Thursday, 8 November 2018

05-11-20108 (ನ. 10ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ : ಪೂರ್ವಭಾವಿ ಸಭೆಯಲ್ಲಿ ನಿರ್ಧಾರ)


ನ. 10ರಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ : ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಚಾಮರಾಜನಗರ, ನ. 05 :- ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪುಸುಲ್ತಾನ್ ಅವರ ಜಯಂತಿ ಆಚರಣೆಯನ್ನು ನವೆಂಬರ್ 10ರಂದು ನಗರದಲ್ಲಿ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಜರತ್ ಟಿಪ್ಪುಸುಲ್ತಾನ್ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ತೀರ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಟಿಪ್ಪುಸುಲ್ತಾನ್ ಅವರ ವಿಚಾರಗಳ ಕುರಿತು ಉಪನ್ಯಾಸ ನೀಡಲು ಸೂಕ್ತ ಮುಖ್ಯ ಭಾಷಣಕಾರರನ್ನು ಆಯ್ಕೆ ಮಾಡಿ ಆಹ್ವಾನಿಸಲು ಅವಶ್ಯ ಕ್ರಮ ತೆಗೆದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಬೇಕಿರುವ ಸಿದ್ಧತೆಗಳನ್ನು ಅಧಿಕಾರಿಗಳು ಸುಸೂತ್ರವಾಗಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಆಹ್ವಾನ ಪತ್ರಿಕೆ, ಮುದ್ರಣ, ವಿತರಣೆಯಂತಹ ಕೆಲಸಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ವೇದಿಕೆ ಸಿದ್ಧತೆಗೆ ಸಹ ಅಗತ್ಯ ಅನುಸಾರ ಕಾರ್ಯೋನ್ಮುಖರಾಗಬೇಕು. ಶಿಷ್ಠಾಚಾರ ಪ್ರಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಧಿಕಾರಿಗಳು ಎಲ್ಲ ಕ್ರಮಗಳಿಗೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಕಾವೇರಿ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಅವರು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಮಾತನಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚೆನ್ನಪ್ಪ, ಇತರರು ಸಭೆಯಲ್ಲಿ ಹಾಜರಿದ್ದರು.
ಪ.ಜಾ. ನಿರುದ್ಯೋಗಿಗಳಿಂದ ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 05 - ಸಮಾಜ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ 2018-19ನೇ ಸಾಲಿಗೆ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ ಯುವತಿಯರಿಗೆ ಭಾರಿ ವಾಹನ ಚಾಲನಾ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ 21 ರಿಂದ 35ರ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಕನಿಷ್ಟ 160 ಸೆಂ.ಮೀ ಎತ್ತರ, 50 ಕೆಜಿ ತೂಕ ಇದ್ದು ಅಂಗವಿಕಲರಾಗಿರಬಾರದು. ದೈಹಿಕ ಅರ್ಹತೆ ಪ್ರಮಾಣ ಪತ್ರವನ್ನು ಜಿಲ್ಲಾ ವೈದ್ಯಾಧಿಕಾರಿಗಳಿಂದ ದೃಢೀಕರಿಸಿರಬೇಕು. ಯಾವುದೇ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಅಥವಾ ತರಬೇತಿ ಪಡೆಯುತ್ತಿರಬಾರದು.  ಪೋಷಕರ ಕುಟುಂಬದ ವಾರ್ಷಿಕ ಆದಾಯ ಮಿತಿ 2 ಲಕ್ಷ ರೂ. ಮೀರಿರಬಾರದು. ಲಘು ವಾಹನ ಪರವಾನಗಿಯನ್ನು ಪಡೆದು ಒಂದು ವರ್ಷ ತುಂಬಿರಬೇಕು. ಪರವಾನಗಿ ಪ್ರತಿ ಲಗತ್ತಿಸಬೇಕು. ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಬೇಕು. ಎಲ್ಲ ಜೆರಾಕ್ಸ್ ಪ್ರತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 24ರೊಳಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಚಾಮರಾಜನಗರ, ನ. 05 (- ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94-ಎ(4)ಗೆ ತಿದ್ದುಪಡಿ ತರಲಾಗಿದ್ದು ತತ್ಸಂಬಂಧ ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 108ಸಿಸಿಸಿ ಅನ್ನು ಸೇರ್ಪಡಿಸಿ ನಮೂನೆ 57ರಡಿ ಅರ್ಜಿ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಲು 2019ರ ಮಾರ್ಚ್ 16ರವರೆಗೆ ಕಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 05  - ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋಧನಾ ಆಸ್ಪತ್ರೆಗೆ ಶಿಷ್ಯ ವೇತನ ಆಧಾರದ ಮೇಲೆ ಶುಶ್ರೂಷಕರ ಹುದ್ದೆಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನವೆÉಂಬರ್ 20ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಸಂಸ್ಥೆ ಅಂತರ್ಜಾಲ ತಾಣ ತಿತಿತಿ.ಛಿimsಛಿಡಿಟಿಚಿgಚಿಡಿಚಿ.ಞಚಿಡಿ.ಟಿiಛಿ.iಟಿ ಸಂಪರ್ಕಿಸುವಂತೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಮತದಾರರ ಪಟ್ಟಿಗೆ ವಿಕಲಚೇತನರ ಹೆಸರು ಸೇರ್ಪಡೆಗೆ ತಾಲೂಕು ಕೇಂದ್ರಗಳಲ್ಲಿ ವಿಶೇಷ ಕ್ಯಾಂಪ್
ಚಾಮರಾಜನಗರ, ನ. 05 - ಮತದಾರರ ಪಟ್ಟಿಗೆ ವಿಕಲಚೇತನರು ಹೆಸರು ಸೇರ್ಪಡೆಗೊಳಿಸುವ ಸಲುವಾಗಿ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ವಿಶೇಷ ಕ್ಯಾಂಪ್‍ಗಳನ್ನು ಆಯೋಜಿಸಲಾಗಿದೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದ್ದಾರೆ.
ದಿನಾಂಕ 01.01.2019ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ಭಾವಚಿತ್ರ ಇರುವ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ನಡೆಯುತ್ತಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಬಿಡತಕ್ಕವು, ತಿದ್ದುಪಡಿ, ಸ್ಥಳಾಂತರ, ಮತದಾರರ ಪಟ್ಟಿಯಲ್ಲಿ ಕಂಡುಬರುವ ಲೋಪದೋಷಗಳ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 20ರ ಒಳಗೆ ಸಲ್ಲಿಸಬಹುದು.
ದಿನಾಂಕ 01.01.2019ಕ್ಕೆ 18 ವರ್ಷ ತುಂಬಲಿರುವ ವಿಕಲಚೇತನರನ್ನು ಗುರುತಿಸಿ ಅವರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಗುಂಪುಗುಂಪಾಗಿ ಹೆಸರುಗಳನ್ನು ನೊಂದಾಯಿಸಲು ಹಾಗೂ ಈಗಾಗಲೇ 18 ವರ್ಷ ತುಂಬಿದ್ದು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸದೇ ಇರುವ ವಿಕಲಚೇತನರನ್ನೂ ಸಹ ಗುರುತಿಸಿ ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ತಾಲೂಕು ಕೇಂದ್ರದಲ್ಲಿ ವಿಶೇಷ ಕ್ಯಾಂಪ್‍ನ್ನು ಸಹ ನಡೆಸಲಾಗುತ್ತಿದೆ.
ನವೆಂಬರ್ 13ರಂದು ಚಾಮರಾಜನಗರದ ಪಚ್ಚಪ್ಪ ಸರ್ಕಲ್‍ನಲ್ಲಿರುವ ಸರ್ಕಾರಿ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಹಾಗೂ ಯಳಂದೂರಿನ ಸರ್ಕಾರಿ ಬಸ್ ನಿಲ್ದಾಣದ ಹತ್ತಿರ ಇರುವ ಅಂಬೇಡ್ಕರ್ ಭವನದಲ್ಲಿ ಕ್ಯಾಂಪ್ ನಡೆಯಲಿದೆ.
ನವೆಂಬರ್ 14ರಂದು ಕೊಳ್ಳೇಗಾಲದ ಪಿಡಬ್ಲ್ಯೂಡಿ ವಸತಿಗೃಹ ರಸ್ತೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹತ್ತಿರದ ಗುರುಭವನದಲ್ಲಿ ಹಾಗೂ ಹನೂರಿನ ವಿಶೇಷ ತಹಸೀಲ್ದಾರ್ ಕಚೇತಿ ಹತ್ತಿರದ ಸರ್ಕಾರಿ ವಸತಿ ಗೃಹದಲ್ಲಿ ಕ್ಯಾಂಪ್ ವ್ಯವಸ್ಥೆ ಮಾಡಲಾಗಿದೆ.
ನವೆಂಬರ್ 16ರಂದು ಗುಂಡ್ಲುಪೇಟೆಯ ತಾಲೂಕು ಕಚೇರಿ ಹಿಂಭಾಗದ ಸಾಮಥ್ರ್ಯ ಭವನದಲ್ಲಿ ಕ್ಯಾಂಪ್ ನಡೆಸಲಾಗುವುದು.
ಆಯಾ ದಿನಾಂಕದಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಶೇಷ ಕ್ಯಾಪ್‍ಗಳು ಇರಲಿದ್ದು ಅರ್ಹ ವಿಕಲಚೇತನರು ಹಾಜರಾಗಿ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡಿಗೊಳಿಸಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಕವಿಗೋಷ್ಠಿಗೆ ಕವನಗಳ ಆಹ್ವಾನ
ಚಾಮರಾಜನಗರ, ನ. 05  ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಯುವಕವಿಗಳಿಗೆ ವೇದಿಕೆ ಒದಗಿಸುವ ಸಲುವಾಗಿ ಯುವ ಕವಿಗೋಷ್ಠಿ ಕಾರ್ಯಕ್ರಮವನ್ನು ಇದೇ ನವೆಂಬರ್ ತಿಂಗಳಲ್ಲಿ ಏರ್ಪಡಿಸಲಿದ್ದು ಆಸಕ್ತ ಯುವಕವಿಗಳು ತಮ್ಮ 3 ಸ್ವರಚಿತ ಕವನಗಳೊಂದಿಗೆ ಸ್ವವಿವರವನ್ನು ಸಲ್ಲಿಸುವಂತೆ ತಿಳಿಸಲಾಗಿದೆ.
18 ರಿಂದ 30ರ ವಯೋಮಿತಿಯೊಳಗಿನ ಜಿಲ್ಲಾ ವ್ಯಾಪ್ತಿಗೆ ಬರುವ ಯುವಕವಿಗಳು ನವೆಂಬರ್ 15ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಕವನ ಹಾಗೂ ವಿವರವನ್ನು ಸಲ್ಲಿಸಬೇಕು. ಗುಣಮಟ್ಟದ ಕವಿತೆಗಳನ್ನು ಆಧರಿಸಿ 15 ಜನ ಯುವಕವಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ವಯೋಮಿತಿಗೆ ದೃಢೀಕರಣ ಸಲ್ಲಿಸುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ. 08226-222210 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಥಪೂರ್ಣವಾಗಿ ನಡೆದ ಆಯುರ್ವೇದ ದಿನ, ಧನ್ವಂತರಿ ಜಯಂತಿ
ಚಾಮರಾಜನಗರ, ನ. 05   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ 3ನೇ ರಾಷ್ಟ್ರೀಯ ಆಯುರ್ವೇದ ದಿನ ಹಾಗೂ ಧನ್ವಂತರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಜೆಎಸ್‍ಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಉದ್ಘಾಟಿಸಿದರು.
ಇದೇವೇಳೆ ಮಾತನಾಡಿದ ಅವರು ಆಯುರ್ವೇದ ಚಿಕಿತ್ಸಾ ಪದ್ಧತಿಗೆ ತನ್ನದೇ ಆದ ಮಹತ್ವವಿದೆ. ಈ ಹಿಂದೆ ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನೇ ಅನುಸರಿಸಿ ಅನಾರೋಗ್ಯದಿಂದ ಮುಕ್ತರಾಗುತ್ತಿದ್ದರು. ಆಯುರ್ವೇದ ಪದ್ಧತಿಯಿಂದ ಹಲವಾರು ಸಮಸ್ಯೆಗಳಿಗೆ ಪರಿಹಾರವಿದೆ ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್ ಅವರು ಮಾತನಾಡಿ ಹಿಂದಿನ ಕಾಲದಲ್ಲಿ ಆಯುರ್ವೇದ ಪದ್ಧತಿಗೆ ವಿಶೇಷ ಮನ್ನಣೆ ಇತ್ತು. ಅಡ್ಡ ಪರಿಣಾಮಗಳಿಲ್ಲದೆ ರೋಗ ಗುಣಮುಖವಾಗುತ್ತದೆ ಎಂಬ ಮಾತು ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಇದೆ. ಪ್ರಕೃತಿ ಚಿಕಿತ್ಸಾಲಯಗಳಿಗೆ ಇಂದಿಗೂ ಸಹ ಜನರು ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದರು.
ಆಯುರ್ವೇದ ಸೇವೆಗಳು ಜನರಿಗೆ ಲಭ್ಯವಾಗಬೆÉೀಕು ಎನ್ನುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ವತಿಯಿಂದ ಪ್ರತೀ ವರ್ಷ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ಚಿಕಿತ್ಸಾ ಪದ್ಧತಿಗೆ ಬೇಕಿರುವ ಅಗತ್ಯ ಸಲಕರಣೆಗಳನ್ನು ಸಹ ಒದಗಿಸಲಾಗುತ್ತದೆ ಎಂದು ಯೋಗೇಶ್ ಅವರು ತಿಳಿಸಿದರು.
ಮೈಸೂರಿನ ಸರ್ಕಾರಿ ಆಯುರ್ವೇದ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ರಮೇಶ್ ಕುಮಾರ್, ಸಹಪ್ರಾಧ್ಯಾಪಕರಾದ ಡಾ. ಸುಮನ್ ಆಯುರ್ವೇದ ಪದ್ಧತಿ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ಅನುಕೂಲಗಳ ಬಗ್ಗೆ ಉಪನ್ಯಾಸ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಲ್ಲಣ್ಣ ಡಿ. ತೋಟದ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ. ಮರುಗದಮಣಿ, ಜೆಎಸ್‍ಎಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲರಾದ ಜಿ. ವಿನಯ್ ಕುಮಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಏರ್ಪಾಡಾಗಿದ್ದ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಸುಮಾರು 250 ಮಂದಿ ಭೇಟಿ ನೀಡಿ ಆರೋಗ್ಯ ತಪಾಸಣೆಗೆ ಒಳಗಾದರು. ಉಚಿತವಾಗಿ ಔಷಧಿಗಳನ್ನು ಸಹ ವಿತರಿಸಲಾಯಿತು.
x

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು