Thursday, 8 November 2018

22-09-2018 (ಸೆ. 27ರಂದು ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ಕುರಿತು ಭಾಷಣ ಸ್ಪರ್ಧೆ)

ಸೆ. 27ರಂದು ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ಕುರಿತು ಭಾಷಣ ಸ್ಪರ್ಧೆ

ಚಾಮರಾಜನಗರ, ಸೆ. 22 ನೆಹರು ಯುವ ಕೇಂದ್ರವು ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯನ್ನು ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ನಡೆಸಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವವರು 01.9.2018ಕ್ಕೆ ಅನ್ವಯವಾಗುವಂತೆ 18 ರಿಂದ 29ರ ವಯೋಮಿತಿಯೊಳಗಿರಬೇಕು. ಜಿಲ್ಲೆಯ ನಿವಾಸಿಯಾಗಿರಬೇಕು ಅಥವಾ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಗೆ ಬಂದು 5 ವರ್ಷ ಪೂರ್ಣಗೊಳಿಸಿರಬೇಕು. ಕಳೆದ ವರ್ಷಗಳಲ್ಲಿ ನೆಹರು ಯುವಕೇಂದ್ರ ವತಿಯಿಂದ ಸಂಘಟಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿರುವವರು ಪುನಃ ಭಾಗವಹಿಸುವಂತಿಲ್ಲ.
ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಥಮ ಬಹುಮಾನ 5 ಸಾವಿರ ರೂ., ದ್ವಿತೀಯ ಬಹುಮಾನ 2 ಸಾವಿರ ರೂ. ಹಾಗೂ ತೃತೀಯ ಬಹುಮಾನ 1 ಸಾವಿರ ರೂ. ನೀಡಲಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಗೆ ಪ್ರಥಮ ಬಹುಮಾನ 25 ಸಾವಿರ ರೂ., ದ್ವಿತೀಯ ಬಹುಮಾನ 10 ಸಾವಿರ ರೂ. ಹಾಗೂ ತೃತೀಯ ಬಹುಮಾನ 5 ಸಾವಿರ ರೂ. ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಪ್ರಥಮ ಬಹುಮಾನ 2 ಲಕ್ಷ ರೂ., ದ್ವಿತೀಯ ಬಹುಮಾನ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನ 50 ಸಾವಿರ ರೂ. ನೀಡಲಾಗುತ್ತದೆ.
ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಬೇಕಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾದವರು ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಿದೆ ಎಂದು ನೆಹರು ಯುವಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್. ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಡಾ. ಬಿ.ಅರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 19 ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2018-19ನೆ ಸಾಲಿಗೆ  ಸ್ವಯಂ ಉದ್ಯೋಗಕ್ಕಾಗಿ ಉದ್ಯಮಶೀಲತಾ ಯೋಜನೆಯಡಿ ಪರಿಶಿಷ್ಟ ಜಾತಿಯ ನಿರುದ್ಯೋಗಿಗಳು ಮತ್ತು ವಿವಿಧ ಅತೀ ಸಣ್ಣ ಕೈಗಾರಿಕೆ, ಸೇವಾ ವಲಯ, ಸಾರಿಗೆ, ವ್ಯಾಪಾರ ವಾಣಿಜ್ಯ ಘಟಕಗಳನ್ನು ಪ್ರಾರಂಭಿಸಲು ಮತ್ತು ಮೈಕ್ರೋ ಕ್ರೆಡಿಟ್ ಯೋಜನೆಯಡಿ ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಮೂಹಿಕ ಉತ್ಪಾದನಾ ಸೇವಾ ಘಟಕಗಳಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಿದೆ.
18 ರಿಂದ 60ರ ವಯೋಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶವಾದಲ್ಲಿ 98 ಸಾವಿರ ರೂ., ನಗರದ ಪ್ರದೇಶದವರಾಗಿದ್ದಲ್ಲಿ 1 ಲಕ್ಷದ 20 ಸಾವಿರ ರೂ. ಮಿತಿಯೊಳಗಿರಬೇಕು. ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆಸರ್ಕಾರಿ ಸಂಸ್ಥೆಯಲ್ಲಿ ಸೇವೆಯಲ್ಲಿ ಇರಬಾರದು. ಕುಟುಂಬದಿಂದ ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ವಾಹನ ಉದ್ದೇಶಕ್ಕೆ ಎಲ್‍ಎಂವಿ ಪರವಾನಗಿ ಬ್ಯಾಡ್ಜ್ ನಂಬರ್ ಹೊಂದಿರಬೇಕು. ವ್ಯಾಪಾರ ಉದ್ದೇಶಕ್ಕೆ ಉದ್ದಿಮೆ ಪರವಾನಗಿ ಹೊಂದಿರಬೇಕು.
ಉದ್ಯಮಶೀಲತಾ ಯೋಜನೆಯಡಿ ಫಲಾಪೇಕ್ಷಿಯು ಅರ್ಜಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಆಧಾರ್ ಕಾರ್ಡ್, ಗುರುತಿನ ಚೀಟಿ, ಪಡಿತರ ಚೀಟಿ, ಎಲ್ ಎಂವಿ ವಾಹನ ಪರವಾನಗಿ ಹಾಗೂ ವಾಹನ ಪರವಾನಗಿ ಬ್ಯಾಡ್ಜ್ ನಂಬರ್ (ವಾಹನ ಉದ್ದೇಶಕ್ಕೆ ಮಾತ್ರ), ವ್ಯಾಪಾರ ಉದ್ದೇಶಕ್ಕೆ ಯೋಜನಾ ವರದಿ ಕೊಟೇಷನ್ ನೀಡಬೇಕು (ವ್ಯಾಪಾರ, ಕೈಗಾರಿಕೆಗಳು, ಸೇವಾ ವಲಯಗಳು, ವಾಣಿಜ್ಯ ಘಟಕಗಳಿಗೆ ಮಾತ್ರ).
ಮಹಿಳಾ ಸ್ವಸಹಾಯ ಸಹಾಯ ಗುಂಪುಗಳಿಗೆ ಸಾಮೂಹಿಕ ಉತ್ಪಾದನಾ, ಸೇವಾ ಘಟಕಗಳಿಗೆ ಆರ್ಥಿಕ ನೆರವು ಯೋಜನೆಯಡಿ ಫಲಾಪೇಕ್ಷಿಯು ಅರ್ಜಿಯೊಂದಿಗೆ ಪಾಸ್ ಪೋರ್ಟ್ ಅಳತೆ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಆಧಾರ್, ಗುರುತಿನ ಚೀಟಿ, ಪಡಿತರ ಚೀಟಿ, ಸಂಘದ ನೋಂದಣಿ ಸಂಖ್ಯೆ, ಸಂಘದ ಆಡಿಟ್ ವರದಿ, ಸಂಘದ ನಡವಳಿ ಪುಸ್ತಕ ಹಾಗೂ ಸಂಗದ ಸದಸ್ಯರ ಪ್ರತ್ಯೇಕ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್‍ಗಳನ್ನು ನೀಡಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 12 ಕಡೆಯ ದಿನ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಕಚೇರಿಯ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂರವಾಣಿ ಸಂಖ್ಯೆ 08226-224133 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 23ರಂದು ಜಿಲ್ಲಾ ಸಹಕಾರ ಒಕ್ಕೂಟದ ಮಹಾಸಭೆ
ಚಾಮರಾಜನಗರ, ಸೆ. 22 - ಜಿಲ್ಲಾ ಸಹಕಾರ ಒಕ್ಕೂಟದ 2017-18ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 23ರಂದು ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 336ರಲ್ಲಿ ನಡೆಯಲಿದೆ.
ಸದಸ್ಯ ಸಹಕಾರ ಸಂಘಗಳ ಪ್ರತಿನಿಧಿಗಳು ವಾರ್ಷಿಕ ಮಹಾಸಭೆಗೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶ್ವಕರ್ಮರ ಕೊಡುಗೆÀ ಅಪಾರ : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ 
ಚಾಮರಾಜನಗರ, ಸೆ. 22 - ಸಮಾಜದ ದೈನಂದಿನ ಬದುಕಿಗೆ ಅವಶ್ಯವಿರುವ ಅನೇಕ ವಸ್ತು ಸಲಕರಣೆಗಳನ್ನು ಪರಿಣತಿಯಿಂದ ತಯಾರಿಸಿಕೊಡುವ ವಿಶ್ವಕರ್ಮ ಸಮುದಾಯ ತಾಂತ್ರಿಕವಾಗಿ ಮೂಲಪುರುಷರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಸಮುದಾಯ ಜನರ ಬದುಕು ಉದ್ಯೋಗ ಸೇರಿದಂತೆ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ಈ ಹಿಂದಿನಿಂದಲೂ ಸಿದ್ಧಪಡಿಸುವ ಕಾಯಕವನ್ನು ಶ್ರದ್ಧೆಯಿಂದ ನಿರ್ವಹಿಸುತ್ತಾ ಬಂದಿದೆ. ಮೂಲ ಎಂಜಿನಿಯರ್‍ಗಳು ವಿಶ್ವಕರ್ಮರೇ ಆಗಿದ್ದಾರೆ. ಇವರ ಕಸುಬು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದರು.
ಬದಲಾದ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಕಸುಬಿಗೆ ಸಂಬಂಧಿಸಿದಂತೆ ಆಧುನಿಕತೆಗೆ ಅನುಗುಣವಾಗಿ ಪರಿಣತಿ ಜ್ಞಾನ ಹೊಂದಬೇಕಿದೆ. ಆ ಮೂಲಕ ಹೊಸ ವಿಷಯಗಳನ್ನು ಸಹ ಮನದಟ್ಟು ಮಾಡಿಕೊಳ್ಳಬೇಕೆಂದು ಸಚಿವರು ಸಲಹೆ ಮಾಡಿದರು.
ವಿಶ್ವಕರ್ಮ ಜನರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮವೂ ಸಹ ಇದೆ. ಸುಮಾರು 65 ಕೋಟಿ ರೂ. ನೆರವನ್ನು ಇದುವರೆಗೆ ನಿಗಮದಿಂದ ನೀಡಲಾಗಿದೆ. ಉದ್ಯೋಗ, ವ್ಯಾಸಂಗ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ನಿಗಮದಿಂದ ನೆರವು ದೊರೆತಿದೆ ಎಂದು ಸಚಿವರು ತಿಳಿಸಿದರು.
ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ವಿಶ್ವಕರ್ಮ ಸಮುದಾಯ ಇಡೀ ಜಗತ್ತಿಗೆ ಅತ್ಯಮೂಲ್ಯ ಕೊಡುಗೆ ನೀಡಿದೆ. ದೇಶವಿದೇಶಗಳ ಸಮನ ಸೆಳೆದಿರುವ ಬೇಲೂರು, ಹಳೇಬೀಡು, ಅಜಂತ, ಎಲ್ಲೋರ, ಐಹೊಳೆ, ಪಟ್ಟದಕಲ್ಲು ಸೇರಿದಂತೆ ವಿವಿಧ ಭಾಗಗಳಲ್ಲಿ ಅದ್ಭುತ ಕೆತ್ತನೆ ಕೆಲಸವನ್ನು ನಿರ್ವಹಿಸಿವೆ. ಪ್ರವಾಸೋದ್ಯಮಕ್ಕೆ ನೆರವಾಗುವ ದಿಸೆಯಲ್ಲಿ ವಿಶ್ವಕರ್ಮರ ಪಾತ್ರ ಬಹು ದೊಡ್ಡದು ಎಂದರು.
ಹಿಂದುಳಿದ ಸಮಾಜದಲ್ಲಿ ಒಂದಾಗಿರುವ ವಿಶ್ವಕರ್ಮ ಸಮುದಾಯ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಶಿಕ್ಷಣದಿಂದ ಮಾತ್ರ ಹಿಂದುಳಿದ ವರ್ಗಗಳು ಮೇಲೆ ಬರಲು ಸಾಧ್ಯವಾಗುತ್ತದೆ. ವ್ಯಾಸಂಗಕ್ಕೆ ಪೂರಕವಾಗಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಪ್ರತೀ ಗ್ರಾಮದಲ್ಲಿಯೂ ಶಾಲೆ ತೆರೆಯಲಾಗಿದೆ. ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಇನ್ನಿತರ ಮುಖ್ಯ ಅವಶ್ಯಕತೆಗಳನ್ನು ಪೂರೈಸಲಾಗುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾವಂತರಾಗಬೇಕೆಂದು ಧ್ರುವನಾರಾಯಣ ಸಲಹೆ ಮಾಡಿದರು.
ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಮಂಟೆಲಿಂಗಚಾರ್ ಮಾತನಾಡಿ ಜಗತ್ತಿನ ಸಂಸ್ಕøತಿ, ನಾಗರೀಕತೆಗೆ ವಿಶ್ವಕರ್ಮರ ಕೊಡುಗೆ ಅತ್ಯಂತ ಶ್ರೇಷ್ಠವಾಗಿದೆ. ಭಾರತದ ಶಿಲ್ಪಿಗಳ ಗ್ರಂಥವನ್ನು ವಿದೇಶಗಳಲ್ಲಿಯೂ ಸಹ ಅಧ್ಯಯನ  ಮಾಡಲಾಗುತ್ತಿದೆ. ಪ್ರತಿಭಾವಂತರಾಗಿರುವ ವಿಶ್ವಕರ್ಮರು ಒಗ್ಗೂಡಿ ತಾಂತ್ರಿಕ, ವೈಜ್ಞಾನಿಕ ಉದ್ದಿಮೆಗಳ ಸ್ಪರ್ಧೆ ನಡುವೆಯೂ ಮುಖ್ಯವಾಹಿನಿಗೆ ಬರಬೇಕಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಕೃಷ್ಣ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಜಿಲ್ಲಾ ಪಂಚಾಯತ್ ಸ್ಥಾಯಿಸಮಿತಿ ಅಧ್ಯಕ್ಷರಾದ ಚನ್ನಪ್ಪ, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ನಗರಸಭೆ ಸದಸ್ಯರಾದ ಭಾಗ್ಯಮ್ಮ, ನೀಲಮ್ಮ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಪ್ಪ, ಸಮಾಜದ ಮುಖಂಡರಾದ ಸೋಮಣ್ಣಾಚಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸೆ. 24ರಂದು ನಗರದಲ್ಲಿ ಜಿ.ಪಂ. ಸಿ.ಇ.ಒ ಅವರಿಂದ ಜನ ಸಂಪರ್ಕ ಸಭೆ
ಚಾಮರಾಜನಗರ, ಸೆ. 22:- ಚಾಮರಾಜನಗರ ತಾಲ್ಲೂಕಿನ ಕಸಬಾ ಹೋಬಳಿ ಮಟ್ಟದ  ಜನ ಸಂಪರ್ಕ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ| ಕೆ ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10ಗಂಟೆಗೆ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಅಂದಿನ  ಸಭೆಯಲ್ಲಿ ಕಸಬಾ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಕಸಬಾ ವ್ಯಾಪ್ತಿಯ ಜನತೆ ಜನ ಸಂಪರ್ಕ ಸಭೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಎಂ.ಎಸ್ ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು