Friday, 23 November 2018

ಸಿ.ಸಿ.ಕ್ಯಾಮೆರಾಗಳಿದ್ದರೂ ಪ್ರೇಮಿಗಳ ಅಡ್ಡೆಯಾದ ಚಾಮರಾಜೇಶ್ವರ ದೇವಾಲಯ.! ಪದೆ ಪದೇ ಇದೆ ನಡೆದರೆ ದೇವಾಲದ ಹಿಂದೆಯೇ ಬಿತ್ತಿ ಪತ್ರ ಅಂಟಿಸಲು ಮುಂದಾಗಲಿದ್ದಾರೆ ಯುವ ಪಡೆ ಜೋಪಾನ! ವರದಿ ಎಸ್.ವೀರಭದ್ರಸ್ವಾಮಿ.ರಾಮಸಮುದ್ರ



ಸಿ.ಸಿ.ಕ್ಯಾಮೆರಾಗಳಿದ್ದರೂ ಪ್ರೇಮಿಗಳ ಅಡ್ಡೆಯಾದ ಚಾಮರಾಜೇಶ್ವರ ದೇವಾಲಯ.!ಮುತ್ತು ಕೊಡ್ತಾರೆ, ಹುಟ್ಟು ಹಬ್ಬ ಮಾಡಿಕೊಳ್ತಾರೆ, ಬಿಟ್ರೆ ಮುಂದೆ ಏನೇನೋ ಮಾಡ್ತಾರೆ.!

ವರದಿ ಎಸ್.ವೀರಭದ್ರಸ್ವಾಮಿ.ರಾಮಸಮುದ್ರ
ಚಾಮರಾಜನಗರ: ಪ್ರೇಮಿಸಲು ಪ್ರೇಮಿಗಳಿಗೆ ಪಾರ್ಕ್, ಹೊಟೇಲ್‍ಗಳು ಕೇಂದ್ರವಾಗಿದದ್ದು ಒಂದೆಡೆಯಾದರೆ, ಈಗ ಸದಾ ಭಯ, ಶ್ರದ್ದಾ ಭಕ್ತಿ ಮೂಡಿಸುತ್ತಿದ್ದ ಕೇಂದ್ರಗಳಲ್ಲಿ ಒಂದಾದ ದೇವಾಲಯಗಳಿಗೆ ಪ್ರೇಮಿಗಳು ಈಗ ದೇವಾಲಯಗಳಿಗೆ ಲಗ್ಗೆ ಇಟ್ಟಿರುವುದರಿಂದ  ಭಕ್ತಾಧಿಗಳಲ್ಲಿ ಕಿರಿಕಿರಿಯ ಜೊತೆ ಮುಜುಗರವನ್ನು ಉಂಟುಮಾಡಲಾರಂಭಿಸಿದೆ.

ಚಾಮರಾಜನಗರದ ಹೆಸರಾಂತ ದೇವಾಲಯಗಳಲ್ಲಿ ಒಂದಾದ ಚಾಮರಾಜೇಶ್ವರ ದೇವಾಲಯದಲ್ಲಿ ಬಣ್ಣ ಬಣ್ಣದ ಕಲರವಗಳು ಅಂದರೆ ಪ್ರೇಮಿಗಳು ತಮ್ಮ ಅಡ್ಡೆಯನ್ನಾಗಿಸಿಕೊಂಡಿದ್ದಾರೆ. ಪ್ರತಿನಿತ್ಯ ಅರ್ಚಕರು ಬರುತ್ತಾರೋ ಬಿಡುತ್ತಾರೋ ಆದರೆ ಪ್ರೇಮಿಗಳು ಮಾತ್ರ ತಪ್ಪಿಸಿಕೊಳ್ಳೋದೇ ಇಲ್ಲ. ಪ್ರತಿನಿತ್ಯ ಮಾಢೊ ಕೆಲಸವನ್ನು ನಿಲ್ಲಿಸೋದು ಇಲ್ಲ.
ಸೋಮವಾರದಿಂದ ಶನಿವಾರದವರೆಗೆ ಕಾಲೇಜಿಗೆಂದು ಬಂದವರು ಮುಂಜಾನೆಯೇ 7 ರ ಸಮಯದಲ್ಲಿ ಪುಸ್ತಕ ಹಿದಿಡು ಬಂದವರು ಹೊಗೋದೇ 9 ಗಂಟೆಗೆ, ಅಷ್ಟೇ ಅಲ್ಲ ಭಾನುವಾರವೂ ಸಹ ರಜೆ ಇದ್ದರೂ ಬರುವುದು ಕೆಲವೊಮ್ಮೆ  ಸಹಜವಾಗಿದೆ. ಇತ್ತ ಇದೇ ಸೂಕ್ತ ಸ್ಥಳ ಎಂದು ಹುಡುಗಿಯರನ್ನೇ ಹಿಂಬಾಲಿಸಿಕೊಂಡು ಬಂದು ಹುಡುಗರು ಕುಳಿತುಕೊಳ್ಳುತ್ತಾರೆ. ಇದರಿಂದ ಮತ್ತೇ ಕೆಲವರು ಇದರ ದುರುಪಯೋಗವನ್ನು ಮಾಡಿಕೊಳ್ಳುವುದರಿಂದ ಅವರವರ ನಡುವೆ ಗಲಾಟೆ ಘರ್ಷಣೆಗಳು ನಡೆದಿದೆ ಎನ್ನುತ್ತಾರೆ ಅಲ್ಲಿಗೆ ಬಂದ ಭಕ್ತಾದಿಯೋರ್ವರು.
ಈ ಬಗ್ಗೆ ದೇವಾಲಯದಲ್ಲಿರುವ ವ್ಯಕ್ತಿಯೊರ್ವನನ್ನು ಕೇಳಲಾಗಿ ನಾವು ಓದಲಿಕ್ಕಾಗಿಯೇ ಪ್ರತಿನಿತ್ಯ ಇಲ್ಲಿಗೆ ಬರುತ್ತೇವೆ ಎನ್ನುವ ಇವರನ್ನು ಪ್ರಶ್ನಿಸಿಸಿದರೆ ನಮ್ಮ ಜೊತೆಯಲ್ಲಿರುವವರು ನಮ್ಮ ಸಂಬಂಧಿ ಎನ್ನುತ್ತಾರೆ. ನಾವು ಏನು ಮಾಡಬೇಕೆಂಬುದು ನಮಗೆ ತಿಳಿಯುತ್ತಿಲ್ಲ ಎನ್ನುತ್ತಾರೆ.  ಪ್ರೇಮಿಗಳ ಈ ವರ್ತನೆ ಪೂಜೆಗೆಂದು ಬರುವವರಿಗೆ ಮಾನಸಿಕ ನೆಮ್ಮದಿಯ ಜೊತೆ, ಕಿರಿಕಿರಿಯನ್ನು ತಂದಿದೆ.
ಇದರ ಬಗ್ಗೆ  ಕೇಳಿದರೆ ಇವೆಲ್ಲ ನಮಗೇಕೆ? ಎಂದು ಗೊತ್ತಿದ್ದು ಗೊತ್ತಿಲ್ಲದ್ದಂತೆಯೇ ಸುಮ್ಮನಿರುವ ನಮ್ಮ ದೇವಾಲಯದ  ಆಡಳಿತ ಮಂಡಳಿಯಾಗಲೀ, ಮುಜರಾಯಿ ಇಲಾಖೆಯ ಅಧಿಕಾರಿಗಳಾಗಲೀ ತಲೆ ಕೆಡಿಸಿಕೊಂಡಿಲ್ಲ. ಇಲ್ಲಿ ಸಿ.ಸಿ ಕ್ಯಾಮೆರಾಗಳಿದ್ದರೂ ಬರುತ್ತಿರುವ ಪ್ರೇಮಿಗಳ ಚಿತ್ರಗಳನ್ನು ಚಿತ್ರೀಕರಣವಾಗಿದ್ದ ದೃಶ್ಯಗಳನ್ನು ದೇವಾಲಯದ ಒಳಗೆ ಮುದ್ರಿಸಿ ಹಾಕಿದರೆ ಬಹುಶಃ ಕಡಿವಾಣವಾಗಬಹುದೇನೋ ಎನ್ನುತ್ತಾರೆ ಕೆಲವರು.
ಇತ್ತೀಚೆಗೆ ನಂಜನಗೂಡಿನ ದೇವಾಲಯವೊಂದರಲ್ಲಿ ವಿಡಿಯೋ ವೈರಲ್ ಆದಂತೆ ಚಾಮರಾಜನಗರದಲ್ಲೂ ಯುವಕರು, ದೇವಾಲಯದಲ್ಲಿ ಇಂಹತ ಘಟನೆ ಘಟಿಸಿದರೆ ಮುಲಾಜಿಲ್ಲದೆ ಹರಿಯಬಿಡುತ್ತೇವೆ ಎಂದು ಹರಿಯಬಿಡಲು ಕಾಯ್ದಿದ್ದಾರೆ ಯಾಮಾದರೆ ಅದಕ್ಕೆ ನಾವು ಜವಬ್ದಾರರಾಗುವುದಿಲ್ಲ. ನಮಗೆ ದೇವಾಲಯದ ಪಾವಿತ್ರ್ಯತೆ ಬೇಕು. ಇಂತಹ ಮಾನಗೆಟ್ಟವರಿಂದ ನಮಗೇನು ಎನ್ನುತ್ತಿದ್ದಾರೆ. ಪಾಪ ಪೋಷಕರು ಮಕ್ಕಳು ಮುಗ್ದರು ಕಾಲೇಜಿಗೆ ಹೋಗಿವರುತ್ತಿದ್ದಾರೆ ಎಂದು ನಂಬಿರುವ ಮುಗ್ದ ಜೀವಿಗಳಿಗೆ ಶಾಕ್ ಕೊಡುವ ಜೊತೆಗೆ ಮಕ್ಕಳಿಗೂ ಶಾಕ್ ಕೊಟ್ಟರೂ ಅನುಮಾನವಿಲ್ಲ ಎಂಧರೆ ತಪ್ಪಾಗಲಾರದು.
ದೇವಾಲಯದಲ್ಲಿ ಇಂತಹ ತರಲೆ ತಾಪತ್ರಯಗಳ ತರಹದ ಘಟನೆಗಳು ಮುಂದುವರೆದದ್ದೇ ಆದರೆ ಮುಂದೆ ಸಂಭವಿಸುವ ಘಟನೆಗಳಿಗೆ ಮುಜರಾಯಿ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲೀ ಹೊಣೆಯಾಗಬೇಕಾಗುತ್ತದೆ.
 ಚಿತ್ರ: ಇದೆ.
>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>

Thursday, 22 November 2018

22-11-2018 (ಡಿ. 8ರಂದು ಲೋಕ್ ಅದಾಲತ್ : ರಾಜಿ ಸಂಧಾನದ ಮೂಲಕ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅವಕಾಶ)


ಡಿ. 8ರಂದು ಲೋಕ್ ಅದಾಲತ್ : ರಾಜಿ ಸಂಧಾನದ ಮೂಲಕ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಅವಕಾಶ





S.VEERABHADRA SWAMY. RAAMASAMUDRA





9480030980

---------------------------------------------

ಚಾಮರಾಜನಗರ, ನ. 22 - ನ್ಯಾಯಾಲಯದಲ್ಲಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಇರುವ ರಾಷ್ಟ್ರೀಯ ಲೋಕ್ ಅದಾಲತ್ ಡಿಸೆಂಬರ್ 8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಯಲಿದ್ದು ನಾಗರಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಇಂದು  ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಲೋಕ್ ಅದಾಲತ್‍ನಲ್ಲಿ ತೀರ್ಮಾನವಾಗಬಹುದಾದ ಎಲ್ಲ ಸ್ವರೂಪದ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ಉಭಯ ಪಕ್ಷಗಾರರನ್ನು ವಿಶವಾಸಕ್ಕೆ ತೆಗೆದುಕೊಂಡು ರಾಜಿ ಸಂಧಾನದ ಮೂಲಕ ತೀರ್ಮಾನ ಮಾಡಲಾಗುತ್ತದೆ. ಈ ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಪ್ರಕರಣ ಇತ್ಯರ್ಥಗೊಳ್ಳಲಿದೆ ಎಂದರು. 
ಲೋಕ್ ಅದಾಲತ್‍ನಲ್ಲಿ ಪಕ್ಷಗಾರರೇ ನೇರವಾಗಿ ಅಥವಾ ವಕೀಲರ ಮೂಲಕ ಪಾಲ್ಗೊಳ್ಳಬಹುದು. ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುತ್ತದೆ. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿಯಲಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ನ್ಯಾಯಾಲುಯದ ಶುಲ್ಕ ನೀಡಬೇಕಾಗಿಲ್ಲ. ಅಲ್ಲದೆ ನ್ಯಾಯಾಲದಲ್ಲಿ ದಾಖಲಾಗಿರುವ ಪ್ರಕರಣಗಳು ಲೋಕ್ ಅದಾಲತ್‍ನಲ್ಲಿ ಇತ್ಯರ್ಥಗೊಂಡರೆ ಈಗಾಗಲೇ ಪಾವತಿಸಲಾಗಿರುವ ನ್ಯಾಯಾಲಯ ಶುಲ್ಕದ ಶೇ.75ರಷ್ಟನ್ನು ವಾಪಸ್ಸು ನೀಡಲಾಗುತ್ತದೆ ಎಂದರು.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಇದರಲ್ಲಿ ಯಾವುದೇ ಒತ್ತಡ ಹೇರಲಾಗುವುದಿಲ್ಲ. ಕಡಿಮೆ ವೆಚ್ಚದಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅದಾಲತ್ ವಿಶೇಷ ಅವಕಾಶವಾಗಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರು ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಯಲಿದೆ. ಕಳೆದ ಬಾರಿ ನಡೆದ ಲೋಕ್ ಅದಾಲತ್‍ನಲ್ಲಿ 338 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರು ಇದೇ ವೇಳೆ ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಸಿ.ಜಿ. ವಿಶಾಲಾಕ್ಷಿ, ಸಿವಿಲ್ ನ್ಯಾಯಾಧೀಶರಾದ ಉಮೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್, ಕಾಂiÀರ್iದರ್ಶಿ ಅರುಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ನ. 24ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ನ. 22 - ಜಿಲ್ಲೆಯನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 24ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಾವಿದರ ದಾಖಲಾತಿ ಪರಿಶೀಲನೆ
ಚಾಮರಾಜನಗರ, ನ. 22 :- ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಚಾಮರಾಜನಗರ ಜಿಲ್ಲಾ ಕಚೇರಿಗೆ ಆನ್ ಲೈನ್ ಮೂಲಕ ಧನಸಹಾಯಕ್ಕೆ ಅರ್ಜಿ ಸಲ್ಲಿಸಿರುವ ಕಲಾವಿದರ ಮೂಲ ದಾಖಲಾತಿ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಅರ್ಜಿದಾರರು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಿದೆ.
ಈಗಾಗಲೇ ದಾಖಲಾತಿ ಪರಿಶೀಲನೆ ಕಾರ್ಯ ಆರಂಭವಾಗಿದೆ. ನವೆಂಬರ್ 24ರ ಮಧ್ಯಾಹ್ನ 3 ಗಂಟೆಯವರೆಗೂ ಕಲಾವಿದರು ದಾಖಲಾತಿ ಪರಿಶೀಲನೆಗೆ ಹಾಜರಾಗಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 23, 24, 25ರಂದು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ವಿಶೇಷ ನೋಂದಣಿ ಅಭಿಯಾನ
ಚಾಮರಾಜನಗರ, ನ. 22 - ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರು ಸೇರ್ಪಡೆ, ಪಟ್ಟಿಯಲ್ಲಿ ಕಂಡುಬರುವ ಕಾಗುಣಿತ ಲೋಪದೋಷಗಳು, ಮತದಾರರೊಡನೆ ಸಂಬಂಧ ಇತರೆ ಲೋಪದೋಷಗಳನ್ನು ಸರಿಪಡಿಸುವ ಸಲುವಾಗಿ ನವೆಂಬರ್ 23 ರಿಂದ 25ರವರೆಗೆ ಬೆಳಿಗ್ಗೆ 9.30ರಿಂದ ಸಂಜೆ 5.30 ಗಂಟೆಯವರೆಗೆ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ದಿನಾಂಕ 01.01.2019ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರವಿರುವ ಮತದಾರರ ಪಟ್ಟಿ, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕೈಗೊಳ್ಳಲಾಗಿದೆ. ನವೆಂಬರ್ 23, 24 ಹಾಗೂ 25ರಂದು ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಆಯಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮತಗಟ್ಟೆಗಳಲ್ಲಿ ಹಾಜರಿದ್ದು ಅರ್ಹರಿಂದ ನಮೂನೆ 6, 7, 8 ಮತ್ತು 8ಎ.ರಲ್ಲಿ ಅರ್ಜಿಗಳನ್ನು ಪಡೆಯಲಿದ್ದಾರೆ.
ಅರ್ಹರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಹಾಗೂ ಮತದಾರರ ಪಟ್ಟಿಯಲ್ಲಿ ಕಂಡುಬರುವ ಲೋಪದೋಷಗಳನ್ನು ಸರಿಪಡಿಸಿಕೊಂಡು ಶೇ. 100ರಷ್ಟು ದೋಷರಹಿತ ಮತದಾರರ ಪಟ್ಟಿ ಸಿದ್ದಪಡಿಸುವ ಸಲುವಾಗಿ ಚುನಾವಣಾ ಆಯೋಗದ ವಿಶೇಷ ನೋಂದಣಿ ಅಭಿಯಾನವನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಪೋಲಾಗದಂತೆ ಕ್ರಮ ವಹಿಸಿ : ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸೂಚನೆ 
ಚಾಮರಾಜನಗರ, ನ. 22 - ಗ್ರಾಮೀಣ ಭಾಗಗಳಲ್ಲಿ ವಿದ್ಯುತ್, ನೀರು ಇತರೆ ಪ್ರಮುಖ ಸೌಲಭ್ಯಗಳು ಪೋಲಾಗದಂತೆ ಅಧಿಕಾರಿಗಳು ಹೆಚ್ಚು ಗಮನ ನೀಡಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹಗಲು ಹೊತ್ತಿನಲ್ಲಿಯೂ ಬೀದಿ ದೀಪಗಳು ಚಾಲನೆಯಲ್ಲಿರುವುದನ್ನು ಗಮನಿಸಿದ್ದೇನೆ. ಅತ್ಯಂತ ಅವಶ್ಯಕವಾಗಿರುವ ವಿದ್ಯುತ್‍ನ್ನು ನಿರ್ಲಕ್ಷ್ಯದಿಂದ ಪೋಲು ಮಾಡಬಾರದು. ಈ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್ ಅವರು ಮಾತನಾಡಿ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪ ನಿಯಂತ್ರಣದ ಸ್ವಿಚ್‍ನ್ನು ಅಳವಡಿಸಲಾಗಿರುತ್ತದೆ. ಆಯಾ ಗ್ರಾಮ ಪಂಚಾಯಿತಿ ನಿರ್ವಹಣೆ ಮಾಡುವ ವೇಳೆ ಗಮನಿಸಬೇಕಾಗುತ್ತದೆ ಎಂದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿಳಂಬವಾಗಿ ವಿದ್ಯುತ್ ಸಂಪರ್ಕ ನೀಡುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ನಿಗಮದ ಅಧಿಕಾರಿಗಳು ವಿದ್ಯುತ್ ಸರಬರಾಜು ನಿಗಮದ ಇಲಾಖೆಯವರೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಯೋಗೀಶ್ ಅವರು ತಿಳಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಾಹಿತಿ ನೀಡುವಲ್ಲಿ ತಾಳೆಯಾಗುತ್ತಿಲ್ಲ. ಅನುಷ್ಟಾನ ನಿಗಮಗಳು ಹಾಗೂ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆಯಲಾಗುವುದು. ಈ ಸಭೆಯಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಪಟ್ಟ ಪ್ರತಿಯೊಂದು ಅರ್ಜಿದಾರರ ವಿವರಗಳನ್ನು ಸಮರ್ಪಕವಾಗಿ ಸಲ್ಲಿಸಬೇಕೆಂದು ತಾಕೀತು ಮಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್ ಅವರು ಮಾತನಾಡಿ ವಿವಿಧ ಯೋಜನೆಗಳಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಾಗಿ ಬ್ಯಾಂಕುಗಳಲ್ಲಿ ಸಾಲ ನೀಡಲಾಗುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳು ಬಡವರಿಗೆ ಸ್ಪಂದಿಸದೇ ಇದ್ದರೆ ಹೇಗೆ? ಎಂದು ಅಸಮಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಲೀಡ್‍ಬ್ಯಾಂಕ್ ವ್ಯವಸ್ಥಾಪಕರು ಸಾಲ ಸೌಲಭ್ಯ ಸೇರಿದಂತೆ ಅನುಕೂಲಗಳನ್ನು ಕಲ್ಪಿಸಲು ಸೂಚನೆ ನೀಡಬೇಕು. ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಸವಲತ್ತುಗಳನ್ನು ತಲುಪಿಸುವ ದಿಸೆಯಲ್ಲಿ ಆದ್ಯತೆ ನೀಡುವಂತೆ ನಿರ್ದೇಶನ ನೀಡಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್‍ನ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚನ್ನಪ್ಪ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮರಗದಮಣಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್ ಪಾಂಡೆ ಸಭೆಯಲ್ಲಿ ಹಾಜರಿದ್ದರು.
ನ. 24ರಂದು ಹೆಗ್ಗವಾಡಿಯಲ್ಲಿ ಕೃಷಿಕರ ಜೊತೆ ಶುಭ ಮುಂಜಾನೆ, ನೇಗಿಲಯೋಗಿಗೆ ಜೀವನೋತ್ಸಾಹ ಕಾರ್ಯಕ್ರಮ 
ಚಾಮರಾಜನಗರ, ನ. 22 ರೈತರಿಗೆ ಕೃಷಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಮಾಹಿತಿ ನೀಡುವ ಕೃಷಿಕರ ಜೊತೆ ಶುಭ ಮುಂಜಾನೆ ನೇಗಿಲಯೋಗಿಗೆ ಜೀವನೋತ್ಸಾಹ ಕಾರ್ಯಕ್ರಮವು ನವೆಂಬರ್ 24ರಂದು ಬೆಳಿಗ್ಗೆ 7 ಗಂಟೆÉಗೆ ತಾಲೂಕಿನ ಹರವೆ ಹೋಬಳಿಯ ಹೆಗ್ಗವಾಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೃಷಿ ಇಲಾಖೆಯ ನಾನಾ ಯೋಜನೆಗಳು, ಸೌಕರ್ಯಗಳು ಕುರಿತು ಮಾಹಿತಿ ನೀಡುವ ಹಾಗೂ ರೈತರು ಗ್ರಾಮೀಣ ಪ್ರದೇಶಗಳ ಮಹಿಳೆಯರು ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಜಂಟಿ ಕೃಷಿ ನಿರ್ದೇಶಕರಾದ ಡಾ. ಎಂ. ತಿರುಮಲೇಶ್ ಅವರ ನೇತೃತ್ವದಲ್ಲಿ ಕೃಷಿಕರ ಜೊತೆ ಶುಭ ಮುಂಜಾನೆ ನೇಗಿಲಯೋಗಿಗೆ ಜೀವನೋತ್ಸಾಹ ಕಾರ್ಯಕ್ರಮವು ಈಗಾಗಲೇ 24 ವಾರಗಳನ್ನು ಪೂರೈಸಿದೆ.
25ನೇ ವಿಶೇಷ ಕಾರ್ಯಕ್ರಮವು ಹೆಗ್ಗವಾಡಿಯಲ್ಲಿ ನಡೆಯಲಿದ್ದು, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಉದ್ಘಾಟಿಸುವರು. ಇತರೆ ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಈ ಕಾರ್ಯಕ್ರಮಕ್ಕೆ ರೈತ ಭಾಂದವರು, ಅಸಕ್ತರು ಭಾಗವಹಿಸಿ ಕೃಷಿ ಇಲಾಖೆ ಯೋಜನೆಗಳ ಮಾಹಿತಿ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರಾದ ಡಾ. ಎಂ. ತಿರುಮಲೇಶ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. 
   
 ದಾಖಲೆ ವಿವರಗಳನ್ನು ಸಲ್ಲಿಸಲು ಗ್ರೀನ್ ಬಡ್ಸ್ ಠೇವಣಿ ಹೂಡಿಕೆದಾರರಿಗೆ ಸೂಚನೆ   
ಚಾಮರಾಜನಗರ, ನ. 22 - ಗ್ರೀನ್ ಬಡ್ಸ್ ಸಂಸ್ಥೆಯಲ್ಲಿ ಠೇವಣಿ ಹೂಡಿಕೆ ಮಾಡಿರುವವರು ಸಂಬಂಧಪಟ್ಟ ಮೊತ್ತ ಹಾಗೂ ದಾಖಲೆಗಳ ವಿವರಗಳನ್ನು ಸಲ್ಲಿಸುವಂತೆ ಮೈಸೂರು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. 
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತರಕ್ಷಣಾ ಕಾಯಿದೆ 2004 ರ ಕಲಂ7(1) ರಿಂದ (4) ರ ಮೇರೆಗೆ ಮೆ: ಗ್ರೀನ್ ಬಡ್ಸ್ ಆಗ್ರೋ ಫಾರಂ ಪ್ರೈ. ಲಿ., ಮೈಸೂರು ರವರು ರಾಜ್ಯಾಧ್ಯಂತ ಹೊಂದಿದ ಶಾಖೆಗಳಲ್ಲಿ ಸಾರ್ವಜನಿಕರು ನಿಶ್ಚಿತ ಠೇವಣಿ (ಎಫ್.ಡಿ.), ರೆಕರಿಂಗ್ ಡಿಪಾಸಿಟ್ (ಆರ್.ಡಿ.), ಮಾಸಿಕ ವಂತಿಗೆ (ಮಾಸಿಕ ಚೀಟಿ ಹಣ) ಹಾಗೂ ಇತರೆ ರೂಪದಲ್ಲಿ ಠೇವಣಿಯಾಗಿ ಇಡಲಾಗಿದ್ದ ಹಣವನ್ನು ಸಕಾಲದಲ್ಲಿ ಹೂಡಿಕೆದಾರರಿಗೆ ಹಿಂತಿರುಗಿಸದ ಕಾರಣ ಸದರಿ ಸಂಸ್ಥೆ ಹಾಗೂ ಅದರ ಪದಾಧಿಕಾರಿಗಳ ವಿರುದ್ಧ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಕ್ರಿಮಿನಲ್ (ಇತರೆ) ದಾವೆಯನ್ನು ಹೂಡಲಾಗಿದ್ದು ಅವುಗಳು ವಿಚಾರಣೆ ಹಂತದಲ್ಲಿರುತ್ತದೆ.
     ಸದರಿ ಸಂಸ್ಥೆಯಲ್ಲಿ ಹೂಡಲಾಗಿರುವ ಠೇವಣಿಗೆ ಸಂಬಂಧಿಸಿದ ಅತ್ಯಾವಶ್ಯಕವಾದ ಮೂಲ ದಾಖಲೆಗಳನ್ನು ಹಾಗೂ ಸದರಿ ಸಂಸ್ಥೆಯವರು ಹೂಡಿಕೆದಾರರಿಗೆ ಭದ್ರತಾ ದೃಷ್ಠಿಯಿಂದ ನೀಡಿರುವ ಮುಖಬೆಲೆ ದಾಖಲೆಗಳ ವಿವರಗಳನ್ನು ಗೌರವಾನ್ವಿತ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ನವೆಂಬರ್ 27ರೊಳಗೆ (ಸಂಜೆ 5 ಗಂಟೆಯೊಳಗೆ)  ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಮೈಸೂರಿನ ಉಪವಿಭಾಗಾಧಿಕಾರಿಗಳ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು. 
     ಠೇವಣಿದಾರರು, ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಠೇವಣಿ ಹೂಡಿಕೆಯ ವಿವರ (ಆರ್.ಡಿ. ಎಫ್.ಡಿ, ಮಾಸಿಕ ಚೀಟಿ ವಂತಿಕೆ), ಹೂಡಿಕೆಗೆ ಸಂಬಂಧಿಸಿದಂತೆ ಗ್ರೀನ್ ಬಡ್ಸ್ ಸಂಸ್ಥೆಯವರು ನೀಡಿರುವ ಬಾಂಡ್, ಪಾಸ್ ಪುಸ್ತಕ ಇತ್ಯಾದಿ ಹಾಗೂ ಠೇವಣಿದಾರರು ಹೂಡಿರುವ ಒಟ್ಟು ಮೊತ್ತ, ಹಿಂಪಡೆದ ಮೊಬಲಗು (ಠೇವಣಿ ಹಣದಲ್ಲಿ, ಬಡ್ಡಿ ರೂಪದಲ್ಲಿ), ಬರಬೇಕಾದ ಮೊತ್ತ ಹಾಗೂ ಇತರೆ ದಾಖಲೆಗಳನ್ನು ಅರ್ಜಿಯೊಡನೆ ಸಂಬಂಧಿಸಿದ ಎಲ್ಲಾ ಮೂಲ (ಔಡಿigiಟಿಚಿಟ ಆoಛಿumeಟಿಣs) ದಾಖಲೆಗಳನ್ನು ಮತ್ತು ಮೂಲ ದಾಖಲಾತಿಗಳ ಜೆರಾಕ್ಸ್ ಪ್ರತಿಯನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಡೀಕರಿಸಿ ಸಲ್ಲಿಸುಬೇಕು. ನಿಗದಿತ ಅವಧಿಯ ನಂತರ ಬರುವ ಕೋರಿಕೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2422100 ನ್ನು ಸಂಪರ್ಕಿಸುವಂತೆ ಮೈಸೂರು ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.            ನವೆಂಬರ್ 23ರಂದು ಕುರುಬನ ಕಟ್ಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ    
ಚಾಮರಾಜನಗರ, ನ. 22 - ಕುರುಬನ ಕಟ್ಟೆ ಕ್ಷೇತ್ರದಲ್ಲಿ ಇಂಟರ್‍ಲಾಕ್ ಅಳವಡಿಸುವ ಕಾಮಗಾರಿಗೆ ಶಾಸಕರಾದ ಎನ್. ಮಹೇಶ್ ಅವರು ನವೆಂಬರ್ 23ರಂದು ಬೆಳಿಗ್ಗೆ 11 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ದೇಶಿ ಸಂಸ್ಕøತಿ ಪರಂಪರೆಯ ಶಕ್ತಿ ಕೇಂದ್ರಗಳಾದ ಚಿಕ್ಕಲ್ಲೂರು ಹಾಗೂ ಕುರುಬನಕಟ್ಟೆ ಕ್ಷೇತ್ರಗಳಗೆ ಭಕ್ತಾಧಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಅನುದಾನ ಬಿಡುಗಡೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
                
   
 

    
   
 







x

Sunday, 18 November 2018

ಒಂದೇ ನಂಬರ್ ಪ್ಲೇಟ್‍ವುಳ್ಳ ಎರಡು ಲಾರಿ,


       ದಿನಾಂಕ: 14-11-2018 ರಂದು ಸಂಜೆ ಸುಮಾರು 5-00 ಗಂಟೆ ಸಮಯದಲ್ಲಿ ಚಾಮರಾಜನಗರ        ಉಪ-ವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿಯವರಿಗೆ ಠಾಣಾ ಸರಹದ್ದು, ಬಿಸಲವಾಡಿ ಗ್ರಾಮದಲ್ಲಿ      ಕೆ.ಎ 19-1497 ರ ಒಂದೇ ನಂಬರ್ ಪ್ಲೇಟ್‍ವುಳ್ಳ ಎರಡು ಲಾರಿಗಳು ನಿಂತಿರುವ ಬಗ್ಗೆ ಖಚಿತ ಮಾಹಿತಿ ಬಂದಿದ್ದರ ಮೇರೆಗೆ ಶ್ರೀ ರವಿಕಿರಣ್. ಎಸ್.ಎಸ್. ಪಿ.ಎಸ್.ಐ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆರವರು ಉಪ-ವಿಭಾಗದ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರುಗಳ ಜೊತೆ ದಾಳಿ ಮಾಡಿ ಕೆ.ಎ.-19-1497 ರ ಒಂದೇ ನಂಬರ್ ಪ್ಲೇಟ್‍ವುಳ್ಳ 02 ಲಾರಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ, ಆರೋಪಿಗಳ ಪತ್ತೆ ಕಾರ್ಯ ಕೈಗೊಂಡು ಪ್ರಕರಣದ ಆರೋಪಿಗಳಾದ ರವಿಕುಮಾರ ಬಿನ್ ಲೇಟ್ ಗಂಗಾಧರಪ್ಪ, 36 ವರ್ಷ, ಲಾರಿ ಚಾಲಕ, ಲಿಂಗಾಯಿತ ಜನಾಂಗ, ಬಿಸಲವಾಡಿ ಗ್ರಾಮ, ಚಾಮರಾಜನಗರ ತಾಲ್ಲೋಕು, ಸಗೀರ್ ಅಹಮದ್ ಬಿನ್ ಲೇಟ್ ಅಬ್ದುಲ್ ರಜಾಕ್, 48 ವರ್ಷ, ಮುಸ್ಲಿಂ, ಲಾರಿಚಾಲಕ, ಮನೆ ನಂ. 2374, 22 ನೇ ಕ್ರಾಸ್, ಅಶೋಕ ರಸ್ತೆ, ಲಷ್ಕರ್ ಮೊಹಲ್ಲ, ಮೈಸೂರು. ಹಾಗೂ ಮಹಮದ್ ರಫೀಕ್ ಬಿನ್ ಲೇಟ್ ಅನ್ವರ್ ಪಾಷ, 31 ವರ್ಷ, ಮುಸ್ಲಿಂ, ವೆಲ್ಡಿಂಗ್ ಷಾಪ್‍ನಲ್ಲಿ ಕೆಲಸ, ಮನೆ ನಂ. 114, 14 ನೇ ಕ್ರಾಸ್, ಹೈದರಾಲಿ ಬ್ಲಾಕ್, ಗೌಸಿಯಾ ನಗರ, ಮೈಸೂರುರವರುಗಳನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಉಪಯೋಗಿಸಿದ ವಸ್ತುಗಳನ್ನು ಹಾಗೂ ಒಂದೇ ನಂಬರ್ ಪ್ಲೇಟ್‍ವುಳ್ಳ 02 ಲಾರಿಗಳನ್ನು ವಶಪಡಿಸಿಕೊಂಡಿರುತ್ತೆ. ಸರ್ಕಾರಕ್ಕೆ ತೆರಿಗೆ ವಂಚಿಸಲು ಕೃತ್ಯವೆಸಗಿರುವುದಾಗಿ ತನಿಖೆಯಿಂದ ದೃಢಪಟ್ಟಿರುತ್ತೆ.
ಚಾಮರಾಜನಗರ ತಾಲ್ಲೂಕು ಮಾದಲವಾಡಿ ಗ್ರಾಮದ ವಾಸಿ ಮಾದೇಗೌಡ ಬಿನ್ ಲೇಟ್ ಕರಿಯಗೌಡರವರ ಮನೆಯ ಬಾಗಿಲ ಬೀಗ ಒಡೆದು ಮನೆಯಲ್ಲಿ ಟ್ರಂಕ್‍ನಲ್ಲಿಟ್ಟಿದ್ದ 1,00,000/- ರೂ. ಹಾಗೂ ದಾಖಲಾತಿಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂದು ದೂರು ದಾಖಲಾಗಿ ತನಿಖೆ ಕೈಗೊಂಡಿದ್ದು, ಈ ಪ್ರಕರಣವು ವರದಿಯಾದ 24 ಗಂಟೆಯೊಳಗೆ ಆರೋಪಿಗಳಾದ 1. ರವಿ ಬಿನ್ ಮಲ್ಲೇಗೌಡ, 30 ವರ್ಷ, ಕುರುಬ ಗೌಡ ಜನಾಂಗ, ವ್ಯವಸಾಯ, ಮಾದಲವಾಡಿ ಗ್ರಾಮ, ಚಾ|| ನಗರ ತಾಲ್ಲೂಕು. 2. ಗಿರಿಮಲ್ಲೇಗೌಡ ಬಿನ್ ಮಲ್ಲೇಗೌಡ 35 ವರ್ಷ, ಕುರುಬಗೌಡ ಜನಾಂಗ, ಮಾದಲವಾಡಿ ಗ್ರಾಮ ಚಾ|| ನಗರ ತಾಲ್ಲೂಕು ರವರುಗಳನ್ನು ದಸ್ತಗಿರಿ ಮಾಡಿ, ಅವರುಗಳಿಂದ ಕಳ್ಳತನ ಮಾಡಿದ್ದ 95,000/- ರೂ ನಗದು ಹಣ ಮತ್ತು ದಾಖಲಾತಿಗಳನ್ನು ವಶಪಡಿಸಿಕೊಂಡಿರುತ್ತೆ.

ಇತ್ತೀಚೆಗೆ ಪಣ್ಯದಹುಂಡಿ ಗ್ರಾಮದ ಶ್ರೀ ಗುರುರಾಜ ಕಲ್ಯಾಣಮಂಟಪದ ಮುಂದೆ ನಿಲ್ಲಿಸಿದ್ದ ಒಂದು ಮೋಟಾರ್ ಸೈಕಲ್ ಕೆಎ-09-ಎಎಕ್ಸ್-1355 ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾನ್ಯ ಡಿವೈ.ಎಸ್.ಪಿ. ಸಾಹೇಬರವರ ಉಪವಿಭಾಗ ಮಟ್ಟದ ಪತ್ತೆದಳ ಕಾರ್ಯೋನ್ಮುಖರಾಗಿ ಸುಹೇಲ್ ಅಹಮದ್ @ ಸುಹೇಲ್ ಬಿನ್ ರಿಯಾಜ್ ಅಹ್ಮದ್, 19 ವರ್ಷ, ಮುಸ್ಲಿಂ, ವೆಲ್ಡಿಂಗ್ ಕೆಲಸ, ಚಂದಕವಾಡಿ ಗ್ರಾಮ, ಚಾಮರಾಜನಗರ ತಾಲ್ಲೂಕು ಎಂಬುವವನನ್ನು ಚಾಮರಾಜನಗರದ ಶ್ರೀ ಸೂರ್ಯೋದಯ ಕಲ್ಯಾಣ ಮಂಟಪದ ಮುಂಭಾಗ ಅನುಮಾನಾಸ್ಪದವಾಗಿ ಮೋಟಾರ್ ಸೈಕಲ್‍ನಲ್ಲಿ ಬರುತ್ತಿದ್ದ ಆಸಾಮಿಯನ್ನು ಹಿಡಿದು ವಿಚಾರಿಸಲಾಗಿ ಆರೋಪಿಯು ತನ್ನ ಸಹಚರನಾದ ಸದ್ದಾಂ ಹುಸೇನ್ @ ಸದ್ದಾಂ ಎಂಬುವವನ ಜೊತೆ ಸೇರಿ ಮೋಟಾರ್ ಸೈಕಲ್‍ನ್ನು ಕಳ್ಳತನಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.  ಸದರಿ ಮೋಟಾರ್ ಸೈಕಲ್‍ನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 35,000/- ರೂ. ಆಗಿರುತ್ತದೆ.
ಮೂರೂ ಪ್ರಕರಣಗಳÀ ಪತ್ತೆ ಕಾರ್ಯದಲ್ಲಿ ಮಾನ್ಯ ಎಸ್.ಪಿ ಸಾಹೇಬರವರು ಹಾಗೂ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರು, ಚಾಮರಾಜನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಸೂಕ್ತ ಮಾರ್ಗದರ್ಶನದಲಿ, ಚಾಮರಾಜನಗರ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಶ್ರೀ. ಕೆ.  ರಾಜೇಂದ್ರ ರವರ  ನೇತೃತ್ವದಲ್ಲಿ   ಶ್ರೀ ರವಿಕಿರಣ್. ಎಸ್.ಎಸ್. ಪಿ.ಎಸ್.ಐ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ,     ಶ್ರೀ ಪುಟ್ಟಸ್ವಾಮಿ, ಪಿ.ಎಸ್.ಐ ಪೂರ್ವ ಪೊಲೀಸ್ ಠಾಣೆ ಹಾಗೂ ಉಪ-ವಿಭಾಗದ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಹಾಗೂ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಸಿಬ್ಬಂದಿಗಳಾದ ಎ.ಎಸ್.ಐ. ಜಯರಾಂ, ಬಿ.ಮಹದೇವ, ಶಾಂತರಾಜು, ಸೈಯದ್ ಹುಸೇನ್, ರಮೇಶ್ ಕುಮಾರ್, ಬಾಬು, ಜಿ.ಡಿ.ರವಿ, ಕುಮಾರಸ್ವಾಮಿ, ಕಿಶೋರ, ಚಂದ್ರ, ಗಿರೀಶ, ಚಿನ್ನಸ್ವಾಮಿ, ಮಂಜುನಾಥ, ಲಿಂಗರಾಜು, ಜಗದೀಶ, ಎನ್.ಮಹದೇವಸ್ವಾಮಿ, ಸೈಯದ್ ಮಹಮ್ಮದ್ ರಫೀ, ಜಿ.ಮಹದೇವಸ್ವಾಮಿ, ಪ್ರದೀಪ್.ಕೆ.ಎಸ್., ಕುಮಾರ, ಮತ್ತು ಜಗದೀಶ ರವರು ಭಾಗವಹಿಸಿದ್ದು, ಮಾನ್ಯ ಎಸ್.ಪಿ. ಸಾಹೇಬರವರು ಸದರಿ ಪತ್ತೆ ಕಾರ್ಯದ ಬಗ್ಗೆ ಶ್ಲಾಘಿಸಿರುತ್ತಾರೆ.

x

ನ. 26ರಂದು ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ (17-11-2018)


ನ. 26ರಂದು ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ 

ಚಾಮರಾಜನಗರ, ನ. 17 - ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ನವೆಂಬರ್ 26ರಂದು ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನಕದಾಸರ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ತೀರ್ಮಾನಿಸಲಾಯಿತು.
ಜಯಂತಿ ಕಾರ್ಯಕ್ರಮ ಆಯೋಜನೆ ಸಂಬಂಧ ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘಸಂಸ್ಥೆಗಳ ಸಲಹೆಗಳನ್ನು ಆಲಿಸಿದ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರು ವಿವಿಧ ಇಲಾಖೆಗಳನ್ನೊಳಗೊಂಡ ಮೆರವಣಿಗೆ, ಸ್ವಾಗತ, ಅತಿಥ್ಯ ಸೇರಿದಂತೆ ಹಿಂದಿನ ಸಮಿತಿಗಳನ್ನು ಈ ಬಾರಿಯೂ ಸಹ ಮುಂದುವರೆಸಲಾಗಿದೆ. ಸಮುದಾಯದ ಮುಖಂಡರು ಸೇರಿದಂತೆ ಎಲ್ಲರ ಸಲಹೆ ಹಾಗೂ ಸಹಕಾರ ಪಡೆದು ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕನಕದಾಸರ ಕೀರ್ತನೆಗಳು, ಅವರ ವಿಚಾರಗಳ ಕುರಿತು ಉಪನ್ಯಾಸ ನೀಡಲು ಸೂಕ್ತ ಮುಖ್ಯ ಭಾಷಣಕಾರರನ್ನು ಆಯ್ಕೆ ಮಾಡುವ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಲಾಗುವುದು. ಅಂತಿಮವಾಗಿ ಎಲ್ಲರ ಒಪ್ಪಿಗೆ ಅನುಸಾರ ಆಯ್ಕೆ ನಡೆಸಿ ಕಾರ್ಯಕ್ರಮ ನಡೆಸಲಾಗುವುದು. ಕಾರ್ಯಕ್ರಮಕ್ಕೆ ಬೇಕಿರುವ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಅಧಿಕಾರಿಗಳು ಸುಸೂತ್ರವಾಗಿ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಆಹ್ವಾನ ಪತ್ರಿಕೆ, ಮುದ್ರಣ, ವಿತರಣೆಯಂತಹ ಕೆಲಸಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ವೇದಿಕೆ ಸಿದ್ಧತೆಗೆ ಸಹ ಅಗತ್ಯ ಅನುಸಾರ ಕಾರ್ಯೋನ್ಮುಖರಾಗಬೇಕು. ಶಿಷ್ಠಾಚಾರ ಪ್ರಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಧಿಕಾರಿಗಳು ಎಲ್ಲ ಕ್ರಮಗಳಿಗೆ ಮುಂದಾಗಬೇಕೆಂದು ಗಾಯತ್ರಿ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಲರಾಜು, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿ ಗೀತಾ ಪ್ರಸನ್ನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚೆನ್ನಪ್ಪ, ಕನಕ ಸಮಾಜದ ಅಧ್ಯಕ್ಷರಾದ ರಾಜಶೇಖರ್, ಮುಖಂಡರಾದ ಜನ್ನೂರು ಮಹದೇವ್, ಕೆ.ಬಿ. ಮಹದೇವೇಗೌಡ, ನಂಜುಂಡೇಗೌಡ, ಬಸಪ್ಪನಪಾಳ್ಯ ನಟರಾಜು, ಶಿವರಾಮು, ಹೇಮಂತ್ ಕುಮಾರ್, ಚಿನ್ನಸ್ವಾಮಿ, ಲಿಂಗಣ್ಣ, ಸೋಮಣ್ಣ, ಆಲೂರು ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಕೆ.ಎಂ. ನಾಗರಾಜು, ಅಂಬರೀಷ ಕದಂಬ, ಪುರುಷೋತ್ತಮ್, ನಿಜದನಿ ಗೋವಿಂದರಾಜು, ಪರ್ವತರಾಜು, ಜಯಕುಮಾರ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 24111 ಫಲಾನುಭವಿಗಳಿಗೆ ಅನಿಲಭಾಗ್ಯ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ 

ಚಾಮರಾಜನಗರ, ನ. 17- ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಒದಗಿಸುವ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 24111 ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ರತ್ನೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ತಾಲೂಕಿನ ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್, ಸ್ಟೌವ್ ವಿತರಿಸಿ ಅವರು ಮಾತನಾಡಿದರು.
ಬಿಪಿಎಲ್ ಕುಟುಂಬದ ಅಡುಗೆ ಅನಿಲ ಸಂಪರ್ಕ ಹೊಂದಿಲ್ಲದವರಿಗೆ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್, ಒಲೆ, ರೆಗ್ಯುಲೇಟರ್ ನೀಡಲಾಗುತ್ತಿದೆ. ಅನಿಲಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 2704 ರೂ. ವೆಚ್ಚದಲ್ಲಿ ಸೌಲಭ್ಯವನ್ನು ತಲುಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ 15 ಲಕ್ಷ ಕುಟುಂಬಗಳಿಗೆ ಯೋಜನೆ ಸೌಲಭ್ಯ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ 2411 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಫಲಾನುಭವಿಗಳಿಗೆ ಯೋಜನೆ ಸೌಕರ್ಯ ಲಭ್ಯವಾಗಲಿದೆ. ಚಾಮರಾಜನಗರ ತಾಲೂಕಿನ 806 ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಅನಿಲಭಾಗ್ಯ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್, ಸ್ಟೌವ್‍ಗಳನ್ನು ನೀಡಲಾಗುತ್ತಿದೆ ಎಂದರು.
ಚಾಮರಾಜನಗರ ತಾಲೂಕಿನ ಒಟ್ಟು 7 ಅಡುಗೆ ಅನಿಲ ಏಜೆನ್ಸಿಗಳ ಮೂಲಕ ತಾಲೂಕಿನ ಫಲಾನುಭವಿಗಳಿಗೆ ಅನಿಲ ಭಾಗ್ಯ ಯೋಜನೆಯನ್ನು ತಲುಪಿಸಲಾಗುತ್ತಿದೆ. ಹಂತಹಂತವಾಗಿ ಉಳಿದ ಎಲ್ಲ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಹೊಗೆರಹಿತ ಹಾಗೂ ಅರಣ್ಯ ಸಂರಕ್ಷಣೆ ಉದ್ದೇಶದಿಂದ ಅನಿಲಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಕಾಡಂಚಿನ ಹಾಗೂ ಅರಣ್ಯ ವಾಸಿಗಳ ಜನತೆಗೆ ಉಚಿತವಾಗಿ ಈ ಹಿಂದಿನಿಂದಲೂ ಅರಣ್ಯ ಇಲಾಖೆ ಮೂಲಕ ಅಡುಗೆ ಅನಿಲ ಸಿಲಿಂಡರ್ ನೀಡಲಾಗುತ್ತಿದೆ. ಎಲ್ಲ ಬಿಪಿಎಲ್ ಕುಟುಂಬಗಳಿಗೂ ಸೌಲಭ್ಯ ಲಭಿಸಬೇಕೆಂಬ ಸದುದ್ದೇಶದಿಂದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ವ್ಯಾಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಮಾತನಾಡಿ ಪರಿಸರ ಕಾಳಜಿ ಹಾಗೂ ಎಲ್ಲ ಜನರ ನೆರವಿಗಾಗಿ ಜಾರಿಗೆ ತರಲಾಗಿರುವ ಅನಿಲಭಾಗ್ಯ ಯೋಜನೆಯನ್ನು ಜಿಲ್ಲೆಯ ಜನತೆ ಪೂರ್ಣ ಪ್ರಮಾಣದಲ್ಲಿ ಸದುಪಯೋಗ ಮಾಡಿಕೊಳ್ಳಬೇಕೆಂದು ಸಲಹೆ ಮಾಡಿದರು.
ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಆರ್. ರಾಚಪ್ಪ ಯೋಜನೆ ಕುರಿತು ವಿವರ ನೀಡಿದರು. ಇದೇವೇಳೆ ಅಡುಗೆ ಅನಿಲ ವಿತರಕರಿಂದ ಅಡುಗೆ ಅನಿಲ ಸಿಲಿಂಡರ್ ಬಳಕೆ ಹಾಗೂ ಬೆಂಕಿ ಅನಾಹುತಗಳಾಗದಂತೆ ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಸಹ ನಡೆಯಿತು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಸದಸ್ಯರಾದ ಮಹದೇವಶೆಟ್ಟಿ, ಅಡುಗೆ ಅನಿಲ ವಿತರಕ ಏಜೆನ್ಸಿ ಮಾಲೀಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುಜಲ ಯೋಜನೆ ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸಲಹೆ
ಚಾಮರಾಜನಗರ, ನ. 17 - ಒಣಭೂಮಿ ಪ್ರದೇಶ ಹಾಗೂ ಮಳೆಯಾಶ್ರಿತ ಕೃಷಿಗೆ ಸಂಬಂದಿಸಿದಂತೆ ಆಧುನಿಕ ಮತ್ತು ವೈಜ್ಞಾನಿಕ ಮಾರ್ಗಗಳನ್ನು ಅನುಸರಿಸುವ ಸುಜಲ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಇಂದು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ ರೈತರಿಗೆ ಹಮ್ಮಿಕೊಳ್ಳಲಾಗಿದ್ದ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವ ಬ್ಯಾಂಕಿನ ನೆರವಿನೊಂದಿಗೆ ಈ ಹಿಂದೆ ಕರ್ನಾಟಕ ಜಲಾನಯನ ಅಭಿವೃದ್ಧಿ ಯೋಜನೆ ಸುಜಲ-1 ಯೋಜನೆಯನ್ನು ರಾಜ್ಯದ 6 ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿತ್ತು. ಸುಜಲ-3 ಯೋಜನೆಯಡಿ ಚಾಮರಾಜನಗರವೂ ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ 10 ಲಕ್ಷ ಹೆಕ್ಟೇರ್ ಭೂ ಪ್ರದೇಶದಲ್ಲಿ 1931 ಕಿರು ಜಲಾನಯನ ಪ್ರದೇಶಗಳಲ್ಲಿ ವೈಜ್ಞಾನಿಕ ತಂತ್ರಜ್ಞಾನದ ಆಧಾರದ ಮೇಲೆ ಜಲಾನಯನ ಅಭಿವೃದ್ಧಿಗೊಳಿಸಲು ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಒಣ ಭೂಮಿ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನವಾಗುತ್ತಿದೆ. ಹರವೆ ಭಾಗದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಹೆಚ್ಚು ಪರಿಣಾಮಕಾರಿಯಾಗಿ ಜಲಾನಯನ ನಿರ್ವಹಣೆ ಮಹತ್ವ ತೋರಿಸಲು ಹಾಗೂ ಮಳೆಯಾಶ್ರಿತ ಕೃಷಿ ಸಂಬಂಧಿತ ಕಾರ್ಯಕ್ರಮಗಳನ್ನು ಒಗ್ಗೂಡಿಸುವುದರ ಜತೆಗೆ ಆಧುನಿಕ ಮತ್ತು ವೈಜ್ಞಾನಿಕ ವಿಧಾನಗಳನ್ನು ಅನುಸರಿಸುವುದು ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಸಹ ಗ್ರಾಮೀಣ ಭಾಗಗಳ ಚಟುವಟಿಕೆಗಳಿಗೆ ನೆರವಾಗಲಿದೆ. ಅಂತರ್ಜಲ ಅಭಿವೃದ್ಧಿಯಂತಹ ಕಾರ್ಯಕ್ರಮಗಳಿಗೆ ವಿಶೇಷ ಗಮನ ಕೊಡಲಾಗುತ್ತಿದೆ. ಕೃಷಿ ಹೊಂಡ, ಬದು ನಿರ್ಮಾಣ ಇತರೆ ಕೆಲಸ ನಿರ್ವಹಣೆ ಮಾಡಬಹುದಾಗಿದೆ ಎಂದು ಉಸ್ತುವಾರಿ ಸಚಿವರು ವಿವರಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯೋಗೇಶ್ ಅವರು ಮಾತನಾಡಿ ರೈತರು ಕೃಷಿ ಕಟುವಟಿಕೆಗಳ ಜತೆಯಲ್ಲಿಯೇ ಹೈನುಗಾರಿಕೆಯನ್ನು ಸಹ ಕೈಗೊಳ್ಳಬೇಕಿದೆ. ಇದರಿಂದ ಆದಾಯ ವೃದ್ಧಿಗೊಳ್ಳಲಿದೆ. ಜಿಲ್ಲೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಠಾನ ಮಾಡಿದ ಫಲವಾಗಿ ಅಂತರ್ಜಲ ವೃದ್ಧಿಯಾಗಿದೆ. ರೈತಪರ ಕಾರ್ಯಕ್ರಮಗಳು ಮುಂದುವರೆದಿವೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಯೋಜನೆ ಸಂಬಂಧ ಮಾಹಿತಿ ಕಾರ್ಡುಗಳನ್ನು ಬಿಡುಗಡೆ ಮಾಡಿದರು. ಜಂಟಿ ಕೃಷಿ ನಿರ್ದೇಶಕರಾದ ಎಂ. ತಿರುಮಲೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚನ್ನಪ್ಪ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮರಗದಮಣಿ, ಸದಸ್ಯರಾದ ಬಿ.ಕೆ. ಬೊಮ್ಮಯ್ಯ, ಲೇಖಾ, ಕೆರೆಹಳ್ಳಿ ನವೀನ್, ತಾಲೂಕು ಪಂಚಾಯತ್ ಸದಸ್ಯರಾದ ಕುಮಾರನಾಯ್ಕ, ಮಹದೇವಶೆಟ್ಟಿ, ರೇವಣ್ಣ, ಶೋಭ, ನಂದೀಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನ. 19ರಂದು ವಿಶ್ವ ಶೌಚಾಲಯ ದಿನಾಚರಣೆ : ನಗರದಿಂದ ಹರದನಹಳ್ಳಿಯವರೆಗೆ ಸೈಕಲ್ ಜಾಥಾ
ಚಾಮರಾಜನಗರ, ನ. 17 :- ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ವತಿಯಿಂದ ವಿಶ್ವ ಶೌಚಾಲಯ ದಿನಾಚರಣೆಯನ್ನು ನವೆಂಬರ್ 19ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಿಂದ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಸೈಕಲ್ ಜಾಥಾ ಮೂಲಕ ಹರದನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣಕ್ಕೆ ತಲುಪಲಿದ್ದಾರೆ. ಹರದನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ವಿಶ್ವ ಶೌಚಾಲಯ ದಿನ ಆಚರಣೆಯ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಕೊಳ್ಳೇಗಾಲ : ಪಿಟ್ ಪದ್ದತಿಯಲ್ಲಿ ತ್ಯಾಜ್ಯ ನೀರು ವಿಲೇವಾರಿಗೆ ಮನವಿ
ಚಾಮರಾಜನಗರ, ನ. 17  ಕೊಳ್ಳೇಗಾಲ ಪಟ್ಟಣದಲ್ಲಿ ಈ ಹಿಂದೆ ಅನುಸರಿಸುತ್ತಿದ್ದ ಪಿಟ್ ಪದ್ಧತಿಯಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆ ನಗರಸಭೆ ತಿಳಿಸಿದೆ.
ಕೊಳ್ಳೇಗಾಲ ಪಟ್ಟಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2ನೇ ಹಂತದ ಒಳಚರಂಡಿ ಕಾಮಗಾರಿ ಯೋಜನೆ ಇನ್ನು ಅನುಷ್ಠಾನ ಹಂತದಲ್ಲಿದ್ದು ಅಪೂರ್ಣಗೊಂಡಿರುತ್ತದೆ. ಸಂಸ್ಕರಣಾ ಘಟಕ, ವೆಟ್ ವೆಲ್ ನಿರ್ಮಾಣ ಮತ್ತು ಕೆಲವು ಸ್ಥಳಗಳಲ್ಲಿ ಒಳಚರಂಡಿ ಮಾರ್ಗಗಳನ್ನು ಅಳವಡಿಸುವ ಕಾಮಗಾರಿ ಇನ್ನು ಪ್ರಾರಂಭಿಸಿಲ್ಲ. ಪಟ್ಟಣದಲ್ಲಿ ಭಾಗಶ: ಅಳವಡಿಸಿರುವ ಒಳಚರಂಡಿ ಮಾರ್ಗಕ್ಕೆ ಯಾವುದೇ ಪೂರ್ವ ಅನುಮತಿ ಇಲ್ಲದೆ ಮನೆ ಸಂಪರ್ಕಗಳನ್ನು ನೀಡಿರುವುದರಿಂದ ಕೊಳಚೆ ನೀರು ಅಲ್ಲಲ್ಲಿ ಉಕ್ಕಿ ಹರಿಯುತ್ತಿದ್ದು ಅನೈರ್ಮಲ್ಯ ವಾತಾವರಣ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಗರಿಕರು ಒಳಚರಂಡಿ ಮಾರ್ಗಗಳಿಗೆ ಇರುವ ಮನೆ ಸಂಪರ್ಕಗಳನ್ನು ಕೂಡಲೇ ಕಡಿತಗೊಳಿಸಿ ಈ ಹಿಂದೆ ಅನುಸರಿಸುತ್ತಿದ್ದ ಪಿಟ್ ಪದ್ಧತಿಯಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡಬೇಕು. 2ನೇ ಹಂತದ ಕಾಮಗಾರಿಯು ಇನ್ನು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದ್ದು ನಂತರ ತೊಂದರೆ ಬಾರದಂತೆ ನಿಯಮಾನುಸಾರ ಒಳಚರಂಡಿ ಸಂಪರ್ಕ ಒದಗಿಸಿಕೊಡಲಾಗುತ್ತದೆ.
 ಸಾರ್ವಜನಿಕ ಹಿತದೃಷ್ಠಿಯಿಂದ ನಾಗರಿಕರು ನಗರಸಭೆ ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರÉ.
ನ. 20ರಂದು ನಗರದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟನೆ
ಚಾಮರಾಜನಗರ, ನ. 17 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಯುಕ್ತ ಯುವಜನ ಸಂಘದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮವು ನವೆಂಬರ್ 20ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮರುಗದಮಣಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದÉ.
ಕೆ.ಪಿ.ಎಸ್.ಸಿ ನೇಮಕಾತಿ: ಸಿ.ಎಂ ಅವರೊಂದಿಗೆ ಚರ್ಚೆ-ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ನ. 17- ಕರ್ನಾಟಕ ಲೋಕಸೇವಾ ಆಯೋಗದ ನೇರ ನೇಮಕಾತಿ ಸಂಬಂಧ ತಳೆದಿರುವ ನಿಲುವಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಹಾಗೂ ಕ್ಯಾಬಿನೇಟ್‍ನಲ್ಲಿ ವಿಷಯ ಪ್ರಸ್ತಾಪಿಸಿ ಸಂಬಂಧಪಟ್ಟ ವರ್ಗಗಳಿಗೆ ಅನ್ಯಾಯವಾಗದಂತೆ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟಗಂಗಶೆಟ್ಟಿ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶಸಂಖ್ಯೆ: ಸಿಆಸುಇ:08:ಸೆಹಿಮ:95 ಬೆಂಗಳೂರು ದಿನಾಂಕ: 20.06.1995 ರಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸುವಾಗ ಯಾವ ರೀತಿ ಆಯ್ಕೆ ವಿಧಾನವನ್ನು ಅನುಸರಿಸಬೇಕೆಂಬುದನ್ನು ಸ್ಪಷ್ಟಪಡಿಸಲಾಗಿರುತ್ತದೆ. ಇದನ್ನು  ಪರಿಶಿಷ್ಟ ಜಾತಿ, ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುತ್ತಾ ಕಳೆದ 23 ವರ್ಷಗಳಿಂದಲೂ ಅನುಷ್ಠಾನಗೊಳಿಸಲಾಗುತ್ತಿದೆ.
ಆದರೆ ಸರ್ಕಾರದ ಪತ್ರಸಂಖ್ಯೆ: ಸಿಆಸುಇ:66:ಸೇಲೋಸೇ:2018. ದಿನಾಂಕ: 03.11.2018ರಲ್ಲಿ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿಸಂಖ್ಯೆ 27674/2012ರಲ್ಲಿ ಹೊರಡಿಸಿರುವ ತೀರ್ಪಿನಲ್ಲಿ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗೆ ಸೂಚಿಸಲಾಗಿದೆ.
     ಈ ರಿಟ್ ಅರ್ಜಿಯಲ್ಲಿ ಅನುಸರಿಸಲು ಸೂಚಿಸಿರುವ ಮಾರ್ಗಸೂಚಿಯು ಕೇವಲ ಆ ರಿಟ್ ಅರ್ಜಿಯಲ್ಲಿ ಇರುವಂತಹ ಪ್ರಕರಣಕ್ಕೆ ಮಾತ್ರವೇ ಸಂಬಂಧಿಸಿದ್ದಾಗಿರುತ್ತದೆ. ಮೇಲಾಗಿ ಆ ತೀರ್ಪಿನ ವಿರುದ್ಧ ಸರ್ಕಾರವು ಮರುಪರಿಶೀಲನಾ ಅರ್ಜಿಯನ್ನು ದಾಖಲಿಸಿರುತ್ತದೆ. ಆದರೂ ಕೂಡ ಈ ರೀತಿ ನಿರ್ದೇಶನ ನೀಡಿರುವುದು ಪರಿಶಿಷ್ಟ ಜಾತಿ, ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗುವುದರಿಂದ ಅದನ್ನು ನಾನು ವಿರೋಧಿಸುತ್ತೇನೆ.
ಈ ತೀರ್ಪಿನಲ್ಲಿ ನೀಡಿರುವ ಮಾರ್ಗಸೂಚಿಯನ್ನು ಅನುಸರಿಸುವುದರಿಂದ ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳು ಸಾಮಾನ್ಯ ವರ್ಗದ ಕೋಟಾದ ಅಡಿಯಲ್ಲಿ ಹುದ್ದೆಗಳನ್ನು ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ. ಇದು ಸಹಜ ಸಾಮಾಜಿಕ ನ್ಯಾಯಕ್ಕೆ ವಿರೋಧವಾದ ಮಾರ್ಗದರ್ಶನವಾಗುತ್ತದೆ.
       ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಜೊತೆ ಹಾಗೂ ಕ್ಯಾಬಿನೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿ ಈ ವರ್ಗಗಳಿಗೆ ಅನ್ಯಾಯವಾಗದಂತೆ ಸರಿಪಡಿಸಲುಕ್ರಮ ಕೈಗೊಳ್ಳುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟಗಂಗಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 20, 21ರಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ನ. 17:- ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ. ಮಹೇಶ್ ಅವರು ನವೆಂಬರ್ 20 ಮತ್ತು 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನ. 20ರಂದು ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರೊಂದಿಗೆ ಸಭೆ ನಡೆಸುವರು. ನಂತರ 4.30 ಗಂಟೆಗೆ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಳ ಪರಿಶೀಲನೆ ಮಾಡುವರು. ಸಂಜೆ 5.30 ಗಂಟೆಗೆ ಚಿಕ್ಕಹೊಳೆ ಹಾಗೂ ಸುವರ್ಣಾವತಿ ಜಲಾಶಯಗಳಿಗೆ ಭೇಟಿ ಬಳಿಕ ವಾಸ್ತವ್ಯ ಮಾಡುವರು.
ನ. 21ರಂದು ಬೆಳಿಗ್ಗೆ 9 ಗಂಟೆಗೆ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡುವರು. 11.30 ಗಂಟೆಗೆ ಸಂತೇಮರಹಳ್ಳಿಯಲ್ಲಿ ರೇಷ್ಮೆ ಇಲಾಖೆಯ ಸ್ಥಳ ಪರಿಶೀಲನೆ ನಡೆಸುವರು. ಮಧ್ಯಾಹ್ನ 12.30 ಗಂಟೆಗೆ ಕುದೇರಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡುವರು. ಸಂಜೆ 4 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



x

Friday, 16 November 2018

ಉದ್ಯೋಗ ಖಾತರಿ ಯೋಜನೆ ಸದುಪಯೋಗಕ್ಕೆ ಜಿ.ಪಂ ಸಿ.ಇ.ಓ ಸಲಹೆ & ಪ್ರವಾಸಿ ಟ್ಯಾಕ್ಸಿ ಸೌಲಭ್ಯಕ್ಕೆ ಪ.ಜಾ., ಪ.ಪಂ, ಹಿಂದುಳಿದ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ (16-11-2018)

ಉದ್ಯೋಗ ಖಾತರಿ ಯೋಜನೆ ಸದುಪಯೋಗಕ್ಕೆ ಜಿ.ಪಂ  ಸಿ.ಇ.ಓ ಸಲಹೆ 

ಚಾಮರಾಜನಗರ, ನ. 16 :- ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಸಲಹೆ ಮಾಡಿದರು. 
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಕುಟುಂಬಗಳು ಉದ್ಯೋಗಕ್ಕಾಗಿ ಬೇರೆಕಡೆ ವಲಸೆ ಹೋಗುವುದನ್ನು ತಪ್ಪಿಸಿ ಸ್ಥಳಿಯವಾಗಿ ಉದ್ಯೋಗ ಅವಕಾಶ ಒದಗಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆ ಜಾರಿಗೆ ತರಲಾಗಿದೆ.  ಕೆಲಸ ನಿರ್ವಹಿಸಿದ ಪುರುಷ ಮಹಿಳೆಯರಿಗೆ ಸರಿಸಮಾನವಾಗಿ ದಿನವೊಂದಕ್ಕೆ 249 ರೂ ಗಳನ್ನು ಪಾವತಿ ಮಾಡಲಾಗುತ್ತದೆ. ಈ ಯೋಜನೆ ಉಪಯುಕ್ತವಾಗಿದ್ದು ಗ್ರಾಮೀಣ ಕುಟುಂಬಗಳು ಪ್ರಯೋಜನ ಪಡೆಯಲು ಮುಂದಾಗಬೇಕೆಂದರು. 
ಯೋಜನೆಯಡಿ ವೈಯಕ್ತಿಕ ಕಾಮಗಾರಿ ನಿರ್ವಹಿಸಲು ಸಹ ಅನುಕೂಲ ಕಲ್ಪಿಸಲಾಗಿದೆ. ಬದು ನಿರ್ಮಾಣ. ಕೃಷಿ ಹೊಂಡ, ದನದ ಕೊಟ್ಟಿಗೆ, ಕುರಿ- ಮೇಕೆ. ಕೋಳಿಶೆಡ್,ಎರೆಹುಳು ಗೊಬ್ಬರ ತೊಟ್ಟಿ ಸೇರಿದಂತೆ ಹಲವಾರು ಕಾಮಗಾರಿ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ತೋಟಗಾರಿಕೆ ಅಭಿವೃದ್ದಿಗೂ ಯೋಜನೆಯಡಿ ಸಾಕಷ್ಟು ಅವಕಾಶಗಳಿವೆ. ತೆಂಗು, ಬಾಳೆ. ಅಡಿಕೆ. ಪಪ್ಪಾಯ, ನುಗ್ಗೆ, ನಿಂಬೆ, ಸೀಬೆ, ದಾಳಿಂಬೆ, ಮಾವು, ಇತರೆ ಆದಾಯ ತರುವ ಬೆಳೆಯನ್ನು ತಮ್ಮ ತಮ್ಮ ಜಮೀನಿನಲ್ಲಿಯೇ ಬೆಳೆಯಲು ಅಗತ್ಯವಿರುವ ನೆರವು ನೀಡಲಾಗುತ್ತದೆ ಅಲ್ಲದೆ ರೇಷ್ಮೆ ಬೆಳೆಗೂ ಸಹ ಅವಶ್ಯವಿರುವ ಸೌಲಭ್ಯಗಳನ್ನು ಯೋಜನೆಯಡಿ ಒದಗಿಸಲಾಗುತ್ತದೆ ಎಂದರು.
ಅರಣ್ಯ ಇಲಾಖೆಯೂ ಕೂಡ ರೈತರ ಜಮೀನುಗಳಲ್ಲಿ ಹೆಬ್ಬೇವು. ಸಿಲ್ವರ್.ಹೊಂಗೆ. ಹುಣಸೆ ಯಂತಹ ಆದಾಯ ತರುವ ಮರಗಳನ್ನು ಬೆಳೆಸಲು ಅವಕಾಶ ಕಲ್ಪಿಸಿದೆ. ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ವೇಳೆ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ  90 ಮಾನವದಿನಗಳ ಉದ್ಯೋಗ ಪಡೆಯಲು ಉದ್ಯೋಗ ಖಾತರಿ ಯೋಜನೆಯಡಿ  ಅವಕಾಶ ಮಾಡಿಕೊಡಲಾಗಿದೆ. ಉದ್ಯೋಗ ಖಾತರಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಆಯಾ ಗ್ರಾಮಪಂಚಾಯತಿಗಳಲ್ಲಿ ನೀಡಲು ಸೂಚಿಸಲಾಗಿದೆ ಎಂದು ಹರೀಶ್‍ಕುಮಾರ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ. ಪದ್ಮಶೇಖರ್‍ಪಾಂಡೆ. ಗುಂಡ್ಲುಪೇಟೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ, ನರೇಗಾ ಜಿಲ್ಲಾ ಸಂಯೋಜಕರಾದ ಮಲ್ಲಿಕಾರ್ಜುನ್, ಎಸ್. ನವೀನ್‍ಕುಮಾರ್. ಎನ್.ಆರ್.ಎಲ್.ಎಂ ವ್ಯವಸ್ಥಾಪಕರಾದ ದೀಪಕ್. ಗೋವಿಂದರಾಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

  
  
ಜಿಲ್ಲೆಯ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ನ. 17 - ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 19 ರಿಂದ 24ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ನವೆಂಬರ್ 19ರಂದು ಚಾಮರಾಜನಗರ, 20ರಂದು ಯಳಂದೂರು, 22ರಂದು ಕೊಳ್ಳೇಗಾಲ, 23ರಂದು ಹನೂರು ಹಾಗೂ 24ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನ. 27ರಿಂದ ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ
ಚಾಮರಾಜನಗರ, ನ. 16 :- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಸಂಬಂಧ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ತರಬೇತಿಯು ನವೆಂಬರ್ 27 ರಿಂದ ಡಿಸೆಂಬರ್ 13ರವರೆಗೆ ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ಕೊಠಡಿ ಸಂಖ್ಯೆ 210) ಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನವೆಂಬರ್ 27ರೊಳಗೆ ಹೆಸರು ನೊಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ ಅಥವಾ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ 
ಚಾಮರಾಜನಗರ, ನ. 16 - ಜಿಲ್ಲೆಯಲ್ಲಿರುವ ಲಂಬÁಣಿ, ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರ ಹಟ್ಟಿ, ಮಜರೆ ಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್ ಕಾಲೋನಿ ಮತ್ತು ಇತರೆ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗÉೂಳ್ಳಲಾಗುತ್ತಿದೆ.
ಸರ್ಕಾರಿ ಜಮೀನಿನಲ್ಲಿ ನೆಲೆಗೊಂಡಿರುವ ದಾಖಲೆ ರಹಿತ ಜನವಸತಿಗಳಲ್ಲಿನ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಕ್ಕೆ ತಿದ್ದುಪಡಿ ತಂದು 94-ಡಿ ಸೇರ್ಪಡೆಗೊಳಿಸಿ ನಿಯಮಗಳನ್ನು ರೂಪಿಸಲಾಗಿದೆ. ಖಾಸಗಿ ಜಮೀನುಗಳಲ್ಲಿ ನೆಲೆಗೊಂಡಿರುವ ದಾಖಲೆರಹಿತ ಜನವಸತಿಗಳಲ್ಲಿನ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಸಲುವಾಗಿ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ಕಲಂ 38ಕ್ಕೆ ತಿದ್ದುಪಡಿ ತಂದು 38-ಎ ಸೇರ್ಪಡೆಗೊಳಿಸಿ ನಿಯಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.




ಪ್ರವಾಸಿ ಟ್ಯಾಕ್ಸಿ ಸೌಲಭ್ಯಕ್ಕೆ ಪ.ಜಾ., ಪ.ಪಂ, ಹಿಂದುಳಿದ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನ 
ಚಾಮರಾಜನಗರ, ನ. 16- ಪ್ರವಾಸೋದ್ಯಮ ಇಲಾಖೆಯು 3 ಲಕ್ಷ ರೂ. ಸಹಾಯಧನದೊಂದಿಗೆ ನೀಡುವ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಥವಾ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಒದಗಿಸಲಾಗುತ್ತದೆ. ಹಿಂದುಳಿದ ಅಥವಾ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೂ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ನೀಡಲಾಗುತ್ತದೆ. 
ಅರ್ಜಿದಾರರು 20 ರಿಂದ 40ರ ವಯೋಮಿತಿಯೊಳಗಿರಬೇಕು. ಕನಿಷ್ಟ 10ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಲಘು ವಾಹನ ಚಾಲನಾ (ಎಲ್ ಎಂವಿ) ಪರವಾನಗಿ ಪಡೆದು ಒಂದು ವರ್ಷವಾಗಿರಬೇಕು. ಬ್ಯಾಡ್ಜ್ ಹೊಂದಿರಬೇಕು. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಯಲ್ಲಿ ನೌಕರಿಯಲ್ಲಿರಬಾರದು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. 
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನವೆಂಬರ್ 19 ರಿಂದ ಡಿಸೆಂಬರ್ 18ರವರೆಗೆ ವಿತರಿಸಲಾಗುತ್ತದೆ. 
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ನವೆಂಬರ್ 18 ಕಡೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಭಾವಚಿತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮೊಬೈಲ್, ದೂರವಾಣಿ ಸಂಖ್ಯೆ, ಜಾತಿ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಯಾವುದೇ ನಿಗಮದಿಂದ ಸೌಲಭ್ಯ ಪಡೆಯದೆ ಇರುವ ಕುರಿತು ದೃಢೀಕರಣ ಪತ್ರ, ಅಂಕಪಟ್ಟಿ, ಚಾಲನಾ ಪರವಾನಗಿ, ಬ್ಯಾಡ್ಜ್, ಡಿಎಲ್ ಎಕ್ಸ್ಟ್ರಾಕ್ಟ್ ಸೇರಿದಂತೆ ಇತರೆ ಸೂಚಿಸಿರುವ ದೃಢೀಕರಣ ಪತ್ರಗಳನ್ನು ಲಗತ್ತಿಸಬೇಕು. ಸಂಪೂರ್ಣ ವಿವರಗಳಿಗೆ ನಗರದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-226512 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ. 
ನ. 17ರಂದು ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ 
ಚಾಮರಾಜನಗರ, ನ. 16 - ಜಿಲ್ಲಾಡಳಿತದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳು, ಕನ್ನಡಪರ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು, ಕನಕ ಸಮಾಜದ ಮುಖಂಡರು ಸೇರಿದಂತೆ ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಸಂಬಂಧ ಸಲಹೆ ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
ನ. 17ರಂದು ರೈತರಿಗೆ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ
ಚಾಮರಾಜನಗರ, ನ. 16 - ಜಲಾನಯನ ಅಭಿವೃದ್ಧಿ ಇಲಾಖೆಯು ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ ಜಿಲ್ಲೆಯ ಜಲಾನಯದ ಕಾಮಗಾರಿಗಳ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ, ಭೂ ರಹಿತರ ಅಭಿವೃದ್ಧಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲು ರೈತರಿಗೆ ಒಂದು ದಿನದ ಜಿಲ್ಲಾ ಮಟ್ಟದ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸÀತ್ಯಮಂಗಲ ರಸ್ತೆಯಲ್ಲಿರುವ ಶ್ರೀ ಶಿವಕುಮಾರಸ್ವಾಮಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.




ನ. 17ರಂದು ಸಿದ್ದಯ್ಯನಪುರ ಕಾಲೋನಿಯಲ್ಲಿ ದಲಿತ ಸಮುದಾಯದೊಂದಿಗೆ ಜಿ.ಪಂ. ಸಿಇಓ ನೇತೃತ್ವದಲ್ಲಿ ಸಮಾಲೋಚನ ಸಭೆ 
ಚಾಮರಾಜನಗರ, ನ. 16 – ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಸಿದ್ದಯ್ಯನಪುರ ಕಾಲೋನಿಯಲ್ಲಿ ದಲಿತ ಸಮುದಾಯದ ಜನತೆಯೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮಾಲೋಚನ ಸಭೆಯು ನವೆಂಬರ್ 17ರಂದು ಸಂಜೆ 4 ರಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




  
























x

Thursday, 15 November 2018

ನ. 17ರಂದು ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ (15-11-2018)


ಎಲ್ಲ ಹಂತಗಳಲ್ಲಿ ಕನ್ನಡ ಭಾಷೆ ಸಂಪೂರ್ಣ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ





ಚಾಮರಾಜನಗರ, ನ. 14 - ಜಿಲ್ಲೆಯಲ್ಲಿ ಎಲ್ಲ ಹಂತಗಳಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು 



ಸರ್ಕಾರ ಹೊರಡಿಸಿರುವ ಸುತ್ತೋಲೆ ಅನ್ವಯ ಎಲ್ಲ ಇಲಾಖೆಗಳು ಕಾರ್ಯ 




ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕನ್ನಡ ಅನುಷ್ಠಾನ ಪ್ರಗತಿ ಸಂಬಂಧ ನಡೆದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.





ಆಡಳಿತದಲ್ಲಿ ಸಂಪೂರ್ಣವಾಗಿ ಕನ್ನಡ ಅನುಷ್ಠಾನವಾಗಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ 



ಸರ್ಕಾರ ಕನ್ನಡ ಅನುಷ್ಠಾನ ಸಂಬಂಧ ಹೊರಡಿಸಿರುವ ಸುತ್ತೋಲೆ, ಆದೇಶ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲನೆ ಮಾಡಬೇಕು. ಇಲಾಖೆ ಅಧಿಕಾರಿಗಳು ಕನ್ನಡ ಅನುಷ್ಠಾನ ಜಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.





ಆಡಳಿತಕ್ಕೆ ಸಂಬಂಧಿಸಿದ ಪತ್ರ ವ್ಯವಹಾರ, ಕಡತಗಳ ನಿರ್ವಹಣೆ, ಸುತ್ತೋಲೆ, ಆದೇಶ, ಸೂಚನಾ 





ಪತ್ರಗಳು, ನಡವಳಿ ಎಲ್ಲವೂ ಕಡ್ಡಾಯವಾಗಿ ಕನ್ನಡದಲ್ಲೇ ಹೊರಡಿಸಬೇಕು. ಮೊಹರು, ಲೆಕ್ಕಪತ್ರ, ಕಾಗದದ ತಲೆಬರಹ, ವಾರ್ಷಿಕ ವರದಿ, ಆಡಳಿತ ವರದಿ ಸೇರಿದಂತೆ ಎಲ್ಲವೂ ಕನ್ನಡದಲ್ಲಿಯೇ ಇರಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ನಿರ್ದೇಶನ ನೀಡಿದರು.  








ಕನ್ನಡ ಸಂಪೂರ್ಣವಾಗಿ ಅನುಷ್ಠಾನ ಮಾಡುವ ಸಂಬಂಧ ಕೈಗೊಂಡಿರುವ ಕ್ರಮಗಳ ವಿವರವನ್ನು ಅಗತ್ಯ ದಾಖಲೆಗಳೊಂದಿಗೆ ಇಲಾಖೆಗಳು ಮಾಹಿತಿ ಒದಗಿಸಬೇಕು. ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆ, ಕಾರ್ಖಾನೆ ಉದ್ದಿಮೆಗಳಲ್ಲಿಯೂ ನೇಮಕಾತಿ ಮಾಡಿಕೊಳ್ಳುವಾಗ ಡಾ. ಸರೋಜಿನಿ ಮಹಿಷಿ ವರದಿ ಪ್ರಕಾರ ಕನ್ನಡಿಗರಿಗೆ ಮೀಸಲಾತಿ ನೀಡಲಾಗಿದೆಯೇ ಎಂಬ ಬಗ್ಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಮಾಹಿತಿ ಸಂಗ್ರಹಿಸಿ ವರದಿ ನೀಡಬೇಕು ಎಂದರು.








ಇದೇ ವೇಳೆ ಮಾತನಾಡಿದ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ವಿನಯ್, ಅಬ್ರಹಾಂ ಡಿಸಿಲ್ವ ಅವರು 


ಕರಿಕಲ್ಲು ಉದ್ಯಮದಲ್ಲಿ ಹೊರರಾಜ್ಯದ ಕಾರ್ಮಿಕರೇ ಹೆಚ್ಚು ಉದ್ಯೋಗ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಯಬೇಕಿದೆ ಎಂಬ ಸಲಹೆ ನೀಡಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರತಿಕ್ರಿಯಿಸಿ ಈ ಸಂಬಂಧ ಕೈಗಾರಿಕೆ, ವಾಣಿಜ್ಯ ಇಲಾಖೆ ಮಾಹಿತಿ ಪಡೆಯಲು ಸೂಚನೆ ನೀಡಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಮುಂಗಟ್ಟುಗಳು, ವಾಣಿಜ್ಯ 


ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡವನ್ನೇ ಪ್ರಧಾನವಾಗಿ ಬಳಸಿರಬೇಕು. ಕನ್ನಡ ಪ್ರಧಾನ ಬಳಕೆಗೆ ಅಂಗಡಿಗಳಿಗೆ ಪರವಾನಗಿ ನೀಡುವ ಹಂತದಲ್ಲೇ ಕಟ್ಟುನಿಟ್ಟಾಗಿ ಸೂಚಿಸಬೇಕು. ಅಧಿಕಾರಿಗಳು 




ವ್ಯಾಪಕವಾಗಿ ಭೇಟಿ ನೀಡಿ ಸೂಚನೆ ಪಾಲಿಸಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ 

ಅವರು ಕಟ್ಟುನಿಟ್ಟಾಗಿ ತಿಳಿಸಿದರು.

ಸಮಿತಿಯ ಮತ್ತೋರ್ವ ಸದಸ್ಯರಾದ ವೆಂಕಟರಾಜು ಅವರು ಮಾತನಾಡಿ ಇಲಾಖೆಗಳಲ್ಲಿ 

ತಳಹಂತದಲ್ಲಿಯೇ ಎಲ್ಲ ನಮೂನೆಗಳನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ ಸಲ್ಲಿಸಲು ಅವಕಾಶವಿದೆ. 

ಬ್ಯಾಂಕುಗಳಲ್ಲಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಬೇಕಿದೆ. ರೈತರು, ಗ್ರಾಮೀಣರು ಇದರಿಂದ ಸುಲಭವಾಗಿ 

ವ್ಯವಹರಿಸಲು ಅನುಕೂಲವಾಗುತ್ತದೆ ಎಂದರು. 


ಮತ್ತೋರ್ವ ಸದಸ್ಯರಾದ ಮಹೇಶ್ ಹರವೆ ಅವರು ಗಡಿಭಾಗಗಳ ಶಾಲೆಗಳಲ್ಲಿ ಕನ್ನಡ ಅನುಷ್ಠಾನ 

ಸಮರ್ಪಕವಾಗಿ ಆಗಬೇಕಿದೆ ಎಂದರು.


ಸಮಿತಿಯ ಸದಸ್ಯರಾದ ಮಹದೇವಮ್ಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ 

ಎಚ್. ಚನ್ನಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪದ್ಮಾ ಪಾಂಡೆ, ಸಾರ್ವಜನಿಕ ಶಿಕ್ಷಣ 

ಇಲಾಖೆ ಉಪನಿರ್ದೇಶಕರಾದ ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು 

ಸಭೆಯಲ್ಲಿ ಹಾಜರಿದ್ದರು.



ನ. 17ರಂದು ಸಿದ್ದಯ್ಯನಪುರ ಕಾಲೋನಿಯಲ್ಲಿ ದಲಿತ ಸಮುದಾಯದೊಂದಿಗೆ ಜಿ.ಪಂ. ಸಿಇಓ ನೇತೃತ್ವದಲ್ಲಿ 

ಸಮಾಲೋಚನ ಸಭೆ 




ಚಾಮರಾಜನಗರ, ನ. 14 – ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಸಿದ್ದಯ್ಯನಪುರ 

ಕಾಲೋನಿಯಲ್ಲಿ ದಲಿತ ಸಮುದಾಯದ ಜನತೆಯೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ 

ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮಾಲೋಚನ 

ಸಭೆಯು ನವೆಂಬರ್ 17ರಂದು ಸಂಜೆ 4 ರಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ 

ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನ. 17ರಂದು ರೈತರಿಗೆ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ




ಚಾಮರಾಜನಗರ, ನ. 14 - ಜಲಾನಯನ ಅಭಿವೃದ್ಧಿ ಇಲಾಖೆಯು ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ 

ಜಿಲ್ಲೆಯ ಜಲಾನಯದ ಕಾಮಗಾರಿಗಳ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ, ಭೂ ರಹಿತರ ಅಭಿವೃದ್ಧಿ 

ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲು ರೈತರಿಗೆ ಒಂದು ದಿನದ ಜಿಲ್ಲಾ ಮಟ್ಟದ ಭೂ ಸಂಪನ್ಮೂಲ 



ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸÀತ್ಯಮಂಗಲ 

ರಸ್ತೆಯಲ್ಲಿರುವ ಶ್ರೀ ಶಿವಕುಮಾರಸ್ವಾಮಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಪ್ರಕಟಣೆ 


ತಿಳಿಸಿದೆ.


ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ



ಚಾಮರಾಜನಗರ, ನ. 14 ತೋಟಗಾರಿಕೆ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸುರಕ್ಷಾ 

ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2018-19ನೇ ಸಾಲಿನ ಹಿಂಗಾರು ಹಂಗಾಮಿಗೆ 

ಅನುಷ್ಠಾನ ಮಾಡಲಾಗುತ್ತಿದೆ.


ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿಗೆ ಟೊಮೇಟೊ ಬೆಳೆ ಹಾಗೂ ಹರವೆ ಹೋಬಳಿಗೆ 

ಈರುಳ್ಳಿ ಬೆಳೆಯನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ.


ಗುಂಡ್ಲುಪೇಟೆ ತಾಲೂಕಿನ ಕಸಬಾ, ಬೇಗೂರು, ಹಂಗಳ ಮತ್ತು ತೆರಕಣಾಂಬಿ ಹೋಬಳಿಗಳಲ್ಲಿ ನೀರಾವರಿ 

ಆಶ್ರಯದಲ್ಲಿ ಬೆಳೆದ ಈರುಳ್ಳಿ ಮತ್ತು ಟೊಮ್ಯಾಟೋ ಬೆಳೆಗಳನ್ನು ವಿಮೆಗೆ ಒಳಪಡಿಸಲÁಗಿದೆ.


ಟೊಮ್ಯಾಟೋ ಬೆಳೆಗೆ ಇಂಡೆಮ್ನಿಟಿ ಮಟ್ಟ ಶೇ. 90ರಷ್ಟು ನಿಗದಿ ಮಾಡಿದ್ದು ಪ್ರತಿ ಹೆಕ್ಟೇರ್‍ಗೆ ವಿಮೆ ಮೊತ್ತ 

118000 ರೂ. ಇದ್ದು ರೈತರು ಶೇ.5ರಂತೆ ಪ್ರತಿ ಎಕರೆಗೆ 2388 ರೂ. ವಿಮಾ ಮೊತ್ತ ಪಾವತಿಸಬೇಕಾಗಿದೆ.


ಈರುಳ್ಳಿ ಬೆಳೆಗೆ ಇಂಡೆಮ್ನಿಟಿ ಮಟ್ಟ ಶೇ. 90ರಷ್ಟು ನಿಗದಿಮಾಡಿದ್ದು ಪ್ರತಿ ಹೆಕ್ಟೇರ್‍ಗೆ ವಿಮೆ ಮೊತ್ತ 75 ಸಾವಿರ ರೂ. ಇದ್ದು ರೈತರು ಶೇ.5ರಂತೆ ಪ್ರತಿ ಎಕರೆಗೆ 1518 ರೂ. ವಿಮಾ ಮೊತ್ತ ಪಾವತಿಸಬೇಕಾಗಿದೆ.

ರೈತರು ಬೆಳೆ ವಿಮೆ ಕಂತು ಪಾವತಿಸಲು ನವೆಂಬರ್ 30 ಕಡೆಯ ದಿನವಾಗಿದ್ದು ಈ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ 




ನ. 16ರಂದು ಬಾಲನ್ಯಾಯ ಕಾಯಿದೆ ಕುರಿತ ಕಾನೂನು ಸಾಕ್ಷರತಾ ಕಾರ್ಯಕ್ರಮ

ಚಾಮರಾಜನಗರ, ನ. 15 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲನ್ಯಾಯ ಕಾಯಿದೆ 2015ರ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರÀದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಬಸವರಾಜು ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಜಯಶೀಲ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲನ್ಯಾಯ ಮಂಡಳಿ ಸದಸ್ಯರಾದ ಟಿ.ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಎಂ. ಮಹೇಶ್ ಹಾಗೂ ಪ್ಯಾನಲ್ ವಕೀಲರಾದ ಎ.ಎಸ್. ಮಂಜುನಾಥಸ್ವಾಮಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನ. 23ರಂದು ನಗರದಲ್ಲಿ ಉದ್ಯೋಗ ಮೇಳ
ಚಾಮರಾಜನಗರ, ನ. 15 - ಜನತಾ ದರ್ಶನದಲ್ಲಿ ಅರ್ಜಿ ನೀಡಿರುವ ಅಭ್ಯರ್ಥಿಗಳು ಹಾಗೂ ಜಿಲ್ಲೆಯ ಇತರೆ ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ನವೆಂಬರ್ 23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರÀುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಮೈಸೂರಿನ ಖಾಸಗಿ ಕಂಪನಿಗಳಾದ ಐಟಿಸಿ ಪ್ರೈ. ಲಿ., ಹಿಂದೂಜಾ ಗ್ಲೋಬಲ್ ಸಲ್ಯೂಷನ್, ಲೇಬರ್ ನೆಟ್ ಪ್ರೈ. ಲಿ., ನಡ್ಜ್ ಫೌಂಡೇಷನ್, ಯುರೇಕಾ ಫೋಬ್ರ್ಸ್, ವಿಜಿಬಿ ಎಂಟರ್‍ಪ್ರೈಸಸ್ ಹಾಗೂ ಇತರೆ ಕಂಪನಿಗಳು ಭಾಗವಹಿಸಲಿವೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಮೆಕ್ಯಾನಿಕಲ್ ಇ ಅಂಡ್ ಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯುಳ್ಳ 18 ರಿಂದ 35ರ ವಯೋಮಿತಿ ಒಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ ಅಥವಾ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸೌಲಭ್ಯ : ಅರ್ಜಿ ಆಹ್ವಾನ 
ಚಾಮರಾಜನಗರ, ನ. 15:– ತೋಟಗಾರಿಕೆ ಇಲಾಖೆಯು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಜಿ ನರೇಗಾ) 2018-19ನೇ ಸಾಲಿಗೆ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಮಾಡುವ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು ಇದರ ಪ್ರಯೋಜನಕ್ಕೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ತೆಂಗು, ಮÁವು, ಸಪೋಟ, ಸೀಬೆ, ನೇರಳೆ, ಅಂಗಾಂಶ ಕೃಷಿ ಬಾಳೆ, ಪಪ್ಪಾಯ, ನಿಂಬೆ ಇತ್ಯಾದಿ ತೋಟಗಾರಿಕೆ ಬೆಳೆಗಳನ್ನು ನಾಟಿ ಮಾಡಬಹುದು.
ಅಂದಾಜು ವೆಚ್ಚ ಒಂದು ಹೆಕ್ಟೇರ್ ತೆಂಗು ಬೆಳೆಗೆ 89780 ರೂ., ಅಂಗಾಂಶ ಕೃಷಿ ಬಾಳೆಗೆ 333402 ರೂ., ಪಪ್ಪಾಯ (2.4*2.4) ಬೆಳೆಗೆ 204973 ರೂ., ಪಪ್ಪಾಯ (1.8*1.8) ಬೆಳೆಗೆ 357688 ರೂ.ಗಳು ಆಗಲಿದೆ.
ಯೋಜನೆಯಡಿ ಫಲಾನುಭವಿಗೆ ತೆಂಗು ಬೆಳೆಗೆ ಒಟ್ಟು 62496 ರೂ., ಅಂಗಾಂಶ ಕೃಷಿ ಬಾಳೆಗೆ 211656 ರೂ., ಪಪ್ಪಾಯ (2.4*2.4) ಬೆಳೆಗೆ 119360 ರೂ., ಪಪ್ಪಾಯ (1.8*1.8) ಬೆಳೆಗೆ 205498 ರೂ.ಗಳ ಸಹಾಯಧನ ನೀಡಲಾಗುವುದು.
ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಭಾವಚಿತ್ರ, ಪಹಣಿ, ಚೆಕ್ಕುಬಂಧಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಉದ್ಯೋಗ ಚೀಟಿ ಜೆರಾಕ್ಸ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ, ಇತರೆ ರೈತರಾದಲ್ಲಿ ಸಣ್ಣ, ಅತಿಸಣ್ಣ ರೈತರ ಇಡುವಳಿ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಸಲ್ಲಿಸಿ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 17ರಂದು ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ನ. 15  ಜಿಲ್ಲಾಡಳಿತದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯದ ಮುಖಂಡರು, ಸಂಘಸಂಸ್ಥೆಗಳು, ಕನ್ನಡಪರ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು, ಕನಕ ಸಮಾಜದ ಮುಖಂಡರು ಸೇರಿದಂತೆ ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಸಂಬಂಧ ಸಲಹೆ ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 15- ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು - ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೀಘ್ರಲಿಪಿಗಾರರ 6 ಹುದ್ದೆಗಳು (3 ಹಿಂಬಾಕಿ ಮತ್ತು ಇತರೆ 3) ಇದ್ದು ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಬೆರಳಚ್ಚು ಮತ್ತು ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರರ 1 ಹಿಂಬಾಕಿ ಹುದ್ದೆಯಿದ್ದು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚು - ನಕಲುಗಾರರ 3 ಹುದ್ದೆಗಳು ಇದ್ದು (2 ಹಿಂಬಾಕಿ, 1 ಇತರೆ) ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಕಿರಿಯ ದರ್ಜೆ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
ಆದೇಶ ಜಾರಿಕಾರರ 2 ಹುದ್ದೆಗಳು ಇದ್ದು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.
ಸೇವಕರ 7 ಹುದ್ದೆಗಳು ಇದ್ದು 7ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.
ಅಭ್ಯರ್ಥಿಯು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಾಗಿದ್ದಲ್ಲಿ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಆಗಿದ್ದಲ್ಲಿ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ – 1ಕ್ಕೆ ಸೇರಿದವರಾಗಿದ್ದಲ್ಲಿ 40 ವರ್ಷ ಮೀರಿರಬಾರದು.
ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ದಾಖಲೆಗಳ ಸ್ವಯಂ ದೃಢೀಕೃತ ನಕಲು ಪ್ರತಿಗಳೊಂದಿಗೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಾಮರಾಜನಗರ ಇವರಿಗೆ ಡಿಸೆಂಬರ್ 5ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಸಂಪೂರ್ಣ ಮಾಹಿತಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ hಣಣಠಿ://eಛಿouಡಿಣs.gov.iಟಿ/ಛಿhಚಿmಚಿಡಿಚಿರಿಚಿಟಿಚಿgಚಿಡಿ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.


ನರ್ಸಿಂಗ್ ಕೋರ್ಸ್ ಆಯ್ಕೆಗೆ ಪ.ಜಾ., ಪ.ಪಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ನ. 15 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2018-19ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನರ್ಸಿಂಗ್ ಕೋರ್ಸಿಗೆ ಆಯ್ಕೆ ಮಾಡುವ ಸಲುವಾಗಿ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಜಿಎನ್‍ಎಂ, ಬಿಎಸ್‍ಸಿ ನಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್, ಎಂಎಸ್ಸಿ ನರ್ಸಿಂಗ್ ಕೋರ್ಸಿಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು 17 ರಿಂದ 35ರ ವಯೋಮಿತಿಯೊಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಎಲ್ಲ ಮೂಲಗಳಿಂದ 2.50 ಲಕ್ಷ ರೂ. ಒಳಗಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 24 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ವಿವರಗಳಿಗೆ ವೆಬ್ ಸೈಟ್ hಣಣಠಿ://sತಿ.ಞಚಿಡಿ.ಟಿiಛಿ.iಟಿ ನೋಡಬಹುದು. ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ದೂರವಾಣಿ ಸಂಖ್ಯೆ 080-22207784, ಇ ಮೇಲ್ sತಿಜಠಿeಣಛಿ2011@gmಚಿiಟ.ಛಿom ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

 














  






































































x

Sunday, 11 November 2018

10-11-2018 (ಟಿಪ್ಪುಸುಲ್ತಾನ್ ರಾಷ್ಟ್ರಪ್ರೇಮಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗ ಶೆಟ್ಟಿ )

ಟಿಪ್ಪುಸುಲ್ತಾನ್ ರಾಷ್ಟ್ರಪ್ರೇಮಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗ ಶೆಟ್ಟಿ  
participant public

ಚಾಮರಾಜನಗರ ನ.10 ಬ್ರಿಟಿಷರ ವಿರುದ್ದ ಕೆಚ್ಚೆದೆಯಿಂದ  ಪ್ರಬಲ ಹೋರಾಟ ಮಾಡಿದ ಟಿಪ್ಪುಸುಲ್ತಾನ್ ಅವರು ರಾಷ್ಟ್ರಪ್ರೇಮಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಜರತ್ ಟಿಪ್ಪು ಸುಲ್ತಾನ್ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.
ಬ್ರಿಟಿಷರ ದಬ್ಬಾಳಿಕೆಯನ್ನು ವಿರೋಧಿಸಿ ನಾಡಿನ ರಕ್ಷಣೆಗಾಗಿ ವೀರಾವೇಶದಿಂದ ಟಿಪ್ಪುಸುಲ್ತಾನ್ ಹೋರಾಡಿದರು. ದೇಶದ ಹಿತಕೋಸ್ಕರ ಶ್ರಮಿಸಿದ ಟಿಪ್ಪುಸುಲ್ತಾನ್ ಅವರ ಜಯಂತಿಯನ್ನು ಸರ್ಕಾರದ ವತಿಯಿಂದದಲೇ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಸಚಿವರು ನುಡಿದರು.
ಟಿಪ್ಪುಸುಲ್ತಾನ್ ಅವರು ಚಿಕ್ಕವಯಸ್ಸಿನಲ್ಲೆ ಸಕಲ ವಿದ್ಯೆಗಳನ್ನು ಪಡೆದು ಪರಿಣತಿ ಹೊಂದಿದ್ದರು. ಟಿಪ್ಪು ದಕ್ಷ ಆಡಳಿತಗಾರರಾಗಿದ್ದರು. ಅವರ ಆಳ್ವಿಕೆಯಲ್ಲಿ ರೇಷ್ಮೆಯನ್ನು ನಾಡಿಗೆ ಪರಿಚಯಿಸಲಾಯಿತು. ಜಮೀನುದಾರರಿಂದ ಸಮರ್ಪಕವಾಗಿ ಕಂದಾಯ ವಸೂಲಿಯಂತಹ ಸುಧಾರಣಾ ಕ್ರಮಗಳನ್ನು ಟಿಪ್ಪು ಜಾರಿಗೊಳಿಸಿದ್ದರೆಂದು ಉಸ್ತವಾರಿ ಸಚಿವರು ತಿಳಿಸಿದರು.
ರಾಜ್ಯಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿ ಕಾರ್ಯಕ್ರಮಗಳಿಗಾಗಿ 2377ಕೋಟಿ ರೂ ಅನುದಾನ ಮೀಸಲಿಟ್ಟಿದೆ. ಸಾಲಸೌಲಭ್ಯ, ಗಂಗಾಕಲ್ಯಾಣ, ಮಸೀದಿಗಳ ಅಭಿವೃದ್ಧಿ , ಶಾದಿ ಮಹಲ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳನ್ನು ಅನುಕೂಲವನ್ನು ಮಾಡುತ್ತಿದೆ ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಅವರು ಮಾತನಾಡಿ ಟಿಪ್ಪುಸುಲ್ತಾನ್ ಅವರು ಅಪ್ರತಿಮ ವೀರ. ಅಂದೇ ರಾಕೆಟ್ ತಂತ್ರಜ್ಞಾನವನ್ನು ಮೊದಲಿಗೆ ಪರಿಚಯಿಸಿ ಬಳಕೆ ಮಾಡಿದರು. ಅಷ್ಟೇ ಅಲ್ಲ ಅನೇಕ ತಂತ್ರಜ್ಞಾನ ಕೌಶಲ್ಯಗಳನ್ನು ಯುದ್ದದಲ್ಲಿ ಪರಿಣಾಮಕಾರಿಯಾಗಿ ಬಳಸಿ ಪ್ರಯೋಜನ ಪಡೆದರು ಎಂದರು.
ಟಿಪ್ಪು ಅವರ ಆಡಳಿತಾವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು ಅಂದೇ ಪ್ರತಿಯೊಬ್ಬರ ತಲಾ ಆದಾಯ ಬ್ರಿಟನ್ ದೇಶದ ತಲಾ ಆದಾಯಕ್ಕಿಂತ ನಾಲ್ಕು ಪಟ್ಟು ಹೆಚ್ಚಾಗಿತ್ತು. ಕನಿಷ್ಠ ಕೊಲಿಗಿಂತಲೂ ಹೆಚ್ಚಿನ ಆದಾಯ ಕಾರ್ಮಿಕರಿಗೆ ಸಿಗುತ್ತಿತ್ತು ಎಂದು ಧ್ರುವನಾರಾಯಣ ತಿಳಿಸಿದರು
ಮುಖ್ಯ ಉಪನ್ಯಾಸ ನೀಡಿದ ಚಿಂತಕರು ಹಾಗೂ ಪತ್ರಕರ್ತರು ಆದ  ಟಿ.ಗುರುರಾಜ್ ಅವರು ಟಿಪ್ಪು ಮಹಾನ್ ಮಾನವತಾವಾದಿ. ಧರ್ಮವನ್ನು ಮೀರಿದ ವ್ಯಕ್ತಿ. ಕಾವೇರಿಯಿಂದ ಗೋದಾವರಿವರೆಗೆ ಅವರ ಆಡಳಿತದ ಹರಿವು ಇತ್ತು ಎಂದರು.

ಟಿಪ್ಪು ಜನರ ಕಲ್ಯಾಣಕ್ಕಾಗಿ ನಾನಾ ಕಾರ್ಯಕ್ರಮಗಳನ್ನು ತಂದರು ಶಾಲೆ, ತಂಗದಾಣ ನಿರ್ಮಿಸಿದರು, 250 ವರ್ಷಗಳ ಹಿಂದೆಯೆ ಪಾನ ನಿಷೇಧ ಜಾರಿಗೊಳಿಸಿದ್ದರು. ಚೀನಾ, ಟರ್ಕಿ, ಪರ್ಷಿಯಾ ಸೇರಿದಂತೆ ಹಲವಾರು ರಾಷ್ಟ್ರಗಳಿಗೆ ರಾಯಬಾರಿಗಳನ್ನು ಕಳುಹಿಸಿ ಹೊಸ ವಿಷಯಗಳನ್ನು ಪರಿಚಯಿಸಿದರೆಂದು ಗುರುರಾಜ್ ತಿಳಿಸಿದರು.
        ಧರ್ಮಗುರುಗಳಾದ ಮಹಮದ್ ಇಸ್ಮಾಯಿಲ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ|| ಕೆ ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಮುಖಂಡರಾದ ಇರ್ಷಾದುಲ್ಲಾ ಖಾನ್, ಜಿಯಾ ಉಲ್ಲಾ ಷರೀಫ್, ಸೈಯದ್ ಅತೀಕ್ ಅಹಮದ್, ಸೈಯದ್ ರಫಿ, ಮಹಮದ್ ಅಸ್ಗರ್, ಸುಹೇಲ್ ಅಲಿಖಾನ್, ನಗರಸಭಾ ಸದಸ್ಯರಾದ ಅಬ್ರಾರ್ ಅಹಮದ್, ಅಮೀಕ್ ಅಹಮದ್, ರಾಜಪ್ಪ, ಚಿನ್ನಮ್ಮ, ಮಹೇಶ್, ಕಲೀಲ್‍ಉಲ್ಲಾಖಾನ್, ಸಮೀ ಉಲ್ಲಾ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ರಾಜೇಂದ್ರ ಪ್ರಸಾದ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಮೊದಲು ಮೈಸೂರಿನ ಜಹೀದುಲ್ಲಾ ಖಾನ್ ಮತ್ತು ತಂಡದವರು ಖವಾಲಿ ಕಾರ್ಯಕ್ರಮ ನಡೆಸಿಕೊಟ್ಟರು.

x

Friday, 9 November 2018

09--11-2018 (ನ. 10ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮ)


ನ. 10ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮ

ಚಾಮರಾಜನಗರ, ನ. 09- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. 
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಚಿಂತಕರಾದ ಟಿ. ಗುರುರಾಜ್ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಮೈಸೂರಿನ ಜûಹೀದುಲ್ಲಾ ಖಾನ್ ಮತ್ತು ತಂಡದವರಿಂದ ಖವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ.10ರಂದು ರ್ಯಾಲಿ, ಜಾಥಾ, ಮೆರವಣಿಗೆ, ಪ್ರತಿಭಟನೆ, ಸಭೆ ಸಮಾರಂಭ ನಿಷೇಧ
ಚಾಮರಾಜನಗರ, ನ. 09:- ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನವೆಂಬರ್ 10ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲಾದ್ಯಂತ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಹಾಗೂ ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್, ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಟಿಪ್ಪು ಜಯಂತಿ ಹಿನ್ನೆಲೆ : ಹಲವು ಕ್ರಮಗಳ ಪಾಲನೆಗೆ ಮನವಿ
ಚಾಮರಾಜನಗರ, ನ. 09 - ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳಿಂದ ನವೆಂಬರ್ 10ರಂದು ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲ ಪಟ್ಟಣಗಳಲ್ಲಿ ಹಜರತ್ ಟಿಪ್ಪುಸುಲ್ತಾನ್‍ರವರ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಹಲವು ಕ್ರಮಗಳನ್ನು ಪಾಲನೆ ಮಾಡಿ ಸಹಕರಿಸÀುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನವೆಂಬರ್ 10ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲಾದ್ಯಂತ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಹಾಗೂ ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್, ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಯಾವುದೇ ಉಲ್ಲಂಘನೆಯಾದಲ್ಲಿ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ.
ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯರಾತ್ರಿಯವರೆಗೆ ಚಾಮರಾಜನಗರ ನಗರಸಭೆ ಹಾಗೂ ತಾಲ್ಲೂಕು ಕೇಂದ್ರಗಳ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿನ ಮದ್ಯದಂಗಡಿಗಳಲ್ಲಿ (ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ದಾಸ್ತಾನು, ಅಕ್ರಮ ಸಾಗಣೆ ಮಾಡದಂತೆ ನಿಷೇಧಿಸಿ, ಒಣದಿನಗಳೆಂದು ಘೋಷಿಸಲಾಗಿದೆ. ಸದರಿ ಆದೇಶ ಉಲ್ಲಂಘನೆ ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಯಾವುದೇ ಕಾರಣಕ್ಕೂ ಗುಂಪಾಗಿ, ಮೆರವಣಿಗೆ ಮುಖಾಂತರ ಅಥವಾ ಜಾಥಾ, ರ್ಯಾಲಿ ಅಥವಾ ಒಂದಕ್ಕಿಂತ ಹೆಚ್ಚು ವಾಹನಗಳಲ್ಲಿ ಒಟ್ಟಿಗೆ ಆಗಮಿಸಬಾರದು. ಧ್ವಜ, ಬಾವುಟ ಇತ್ಯಾದಿಗಳನ್ನು ಅವರೊಂದಿಗಾಗಲೀ ಅಥವಾ ವಾಹನಗಳಲ್ಲಾಗಲೀ ಪ್ರದರ್ಶನ ಮಾಡುವುದು, ಧ್ವನಿವರ್ದಕಗಳ ಮೂಲಕ ಹಾಡು, ಘೋಷಣೆಗಳನ್ನು ಕೂಗುವುದುನ್ನು, ನೃತ್ಯ ಅಥವಾ ಬೇರಾವುದೆ ಪ್ರಚೋದನಕಾರಿ ಅಂಶಗಳನ್ನ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಟಿಪ್ಪು ಜಯಂತಿ ಅಂಗವಾಗಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಹಾಕಲಾಗುವ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳನ್ನು ಹೊರತು ಪಡಿಸಿ ಬೇರಾವುದೆ ರೀತಿಯ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳನ್ನು ಹಾಕಲು ಅವಕಾಶವಿರುವುದಿಲ್ಲ. ಉಲ್ಲಂಘನೆಯಾದಲ್ಲಿ ಅಂತಹವರುಗಳ ವಿರುದ್ಧ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೂ ಆಸ್ಪದ ನೀಡಬಾರದು.
ಜಿಲ್ಲಾ ಪೊಲೀಸ್ ವತಿಯಿಂದ ಮುಂಜಾಗ್ರತಾ ಕ್ರಮ ಹಾಗೂ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿ, ಗುಪ್ತ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.  ನಗರದ ಹಾಗೂ ಜಿಲ್ಲಾ ಗಡಿಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ನೇಮಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ  ಸಿ.ಸಿ.ಟಿ.ವಿಗಳನ್ನು ಅಳವಡಿಸಲಾಗಿದೆ ಮತ್ತು  ವಿಡಿಯೋ ಚಿತ್ರೀಕರಣ ಮಾಡಿಸಲು ಸಹ ವ್ಯವಸ್ಥೆ ಮಾಡಲಾಗಿದೆ. ಸದರಿ ಕಾರ್ಯಕ್ರಮಗಳ ಸನ್ನಿವೇಶವನ್ನು ದುರುಪಯೋಗಪಡಿಸಿಕೊಳ್ಳುವ ಸಮಾಜಘಾತುಕ ಶಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗಾಗಲಿ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗಾಗಲೀ ತಿಳಿಸುವಂತೆ ಮನವಿ ಮಾಡಲಾಗಿದೆ.
ಜಿಲ್ಲಾ ನಿಯಂತ್ರಣ ಕೊಠಡಿ ದೂ.ಸಂ. 08226-222383, ಮೊಬೈಲ್ 9480804600, ಡಿ.ಎಸ್.ಪಿ, ಚಾ.ನಗರ ಉಪವಿಭಾಗ, ದೂ.ಸಂ. 08226-222090, ಮೊಬೈಲ್ 9480804620, ಡಿ.ಎಸ್.ಪಿ. ಕೊಳ್ಳೇಗಾಲ ಉಪವಿಭಾಗ, ದೂ.ಸಂ. 08224-252840, ಮೊಬೈಲ್ 9480804621.
ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 09 - ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ 5 ದಿನಗಳ ಕಾವ್ಯ ಕಮ್ಮಟವನ್ನು ಡಿಸೆಂಬರ್ 2ನೇ ವಾರದಲ್ಲಿ ರಾಮನಗರ ಜಿಲ್ಲೆಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಹಮ್ಮಿಕೊಳ್ಳಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು 20ರಿಂದ 45ರ ವಯೋಮಿತಿಯೊಳಗಿರಬೇಕು. ಈಗಾಗಲೇ ತಮ್ಮ ಬಿಡಿ ಕವನ, ಕವನ ಸಂಕಲನ ಪ್ರಕಟಗೊಂಡಿದ್ದಲ್ಲಿ ಅಕಾಡೆಮಿಯ ಗಮನಕ್ಕೆ ತರುವುದು.
ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ 5 ದಿನಗಳು ಶಿಬಿರದಲ್ಲೇ ವಾಸ್ರವ್ಯ ಹೂಡಬೇಕು. ಶಿಬಿರಕ್ಕೆ ಬಂದು ಹೋಗಲು ರಾಜಹಂಸ ಬಸ್ ದರ ಹಾಗೂ 5 ದಿನಗಳ ಕಾಲ ಊಟ, ಉಪಾಹಾರ, ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಅರ್ಜಿಯನ್ನು ಅಕಾಡೆಮಿಯ ವೆಬ್ ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ ಲಗತ್ತಿಸಬೇಕು. ಅರ್ಜಿಯನ್ನು ಒಳಗೊಂಡ ಲಕೋಟೆಯ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಕಾವ್ಯ ಕಮ್ಮಟಕ್ಕೆ ಅರ್ಜಿ ಎಂದು  ನಮೂದಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ ಕೊನೆಯ ವಾರದಲ್ಲಿ ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು.
ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗೂರು-560 0002 ಇಲ್ಲಿಗೆ  ನವೆಂಬರ್ 15ರೊಳಗೆ ಕಳುಹಿಸಬೇಕು. ವಿವರಗಳಿಗೆ 080-22211730/22106460 ಸಂಪರ್ಕಿಸುವಂತೆ ರಿಜಿಸ್ಟ್ರಾರ್ ಎನ್. ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.






















x

Thursday, 8 November 2018

19-10-2018 to 24-10-2018 (ವಾಲ್ಮೀಕಿ ರಾಮಯಣದಲ್ಲಿ ಶ್ರೇಷ್ಠ ವಿಚಾರಗಳು ಅಡಕ: ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ.

ವಾಲ್ಮೀಕಿ ರಾಮಯಣದಲ್ಲಿ ಶ್ರೇಷ್ಠ ವಿಚಾರಗಳು ಅಡಕ: ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ.

ಚಾಮರಾಜನಗರ, ಅ 24 - ರಾಮರಾಜ್ಯದ ಆಡಳಿತ, ಪಿತೃವಾಕ್ಯ ಪರಿಪಾಲನೆಯಂತಹ ಅನೇಕ ಮೌಲ್ಯಯುತ ವಿಚಾರಗಳನ್ನು ಒಳಗೊಂಡ ಮಹಾಕೃತಿ ರಚಿಸಿದ ಮಹರ್ಷಿ ವಾಲ್ಮೀಕಿಯವರು ಶ್ರೇಷ್ಠ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಅವರ ರಾಮಯಾಣದಲ್ಲಿ ಪಿತೃವಾಕ್ಯ ಪರಿಪಾಲಕನಾಗಿ ರಾಮ ಎಲ್ಲರಿಗೂ ಆದರ್ಶ ವ್ಯಕ್ತಿಯಾಗಿದ್ದಾನೆ. ಪ್ರಜೆಗಳ ಕಲ್ಯಾಣ ಹಾಗೂ ದಕ್ಷ ಆಡಳಿತಕ್ಕ ಹೆಸರಾದ ರಾಮರಾಜ್ಯ ಇಂದಿಗೂ ಮಾದರಿಯಾಗಿದೆ ಎಂದು ಸಚಿವರು ತಿಳಿಸಿದರು.
ರಾಮಯಾಣದ ಶ್ರೇಷ್ಠ ವಿಚಾರಗಳನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಮೇರು ಕೃತಿಯಲ್ಲಿರುವ ಆದರ್ಶ ತತ್ವಗಳನ್ನು ಪರಿಪಾಲನೆ ಮಾಡಬೇಕಿದೆ ಎಂದು ಸಚಿವರು ಆಶಿಸಿದರು.
ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಸಂಸದ ಧ್ರುವನಾರಾಯಣ ಅವರು ವಾಲ್ಮೀಕಿ ಅವರು ಭಾರತೀಯ ಜನರ ಸಂಸ್ಕøತಿ, ಪರಂಪರೆ ಬಿಂಬಿಸುವ ಮಹಾಕಾವ್ಯ ರಾಮಾಯಣ ರಚಿಸಿದ್ದಾರೆ. ಸಾಮರಸ್ಯ, ಪ್ರೀತಿ, ವಿಶ್ವಾಸ ಮೂಡಿಸುವ ಮತ್ತು ಎಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಿದ್ದಾರೆ ಎಂದರು.
ಶ್ರೇಷ್ಠ ಕೃತಿ ರಚನಕಾರರಾದ ವಾಲ್ಮೀಕಿ ಅವರ ಜಯಂತಿಯನ್ನು ಕರ್ನಾಟಕ ರಾಜ್ಯ ಮಾತ್ರವಲ್ಲದೇ ದೇಶದ ಹಲವು ಭಾಗಗಳಲ್ಲಿ ಶ್ರದ್ಧೆ ಭಕ್ತಿಯಿಂದ ಆಚರಿಸಲಾಗುತ್ತಿದೆ. ಹರಿಯಾಣ, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಿ, ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡುವ ಮೂಲಕ ಸ್ಮರಿಸಲಾಗುತ್ತಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಇತಿಹಾಸ ವಿಭಾಗದ ಪ್ರೋ. ಡಾ. ಎಂ.ಎನ್. ರಘು ಅವರು ಮಾತನಾಡಿ, ಇಡೀ ವಿಶ್ವದಲ್ಲೇ 300ಕ್ಕೂ ಹೆಚ್ಚು ವಿಧದಲ್ಲಿ ರಚಿಸಲಾಗಿರುವ ಹಾಗೂ ಹಲವಾರು ಭಾಷೆಯಲ್ಲಿ ಪ್ರಕಟವಾಗಿರುವ ಏಕೈಕ ಮಹಾಕಾವ್ಯ ಎಂದರೆ ವಾಲ್ಮೀಕಿ ಅವರು ಬರೆದ ರಾಮಾಯಣ. ಇದು ಹೆಮ್ಮೆಯ ವಿಷಯವಾಗಿದೆ ಎಂದರು.
ಇದೇ ವೇಳೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸವಲತ್ತುಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಯಕ ಸಮುದಾಯದ ಗಣ್ಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಯೋಗೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ಚೆನ್ನಪ್ಪ, ಹಾಲಿ ಸದಸ್ಯರು ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಜಿ.ಪಂ ಸದಸ್ಯರಾದ ಆರ್. ಬಾಲರಾಜು, ಶಶಿಕಲಾ ಸೋಮಲಿಂಗಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಎಪಿಎಂಸಿ ಅಧ್ಯಕ್ಷರಾದ ಶಂಕರಮೂರ್ತಿ, ಮುಖಂಡರಾದ ಪು. ಸೋಮನಾಯಕ, ಮಹದೇವನಾಯಕ, ಸುರೇಶ್‍ನಾಯಕ, ಚಾ.ಸಿ. ಸೋಮನಾಯಕ, ಚಂಗುಮಣಿ, ಸೋಮನಾಯಕ, ಸುರೇಶನಾಯಕ, ಕುಮಾರನಾಯಕ, ಹೆಚ್.ವಿ. ಚಂದ್ರು, ಬಸವಣ್ಣ, ಸಿ.ಎಂ. ಕೃಷ್ಣಮೂರ್ತಿ, ವೆಂಕಟರಮಣ ಪಾಪು, ಕೃಷ್ಣನಾಯಕ, ಆಲೂರು ನಾಗೇಂದ್ರ, ಅರಕಲವಾಡಿ ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಪಾಳ್ಯ ಕೃಷ್ಣ, ಮಹದೇವಶೆಟ್ಟಿ, ಶಿವರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಕೃಷ್ಣಪ್ಪ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ರವರು ಇತರೆ ಗಣ್ಯರೊಂದಿಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಿದರು.
ಬೆಳೆ ದರ್ಶಕ್ ಮೊಬೈಲ್ ಆಪ್ ಅಳವಡಿಸಿಕೊಳ್ಳಲು ಸಿಬ್ಬಂದಿ, ರೈತರಿಗೆ ಸಲಹೆ
ಚಾಮರಾಜನಗರ, ಆ. 23 - ರೈತರು ತಮ್ಮ ಜಮೀನಿನಲ್ಲಿ ಬೆಳೆ ಸಂಗ್ರಹಣೆಯ ಸ್ಥಿತಿಯನ್ನು ತಿಳಿಯಲು ಸಹಕಾರಿಯಾಗಿರುವ ಬೆಳೆ ದರ್ಶಕ್ ಆಪ್ ಅನ್ನು ಹೊರತಂದಿದ್ದು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.
ಜಮೀನಿನ ಬೆಳೆ ಸಂಗ್ರಹ ಸ್ಥಿತಿ ಅರಿಯಲು ಬೆಳೆ ದರ್ಶಕ ಮೊಬೈಲ್ ಆಪ್ ಗೂಗಲ್ ಪ್ಲೇ ಸ್ಟೋರ್‍ನಲ್ಲಿ ಲಭ್ಯವಿದೆ. ಬೆಳೆ ದರ್ಶಕ್ ಮೊಬೈಲ್ ಆಪ್ ಅನ್ನು ಪ್ರತಿಯೊಬ್ಬ ರೈತರು ಡೌನ್‍ಲೋಡ್ ಮಾಡಿಕೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.
2018ರ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಶೇ. 97ರಷ್ಟು ಪೂರ್ಣಗೊಂಡಿದ್ದು ಖಾಸಗಿ ನಿವಾಸಿಗಳು ಸಂಗ್ರಹಿಸಿದ ಮಾಹಿತಿಯನ್ನು ಸರ್ಕಾರಿ ಸಿಬ್ಬಂದಿ ದೃಢೀಕರಿಸಬೇಕಾಗಿರುತ್ತದೆ. ಅದÀರಂತೆ ಸದರಿ ಮಾಹಿತಿಯು ರೈತರಿಗೆ ಸಂಬಂಧಿಸಿರುವುದರಿಂದ ರೈತರ ಪಾಲ್ಗೊಳ್ಳುವಿಕೆ ಅತ್ಯವಶ್ಯಕವಾಗಿರುತ್ತದೆ.
ಜಿಲ್ಲೆಯ ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಭೂ ಮಾಪನ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ಸಾರ್ವಜನಿಕರು ಬೆಳೆ ದರ್ಶಕ ಮೊಬೈಲ್ ಆಪ್ ಅನ್ನು ಡೌನ್ ಲೋಡ್ ಮಾಡಿಕೊಂಡು ಆಪ್‍ನ ಪ್ರಯೋಜನ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ತಾಲೂಕು ಮಟ್ಟದ ಚರ್ಮರೋಗ ತಪಾಸಣೆ ಅಭಿಯÁನ
ಚಾಮರಾಜನಗರ, ಅ. 23 - ತಾಲೂಕು ಆರೋಗ್ಯ ಇಲಾಖೆಯು ಕುಷ್ಠರೋಗ ಪತ್ತೆಹಚ್ಚುವ ಚಟುವಟಿಕೆಯನ್ನು ತಾಲೂಕಿನಾದ್ಯಂತ ನವೆಂಬರ್ 4ರವರೆಗೆ ಹಮ್ಮಿಕೊಂಡಿದೆ.
ಬೆಳಿಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ರೋಗ ತಪಾಸಣೆ ಅಭಿಯಾನ ನಡೆಯಲಿದೆ.
ತಾಲೂಕಿನಲ್ಲಿ ಗ್ರಾಮಾಂತರ ಹಾಗೂ ನಗರ ಸೇರಿದಂತೆ 3,59,791 ಜನಸಂಖ್ಯೆ ಇದ್ದು 80312 ಮನೆಗಳನ್ನು ಅಭಿಯಾನದಲ್ಲಿ ತಂಡಗಳು ಭೇಟಿ ಮಾಡಲಿದÉ. ಪ್ರತಿ ತಂಡದಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳೆ (ಆಶಾ ಅಥವಾ ಉಷಾ ಕಾರ್ಯಕರ್ತೆ) ಯರನ್ನು ನಿಯೋಜಿಸಲಾಗಿದೆ. ತಂಡದವರು ಮನೆಯಲ್ಲಿರುವ ಎಲ್ಲಾ ಸದಸ್ಯರನ್ನು (2 ವರ್ಷ ಮೇಲ್ಪಟ್ಟ) ಭೇಟಿ ಮಾಡಿ ಸಂಶಯಾಸ್ಪದ ಕುಷ್ಠರೋಗದ ಬಗ್ಗೆ ತಪಾಸಣÉ ನಡೆಸುತ್ತಾರೆ. ಯಾವುದೇ ಚರ್ಮದ ಖಾಯಿಲೆ ಅಥವಾ ಕೈಕಾಲು ಜೋಮುಗಳು ಕುಷ್ಠರೋಗದ ಲಕ್ಷಣಗಳಾಗಿರಬಹುದು. ತಂಡಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರÉ.
ನಗರಸಭೆ : ಸಾಕು ಪ್ರಾಣಿಗಳ ಮಾಲೀಕರಿಗೆ ಸೂಚನೆ
ಚಾಮರಾಜನಗರ, ಅ. 23 - ನಗರಸಭಾ ವ್ಯಾಪ್ತಿಯಲ್ಲಿ ಹಂದಿ, ಬೀದಿ ನಾಯಿಗಳು ಹಾಗೂ ಇತರೆ ಪ್ರಾಣಿಗಳನ್ನು ಸಾಕುತ್ತಿರುವ ಮಾಲೀಕರುಗಳು ಸಾಕು ಪ್ರಾಣಿಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಂಡು ಸಾಕುವಂತೆ ಮನವಿ ಮಾಡಿದೆ.
ಸಾಕು ಪ್ರಾಣಿಗಳನ್ನು ಸಾರ್ವಜನಿಕ ರಸ್ತೆಗೆ ಹಾಗೂ ಇತರೆ ಪ್ರಮುಖ ಸ್ಥಳಗಳಿಗೆ ಬಿಡುತ್ತಿದ್ದು ಇದರಿಂದ ಸಾರ್ವಜನಿಕರು ಓಡಾಡಲು ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗಿ ಅಪಘಾತ ಆಗುವ ಸಂಭವವಿರುತ್ತದೆ. ಬೀದಿ ನಾಯಿಗಳ ಹಾವಳಿ ಅತಿಯಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ನಗರಸಭೆಗೆ ಮನವಿ ಬಂದಿದೆ.
ಈ ಹಿನ್ನೆಲೆಯಲ್ಲಿ  ಸಾಕುಪ್ರಾಣಿಗಳ ಮಾಲೀಕರು ಸಾಕುಪ್ರಾಣಿಗಳನ್ನು  ಸಾರ್ವಜನಿಕ ರಸ್ತೆಗೆ ಬಿಡದೆ ಮನೆಯಲ್ಲಿಯೇ ಸಾಕುವುದು. ತಪ್ಪಿದಲ್ಲಿ ಕರ್ನಾಟಕ ಮುನಿಸಿಪಲ್ ಕಾಯಿದೆ 1964ರ ನಿಯಮ 223(ಸಿ) ಪ್ರಕಾರ ಸಾರ್ವಜನಿಕವಾಗಿ ಬೀದಿಯಲ್ಲಿ ಬಿಡುವ ಪ್ರಾಣಿಗಳನ್ನು ಸೆರೆಹಿಡಿದು ಹೊರಸಾಗಿಸಲು ಕ್ರಮ ವಹಿಸಲಾಗುವುದು. ಇದಕ್ಕೆ ನಗರಸಭೆ ವತಿಯಿಂದ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
 ನಗರದಲ್ಲಿ ಅದ್ದೂರಿಯಾಗಿ ನಡೆದ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಅ. 23 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಗೀರಥ ಜಯಂತಿಯನ್ನು ನಗರದಲ್ಲಿಂದು ಅದ್ದೂರಿಯಾಗಿ ಆಚರಿಸಲಾಯಿತು.
ಕಲಾತಂಡಗಳೊಡನೆ ನಡೆದ ವೈಭವದ ಮೆರವಣಿಗೆಗೆ ನಗರದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಯೋಗೇಶ್ ಅವರು ಇತರೆ ಗಣ್ಯರೊಂದಿಗೆ ಚಾಲನೆ ನೀಡಿದರು.
ಬಳಿಕ ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆದ ಸಮಾರಂಭವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗ ಶೆಟ್ಟಿ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ಆಕಾಶದಿಂದ ಗಂಗೆಯನ್ನು ಛಲಬಿಡದೆ ಧರೆಗೆ ಕರೆತಂದ ಭಗೀರಥರ ಆದರ್ಶ, ವಿಚಾರಧಾರೆಗಳನ್ನು ಅನುಸರಿಸಬೇಕಿದೆ ಎಂದರು.
ಈ ಹಿಂದೆ ಉಪ್ಪಾರ ಸಮುದಾಯದ ಮೂಲ ಕಸುಬು ಉಪ್ಪು ಉದ್ಯಮವಾಗಿತ್ತು. ಅಂದು ಉಪ್ಪು ಉದ್ಯಮ ಅವಲಂಬಿತರು ತೆರಿಗೆಯನ್ನು ಕಟ್ಟುವ ಉನ್ನತ ಸ್ಥಿತಿಯಲ್ಲಿದ್ದರು ಎಂಬುದನ್ನು ತಿಳಿಯಬಹುದಾಗಿದೆ. ಇಂದು ಸಮುದಾಯ ನಾನಾ ಕಸುಬುಗಳನ್ನು ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.
ಸಮುದಾಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ, ಹೋರಾಟ ವಿಷಯಗಳಿಗೆ ಹೆಚ್ಚು ಗಮನ ನೀಡಬೇಕು. ಶಿಕ್ಷಣದಿಂದ ಮಾತ್ರ ಹಿಂದುಳಿಗ ವರ್ಗಗಳ ಏಳಿಗೆ ಸಾಧ್ಯ. ಹೀಗಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಚಿವರು ಸಲಹೆ ಮಾಡಿದರು.
ಮೂಢನಂಬಿಕೆಗಳನ್ನು ಬಿಡಬೇಕು. ಹೆಣ್ಣುಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಬಾಲ್ಯವಿವಾಹ ಮಾಡುವಂತಹ ಪದ್ಧತಿಯನ್ನು ಕೈಬಿಡಬೇಕು. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಮಹತ್ವ ನೀಡಬೇಕು. ಉನ್ನತ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಸಚಿವರು ತಿಳಿಸಿದರು.
ಭಗೀರಥರ ಭಾವಚಿತ್ರ ಅನಾವರಣಗೊಳಿಸಿ ಪುಷ್ಪಾರ್ಚನೆ ನೆರವೇರಿಸಿದ ಲೋಕಸಭಾ ಸದಸ್ಯರಾದ ಆರ್. ಧ್ರುನಾರಾಯಣ ಮಾತನಾಡಿ ಉಪ್ಪಾರ ಸಮುದಾಯ ಕಂದಾಚಾರಗಳನ್ನು ಬಿಡಬೇಕು. ಶಿಕ್ಷಣ ಪಡೆಯುವಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಬೇಕು. ಶಿಕ್ಷಣದಿಂದಲೇ ಸಮಾಜದಲ್ಲಿ ಮೇಲೆ ಬರುವ ಅವಕಾಶ ಬರಲಿದೆ ಎಂದರು.
ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ನೀ. ಗಿರಿಗೌಡ ಅವರು ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಜೆ. ಯೋಗೀಶ್, ಸದಸ್ಯರಾದ ಕೆರೆಹಳ್ಳಿ ನವೀನ್, ಶಶಿಕಲ ಸೋಮಲಿಂಗಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಮುಖಂಡರಾದ ಹನುಮಂತಶೆಟ್ಟಿ, ಮಹದೇವಶೆಟ್ಟಿ, ಬಾಗಳಿ ರೇವಣ್ಣ, ಮಧುವನಹಳ್ಳಿ ಶಿವಕುಮಾರ್, ವೆಂಕೋಬ, ಮಂಗಲ ಶಿವಕುಮಾರ್, ಲಿಂಗರಾಜು, ಜಯಸ್ವಾಮಿ, ಕೃಷ್ಣ, ಕಾವೇರಿ ಶಿವಕುಮಾರ್, ಚಿನ್ನಪ್ಪ, ಎಚ್.ವಿ. ಚಂದ್ರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ, ನಗರಸಭಾ ಸದಸ್ಯರು, ಸಮಾಜದ ಯಜಮಾನರು, ಇತರ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ವೇದಿಕೆಯಲ್ಲಿ ಮಂಜುನಾಥಶೆಟ್ಟಿ ಮತ್ತು ತಂಡದವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಅ. 24ರಂದು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ
ಚಾಮರಾಜನಗರ, ಅ. 23 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 24ರಂದು ನಗರದಲ್ಲಿ ಹಮ್ಮಿಕೊಳ್ಳÀಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭವನ್ನು  ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಠಾಟಿಸಿ ಅಧ್ಯಕ್ಷತೆ  ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್. ಉಮಾವತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಎಂ.ಎನ್. ರಘು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಜ. ಸುರೇಶ್ ನಾಗ್ ಮತ್ತು ತಂಡದವರಿಂದ ಜನಪದ ಹಾಗೂ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ವಿದೇಶೀ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 2- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ, ಪಿಎಚ್‍ಡಿ, ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಡಿ. ದೇವರಾಜ ಅರಸು ವಿದೇಶೀ ವ್ಯಾಸಂಗ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪ್ರವರ್ಗ 1, 2ಎ, 3ಎ, 3ಬಿ.ಗಳಿಗೆ ಸೇರಿದದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಅಥವಾ ಸಹಾಯವಾಣಿ 8050770004 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳ ರಿಪೇರಿಗಾಗಿ ಪಿ.ಡಿ.ಒ. ಗಳಿಗೆ ದೂರು ನೀಡಲು ಮನವಿ
ಚಾಮರಾಜನಗರ, ಆ. 22:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಿಲ್ಲೆಯಲ್ಲಿ ಸಹಕಾರ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಕರ್ನಾಟಕ ಗ್ರಾಮೀಣ ಮೂಲಭೂತ ಅಭಿವೃದ್ಧಿ ನಿಗಮ(ಕೆ.ಆರ್.ಐ.ಡಿ.ಎಲ್) ಮೂಲಕ ನಾಗರಿಕರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ.
ಆರಂಭಗೊಂಡಿರುವ ಎಲ್ಲಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಘಟಕಗಳು ಕಾರಣಾಂತರಗಳಿಂದ ಪದೆ ಪದೇ ದುರಸ್ಥಿಗೀಡಾಗುತ್ತಿವೆ ಹಾಗೂ ಸದರಿ ಘಟಕಗಳನ್ನು ರಿಪೇರಿಗೊಳಿಸಿ ಸುಸ್ಥಿತಿಯಲ್ಲಿಡುವಲ್ಲಿ ವಿಳಂಬವಾಗುತ್ತಿರುವುದು ಜಿಲ್ಲಾ ಪಂಚಾಯತ್ ಗಮನಕ್ಕೆ ಬಂದಿದೆ. ಈಗಾಗಲೇ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ.
ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟುಹೋದ ಸಂದರ್ಭದಲ್ಲಿ ರಿಪೇರಿಗೊಳಿಸಿ ಸುಸ್ಥಿತಿಯಲ್ಲಿಡುವುದು ಸಂಬಂಧಪಟ್ಟ ಆಯಾ ಇಲಾಖೆಯ ಕರ್ತವ್ಯವಾಗಿದೆ. ಈ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಪ್ಪಿಸುವುದು ಅನಿವಾರ್ಯವಾಗಿರುವುದರಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟಹೋದ ಸಂದರ್ಭ ನಾಗರಿಕರು ಯಾವುದೇ ಗೊಂದಲಕ್ಕೊಳಗಾಗದೇ ನೇರವಾಗಿ ತಮ್ಮ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ.
 ಪಂಚಾಯುತಿ ಅಭಿವೃದ್ಧಿ ಅಧಿಕಾರಿಗಳಿಗೆ ಅನುಷ್ಠಾನ ಏಜೆನ್ಸಿ ಮೂಲಕ ರಿಪೇರಿ ಕಾಮಗಾರಿ ನಿರ್ವಹಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, ಪಿ.ಡಿ.ಒ. ಗಳು ಸಂಬಂಧಿತ ಇಲಾಖೆಯು ಮೂಲಕ ರಿಪೇರಿ ಕಾರ್ಯಕ್ಕೆ ಕ್ರಮ ವಹಿಸಬಹುದಾಗಿದೆ. ಈ ನಿಟ್ಟಿನಲ್ಲಿ ನಾಗರಿಕರು ಘಟಕಗಳ ರಿಪೇರಿಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದೆ. 

ಹೆಚ್1 ಎನ್1 :  ಆರೋಗ್ಯ ಇಲಾಖೆಯಿಂದ ಜಾಗೃತಿ ಸಲಹೆ
ಚಾಮರಾಜನಗರ, ಆ. 22 :- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಚ್1  ಎನ್1 ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕೆಲವು ಸಲಹೆಗಳನ್ನು ನೀಡಿದೆ.
ಹೆಚ್1ಎನ್1 ರೋಗವು ಇನ್‍ಫ್ಲೂಯೆಂಜಾ ಎ ಎಂಬ ವೈರಸ್ ಸೋಂಕಿನಿಂದ ಉಂಟಾಗುವ ಕಾಯಿಲೆಯಾಗಿದೆ.
ಶೀತ, ತಲೆನೋವು, ಕೆಮ್ಮು ಮತ್ತು ಜ್ವರ ಕಾಣಿಸಿಕೊಂಡು ಚಳಿಯ ಜತೆ ದೇಹ ಬಳಲುತ್ತದೆ. ಕೆಲವೊಮ್ಮೆ ವಾಂತಿ ಬೇಧಿ ಸಹ ಆಗುವುದು. ಉಸಿರಾಟದಲ್ಲಿ ತೊಂದರೆ ಕಾಣಿಸುವುದು ಇದರ ಲಕ್ಷಣಗಳಾಗಿದ್ದು ವ್ಯಕ್ತಿಗಳು ಕೆಮ್ಮಿದಾಗ, ಸೀನಿದಾಗ ಇತರರಿಗೆ ಈ ವೈರಸ್ ಹರಡುತ್ತದೆ.
ಈ ರೋಗಕ್ಕೆ ಪರಿಣಾಮಕಾರಿಯಾದ ಔಷಧಿ ಲಭ್ಯವಿದ್ದು ಒಸೆಲ್ಟಮಿವರ್ (ಟ್ಯಾಮಿಫ್ಲೂ) ಅನ್ನು ವೈದ್ಯರ ಸಲಹೆ ಮೇರೆಗೆ ಪಡೆಯಬಹುದು.
ಹೆಚ್1ಎನ್1 ರೋಗಕ್ಕೆ ಒಳಗಾದವರು ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಥವಾ ಟಿಶ್ಯೂ ಪೇಪರ್‍ನಿಂದ ಮೂಗನ್ನು ಮುಚ್ಚಿಕೊಳ್ಳಬೇಕು. ಕೈಗಳನ್ನು ಆಗಿಂದಾಗ್ಗೆ ಸಾಬೂನಿನಿಂದ ತೊಳೆಯಬೇಕು. ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಬೇಕು. ಮಾಸ್ಕ್ ಧರಿಸಿ ಮನೆಯಲ್ಲಿಯೇ ಇರುವುದು ಉತ್ತಮ. ಚಿಕ್ಕಮಕ್ಕಳಿಂದ ದೂರವಿದ್ದು ವಿಶ್ರಾಂತಿ ಪಡೆಯಬೇಕು. ಪೌಷ್ಠಿಕ ಆಹಾರ ಸೇವಿಸಬೇಕು. ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯಬೇಕು.
ಹೆಚ್1ಎನ್1 ಸೋಂಕಿತರು ಇತರರ ಅತೀ ಸಮೀಪ ಹೋಗಬಾರದು. ಹಸ್ತಲಾಘವ, ತಬ್ಬಿಕೊಳ್ಳುವುದು, ಚುಂಬಿಸುವುದನ್ನು ಮಾಡಬಾರದು. ವೈದ್ಯರ ಸಲಹೆ ಪಡೆಯದೆ ಔಷಧಿ ಸೇವನೆ ಮಾಡಬಾರದು. ಜನನಿಬಿಡ ಪ್ರದೇಶದಲ್ಲಿ ಕರವಸ್ತ್ರದಿಂದ ಮುಚ್ಚಿಕೊಳ್ಳದೇ ಕೆಮ್ಮುವುದು ಹಾಗೂ ಸೀನುವುದು ಮಾಡಬಾರದು. ಕಣ್ಣು, ಮೂಗು, ಬಾಯಿಯನ್ನು ಆಗಿಂದಾಗ್ಗೆ ಮುಟ್ಟಬಾರದು ಹಾಗೂ ಎಲ್ಲೆಂದರಲ್ಲಿ ಉಗುಳದಂತೆ ಆರೋಗ್ಯ ಸಲಹೆ ನೀಡಿದೆ.
ಮಕ್ಕಳಲ್ಲಿ ತೀವ್ರ ಉಸಿರಾಟ, ಮೈ ನೀಲಿಯಾಗುವುದು, ಎಚ್ಚರ ತಪ್ಪುವಿಕೆ, ಅತಿಯಾದ ಕಿರಿಕಿರಿ, ತೀವ್ರತರ ಜ್ವರ ಮತ್ತು ಕೆಮ್ಮು, ಜ್ವರದ ಜತೆ ಮೈ ಮೇಲೆ ಗಂಧೆಗಳು ಏಳುವುದು ಅಪಾಯದ ಚಿಹ್ನೆಗಳಾಗಿವೆ.
ದೊಡ್ಡವರಲ್ಲಿ ಉಸಿರಾಟದ ತೊಂದರೆ, ಎದೆ ಹಾಗೂ ಹೊಟ್ಟೆಯಲ್ಲಿ ನೋವು ಅಥವಾ ಒತ್ತಡ, ಇದ್ದಕ್ಕಿದ್ದಂತೆ ತಲೆ ಸುತ್ತುವಿಕೆ, ತೀವ್ರ ಅಥವಾ ನಿರಂತರ ವಾಂತಿಯಾಗುವುದು ಸೋಂಕಿತರಲ್ಲಿನ ಅಪಾಯದ ಚಿಹ್ನೆಗಳಾಗಿವೆ. ಇಂತಹ ಲಕ್ಷಣಗಳೂ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸ ಜಿಲ್ಲಾ ಆಸ್ಪತ್ರೆ ಹಿಂಭಾಗದಲ್ಲಿರುವ ಕಣ್ಗಾವಲು ಘಟಕ ಅಥವಾ ದೂರವಾಣಿ ಸಂಖ್ಯೆ 08226-226561ನ್ನು ಸಂಪರ್ಕಿಸುವಂತೆ ಜಿಲ್ಲಾ ಸರ್ವಲೆನ್ಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜವಾಹರ್ ನವೋದಯ ವಿದ್ಯಾಲಯ : ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 22  ನಗರದ ಹೊಂಡರಬಾಳು ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಜಿಲ್ಲೆಯಲ್ಲಿ ಪ್ರಸ್ತುತ 8ನೇ ತರಗತಿಯಲ್ಲಿ, ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆ ಹಾಗೂ ದಿನಾಂಕ 1.5.2003 ಮತ್ತು 30.4.2007ರ ನಡುವೆ ಜನಿಸಿರುವ ಅಭ್ಯರ್ಥಿಗಳು ಅಗತÀ್ಯ ದಾಖಲÁಗಳೊಂದಿಗೆ ಇಲÁಖಾ ವೆಬ್ ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ  ಮೂಲಕ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ತೊಂದರೆಯಾದಲ್ಲಿ ನೇರವಾಗಿ ಜವಾಹರ್ ನವೋದಯ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಶಾಲಾ ವೆಬ್ ಸೈಟ್ ರಿಟಿoಜhಚಿಡಿಟಿಚಿgಚಿಡಿಚಿರಿಚಿಟಿಚಿgಚಿಟಿ.ಛಿom ಅಥವಾ ಮೊಬೈಲ್ ಸಂಖ್ಯೆ 8762505849 ಸಂಪರ್ಕಿಸುವಂತೆ ವಿದ್ಯಾಲಯದ ಪ್ರಾಚಾರ್ಯರಾದ ವಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಅ. 29ರಂದು ನಗರದಲ್ಲಿ ಉದ್ಯೋಗ ಮೇಳ
ಚಾಮರಾಜನಗರ, ಅ. 22 - ಜಿಲ್ಲೆಯ ನಿರುದ್ಯೋಗ ಅಭ್ಯರ್ಥಿಗಳು ಉದ್ಯೋಗ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಅಕ್ಟೋಬರ್ 29ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.
ಮೈಸೂರಿನ ರೆನಾಲ್ಟ್ ಮೋಟಾರ್ಸ್ ಲಿ., ಪೇ ಸ್ಕ್ವೆರ್ ಪ್ರೈ. ಲಿ., ಏರೋ ಬಿಸಿನೆಸ್, ಕಾನ್ ಸೋರ್ಷಿಯಾ ಪ್ರೈ. ಲಿ., ವಿಜಿಬಿ ಎಂಟರ್‍ಪ್ರೈಸಸ್, ಹೈ ಪ್ರೊಸೆಸ್ ಸರ್ವೀಸ್ (ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು) ಹಾಗೂ ಇತರೆ ಕಂಪನಿಗÀಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಡಿಪ್ಲೊಮಾ – ಮ್ಯಾಥ್ಸ್ ಇ ಅಂಡ್ ಸಿ ಮತ್ತು ಇ ಅಂಡ್ ಇ ಹಾಗೂ ಯಾವುದೇ ಪದವಿ ಹೊಂದಿರುವ 18 ರಿಂದ 35ರ ವಯೋಮಿತಿಯ ಅಭ್ಯರ್ಥಿಗಳು ಸ್ವ ವಿವರದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಯವರನ್ನು (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವ್ಯಕ್ತಿ ಕಾಣೆ : ಪತ್ತೆಗೆ ಸಹಕರಿಸಿ
ಚಾಮರಾಜನಗರ, ಅ. 22 - ತಾಲೂಕಿನ ಸಪ್ಪಯ್ಯನಪುರ ಗ್ರಾಮದಿಂದ ದೊಡ್ಡಯ್ಯ ಎಂಬುವವರು ಕಾಣೆಯಾಗಿರುವ ಕುರಿತು ಸಂತೆಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ದೂರು ದಾಖಲಿಸಿದ್ದು ಸದರಿ ವ್ಯಕ್ತಿಯ ಪತ್ತೆಗೆ ಮನವಿ ಮಾಡಲಾಗಿದೆ.
50ರ ವಯೋಮಾನದ ದೊಡ್ಡಯ್ಯನವರು ಕೀಲು ಬಾಯಿ ನೋವಿನಿಂದ ಬಳಲುತ್ತಿದ್ದಾರೆ. 5.4 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದೃಢಕಾಯ ಶರೀರ ಹೊಂದಿದ್ದು ಕನ್ನಡ ಮಾತನಾಡುತ್ತಾರೆ.
ಬಿಳಿ ತುಂಬುತೋಳಿನ ಶರ್ಟ್, ಹಸಿರು ಬಣ್ಣದ ಚೌಕಳಿ ಲುಂಗಿ, ತಲೆ ಕಡು ನೀಲಿ ಬಣ್ಣದ ಟೋಪಿ ಧರಿಸಿರುತ್ತಾರೆ.
ಇವರ ಸುಳಿವು ಸಿಕ್ಕಲ್ಲಿ ಸಂತೆಮರಹಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ಅವರ ಮೊ. ಸಂ. 9480804650, ಸಂತೆಮರಹಳ್ಳಿ ಪೊಲೀಸ್ ಠಾಣೆ ದೂ.ಸಂ. 08226-240250, ಜಿಲ್ಲಾ ಪೊಲೀಸ್ ಕಚೇರಿ 08226-222383 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವ್ಯಕ್ತಿ ಕಾಣೆ : ಸುಳಿವು ನೀಡಲು ಮನವಿ
ಚಾಮರಾಜನಗರ, ಅ. 22  ತಾಲೂಕಿನ ಹೆಗ್ಗವಾಡಿಪುರ ಗ್ರಾಮದ ಅಶೋಕ್ ಕುಮಾರ್ ಎಂಬುವವರು ಕಾಣೆಯಾಗಿರುವ ಬಗ್ಗೆ ಸಂತೆಮರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ಅಶೋಕ್ ಕುಮÁರ್ ಅವರು ಕೇರಳದ ಪಾಲಿಕ್ಕರ್ ಬಜಾರ್‍ನ ಮೈತ್ರಿ ಅರ್ಥ್‍ಮೂವರ್ಸ್‍ನಲ್ಲಿ ಹಿಟಾಚಿ ಹಾಗೂ ಜೆಸಿಬಿ ಆಪರೇಟರ್ ಕೆಲಸ ಮಾಡಿಕೊಂಡಿದ್ದರು. ಕಳೆದ ಆಗಸ್ 12ರಂದು ಊರಿಗೆ ಬರುತ್ತೇನೆಂದು ಮೊಬೈಲ್ ಮೂಲಕ ತಿಳಿಸಿದ್ದು ಇದುವರೆವಿಗೂ ಬಂದಿರುವುದಿಲ್ಲ ಎಂದು ಈತನ ತಂದೆ ದೂರು ದಾಖಲಿಸಿದ್ದಾರೆ.
25 ವರ್ಷದ ಅಶೋಕ್ ಕುಮಾರ್ ಅವರು 5.6 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದೃಢಕಾಯ ಶರೀರ, ಬಲತೋಳಿನಲ್ಲಿ ಹಸಿರು ಹಚ್ಚೆ ಹಾಕಿಸಿಕೊಂಡಿರುತ್ತಾರೆ.
ಇವರ ಮಾಹಿತಿ ದೊರೆತಲ್ಲಿ ಸಂತೆಮರಹಳ್ಳಿ ಪೊಲೀಸ್ ಠಾಣೆ ಕಚೇರಿ ದೂ.ಸಂ. 08226-240250, ಪಿಎಸ್‍ಐ ಮೊ. 9480804650, ಜಿಲ್ಲಾ ನಿಸ್ತಂತು ಕೊಠಡಿ 08226-222383 ಗೆ ಮಾಹಿತಿ ನೀಡುವಂತೆ ಸಂತೆಮರಹಳ್ಳಿ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಬಸವಣ್ಣನವರು ಮಹಾ ಮಾನವತಾವಾದಿ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ಅ. 20 (- ಜಾತೀಯತೆ ಹೋಗಲಾಡಿಸಿ ಸರ್ವರು ಸಮಾನರು ಎಂದು ಸಾರಿದ ಬಸವಣ್ಣನವರು ಮಹಾ ಮಾನವತಾವಾಡಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಡೆದ ಬಸವ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರು 12ನೇ ಶತಮಾನದಲ್ಲೇ ಜಾತಿಯ ಸಂಕೋಲೆಯನ್ನು ಹೋಗಲಾಡಿಬೇಕೆಂದು ಬಹುವಾಗಿ ಶ್ರಮಿಸಿದರು. ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರನ್ನು ಒಗ್ಗೂಡಿಸಿದರು. ಸಮಾನತೆ ಸಾಧಿಸುವಲ್ಲಿ ಮುಂದಾದರು ಎಂದು ಸಚಿವರು ತಿಳಿಸಿದರು.
ಬಸವಣ್ಣನವರ ಅವಧಿಯಲ್ಲಿ 1 ಲಕ್ಷದ 96 ಸಾವಿರ ಶರಣರು ಇದ್ದರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪವೇ ಇಂದಿನ ವಿಧಾನಸಭೆ, ಲೋಕಸಭೆಗೆ ಮಾದರಿಯಾಗಿದೆ. ಬಸವಣ್ಣನವರ ಉದಾತ್ತ ವಿಚಾರಧಾರೆಗಳು, ಆದರ್ಶಗಳನ್ನು ಎಲ್ಲರೂ ಪರಿಪಾಲನೆ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದರು.
ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಿ ಪುಷ್ಪಾರ್ಚನೆ ಮಾಡಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಬಸವಣ್ಣನವರು ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಟ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದರು. ಎಂಟುನೂರು ವರ್ಷಗಳ ಹಿಂದೆಯೇ ಮಹಿಳೆಯರಿಗೆ ವಿಶೇಷ ಪ್ರಾಧಾನ್ಯತೆಯನ್ನು ನೀಡಿದವರಲ್ಲಿ ಬಸವಣ್ಣನವರು ಪ್ರಮುಖರು ಎಂದರು.
ಬಸವಣ್ಣನವರು ಕಾಯಕ ದಾಸೋಹದ ಪರಿಕಲ್ಪನೆಗೆ ನಾಂದಿ ಹಾಡಿದರು. ಎಲ್ಲರೂ ದುಡಿಮೆ ಮಾಡಬೇಕೆಂಬ ಮಹತ್ವವನ್ನು ತಿಳಿಸಿಕೊಟ್ಟರು. ಬಸವಣ್ಣನವರ ಅನುಭವ ಮಂಟಪ ಪ್ರಜಾಪ್ರಭುತ್ವದ ಮಾದರಿಯಂತಿತ್ತು. ಬಸವಣ್ಣನವರ ಜಯಂತಿಯನ್ನು ಆಚರಣೆಗಷ್ಟೇ ಸೀಮಿತಗೊಳಿಸದೆ ಪ್ರತಿಯೊಬ್ಬರೂ ಅವರ ಮಹತ್ತರ ಆಶಯಗಳನ್ನು ಸಾಕಾರಗೊಳಿಸಬೇಕಿದೆ ಎಂದು ಧ್ರುವನಾರಾಯಣ ಅವರು ಆಶಿಸಿದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಬಸವಣ್ಣನವರು ಆಸ್ತಿ ಹಂಚಿಕೆ ಅಸಮಾನತೆ ವಿರುದ್ಧ 12ನೇ ಶತಮಾನದಲ್ಲಿಯೇ ದ್ವನಿ ಎತ್ತಿದರು. ಕಾರ್ಲ್ ಮಾಕ್ರ್ಸ್, ಲೆನಿನ್ ಅವರು 17ನೇ ಶತಮಾನದಲ್ಲಿ ಆಸ್ತಿ ಹಂಚಿಕೆ ಅಸಮಾನತೆ, ಸಂಗ್ರಹಣೆ ವಿರುದ್ಧ ಪ್ರಸ್ತಾಪ ಮಾಡಿದ್ದಾರೆ. ಇದರಿಂದ ಆಸ್ತಿ ಸಂಗ್ರಹ ಅಪಾಯ ಎಂಬುವುದನ್ನು ಮೊಟ್ಟಮೊದಲಿಗೆ ಸಾರಿದವರು ಬಸವಣ್ಣನವರೇ ಆಗಿದ್ದಾರೆ ಎಂದರು.
ಊಹೆ ಮಾಡಲೂ ಆಗದ ಕಾಲಘಟ್ಟದ ಸಮಾಜದಲ್ಲಿ ಮೊದಲು ಪರಿವರ್ತನಾ ಕ್ರಾಂತಿ ಆದದ್ದು ಬಸವಾದಿರಿಂದಲೇ ಎಂಬುದನ್ನು ಸ್ಮರಿಸಿಕೊಳ್ಳಬೇಕಿದೆ. ಜಾತಿರಹಿತ, ಸಮಾನತೆಯ ಸಮಾಜ ನಿರ್ಮಾಣವಾಗಬೇಕೆಂಬ ದಿಸೆಯಲ್ಲಿ ಅನುಭವ ಮಂಟಪದಲ್ಲಿ ಎಲ್ಲ ಜಾತಿಯ ಶರಣ ಶರಣೆಯರನ್ನು ಒಂದೆಡೆ ಸೇರಿಸಿದ ಬಸವಣ್ಣನವರು ನಮಗೆ ಮಾದರಿಯಾಗಿದ್ದಾರೆ ಎಂದು ಮಹೇಶ್ ಅವರು ನುಡಿದರು.
ಮುಡುಕನಪುರ ಹಲವಾರು ಮಠದ ಷಡಕ್ಷರ ದೇಶಿ ಕೇಂದ್ರ ಮಹಾಸ್ವಾಮಿ ಅವರು ವಿಶೇಷ ಉಪನ್ಯಾಸ ನೀಡಿದರು. ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಜೆ. ಯೋಗೀಶ್, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ನಾಗರಾಜು (ಕಮಲ್), ಆರ್. ಬಾಲರಾಜು, ಲೇಖಾ, ಕೆರೆಹಳ್ಳಿ ನವೀನ್, ಶಶಿಕಲ ಸೋಮಲಿಂಗಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಎಪಿಎಂಸಿ ಅಧ್ಯಕ್ಷರಾದ ಶಂಕರಮೂರ್ತಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಮುಖಂಡರಾದ ಕೊಡಸೋಗೆ ಶಿವಬಸಪ್ಪ, ಕೆ.ಎಸ್. ನಾಗರಾಜಪ್ಪ, ಕಾಳನಹುಂಡಿ ಗುರುಸ್ವಾಮಿ, ಡಾ. ಗುರುಪ್ರಸಾದ್, ಮರಿಸ್ವಾಮಿ, ಚಿನ್ನಮ್ಮ, ಬಿ.ಕೆ. ರವಿಕುಮಾರ್, ನಂಜಪ್ಪ, ಎಚ್.ವಿ. ಚಂದ್ರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ, ನಗರಸಭಾ ಸದಸ್ಯರು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಪ್ರವಾಸಿ ಮಂದಿರದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಇತರೆ ಗಣ್ಯರೊಂದಿಗೆ ಚಾಲನೆ ನೀಡಿದರು.
ಸಮಾರಂಭದ ಮುಖ್ಯ ವೇದಿಕೆಯಲ್ಲಿ ನಗರದ ಕದಳಿ ಮಹಿಳಾ ವೇದಿಕೆ ವತಿಯಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿತ್ತು.
ಅ. 23ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಅ. 20 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 23ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಭಗೀರಥರ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭವÀನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಶ್ರೀ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ನೀ. ಗಿರಿಗೌಡ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ಸಮಾರಂಭದ ವೇದಿಕೆಯಲ್ಲಿ ನಗರದ ಮಂಜುನಾಥಶೆಟ್ಟಿ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅ. 24ರಂದು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭ
ಚಾಮರಾಜನಗರ, ಅ. 22  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 24ರಂದು ನಗರದಲ್ಲಿ ಹಮ್ಮಿಕೊಳ್ಳÀಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ವಹಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಸಮಾರಂಭ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್. ಉಮಾವತಿ, ಸಾಮಾಜಿಕ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಎಂ.ಎನ್. ರಘು ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಜ. ಸುರೇಶ್ ನಾಗ್ ಮತ್ತು ತಂಡದವರಿಂದ ಜನಪದ ಹಾಗೂ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅಂಬೇಡ್ಕರ್ ಅವರಿಂದ ಶ್ರೇಷ್ಠ ಸಂವಿಧಾನ ರಚನೆ: ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ಅ. 21 - ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ಶ್ರೇಷ್ಠ ಹಾಗೂ ಸುಭದ್ರವಾದ ಸಂವಿಧಾನ ರಚಿಸಿಕೊಟ್ಟು ಇಡೀ ಪ್ರಪಂಚವೇ ಕಣ್ತೆರೆದು ನೋಡುವಂತೆ ಮಾಡಿದರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯ ಪಟ್ಟರು.
ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 127ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಹಲವು ಮಹತ್ತರ ಆಶಯಗಳನ್ನು ಹೊಂದಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ಜನರ ಪ್ರಗತಿ, ಏಳಿಗೆಗಾಗಿ ಕಾರಣವಾಗುವಂತಹ ಸಂವಿಧಾನ ರಚನೆ ಮಾಡಿ ದೇಶಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದರು.
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣಕ್ಕಾಗಿ ಹೆಚ್ಚಿನ ಆದ್ಯತೆ ನೀಡಿದೆ. 29 ಸಾವಿರ ಕೋಟಿ ಹಣವನ್ನು ಪರಿಶಿಷ್ಟರ ಅಭಿವೃದ್ಧಿಗಾಗಿ ಸರ್ಕಾರ ಮೀಸಲಿಟ್ಟಿದೆ. ಆ ಮೂಲಕ ಡಾ.ಅಂಬೇಡ್ಕರ್ ಅವರ ಮೂಲ ಆಶಯಗಳ ಗುರಿ ತಲುಪಲು ಸರ್ಕಾರ ಶ್ರಮಿಸುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣಗೊಳಿಸಿ ಪುಷ್ಪಾರ್ಚನೆ ಮಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ದೇಶದಲ್ಲಿ ಬದಲಾವಣೆ ಸಾಧ್ಯವಾಗಲಿದೆ. ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಮ್ಮ ದೇಶದಲ್ಲಿ 6500 ಜಾತಿಗಳಿವೆ. ವಿವಿಧ ಧರ್ಮ, ಭಾಷೆಗಳಿವೆ. ಎಲ್ಲರೂ ಐಕ್ಯತೆಯಿಂದ ಬದುಕಲು ಅಂಬೇಡ್ಕರ್ ಅವರ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದರು.
ಮಾಜಿ ಸಚಿವರು ಹಾಗೂ ಕೊಳ್ಳೇಗಾಲ ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ನಮ್ಮ ಜನರು ಅಂಬೇಡ್ಕರ್ ಅವರನ್ನು ನೋಡುವ ದೃಷ್ಠಿಕೋನ ಬದಲಾಗಬೇಕು. ಸೀಮಿತ ಗ್ರಹಿಕೆಯನ್ನು ಬಿಡಬೇಕು. ಅವರು ಬರೆದ ಸಂವಿಧಾನದಲ್ಲಿ ಶಿಕ್ಷಣದ ಮೂಲಭೂತ ಹಕ್ಕುಗಳಿವೆ. ಶೈಕ್ಷಣಿಕ ಅಭಿವೃದ್ಧಿಗೆ ಅಂಬೇಡ್ಕರ್ ಕೊಡುಗೆ ಅನನ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಮೈಸೂರು ಗಾಂಧಿನಗರದ ಉರಿಲಿಂಗ ಪೆದ್ದಿಶ್ವರ ಸಂಸ್ಥಾನ ಮಠದ ಪರಮಪೂಜ್ಯ ಜ್ಞಾನಪ್ರಕಾಶ್ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ನಗರದ ಪ್ರಸ್ತಾವಿತ ನಳಂದ ವಿಶ್ವವಿದ್ಯಾಲಯದ ಬೌದ್ಧ ಬಿಕ್ಕುಗಳಾದ ಭೋದಿದತ್ತ ಬಂತೇಜಿಯವರು ಆಂಬೇಡ್ಕರ್ ಅವರ ಸಂದೇಶಗಳನ್ನು ಸಾದರಪಡಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ಯೋಗೇಶ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾವತಿ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಎಂ. ಗಾಯತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು.
ನಂತರ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.
ಅರ್ಥಪೂರ್ಣವಾಗಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ
ಚಾಮರಾಜನಗರ, ಅ. 21 - ದೇಶದ ಭದ್ರತೆ, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆಗಾಗಿ ಜೀವದ ಹಂಗು ತೊರೆದು ಹೋರಾಡಿ ವೀರ ಮರಣವನ್ನಪ್ಪಿದ ಪೊಲೀಸರಿಗೆ ಗೌರವ ನಮನ ಸಲ್ಲಿಸುವ ಸಲುವಾಗಿ ನಡೆದ ಪೊಲೀಸ್ ಹುತಾತ್ಮರ ದಿನ ಆಚರಣೆ ಕಾರ್ಯಕ್ರಮ ನಗರದಲ್ಲಿಂದು ಅರ್ಥಪೂರ್ಣವಾಗಿ ನಡೆಯಿತು.
ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿಂದು 60ನೇ ವರ್ಷದ ಪೊಲೀಸ್ ಹುತಾತ್ಮರ ದಿನದ ಸ್ಮರಣೆ ಅಂಗವಾಗಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸುವ ಕಾರ್ಯವು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರ ಸಮ್ಮುಖದಲ್ಲಿ ನೆರವೇರಿತು.
ಮೊದಲಿಗೆ ಪೆರೆಡ್ ಕಮಾಂಡರ್ ಅವರಿಂದ ವಂದನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ನಂತರ ಮುಖ್ಯ ಅತಿಥಿ, ವಿಶೇಷ ಆಹ್ವಾನಿತರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಗಣ್ಯರು ಹುತಾತ್ಮರಿಗೆ ಹುತಾತ್ಮ ಪೊಲೀಸರಿಗೆ ಪುಷ್ಪಗುಚ್ಚ ಸಮರ್ಪಣೆ ಮಾಡಿದರು.
ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಮಾತನಾಡಿ ಕಾನೂನು ಸುವ್ಯವಸ್ಥೆಗಾಗಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರನ್ನು ಇಂದು ಸ್ಮರಣೆ ಮಾಡಲಾಗುತ್ತಿದೆ. ರಾಜ್ಯದ 15 ಮಂದಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 414 ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. ಅವರುಗಳನ್ನು ಸ್ಮರಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಮಾತನಾಡಿ ನಾಡಿನ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ನಾವೆಲ್ಲರು ಯಾವುದೇ ಭಯ-ಭೀತಿ ಇಲ್ಲದೆ ನೆಮ್ಮದಿ ಜೀವನ ನಡೆಸಲು ಪೊಲೀಸರು ಸಹ ಕಾರಣರಾಗಿದ್ದಾರೆ. ಹುತಾತ್ಮರಾದ ಪೊಲೀಸ್ ಕುಟುಂಬಕ್ಕೆ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದರು.
ತದನಂತರ ಪೆರೆಡ್ ಕಮಾಂಡರ್ ಅವರು ಮೂರು ಸುತ್ತಿನ ವಾಲೀ ಫೈರಿಂಗ್ ನಡೆಸಿದರು. ಹುತಾತ್ಮರ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷಗಳ ಮೌನಾಚರಣೆ ಏರ್ಪಡಿಸಲಾಯಿತು.
ಪೊಲೀಸ್ ಹುತಾತ್ಮರ ದಿನ ಆಚರಣೆ ಅಂಗವಾಗಿ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಏರ್ಪಡಿಸಲಾಗಿದ್ದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ, ಪ್ರಮಾಣಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.
ಅ. 22ರಂದು ನಗರದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಅ. 21- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭದ ದಿವ್ಯ ಸಾನಿಧ್ಯವನ್ನು ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವಸ್ವಾಮಿಗಳು ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮುಡುಕನಪುರ ಹಲವಾರು ಮಠದ ಷಡಕ್ಷರ ದೇಶಿ ಕೇಂದ್ರ ಮಹಾಸ್ವಾಮಿ ಅವರು ವಿಶೇಷ ಉಪನ್ಯಾಸ ನೀಡುವರು. ಬೆಳಿಗ್ಗೆ 9.30 ಗಂಟೆಗೆ ಸಮಾರಂಭದ ಮುಖ್ಯ ವೇದಿಕೆಯಲ್ಲಿ ನಗರದ ಕದಳೀ ಮಹಿಳಾ ವೇದಿಕೆ ವತಿಯಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ
ಚಾಮರಾಜನಗರ, ಅ. 20 :- ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಅಕ್ಟೋಬರ್ 22ರಂದು ಬೆಳಿಗ್ಗೆ 10.30 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿಜಗುಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಕಾರ್ಯಕ್ರಮ ಉದ್ಘಾಟಿಸುವರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಗೀತಾ, ಮೈಸೂರಿನ ಮಾಜಿ ಮಹಾಪೌರರು ಮತ್ತು ಬುದ್ಧವಿಹಾರದ ಅಧ್ಯಕ್ಷರೂ ಆದ ಎಂ. ಪುರುಷೋತ್ತಮ್, ಕೊಳ್ಳೇಗಾಲ ಹೋಂಕೇರ್ ಕಾರ್ಯಕ್ರಮದ ಅಧಿಕಾರಿ ಗಣೇಶ್‍ಬಾಬು, ಕನ್ನಡ ವಿಭಾಗದ ಗೌರವ ಪ್ರಾಧ್ಯಾಪಕರಾದ ಪ್ರೊ. ಕೃಷ್ಣಮೂರ್ತಿ ಹನೂರು, ರಾಜ್ಯಶಾಸ್ತ್ರ ವಿಭಾಗದ ಗೌರವ ಪ್ರಾಧ್ಯಾಪಕರಾದ ಪ್ರೊ. ಪರಮಶಿವಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಚಿತ್ರಕಲೆ, ಪ್ರಬಂಧ ಸ್ಪರ್ಧೆಯ ವಿಜೇತರ ವಿವರ 
ಚಾಮರಾಜನಗರ, ಅ. 20 - ಪೊಲೀಸ್ ಇಲಾಖೆ ವತಿಯಿಂದ 60ನೇ ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾಗಿದ್ದ ಚಿತ್ರಕಲಾ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರ ವಿವರ ಇಂತಿದೆ.
ಚಿತ್ರಕಲಾ ಸ್ಪರ್ಧೆ - ಪ್ರಾಥಮಿಕ ಶಾಲೆ ವಿಭಾಗ – ಗೌತಮ್ ಎಂ, ಜೆಎಸ್‍ಎಸ್ ಪಬ್ಲಿಕ್ ಶಾಲೆ, ಚಾಮರಾಜನಗರ (ಪ್ರಥಮ), ಕೆ.ಆರ್. ಧÀೃತಿ, ಜೆಎಸ್‍ಎಸ್ ಪಬ್ಲಿಕ್ ಶಾಲೆ, ಚಾಮರಾಜನಗರ (ದ್ವಿತೀಯ), ಸೈಯದ್ ಇಮಾಮ್ ಮರ್ಜೀಯ, ಸಂತ ಫ್ರಾನ್ಸಿಸ್ ಶಾಲೆ, ಚಾಮರಾಜನಗರ (ತೃತೀಯ)
ಮಾಧ್ಯಮಿಕ ಶಾಲೆ ವಿಭಾಗ – ರೋಹನ್, ಮೈಸೂರು ಗಂಗೋತ್ರಿ ಪಬ್ಲಿಕ್ ಸ್ಕೂಲ್, ಮೈಸೂರು (ಪ್ರಥಮ), ಎಂ. ಭೂಮಿಕ, ಸಂತ ಫ್ರಾನ್ಸಿಸ್ ಶಾಲೆ, ಚಾಮರಾಜನಗರ (ದ್ವಿತೀಯ), ಎಸ್. ಹಿಮಾಮಿ, ಸಂತ ಫ್ರಾನ್ಸಿಸ್ ಶಾಲೆ, (ತೃತೀಯ)
ಪ್ರೌಢಶಾಲೆ ಮತ್ತು ಕಾಲೇಜು ವಿಭಾಗ -  ಆರ್.ಬಿ. ನಾಗೇಂದ್ರ, ವಿ.ಎಚ್.ಪಿ. ಕಾಲೇಜ್, ಚಾಮರಾಜನಗರ (ಪ್ರಥಮ), ಎಂ. ರಿಷಿಕಾ, ಸಂತ ಫ್ರಾನ್ಸಿಸ್ ಶಾಲೆ, ಚಾಮರಾಜನಗರ (ದ್ವಿತೀಯ), ರಕ್ಷಾ ರಮೇಶ್, ಜ್ಞಾನಸಾಗರ ಐಪಿ ಸ್ಕೂಲ್, ಬೆಂಗಳೂರು (ತೃತೀಯ)
ಯುಕೆಜಿ ವಿಭಾಗದ ವಿಶೇಷ ಪ್ರಶಸ್ತಿ - ಸೈಯದ್ ಹಿಮಾಮ್ ಹುಸೇನ್, ಸಂತ ಫ್ರಾನ್ಸಿಸ್ ಶಾಲೆ, ಚಾಮರಾಜನಗರ
ಪ್ರಬಂಧ ಸ್ಪರ್ಧೆ – ಮಾಧ್ಯಮಿಕ ಶಾಲೆ ವಿಭಾಗ – ತನುಪ್ರಿಯ ಸಿ.ಪಿ. ಸ್ವಾಮಿ, ವಾಸವಿ ವಿದ್ಯಾಕೇಂದ್ರ, ಕೊಳ್ಳೇಗಾಲ (ಪ್ರಥಮ), ಎಂ.ಆರ್. ಸುಜನ್, ನವೋದಯ ಶಾಲೆ, ಹೊಂಡರಬಾಳು, ಚಾಮರಾಜನಗರ (ದ್ವಿತೀಯ), ತರುಣ್ ಕುಮಾರ್, ಸೇವಾಭಾರತಿ ಶಾಲೆ, ಚಾಮರಾಜನಗರ (ತೃತೀಯ)
ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿಭಾಗ – ಟಿ.ಕೆ. ದೇವರಾಜು, ಸಂತ ಫ್ರಾನ್ಸಿಸ್ ಅಸ್ಸಿಸಿ ಶಾಲೆ, ಕೊಳ್ಳೇಗಾಲ (ಪ್ರಥಮ), ಜಿ. ಬಿಂದು, ಸಂತ ಫ್ರಾನ್ಸಿಸ್ ಶಾಲೆ, ಚಾಮರಾಜನಗರ (ದ್ವಿತೀಯ), ಎಂ. ಕೀರ್ತನಾ, ಆದರ್ಶ ವಿದ್ಯಾಲಯ, ಚಾಮರಾಜನಗರ (ತೃತೀಯ)
ಸಾರ್ವಜನಿಕರ ವಿಭಾಗ – ಎಂ. ಸಚಿನ್, ಬಿಳಿಗಿರಿ ಪ್ರಥಮದರ್ಜೆ ಕಾಲೇಜು, ಯಳಂದೂರು (ಪ್ರಥಮ), ಪಿ. ಮಹೇಶ, ಪುಟ್ಟೇಗೌಡನಹುಂಡಿ, ಚಾಮರಾಜನಗರ ತಾಲೂಕು (ದ್ವಿತೀಯ), ಎಂ. ಬಸವರಾಜು, ಪುಟ್ಟೇಗೌಡನಹುಂಡಿ, ಚಾಮರಾಜನಗರ ತಾಲೂಕು (ತೃತೀಯ)
ಪೊಲೀಸ್ ಸಿಬ್ಬಂದಿ ವಿಭಾಗ - ಸಿ. ವಸಂತಕುಮಾರ್, ಚಾಮರಾಜನಗರ ಉಪವಿಭಾಗ ಕಚೇರಿ (ಪ್ರಥಮ), ಎಂ. ರೇವಣ್ಣಸ್ವಾಮಿ, ಚಾಮರಾಜನಗರ ಉಪವಿಭಾಗ ಕಚೇರಿ (ದ್ವಿತೀಯ), ಎಂ. ಮಂಜುಳ, ಮಹಿಳಾ ಠಾಣೆ (ತೃತೀಯ)
ವಿಜೇತರಿಗೆ ಅಕ್ಟೋಬರ್ 21ರಂದು ನಡೆಯಲಿರುವ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.
ಅ. 21ರಂದು ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭ
ಚಾಮರಾಜನಗರ, ಅ. 20 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜಯಂತಿಯನ್ನು ಅಕ್ಟೋಬರ್ 21ರಂದು ನಗರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭದ ದಿವ್ಯ ಸಾನಿಧ್ಯವನ್ನು ನಗರದ ಪ್ರಸ್ತಾವಿತ ನಳಂದ ವಿಶ್ವವಿದ್ಯಾನಿಲಯದ ಪೂಜ್ಯ ಬೌದ್ಧ ಭಿಕ್ಕುಗಳಾದ ಬೋಧಿದತ್ತ ಬಂತೇಜಿ ಅವರು ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಸಮಾರಂಭ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್. ಉಮಾವತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಗಾಂಧಿ ನಗರದ ಶ್ರೀ ಉರಿಲಿಂಗ ಪೆದ್ದೀಶ್ವರ ಸಂಸ್ಥಾನ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

ಅ. 22ರಂದು ನಗರದಲ್ಲಿ ಬಸವ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಅ. 20 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭದ ದಿವ್ಯ ಸಾನಿಧ್ಯವನ್ನು ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವಸ್ವಾಮಿಗಳು ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮುಡುಕನಪುರ ಹಲವಾರು ಮಠದ ಷಡಕ್ಷರ ದೇಶಿ ಕೇಂದ್ರ ಮಹಾಸ್ವಾಮಿ ಅವರು ವಿಶೇಷ ಉಪನ್ಯಾಸ ನೀಡುವರು. ಬೆಳಿಗ್ಗೆ 9.30 ಗಂಟೆಗೆ ಸಮಾರಂಭದ ಮುಖ್ಯ ವೇದಿಕೆಯಲ್ಲಿ ನಗರದ ಕದಳೀ ಮಹಿಳಾ ವೇದಿಕೆ ವತಿಯಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅ. 23ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ, ಅ. 20 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 23ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಭಗೀರಥರ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭವÀನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಶ್ರೀ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ನೀ. ಗಿರಿಗೌಡ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ಸಮಾರಂಭದ ವೇದಿಕೆಯಲ್ಲಿ ನಗರದ ಮಂಜುನಾಥಶೆಟ್ಟಿ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅ. 21ರಂದು ನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ
ಚಾಮರಾಜನಗರ, ಅ. 20:- ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಕ್ಷೇತ್ರ ಸೇವಾ ಸಾಧಕರು, ಸಂಸ್ಥೆಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 20 (ಕರ್ನಾಟಕ ವಾರ್ತೆ):- ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ, ಸಮಾಜಸೇವೆ ಇತರೆ ಪ್ರತಿಭೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವಿಕಲಚೇತನರು, ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ಶಿಕ್ಷಕರು, ಉತ್ತಮವಾಗಿ ಕಾರ್ಯನಿರ್ವಹಿಸಿರುವ ಸಂಸ್ಥೆಗಳಿಂದ ವೈಯಕ್ತಿಕ ಹಾಗೂ ಸಂಘಸಂಸ್ಥೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯು ಇಲಾಖಾ ವೆಬ್ ಸೈಟ್ ತಿತಿತಿ.ತಿeಟಜಿಚಿಡಿeoಜಿಜisಚಿಟeಜ.ಞಚಿಡಿ.ಟಿiಛಿ.iಟಿ ಅಥವಾ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅಕ್ಟೋಬರ್ 25ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿ, ಕೊಠಡಿ ಸಂ. 25, ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ. 08226-223688 ಹಾಗೂ 224688 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ನಗರದಲ್ಲಿ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಚಾಮರಾಜನಗರ, ಅ. 20   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆಯಿತು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿತವಾಗಿರುವ ಫಲಪುಷ್ಪ ಪ್ರದರ್ಶನವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. ಬಳಿಕ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ,  ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ, ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಇತರೆ ಗಣ್ಯರೊಂದಿಗೆ ಉಸ್ತುವಾರಿ ಸಚಿವರು ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳು ತೆರೆದಿರುವ ಮಾಹಿತಿ ಮಳಿಗೆಗಳನ್ನು ಗಣ್ಯರು ಉದ್ಘಾಟಿಸಿ ವೀಕ್ಷಣೆ ಮಾಡಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಪ್ರತೀವರ್ಷ ರೈತರು, ಬೆಳೆಗಾರರು, ನಾಗರಿಕರಿಗೆ ಮಾಹಿತಿ ನೀಡುವ ಸಲುವಾಗಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗುತ್ತಿದೆ. ಈ ಬಾರಿ ದಸರಾ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಫಲಪುಷ್ಪ ಪ್ರದರ್ಶನ ಆರಂಭಗೊಂಡಿದೆ ಎಂದರು.
ಕೃಷಿ, ತೋಟಗಾರಿಕೆ ಕ್ಷೇತ್ರದಲ್ಲಿ ಆಗಿರುವ ವಿಜ್ಞಾನ, ತಂತ್ರಜ್ಞಾನ ಬೆಳವಣಿಗೆಗಳನ್ನು ಪರಿಚಯಿಸಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಫಲಪುಷ್ಪ ಪ್ರದರ್ಶನವನ್ನು ಇಲಾಖೆ ಆಯೋಜಿಸುತ್ತಿದೆ. ಪ್ರದರ್ಶನದಲ್ಲಿ ಪ್ರಗತಿಪರ ರೈತರು, ಬೆಳೆಗಾರರು ಬೆಳೆದ ಉತ್ಪನ್ನಗಳನ್ನು ಇಡಲಾಗಿದೆ. ಬಳಸಿದ ತಂತ್ರಜ್ಞಾನ ಕುರಿತು ಮಾಹಿತಿ ನೀಡಲಾಗುತ್ತಿದೆ. ಹೊಸ ಮಾದರಿಗಳನ್ನು ಪರಿಚಯಿಸಲಾಗಿದೆ. ಬಹಳ ಉಪಯೋಗವಾಗಲಿರುವ ಫಲಪುಷ್ಪ ಪ್ರದರ್ಶನವನ್ನು ರೈತರು ಬೆಳೆಗಾರರು ವೀಕ್ಷಿಸಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.
ರೇಷ್ಮೆಗೆ ಪ್ರಸಿದ್ಧವಾಗಿದ್ದ ಚಾಮರಾಜನಗರ ಜಿಲ್ಲೆಯು ಇತ್ತೀಚಿನ ವರ್ಷಗಳಲ್ಲಿ ರೇಷ್ಮೆ ಉತ್ಪಾದನೆ ಚಟುವಟಕೆಗಳಲ್ಲಿ ಕುಂಠಿತವಾಗಿದೆ. ರೇಷ್ಮೆ ಅವಲಂಬಿತರನ್ನು ಉತ್ತೇಜಿಸುವ ದಿಸೆಯಲ್ಲಿ ಫಲಪುಷ್ಪ ಪ್ರದರ್ಶನದಲ್ಲಿ ರೇಷ್ಮೆ ಇಲಾಖೆಯು ಹೊಸ ತಳಿಗಳು ಹಾಗೂ ಹುಳು ಸಾಕಾಣಿಕೆಗೆ ನೂತನ ಪದ್ಧತಿಯನ್ನು ಪರಿಚಯಿಸುತ್ತಿದೆ. ಗೂಡು ಕಟ್ಟುವಿಕೆಯಿಂದ ಹಿಡಿದು ಸಂಪೂರ್ಣವಾಗಿ ರೇಷ್ಮೆ ಕೃಷಿ ಕೈಗೊಳ್ಳಲು ನೆರವಾಗುವ ತಾಂತ್ರಿಕತೆಯನ್ನು ತಿಳಿಸಲು ಸಜ್ಜಾಗಿದೆ. ಇಂತಹ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸಚಿವರು ತಿಳಿಸಿದರು.
ವಿವಿಧ ಪುಷ್ಪಗಳಿಂದ ಅಲಂಕರಿಸಿದ ಪ್ರತಿಕೃತಿಗಳು, ತರಕಾರಿ, ಹಣ್ಣು ಕೆತ್ತನೆ ಸೇರಿದಂತೆ ಎಲ್ಲ ವರ್ಗದ ನಾಗರಿಕರನ್ನು ಸೆಳೆಯುವ ಪ್ರದರ್ಶನವನ್ನು ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಉಸ್ತುವಾರಿ ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಜಿಲ್ಲೆಯಲ್ಲಿ 45 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಅಂತರ್ಜಲ ವೃದ್ಧಿಯಾಗಿದೆ. ಇದರಿಂದ ರೈತರು ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗಿದೆ ಎಂದರು.
ಆಧುನಿಕ ತಂತ್ರಜ್ಞಾನ, ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಂಡು ಕೃಷಿ, ತೋಟಗಾರಿಕೆ ಕ್ಷೇತ್ರದಲ್ಲಿ ಹೇಗೆ ಮುಂದೆಬರಬಹುದು ಎಂಬ ಬಗ್ಗೆ ಫಲಪುಷ್ಪ ಪ್ರದರ್ಶನದಲ್ಲಿ ತಿಳಿಯಬಹುದಾಗಿದೆ. ಬಹುಮುಖ್ಯವಾದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಾಳೆ, ಇನ್ನಿತರ ಬೆಳೆಗಳನ್ನು ಬೆಳೆದು ಬದುಕು ಹಸನಾಗಿಸಿಕೊಂಡವರ ಪರಿಚಯವು ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಯಶಸ್ವಿಯಾಗಿರುವವರ ಮಾಹಿತಿಯನ್ನು ನೀಡಲು ಇತರ ಇಲಾಖೆಗಳಿಗೂ ಸೂಚನೆ ಕೊಡಲಾಗಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪಿ. ಚೆನ್ನಪ್ಪ, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿ.ಕೆ. ಶ್ರೀಕಂಠಪ್ಪ, ಎಪಿಎಂಸಿ ಅಧ್ಯಕ್ಷರಾದ ಶಂಕರಮೂರ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ
ಚಾಮರಾಜನಗರ, ಅ. 20- ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆರಂಭಗೊಂಡಿರುವ ಫಲಪುಷ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿದೆ.
ಇಂದಿನಿಂದ ಅಕ್ಟೋಬರ್ 22ರವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನವು ಮೊದಲ ದಿನವೇ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಉದ್ಘಾಟನೆಗೊಂಡ ಕೂಡಲೇ ಜಿಲ್ಲೆಯ ಜನರು ಆಕರ್ಷಕ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಮುಗಿಬಿದ್ದರು. 
ಈ ಸಾಲಿನ ಫಲಪುಷ್ಪ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿ ಹೂವಿನ ಅಲಂಕಾರಿಕ ಪ್ರತಿ ಕೃತಿಗಳನ್ನು ನಿರ್ಮಿಸಲಾಗಿದೆ. ಹುಲಿಯ ಮೇಲೆ ಕುಳಿತ ಮಹದೇಶ್ವರ, ಶಿವಲಿಂಗ, ಆನೆ ಪ್ರತಿಕೃತಿಗಳನ್ನು ಗುಲಾಬಿ, ಜರ್ಬೆರಾ, ಕೊಲ್ ಕತ್ತಾ ಮ್ಯಾರಿಗೋಲ್ಡ್, ಸುಗಂಧರಾಜ ಸೇರಿದಂತೆ ವಿವಿಧ ಹೂವುಗಳಿಂದ ನಿರ್ಮಿಸಲಾಗಿದೆ.
     ಕನ್ನಡದ ಮೇರು ಸಾಹಿತಿ, ಕವಿಗಳ ಮುಖ ಕೃತಿಗಳನ್ನು ಕಲ್ಲಂಗಡಿ ಹಣ್ಣಿನಿಂದ ಕೆತ್ತಿ ರೂಪಿಸಿರುವುದು ಗಮನ ಸೆಳೆಯುತ್ತಿದೆ. ವಿವಿಧ ಬಣ್ಣಬಣ್ಣದ ಹೂವುಗಳಿಂದ ಅಲಂಕೃತವಾದ ಇತರೆ ಮಾದರಿಗಳು ಪ್ರದರ್ಶನದಲ್ಲಿ ಇಡಲಾಗಿದೆ. ಚಿಟ್ಟೆಯಾಕಾರದ ವರ್ಟಿಕಲ್ ಗಾರ್ಡನ್ ಅನ್ನು ವಿವಿಧ ಹೂ ಕುಂಡಗಳಿಂದ ಅಲಂಕರಿಸಲಾಗಿದೆ. ಹೂವಿನ ಕುಂಡಗಳ ಜೋಡಣೆ ನಾಗರಿಕರನ್ನು ಆಕರ್ಷಿಸುವಲ್ಲಿ ಸಫಲವಾಗುತ್ತಿದೆ.
ಯುವಜನರನ್ನು ಆಕರ್ಷಿಸಲು ಹೂವುಗಳಿಂದ ನಿರ್ಮಿಸಿರುವ ಸೆಲ್ಪಿ ಪಾಯಿಂಟ್ ಪ್ರಮುಖ ಆಕರ್ಷಣೆಯಾಗಿದೆ. ಇಕೆಬಾನಾ ಹೂವಿನ ಅಲಂಕಾರ ಹಾಗೂ ನೀರಿನ ಕಾರಂಜಿಗಳನ್ನು ನಿರ್ಮಾಣ ಮಾಡಿರುವುದು ನೋಡುಗರ ಮನ ಉಲ್ಲಾಸಕ್ಕೆ ಕಾತಣವಾಗಿದೆ. ರೈತರಿಗೆ ಮತ್ತು ಮಹಿಳೆಯರಿಗೆ ಮಾಹಿತಿ ನೀಡಲು ವಿಶೇಷವಾಗಿ ಬೆಳೆಯಲಾಗಿರುವ ನಾನಾ ಬಗೆಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.
ಪ್ರಗತಿಪರ ರೈತರು ಸರ್ಕಾರಿ ಯೋಜನೆ ಸದ್ಬಳಕೆ ಮಾಡಿಕೊಂಡು ಮುಂದೆಬಂದ ರೈತರ ಯಶೋಗಾಥೆಯನ್ನು ಪ್ರಸ್ತುತಪಡಿಸುವ ಮಾದರಿಯಲ್ಲಿಯೂ ಪ್ರದರ್ಶನ ರೂಪುಗೊಂಡಿರುವುದು ವಿಶೇಷವಾಗಿದೆ.
ತೋಟಗಾರಿಕೆ ಇಲಾಖೆಯಿಂದ ವಿಶೇಷವಾಗಿ ಸಹಾಯಧನ ನೀಡಲಾಗುವಂತಹ ಪಾಲಿಹೌಸ್, ಈರುಳ್ಳಿ ಶೇಖರಣಾ ಘಟಕ, ತಾರಸಿ ತೋಟ, ಕೈತೋಟಗಳಂತಹ ಮಾದರಿಗಳು ಸುಂದರವಾಗಿ ಮೂಡಿಬಂದಿದೆ. ಅಲ್ಲದೆ ಕೃಷಿ, ಮೀನುಗಾರಿಕೆ, ಅರಣ್ಯ, ರೇಷ್ಮೆ, ಪಶುಸಂಗೋಪನೆ, ಆರೋಗ್ಯ ಇಲಾಖೆಗಳು ಮಳಿಗೆಗಳನ್ನು ತೆರೆದು ತಮ್ಮ ಯೋಜನೆ ಕಾರ್ಯಕ್ರಮಗಳ ಮಾಹಿತಿಯನ್ನು ನೀಡುತ್ತಿವೆ. ಈ ಬಾರಿ ಮುತುವರ್ಜಿ ವಹಿಸಿ ಅನೇಕ ಇಲಾಖೆಗಳು ಕಾರ್ಯಕ್ರಮಗಳ ವಿವರವನ್ನು ವಸ್ತುಪ್ರದರ್ಶನ ಮಾದರಿಯಲ್ಲಿ ರೂಪಿಸಿವೆ. ರುಡ್ ಸೆಟ್ ಸಂಸ್ಥೆಯು ಸಹ ಮಾಹಿತಿ ಮಳಿಗೆ ಸ್ಥಾಪಿಸಿ ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಕೈಗೊಳ್ಳಲು ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ತಿಳಿಸುತ್ತಿದೆ. ತರಬೇತಿ ಪಡೆದು ಉದ್ಯಮ ಕೈಗೊಂಡಿರುವವರು ತಯಾರಿಸಿರುವ ಉತ್ಪನ್ನಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.
ರೈತರಿಗೆ 2 ದಿನಗಳ ತಾಂತ್ರಿಕ ಮಾಹಿತಿ ಕುರಿತು ತರಬೇತಿ ನೀಡಲಾಗುತ್ತಿದೆ. ಎಲ್ಲಾ ವರ್ಗದ ಜನರನ್ನು ಸೆಳೆಯುವಲ್ಲಿ ಈ ಬಾರಿಯ ಫಲಪುಷ್ಪ ಪ್ರದರ್ಶನ ಏರ್ಪಾಡಾಗಿದೆ.

ವಿಶ್ವದ ಶ್ರೇಷ್ಠ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್ : ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ
ಚಾಮರಾಜನಗರ, ಅ. 20 - ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಸಹೋದರತೆ ತತ್ವಗಳ ಆಧಾರದಲ್ಲಿ ಸಂವಿಧಾನ ರಚಿಸಿದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಶ್ರೇಷ್ಠ ವ್ಯಕ್ತಿಯಾಗಿ ಗುರುತಿಸಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಅಭಿಪ್ರಾಯ ಪಟ್ಟರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನ ಅಂಗವಾಗಿ ಆಯೋಜಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಡುಬಡತನದಲ್ಲಿ ಹುಟ್ಟಿ ಅನೇಕ ಶೋಷಣೆ, ದೌರ್ಜನ್ಯಗಳನ್ನು ಅನುಭವಿಸಿ ಶೋಷಿತರ ಪರವಾಗಿ ದನಿ ಎತ್ತಿದ ಮಹಾನ್ ನಾಯಕರು ಅಂಬೇಡ್ಕರ್ ಅವರು. ಅಂಬೇಡ್ಕರ್ ಅವರಿಗೆ ಜ್ಞಾನದ ದಾಹವಿತ್ತು. ದೇಶದ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ಅರಿತು ಆಳವಾಗಿ ಅಧ್ಯಯನ ನಡೆಸಿ, ಇತರೆ ದೇಶಗಳ ಸಂವಿಧಾನಗಳನ್ನು ಪರಾಮರ್ಶಿಸಿ ನಮಗೆ ಶ್ರೇಷ್ಠಮಟ್ಟದ ಸಂವಿಧಾನವನ್ನು ನೀಡಿದ್ದಾರೆ. ಇದನ್ನು ಪ್ರಪಂಚದ ವಿವಿಧ ರಾಷ್ಟ್ರಗಳು ಅಳವಡಿಸಿಕೊಳ್ಳುವತ್ತ ಮುಂದಾಗಿವೆ. ಇದು ನಮ್ಮ ಹೆಮ್ಮೆ ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಮಹಿಳೆಯರು ಮತ್ತು ಕಾರ್ಮಿಕರಿಗೆ ಸಂವಿದಾನದಡಿಯಲ್ಲಿ ವಿಶೇಷ ಸವಲತ್ತುಗಳನ್ನು ಕಲ್ಪಿಸಿದ ಅಂಬೇಡ್ಕರರು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕುರಿತು ಆಲೋಚಿಸುವ ಆದರ್ಶ ಗುಣವುಳ್ಳವರಾಗಿದ್ದರು. ಅವರ ತತ್ವ ಸಿದ್ದಾಂತಗಳನ್ನು ನಾವೆಲ್ಲರು ಒಮ್ಮತದಿಂದ ಅಳವಡಿಸಿಕೊಳ್ಳಬೇಕಾಗಿದೆ. ಅಲ್ಲದೆ ಮಕ್ಕಳು, ವಿದ್ಯಾರ್ಥಿಗಳಿಗೂ ತಿಳಿ ಹೇಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಕಾವೇರಿ ಅವರು ತಿಳಿಸಿದರು.
ಸಂವಿಧಾನದ ಮೂಲ ಆಶಯಗಳ ಕುರಿತು ವಿಚಾರ ಮಂಡಿಸಿದ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಹ.ರಾ. ಮಹೇಶ್ ಅವರು ಪ್ರಜಾಸತ್ಯಾತ್ಮಕ ಮೌಲ್ಯಗಳ ಆಧಾರದಲ್ಲಿ ಸಂವಿಧಾನ ರೂಪಿಸಿದ ಕೀರ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ದೇಶದ 130 ಕೋಟಿ ಜನರು ನೆಮ್ಮದಿಯಿಂದ ಜೀವನ ನಡೆಸುತ್ತಿರುವುದಕ್ಕೆ ಅಂಬೇಡ್ಕರ್ ರಚಿಸಿದ ಸಂವಿಧಾನ ಕಾರಣ. ಆದರೆ ಅಂಬೇಡ್ಕರ್ ಅವರನ್ನು ಒಂದು ವರ್ಗಗಕ್ಕೆ ಸೀಮಿತಗೊಳಿಸಿರುವುದು ದೇಶದ ಮಹಾ ದುರಂತವೇ ಆಗಿದೆ ಎಂದರು.
ಭಗವಾನ್ ಬುದ್ಧ ಮತ್ತು ಅಂಬೇಡ್ಕರ್ ಈ ಇಬ್ಬರು ಪ್ರಬುದ್ಧ ವ್ಯಕ್ತಿಗಳ ಹಿನ್ನಲೆಯಲ್ಲಿ ಭಾರತೀಯರನ್ನು ಇತರೆ ದೇಶಗಳ ಜನರು ಗುರುತಿಸುತ್ತಿದ್ದಾರೆ. ತಾರತಮ್ಯದಿಂದ ಕೂಡಿದ್ದ ಸಮಾಜಕ್ಕೆ ಮಾದರಿ ಸಂವಿಧಾನವನ್ನು ಕೊಡುಗೆ ನೀಡಿದ ಅಂಬೇಡ್ಕರ್ ಸಮಾನತೆಯ ಹರಿಕಾರರು ಹೌದು. ಪ್ರಸ್ತುತ ಅತಂಕದ ಸನ್ನಿವೇಶದ ನಡುವೆ ಸಂವಿಧಾನವನ್ನು ಉಳಿಸಿಕೊಂಡು ಹೋಗುವಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕಿದೆ ಎಂದು ಮಹೇಶ್ ಅವರು ತಿಳಿಸಿದರು.
ವಿಶ್ವಮಟ್ಟದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಕುರಿತು ವಿಚಾರ ಸಾದರಪಡಿಸಿದ ಬೆಂಗಳೂರಿನ ಉಚ್ಚ ನ್ಯಾಯಾಲಯದ ಖ್ಯಾತ ವಕೀಲರಾದ ಎಚ್. ಮೋಹನ್‍ಕುಮಾರ್ ಅವರು ಮಾತನಾಡಿ ಶೋಷಿತರು ಸೇರಿದಂತೆ ದೇಶದ ಎಲ್ಲ ಜನರು ಅಂಬೇಡ್ಕರ್ ಅವರ ದೃಷ್ಠಿಯಲ್ಲಿ ಕೇಂದ್ರಬಿಂದುವಾಗಿದ್ದರು. ಎಲ್ಲಾ ಸಮುದಾಯಗಳ ಸಮಸ್ಯೆಗಳನ್ನು ಪರಿಹರಿಸಿ ಘನತೆಯಿಂದ ಜೀವಿಸುವಂತೆ ಮಾಡುವುದೇ ಅಂಬೇಡ್ಕರ್ ಅವರ ಕನಸಾಗಿತ್ತು ಅದ್ದರಿಂದಲೇ ಅಂಬೇಡ್ಕರ್ ಅವರು ವಿಶ್ವಮಾನ್ಯರಾಗಿದ್ದಾರೆ ಎಂದರು.
ದೇಶದ ಸಮಾನತೆಗಾಗಿ ಸಂಸತ್ತು, ವಿಧಾನಸಭೆ, ಪರಿಷತ್ತು ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಎಲ್ಲಾ ಸಮುದಾಯದವರು ಆಡಳಿತ ನಡೆಸುವಂತಾಗಬೇಕು. ರಾಜಕೀಯ, ಆಡಳಿತ, ಕಾರ್ಯಾಂಗ, ನ್ಯಾಯಾಂಗಗಳಲ್ಲಿ ಎಲ್ಲರೂ ಭಾಗವಹಿಸಬೇಕೆಂಬುದೇ ಅಂಬೇಡ್ಕರ್ ಅವರ ಮೂಲ ಆಶಯವಾಗಿತ್ತು. ಎಂದು ಮೋಹನ್‍ಕುಮಾರ್ ಅಭಿಪ್ರಾಯ ಮಂಡಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಟಿ. ನರಸೀಪುರದ ನಳಂದ ಬೌದ್ಧ ವಿಹಾರದ ಪೂಜ್ಯ ಬೋಧಿರತ್ನ ಬಂತೇಜಿಯವರು ಅವರು ಮಾತನಾಡಿ ಅಂಬೇಡ್ಕರರ ಆಲೋಚನೆಗಳು ನಮ್ಮ ಆಲೋಚನೆಗಳಾಗಬೇಕು. ಆಗ ಮಾತ್ರ ಸಂವಿಧಾನದ ಆಶಯಗಳು ಸಾರ್ಥಕವಾಗುತ್ತವೆ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪದ್ಮಾಶೇಖರ್ ಪಾಂಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕೃಷಿ ಇಲಾಖೆಯ ಜಂಟಿನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ತಿರುಮಲೇಶ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಪೂಜ್ಯ ಬೋಧಿರತ್ನ ಬಂತೇಜಿ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಇತರೆ ಗಣ್ಯರು ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನಾ ಕಲೆ ನಟರಾಜು ತಂಡದಿಂದ ಅಂಬೇಡ್ಕರ್ ಕುರಿತು ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

            ಅ. 20ರಂದು ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮದಿನ ಅಂಗವಾಗಿ ವಿಚಾರ ಸಂಕಿರಣ
ಚಾಮರಾಜನಗರ, ಅ. 19  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮ ದಿನ ಅಂಗವಾಗಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಟಿ. ನರಸೀಪುರದ ನಳಂದ ಬೌದ್ಧ ವಿಹಾರದ ಪೂಜ್ಯ ಬೋಧಿರತ್ನ ಬಂತೇಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಬೆಂಗಳೂರಿನ ಮಾನ್ಯ ಉಚ್ಚ ನ್ಯಾಯಾಲಯದ ಖ್ಯಾತ ವಕೀಲರಾದ ಎಚ್. ಮೋಹನ್‍ಕುಮಾರ್ ಅವರು ವಿಶ್ವಮಟ್ಟದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಹ.ರಾ. ಮಹೇಶ್ ಅವರು ಸಂವಿಧಾನದ ಮೂಲ ಆಶಯಗಳ ಕುರಿತು ವಿಚಾರ ಮಂಡಿಸುವರು ಎಂದು ವಿಚಾರ ಸಂಕಿರಣ ಉಪಸಮಿತಿ ಪ್ರಕಟಣೆ ತಿಳಿಸಿದೆ.
ಅ. 20ರಂದು ನಗರದಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಚಾಮರಾಜನಗರ, ಅ. 19   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಅಕ್ಟೋಬರ್ 20ರಿಂದ 22ರವರೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಂಡಿರುವ ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ಅಕ್ಟೋಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್.ಮಹೇಶ್ ಅವರು ಮಳಿಗೆಗಳ ಉದ್ಘಾಟನೆ ನೆರವೇರಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಅವರು ಫೋಕಲ್ ಪಾಯಿಂಟ್ ಹಾಗೂ ವರ್ಟಿಕಲ್ ಗಾರ್ಡನ್ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ತೋಟಗಾರಿಕೆ ಇಲಾಖೆಯ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪಿ. ಚೆನ್ನಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷರಾದ ಬಿ.ಕೆ. ಶ್ರೀಕಂಠಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದಲ್ಲಿ  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಅ. 20 ರಿಂದ 22ರವರೆಗೆ ನಗರದಲ್ಲಿ ಫಲಪುಷ್ಪ ಪ್ರದರ್ಶನ: ಕಾರ್ಯಕ್ರಮಗಳ ವಿವರ
     ಚಾಮರಾಜನಗರ, ಅ. 19:- ತೋಟಗಾರಿಕಾ ಇಲಾಖೆ ವತಿಯಿಂದ ಫಲಪುಷ್ಪ ಪ್ರದರ್ಶನ ಅಂಗವಾಗಿ  ಅಕ್ಟೋಬರ್ 20 ರಿಂದ 22ರವರೆಗೆ ವಿವಿಧ ತರಬೇತಿ ಹಾಗೂ ಸ್ಪರ್ಧೆಗಳನ್ನು ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
     ಅಕ್ಟೋಬರ್ 20ರಂದು ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವಿದೆ. ಅಕ್ಟೋಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ರಂಗೋಲಿ ಸ್ಪರ್ಧೆ ನಡೆಯಲಿದೆ. ಅಕ್ಟೋಬರ್ 22ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ಪಾಲಿಹೌಸ್‍ನಲ್ಲಿ ತೋಟಗಾರಿಕೆ ಬೆಳೆಗಳ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಬಿ.ಎಲ್. ಶಿವಪ್ರಸಾದ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಅ. 21ರಂದು ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭ
ಚಾಮರಾಜನಗರ, ಅ. 19- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 127ನೇ ಜಯಂತಿಯನ್ನು ಅಕ್ಟೋಬರ್ 21ರಂದು ನಗರದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾರಂಭದ ದಿವ್ಯ ಸಾನಿಧ್ಯವನ್ನು ನಗರದ ಪ್ರಸ್ತಾವಿತ ನಳಂದ ವಿಶ್ವವಿದ್ಯಾನಿಲಯದ ಪೂಜ್ಯ ಬೌದ್ಧ ಬಿಕ್ಕುಗಳಾದ ಬೋಧಿದತ್ತ ಬಂತೇಜಿ ಅವರು ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಎನ್. ಮಹೇಶ್ ಅವರು ಸಮಾರಂಭ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್. ಉಮಾವತಿ, ಸಾಮಾಜಿಕ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ಗಾಂಧಿ ನಗರದ ಶ್ರೀ ಉರಿಲಿಂಗ ಪೆದ್ದೀಶ್ವರ ಸಂಸ್ಥಾನ ಮಠದ ಜ್ಞಾನ ಪ್ರಕಾಶ್ ಸ್ವಾಮಿಜೀ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.




































x

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು