Friday, 16 November 2018

ಉದ್ಯೋಗ ಖಾತರಿ ಯೋಜನೆ ಸದುಪಯೋಗಕ್ಕೆ ಜಿ.ಪಂ ಸಿ.ಇ.ಓ ಸಲಹೆ & ಪ್ರವಾಸಿ ಟ್ಯಾಕ್ಸಿ ಸೌಲಭ್ಯಕ್ಕೆ ಪ.ಜಾ., ಪ.ಪಂ, ಹಿಂದುಳಿದ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ (16-11-2018)

ಉದ್ಯೋಗ ಖಾತರಿ ಯೋಜನೆ ಸದುಪಯೋಗಕ್ಕೆ ಜಿ.ಪಂ  ಸಿ.ಇ.ಓ ಸಲಹೆ 

ಚಾಮರಾಜನಗರ, ನ. 16 :- ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೆ 100 ದಿನಗಳ ಉದ್ಯೋಗ ಪಡೆಯುವ ಅವಕಾಶವಿದ್ದು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಅವರು ಸಲಹೆ ಮಾಡಿದರು. 
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ಮಹಿಳಾ ಸ್ವ- ಸಹಾಯ ಸಂಘದ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಅರಿವು ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಕುಟುಂಬಗಳು ಉದ್ಯೋಗಕ್ಕಾಗಿ ಬೇರೆಕಡೆ ವಲಸೆ ಹೋಗುವುದನ್ನು ತಪ್ಪಿಸಿ ಸ್ಥಳಿಯವಾಗಿ ಉದ್ಯೋಗ ಅವಕಾಶ ಒದಗಿಸಿ ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆ ಜಾರಿಗೆ ತರಲಾಗಿದೆ.  ಕೆಲಸ ನಿರ್ವಹಿಸಿದ ಪುರುಷ ಮಹಿಳೆಯರಿಗೆ ಸರಿಸಮಾನವಾಗಿ ದಿನವೊಂದಕ್ಕೆ 249 ರೂ ಗಳನ್ನು ಪಾವತಿ ಮಾಡಲಾಗುತ್ತದೆ. ಈ ಯೋಜನೆ ಉಪಯುಕ್ತವಾಗಿದ್ದು ಗ್ರಾಮೀಣ ಕುಟುಂಬಗಳು ಪ್ರಯೋಜನ ಪಡೆಯಲು ಮುಂದಾಗಬೇಕೆಂದರು. 
ಯೋಜನೆಯಡಿ ವೈಯಕ್ತಿಕ ಕಾಮಗಾರಿ ನಿರ್ವಹಿಸಲು ಸಹ ಅನುಕೂಲ ಕಲ್ಪಿಸಲಾಗಿದೆ. ಬದು ನಿರ್ಮಾಣ. ಕೃಷಿ ಹೊಂಡ, ದನದ ಕೊಟ್ಟಿಗೆ, ಕುರಿ- ಮೇಕೆ. ಕೋಳಿಶೆಡ್,ಎರೆಹುಳು ಗೊಬ್ಬರ ತೊಟ್ಟಿ ಸೇರಿದಂತೆ ಹಲವಾರು ಕಾಮಗಾರಿ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ತೋಟಗಾರಿಕೆ ಅಭಿವೃದ್ದಿಗೂ ಯೋಜನೆಯಡಿ ಸಾಕಷ್ಟು ಅವಕಾಶಗಳಿವೆ. ತೆಂಗು, ಬಾಳೆ. ಅಡಿಕೆ. ಪಪ್ಪಾಯ, ನುಗ್ಗೆ, ನಿಂಬೆ, ಸೀಬೆ, ದಾಳಿಂಬೆ, ಮಾವು, ಇತರೆ ಆದಾಯ ತರುವ ಬೆಳೆಯನ್ನು ತಮ್ಮ ತಮ್ಮ ಜಮೀನಿನಲ್ಲಿಯೇ ಬೆಳೆಯಲು ಅಗತ್ಯವಿರುವ ನೆರವು ನೀಡಲಾಗುತ್ತದೆ ಅಲ್ಲದೆ ರೇಷ್ಮೆ ಬೆಳೆಗೂ ಸಹ ಅವಶ್ಯವಿರುವ ಸೌಲಭ್ಯಗಳನ್ನು ಯೋಜನೆಯಡಿ ಒದಗಿಸಲಾಗುತ್ತದೆ ಎಂದರು.
ಅರಣ್ಯ ಇಲಾಖೆಯೂ ಕೂಡ ರೈತರ ಜಮೀನುಗಳಲ್ಲಿ ಹೆಬ್ಬೇವು. ಸಿಲ್ವರ್.ಹೊಂಗೆ. ಹುಣಸೆ ಯಂತಹ ಆದಾಯ ತರುವ ಮರಗಳನ್ನು ಬೆಳೆಸಲು ಅವಕಾಶ ಕಲ್ಪಿಸಿದೆ. ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ವೇಳೆ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ  90 ಮಾನವದಿನಗಳ ಉದ್ಯೋಗ ಪಡೆಯಲು ಉದ್ಯೋಗ ಖಾತರಿ ಯೋಜನೆಯಡಿ  ಅವಕಾಶ ಮಾಡಿಕೊಡಲಾಗಿದೆ. ಉದ್ಯೋಗ ಖಾತರಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಆಯಾ ಗ್ರಾಮಪಂಚಾಯತಿಗಳಲ್ಲಿ ನೀಡಲು ಸೂಚಿಸಲಾಗಿದೆ ಎಂದು ಹರೀಶ್‍ಕುಮಾರ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ. ಪದ್ಮಶೇಖರ್‍ಪಾಂಡೆ. ಗುಂಡ್ಲುಪೇಟೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ, ನರೇಗಾ ಜಿಲ್ಲಾ ಸಂಯೋಜಕರಾದ ಮಲ್ಲಿಕಾರ್ಜುನ್, ಎಸ್. ನವೀನ್‍ಕುಮಾರ್. ಎನ್.ಆರ್.ಎಲ್.ಎಂ ವ್ಯವಸ್ಥಾಪಕರಾದ ದೀಪಕ್. ಗೋವಿಂದರಾಜು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

  
  
ಜಿಲ್ಲೆಯ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ನ. 17 - ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 19 ರಿಂದ 24ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ನವೆಂಬರ್ 19ರಂದು ಚಾಮರಾಜನಗರ, 20ರಂದು ಯಳಂದೂರು, 22ರಂದು ಕೊಳ್ಳೇಗಾಲ, 23ರಂದು ಹನೂರು ಹಾಗೂ 24ರಂದು ಗುಂಡ್ಲುಪೇಟೆ ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನ. 27ರಿಂದ ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ
ಚಾಮರಾಜನಗರ, ನ. 16 :- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಸಂಬಂಧ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ತರಬೇತಿಯು ನವೆಂಬರ್ 27 ರಿಂದ ಡಿಸೆಂಬರ್ 13ರವರೆಗೆ ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ಕೊಠಡಿ ಸಂಖ್ಯೆ 210) ಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನವೆಂಬರ್ 27ರೊಳಗೆ ಹೆಸರು ನೊಂದಾಯಿಸಿಕೊಂಡು ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ ಅಥವಾ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ 
ಚಾಮರಾಜನಗರ, ನ. 16 - ಜಿಲ್ಲೆಯಲ್ಲಿರುವ ಲಂಬÁಣಿ, ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರ ಹಟ್ಟಿ, ಮಜರೆ ಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್ ಕಾಲೋನಿ ಮತ್ತು ಇತರೆ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗÉೂಳ್ಳಲಾಗುತ್ತಿದೆ.
ಸರ್ಕಾರಿ ಜಮೀನಿನಲ್ಲಿ ನೆಲೆಗೊಂಡಿರುವ ದಾಖಲೆ ರಹಿತ ಜನವಸತಿಗಳಲ್ಲಿನ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಕ್ಕೆ ತಿದ್ದುಪಡಿ ತಂದು 94-ಡಿ ಸೇರ್ಪಡೆಗೊಳಿಸಿ ನಿಯಮಗಳನ್ನು ರೂಪಿಸಲಾಗಿದೆ. ಖಾಸಗಿ ಜಮೀನುಗಳಲ್ಲಿ ನೆಲೆಗೊಂಡಿರುವ ದಾಖಲೆರಹಿತ ಜನವಸತಿಗಳಲ್ಲಿನ ನಿವಾಸಿಗಳಿಗೆ ಹಕ್ಕು ದಾಖಲೆಗಳನ್ನು ನೀಡುವ ಸಲುವಾಗಿ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ಕಲಂ 38ಕ್ಕೆ ತಿದ್ದುಪಡಿ ತಂದು 38-ಎ ಸೇರ್ಪಡೆಗೊಳಿಸಿ ನಿಯಮಗಳನ್ನು ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.




ಪ್ರವಾಸಿ ಟ್ಯಾಕ್ಸಿ ಸೌಲಭ್ಯಕ್ಕೆ ಪ.ಜಾ., ಪ.ಪಂ, ಹಿಂದುಳಿದ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನ 
ಚಾಮರಾಜನಗರ, ನ. 16- ಪ್ರವಾಸೋದ್ಯಮ ಇಲಾಖೆಯು 3 ಲಕ್ಷ ರೂ. ಸಹಾಯಧನದೊಂದಿಗೆ ನೀಡುವ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಥವಾ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ಒದಗಿಸಲಾಗುತ್ತದೆ. ಹಿಂದುಳಿದ ಅಥವಾ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೂ ಪ್ರವಾಸಿ ಟ್ಯಾಕ್ಸಿ ಸೌಲಭ್ಯ ನೀಡಲಾಗುತ್ತದೆ. 
ಅರ್ಜಿದಾರರು 20 ರಿಂದ 40ರ ವಯೋಮಿತಿಯೊಳಗಿರಬೇಕು. ಕನಿಷ್ಟ 10ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಲಘು ವಾಹನ ಚಾಲನಾ (ಎಲ್ ಎಂವಿ) ಪರವಾನಗಿ ಪಡೆದು ಒಂದು ವರ್ಷವಾಗಿರಬೇಕು. ಬ್ಯಾಡ್ಜ್ ಹೊಂದಿರಬೇಕು. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಯಲ್ಲಿ ನೌಕರಿಯಲ್ಲಿರಬಾರದು. ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. 
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನವೆಂಬರ್ 19 ರಿಂದ ಡಿಸೆಂಬರ್ 18ರವರೆಗೆ ವಿತರಿಸಲಾಗುತ್ತದೆ. 
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ನವೆಂಬರ್ 18 ಕಡೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಭಾವಚಿತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮೊಬೈಲ್, ದೂರವಾಣಿ ಸಂಖ್ಯೆ, ಜಾತಿ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಯಾವುದೇ ನಿಗಮದಿಂದ ಸೌಲಭ್ಯ ಪಡೆಯದೆ ಇರುವ ಕುರಿತು ದೃಢೀಕರಣ ಪತ್ರ, ಅಂಕಪಟ್ಟಿ, ಚಾಲನಾ ಪರವಾನಗಿ, ಬ್ಯಾಡ್ಜ್, ಡಿಎಲ್ ಎಕ್ಸ್ಟ್ರಾಕ್ಟ್ ಸೇರಿದಂತೆ ಇತರೆ ಸೂಚಿಸಿರುವ ದೃಢೀಕರಣ ಪತ್ರಗಳನ್ನು ಲಗತ್ತಿಸಬೇಕು. ಸಂಪೂರ್ಣ ವಿವರಗಳಿಗೆ ನಗರದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-226512 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ. 
ನ. 17ರಂದು ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ 
ಚಾಮರಾಜನಗರ, ನ. 16 - ಜಿಲ್ಲಾಡಳಿತದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳು, ಕನ್ನಡಪರ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು, ಕನಕ ಸಮಾಜದ ಮುಖಂಡರು ಸೇರಿದಂತೆ ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಸಂಬಂಧ ಸಲಹೆ ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
ನ. 17ರಂದು ರೈತರಿಗೆ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ
ಚಾಮರಾಜನಗರ, ನ. 16 - ಜಲಾನಯನ ಅಭಿವೃದ್ಧಿ ಇಲಾಖೆಯು ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ ಜಿಲ್ಲೆಯ ಜಲಾನಯದ ಕಾಮಗಾರಿಗಳ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ, ಭೂ ರಹಿತರ ಅಭಿವೃದ್ಧಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲು ರೈತರಿಗೆ ಒಂದು ದಿನದ ಜಿಲ್ಲಾ ಮಟ್ಟದ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸÀತ್ಯಮಂಗಲ ರಸ್ತೆಯಲ್ಲಿರುವ ಶ್ರೀ ಶಿವಕುಮಾರಸ್ವಾಮಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.




ನ. 17ರಂದು ಸಿದ್ದಯ್ಯನಪುರ ಕಾಲೋನಿಯಲ್ಲಿ ದಲಿತ ಸಮುದಾಯದೊಂದಿಗೆ ಜಿ.ಪಂ. ಸಿಇಓ ನೇತೃತ್ವದಲ್ಲಿ ಸಮಾಲೋಚನ ಸಭೆ 
ಚಾಮರಾಜನಗರ, ನ. 16 – ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಸಿದ್ದಯ್ಯನಪುರ ಕಾಲೋನಿಯಲ್ಲಿ ದಲಿತ ಸಮುದಾಯದ ಜನತೆಯೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮಾಲೋಚನ ಸಭೆಯು ನವೆಂಬರ್ 17ರಂದು ಸಂಜೆ 4 ರಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




  
























x

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು