Thursday, 8 November 2018

19-09-20187 (ಮುತ್ತಗದ ಗದ್ದೆ ಪೋಡಿನಲ್ಲಿ ವಾಸ್ತವ್ಯ ಹೂಡಿ ಸಮಸ್ಯೆ ಆಲಿಸಿದ ಜಿ.ಪಂ.ಸಿ.ಇ.ಒ)


ಮುತ್ತಗದ ಗದ್ದೆ ಪೋಡಿನಲ್ಲಿ ವಾಸ್ತವ್ಯ ಹೂಡಿ ಸಮಸ್ಯೆ ಆಲಿಸಿದ ಜಿ.ಪಂ.ಸಿ.ಇ.ಒ

ಚಾಮರಾಜನಗರ, ಸೆ. 20 -  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕೆ ಹರೀಶ್ ಕುಮಾರ್ ಅವರು  ಬಿಳಿಗಿರಿರಂಗನಬೆಟ್ಟ ವ್ಯಾಪ್ತಿಯ ಮುತ್ತಗದ ಗದ್ದೆ ಪೋಡಿನಲ್ಲಿ ನಿನ್ನೆ (ಬುಧÀವಾರ) ರಾತ್ರಿ ವಾಸ್ತವ್ಯ ಹೂಡುವ ಮೂಲಕ ಜನರ ಕುಂದುಕೊರತೆಗಳನ್ನು  ಆಲಿಸಿದರು.
 ಸಂಜೆಯ ವೇಳೆಗೆ ಹಾಡಿಜನರ ಅಹವಾಲು ಆಲಿಸಲು ಆಗಮಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕೆ ಹರೀಶ್ ಕುಮಾರ್ ಅವರಿಗೆ ಸೋಲಿಗರು ಕಾಡಿನ ಹೂವು ಕೊಟ್ಟು ಗೊರುಕನ ನೃತ್ಯದ ಮೂಲಕ ಸಾಂಪ್ರದಾಯಿಕ ಸ್ವಾಗತ ನೀಡಿ ಸಂಭ್ರಮದಿಂದ ಬರಮಾಡಿಕೊಂಡರು.
ತದನಂತರ ಹಾಡಿಗಳ ಮನೆಗಳಿಗೆ ಭೇಟಿ ಕೊಟ್ಟ ಹರೀಶ್ ಕುಮಾರ್ ರವರು ಅಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು. ಇದೇ ವೇಳೆ ಆನೆ ಉಪಟಳದಿಂದ ತಪ್ಪಿಸುವ ಸಲುವಾಗಿ ಈಗಿರುವ ಆನೆ ಕಂದಕವನ್ನು ಮತ್ತಷ್ಟು ಆಳ ಹಾಗೂ ವಿಸ್ತಾರಗೊಳಿಸುವಂತೆ ಮನವಿ ಮಾಡಲಾಯಿತು. ವಿದ್ಯುತ್ ಅಭಾವವು ಪದೇ ಪದೇ ಎದುರಿಸುತ್ತಿದ್ದೆವೆ ಇದಕ್ಕೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸುವಂತೆಯೂ ಜನರು ಕೋರಿದರು.
ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗಿದೆ ಇದರಿಂದ ಹಲವಾರು ಜನರಿಗೆ ತೊಂದರೆಯಾಗಿದೆ. ಅರಣ್ಯ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಮಾಡಲು ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಜನರು ಮುಂದಿಟ್ಟರು.
ನಂತರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತಷ್ಟು ವಿವರವಾಗಿ ಗಮನಕ್ಕೆ ತರುವಂತೆ ತಿಳಿಸಿದರು.
ಇದೇ ಸಂಧರ್ಭದಲ್ಲಿ ಮಾತನಾಡಿದ ಸ್ಥಳೀಯ ಮುಖಂಡರು ಹಾಡಿಗಳಲ್ಲಿ ಯುವಕರು ಕುಡಿತಕ್ಕೆ ದಾಸರಾಗಿದ್ದಾರೆ, ಇವರಿಗೆ ಮಾರ್ಗದರ್ಶನ ಮಾಡಬೇಕು, ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ವೃದ್ದಾಪ್ಯ ವೇತನ ಇನ್ನು ಹಲವಾರು ಫಲಾನುಭವಿಗಳಿಗೆ ಸೀಗಬೇಕಿದೆ, ತೋಟಗಾರಿಕೆ, ಕೃಷಿ ಇಲಾಖೆ ಸೌಲಭ್ಯಗಳು ತಲುಪಬೇಕಿದೆ,  ಎಂಬುದು ಸೇರಿದಂತೆ ಇನ್ನು ಹಲವಾರು ಸಮಸ್ಯೆಗಳನ್ನು ಹೇಳಿಕೊಂಡರು.
ಎಲ್ಲರ ಮಾತುಗಳನ್ನು ಸಾವಕಾಶವಾಗಿ ಕೇಳಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜನರ ಮನೆಯ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಗ್ರಾಮಗಳಲ್ಲಿ ವಾಸ್ತವ್ಯ ಹೂಡುವಂತೆ ಸರ್ಕಾರ ನಿರ್ದೇಶನ ನೀಡಿದೆ. ಆ ಪ್ರಕಾರ ತಾವು ಗ್ರಾಮ ವಾಸ್ತವ್ಯದ ಮೂಲಕ ಕುಂದುಕೊರೆತೆ ಕೇಳುವ ಕಾರ್ಯಕ್ರಮವನ್ನು ಆರಂಭಿಸಿದ್ದೇನೆ, ಈ ಕಾರ್ಯಕ್ರಮ ಮುಂದುವರಿಯಲಿದೆ ಎಂದರು.
ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು. ಕೆಲ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹರಿಸಲು ಸಾಧ್ಯವಾಗಲಿದೆ. ಉನ್ನತ ಮಟ್ಟದಲ್ಲಿ ತಿರ್ಮಾನವಾಗಬೇಕಾಗಿರುವ ವಿಷಯಗಳ ಬಗ್ಗೆಯೂ ಗಮನಕ್ಕೆ ತಂದು ಜನರ ಕಷ್ಟಗಳನ್ನು ಪರಿಹರಿಸಲಾಗುತ್ತದೆ.  ಅಧಿಕಾರಿಗಳು ಸಹ ಸಭೆಯಲ್ಲಿ ಹಾಜರಾಗುತ್ತಿರುವುದರಿಂದ ಸಮಸ್ಯೆಗಳ ಪರಿಚಯವು ಮನವರಿಕೆಯಾಗಲಿದೆ ತಾವು ಇಲ್ಲಿ ಕೇಳಿ ಬಂದಿರುವ ಮನವಿಗಳಿಗೆ ಪ್ರಾಮಾಣಿಕವಾಗಿ ಪರಿಹರ ಕಲ್ಪಿಸಲು ಕ್ರಮ ವಹಿಸುವುದಾಗಿ ಹರಿಶ್ ಕುಮಾರ್ ರವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ ಜಿಲ್ಲಾ ಪಂಚಾಯತ್ ಉಪಾದ್ಯಕ್ಷರಾದ ಜೆ.ಯೋಗೀಶ್ ಅವರು ಮಾತನಾಡಿ ಸರ್ಕಾರದಿಂದ ಎಲ್ಲಾ ಭಾಗಗಳು ಹಾಗೂ ಜನತೆಗೆ ಸಮಾನವಾಗಿ ಅನುದಾನ ಹಂಚಿಕೆಯಾಗುತ್ತದೆ. ಅರಣ್ಯವಾಸಿಗಳ ಅಭಿವೃದ್ದಿಗೂ ವಿಶೇಷ ಕಾಳಜಿ ವಹಿಸಲಾಗಿದೆ, ಅರಣ್ಯ ಜನರ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪೌಷ್ಟಿಕ ಆಹಾರ ವಿತರಣೆ ಮಾಡಲಾಗುತ್ತಿದೆ ಎಂದರು.
ಅರಣ್ಯ ವಾಸಿಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಬೇಕು. ಇದಕ್ಕಾಗಿಯೇ  ವಸತಿ ಶಾಲೆಗಳನ್ನು ತೆರಯಲಾಗಿದೆ. ಈ ಶಾಲೆಗಳಲ್ಲಿ ಮಕ್ಕಳು ಉಳಿದು ವ್ಯಾಸಂಗ ಮಾಡಲು ಪ್ರೋತ್ಸಾಹಿಸಬೇಕು. ಶಿಕ್ಷಣದಿಂದ ಮಾತ್ರ ಏಳಿಗೆ ಸಾಧ್ಯವಾಗಲಿದೆ ಎಂದು ಯೋಗೀಶ್ ಸಲಹೆ ಮಾಡಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೃಷ್ಟಪ್ಪ ಮಾತನಾಡಿ, ಜಿಲ್ಲೆಯು ಅರಣ್ಯ ಹಕ್ಕು ಪತ್ರ ವಿತರಣೆಯಲ್ಲಿ ಇಡೀ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ, ಅರಣ್ಯ ಹಕ್ಕು ಪತ್ರ ನೀಡುವಂತೆ ಕೋರಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ವಸತಿ, ಪೌಷ್ಟಿಕ ಆಹಾರ, ಶಿಕ್ಷಣ, ಆರೋಗ್ಯ ಪೂರಕ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವಲ್ಲಿ ಮುಂದಾಗಿದ್ದೇವೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಮತಿ, ಉಪಾಧ್ಯಕ್ಷಾದ ಶ್ರೀನಿವಾಸನಾಯಕ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಕೇತಮ್ಮ, ತಾಲ್ಲೂಕು ಪಂಚಾಯತಿ ಸದಸ್ಯರಾದ ನಾಗರಾಜ, ಜಂಟಿ ಕೃಷಿ ನಿರ್ದೇಶಕರಾದ ಎಂ ತಿರುಮಲೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ ಹೆಚ್ ಪ್ರಸಾದ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸಭೆಯ ಬಳಿಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಡಿಯ ಮಾದಮ್ಮ ಎಂಬುವರ ಮನೆಯಲ್ಲಿ ಅರಣ್ಯ ವಾಸಿಗಳ ದೇಸಿ ಊಟವನ್ನು ಸವಿದರು.
ಸೆ. 24ರಂದು ನಗರದಲ್ಲಿ ಜಿ.ಪಂ. ಸಿ.ಇ.ಒ ಅವರಿಂದ  ಜನ ಸಂಪರ್ಕ ಸಭೆ
ಚಾಮರಾಜನಗರ, ಸೆ. 20 - ಚಾಮರಾಜನಗರ ತಾಲ್ಲೂಕಿನ ಕಸಬಾ ಹೋಬಳಿ ಮಟ್ಟದ  ಜನ ಸಂಪರ್ಕ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ| ಕೆ ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10ಗಂಟೆಗೆ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಅಂದಿನ  ಸಭೆಯಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಕಸಬಾ ವ್ಯಾಪ್ತಿಯ ಜನತೆ ಜನ ಸಂಪರ್ಕ ಸಭೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಎಂ.ಎಸ್ ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸೆ. 22ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಸೆ. 19 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------

ಸೆ. 22ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಸೆ. 19 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 19 :- ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ 1 ರಿಂದ ಅಂತಿಮ ವರ್ಷದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ ಹಾಗೂ ಪಿಂಚಣಿ ಇಲ್ಲದ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಪಿಂಚಣಿದಾರರ ಸೈನಿಕರ ಮಕ್ಕಳು ಮೂಲ ಗುರುತಿನ ಚೀಟಿಯನ್ನು ಹಾಜರುಪಡಿಸಿ ಅರ್ಜಿಯನ್ನು ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಸೆಪ್ಟೆಂಬರ್ 30ರ ಒಳಗೆ (ಮಧ್ಯಾಹ್ನ 3 ರಿಂz 5 ಗಂಟೆಯವರೆಗೆ) ಪಡೆದು ಭರ್ತಿ ಮಾಡಿ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.
ಅಂಚೆ ಮೂಲಕ ಅರ್ಜಿಯನ್ನು ಪಡೆಯುವವರು ಅಂಚೆಚೀಟಿ ಲಗತ್ತಿಸಿದ ಸ್ವವಿಳಾಸ ಬರೆದಿರುವ ಅಂಚೆ ಲಕೋಟೆಯನ್ನು ಉಪನಿರ್ದೇಶಕರು, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜೆ ಎಲ್ ಬಿ ರಸ್ತೆ,  ಮೈಸೂರು – 570005 ಇಲ್ಲಿಗೆ ಕಳುಹಿಸಿ ಪಡೆಯಬಹುದÀು ಎಂದು ಇಲಾಖಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಳ್ಳೇಗಾಲ : ವಿವಿಧ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 19 :- ಕೊಳ್ಳೇಗಾಲ ನಗರಸಭೆಯು ಮೆ. ಸ್ಯಾನ್ ಇಟ್ ಸಲ್ಯೂಷನ್ಸ್ ಪ್ರೈ. ಲಿ. ಮೂಲಕ ಪ್ರಸಕ್ತ ಸಾಲಿಗೆ ದೀನದಯಾಳ್ ಅಂತ್ಯೋದಯ ಯೋಜನೆ - ನಲ್ಮ್ ಅಭಿಯಾನ ಯೋಜನೆಯಡಿ ಇಎಸ್‍ಟಿ ಮತ್ತು ಪಿ ಕೌಶಲ್ಯ ವಿವಿಧ ತರಬೇತಿಗೆ ನಿರುದ್ಯೋಗಿ ವಿದ್ಯಾವಂತ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಡೊಮೆಸ್ಟಿಕ್ ಡೇಟಾ ಎಂಟ್ರಿ ಆಪರೇಟರ್ ಹಾಗೂ ರೀಟೇಲ್ ಸೇಲ್ಸ್ ಅಸೋಸಿಯೇಟ್ ತರಬೇತಿಗೆ ಎಸ್.ಎಸ್.ಎಲ್.ಸಿ, ಕಸ್ಟಮರ್ ಕೇರ್ ಎಕ್ಸಿಕ್ಯುಟಿವ್ (ಕಾಲ್ ಸೆಂಟರ್) ಹಾಗೂ ಸಿಸಿ ಟಿವಿ ಇನ್‍ಸ್ಟಲೇಷನ್ ಟೆಕ್ನೀಷಿಯನ್ ತರಬೇತಿಗೆ ಪಿಯುಸಿ ವಿದ್ಯಾರ್ಹತೆ ನಿಗದಿಪಡಿಸಿದೆ.
ಐಟಿಐ ಡಿಪ್ಲೊಮಾ ಪಡೆದವರು ಫೀಲ್ಡ್ ಟೆಕ್ನೀಷಿಯನ್-ಕಂಪ್ಯೂಟಿಂಗ್ ಅಂಡ್ ಪೆರಿಪೆಲರ್ಸ್ ತರಬೇತಿಗೆ, ಐಟಿಐ ವಿದ್ಯಾರ್ಹತೆ ಉಳ್ಳವರು ಮೊಬೈಲ್ ಫೋನ್ ಹಾರ್ಡ್‍ವೇರ್ ರಿಪೇರ್ ಟೆಕ್ನೀಷಿಯನ್‍ಗೆ ಅರ್ಹರು.
ಬಿಕಾಂ ಪದವಿ ಪಡೆದವರು ಅಕೌಂಟ್ಸ್ ಎಕ್ಸಿಕ್ಯೂಟಿವ್ (ಅಕೌಂಟ್ಸ್ ಪೇಯಬಲ್ ಅಂಡ್ ರಿಸೀವಬಲ್) ತರಬೇತಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ 18 ರಿಂದ 40ರ ಒಳಗಿರಬೇಕು.
ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಭಾವಚಿತ್ರ, ಇತರೆ ದಾಖಲಾತಿಗಳನ್ನು ಲಗತ್ತಿಸಿ ಸೆಪ್ಟೆಂಬರ್ 29ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಗರಸಭೆ ಪೌರಾಯುಕ್ತರ ಕಚೇರಿ ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಸೆ. 22ರಂದು ನಗರದಲ್ಲಿ ವಿಶ್ವಕರ್ಮ ಜಯಂತಿ
ಚಾಮರಾಜನಗರ, ಸೆ. 19  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 22ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎನ್. ಮಹೇಶ್ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ವಿಧಾನ ಪರಿಷತ್ ಸÀದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗವಹಿಸುವರು.
ಮೈಸೂರು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಮಂಟೆಲಿಂಗಚಾರ್ ಮುಖ್ಯ ಭಾಷಣ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ನಗರದ ರಾಜಮೂರ್ತಿ ಮತ್ತು ತಂಡದವರಿಂದ ಹಾಡುಗಾರಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹನಿ ನೀರಾವರಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 19 :– ತೋಟಗಾರಿಕೆ ಇಲಾಖೆಯು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಸೂಕ್ಷ್ಮ ಹನಿ ನೀರಾವರಿ (ಡ್ರಿಪ್) ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು ಆಸಕ್ತ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
ರೈತರ ಪ್ರಾಥಮಿಕ ನೋಂದಣಿ ಪ್ರಕ್ರಿಯೆ ಮುಗಿದ ನಂತರವೇ ಕಾರ್ಯಾದೇಶ ನೀಡಲಾಗುವುದು.
ಆಸಕ್ತ ರೈತರು ಭಾವಚಿತ್ರ, ಪಹಣಿ, ಮತದಾರರ ಗುರುತಿನ ಚೀಟಿ, ಆಧಾರ್ ಸಂಖ್ಯೆ, ಬ್ಯಾಂಕ್ ಅಕೌಂಟ್ ಪಾಸ್ ಪುಸ್ತಕದ ಜೆರಾಕ್ಸ್ ಇತ್ಯಾದಿ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ, ನೊಂದಾಯಿಸಿಕೊಂಡು ಹನಿ ನೀರಾವರಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ತೋಟಗಾರಿಕೆ ಬೆಳೆ ಪ್ರದೇಶ ವಿಸ್ತರಣೆ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 19- ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿ ನರೇಗಾ) ಯಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪ್ರದೇಶದ ವಿಸ್ತರಣೆ ಮಾಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.
ತೆಂಗು, ಮಾವು, ಸಪೋಟ, ಸೀಬೆ, ನೇರಳೆ, ಅಂಗಾಂಶ ಕೃಷಿ ಬಾಳೆ, ಪಪ್ಪಾಯ, ನಿಂಬೆ ಇತ್ಯಾದಿ ತೋಟಗಾರಿಕೆ ಬೆಳೆಯನ್ನು ಹೊಸದಾಗಿ ನಾಟಿ ಮಾಡಲು ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಭಾವಚಿತ್ರ, ಪಹಣಿ, ಚೆಕ್ ಬಂದಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಉದ್ಯೋಗ ಚೀಟಿ ಜೆರಾಕ್ಸ್, ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಚೀಟಿ ಮತ್ತು ಬ್ಯಾಂಕ್ ಖಾತೆ ಫ್ರೀಜ್, ಆಧಾರ್ ಕಾರ್ಡ್ ಲಿಂಕ್ ಮಾಡಿರುವ ವಿವರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ, ಕಚೇರಿಯಲ್ಲಿ ನಮೂದಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಮಹರ್ಷಿ ವಾಲ್ಮೀಕಿ ನಿಗಮದಿಂದ ಸಾಲಸೌಲಭ್ಯ  : ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 19  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ  ನಿಗಮದ ವತಿಯಿಂದ 2018-19ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಂದ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ ಹಾಗೂ ಸ್ವಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಮೈಕ್ರೋ ಕ್ರೆಡಿಟ್ ನೆರವಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ನಿಗಮದ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 31ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಅಥವ ದೂರವಾಣಿ ಸಂಖ್ಯೆ 08226-223856 ಸಂಪರ್ಕಿಸಿ ಪಡೆಯುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು