ಅ. 31ರಂದು ನಗರದಲ್ಲಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಸಂಕಲ್ಪ ದಿವಸ್ ಕಾರ್ಯಕ್ರಮ
ಚಾಮರಾಜನಗರ, ಅ. 30 ನೆಹರು ಯುವ ಕೇಂದ್ರ, ಎಂಸಿಎಸ್ ಪಬ್ಲಿಕ್ ಶಾಲೆ ಹಾಗೂ ಸಾಧನಾ ಸಂಸ್ಥೆ ಇವರ ಸಹಯೋಗದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯತಿಥಿ ಅಂಗವಾಗಿ ರಾಷ್ಟ್ರೀಯ ಸಂಕಲ್ಪ ದಿವಸ್ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಂ.ಸಿ.ಎಸ್ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಉದ್ಘಾಟನೆ ನೆರವೇರಿಸುವರು. ಎಂಸಿಎಸ್ ಪಬ್ಲಿಕ್ ಶಾಲೆ ಪ್ರಾಂಶುಪಾಲರಾದ ಆರ್.ಎಂ. ಮಂಜುನಾಥ್ ಅಧ್ಯಕ್ಷತೆ ವಹಿಸುವರು.
ವಕೀ¯ರಾದ ಡಿ.ಎಂ. ಶ್ರೀಕಂಠಮೂರ್ತಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ಅರುಣ್‍ಕುಮಾರ್, ಸಾಧನಾ ಸಂಸ್ಥೆ ನಿರ್ದೇಶಕರಾದ ಟಿ. ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಉಪನ್ಯಾಸಕರು ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರಾದ ಸುರೇಶ್ ಋಗ್ವೇದಿ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಅ. 30 ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನವೆಂಬರ್ 2 ರಿಂದ 20ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.
ನವೆಂಬರ್ 2ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹದಲ್ಲಿ, 9ರಂದು ಚಾಮರಾಜನಗರದ ಎಸಿಬಿ ಪೊಲೀಸ್ ಠಾಣೆಯಲ್ಲಿ, 13ರಂದು ಯಳಂದೂರು, 16ರಂದು ಕೊಳ್ಳೇಗಾಲ ಹಾಗೂ 20ರಂದು ಹನೂರಿನ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚದ ಹಣಕ್ಕೆ ಒತ್ತಾಯ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದ್ದು, ನಾಗರಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳದ ಉಪ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಅ. 31ರಂದು ರಾಷ್ಟ್ರೀಯ ಏಕತಾ ದಿವಸ್: ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ
ಚಾಮರಾಜನಗರ, ಅ. 30 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಅಕ್ಟೋಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಪ್ರತಿಜ್ಞಾ ವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆÉ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿ, ಸಿಬ್ಬಂದಿ, ಸಂಘಸಂಸ್ಥೆಗಳು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೆಳಿಗ್ಗೆ 10.30 ಗಂಟೆಗೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08226-224932 ಅಥವಾ ಮೊ. 9611172984 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 31ರಂದು ಹಂಚಿತಾಳಪುರದಲ್ಲಿ ಇ-ಸ್ವತ್ತು ಖಾತಾ ಅಭಿಯಾನ
ಚಾಮರಾಜನಗರ, ಅ. 30 ತಾಲೂಕಿನ ಚಂದಕವಾಡಿ ಗ್ರಾಮ ಪಂಚಾಯಿತಿಯ ಹಂಚಿತಾಳಪುರ ಗ್ರಾಮದಲ್ಲಿ ಇ-ಸ್ವತ್ತು ಖಾತಾ ಅಭಿಯಾನ ಕಾರ್ಯಕ್ರಮವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 3ರಂದು ಚಾ.ನಗರ ತಾಲೂಕು ಪ.ಜಾ, ಪ.ವರ್ಗದ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ಅ. 30 - ಚಾಮರಾಜನಗರ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಹಿತರಕ್ಷಣಾ ಸಮಿತಿ ಸಭೆಯನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 3ರಂದು ಬೆಳಿಗ್ಗೆ 11.30 ಗಂಟೆಗೆ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಇದೆ.
ಸಭೆಯಲ್ಲಿ ಎಲ್ಲ ತಾಲೂಕುಮಟ್ಟದ ಅಧಿಕಾರಿಗಳು, ಸಮಿತಿ ಸದಸ್ಯರು ಹಾಜರಾಗುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ಪಾದನಾ ಕ್ಷೇತ್ರಗಳ ಉದ್ದಿಮೆದಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಅ. 3- ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಸೂಕ್ಷ್ಮ, ಸಣ್ಣ, ಮಧ್ಯಮ, ಹಾಗೂ ಬೃಹತ್ ಕೈಗಾರಿಕೆಗಳು ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಅರಂಭಿಕ ಉದ್ದಿಮೆಗಳನ್ನು ಗುರುತಿಸಿ ಉತ್ತೇಜಿಸುವ ಸಲುವಾಗಿ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಸರ್ಕಾರವು ನಿರ್ಧರಿಸಿದ್ದು, ಉದಯೋನ್ಮುಖ ಉತ್ಪಾದನಾ ಕ್ಷೇತ್ರಗಳ ಅರ್ಹ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆ ಮತ್ತು ಕಾಫಿ, ಗೋಡಂಬಿ, ಮತ್ತು ಸಾಂಬಾರ ಪದಾರ್ಥಗಳನ್ನೊಳಗೊಂಡ ಆಹಾರ ಸಂಸ್ಕರಣೆ ಘಟಕ, ವಿದ್ಯುಚ್ಛಕ್ತಿ ಸಲಕರಣೆಗಳು, ಇಂಜಿನಿಯರಿಂಗ್ (ಮಶೀನ್ ಟೂಲ್ಸ್), ಆಟೋಮೊಬೈಲ್ ಕಾಂಪೊನೆಂಟ್ಸ್, ಏರೋಸ್ಪೇಸ್, ರಕ್ಷಣಾ ಘಟಕಗಳು, ಕರಕುಶಲ ವಸ್ತುಗಳು, ಕೈಮಗ್ಗ ಪದಾರ್ಥಗಳು, ಖನಿಜಗಳು, ಜವಳಿ ಹಾಗೂ ಸಿದ್ದ ಉಡುಪುಗಳು, ರತ್ನಾಭರಣಗಳು, ಔಷಧ, ಸಾಗರೋತ್ಪನ್ನಗಳು, ಚರ್ಮ, ಉಕ್ಕು ಹಾಗೂ ಮರದ ಉತ್ಪನ್ನಗಳು, ಯಂತ್ರೋಪಕರಣ, ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಉದ್ದಿಮೆದಾರರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 9 ಕಡೆಯ ದಿನ. ಅರ್ಜಿ ನಮೂನೆಯನ್ನು ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯ ಕೊಠಡಿ ಸಂಖ್ಯೆ 323ರಲ್ಲಿ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08226-224915, 224916ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಕೊಳ್ಳೇಗಾಲ ನಗರಸಭೆ ಚುನಾವಣೆ : ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ, ಆ. 25 - ಕೊಳ್ಳೇಗಾಲ ನಗರಸಭೆಯ ವಾರ್ಡ್ 9ರ ಚುನಾವಣೆಗೆ ಮತದಾನ ಅಕ್ಟೋಬರ್ 28ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಂಬಂಧಪಟ್ಟ ವಾರ್ಡ್ ವ್ಯಾಪ್ತಿಯೊಳಗೆ ಸಂತೆ ಹಾಗೂ ಎಲ್ಲ ತರಹದ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಮತದಾನದಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೊಳ್ಳೇಗಾಲ ನಗರಸಭೆಯ ವಾರ್ಡ್ 9ರ ವ್ಯಾಪ್ತಿಯಲ್ಲಿ ಸಂತೆ ಜಾತ್ರೆ ನಿಷೇಧ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ ತಾ.ಪಂ. ಉಪಚುನಾವಣೆ : ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ, ಆ. 25 - ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಕ್ಷೇತ್ರದಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಉಪಚುನಾವಣೆಗೆ ಮತದಾನ ಅಕ್ಟೋಬರ್ 28ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯೊಳಗೆ ಸಂತೆ ಹಾಗೂ ಎಲ್ಲ ತರಹದ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಮತದಾನದಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತೆರಕಣಾಂಬಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರದೇಶಗಳಲ್ಲಿ ಸಂತೆ, ಜಾತ್ರೆ ನಿಷೇಧ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಿಪ ವತಿಯಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಗಣಿತ ಒಲಂಪಿಯಾಡ್ ಸ್ಪರ್ಧೆ
ಚಾಮರಾಜನಗರ, ಅ. 25 ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ರಾಜ್ಯದ ಪ್ರೌಢಶಾಲೆಗಳ 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ – ಗಣಿತ ಒಲಂಪಿಯಾಡ್ ಆಯೋಜಿಸಲಾಗುತ್ತಿದೆ.
ಗಣಿತ ಒಲಂಪಿಯಾಡ್ ಸ್ಪರ್ಧೆಯು ಒಂದು ಪಠ್ಯರೂಪಕ ಚಟುವಟಿಕೆಯÁಗಿದ್ದು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ, ಚುರುಕುತನ ಹಾಗೂ ಕೌಶಲ್ಯಗಳನ್ನು ಬÉಳೆಸುವಲ್ಲಿ ಮಹತ್ವಪೂರ್ಣವಾಗಿದೆ.
ವಿಜ್ಞಾನ ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ರಾಜ್ಯ ಯಾವುದೇ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 9ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿ ಶಾಲೆಯಿಂದ ಗರಿಷ್ಟ 10 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಬಹುದು.
ಜಿಲ್ಲಾ ಮಟ್ಟದ ಸ್ಪರ್ಧೆಯು ನವೆಂಬರ್ 25ರ ಭಾನುವಾರ ರಾಜ್ಯದ ಎಲ್ಲ ವಲಯಗಳಲ್ಲಿ (ಬ್ಲಾಕ್) ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗದಿಪಡಿಸುವ ಶಾಲೆ, ಸಂಸ್ಥೆಗಳಲ್ಲಿ ಆಯೋಜನೆಗೊಳ್ಳಲಿದೆ.
ಜಿಲ್ಲಾ ಮಟ್ಟದಲ್ಲಿ ಗರಿಷ್ಠ ಅಂಕಗಳನ್ನು ಪಡೆಯುವ ಮೂರು ವಿದ್ಯಾರ್ಥಿಗಳಿಗೆ ತಲÁ 2 ಸಾವಿರ ರೂ.ಗಳ ನಗದು ಬಹುಮಾನ, ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳ ಶಾಲೆಗಳಿಗೆ 500 ರೂ. ಮೊತ್ತದ ಕೊಡುಗೆ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.
ರಾಜ್ಯ ಮಟ್ಟದ ಸ್ಪರ್ಧೆ ಮೈಸೂರಿನಲ್ಲಿ ಡಿಸೆಂಬರ್ 15, 16ರಂದು ನಡೆಯಲಿದೆ. ರಾಜ್ಯ ಮಟ್ಟದ ವಿಜ್ಞಾನ ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ವಿಜೇತರಾದ 3 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಪುರಸ್ಕರಿಸಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳ ಶಾಲೆಗಳಿಗೆ ತಲಾ 5 ಸಾವಿರ ರೂ. ಮೊತ್ತದ ಕೊಡುಗೆ ನೀಡಿ ಗೌರವಿಸಲಾಗುವುದು.
ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಯು 1 ರಿಂದ 9ನೇ ತರಗತಿಯ ವಿಜ್ಞಾನ ಗಣಿತ ಪಠ್ಯವನ್ನು ಆಧರಿಸಿದ್ದು 100 ನಿಮಿಷಗಳ ಅವಧಿಯ 100 (ಎಂಸಿಕ್ಯೂ) ಬಹು ಆಯ್ಕೆ ಪ್ರಶ್ನೆಗಳÀುಳ್ಳ ಓಎಂಆರ್ ಶೀಟ್ ಪದ್ಧತಿಯಲ್ಲಿ ಲಿಖಿತ ರೂಪದಲ್ಲಿ ನಡೆಯಲಿದÉ. ಪ್ರಶ್ನೆಗಳನ್ನು ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪ್ರತ್ಯೇಕವಾಗಿ ಒದಗಿಸಲಾಗುವುದು. 100 ನಿಮಿಷಗಳಲ್ಲಿ 100 ಪ್ರಶ್ನೆಗೆ ಉತ್ತರಿಸಬೇಕು. ತಪ್ಪು ಉತ್ತರಗಳಿಗೆ ಅಂಕಗಳನ್ನು ಕಡಿತಗೊಳಿಸಲÁಗುವುದು.
ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಶಾಲಾ ಮುಖ್ಯಸ್ಥರು ತಮ್ಮ ಶಾಲಾ ಹಂತದಲ್ಲಿ ಸ್ಪರ್ಧೆಯೊಂದನ್ನು ಏರ್ಪಡಿಸಿ ಅತ್ಯುತ್ತಮ ಪ್ರತಿಭೆ ತೋರಿದ 10 ವಿದ್ಯಾರ್ಥಿಗಳ ಹೆಸರು ವಿಳಾಸಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅಕ್ಟೋಬರ್ 31ರ ಒಳಗೆ ಬೆಂಗಳೂರಿನ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿಗೆ ತಲುಪಿಸುವಂತೆ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೆವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಅ. 27ರಂದು ಲೋಕಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ
ಚಾಮರಾಜನಗರ, ಅ. 25 ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ವ್ಯಕ್ತಿ ಕಾಣೆ : ಸುಳಿವು ನೀಡಲು ಮನವಿ
ಚಾಮರಾಜನಗರ, ಅ. 25 - ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ರಾಮಕೃಷ್ಣ್ಲ ಎಂಬುವರು ಕಾಣೆಯಾಗಿರುವ ಕುರಿತು ಅವರ ಮಗ ಸಿ.ಆರ್. ಮುರಳೀಧರ್ ದೂರು ದಾಖಲಿಸಿದ್ದು ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ರಾಮಕೃಷ್ಣ ಅವರು ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆಂದು ತಿಳಿಸಿ ಹೋದವರು ಇದುವರೆವಿಗೂ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
5 ಅಡಿ ಎತ್ತರ, ದುಂಡು ಮುಖ, ಸಾದಾರಣ ಮೈಕಟ್ಟು ಹೊಂದಿದ್ದು ಬಿಳಿ ಬಣ್ಣದ ಶರ್ಟ್, ನೀಲಿ ಬಣ್ಣದ ಪ್ಯಾಂಟ್, ಕಪ್ಪು ಕನ್ನಡಕ ಧರಿಸಿರುತ್ತಾರೆ.
ಇವರ ಮಾಹಿತಿ ದೊರೆತಲ್ಲಿ ನಗರದ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪಟ್ಟಣ ಪೊಲೀಸ್ ಠಾಣೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಫಸಲ್ ಬಿಮಾ ಯೋಜನೆ ಅನುಷ್ಠಾನ
ಚಾಮರಾಜನಗರ, ಅ. 25 ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2018-19ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ರೈತರು, ಬೆಳೆಗಾರರು ಈ ಸೌಲಭ್ಯ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.
ಹಿಂಗಾರು ಹಂಗಾಮಿನಲ್ಲಿ ನೀರಾವರಿ ಆಶ್ರಯದಲ್ಲಿ ಬೆಳೆಯಲಾಗುವ ಭತ್ತ, ಮುಸುಕಿನ ಜೋಳ, ರಾಗಿ, ಈರುಳ್ಳಿ, ಟೊಮೆಟೋ, ಮಳೆ ಆಶ್ರಯದಲ್ಲಿ ಬೆಳೆಯಲಾಗುವ ರಾಗಿ, ಮುಸುಕಿನ ಜೋಳ, ಕಡಲೆ, ಹುರುಳಿ, ಹೆಸರು ಬೆಳೆಗಳನ್ನು ಹಾಗೂ ಬೇಸಿಗೆ ಹಂಗಾಮಿಗೆ ನೀರಾವರಿ ಆಶ್ರಯದಲ್ಲಿ ಬೆಳೆಯಲಾಗುವ ಭತ್ತ, ರಾಗಿ, ಈರುಳ್ಳಿ, ಟೊಮೆಟೋ ಬೆಳೆಗಳನ್ನು ವಿಮೆಗೆ ಒಳಪಡಿಸಿ ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.
ಹಿಂಗಾರು ಹಂಗಾಮಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲ ತಾಲೂಕಿಗೆ ಸಂಬಂಧಿಸಿದಂತೆ ಮಳೆ ಆಶ್ರಿತ ಹುರಳಿ ಬೆಳೆಯನ್ನು ಅಧಿಸೂಚಿಸಲಾಗಿದೆ.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ, ಖಾತೆ, ಪಾಸ್ ಪುಸ್ತಕ, ಕಂದಾಯ ರಸೀತಿಯಂತಹ ದಾಖಲೆಗಳನ್ನು ನೀಡಬೇಕು.
ಹೆಚ್ಚಿನ ಮಾಹಿತಿಗೆ ಆಯಾ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕನ್ನಡ ರಾಜೋತ್ಸವ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
ಚಾಮರಾಜನಗರ, ಅ. 25- ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ನವೆಂಬರ್ 1ರಂದು ನಗರದಲ್ಲಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀಮಾನಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಕನ್ನಡ ರಾಜೋತ್ಸವ ಅಚರಣೆ ಸಂಬಂಧ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗÉೂಳ್ಳಲಾಯಿತು.
ಸಭೆಯ ಆರಂಭದಲ್ಲೇ ಮಾತನಾಡಿದ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯೋತ್ಸವ ಕಾರ್ಯಕ್ರಮ ಯಾವುದೇ ಗೊಂದಲವಿಲ್ಲದೆ ನಡೆಯಬೇಕು. ಸರ್ಕಾರಿ ಶಾಲಾಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಆದ್ಯತೆ ನೀಡಬೇಕು. ನವೆಂಬರ್ ತಿಂಗಳಿನಲ್ಲಿ ಸಂಪೂರ್ಣವಾಗಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಬೇಕು. ಕನ್ನಡ ಅನುಷ್ಠಾನವು ಪೂರ್ಣ ಪ್ರಮಾಣದಲ್ಲಿ ನಡೆಯಬೇಕು ಎಂಬ ಸಲಹೆ ನೀಡಿದರು.
ಕನ್ನಡ ಕುರಿತ ವಿಚಾರ ಸಂಕಿರಣವನ್ನು ನವೆಂಬರ್ ತಿಂಗಳಿನಲ್ಲಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು. ಎಲ್ಲ ಶಾಲೆಗಳು, ಬ್ಯಾಂಕುಗಳು, ಕಚೇರಿಯಲ್ಲಿ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಣೆಯಾಗಬೇಕು ಎಂಬುದೂ ಸೇರಿದಂತೆ ವಿವಿಧ ಸಲಹೆಗಳನ್ನು ಮುಖಂಡರು ನೀಡಿದರು.
ಎಲ್ಲರ ಸಲಹೆಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಈ ಬಾರಿಯು ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸರ್ಕಾರಿ ಶಾಲಾ ಮಕ್ಕಳಿಗೆ ಹೆಚ್ಚು ಅವಕಾಶ ನೀಡಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ಕೊಡಲಾಗುತ್ತದೆ. ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಸೂಚನೆ ನೀಡಲಾಗುತ್ತದೆ. ಕನ್ನಡ ಅನುಷ್ಠಾನ ಸಂಬಂಧ ನವೆಂಬರ್ 2ನೇ ವಾರದಲ್ಲಿ ಪ್ರತ್ಯೇಕ ಸಭೆ ಕರೆಯಲಾಗುವುದೆಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವದಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ, ನಾಡು ನುಡಿ ಕುರಿತು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಬೇಕು. ಸಂಜೆಯ ವೇಳೆ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲೂ ವೈವಿಧ್ಯತೆ ಮೂಡಿಬರಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅಗತ್ಯ ತಾಲೀಮು ನಡೆಸಲು ನಿರ್ದೇಶನ ನೀಡಲಾಗಿದೆ ಎಂದು ಕಾವೇರಿ ಅವರು ತಿಳಿಸಿದರು.
ರಾಜ್ಯೋತ್ಸವಕ್ಕೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ, ಕ್ರೀಡಾಂಗಣ ಸುತ್ತಮುತ್ತಲ ಪ್ರದೇಶಗಳಲ್ಲಿ ವಿಶೇಷವಾಗಿ ಸ್ವಚ್ಚತೆ ಕಾರ್ಯ ಕೈಗೊಳ್ಳಬೇಕು. ಕಾರ್ಯಕ್ರಮದಂದು ತಳಿರು-ತೋರಣಗಳಿಂದ ಸಿಂಗರಿಸಬೇಕು. ಪ್ರಮುಖ ಸ್ಥಳಗಳಲ್ಲಿ ದೀಪಾಲಂಕಾರ ವ್ಯವಸ್ಥೆಯು ಇರಬೇಕೆಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಕನ್ನಡ ಪರ ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ಚಾ.ಗು. ನಾಗರಾಜು, ಚಾ.ಹ. ಶಿವರಾಜು, ಗು. ಪುರುಷೋತ್ತಮ್, ಸಿ.ಎಂ. ಕೃಷ್ಣಮೂರ್ತಿ, ಜಿ. ಬಂಗಾರು, ಆಲೂರು ನಾಗೇಂದ್ರ, ಅಂಬರೀಷ್, ಬ್ಯಾಡಮೂಡ್ಲು ಬಸವಣ್ಣ, ಶಿವಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ವಿನಯ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಎಚ್. ಚನ್ನಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕೊಳ್ಳೇಗಾಲ ನಗರಸಭೆ, ತೆರಕಣಾಂಬಿ ತಾ.ಪಂ ಚುನಾವಣೆ : ಬಹಿರಂಗ ಪ್ರಚಾರ ಅಂತ್ಯ
ಚಾಮರಾಜನಗರ, ಆ. 25 ಗುಂಡ್ಲುಪೇಟೆ ತಾಲ್ಲೂಕು ಪಂಚಾಯಿತಿ ತೆರಕಣಾಂಬಿ ಕ್ಷೇತ್ರದ ಉಪ ಚುನಾವಣೆ ಮತ್ತು ಕೊಳ್ಳೇಗಾಲ ನಗರಸಭೆಯ ವಾರ್ಡ್ ನಂ. 9 ಕ್ಕೆ ಚುನಾವಣೆ ಸಂಬಂಧ ಅಕ್ಟೋಬರ್ 28 ರಂದು ಮತದಾನ ನಡೆಯಲಿದ್ದು, ಮತದಾನದ ದಿನಾಂಕದಂದು ಮತದಾನ ಪ್ರಾರಂಭವಾಗುವ ಮುಂಚಿನ 48 ಗಂಟೆ ಒಳಗೆ ಅಂದರೆ ಅಕ್ಟೋಬರ್ 26 ರ ಬೆಳಿಗ್ಗೆ 7 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.
ಬಹಿರಂಗ ಪ್ರಚಾರದ ಅಂತ್ಯದ ಸಮಯದ ನಂತರ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ಅಭ್ಯರ್ಥಿಗಳ ಪರವಾಗಿ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸಬಾರದು. ಬೆಂಬಲಕ್ಕಾಗಿ ಕ್ಷೇತ್ರ ವ್ಯಾಪ್ತಿಯ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ತಾರಾ ಪ್ರಚಾರಕರು ಮತ್ತು ಇತರೆ ವ್ಯಕ್ತಿಗಳನ್ನು ಕರೆಸಿಕೊಂಡಿದ್ದಲ್ಲಿ ಅಂತಹವರು ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯನ್ನು ಬಿಡಬೇಕು. ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಲ್ಲದ ವ್ಯಕ್ತಿಗಳು ಆ ಕ್ಷೇತ್ರ ವ್ಯಾಪ್ತಿ ಬಿಟ್ಟು ಹೊರಗೆ ಹೋಗಬೇಕು. ಬಹಿರಂಗ ಪ್ರಚಾರ ಮುಕ್ತಾಯಗೊಂಡ ನಂತರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ಏರ್ಪಡಿಸಬಾರದು. ಮತದಾರರಿಗೆ ಮೊಬೈಲ್ ಮೂಲಕ ಎಸ್.ಎಂ.ಎಸ್ ಕಳುಹಿಸುವಂತಿಲ್ಲ. ಎಫ್.ಎಂ. ರೇಡಿಯೋ, ಟಿ.ವಿ. ಚಾನೆಲ್ ಮಾಧ್ಯಮಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಮತದಾರರಿಗೆ ವೀಡಿಯೋ ಕ್ಲಿಪ್ಪಿಂಗ್ ಪ್ರದರ್ಶಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 27ರಂದು ಲೋಕಸಭಾ ಸದಸ್ಯರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆ
ಚಾಮರಾಜನಗರ, ಅ. 26 - ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಅ. 27ರಂದು ವಿಚಾರಣಾಧೀನ ಖೈದಿಗಳಿಗೆ ಕಾನೂನು ಸೇವೆಗಳ ಅಭಿಯಾನ
ಚಾಮರಾಜನಗರ, ಆ. 26 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಿಗೆ ಕಾನೂನು ಸೇವೆಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಶಾಂತಶ್ರೀ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಜಿಲ್ಲಾ ಕಾರಾಗೃಹದ ಪ್ಯಾನಲ್ ವಕೀಲರಾದ ಕೆ.ಬಿ. ವೀರಭದ್ರಸ್ವಾಮಿ ಹಾಗೂ ಎ.ಎಸ್. ಮಂಜುನಾಥಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅ. 29ರಿಂದ ನಗರದಲ್ಲಿ ಉಚಿತ ಕಂಪ್ಯೂಟರ್ ತರಬÉೀತಿ
ಚಾಮರಾಜನಗರ, ಆ. 2:- ನಗರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಕ್ಟೋಬರ್ 29ರಿಂದ ಉಚಿತ ಕಂಪ್ಯೂಟರ್ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಯು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೊಗ ಇಲಾಖೆಯಲ್ಲಿ ನಡೆಯಲಿದ್ದು ಅಭ್ಯರ್ಥಿಗಳು ಸ್ವ ವಿವರದೊಂದಿಗೆ ಹೆಸರು ನೊಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಯವರನ್ನು (ದೂ.ಸಂ.08226-224430) ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆ ತಿಳಿಸಿದೆ.
ಅ. 31ರಂದು ಮಹದೇಶ್ವರಬೆಟ್ಟದಲ್ಲಿ ಗೋಲಕ ಹಣ ಎಣಿಕೆ
ಚಾಮರಾಜನಗರ, ಅ. 26- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ಅಕ್ಟೋಬರ್ 31ರ ಬುಧವಾರದಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾ.ನಗರಸಭೆ : ವಿವಿಧ ಸೌಲಭ್ಯಗಳಿಗೆ ಪ.ಜಾ, ಪ.ಪಂ, ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 26 - ಚಾಮರಾಜನಗರ ನಗರಸಭೆಯು ಅನುಷ್ಠಾನ ಮಾಡುತ್ತಿರುವ ಕಲ್ಯಾಣ ಕಾರ್ಯಕ್ರಮಗಳಾದ ಶೇ. 24.10 ಹಾಗೂ ಶೇ. 7.25ರಡಿ ವಿವಿಧ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನಿಲರಹಿತ ಬಿಪಿಎಲ್ ಕುಟುಂಬಕ್ಕೆ ಅನಿಲಸಂಪರ್ಕ ನೀಡಲಾಗುತ್ತದೆ. ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕೊಡಲಾಗುತ್ತದೆ (ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯದಿದ್ದಲ್ಲಿ). ಅಲ್ಲದೆ ಬಿಇ, ಎಂಟೆಕ್, ಎಂಬಿಬಿಎಸ್, ಎಂಡಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.
ಹಿಂದುಳಿದ ವರ್ಗದ ಅನಿಲರಹಿತ ಬಿಪಿಎಲ್ ಕುಟುಂಬಕ್ಕೆ ಅನಿಲಸಂಪರ್ಕ ನೀಡಲು ಸಹಾಯಧನ ಕೊಡಲಾಗುತ್ತದೆ. ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕೊಡಲಾಗುತ್ತದೆ (ಹಿಂದುಳಿದ ಕಲ್ಯಾಣ ಇಲಾಖೆಯಿಂದ ಪಡೆಯದಿದ್ದಲ್ಲಿ). ಅಲ್ಲದೆ ಬಿಇ, ಎಂಟೆಕ್, ಎಂಬಿಬಿಎಸ್, ಎಂಡಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ.
ಅರ್ಜಿಯನ್ನು ನಗರಸಭೆ ಕಚೇರಿಯಿಂದ ನವೆಂಬರ್ 5 ರಿಂದ ಪಡೆದು ಭರ್ತಿ ಮಾಡಿ ನವೆಂಬರ್ 25ರ ಒಳಗೆ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಜಾತಿ, ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ನಗರಸಭಾ ವ್ಯಾಪ್ತಿಯ ಮೂರು ಗ್ಯಾಸ್ ಅಂಗಡಿಗಳಿಂದ ನೋ ಡ್ಯೂ ಸರ್ಟಿಫಿಕೇಟ್, ಇತ್ತೀಚಿನ ಎರಡು ಭಾವಚಿತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅಲ್ಲದೆ ಅವಶ್ಯಕತೆ ಇರುವ ಇತರೆ ದಾಖಲಾತಿಗಳು ಬೇಕಾದಲ್ಲಿ ಸಲ್ಲಿಸಬೇಕಾಗುತ್ತದೆ. ವಿವರUಳಿಗೆ ನಗರಸಭಾ ಕಾರ್ಯಾಲಯ ಕಚೇರಿ ಸಂಪರ್ಕಿಸಬಹುದೆಂದ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 26 :- ಚಾಮರಾಜನಗರ ತಾಲೂಕಿನ ಹೊಂಡರಬಾಳುವಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2019-20ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಸರ್ಕಾರಿ, ಸರ್ವಶಿಕ್ಷಣ ಅಭಿಯಾನ ಹಾಗೂ ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಪ್ರಸ್ತುತ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ದಿನಾಂಕ 1.5.2006 ಮತ್ತು 30.4.2010ರ ನಡುವೆ ಜನಿಸಿದವರಾಗಿರಬೇಕು.
ವೈಯಕ್ತಿಕ ವಿವರ ಭರ್ತಿ ಮಾಡÀುವ ಮೊದಲು ಅಭ್ಯರ್ಥಿ, ಪೋಷಕರ ಸಹಿ, ಭಾವಚಿತ್ರ ಪ್ರಮಾಣ ಪತ್ರವನ್ನು ಸ್ಕ್ಯಾನ್ ಮಾಡಿ ಇಟ್ಟುಕೊಂಡಿರಬೇಕು. ನವೋದಯ ವಿದ್ಯಾಲಯ ಸಮಿತಿ ವೆಬ್ ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್ 30 ಕಡೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2019ರ ಏಪ್ರಿಲ್ 6ರಂದು ನಡೆಯಲಿದೆ.
ಅರ್ಜಿ ಸಲ್ಲಿಸಲು ತೊಂದರೆ ಉಂಟಾದಲ್ಲಿ ನೇರವಾಗಿ ಜವಾಹರ ನವೋದಯ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ತಿತಿತಿ.ಟಿಚಿvoಜಚಿಥಿಚಿ.gov.iಟಿ ಮತ್ತು ತಿತಿತಿ.ರಿಟಿvಛಿhಚಿmಚಿಡಿಚಿರಿಚಿಟಿಚಿgಚಿಡಿ.ಛಿom ಅಥವಾ ಸಹಾಯವಾಣಿ ಸಂಖ್ಯೆ 8762505849 ಮತ್ತು 9481530823 ಸಂಪರ್ಕಿಸುವಂತೆ ವಿದ್ಯಾಲಯದ ಪ್ರಾಚಾರ್ಯರಾದ ವಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದರಾದ ಆರ್. ಧ್ರುವನಾರಾಯಣ ತಾಕೀತು
ಚಾಮರಾಜನಗರ, ಅ. 27:- ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ 209ರ ಕಾಮಗಾರಿಯು ಕೇಂದ್ರ ರಸ್ತೆ ನಿಧಿಯ 1008 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನಿಂದ ಪ್ರಾರಂಭವಾಗಿದೆ. ಜಿಲ್ಲೆಯಲ್ಲೂ ಸುಮಾರು 67 ಕಿ.ಮೀ. ರಸ್ತೆ ಅಭಿವೃದ್ಧಿಯಾಗುತ್ತಿದ್ದು ಕಾಮಗಾರಿ ವಿಳಂಬವಾಗಿ ಸಾಗುತ್ತಿದೆ. ಇನ್ನು 10 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗಡವು ನಿಗದಿಯಾಗಿದೆ. ಹೀಗಾಗಿ ಇನ್ನುಮುಂದೆ ಚುರುಕಿನಿಂದ ಕಾಮಗಾರಿ ಕೈಗೊಂಡು ಪೂರ್ಣಗೊಳಿಸಬೇಕೆಂದು ಧ್ರುವನಾರಾಯಣ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಬಾಕಿ ಉಳಿದ ಭೂಸ್ವಾಧೀನ ಪ್ರಕ್ರಿಯೆ ಇತರೆ ಅಡಚಣೆಗಳ ನಿವಾರಣೆಗೆ ಜಿಲ್ಲಾಧಿಕಾರಿಗಳು ಮುಂದಾಗಬೇಕು. ತಕ್ಷಣವೇ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲಿಸಬೇಕು. ಸಂಬಂಧಪಟ್ಟ ಎಲ್ಲ ಜನಪ್ರತಿನಿಧಿಗಳು ಕಾಮಗಾರಿ ವೀಕ್ಷಣೆ ಹಾಗೂ ಪರಿಶೀಲನೆ ಮಾಡಲು ಇನ್ನು 15 ದಿನಗಳೊಳಗೆ ದಿನಾಂಕವೊಂದನ್ನು ನಿಗದಿ ಮಾಡುವಂತೆ ಲೋಕಸಭಾ ಸದಸ್ಯರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಇದೇವೇಳೆ ಮಾತನಾಡಿದ ಶಾಸಕರಾದ ಎನ್. ಮಹೇಶ್ ಅವರು ಹೆದ್ದಾರಿ ಕಾಮಗಾರಿ ಸಂಬಂಧ ಕಂದಾಯ ಇಲಾಖೆಯಿಂದ ಆಗಬೇಕಿರುವ ಕೆಲಸಗಳಿಗೆ ವಿಳಂಬ ಮಾಡಬಾರದು. ತ್ವರಿತವಾಗಿ ಸಂಬಂಧಿಸಿದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ಶಾಸಕರಾದ ಆರ್. ನರೇಂದ್ರ ಮಾತನಾಡಿ ಅಲ್ಲಲ್ಲಿ ಕೆಲಸಗಳನ್ನು ಪೂರ್ಣಗೊಳಿಸುವುದು, ಕೆಲವೆಡೆ ಹಾಗೆಯೇ ಬಿಟ್ಟುಬಿಡುವುದು, ಕಾಮಗಾರಿ ಕೈಗೊಳ್ಳುವಾಗ ನಡೆಯುತ್ತಿದೆ. ಹೀಗಾದರೆ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ. ಕಾಮಗಾರಿ ಏಕರೂಪತೆಯಿಂದ ಇರಬೇಕಾದರೆ ಇರುವ ಅಡಚಣೆಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್ ಅವರು ಯಳಂದೂರು, ಮದ್ದೂರು, ಕಂದಹಳ್ಳಿ ಭಾಗಗಳಲ್ಲಿ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಿಲ್ಲ. ಎಲ್ಲೆಲ್ಲಿ ಸಾಧ್ಯವೋ ಅಂತಹ ಕಡೆ ಮಾತ್ರ ಕಾಮಗಾರಿ ನಿರ್ವಹಣೆ ಮಾಡಲಾಗುತ್ತಿದೆ. ಮರ ತೆಗೆದ ಬಳಿಕ ಇನ್ನಷ್ಟು ಹೆಚ್ಚು ಕೆಲಸವು ಮಾಡಬೇಕಾಗುತ್ತದೆ. ಮಣ್ಣನ್ನು ಒಂದು ಕಡೆಯಿಂದ ಇನ್ನೊಂದು ಕಡೆ ಸುರಿಯಲಾಗುತ್ತಿದೆ. ಇದಕ್ಕೆ ಸೂಕ್ತ ಸಮಜಾಯಿಷಿಯನ್ನು ಅಧಿಕಾರಿಗಳು ನೀಡುತ್ತಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ಹೆದ್ದಾರಿ ಕಾಮಗಾರಿಯಲ್ಲಿ ಯಾವುದೇ ಲೋಪವನ್ನು ಸಹಿಸಲಾಗುವುದಿಲ್ಲ. ಗುಣಮಟ್ಟದ ಕಾಮಗಾರಿ ನಡೆಯಲೇಬೇಕು ಎಂದು ತಿಳಿಸಿದರು.
ಗುಂಡ್ಲುಪೇಟೆ, ಚಾಮರಾಜನಗರದ 32.8 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸುವ ಕಾಮಗಾರಿಗೆ ವಿಸ್ತ್ರøತ ಯೋಜನಾ ವರದಿ ತಯಾರಿಸಲಾಗಿದೆ. ಇದಕ್ಕೆ ಅನುಮೋದನೆ ಪಡೆದು ಡಿಸೆಂಬರ್ ಒಳಗೆ ಕಾಮಗಾರಿ ಆರಂಭಿಸಲು ಮುಂದಾಗಲಿದ್ದೇವೆ ಎಂದರು. ಇದೇವೇಳೆ ಯೋಜನಾ ಸಂಬಂಧ ಪವರ್ ಪಾಯಿಂಟ್ ಮೂಲಕ ವಿವರ ನೀಡಲಾಯಿತು.
ಶಾಸಕರಾದ ಸಿ.ಎಸ್. ನಿರಂಜನಕುಮಾರ್ ಮಾತನಾಡಿ ಗುಂಡ್ಲುಪೇಟೆ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಅಪೂರ್ಣವಾಗಿದೆ. ಇನ್ನು ಕೆಲವು ಕಡೆ ಸಮರ್ಪಕವಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಕೊಳ್ಳೇಗಾಲ ಪಟ್ಟಣದಲ್ಲೂ ಒಳಚರಂಡಿ ಕಾಮಗಾರಿ ವೈಜ್ಞಾನಿಕವಾಗಿ ಮಾಡಲಾಗಿಲ್ಲ. ಇದರಿಂದ 21 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿರುವ ನಗರೋತ್ಥಾನ ಕಾಮಗಾರಿಯು ಸರಿಯಾಗಿ ಮಾಡಲು ಸಾಧ್ಯವಾಗದಿರಬಹುದು. ಹೀಗಾಗಿ ಸಂಪೂರ್ಣವಾಗಿ ಹಾಗೂ ಸಮರ್ಪಕವಾಗಿ ಒಳಚರಂಡಿ ಕಾಮಗಾರಿ ಕೈಗೊಳ್ಳಲೇಬೇಕು ಎಂದರು.
ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರತಿಕ್ರಿಯಿಸಿ ಈ ಸಂಬಂಧ ತಾವೂ ಸಹ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
ಶಾಸಕರಾದ ಆರ್. ನರೇಂದ್ರ ಅವರು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಬೈಲೂರಿನಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ನಿರ್ಮಿಸಲಾಗಿರುವ ಶಾಲಾ ಕೊಠಡಿಗಳ ಕಾಮಗಾರಿ ಕಳಪೆಯಾಗಿದೆ ಎಂದು ಗಮನಕ್ಕೆ ತಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ಅವರು ಉತ್ತರಿಸಿ ಆಲೂರು, ಬೈಲೂರಿನಲ್ಲಿ ಕಾಮಗಾರಿ ನಿರ್ವಹಣೆ ಸರಿಯಿಲ್ಲ ಎಂಬ ಬಗ್ಗೆ ವರದಿ ನೀಡಲಾಗಿದೆ ಎಂದರÀು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಗತಿ ಪರಿಶೀಲಿಸಿದ ಧ್ರುವನಾರಾಯಣ ಅವರು ಪ್ರತಿ ಗ್ರಾಮ ಪಂಚಾಯಿತಿಯು ಮುಂದಿನ ಸಭೆಯ ವೇಳೆಗೆ ಕನಿಷ್ಠ ಒಂದು ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳನ್ನು ಅನುಷ್ಠಾನ ಮಾಡಬೇಕೆಂಬ ಗಡುವನ್ನು ಎಲ್ಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಮಾತನಾಡಿ ಉದ್ಯೋಗ ಖಾತರಿ ಯೋಜನೆ ಪ್ರಗತಿ ಹೆಚ್ಚಳಕ್ಕೆ ಹಲವು ಇಲಾಖೆಗಳು ಇನ್ನಷ್ಟು ವೇಗವಾಗಿ ಕೆಲಸ ಮಾಡಬೇಕು. ಗ್ರಗತಿಯಲ್ಲಿ ಹಿಂದೆ ಇರುವ ತಾಲೂಕುಗಳು ಯೋಜನೆ ಅನುಷ್ಠಾನಕ್ಕೆ ಹೆಚ್ಚು ಗಮನ ನೀಡಬೇಕು. ಯೋಜನೆ ಜಾಗೃತಿಗೆ ವಿಶೇಷವಾಗಿ ಕ್ರಮ ವಹಿಸಲಾಗುತ್ತದೆ ಎಂದರು.
ವಿವಿಧ ಇಲಾಖೆಗಳ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಸಮಿತಿಯ ನಾಮನಿರ್ದೇಶಿತ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಇತರೆ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕೊಳ್ಳೇಗಾಲ ನಗರಸಭೆ, ತೆರಕಣಾಂಬಿ ತಾ.ಪಂ. ಚುನಾವಣೆ : ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಆ. 27 ಕೊಳ್ಳೇಗಾಲ ನಗರಸಭೆ ವಾರ್ಡ್ ನಂ. 9 ಹಾಗೂ ಗುಂಡ್ಲುಪೇಟೆ ತಾಲೂಕು ಪಂಚಾಯಿತಿಯ ತೆರಕಣಾಂಬಿ ಕ್ಷೇತ್ರಕ್ಕೆ ಅಕ್ಟೋಬರ್ 28ರಂದು ನಡೆಯುವ ಚುನಾವಣೆ ಮತದಾನ ಹಾಗೂ ಅಕ್ಟೋಬರ್ 31ರಂದು ನಡೆಯುವ ಮತ ಎಣಿಕೆ ಹಿನ್ನೆಲೆಯಲ್ಲಿ ಸೂಚಿತ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.
ಕೊಳ್ಳೇಗಾಲ ನಗರಸಭೆಯ ವಾರ್ಡ್ ನಂ. 9ರ ವ್ಯಾಪ್ತಿ ಹಾಗೂ ಇದರ ಗಡಿಯಿಂದ 3 ಕಿ.ಮೀ. ಅಂತರದಲ್ಲಿ ಹಾಗೂ ಗುಂಡ್ಲುಪೇಟೆ ತಾಲೂಕು ತೆರಕಣಾಂಬಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ಇದರ ಗಡಿಯಿಂದ 3 ಕಿ.ಮೀ. ಅಂತರದಲ್ಲಿ ಬರುವ ಮದ್ಯದ ಅಂಗಡಿಗಳನ್ನು ಅಕ್ಟೋಬರ್ 26ರ ಮಧÀ್ಯರಾತ್ರಿಯಿಂದ ಅಕ್ಟೋಬರ್ 28ರ ಮಧÀ್ಯರಾತ್ರಿಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ಮತ ಎಣಿಕೆಯು ತಾಲೂಕು ಕೇಂದ್ರದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ಟೌನ್ ವ್ಯಾಪ್ತಿಯಲ್ಲಿ ಬರುವ ಮದ್ಯದಂಗಡಿಗಳನ್ನು ಅಕ್ಟೋಬರ್ 30ರ ಮಧ್ಯರಾತ್ರಿಯಿಂದ ಅಕ್ಟೋಬರ್ 31ರ ಮಧ್ಯರಾತ್ರಿಯವರೆಗೆ (ಕೆ.ಎಸ್.ಬಿ.ಸಿ.ಎಲ್. ಡಿಪೋ ಹೊರತುಪಡಿಸಿ) ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಆದೇಶಿಸಿದ್ದಾರೆ. ಸೂಚಿಸಲಾಗಿರುವ ಅವಧಿಯಲ್ಲಿ ಮದ್ಯ ಮಾರಾಟ, ಹಂಚಿಕೆ, ಶೇಖರಣೆ ಅಕ್ಷಮ್ಯ ಅಪರಾಧವಾಗಲಿದೆ ಎಂದು ಜಿಲ್ಲಾಧಿಕಾರಗಳು ಆದೇಶದಲ್ಲಿ ತಿಳಿಸಿದ್ದಾರೆ.
ಹಾಸ್ಟಲ್‍ಗಳ ಸುಧಾರಣೆಗೆ ಕ್ರಮ ವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಾಮರಾಜನಗರ, ಅ. 29 - ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಣ ನೀಡುವ ಮೂಲಕ ಹಾಸ್ಟಲ್‍ಗಳ ಸುಧಾರಣೆಗೆ ಕ್ರಮ ವಹಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ರಾಜೇಂದರ್ ಕುಮಾರ್ ಕಠಾರಿಯಾ ಅವರು ಸೂಚನೆ ನೀಡಿದ್ದಾರೆ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪೂರಕ ವಾತಾವರಣ ಕಲ್ಪಿಸಲು ಸರ್ಕಾರ ಸಾಕಷ್ಟು ಅನುದಾನ ಒದಗಿಸಿದೆ. ಹಾಸ್ಟಲ್‍ಗಳಲ್ಲಿ ಮಕ್ಕಳಿಗೆ ನೀಡುವ ಆಹಾರ, ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕು. ಉತ್ತಮ ಕಲಿಕಾ ಪರಿಸರವಿರಬೇಕು. ಆದರೆ ಜಿಲ್ಲೆಯ ಕೆಲ ಹಾಸ್ಟಲ್‍ಗಳು ಅವ್ಯವಸ್ಥೆಯಿಂದ ಕೂಡಿದ್ದು, ಅನೈರ್ಮಲ್ಯದ ತಾಣವಾಗಿವೆ. ಮಕ್ಕಳಿಗೆ ನೀಡುವ ತಿಂಡಿ, ಊಟದ ಮೆನು ಫಲಕವನ್ನು ಪ್ರಕಟಿಸಬೇಕು ಎಂದರು.
ಹಾಸ್ಟಲ್‍ಗಳ ವ್ಯವಸ್ಥಿತ ನಿರ್ವಹಣೆಗಾಗಿ ನೋಡೆಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡು ನೋಡೆಲ್ ಅಧಿಕಾರಿಯೊಂದಿಗೆ ಸಮನ್ವಯ ಸಾಧಿಸಿ ಹಾಸ್ಟಲ್‍ಗಳ ಸುಧಾರಣೆಗೆ ಮುಂದಾಗಬೇಕು ಎಂದು ಸಲಹೆ ಮಾಡಿದರು.
ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೂ ಅಧಿಕಾರಿಗಳು ಭೇಟಿ ಮಾಡಬೇಕು. ಅಂಗನವಾಡಿ ಕಟ್ಟಡಗಳು ಸಮರ್ಪಕವಾಗಿದೆಯೆ, ಮಕ್ಕಳ ಹಾಜರಾತಿ ಕ್ರಮಬದ್ಧವಾಗಿದೆಯೆ ಹಾಗೂ ಮಕ್ಕಳಿಗೆ ಗುಣಮಟ್ಟದ ಆಹಾತ ಪೂರೈಸಲಾಗುತ್ತಿದೆಯೆ ಎಂಬುದನ್ನು ವರದಿ ಮಾಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಅವರು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದಲ್ಲಿ ತನಿಖಾ ತಂಡಗಳನ್ನು ರಚಿಸಬೇಕು. ಪ್ರತಿ ತಿಂಗಳು ಟಾಸ್ಕ್‍ಪೋರ್ಸ್ ಸಭೆ ನಡೆಸಬೇಕು. ನಿಯಮಬಾಹಿರವಾಗಿ ಮರಳು ಹಾಗೂ ಕಲ್ಲು ಗಣಿಗಾರಿಕೆ ನಡೆದರೆ ಅದನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಬೇಕು. ಇದಕ್ಕೆ ತಹಶೀಲ್ದಾರ್, ಪೊಲೀಸ್ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಲು ಸಹಕಾರ ನೀಡಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ಕಟಾರಿಯಾ ಅವರು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮಾತನಾಡಿ ಉಸ್ತುವಾರಿ ಕಾರ್ಯದರ್ಶಿಯವರು ಸೂಚಿಸಿದ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಗುರಿ ಸಾಧಿಸಬೇಕು. ಇಲಾಖೆಗಳಲ್ಲಿ ಬಾಕಿ ಇರುವ ಮತ್ತು ಆಗಬೇಕಿರುವ ಕಾರ್ಯಕ್ರಮಗಳ ಕುರಿತು ವಿಳಂಬ ಮಾಡದೇ ಟಿಪ್ಪಣಿ ತಯಾರಿಸಿ ಶೀಘ್ರವಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದರು.
ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ಕಂದಾಯ, ಸಾಮಾಜಿಕ ಭದ್ರತಾ ಯೋಜನೆ, ಅರಣ್ಯ ಹಕ್ಕು ಕಾಯ್ದೆ, ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ನಗರಾಭಿವೃದ್ಧಿ, ಗ್ರಾಮೀಣ ಕುಡಿಯುವ ನೀರು, ಸಮಾಜ ಕಲ್ಯಾಣ, ಪಶುಪಾಲನೆ, ತೋಟಗಾರಿಕೆ, ರೇಷ್ಮೆ, ಸ್ವಚ್ಚ ಭಾರತ್ ಮಿಷನ್ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪದ್ಮಾಶೇಖರ್ ಪಾಂಡೆ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ನ. 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ಅ. 29 - ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ. ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಂದು ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5 ರಿಂದ 6.30 ಗಂಟೆಯವರೆಗೆ ನಗರದ ಎಸ್.ಜಿ. ಮಹಾಲಿಂಗಸ್ವಾಮಿ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. 7.30 ರಿಂದ 8.30 ಗಂಟೆಯವರೆಗೆ ಕೊಳ್ಳೇಗಾಲದ ರಂಗಲಕ್ಷ್ಮಣಂ ಫೌಂಡೇಶನ್‍ನ ವಿದುಷಿ ಚಿತ್ರ ಬಿಳಿಗಿರಿ ಮತ್ತು ತಂಡದವರಿಂದ ನೃತ್ಯ ರೂಪಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
x
No comments:
Post a Comment