ಮುಸ್ಲಿಂ ಸಮುದಾಯದ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ: ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ನ. 02 - ಮುಸ್ಲಿಂ ಸಮುದಾಯ ಜನರ ಸಮಸ್ಯೆ, ಬೇಡಿಕೆ ಮತ್ತು ಕುಂದುಕೊರತೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ನಗರದ ಮುಸ್ತಾಫ ಮಸೀದಿ ಮುಂಭಾಗದಲ್ಲಿ ಮುಸ್ಲಿಂ ಸಮುದಾಯದ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಅಗತ್ಯ ಅನುದಾನ ಒದಗಿಸಿದೆ. ನಗರದ ಗಾಳೀಪುರ, ಅನ್ವರ್ ಪಾಷ ಮೊಹಲ್ಲಾ, ಸೌಹಾರ್ಧ ನಗರ, ಬೀಡಿ ಕಾಲೋನಿ ಸೇರಿದಂತೆ ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಕೆಲ ಬಡಾವಣೆಗಳು ಇನ್ನೂ ಅಭಿವೃದ್ಧಿಯಾಗಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಬಡಾವಣೆ ನಿವಾಸಿಗಳ ಕುಂದುಕೊರತೆಗಳನ್ನು ಪರಿಹರಿಸಲು ಆದ್ಯತೆ ನೀಡಲಾಗುವುದು ಎಂದರು.
ಬಡಾವಣೆಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ವ್ಯವಸ್ಥೆ, ಶೌಚಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಸುಸಜ್ಜಿತ ಶಾಲೆಗಳು, ಅಂಗನವಾಡಿ ಕಟ್ಟಡಗಳು, ವಿದ್ಯಾರ್ಥಿನಿಲಯಗಳ ಸುಧಾರಣೆ, ನಿರುದ್ಯೋಗ ನಿವಾರಣೆ, ರುದ್ರಭೂಮಿಗೆ ಜಾಗ, ಸಮುದಾಯ ಭವನ ಇನ್ನಿತರೆ ಮೂಲಸೌಲಭ್ಯಗಳನ್ನು ಒದಗಿಸಬೇಕಾದ ಅವಶ್ಯವಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸೂಚನೆ ನೀಡಿದರು.
ಸಮುದಾಯ ಭವನ ಮತ್ತು ಶಾದಿಮಹಲ್ ನಿರ್ಮಾಣಕ್ಕಾಗಿ ನಿವೇಶನವನ್ನು ನೀಡಲು ಪರಿಶೀಲನೆ ನಡೆಸಲಾಗುವುದು. ಸಮುದಾಯದವರು ಹೆಚ್ಚಾಗಿ ವಾಸಿಸುವ ಬಡಾವಣೆಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸ್ಥಾಪನೆಗಾಗಿ ಬ್ಯಾಂಕರ್‍ಗಳ ಜತೆ ಸಭೆ ನಡೆಸಿ ತೀರ್ಮಾನಿಸಲಾಗುವುದು. ಅಲ್ಲದೆ ಪಟ್ಟಣದಲ್ಲಿ ತಲಾ ಒಂದು ಸರ್ಕಾರಿ ಐ.ಟಿ.ಐ ಮತ್ತು ಪಾಲಿಟೆಕ್ನಿಕ್ ಕಾಲೇಜು ಇರುವುದರಿಂದ ಖಾಸಗಿ ಕಾಲೇಜು ಆರಂಭಕ್ಕೆ ಸಹಕಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ 237 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಯಲ್ಲಿ ತಯಾರಿಸಲಾಗಿದ್ದು, ಹೆಚ್ಚುವರಿಯಾಗಿ ಅಂದಾಜು 40 ಕೋಟಿ ರೂ.ಅಗತ್ಯವಿದೆ. ಪಟ್ಟಣದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಯಾವ ಭಾಗದಲ್ಲಿಯೆ ಆದರೂ ಕಳಪೆ ಕಾಮಗಾರಿ ಕಂಡುಬಂದರೆ ಜಿಲ್ಲಾಧಿಕಾರಿಗಳು ಅಥವಾ ಸಚಿವರ ಗಮನಕ್ಕೆ ತಂದರೆ ತಕ್ಷಣವೇ ಕ್ರಮ ವಹಿಸಲಾಗುವುದು ಎಂದರು.
ಸ್ವಚ್ಚಭಾರತ ಅಭಿಯಾನದಡಿಯಲ್ಲಿ ಪ್ರತಿ ವಾರ್ಡ್ ಒಂದೊಂದು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ಕಾಮಗಾರಿಯನ್ನು ಸದ್ಯದಲ್ಲಿಯೆ ಆರಂಭವಾಗಬೇಕಾಗಿದೆ ಎಂದು ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಜನಸಂಪರ್ಕ ಸಭೆ ಸೂಕ್ತ ವೇದಿಕೆಯಾಗಿದೆ. ಸಮುದಾಯದ ಅಭಿವೃದ್ಧಿಗಾಗಿ ಏನೇನು ಕೆಲಸಗಳ ಆಗಬೇಕು. ಯಾವ ಇಲಾಖೆಗಳ ಮೂಲಕ ಆಗಬೇಕಾಗಿದೆ ಎಂಬುದನ್ನು ಸಲ್ಲಿಸಿದರೆ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಲು ಅನುಕೂಲವಾಗುತ್ತದೆ ಎಂದರು.
ಅಲ್ಪಸಂಖ್ಯಾತರ ಹೆಣ್ಣುಮಕ್ಕಳ ವಿದ್ಯಾರ್ಥಿನಿಲಯಗಳಲ್ಲಿ ಮುಸ್ಲಿಂ ಸಮುದಾಯದ ಮಕ್ಕಳ ಸಂಖ್ಯೆ ಅತೀ ಕಡಿಮೆ ಇದೆ. ಇದು ಸರಿಯಲ್ಲ. ಸಮುದಾಯದ ಅಭಿವೃದ್ಧಿಗಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯವಿದೆ. ಮುಖಂಡರು ಈ ಬಗ್ಗೆ ಕಾಳಜಿ ವಹಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿ ಕಾವೇರಿ ಅವರು ಸಲಹೆ ಮಾಡಿದರು.
ನಗರಸಭಾ ಸದಸ್ಯರಾದ ಸಮೀದ್ ಉಲ್ಲಾ, ಜಾವೇದ್, ಅಬ್ರಾರ್ ಅಹಮದ್, ನಗರಸಭೆ ಅಧ್ಯಕ್ಷರಾದ ರಾಜಣ್ಣ, ಡಿ.ವೈ.ಎಸ್.ಪಿ ಜಯಕುಮಾರ್, ಪಿ.ಡಬ್ಲೂ.ಡಿ ಇಂಜಿನಿಯರ್ ವಿಜಯ್‍ಕುಮಾರ್. ಕೆ.ಇ.ಬಿ ಇಂಜಿನಿಯರ್ ರಾಜು, ಮಾಜಿ ಚುಡಾ ಅದ್ಯಕ್ಷರಾದ ಸಯ್ಯದ್ ರಫೀ, ಸಹೇಲ್ ಅಲೀ ಖಾನ್, ಮಾಜಿ ನಗರಸಭಾ ಅಧ್ಯಕ್ಷರಾದ ಸಯ್ಯದ್ ಅತೀಕ್ ಅಹಮದ್, ಮುಖಂಡರಾದ ಜಿಯಾವಲ್ಲಾ, ರಿಷದುಲ್ಲಾ, ಆಲ್ ಆದಿಶ್ ಜಿಯಾವುಲ್ಲಾ, 21 ಮುಸ್ಲಿಂ ಮೌಲ್ವಿ ಧರ್ಮಗುರುಗಳು, ಇತರರು ಸಭೆಯಲ್ಲಿ ಹಾಜರಿದ್ದರು.
ಪ.ಪಂ. ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 03 - ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2018-19ನೇ ಸಾಲಿಗೆ ಮೆಟ್ರಿಕ್ ನಂತರದ ವಿವಿಧ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ.ಗಳು. ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು.
ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‍ಸೈಟ್ ತಿತಿತಿ.sಛಿhoಟಟಚಿಡಿshiಠಿs.gov.iಟಿ ತೆರೆದು ಸ್ಟೇಟ್ ಸ್ಕೀಮ್ ಲಿಂಕ್‍ನಲ್ಲಿ ದೊರಕುವ ಏಚಿಡಿಟಿಚಿಣಚಿಞಚಿ PಔSಖಿ ಒಇಖಿಖIಅ SಅಊಔಐಔಖSಊIP(PಒS) ಜಿoಡಿ Sಖಿ Sಣuಜeಟಿಣs-ಏಂಖಓಂಖಿಂಏಂ ಅಡಿಯಲ್ಲಿ ಸಲ್ಲಿಸಬೇಕು. ನವೀಕರಣ ವಿದ್ಯಾರ್ಥಿಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಯ ಆಧಾರ್ ಇಐಡಿ ಸಂಖ್ಯೆ ಹಾಗೂ ಕಾರ್ಡ್‍ನಲ್ಲಿ ನಮೂದಿಸಿರುವಂತೆ ಹೆಸರು, ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್, ಮೊಬೈಲ್ ಸಂಖ್ಯೆ, ಜಾತಿ, ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಕಳೆದ ಸಾಲಿನ ಅಂಕಪಟ್ಟಿಗಳೊಂದಿಗೆ ಸಲ್ಲಿಸಬೇಕು.
ವಿದ್ಯಾರ್ಥಿವೇತನ ನೊಂದಾಯಿಸುವ ವೇಳೆ ತಾಂತ್ರಿಕ ದೋಷ ಕಂಡುಬಂದರೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0120-6619540, 080-22261789 ಸಂಪರ್ಕಿಸಿ ಪಡೆಯುವುದು.
ಇತರೆ ಮಾಹಿತಿಗಾಗಿ ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08226-226070, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ 08226-223823, ಕೊಳ್ಳೇಗಾಲದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂಖ್ಯೆ 08224-255060, ಗುಂಡ್ಲುಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ. 08229-222984, ಯಳಂದೂರು ಸಮಾಜ ಕಲ್ಯಾಣ ಇಲÁಖೆ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ 08226-240309 ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ದಿಮೆ ಪರವಾನಗಿ ಪಡೆಯಲು ನಗರಸಭೆ ಸೂಚನೆ
ಚಾಮರಾಜನಗರ, ನ. 03 ನಗರಸಭೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಈಗಾಗಲೇ ಪರವಾನಗಿ ಪಡೆದಿರುವವರು ಪ್ರಸಕ್ತ ಸಾಲಿಗೆ ನವೀಕರಿಸಿಕೊಳ್ಳಬೇಕೆಂದು ನಗರಸಭೆ ಸೂಚಿಸಿದೆ.
2018-19ನೇ ಸಾಲಿಗೆ ಪರವಾನಗಿ ನವೀಕರಿಸಬೇಕಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ಸರಳವಾಗಿ ಉದ್ದಿಮೆ ಪರವಾನಗಿ ನೀಡುವ ಉದ್ದೇಶದಿಂದ ಆನ್‍ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಎಲ್ಲ ಉದ್ದಿಮೆದಾರರು ಆನ್‍ಲೈನ್ ಮೂಲಕವೇ ಉದ್ದಿಮೆ ಪರವಾನಗಿಗಾಗಿ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು.
ಕರ್ನಾಟಕ ಪುರಸಭೆ ಕಾಯಿದೆ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1978ರ ಪ್ರಕಾರ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಉದ್ದಿಮೆಗಳು ಕಡ್ಡಾಯವಾಗಿ ಪರವಾನಗಿ ಪಡೆಯಲೇಬೇಕಿದೆ. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ವಿಶೇಷ ಆಂದೋಲನ ಆಯೋಜಿಸಿ ಉದ್ದಿಮೆಗಳಿಗೆ ಪರವಾನಗಿಯನ್ನು ಪ್ರಮುಖ ಉದ್ದಿಮೆ ಸ್ಥಳಗಳಲ್ಲಿ ತಂತ್ರಾಂಶದ ಮೂಲಕ ಸೃಜಿಸಿದ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಗಿಯನ್ನು ನಗರಸಭಾ ವತಿಯಿಂದ ನೀಡಲಾಗುವುದು.
ಪಟ್ಟಣ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ನಗರಸಭೆ ನಿಗದಿಪಡಿಸಿದ ಸಮರ್ಪಕ ದಾಖಲಾತಿಗಳನ್ನು ನವೆಂಬರ್ 2018ರ ಒಳಗಾಗಿ ಸಲ್ಲಿಸಿ ಪರವಾನಗಿ ಹೊಸದಾಗಿ ಪಡೆಯಲು ಹಾಗೂ ಪಡೆದಿರುವವರು ನವೀಕರಿಸಿಕೊಳ್ಳಬೇಕು. ಪಟ್ಟಣದ ಪ್ರಮುಖ ಅಂಗಡಿ ಬೀದಿಗಳಲ್ಲಿ ಆಟೋ ಪ್ರಚಾರ ಹಾಗೂ ಕರಪತ್ರಗಳ ಮೂಲಕ ಮಾಹಿತಿ ನೀಡಲಾಗುವುದು. ಈ ಅವಕಾಶವನ್ನು ಉದ್ದಿಮೆದಾರರು ಸದುಪಯೋಗ ಮಾಡಿಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ.ಪಂ.ವಿದ್ಯಾಥಿಗಳಿಂದ ಎನ್‍ಎಸ್‍ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 03 - 2018-19ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಕೋರ್ಸುಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿಯನ್ನು ವೆಬ್‍ಸೈಟ್ hಣಣಠಿ;//sಛಿhoಟಚಿಡಿshiಠಿs.gov.iಟಿ ತೆರೆದು ಸ್ಟೇಟ್ ಸ್ಕೀಮ್ ಲಿಂಕ್‍ನಲ್ಲಿ ದೊರಕುವ ಏಚಿಡಿಟಿಚಿಣಚಿಞಚಿ PಔSಖಿ ಒಇಖಿಖIಅ SಅಊಔಐಔಖSಊIP(PಒS) ಜಿoಡಿ Sಖಿ Sಣuಜeಟಿಣs-ಏಂಖಓಂಖಿಂಏಂ ಅಡಿಯಲ್ಲಿ ಡಿಸೆಂಬರ್ 15ರೊಳಗೆ ಸಲ್ಲಿಸಬೇಕು.
ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ದೋಷ ಕಂಡುಬಂದರೆ ಸಹಾಯವಾಣಿ ಸಂಖ್ಯೆ 0120-6619540, ಇ-ಮೇಲ್ ಟಿsಠಿಜiಡಿeಛಿhoಡಿsಣ@gmಚಿiಟ.ಛಿom ಸಂಪರ್ಕಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನ. 5ರಂದು ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಚಾಮರಾಜನಗರ, ನ. 03- ನಗರದಲ್ಲಿ ನವೆಂಬರ್ 10ರಂದು ಹಜರತ್ ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ್ 5ರಂದು ಬೆಳಿಗ್ಗೆ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆÀಯಲಾಗಿದೆ.
ಪೂರ್ವಭಾವಿ ಸಭೆಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯ ಹಾಗೂ ಸಂಘಟನೆಗಳ ಮುಖಂಡರು ಹಾಜರಾಗಿ ಸಲಹೆ, ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಸಿರು ಹಾಗೂ ಸ್ವಸ್ಥ ದೀಪಾವಳಿ : ವಾಯು, ಶಬ್ದ ಮಾಲಿನ್ಯ ತಡೆಯಲು ಸೂಚನೆ
ಚಾಮರಾಜನಗರ, ನ. 03 ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ, ಆರೋಗ್ಯ ಸಂರಕ್ಷಣೆ ದೃಷ್ಟಿಯಿಂದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದುಪಡಿ 1999 ಮತ್ತು 2000 ಅಡಿಯಲ್ಲಿ ಹಲವು ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದ್ದಾರೆ.
125 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ದ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ, ಇನ್ನಿತರ ಸ್ಥಳಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಸೂಚಿಸಿರುವ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಈ ನಿಟ್ಟಿನಲ್ಲಿ ನಾಗರಿಕರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯುಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿಯನ್ನಾಗಿ ಆಚರಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನ ಕಾರ್ಯಕ್ರಮ
ಚಾಮರಾಜನಗರ, ನ. 03- ತಾಲೂಕು ಪಂಚಾಯತ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇ-ಸ್ವತ್ತು ಖಾತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಾಗರಿಕರು ತಮ್ಮ ಇ-ಸ್ವತ್ತು ಖಾತಾಗಳನ್ನು ಪಡೆಯಲಿಚ್ಚಿಸಿದಲ್ಲಿ ಸಂಬಂಧಿತ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ವಹಿಸಲಾಗುವುದು ಅಥವಾ ಹಿಂಬರಹ ನೀಡಲಾಗುವುದು.
ಅಭಿಯಾನದ ಮೇಲುಸ್ತುವಾರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಹಿಸಲಿದ್ದು, ನಾಗರಿಕರು ಈ ಅಭಿಯಾನದ ಸದುಪಯೋಗ ಪಡೆಯುವಂತೆ ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.
ನ. 12ರಂದು ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ
ಚಾಮರಾಜನಗರ, ನ. 02 - ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ 6ರಿಂದ 16 ವರ್ಷದ ವಯೋಮಿತಿಯುಳ್ಳ ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗೆ ಅಗತ್ಯವಾದ ಸಾಧನ, ಸಲಕರಣೆಗಳನ್ನು ವಿತರಿಸುವ ಸಂಬಂಧ ನವೆಂಬರ್ 12ರಂದು ವೈದ್ಯಕೀಯ ತಪಾಸಣಾ ಶಿಬಿರವನ್ನು ನಗರದ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ಏರ್ಪಡಿಸಲಾಗಿದೆ ಎಂದು ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂಗಾರು, ಬೇಸಿಗೆ ಹಂಗಾಮಿಗೆ ಫಸಲ್ ಭೀಮಾ ವಿಮಾ ಯೋಜನೆ ಅನುಷ್ಠಾನ
ಚಾಮರಾಜನಗರ, ನ. 03 - ಕೃಷಿ ಇಲಾಖೆ ವತಿಯಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ವಿಮಾ ಯೋಜನೆಯನ್ನು 2018-1ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಜಿಲ್ಲೆಯ ಗ್ರಾಮಪಂಚಾಯಿತಿ ಹಾಗೂ ಹೋಬಳಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ನೀರಾವರಿ ಆಶ್ರಯದಲ್ಲಿ ಭತ್ತ, ಮುಸುಕಿನ ಜೋಳ, ರಾಗಿ, ಈರುಳ್ಳಿ, ಟೊಮ್ಯಾಟೋ ಹಾಗೂ ಮಳೆ ಆಶ್ರಯದಲ್ಲಿ ರಾಗಿ, ಮುಸುಕಿನ ಜೋಳ, ಹುರುಳಿ ಹಾಗೂ ಹೆಸರು ಬೆಳೆಗಳನ್ನು ಮತ್ತು ಬೇಸಿಗೆ ಹಂಗಾಮಿಗೆ ನೀರಾವರಿ ಆಶ್ರಯದಲ್ಲಿ ಭತ್ತ, ರಾಗಿ, ಈರುಳ್ಳಿ, ಟೊಮ್ಯಾಟೋ ಬೆಳೆಗಳನ್ನು ಹೋಬಳಿಮಟ್ಟದಲ್ಲಿ ವಿಮೆಗೆ ಒಳಪಡಿಸಲಾಗಿದೆ.
ಹಿಂಗಾರು ಹಂಗಾಮಿಗೆ ಗ್ರಾಮಪಂಚಾಯಿತಿ ಮಟ್ಟದಲ್ಲಿ ಚಾಮರಾಜನಗರ, ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ ತಾಲೂಕುಗಳಲ್ಲಿ ಹುರುಳಿ(ಮಳೆ ಆಶ್ರಿತ) ಬೆಳೆಯನ್ನು ವಿಮೆಗೊಳಪಡಿಸಲಾಗಿದೆ. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ನೀಡಬೇಕು. ಹೆÀಚ್ಚಿನ ಮಾಹಿತಿಗಾಗಿ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರವನ್ನು ಅಥವಾ ಕೃಷಿ ನಿರ್ದೇಶಕರ ಕಚೇರಿ ಮತ್ತು ಬ್ಯಾಂಕ್ ನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 5ರಂದು ನಗರದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ, ಧನ್ವಂತರಿ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ನ. 03 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ಜಿಲ್ಲಾ ಪಂಚಾಯತ್‍ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ. ಮರುಗದಮಣಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರದ ಜೆಎಸ್‍ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜಿ. ವಿನಯ್‍ಕುಮಾರ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 4ರಂದು ನಗರದಲ್ಲಿ ಎನ್‍ಟಿಎಸ್‍ಇ, ಎನ್‍ಎಂಎಸ್‍ಎಸ್ ಪರೀಕ್ಷೆ
ಚಾಮರಾಜನಗರ, ನ. 03 - ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಚಾಮರಾಜನಗರ ತಾಲೂಕಿನಿಂದ 2018-19ನೇ ಸಾಲಿಗೆ ಅರ್ಜಿ ಸಲ್ಲಿಸಿದ್ದ ಎನ್‍ಟಿಎಸ್‍ಇ ಮತ್ತು ಎನ್‍ಎಂಎಂಎಸ್ ಪರೀಕ್ಷೆಗಳಿಗೆ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನವೆಂಬರ್ 4ರಂದು ನಗರದಲ್ಲಿ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ-
10ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‍ಟಿಎಸ್‍ಇ ಪರೀಕ್ಷೆಯು ನಗರದ ಸತ್ತಿ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
8ನೇ ತರಗತಿ ವಿದ್ಯಾರ್ಥಿಗಳಿಗೆ ಎನ್‍ಎಂಎಂಎಸ್ ಪರೀಕ್ಷೆಯು ನಗರದ ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕರ ಪ್ರೌಢಶಾಲೆ ಹಾಗೂ ಸಿದ್ದಾರ್ಥನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
x
No comments:
Post a Comment