಿಂದು ವಿದ್ಯುಕ್ತ ಚಾಲನೆ ದೊರೆಯಿತು.
 ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರುಗಳು ದಸರಾ ಕಾರ್ಯಕ್ರಮಗಳಿಗೆ ವಿಶಿಷ್ಟ ರೀತಿಯಲ್ಲಿ ನಗಾರಿ ಬಾರಿಸಿ, ದೀಪ ಬೆಳಗಿಸುವುದರ ಮೂಲಕ ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆಯು ನೆರವೇರಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ದಸರಾ ಮಹೋತ್ಸವಕ್ಕೆ ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಚಾಲನೆ ನೀಡಲಾಗಿದೆ. ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಚಾಮರಾಜನಗರ ದಸರಾ ಆಯೋಜಿಸಲು 1 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದರು.
2013ರಿಂದಲೂ ಚಾಮರಾಜನಗರ ದಸರಾ ಮಹೋತ್ಸವ ಆರಂಭವಾಗಿದೆ. ದಸರಾ ಕಾರ್ಯಕ್ರಮಗಳನ್ನು ಹಳೇ ಮೈಸೂರು ಭಾಗದ ಪ್ರತಿ ತಾಲೂಕು, ಹಳ್ಳಿಗಳಿಗೂ ವಿಸ್ತರಿಸುವ ಅಭಿಲಾಷೆಯನ್ನು ಸರ್ಕಾರ ಹೊಂದಿದೆ. ಇದರ ಪ್ರತಿಫಲವಾಗಿ ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿಯೂ ದಸರಾ ಆಯೋಜನೆಯಾಗಿದೆ. ಪ್ರತಿವರ್ಷ ಇದು ಹೀಗೆಯೇ ಮುಂದುವರೆಯಲಿ ಎಂದು ಶುಭ ಹಾರೈಸಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಜನತೆಗೆ ದಸರಾ ಹಬ್ಬದ ಶುಭಾಷಯ ನುಡಿಯೊಂದಿಗೆ ಮಾತನಾಡಿ ಮೈಸೂರಿನಿಂದ ಪ್ರತ್ಯೇಕ ಜಿಲ್ಲೆಯಾಗಿ ಬೇರ್ಪಟ್ಟ ಚಾಮರಾಜನಗರ ಜಿಲ್ಲೆ ಇಂದು ಸಹ ಮೈಸೂರಿನ ಅವಿಭಾಜ್ಯ ಅಂಗವೇ ಆಗಿದೆ. ಹಳೇ ಮೈಸೂರು ಭಾಗದ ಪ್ರದೇಶಗಳ ಅಭಿವೃದ್ಧಿಗೆ ಅಡಿಪಾಯ ಹಾಕಿದವರು ಮೈಸೂರಿನ ಅರಸರು. ಅವರ ಕೊಡುಗೆ ಅಪಾರವಾದುದಾಗಿದೆ ಅವರ ಕೊಡುಗೆಗಳನ್ನು ನಾವು ಸ್ಮರಿಸಿ ಅವರನ್ನು ಮಾದರಿಯಾಗಿ ಅನುಸರಿಸಬೇಕಾಗಿದೆ ಎಂದರು.
ಚಾಮರಾಜನಗರ ಚಾಮರಾಜ ಒಡೆಯರಿಗೆ ಜನ್ಮ ನೀಡಿದ ಪುಣ್ಯಸ್ಥಳವಿದು. ಮೈಸೂರು ಅರಸರು ಒಡಾಡಿದ ನಾಡಿದು. ಪ್ರತಿವರ್ಷ ಮೈಸೂರಿನಂತೆಯೆ ಇಲ್ಲಿಯೂ ಸಹ ದಸರಾ ಮಹೋತ್ಸವ ಜರುಗಬೇಕು. ನಮೆಲ್ಲರಲ್ಲೂ ಇಂದು ಹಬ್ಬದ ವಾತಾವರಣ ಮನೆ ಮಾಡಿದೆ. ಇಂತಹ ಸುಸಂದರ್ಭವನ್ನು ಎಲ್ಲರೂ ಕಣ್ತುಂಬಿಕೊಳ್ಳೋಣ ಎಂದರು.
ನಾಲ್ವಡಿ ಕೃಷ್ಣರಾಜ ಒಡೆಯರು ಕೃಷಿ, ಕೈಗಾರಿಕೆ, ನೀರಾವರಿ, ವಿದ್ಯುತ್ ಸೇರಿದಂತೆ ಅರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಸಾಕಷ್ಟು ಪ್ರೋತ್ಸಾಹ ನೀಡಿದ್ದರು. ಸಂಸ್ಕøತಿ ಕಲೆಗೆ ನೀಡಿದ ಕೊಡುಗೆಯ ಇಂದು ದಸರೆಯ ರೂಪದಲ್ಲಿ ನಾಡಿನೆಲ್ಲೆಡೆ ಮೈಳೈಸುತ್ತಿದೆ ಎಂದು ಮಹೇಶ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಹಾಗೂ ಗುಂಡ್ಲುಪೇಟೆ ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಅವರುಗಳು ಚಾಮರಾಜನಗರ ದಸರಾ ಕುರಿತು ಮಾತನಾಡಿ ಜನತೆಗೆ ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ದಯಾನಿಧಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಂದಿದ್ವಜ, ನಾದಸ್ವರ, ವೀರಗಾಸೆ, ಹುಲಿವೇಷದಾರಿಗಳ ಕುಣಿತ, ಜನಪದ ನೃತ್ಯದ ತಂಡಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದ ಮೆರವಣಿಗೆಗೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ಮೆರವಣಿಗೆಯು ಜಿಲ್ಲಾಡಳಿತ ಭವನದಿಂದ ಹೊರಟು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ದೇವಾಲಯದ ಅವರಣ ತಲುಪಿತು. 
******************************************

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಚಾಮರಾಜನಗರ, ಅ. 13 ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಜಿಲ್ಲೆಯಲ್ಲೂ ಆಯೋಜಿತವಾಗಿರುವ ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಇಂದು ಬೆಳಿಗ್ಗೆ ಸಾಂಪ್ರದಾಯಿಕ ಚಾಲನೆ ದೊರೆಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಾಲಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಚಾಮುಂಡೇಶ್ವರಿ, ಕೆಂಪನಂಜಾಂಭ ಅಮ್ಮನವರಿಗೆ ಪೂಜೆ ಸಲ್ಲಿಸಲಾಯಿತು. ನಾದಸ್ವರ, ಬೀಸು ಕಂಸಾಳೆ, ಗೊರವರ ಕುಣಿತ ಸೇರಿದಂತೆ ಜಾನಪದ, ಪಾರಂಪರಿಕ ಕಲಾತಂಡಗಳ ಪ್ರದರ್ಶನದೊಂದಿಗೆ ದಸರಾ ಸಂಭ್ರಮ ಮೇಳೈಸಿತು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ನಾಲ್ಕು ದಿನಗಳ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕವಾಗಿ ಚಾಲನೆ ನೀಡಲಾಗಿದೆ. ಕಳೆದ 2013ರಿಂದ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.
ಈ ಬಾರಿಯ ದಸರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಮೆರುಗು ತರುವ ನಿಟ್ಟಿನಲ್ಲಿ ಮುಂದಾಗಿದ್ದೇವೆ. ರೈತ ದಸರಾ, ಚಲನಚಿತ್ರೋತ್ಸವ, ಕಲಾತಂಡಗಳ ಮೆರವಣಿಗೆ, ವಾಕಥಾನ್, ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಸಂಜೆಯ ವೇಳೆ ಶ್ರೀ ಚಾಮರಾಜೆಶ್ವರ ದೇವಾಲಯದ ಮುಂಭಾಗದ ಬೃಹತ್ ವೇದಿಕೆಯಲ್ಲಿ ಸ್ಥಳೀಯ ಕಲಾವಿದರು, ಕಾಲೇಜು ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹೆಸರಾಂತ ಚಲನಚಿತ್ರ, ಸುಗಮ ಸಂಗೀತ ನಿರ್ದೇಶಕರು, ಗಾಯಕರು ಸಹ ರಸಸಂಜೆ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ರಾಜ್ಯಮಟ್ಟದ ಇತರೆ ಕಲಾ ಪ್ರಕಾರಗಳ ಕಲಾವಿದರು ಸಹ ತಮ್ಮ ಕಲಾ ಪ್ರದರ್ಶನವನ್ನು ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ತಹಶೀಲ್ದಾರ್ ಕೆ. ಪುರಂದರ ಇತರೆ ಗಣ್ಯರು ಹಾಜರಿದ್ದರು.

ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಆರಂಭ

ಚಾಮರಾಜನಗರ, ಅ. 13 - ಜಿಲ್ಲೆಯ ನಾಗರಿಕರ ಕುಂದುಕೊರತೆ, ಸಮಸ್ಯೆ ಆಲಿಸಿ ಪರಿಹರಿಸುವ ಉದ್ದೇಶದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀರು ಜಿಲ್ಲಾಡಳಿತ ಭವನದಲ್ಲಿ ತೆರೆದಿರುವ ಕಚೇರಿಯನ್ನು ಲೋಕಸಬಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಉದ್ಘಾಟಿಸಿದರು.
ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಚಾಲನೆ ನೀಡಿದ ಧ್ರುವನಾರಾಯಣ ಅವರು ಜನರ ಕುಂದುಕೊರತೆ ಸಮಸ್ಯೆಗಳ ಪರಿಹರರಿಸಲು ಹಾಗೂ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುವ ನಿಟ್ಟಿನಲ್ಲಿ ಆರಂಭಿಸಿರುವ ಕಚೇರಿ ಸದುಪಯೋಗವಾಗಲಿ ಎಂದು ಶುಭ ಹಾರೈಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾ ಜನತೆಯ ಕುಂದುಕೊರತೆ, ಅಹವಾಲುಗಳನ್ನು ಕೇಳಿ ಪರಿಹರಿಸಲು ಹಾಗೂ ವಿವಿಧ ಬೇಡಿಕೆಗಳ ಇತ್ಯರ್ಥ, ವಿವಿಧ ಸೌಲಭ್ಯಕ್ಕೆ ಕೋರಿ ಬರುವ ಅರ್ಜಿಗಳನ್ನು ಸ್ವೀಕರಿಸಲು ಕಚೇರಿ ತೆರೆಯಲಾಗಿದೆ ಎಂದರು.
ಕಚೇರಿಯಲ್ಲಿ ಸಿಬ್ಬಂದಿ ಲಭ್ಯರಿದ್ದು, ಅರ್ಜಿಗಳನ್ನು ಜನರಿಂದ ಸ್ವೀಕರಿಸಲಿದ್ದಾರೆ. ತಾವು ಈ ಹಿಂದಿನಿಂದಲೂ ನಗರದ ಪ್ರವಾಸಿಮಂದಿರದಲ್ಲಿ ಜನರ ಕುಂದುಕೊರತೆಗಳನ್ನು ವಿಚಾರಿಸುತ್ತಿದ್ದೇನೆ. ವಾರದಲ್ಲಿ ಒಂದು ದಿನ ನೂತನ ಜಿಲ್ಲಾಡಳಿತ ಭವನದ ಕಚೇರಿಯಲ್ಲಿಯೂ ಸಹ ಇದ್ದು, ಜನರನ್ನು ಭೇಟಿ ಮಾಡಿ ಅಹವಾಲುಗಳನ್ನು ಆಲಿಸುವೆ. ಅಲ್ಲದೆ ಕಚೇರಿಯಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸುವ ಕ್ರಮಕ್ಕೆ ಮುಂದಾಗಲಿದ್ದೇನೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಉದ್ಯೋಗಾಕಾಂಕ್ಷಿಗಳು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರು, ಇತರೆ ಸೌಲಭ್ಯಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರಿಗೆ ಉಚಿತವಾಗಿ ಸೇವೆ ನೀಡುವ ಸೌಲಭ್ಯವನ್ನು ಕಚೇರಿಯಲ್ಲಿ ಪಡೆಯಬಹುದಾಗಿದೆ. ಈಗಾಗಲೇ ತಾವು ನಗರದ ಮಾರುಕಟ್ಟೆ ಬಳಿ ಇಂತಹ ಸೇವಾಕೇಂದ್ರವನ್ನು ಈ ಹಿಂದೆಯೆ ಜನರ ಬಳಕೆಗಾಗಿ ಉಚಿತವಾಗಿ ಆರಂಭಿಸಿದ್ದೆ. ಇನ್ನುಮುಂದೆ ಜಿಲ್ಲಾಡಳಿತ ಭವನದ ಕಚೇರಿಯಲ್ಲೂ ಉಚಿತವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಸೇವೆಯನ್ನು ಕಲ್ಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ದಸರಾ ಚಲನಚಿತ್ರೋತ್ಸವಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ಚಾಮರಾಜನಗರ, ಅ. 13 :- ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಚಲನಚಿತ್ರÀ ಮಂದಿರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ನಾಲ್ಕು ದಿನಗಳ ದಸರಾ ಚಲನಚಿತ್ರೋತ್ಸವಕ್ಕೆ ಚಿತ್ರ ರಸಿಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಭ್ರಮರಾಂಭ ಸಿನಿಪ್ಲೆಕ್ಸ್ ಹಾಗೂ ಸಿಂಹಮೂವೀ ಪ್ಯಾರಡೈಸ್ ಚಿತ್ರಮಂದಿರದಲ್ಲಿ ಆರಂಭವಾಗಿರುವ ಚಲನಚಿತ್ರಗಳನ್ನು ವೀಕ್ಷಿಸಲು ಪ್ರೇಕ್ಷಕರ ದಂಡೇ ಬರುತ್ತಿದೆ.  ಭ್ರಮರಾಂಭ ಸಿನಿಪ್ಲೆಕ್ಸ್‍ನಲ್ಲಿ ಇಂದು ಪ್ರದರ್ಶಿತವಾದ ಸರ್ಕಾರಿ ಹಿರಿಯ ಪ್ರಾಥಮಿಕ ಸಾಲೆ ಕಾಸರಗೋಡು ಹಾಗೂ ಸಿಂಹ ಮೂವೀ ಪ್ಯಾರಡೈಸ್‍ನಲ್ಲಿ ಪ್ರದರ್ಶನಗೊಂಡ ಶಿವರಾಜ್ ಕುಮಾರ್ ಅಭಿನಯದ ಜನಪ್ರಿಯ ಚಲನಚಿತ್ರ ಟಗರು ಸಿನಿಮಾ ವೀಕ್ಷಿಸಲು ಚಿತ್ರರಸಿಕರು ಮುಗಿಬಿದ್ದರು.
ಚಿತ್ರಮಂದಿರದಲ್ಲಿನ ಎಲ್ಲಾ ಅಸನಗಳು ಭರ್ತಿಯಾಗಿದ್ದವು. ಇದೇ ಮೊದಲ ಬಾರಿಗೆ ಚಲನಚಿತ್ರ ಮಂದಿರದಲ್ಲಿ ಬೆಳಗಿನ ಪ್ರದಶರ್Àನದಲ್ಲಿ ಸದಭಿರುಚಿಯ ಹಾಗೂ ಜನಪ್ರಿಯ ಚಲನಚಿತ್ರಗಳನ್ನು ದಸರಾ ಚಲನಚಿತ್ರ ಮಹೋತ್ಸವದಲ್ಲಿ ಪ್ರದರ್ಶಿಸುತ್ತಿರುವುದಕ್ಕೆ ಸಿನಿಮಾ ಪ್ರೇಮಿಗಳಿಂದ ತೀವ್ರ ಮೆಚ್ಚುಗೆ ವ್ಯಕ್ತವಾಗಿದೆ.
ಭ್ರವiರಾಂಭ ಸಿನಿಪ್ಲೆಕ್ಸ್ ಚಿತ್ರಮಂದಿರದಲ್ಲಿ ಅಕ್ಟೋಬರ್ 14ರಂದು ದಯವಿಟ್ಟು ಗಮನಿಸಿ, 15ರಂದು ರಾಜು ಕನ್ನಡ ಮೀಡಿಯಂ, 16ರಂದು ನಾಗರಹಾವು ಚಲನಚಿತ್ರ ಪ್ರದರ್ಶನಗೊಳ್ಳಲಿದೆ.
ಸಿಂಹ ಮೂವೀ ಪ್ಯಾರಡೈಸ್ ಚಿತ್ರಮಂದಿರದಲ್ಲಿ ಅಕ್ಟೋಬರ್ 14 ರಂದು ಮುಗುಳುನಗೆ, 15ರಂದು ಹೆಬ್ಬೆಟ್ಟು ರಾಮಕ್ಕ, 16ರಂದು ಕಾನೂರಾಯಣ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.
ಆಯಾ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ಚಿತ್ರ ಪ್ರದರ್ಶನ ಆರಂಭವಾಗಲಿದೆ. ಚಿತ್ರರಸಿಕರು ಚಲನಚಿತ್ರಗಳನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ. 

ತೆರಕಣಾಂಬಿ ತಾ.ಪಂ. ಸ್ಥಾನಕ್ಕೆ ಉಪಚುನಾವಣೆ : ಜಿಲ್ಲಾಧಿಕಾರಿಯವರಿಂದ ಅಧಿಸೂಚನೆ 

ಚಾಮರಾಜನಗರ, ಅ. 13 :- ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಕ್ಷೇತ್ರದ ತಾಲೂಕು ಪಂಚಾಯಿತಿಯ ಒಂದು ಸದಸ್ಯ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಅಕ್ಟೋಬರ್ 16 ಕಡೆಯ ದಿನವಾಗಿದೆ. ಅಕ್ಟೋಬರ್ 17ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅಕ್ಟೋಬರ್ 20 ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಅಕ್ಟೋಬರ್ 28ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮರು ಮತದಾನ ಅವಶ್ಯವಿದ್ದಲ್ಲಿ ಅಕ್ಟೋಬರ್ 30ರಂದು ನಡೆಸಲಾಗುತ್ತದೆ. ಮತಗಳ ಎಣಿಕೆ ಕಾರ್ಯವು ಅಕ್ಟೋಬರ್ 31ರಂದು ಬೆಳಿಗ್ಗೆ 8 ಗಂಟೆಗೆ ಆಯಾ ತಾಲೂಕು ಕೇಂದ್ರದಲ್ಲಿ ನಡೆಯಲಿದೆ. ಅಕ್ಟೋಬರ್ 31ರಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಕ್ಷೇತ್ರದ ತಾಲೂಕು ಪಂಚಾಯಿತಿಯ ಒಂದು ಸದಸ್ಯ ಸ್ಥಾನಕ್ಕೆ (ಅನುಸೂಚಿತ ಪಂಗಡ) ಚುನಾವಣೆ ನಿಗಧಿಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಚಾಮರಾಜನಗರ ದಸರಾ ಮಹೋತ್ಸವ : ಅ.14ರ ಸಾಂಸ್ಕøತಿಕ ಕಾರ್ಯಕ್ರಮ ವಿವರ

     ಚಾಮರಾಜನಗರ, ಅ. 13 :- ಚಾಮರಾಜನಗರ ದಸರಾ ಮಹೋತ್ಸವದ ಅಕ್ಟೋಬರ್ 14ರ ಸಾಂಸ್ಕøತಿಕ ಕಾರ್ಯಕ್ರಮಗಳ ವಿವರ ಇಂತಿದೆ.
     ಅಕ್ಟೋಬರ್ 14 ರಂದು ಸಂಜೆ 4.30 ರಿಂದ 4.50 ಗಂಟೆಯ ವರೆಗೆ  ರಾಮಸಮುದ್ರದ ರಾಜಪ್ಪ ಮತ್ತು ತಂಡದವರಿಂದ ಜನಪದ ಸಂಗೀತ,  4.50 ರಿಂದ 5.20 ರವರಗೆ ರಾಮಸಮುದ್ರದ ಶ್ರೀ ಮಲೆ ಮಹದೇಶ್ವರ ಕಲಾತಂಡದಿಂದ ಬೀಸು ಕಂಸಾಳೆ,   5.20 ರಿಂದ 5.40 ರವರೆಗೆ ಯಳಂದೂರಿನ ಅರುಣ್ ಕುಮಾರ್ ತಂಡದಿಂದ ಭಾವಗೀತೆ, ಸಂಜೆ 5.40 ರಿಂದ 6 ಗಂಟೆಯ ರವರೆಗೆ ಚಾಮರಾಜನಗರ ನಗರದ ಶಾರದ ನೃತ್ಯ ಶಾಲೆ ಕಲಾವಿದರಿಂದ ಭರತನಾಟ್ಯ ಕಾರ್ಯಕ್ರಮ ಏರ್ಪಾಡಾಗಿದೆ. ಸಂಜೆ 6 ರಿಂದ 7 ಗಂಟೆಯ ವರೆಗೆ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜು ಸಂಜೆ ಹೆಸರಿನಡಿ ಸಾಂಸ್ಕøತಿಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 7 ರಿಂದ 8.15 ರವರೆಗೆ ಖ್ಯಾತ ಪ್ರಭಾತ್ ಕಲಾವಿದರು ನೃತ್ಯವೈಭವ ಪ್ರಸ್ತುತ ಪಡಿಸುವರು. 8.15 ರಿಂದ 10.30 ರವರೆಗೆ ಹೆಸರಾಂತ ಗಾಯಕಿ ಸಂಗೀತ ಕಟ್ಟಿ ಮತ್ತು ತಂಡದವರಿಂದ ನವರಸ ಗಾಯನ ಕಾರ್ಯಕ್ರಮ ನಡೆಯಲಿದೆ.

ಚಾಮರಾಜನಗರ ದಸರಾ: ಅ.14ರಂದು ರಂಗೋಲಿ ಸ್ಪರ್ಧೆ 

ಚಾಮರಾಜನಗರ, ಅ. 13  ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಮಕ್ಕಳು ಮತ್ತು ಮಹಿಳೆಯರಿಗಾಗಿ ನಗರದ ಚಾಮರಾಜೇಶ್ವರ ದೇವಸ್ಥಾನ ಆವರಣದಲ್ಲಿ ಅಕ್ಟೋಬರ್ 14ರಂದು ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. 
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.
ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು 9 ರಿಂದ 18 ವಯೋಮಿತಿಯಲ್ಲಿರಬೇಕು. 19 ವರ್ಷದ ಮೇಲ್ಪಟ್ಟ ಮಹಿಳೆಯರಿಗಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ರಂಗೋಲಿ, ಪುಷ್ಪ ರಂಗೋಲಿಗೆ ಬೇಕಾಗುವ ಸಾಮಾಗ್ರಿಗಳನ್ನು ತಾವೇ ತರಬೇಕು.  ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಮಕ್ಕಳು ಹಾಗೂ ಮಹಿಳೆಯರು ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 129ರಲ್ಲಿ ಹೆಸರನ್ನು ಅಕ್ಟೋಬರ್ 13ರೊಳಗೆ ನೋಂದಾಯಿಸಿಕೊಳ್ಳಬೇಕು. 
ಹೆಚ್ಚಿನ ಮಾಹಿತಿಗಾಗಿ ಶಾರದಾದೇವಿ ಮೊ. 9741710061ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 15ರಂದು ನಗರದಲ್ಲಿ ರೈತ ದಸರಾ 

      ಚಾಮರಾಜನಗರ, ಅ. 13  ಚಾಮರಾಜನಗರ ದಸರಾ ಮಹೋತ್ಸವ 2018ರ ಅಂಗವಾಗಿ ಅಕ್ಟೋಬರ್ 15ರಂದು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರೈತ ದಸರಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ಒಂದೇ ರೈತ ಕುಟುಂಬದ ಸದಸ್ಯರಿಂದ ತಾಳವಾದ್ಯ ಮತ್ತು ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ರೈತಗೀತೆ, 10.15 ರಿಂದ ಉದ್ಘಾಟನೆ ನೆರವೇರಲಿದೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಂತ್ರಿಕ ಗೋಷ್ಠಿಗಳಿವೆ.
ವಿಶೇಷ ಆಕರ್ಷಣೆಯಾಗಿ ಕಾಡು ಕೃಷಿ ಆವಿಷ್ಕಾರಕರಾದ ಡಾ. ಖಾದರ್ ಅವರಿಂದ ದೇಸಿ ಆಹಾರ, ದೇಶೀ ವ್ಯವಸಾಯ, ಸಂಪೂರ್ಣ ಆರೋಗ್ಯ ಹಾಗೂ ಕೃಷಿ ಮಾರುಕಟ್ಟೆ ತಜ್ಞರಾದ ಡಾ. ವೆಂಕಟರೆಡ್ಡಿ ಅವರಿಂದ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮಾರುಕಟ್ಟೆ ಕೌಶಲ್ಯಗಳ ಕುರಿತು ವಿಷಯಗಳ ಮಂಡನೆ ನಡೆಯಲಿದೆ.
ಜಿಲ್ಲೆಯ ರೈತಬಾಂಧವರು, ನಾಗರಿಕರು ರೈತ ದಸರಾಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಕೋರಲಾಗಿದೆ.





ಅ. 14ರಂದು ನಗರ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಅ. 13- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಸಂತೆಮರಹಳ್ಳಿ ಉಪವಿಭಾಗದ ವ್ಯಾಪ್ತಿಯಲ್ಲಿ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಯೋಜನೆಯಡಿ ಗ್ರಾಮಗಳಿಗೆ ನಿರಂತರ ಜ್ಯೋತಿ ಕಲ್ಪಿಸುವ ಹೊಂಗನೂರು ಫೀಡರ್ ಕಾಮಗಾರಿಯು ಪ್ರಗತಿಯಲ್ಲಿದೆ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಾಮರಾಜನಗರ ಪಟ್ಟಣ, ರಾಮಸಮುದ್ರ, ಜಿಲ್ಲಾಧಿಕಾರಿಗಳ ಕಚೇರಿ, ಟಿ.ಕೆ. ಮೋಳೆ, ಎನ್‍ಜೆವೈ, ಮಾದಾಪುರ, ಕೋಡಿಮೋಳೆ, ಹರದನಹಳ್ಳಿ ಫೀಡರ್‍ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 14ರಂದು ಸಂತೆಮರಹಳ್ಳಿ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಅ. 13 - ಸಂತೆಮರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಕ್ಟೋಬರ್ 14ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೊನ್ನೂರು,  ಸಂತೆಮರಹಳ್ಳಿ, ನವಿಲೂರು, ಆಲ್ದೂರು, ಮಂಗಲ, ಕುದೇರು, ಕೆಂಪನಪುರ, ದುಗ್ಗಟ್ಟಿ, ಅಂಬಳೆ, ಚುಂಗಡೀಪುರ, ಉಮ್ಮತ್ತೂರು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು