Friday, 9 November 2018

09--11-2018 (ನ. 10ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮ)


ನ. 10ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮ

ಚಾಮರಾಜನಗರ, ನ. 09- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. 
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಚಿಂತಕರಾದ ಟಿ. ಗುರುರಾಜ್ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ ಮೈಸೂರಿನ ಜûಹೀದುಲ್ಲಾ ಖಾನ್ ಮತ್ತು ತಂಡದವರಿಂದ ಖವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ.10ರಂದು ರ್ಯಾಲಿ, ಜಾಥಾ, ಮೆರವಣಿಗೆ, ಪ್ರತಿಭಟನೆ, ಸಭೆ ಸಮಾರಂಭ ನಿಷೇಧ
ಚಾಮರಾಜನಗರ, ನ. 09:- ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನವೆಂಬರ್ 10ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲಾದ್ಯಂತ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಹಾಗೂ ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್, ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

ಟಿಪ್ಪು ಜಯಂತಿ ಹಿನ್ನೆಲೆ : ಹಲವು ಕ್ರಮಗಳ ಪಾಲನೆಗೆ ಮನವಿ
ಚಾಮರಾಜನಗರ, ನ. 09 - ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳಿಂದ ನವೆಂಬರ್ 10ರಂದು ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲ ಪಟ್ಟಣಗಳಲ್ಲಿ ಹಜರತ್ ಟಿಪ್ಪುಸುಲ್ತಾನ್‍ರವರ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಹಲವು ಕ್ರಮಗಳನ್ನು ಪಾಲನೆ ಮಾಡಿ ಸಹಕರಿಸÀುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನವೆಂಬರ್ 10ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲಾದ್ಯಂತ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಏರ್ಪಡಿಸಿರುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಹೊರತುಪಡಿಸಿ ಯಾವುದೇ ಸಂಘಟನೆಗಳ ಆಯೋಜಕರು, ಕಾರ್ಯಕರ್ತರು, ಸದಸ್ಯರು ಹಾಗೂ ಯಾವುದೇ ವ್ಯಕ್ತಿಗಳು ಯಾವುದೇ ರೀತಿಯ ದ್ವಿಚಕ್ರ ವಾಹನ, ಬೈಕ್, ಇತರೆ ಯಾವುದೇ ವಾಹನಗಳ ಮೂಲಕ ರ್ಯಾಲಿ, ಬಾವುಟ ಜಾಥಾ, ಪಾದಯಾತ್ರೆ, ಮೆರವಣಿಗೆ, ಪ್ರತಿಭಟನೆ, ಸಾರ್ವಜನಿಕ ಸಭೆ, ಖಾಸಗಿ ಸಮಾರಂಭ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಯಾವುದೇ ಉಲ್ಲಂಘನೆಯಾದಲ್ಲಿ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುತ್ತದೆ.
ನವೆಂಬರ್ 9ರ ಮಧ್ಯರಾತ್ರಿಯಿಂದ ನವೆಂಬರ್ 10ರ ಮಧ್ಯರಾತ್ರಿಯವರೆಗೆ ಚಾಮರಾಜನಗರ ನಗರಸಭೆ ಹಾಗೂ ತಾಲ್ಲೂಕು ಕೇಂದ್ರಗಳ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿನ ಮದ್ಯದಂಗಡಿಗಳಲ್ಲಿ (ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ದಾಸ್ತಾನು, ಅಕ್ರಮ ಸಾಗಣೆ ಮಾಡದಂತೆ ನಿಷೇಧಿಸಿ, ಒಣದಿನಗಳೆಂದು ಘೋಷಿಸಲಾಗಿದೆ. ಸದರಿ ಆದೇಶ ಉಲ್ಲಂಘನೆ ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಯಾವುದೇ ಕಾರಣಕ್ಕೂ ಗುಂಪಾಗಿ, ಮೆರವಣಿಗೆ ಮುಖಾಂತರ ಅಥವಾ ಜಾಥಾ, ರ್ಯಾಲಿ ಅಥವಾ ಒಂದಕ್ಕಿಂತ ಹೆಚ್ಚು ವಾಹನಗಳಲ್ಲಿ ಒಟ್ಟಿಗೆ ಆಗಮಿಸಬಾರದು. ಧ್ವಜ, ಬಾವುಟ ಇತ್ಯಾದಿಗಳನ್ನು ಅವರೊಂದಿಗಾಗಲೀ ಅಥವಾ ವಾಹನಗಳಲ್ಲಾಗಲೀ ಪ್ರದರ್ಶನ ಮಾಡುವುದು, ಧ್ವನಿವರ್ದಕಗಳ ಮೂಲಕ ಹಾಡು, ಘೋಷಣೆಗಳನ್ನು ಕೂಗುವುದುನ್ನು, ನೃತ್ಯ ಅಥವಾ ಬೇರಾವುದೆ ಪ್ರಚೋದನಕಾರಿ ಅಂಶಗಳನ್ನ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಟಿಪ್ಪು ಜಯಂತಿ ಅಂಗವಾಗಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಹಾಕಲಾಗುವ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳನ್ನು ಹೊರತು ಪಡಿಸಿ ಬೇರಾವುದೆ ರೀತಿಯ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳನ್ನು ಹಾಕಲು ಅವಕಾಶವಿರುವುದಿಲ್ಲ. ಉಲ್ಲಂಘನೆಯಾದಲ್ಲಿ ಅಂತಹವರುಗಳ ವಿರುದ್ಧ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೂ ಆಸ್ಪದ ನೀಡಬಾರದು.
ಜಿಲ್ಲಾ ಪೊಲೀಸ್ ವತಿಯಿಂದ ಮುಂಜಾಗ್ರತಾ ಕ್ರಮ ಹಾಗೂ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿ, ಗುಪ್ತ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.  ನಗರದ ಹಾಗೂ ಜಿಲ್ಲಾ ಗಡಿಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ನೇಮಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ  ಸಿ.ಸಿ.ಟಿ.ವಿಗಳನ್ನು ಅಳವಡಿಸಲಾಗಿದೆ ಮತ್ತು  ವಿಡಿಯೋ ಚಿತ್ರೀಕರಣ ಮಾಡಿಸಲು ಸಹ ವ್ಯವಸ್ಥೆ ಮಾಡಲಾಗಿದೆ. ಸದರಿ ಕಾರ್ಯಕ್ರಮಗಳ ಸನ್ನಿವೇಶವನ್ನು ದುರುಪಯೋಗಪಡಿಸಿಕೊಳ್ಳುವ ಸಮಾಜಘಾತುಕ ಶಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗಾಗಲಿ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗಾಗಲೀ ತಿಳಿಸುವಂತೆ ಮನವಿ ಮಾಡಲಾಗಿದೆ.
ಜಿಲ್ಲಾ ನಿಯಂತ್ರಣ ಕೊಠಡಿ ದೂ.ಸಂ. 08226-222383, ಮೊಬೈಲ್ 9480804600, ಡಿ.ಎಸ್.ಪಿ, ಚಾ.ನಗರ ಉಪವಿಭಾಗ, ದೂ.ಸಂ. 08226-222090, ಮೊಬೈಲ್ 9480804620, ಡಿ.ಎಸ್.ಪಿ. ಕೊಳ್ಳೇಗಾಲ ಉಪವಿಭಾಗ, ದೂ.ಸಂ. 08224-252840, ಮೊಬೈಲ್ 9480804621.
ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 09 - ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯ ಮಟ್ಟದ ವಸತಿ ಸಹಿತ 5 ದಿನಗಳ ಕಾವ್ಯ ಕಮ್ಮಟವನ್ನು ಡಿಸೆಂಬರ್ 2ನೇ ವಾರದಲ್ಲಿ ರಾಮನಗರ ಜಿಲ್ಲೆಯ ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಹಮ್ಮಿಕೊಳ್ಳಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು 20ರಿಂದ 45ರ ವಯೋಮಿತಿಯೊಳಗಿರಬೇಕು. ಈಗಾಗಲೇ ತಮ್ಮ ಬಿಡಿ ಕವನ, ಕವನ ಸಂಕಲನ ಪ್ರಕಟಗೊಂಡಿದ್ದಲ್ಲಿ ಅಕಾಡೆಮಿಯ ಗಮನಕ್ಕೆ ತರುವುದು.
ಆಯ್ಕೆಯಾದ ಅಭ್ಯರ್ಥಿಗಳು ಕಡ್ಡಾಯವಾಗಿ 5 ದಿನಗಳು ಶಿಬಿರದಲ್ಲೇ ವಾಸ್ರವ್ಯ ಹೂಡಬೇಕು. ಶಿಬಿರಕ್ಕೆ ಬಂದು ಹೋಗಲು ರಾಜಹಂಸ ಬಸ್ ದರ ಹಾಗೂ 5 ದಿನಗಳ ಕಾಲ ಊಟ, ಉಪಾಹಾರ, ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಅರ್ಜಿಯನ್ನು ಅಕಾಡೆಮಿಯ ವೆಬ್ ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ ಲಗತ್ತಿಸಬೇಕು. ಅರ್ಜಿಯನ್ನು ಒಳಗೊಂಡ ಲಕೋಟೆಯ ಮೇಲ್ಭಾಗದಲ್ಲಿ ಕಡ್ಡಾಯವಾಗಿ ಕಾವ್ಯ ಕಮ್ಮಟಕ್ಕೆ ಅರ್ಜಿ ಎಂದು  ನಮೂದಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ ಕೊನೆಯ ವಾರದಲ್ಲಿ ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು.
ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗೂರು-560 0002 ಇಲ್ಲಿಗೆ  ನವೆಂಬರ್ 15ರೊಳಗೆ ಕಳುಹಿಸಬೇಕು. ವಿವರಗಳಿಗೆ 080-22211730/22106460 ಸಂಪರ್ಕಿಸುವಂತೆ ರಿಜಿಸ್ಟ್ರಾರ್ ಎನ್. ಕರಿಯಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.






















x

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು