ಎಲ್ಲ ಹಂತಗಳಲ್ಲಿ ಕನ್ನಡ ಭಾಷೆ ಸಂಪೂರ್ಣ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ
ಚಾಮರಾಜನಗರ, ನ. 14 - ಜಿಲ್ಲೆಯಲ್ಲಿ ಎಲ್ಲ ಹಂತಗಳಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು
ಸರ್ಕಾರ ಹೊರಡಿಸಿರುವ ಸುತ್ತೋಲೆ ಅನ್ವಯ ಎಲ್ಲ ಇಲಾಖೆಗಳು ಕಾರ್ಯ
ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕನ್ನಡ ಅನುಷ್ಠಾನ ಪ್ರಗತಿ ಸಂಬಂಧ ನಡೆದ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಡಳಿತದಲ್ಲಿ ಸಂಪೂರ್ಣವಾಗಿ ಕನ್ನಡ ಅನುಷ್ಠಾನವಾಗಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ
ಸರ್ಕಾರ ಕನ್ನಡ ಅನುಷ್ಠಾನ ಸಂಬಂಧ ಹೊರಡಿಸಿರುವ ಸುತ್ತೋಲೆ, ಆದೇಶ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲನೆ ಮಾಡಬೇಕು. ಇಲಾಖೆ ಅಧಿಕಾರಿಗಳು ಕನ್ನಡ ಅನುಷ್ಠಾನ ಜಾರಿಯಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಆಡಳಿತಕ್ಕೆ ಸಂಬಂಧಿಸಿದ ಪತ್ರ ವ್ಯವಹಾರ, ಕಡತಗಳ ನಿರ್ವಹಣೆ, ಸುತ್ತೋಲೆ, ಆದೇಶ, ಸೂಚನಾ
ಪತ್ರಗಳು, ನಡವಳಿ ಎಲ್ಲವೂ ಕಡ್ಡಾಯವಾಗಿ ಕನ್ನಡದಲ್ಲೇ ಹೊರಡಿಸಬೇಕು. ಮೊಹರು, ಲೆಕ್ಕಪತ್ರ, ಕಾಗದದ ತಲೆಬರಹ, ವಾರ್ಷಿಕ ವರದಿ, ಆಡಳಿತ ವರದಿ ಸೇರಿದಂತೆ ಎಲ್ಲವೂ ಕನ್ನಡದಲ್ಲಿಯೇ ಇರಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ನಿರ್ದೇಶನ ನೀಡಿದರು.
ಕನ್ನಡ ಸಂಪೂರ್ಣವಾಗಿ ಅನುಷ್ಠಾನ ಮಾಡುವ ಸಂಬಂಧ ಕೈಗೊಂಡಿರುವ ಕ್ರಮಗಳ ವಿವರವನ್ನು ಅಗತ್ಯ ದಾಖಲೆಗಳೊಂದಿಗೆ ಇಲಾಖೆಗಳು ಮಾಹಿತಿ ಒದಗಿಸಬೇಕು. ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆ, ಕಾರ್ಖಾನೆ ಉದ್ದಿಮೆಗಳಲ್ಲಿಯೂ ನೇಮಕಾತಿ ಮಾಡಿಕೊಳ್ಳುವಾಗ ಡಾ. ಸರೋಜಿನಿ ಮಹಿಷಿ ವರದಿ ಪ್ರಕಾರ ಕನ್ನಡಿಗರಿಗೆ ಮೀಸಲಾತಿ ನೀಡಲಾಗಿದೆಯೇ ಎಂಬ ಬಗ್ಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಮಾಹಿತಿ ಸಂಗ್ರಹಿಸಿ ವರದಿ ನೀಡಬೇಕು ಎಂದರು.
ಇದೇ ವೇಳೆ ಮಾತನಾಡಿದ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ವಿನಯ್, ಅಬ್ರಹಾಂ ಡಿಸಿಲ್ವ ಅವರು
ಕರಿಕಲ್ಲು ಉದ್ಯಮದಲ್ಲಿ ಹೊರರಾಜ್ಯದ ಕಾರ್ಮಿಕರೇ ಹೆಚ್ಚು ಉದ್ಯೋಗ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಯಬೇಕಿದೆ ಎಂಬ ಸಲಹೆ ನೀಡಿದರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರತಿಕ್ರಿಯಿಸಿ ಈ ಸಂಬಂಧ ಕೈಗಾರಿಕೆ, ವಾಣಿಜ್ಯ ಇಲಾಖೆ ಮಾಹಿತಿ ಪಡೆಯಲು ಸೂಚನೆ ನೀಡಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಮುಂಗಟ್ಟುಗಳು, ವಾಣಿಜ್ಯ
ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡವನ್ನೇ ಪ್ರಧಾನವಾಗಿ ಬಳಸಿರಬೇಕು. ಕನ್ನಡ ಪ್ರಧಾನ ಬಳಕೆಗೆ ಅಂಗಡಿಗಳಿಗೆ ಪರವಾನಗಿ ನೀಡುವ ಹಂತದಲ್ಲೇ ಕಟ್ಟುನಿಟ್ಟಾಗಿ ಸೂಚಿಸಬೇಕು. ಅಧಿಕಾರಿಗಳು
ವ್ಯಾಪಕವಾಗಿ ಭೇಟಿ ನೀಡಿ ಸೂಚನೆ ಪಾಲಿಸಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ
ಅವರು ಕಟ್ಟುನಿಟ್ಟಾಗಿ ತಿಳಿಸಿದರು.
ಸಮಿತಿಯ ಮತ್ತೋರ್ವ ಸದಸ್ಯರಾದ ವೆಂಕಟರಾಜು ಅವರು ಮಾತನಾಡಿ ಇಲಾಖೆಗಳಲ್ಲಿ
ತಳಹಂತದಲ್ಲಿಯೇ ಎಲ್ಲ ನಮೂನೆಗಳನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ ಸಲ್ಲಿಸಲು ಅವಕಾಶವಿದೆ.
ಬ್ಯಾಂಕುಗಳಲ್ಲಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಬೇಕಿದೆ. ರೈತರು, ಗ್ರಾಮೀಣರು ಇದರಿಂದ ಸುಲಭವಾಗಿ
ವ್ಯವಹರಿಸಲು ಅನುಕೂಲವಾಗುತ್ತದೆ ಎಂದರು.
ಮತ್ತೋರ್ವ ಸದಸ್ಯರಾದ ಮಹೇಶ್ ಹರವೆ ಅವರು ಗಡಿಭಾಗಗಳ ಶಾಲೆಗಳಲ್ಲಿ ಕನ್ನಡ ಅನುಷ್ಠಾನ
ಸಮರ್ಪಕವಾಗಿ ಆಗಬೇಕಿದೆ ಎಂದರು.
ಸಮಿತಿಯ ಸದಸ್ಯರಾದ ಮಹದೇವಮ್ಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ
ಎಚ್. ಚನ್ನಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪದ್ಮಾ ಪಾಂಡೆ, ಸಾರ್ವಜನಿಕ ಶಿಕ್ಷಣ
ಇಲಾಖೆ ಉಪನಿರ್ದೇಶಕರಾದ ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು
ಸಭೆಯಲ್ಲಿ ಹಾಜರಿದ್ದರು.
ನ. 17ರಂದು ಸಿದ್ದಯ್ಯನಪುರ ಕಾಲೋನಿಯಲ್ಲಿ ದಲಿತ ಸಮುದಾಯದೊಂದಿಗೆ ಜಿ.ಪಂ. ಸಿಇಓ ನೇತೃತ್ವದಲ್ಲಿ
ಸಮಾಲೋಚನ ಸಭೆ
ಚಾಮರಾಜನಗರ, ನ. 14 – ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಸಿದ್ದಯ್ಯನಪುರ
ಕಾಲೋನಿಯಲ್ಲಿ ದಲಿತ ಸಮುದಾಯದ ಜನತೆಯೊಂದಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮಾಲೋಚನ
ಸಭೆಯು ನವೆಂಬರ್ 17ರಂದು ಸಂಜೆ 4 ರಿಂದ 7 ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ
ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 17ರಂದು ರೈತರಿಗೆ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ
ಚಾಮರಾಜನಗರ, ನ. 14 - ಜಲಾನಯನ ಅಭಿವೃದ್ಧಿ ಇಲಾಖೆಯು ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ
ಜಿಲ್ಲೆಯ ಜಲಾನಯದ ಕಾಮಗಾರಿಗಳ ಮೂಲಕ ಮಣ್ಣು ಮತ್ತು ನೀರಿನ ಸಂರಕ್ಷಣೆ, ಭೂ ರಹಿತರ ಅಭಿವೃದ್ಧಿ
ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲು ರೈತರಿಗೆ ಒಂದು ದಿನದ ಜಿಲ್ಲಾ ಮಟ್ಟದ ಭೂ ಸಂಪನ್ಮೂಲ
ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಸÀತ್ಯಮಂಗಲ
ರಸ್ತೆಯಲ್ಲಿರುವ ಶ್ರೀ ಶಿವಕುಮಾರಸ್ವಾಮಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಪ್ರಕಟಣೆ
ತಿಳಿಸಿದೆ.
ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ
ಚಾಮರಾಜನಗರ, ನ. 14 ತೋಟಗಾರಿಕೆ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸುರಕ್ಷಾ
ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2018-19ನೇ ಸಾಲಿನ ಹಿಂಗಾರು ಹಂಗಾಮಿಗೆ
ಅನುಷ್ಠಾನ ಮಾಡಲಾಗುತ್ತಿದೆ.
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿಗೆ ಟೊಮೇಟೊ ಬೆಳೆ ಹಾಗೂ ಹರವೆ ಹೋಬಳಿಗೆ
ಈರುಳ್ಳಿ ಬೆಳೆಯನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ.
ಗುಂಡ್ಲುಪೇಟೆ ತಾಲೂಕಿನ ಕಸಬಾ, ಬೇಗೂರು, ಹಂಗಳ ಮತ್ತು ತೆರಕಣಾಂಬಿ ಹೋಬಳಿಗಳಲ್ಲಿ ನೀರಾವರಿ
ಆಶ್ರಯದಲ್ಲಿ ಬೆಳೆದ ಈರುಳ್ಳಿ ಮತ್ತು ಟೊಮ್ಯಾಟೋ ಬೆಳೆಗಳನ್ನು ವಿಮೆಗೆ ಒಳಪಡಿಸಲÁಗಿದೆ.
ಟೊಮ್ಯಾಟೋ ಬೆಳೆಗೆ ಇಂಡೆಮ್ನಿಟಿ ಮಟ್ಟ ಶೇ. 90ರಷ್ಟು ನಿಗದಿ ಮಾಡಿದ್ದು ಪ್ರತಿ ಹೆಕ್ಟೇರ್‍ಗೆ ವಿಮೆ ಮೊತ್ತ
118000 ರೂ. ಇದ್ದು ರೈತರು ಶೇ.5ರಂತೆ ಪ್ರತಿ ಎಕರೆಗೆ 2388 ರೂ. ವಿಮಾ ಮೊತ್ತ ಪಾವತಿಸಬೇಕಾಗಿದೆ.
ಈರುಳ್ಳಿ ಬೆಳೆಗೆ ಇಂಡೆಮ್ನಿಟಿ ಮಟ್ಟ ಶೇ. 90ರಷ್ಟು ನಿಗದಿಮಾಡಿದ್ದು ಪ್ರತಿ ಹೆಕ್ಟೇರ್‍ಗೆ ವಿಮೆ ಮೊತ್ತ 75 ಸಾವಿರ ರೂ. ಇದ್ದು ರೈತರು ಶೇ.5ರಂತೆ ಪ್ರತಿ ಎಕರೆಗೆ 1518 ರೂ. ವಿಮಾ ಮೊತ್ತ ಪಾವತಿಸಬೇಕಾಗಿದೆ.
ರೈತರು ಬೆಳೆ ವಿಮೆ ಕಂತು ಪಾವತಿಸಲು ನವೆಂಬರ್ 30 ಕಡೆಯ ದಿನವಾಗಿದ್ದು ಈ ಸೌಲಭ್ಯವನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ
ನ. 16ರಂದು ಬಾಲನ್ಯಾಯ ಕಾಯಿದೆ ಕುರಿತ ಕಾನೂನು ಸಾಕ್ಷರತಾ ಕಾರ್ಯಕ್ರಮ
ಚಾಮರಾಜನಗರ, ನ. 15 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲನ್ಯಾಯ ಕಾಯಿದೆ 2015ರ ಕುರಿತು ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರÀದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಬಸವರಾಜು ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಜಯಶೀಲ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್ ಕುಮಾರ್, ಬಾಲನ್ಯಾಯ ಮಂಡಳಿ ಸದಸ್ಯರಾದ ಟಿ.ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಎಂ. ಮಹೇಶ್ ಹಾಗೂ ಪ್ಯಾನಲ್ ವಕೀಲರಾದ ಎ.ಎಸ್. ಮಂಜುನಾಥಸ್ವಾಮಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನ. 23ರಂದು ನಗರದಲ್ಲಿ ಉದ್ಯೋಗ ಮೇಳ
ಚಾಮರಾಜನಗರ, ನ. 15 - ಜನತಾ ದರ್ಶನದಲ್ಲಿ ಅರ್ಜಿ ನೀಡಿರುವ ಅಭ್ಯರ್ಥಿಗಳು ಹಾಗೂ ಜಿಲ್ಲೆಯ ಇತರೆ ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ನವೆಂಬರ್ 23ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರÀುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಮೈಸೂರಿನ ಖಾಸಗಿ ಕಂಪನಿಗಳಾದ ಐಟಿಸಿ ಪ್ರೈ. ಲಿ., ಹಿಂದೂಜಾ ಗ್ಲೋಬಲ್ ಸಲ್ಯೂಷನ್, ಲೇಬರ್ ನೆಟ್ ಪ್ರೈ. ಲಿ., ನಡ್ಜ್ ಫೌಂಡೇಷನ್, ಯುರೇಕಾ ಫೋಬ್ರ್ಸ್, ವಿಜಿಬಿ ಎಂಟರ್‍ಪ್ರೈಸಸ್ ಹಾಗೂ ಇತರೆ ಕಂಪನಿಗಳು ಭಾಗವಹಿಸಲಿವೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಮೆಕ್ಯಾನಿಕಲ್ ಇ ಅಂಡ್ ಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯುಳ್ಳ 18 ರಿಂದ 35ರ ವಯೋಮಿತಿ ಒಳಗಿನ ನಿರುದ್ಯೋಗಿ ಅಭ್ಯರ್ಥಿಗಳು ಸ್ವ ವಿವರಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ ಅಥವಾ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸೌಲಭ್ಯ : ಅರ್ಜಿ ಆಹ್ವಾನ
ಚಾಮರಾಜನಗರ, ನ. 15:– ತೋಟಗಾರಿಕೆ ಇಲಾಖೆಯು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಜಿ ನರೇಗಾ) 2018-19ನೇ ಸಾಲಿಗೆ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಮಾಡುವ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು ಇದರ ಪ್ರಯೋಜನಕ್ಕೆ ರೈತರಿಂದ ಅರ್ಜಿ ಆಹ್ವಾನಿಸಿದೆ.
ತೆಂಗು, ಮÁವು, ಸಪೋಟ, ಸೀಬೆ, ನೇರಳೆ, ಅಂಗಾಂಶ ಕೃಷಿ ಬಾಳೆ, ಪಪ್ಪಾಯ, ನಿಂಬೆ ಇತ್ಯಾದಿ ತೋಟಗಾರಿಕೆ ಬೆಳೆಗಳನ್ನು ನಾಟಿ ಮಾಡಬಹುದು.
ಅಂದಾಜು ವೆಚ್ಚ ಒಂದು ಹೆಕ್ಟೇರ್ ತೆಂಗು ಬೆಳೆಗೆ 89780 ರೂ., ಅಂಗಾಂಶ ಕೃಷಿ ಬಾಳೆಗೆ 333402 ರೂ., ಪಪ್ಪಾಯ (2.4*2.4) ಬೆಳೆಗೆ 204973 ರೂ., ಪಪ್ಪಾಯ (1.8*1.8) ಬೆಳೆಗೆ 357688 ರೂ.ಗಳು ಆಗಲಿದೆ.
ಯೋಜನೆಯಡಿ ಫಲಾನುಭವಿಗೆ ತೆಂಗು ಬೆಳೆಗೆ ಒಟ್ಟು 62496 ರೂ., ಅಂಗಾಂಶ ಕೃಷಿ ಬಾಳೆಗೆ 211656 ರೂ., ಪಪ್ಪಾಯ (2.4*2.4) ಬೆಳೆಗೆ 119360 ರೂ., ಪಪ್ಪಾಯ (1.8*1.8) ಬೆಳೆಗೆ 205498 ರೂ.ಗಳ ಸಹಾಯಧನ ನೀಡಲಾಗುವುದು.
ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಭಾವಚಿತ್ರ, ಪಹಣಿ, ಚೆಕ್ಕುಬಂಧಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಉದ್ಯೋಗ ಚೀಟಿ ಜೆರಾಕ್ಸ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ, ಇತರೆ ರೈತರಾದಲ್ಲಿ ಸಣ್ಣ, ಅತಿಸಣ್ಣ ರೈತರ ಇಡುವಳಿ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್ ಪ್ರತಿಗಳನ್ನು ಲಗತ್ತಿಸಿ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಸಲ್ಲಿಸಿ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 17ರಂದು ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ನ. 15 ಜಿಲ್ಲಾಡಳಿತದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯದ ಮುಖಂಡರು, ಸಂಘಸಂಸ್ಥೆಗಳು, ಕನ್ನಡಪರ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರತಿನಿಧಿಗಳು, ಕನಕ ಸಮಾಜದ ಮುಖಂಡರು ಸೇರಿದಂತೆ ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಸಂಬಂಧ ಸಲಹೆ ಸಹಕಾರ ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 15- ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು - ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೀಘ್ರಲಿಪಿಗಾರರ 6 ಹುದ್ದೆಗಳು (3 ಹಿಂಬಾಕಿ ಮತ್ತು ಇತರೆ 3) ಇದ್ದು ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಬೆರಳಚ್ಚು ಮತ್ತು ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರರ 1 ಹಿಂಬಾಕಿ ಹುದ್ದೆಯಿದ್ದು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚು - ನಕಲುಗಾರರ 3 ಹುದ್ದೆಗಳು ಇದ್ದು (2 ಹಿಂಬಾಕಿ, 1 ಇತರೆ) ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಕಿರಿಯ ದರ್ಜೆ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು.
ಆದೇಶ ಜಾರಿಕಾರರ 2 ಹುದ್ದೆಗಳು ಇದ್ದು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.
ಸೇವಕರ 7 ಹುದ್ದೆಗಳು ಇದ್ದು 7ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು.
ಅಭ್ಯರ್ಥಿಯು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಾಗಿದ್ದಲ್ಲಿ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಆಗಿದ್ದಲ್ಲಿ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ – 1ಕ್ಕೆ ಸೇರಿದವರಾಗಿದ್ದಲ್ಲಿ 40 ವರ್ಷ ಮೀರಿರಬಾರದು.
ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ದಾಖಲೆಗಳ ಸ್ವಯಂ ದೃಢೀಕೃತ ನಕಲು ಪ್ರತಿಗಳೊಂದಿಗೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಾಮರಾಜನಗರ ಇವರಿಗೆ ಡಿಸೆಂಬರ್ 5ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಸಂಪೂರ್ಣ ಮಾಹಿತಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ hಣಣಠಿ://eಛಿouಡಿಣs.gov.iಟಿ/ಛಿhಚಿmಚಿಡಿಚಿರಿಚಿಟಿಚಿgಚಿಡಿ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ನರ್ಸಿಂಗ್ ಕೋರ್ಸ್ ಆಯ್ಕೆಗೆ ಪ.ಜಾ., ಪ.ಪಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ನ. 15 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2018-19ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನರ್ಸಿಂಗ್ ಕೋರ್ಸಿಗೆ ಆಯ್ಕೆ ಮಾಡುವ ಸಲುವಾಗಿ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಜಿಎನ್‍ಎಂ, ಬಿಎಸ್‍ಸಿ ನಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್, ಎಂಎಸ್ಸಿ ನರ್ಸಿಂಗ್ ಕೋರ್ಸಿಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು 17 ರಿಂದ 35ರ ವಯೋಮಿತಿಯೊಳಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಎಲ್ಲ ಮೂಲಗಳಿಂದ 2.50 ಲಕ್ಷ ರೂ. ಒಳಗಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 24 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ವಿವರಗಳಿಗೆ ವೆಬ್ ಸೈಟ್ hಣಣಠಿ://sತಿ.ಞಚಿಡಿ.ಟಿiಛಿ.iಟಿ ನೋಡಬಹುದು. ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ದೂರವಾಣಿ ಸಂಖ್ಯೆ 080-22207784, ಇ ಮೇಲ್ sತಿಜಠಿeಣಛಿ2011@gmಚಿiಟ.ಛಿom ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
x
No comments:
Post a Comment